ಫೆ.22 ಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ..!

ಕಾರವಾರ; ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.22 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಅಂದು ಬೆ.11.50 ಕ್ಕೆ ಮಂಜುಗುಣಿ ಗ್ರಾಮದಲ್ಲಿ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಕಾರವಾರ ವತಿಯಿಂದ, ಅಂಕೋಲಾ ತಾಲೂಕಿನ ಮಂಜುಗುಣಿ ಗ್ರಾಮದಿಂದ ಕುಮಟಾ ತಾಲೂಕಿನ ಗಂಗಾವಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನಂತರ ಮಧ್ಯಾಹ್ನ 12.45 ಕ್ಕೆ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಮತ್ತು ಯಲ್ಲಾಪುರ ತಾಲೂಕಿನ ಖಾನಾಪುರ ತಾಳಗುಪ್ಪ ರಾಜ್ಯ ಹೆದ್ದಾರಿ-93 ರ ಕಿ.ಮೀ 82.50 ರಲ್ಲಿ ಸೇತುವೆ ನಿರ್ಮಾಣ, ಯಲ್ಲಾಪುರ ಪಟ್ಟಣದ ನಿರೀಕ್ಷಣಾ ಮಂದಿರದ ಹೊಸ ಕಟ್ಟಡ ನಿರ್ಮಾಣ ಹಾಗೂ ಮುಂಡಗೋಡ ತಾಲೂಕಿನ ಹೊಸ ಪ್ರವಾಸಿ ಮಂದಿರ ನಿರ್ಮಾಣ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

450 ಹಾಸಿಗೆಗಳ ಮಲ್ಪಿ ಸ್ಪೆಶಾಲಿಟಿ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಫೆ.22 ಕ್ಕೆ

ಕಾರವಾರ; ಜಿಲ್ಲಾಡಳಿತ , ಜಿಲ್ಲಾ ಪಂಚಾಯತ, ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಾರವಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜಿನೀಯರಿಂಗ್ ವಿಭಾಗ, ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ 450 ಹಾಸಿಗೆಗಳ ಮಲ್ಪಿ ಸ್ಪೆಶಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನಾ ಸಮಾರಂಭವು ಫೆ.22 ರಂದು ಬೆ.11.30 ಗಂಟೆಗೆ ಕಾರವಾರದಲ್ಲಿ ನಡೆಯಲಿದೆ.

ಆಸ್ಪತ್ರೆಯ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿಲಿದ್ದು, ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸತೀಶ ಕೆ. ಸೈಲ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿದ್ಧಿ ಹಾಗೂ ಉದ್ಯಮಶೀಲತೆ, ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ ರುದ್ರಪ್ಪ ಪಾಟೀಲ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಆರ್.ವಿ ದೇಶಪಾಂಡೆ, ಶಿವರಾಮ ಹೆಬ್ಬಾರ್, ದಿನಕರ ಕೆ. ಶೆಟ್ಟಿ, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಶಾಸಕರಾದ ಎಸ್. ವಿ.ಸಂಕನೂರು, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಡಿ.ಉಳ್ವೇಕರ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.