Heavy rain forecast; ಕಾರವಾರ; ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ವಾಯುಭಾರ ಕುಸಿತವಾಗಿದ್ದು , ನಿಧಾನವಾಗಿ ಈಶಾನ್ಯ ದಿಕ್ಕಿಗೆ ಚಲಿಸುತ್ತಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ , ಉತ್ತರ ಕನ್ನಡ ಜಿಲ್ಲೆಗೆ ಅಕ್ಟೋಬರ್ 23 ರಿಂದ ಅಕ್ಟೋಬರ್ 25 ರ ಬೆಳಗ್ಗೆ 8.30 ರ ವರೆಗೆ ಆರೆಂಜ್ ಅಲರ್ಟ್ ಇರುವ ಬಗ್ಗೆ ಮುನ್ಸೂಚನೆ ನೀಡಲಾಗಿರುವುದರಿಂದ ಈ ಅವಧಿಯಲ್ಲಿ ಸಾರ್ವಜನಿಕರು ಈ ಮುಂದಿನ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ತಿಳಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರ ಮುನ್ಸೂಚನೆಯಂತೆ, 45 ರಿಂದ 55 ಕೀಮೀ ವೇಗದಲ್ಲಿ ಸಮುದ್ರ ತೀರದಲ್ಲಿ ಗಾಳಿ ಬೀಸುವ ಸಾದ್ಯತೆಯ ಹಿನ್ನೆಲೆಯಲ್ಲಿ , ಮಳೆಯ ಜೊತೆಗೆ ಗಾಳಿ ಕೂಡಾ 45-55 ಕಿ.ಮೀ ವೇಗದಿಂದ ಬೀಸುವ ಸಾಧ್ಯತೆಯಿರುವುದರಿಂದ ಅಪಾಯಕಾರಿ ಮರಗಳಿರುವ ಮನೆಗಳಲ್ಲಿಯ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು ಮತ್ತು ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಶಿಥಿಲವಾದ ಕಟ್ಟಡದಲ್ಲಿ ವಾಸಿಸುತ್ತಿರುವವರು ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು. ಸಣ್ಣ ಹಾಗೂ ಮಧ್ಯಮ ದೋಣಿಗಳು ಮೀನುಗಾರಿಕೆಗೆ ಇಳಿಯಬಾರದು. ಈ ಬಗ್ಗೆ ಉಪನಿರ್ದೇಶಕರು ಮೀನುಗಾರಿಕೆ ಇಲಾಖೆ ರವರು ಎಲ್ಲಾ ಮೀನುಗಾರರಿಗೆ ತಿಳುವಳಿಕೆ ನೀಡಿ ಪ್ರಕಟಣೆಯನ್ನು ಜಾರಿಗೆ ತರುವುದು.

Heavy rain forecast;
ಮೇಲಿನ ದಿನಗಳಲ್ಲಿ ಸಾರ್ವಜನಿಕರು ಹಾಗೂ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗಬಾರದು, ಪ್ರವಾಸಿಗರು, ಹಾಗೂ ಸಾರ್ವಜನಿಕರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸಬೇಕು, ಸಮುದ್ರ ತೀರದಲ್ಲಿ ಯಾವುದೇ ಮನರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದೆಂದು ಸೂಚಿಸಲಾಗಿದೆ.
ತುರ್ತು ಸೇವೆಗಾಗಿ 24×7 ಕಂಟ್ರೋಲ್ ರೂಂ ಸಂಖ್ಯೆ 08382-229857, ವಾಟ್ಸಾಪ್ ಸಂಖ್ಯೆ. 9483511015 ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್ 31ವರೆಗೂ ಮಳೆ..!
ರಾಜ್ಯದಾದ್ಯಂತ ಅಕ್ಟೋಬರ್ 29ರವರೆಗೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 23, 24 ಹಾಗೂ 28 & 29 ರಂದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 27 ರಿಂದ 29 ರವರೆಗೆ ಅಲ್ಲಲ್ಲಿ ಚದುರಿದಂತೆ ಭಾರಿ ಮತ್ತು ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ; ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!