Students Protest; ಮುಂಡಗೋಡ ತಾಲೂಕಿನ ಪಾಳಾದಲ್ಲಿ ಸಮರ್ಪಕ ಬಸ್ ಕಲ್ಪಿಸುವಂತೆ ಆಗ್ರಹಿಸಿ, ಶಾಲಾ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ, ಶಿರಸಿ-ಹುಬ್ಬಳ್ಳಿ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಹತ್ತಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಬೆಳಿಗ್ಗೆಯಿಂದಲೇ ನೂರಾರು ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದ ಗ್ರಾಮಸ್ಥರು, ಪೋಷಕರು ವಿದ್ಯಾರ್ಥಿಗಳ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದ್ರು. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಬರಲೇ ಬೇಕು ಅಂತಾ ಹಠ ಹಿಡಿದು ಪ್ರತಿಭಟನೆ ಮುಂದುವರೆಸಿದ್ರು.
ಅಸಲು, ಮುಂಡಗೋಡ ತಾಲೂಕಿನ ಹಲವು ಹಳ್ಳಿಗಳಿಗೆ KSRTC ಬಸ್ ಸಂಚಾರ ವ್ಯವಸ್ಥಿತವಾಗಿಲ್ಲ. ಅದ್ರಲ್ಲೂ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಪೂರಕವಾಗಿ ಬಸ್ ಗಳ ವ್ಯವಸ್ಥೆ ಇಲ್ಲವೇ ಇಲ್ಲ. ಈ ಕಾರಣಕ್ಕಾಗಿನೇ ತಾಲೂಕಾಧ್ಯಂತ ಹಲವು ಬಾರಿ ಪ್ರತಿಭಟನೆಗಳು ನಡೆದಿವೆ. ಆದ್ರೂ ಕೂಡ ಸಂಬಂಧಿಸಿದ ಅಧಿಕಾರುಗಳು ಜಾಣಕುರುಡು ತೋರಿಸ್ತಿದಾರೆ.
