Crime News; ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಮೃತರನ್ನು ವಿಠ್ಠಲ ಶಿಂಧೆ(80), ಅವರ ಪುತ್ರ ನಾರಾಯಣ ಶಿಂಧೆ(42) ಹಾಗೂ ಮೊಮ್ಮಕ್ಕಳಾದ ಶಿವರಾಜ(12), ಶ್ರೀನಿಧಿ(10) ಎಂದು ಗುರುತಿಸಲಾಗಿದೆ.
ಈ ನಾಲ್ವರು ಶುಕ್ರವಾರ ಬೆಳಿಗ್ಗೆ ಚಿಕ್ಕಮಲ್ಲಿಗವಾಡ ಗ್ರಾಮದ ಹೊರಗೆ ಇರುವ ಹಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಶವಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಶುಕ್ರವಾರ ಮಧ್ಯಾಹ್ನದ ಹೊತ್ತಿಗೆ ಗ್ರಾಮದ ಹೊರಭಾಗದಲ್ಲಿರುವ ಸಣ್ಣ ಬಾವಿಯೊಂದರಲ್ಲಿ ಓರ್ವ ವ್ಯಕ್ತಿಯ ಶವ ತೇಲುತ್ತಿರುವ ಬಗ್ಗೆ ಸ್ಥಳೀಯರು ಗ್ರಾಮೀಣ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಆ ಶವವನ್ನು ಹೊರ ತೆಗೆಯುತ್ತಿದ್ದಂತೆಯೇ ಮತ್ತೊಂದು ಶವ ಪತ್ತೆಯಾಗಿದೆ. ಅದನ್ನೂ ತೆಗೆಯುತ್ತಲೇ ಶಾಲಾ ಸಮವಸ್ತ್ರದಲ್ಲಿರುವ ಎರಡು ಮಕ್ಕಳ ಶವಗಳು ಕೂಡ ತೇಲಿ ಬಂದಿವೆ. ಬಾವಿಯ ಬಳಿ ನಿಲ್ಲಿಸಲಾಗಿದ್ದ ಬೈಕ್ ಆಧಾರದ ಮೇಲೆ ಇದು ನಾರಾಯಣ ಶಿಂಧೆ ಕುಟುಂಬದ್ದು ಎಂದು ಪೊಲೀಸರು ಪತ್ತೆ ಮಾಡಿದ್ದಾರೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬರಬೇಕಿದೆ.
ಪ್ರಮುಖ ಸುದ್ದಿ,👉ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
