ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!

ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!

Car Accident; ಮುಂಡಗೋಡ ತಾಲೂಕಿನ ಸನವಳ್ಳಿ ಬಳಿ ಕಾರ್ ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಪಲ್ಟಿಯಾಗಿದೆ. ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೇ ತುಂಡಾಗಿ ಬಿದ್ದಿದೆ.

ಬಂಕಾಪುರ ರಸ್ತೆಯ ಸನವಳ್ಳಿ ಬಳಿ ಘಟನೆ ನಡೆದಿದ್ದು, ಸೋಮವಾರ ರಾತ್ರಿ ಘಟನೆ ಸಂಭವಿಸಿರಬಹುದು ಎನ್ನಲಾಗಿದೆ. ಆದ್ರೆ, ಕಾರು ಯಾರದ್ದು,.? ಅದ್ರಲ್ಲಿ ಎಷ್ಟು ಜನ ಪ್ರಯಾಣಿಸುತ್ತಿದ್ರು..? ಘಟನೆಯಲ್ಲಿ ಯಾರಿಗಾದ್ರೂ ಅನಾಹುತವಾಗಿದೆಯಾ..? ಅನ್ನೋ ಮಾಹಿತಿ ಲಭ್ಯವಾಗಿಲ್ಲ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.

error: Content is protected !!