ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರು ವಿಧಿವಶರಾಗಿದ್ದಾರೆ ಅನ್ನೋ ಶಾಕಿಂಗ್ ಮಾಹಿತಿ ಸಿಕ್ಕಿದೆ. 33 ವರ್ಷ ವಯಸ್ಸಿನ ಅವ್ರು ಈಗ್ಗೆ ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ರು. ಹೀಗಾಗಿ, ಅವ್ರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆ ಉಸಿರೆಳೆದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಅಂದಹಾಗೆ, ಮುಂಡಗೋಡಿಗೆ ಎರಡನೇ ಬಾರಿಗೆ ಪಿಎಸ್ಐ ಆಗಿ ವರ್ಗಾವಣೆಗೊಂಡು ಬಂದಿದ್ದ, ಯಲ್ಲಾಲಿಂಗ್ ಕುನ್ನೂರ್ ಜನಾನುರಾಗಿಯಾಗಿದ್ದರು. ಅದಕ್ಕೂ ಮೊದಲು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಹಾಗೂ ಓರ್ವ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಸಂತಾಪ..!
ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಹಲವು ಮುಖಂಡರು ಕಂಬನಿ ಮಿಡಿದಿದ್ದಾರೆ.
