ಮೂಕಪ್ರಾಣಿಗಳ ಮೂಕರೋಧನೆಗೆ ಮಿಡಿದ ಮನಗಳು: ಬಿಡಾಡಿ ದನಗಳಿಗೆ, ಶ್ವಾನಗಳಿಗೆ ಆಹಾರ..!

ಮೂಕಪ್ರಾಣಿಗಳ ಮೂಕರೋಧನೆಗೆ ಮಿಡಿದ ಮನಗಳು: ಬಿಡಾಡಿ ದನಗಳಿಗೆ, ಶ್ವಾನಗಳಿಗೆ ಆಹಾರ..!

ಮುಂಡಗೋಡ: ಪಟ್ಟಣದಲ್ಲಿ ಲಾಕ್ ಡೌನ್ ಸಂಕಷ್ಟದಲ್ಲಿ ಮೂಕ ಪ್ರಾಣಿಗಳೂ ಕೂಡ ಇನ್ನಿಲ್ಲದಂತೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೀಕೋ ಎನ್ನುತ್ತಿರೋ ಪಟ್ಟಣದ ಬೀದಿಗಳಲ್ಲಿ ಕರೆದು ಆಹಾರ ನೀಡುವವರಿಲ್ಲದೇ ಬಿಡಾಡಿ ದನಗಳು ಹಸಿವಿನಿಂದ ನರಳುತ್ತಿವೆ. ಶ್ವಾನಗಳು ತುತ್ತು ಕೂಳಿಗಾಗಿ ಅಲೆದಾಡುತ್ತಿವೆ. ಹೀಗಾಗಿ ಇದನ್ನೇಲ್ಲ ನೋಡಿದ ಕೆಲ ಯುವಕರ ಟೀಂ‌ ಮುಂಡಗೋಡದಲ್ಲಿ ಮೂಕ ಪ್ರಾಣಿಗಳ ಹಸಿವು ನೀಗಿಸುವ ಕಾರ್ಯ ಮಾಡುತ್ತಿದ್ದಾರೆ. ನಿಮಗೆ ನೆನಪಿರಲಿ, ಈಗ್ಗೆ ಕೆಲವೇ ದಿನಗಳ ಹಿಂದೆ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ಮೂಕಪ್ರಣಿಗಳ ಮೂಕ ರೋಧನದ ಬಗ್ಗೆ ವರದಿ ಪ್ರಸಾರ ಮಾಡಿತ್ತು. ಪಬ್ಲಿಕ್ ಫಸ್ಟ್ ನ್ಯೂಸ್ ಸುದ್ದಿಗೆ ಸ್ಪಂಧಿಸಿರೋ ನಂದಿಕಟ್ಟಾ ಗ್ರಾಮದ ಮಹಾರಾಜ್ ಹೋರಿ ಮಾಲೀಕರು ಹಾಗೂ ಅಭಿಮಾನಿಗಳು ಮುಂಡಗೋಡ ಪಟ್ಟಣದಲ್ಲಿ ಈ ಕಾರ್ಯ ಮಾಡುತ್ತಿದ್ದಾರೆ. ಶ್ವಾನಗಳಿಗೆ ಹಾಗೂ ಬಿಡಾಡಿ ದನಗಳಿಗೆ ಮೇವು, ಆಹಾರ ನೀಡುವ ಮೂಲಕ ಮಾನವೀಯತೆ ಕಾರ್ಯ ತೋರಿದ್ದಾರೆ.

ತನಗೆ ಕಚ್ಚಿದ ಹಾವಿನ ಜೊತೆ ಆಸ್ಪತ್ರೆಗೆ ಬಂದ ಯುವಕ..! ಬೆಚ್ಚಿಬಿದ್ದ ಜನ..!!

ತನಗೆ ಕಚ್ಚಿದ ಹಾವಿನ ಜೊತೆ ಆಸ್ಪತ್ರೆಗೆ ಬಂದ ಯುವಕ..! ಬೆಚ್ಚಿಬಿದ್ದ ಜನ..!!

ಬಳ್ಳಾರಿ: ತನಗೆ ಕಚ್ಚಿದ ಹಾವನ್ನ ಹಿಡಿದುಕೊಂಡು ಆಸ್ಪತ್ರೆಗೆ ಬಂದಿದ್ದಾನೆ ಇಲ್ಲೊಬ್ಬ ಬೂಪ. ಅಂದಹಾಗೆ ಇದು ನಡೆದಿರೋದು ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಉಪ್ಪಾರಹಳ್ಳಿ ಗ್ರಾಮದಲ್ಲಿ. ಉಪ್ಪಾರಹಳ್ಳಿ ಗ್ರಾಮದ ಕಾಡಪ್ಪ ಎಂಬ ಯುವಕನಿಗೆ ಇಂದು ಬೆಳಿಗ್ಗೆ ಹಾವು ಕಚ್ಚಿದೆ.ನನಗೆ ನೀನು ಕಚ್ಚಿದಿಯಾ, ನಿನ್ನ ಬಿಡೋದಿಲ್ಲ ಅಂತಾ ಹಾವು ಹಿಡಿದು ಆ ಹಾವಿನ ಜೊತೆಗೇ ಆಸ್ಪತ್ರೆಗೆ ಬಂದಿದ್ದಾನೆ‌. ಹೀಗಾಗಿ ಆಸ್ಪತ್ರೆ ಸಿಬ್ಬಂದಿಗಳು ಹಾವು ಹಿಡಿದು ತಂದಿದ್ದ ಯುವಕನನ್ನು ನೋಡಿ ಭಯಗೊಂಡಿದ್ದಾರೆ. ಜನ ಹೌಹಾರಿದ್ದಾರೆ.

ಪೆಟ್ರೊಲ್ ದರ ಏರಿಕೆಗೆ ಖಂಡನೆ: ಅಳ್ನಾವರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ..!

ಪೆಟ್ರೊಲ್ ದರ ಏರಿಕೆಗೆ ಖಂಡನೆ: ಅಳ್ನಾವರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ..!

ಧಾರವಾಡ: ಕಲಘಟಗಿ ವಿಧಾನಸಭಾ ಕ್ಷೇತ್ರದ ಅಳ್ನಾವರದಲ್ಲಿ ನಾಗರಾಜ ಛಬ್ಬಿ ಬೆಂಬಲಿಗರಿಂದ ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಯಿತು. ಪೆಟ್ರೋಲ್ ದರ ಏರಿಕೆ ಕುರಿತು, ಪೆಟ್ರೊಲ್ ಹಾಕಿಸಿಕೊಳ್ಳಲು ಬಂದ ಜನರ ಅಭಿಪ್ರಾಯ ಕೇಳಲಾಯಿತು. ಸಕಷ್ಟು ಜನರು ಪೆಟ್ರೊಲ್ ದರ ಏರಿಕೆಗೆ ಖಂಡನೆ ವ್ಯಕ್ತ ಪಡಿಸಿದ್ರು. ಈ ಸಂಧರ್ಭದಲ್ಲಿ ಪ.ಪಂ.ಸದಸ್ಯ ತಮೀಮ್ ತೆರಗಾಂವ, ಗ್ರಾಮೀಣ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಂಕರ ಮುಗಳಿ, ಮಾಜಿ ಗ್ರಾ.ಪಂ ಅಧ್ಯಕ್ಷ ರಾಮೂ ಕೋಲೇಕರ, ಅಬೂಬಕರ ನದಾಫ, ಶಾಮಸುಂಧರ ಗಾಯಕವಾಡ, ಶಶಿಕುಮಾರ ಗಾಣಿಗೇರ, ಶಂಕರ ಗಿರಿಯಾಲ, ಸದ್ದಾಂ ಬೋಗೂರ, ಅಶೋಕ ತಿರಕನ್ನವರ, ಇಸ್ಮಾಯಿಲ್ ಪಠಾಣ, ಇಸ್ಮಾಯಿಲ್ ಮಲೀಕಬಾರ, ರಾಹುಲ್ ಶಿಂಧೆ ಸೇರೊದಂತೆ ಅನೇಕ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯಾಸರ್ಗಿಯಲ್ಲಿ ಇಸ್ಪೀಟು ಅಡ್ಡೆ ಮೇಲೆ ಪೊಲೀಸರ ದಾಳಿ: ನಾಲ್ವರ ವಿರುದ್ಧ ಕೇಸ್..!

ನ್ಯಾಸರ್ಗಿಯಲ್ಲಿ ಇಸ್ಪೀಟು ಅಡ್ಡೆ ಮೇಲೆ ಪೊಲೀಸರ ದಾಳಿ: ನಾಲ್ವರ ವಿರುದ್ಧ ಕೇಸ್..!

ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ಇಸ್ಪೀಟು ಆಟದಲ್ಲಿ ತೊಡಗಿದ್ದ ವೇಳೆ ಮುಂಡಗೋಡ ಪೊಲೀಸರು ದಾಳಿ ಮಾಡಿ 4 ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ‌. ಮೈಲಾರಿ ಮಹದೇವಪ್ಪ ಸಾಗರ, ಮಂಜುನಾಥ್ ಹನ್ಮಂತಪ್ಪ ಉಪಾದ್ಯಾಯ, ಬಸವಂತಪ್ಪ ಲಕ್ಷ್ಮಣ ಮಡ್ಡಿ ಹಾಗೂ ಮಂಜುನಾಥ ನಾಗಪ್ಪ ಧರ್ಮೋಜಿ ಎಂಬುವ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನು ದಾಳಿ ವೇಳೆ 2,200 ರೂ.‌ನಗದು ಹಾಗೂ ಇಸ್ಪೀಟು ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌

ಭಾರಿ ಮಳೆಯಿಂದ ಶೇಂಗಾ ಬೆಳೆ ಮಣ್ಣುಪಾಲು; ಮನನೊಂದ ರೈತ ಆತ್ಮಹತ್ಯೆ..!

ಭಾರಿ ಮಳೆಯಿಂದ ಶೇಂಗಾ ಬೆಳೆ ಮಣ್ಣುಪಾಲು; ಮನನೊಂದ ರೈತ ಆತ್ಮಹತ್ಯೆ..!

ಮುಂಡಗೋಡ: ತಾಲೂಕಿನ ಅರಶಿಣಗೇರಿ ಗ್ರಾಮದಲ್ಲಿ ಸಾಲಬಾಧೆಯಿಂದ ರೈತನೊಬ್ಬ ಕಾಡಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದೇವೇಂದ್ರಪ್ಪ ಈರಪ್ಪ ತೆಗ್ಗಳ್ಳಿ(60) ಎಂಬುವ ರೈತನೇ ಆತ್ಮಹತ್ಯೆಗೆ ಶರಣಾಗಿದ್ದಾನೆ. 4 ಎಕರೆ ಜಮೀನು ಹೊಂದಿರೋ ರೈತ ಈ ವರ್ಷ 1ಲಕ್ಷ 20 ಸಾವಿರ ರೂಪಾಯಿ ಖರ್ಚು ಮಾಡಿ ಶೇಂಗಾ ಬೆಳೆದಿದ್ದ‌. ಆದ್ರೆ ಇತ್ತಿಚೆಗೆ ಸುರಿದ ಭಾರೀ ಮಳೆಯಿಂದ ಬೆಳೆದಿದ್ದ ಶೇಂಗಾ ಎಲ್ಲಾ ಹಾಳಾಗಿತ್ತು. ಹೀಗಾಗಿವಸಾಲ ಸೋಲ ಮಾಡಿ ಬೆಳೆದಿದ್ದ ಬೆಳೆ ಕೈಕೊಟ್ಟ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ಮೃತನ ಪುತ್ರ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ.

ಆ ಪುಟ್ಟ ಕಂದಮ್ಮನ ಸಾವಿಗೆ “ಅಯ್ಯೋ ಪಾಪ ಹೀಗೆ ಆಗಬಾರದಿತ್ತು” ಅಂದ್ರಷ್ಟೇ ಸಾಕಾ..? ಹಾಗಾದ್ರೆ ಇನ್ನೇಷ್ಟು ಬಲಿ ಬೇಕು..?

ಆ ಪುಟ್ಟ ಕಂದಮ್ಮನ ಸಾವಿಗೆ “ಅಯ್ಯೋ ಪಾಪ ಹೀಗೆ ಆಗಬಾರದಿತ್ತು” ಅಂದ್ರಷ್ಟೇ ಸಾಕಾ..? ಹಾಗಾದ್ರೆ ಇನ್ನೇಷ್ಟು ಬಲಿ ಬೇಕು..?

ನಿಜ, ಮಮ್ಮಲ ಮರುಗುತ್ತಿದೆ ಇಡೀ ಮುಂಡಗೋಡ..! ಹಾಗೇ ಒಮ್ಮೆ ಕಲ್ಪಿಸಿಕೊಳ್ಳಿ, ಆ ಕಂದಮ್ಮ ಸಾವು ಬದುಕಿನ ಮದ್ಯೆ ಹೋರಾಡುತ್ತ, ಹುಬ್ಬಳ್ಳಿಯ ಕಿಮ್ಸ್ ICU ಬೆಡ್ಡಿನ ಮೇಲೆ ನರಳಿತ್ತಿರೋ ಸಂದರ್ಭ, ಆ ಹೆತ್ತ ಕರುಳುಗಳು ಪಟ್ಟಿರೋ ಸಂಕಟ ಎಷ್ಟಿರಬಹುದು ಅಲ್ವಾ..? ಇದೇಲ್ಲ ಸಾಕ್ಷಿ ಕೇಳುವವರಿಗೆ ಯಾಕೆ ಅರ್ಥವಾಗ್ತಿಲ್ಲ..? ಇದು, ಮುಂಡಗೋಡ ತಾಲೂಕಿನ ಜನರ ಮಿಲಿಯನ್ ಡಾಲರ್ ಪ್ರಶ್ನೆ. ಸಾಕ್ಷಿ ಬೇಕಂತೆ..? ಎಲ್ಲಿಂದ ನಗಬೇಕೋ ಅರ್ಥವೇ ಅಗುತ್ತಿಲ್ಲ ಕಣ್ರಿ, ಆ ಮುಗ್ದ ಕಂದಮ್ಮನ ಸಾವಿಗೆ ಕಾರಣನಾದ ವೈದ್ಯನ ವಿರುದ್ಧ ಕ್ರಮ‌ ಕೈಗೊಳ್ಳಲು ಸಾಕ್ಷಿ ಬೇಕಂತೆ..! ಹಾಗಾದ್ರೆ ಇನ್ಮುಂದೆ, ಮುಂಡಗೋಡ ತಾಲೂಕಿನ ಹಳ್ಳಿಗಳ ಮುಗ್ದ ಜನರು ಇಲ್ಲಿನ ಖಾಸಗಿ ಆಸ್ಪತ್ರೆಗೆ ಹೋಗಬೇಕು ಅಂದ್ರೆ ಅದಕ್ಕೆ ಪೂರಕವಾದ ಸಾಕ್ಷಿ ಇಟ್ಕೊಂಡೆ ಹೋಗಬೇಕೆನೋ..? ಅಷ್ಟಕ್ಕೂ, ಸಾಕ್ಷಿಯ ಹೆಸರಲ್ಲಿ ಬಡವರನ್ನು ಹೆದರಿಸಿ ಇನ್ನೇಷ್ಟು ಮುಗ್ದ ಪ್ರಾಣಗಳ ಜೊತೆ ಚೆಲ್ಲಾಟವಾಡೋದು..? ಆ ಹೆತ್ತವರ ಕರುಳ ಕಣ್ಣೀರಿನ ಶಾಪ ಸುಮ್ನೆ ಬಿಡತ್ತಾ..? ಅಂದಹಾಗೆ, ಇಲ್ಲಿ ಸಾಕ್ಷಿ ಕೊಡಿ ಅಂತಾ ಕೇಳ್ತಿರೋರು ನಮ್ಮ ಪೊಲೀಸರು...

ಪೆಟ್ರೊಲ್ ಬೆಲೆ ಏರಿಕೆಗೆ ಖಂಡನೆ: ಮುಂಡಗೋಡಿನಲ್ಲಿ ಕಾಂಗ್ರೆಸ್ ಪ್ರತಿಭಟನೆ..!

ಪೆಟ್ರೊಲ್ ಬೆಲೆ ಏರಿಕೆಗೆ ಖಂಡನೆ: ಮುಂಡಗೋಡಿನಲ್ಲಿ ಕಾಂಗ್ರೆಸ್ ಪ್ರತಿಭಟನೆ..!

ಮುಂಡಗೋಡ: ಕೇಂದ್ರ ಸರ್ಕಾರ ಪದೇ ಪದೇ ತೈಲ ಬೆಲೆ ಏರಿಸುತ್ತಿರುವುದನ್ನು ಖಂಡಿಸಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದು ಪೆಟ್ರೋಲ್ ಬಂಕ್ ನಲ್ಲಿ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಶೀಘ್ರವೇ ಪೆಟ್ರೊಲ್ ದರ ಕಡಿಮೆ ಮಾಡುವಂತೆ ಆಗ್ರಹಿಸಿದ್ರು. ಈ ಸಂದರ್ಭದಲ್ಲಿ ಮುಂಡಗೋಡ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಚ್. ಎಂ. ನಾಯಕ್ ಮುಂಡಗೋಡ ಉಸ್ತುವಾರಿಗಳಾದ ಸುರೇಶ್ ಸವಣೂರು, ಎಂ ಎನ್ ದುಂಡಿಸಿ, ಅಲಿ ಹಸನ್ ಬೆಂಡಿಗೇರಿ, ಧರ್ಮರಾಜ್ ನಡಿಗೇರ, ರಾಜು ಹಿರೇಮಠ, ಪಟ್ಟಣ ಪಂಚಾಯಿತಿ ಸದಸ್ಯರಾದ ಮಹಮ್ಮದ್ ಗೌಸ್ ಮಕಾನದಾರ, ಜಾಫರ ಹಂಡಿ, ನಾಗರಾಜ ಹಂಚಿನಮನಿ, ರಾಜು ಬೋವಿ, ಮಲ್ಲು ಗೌಳಿ, ಜೈನೂ ಬೆಂಡಿಗೇರಿ, ಅಲ್ಲಾವುದ್ದೀನ್, ಬಸವರಾಜ ಆಸ್ತಕಟ್ಟಿ, ಆಶಿಫ್ ಮಕಾಂದಾರ ಸೇರಿದಂತೆ ತಾಲ್ಲೂಕಿನ ಮುಖಂಡರುಗಳು, ಘಟಕದ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಈ ಸಂದರ್ಭದಲ್ಲಿ ಹಾಜರಿದ್ದರು

ಪೆಟ್ರೊಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ..!

ಪೆಟ್ರೊಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ..!

ದೇವರಹಿಪ್ಪರಗಿ: ಪಟ್ಟಣದ ಪೆಟ್ರೊಲ್ ಬಂಕ್ ಹತ್ತಿರ ಇಂದು ಕಾಂಗ್ರೆಸ್ ಕಾರ್ಯಕರ್ತರು. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು. ಪ್ರತಿಭಟನೆ ಮಾಡಿ ಮಾತನಾಡಿದ ವಿಜಯಪುರ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಗುಡಿಮನಿ, ದೇಶದಲ್ಲಿ ಸುಮಾರು ಏಳು ವರ್ಷಗಳಿಂದ ಪೆಟ್ರೊಲ್ ಬೆಲೆ ಏರುತ್ತಲೇ ಇದೆ. ದಿನನಿತ್ಯ ಬಳಸುವ ಗ್ಯಾಸ್ ಬೆಲೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಅಂತಾ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿರ್ ಬಿಜಾಪುರ್, ಬಶೀರ್ ಬೇಪಾರಿ, ರಜಾಕ್ ಹರವಾಳ, ರಾಘವೇಂದ್ರ ಪಡಗಾನೂರ, ಯಾಕೂಬ್ ಶಹಪುರ್, ದಾದಾಪೀರ್ ಬೇಪಾರಿ, ಮಾಂತೇಶ್ ಚಲವಾದಿ, ರಾಕೇಶ್ ಮೇಲಿನಮನಿ, ಹಾಜಿಲಾಲ, ಮಸಳಿ ಹೀಗೆ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಶ್ವಾನ ಪ್ರಿಯರೇ ಗಮನಿಸಿ..! ಈ ಶ್ವಾನದ ಹೊಟ್ಟೆಯಲ್ಲಿದೆ ಚಿನ್ನ..!!

ಶ್ವಾನ ಪ್ರಿಯರೇ ಗಮನಿಸಿ..! ಈ ಶ್ವಾನದ ಹೊಟ್ಟೆಯಲ್ಲಿದೆ ಚಿನ್ನ..!!

ಸಾಮಾನ್ಯವಾಗಿ ನಮಗೆ ಭದ್ರತೆ ನೀಡಲೆಂದು ನಾಯಿ ಸಾಕುತ್ತೇವೆ. ಆದರೆ, ಇಲ್ಲೊಂದು ಕುಟುಂಬ ಮಾಡಿದ ಎಡವಟ್ಟಿಗೆ ಹಗಲು ರಾತ್ರಿ ತಮ್ಮ‌ಸಾಕು ನಾಯಿಗೆ ಭದ್ರತೆ ನೀಡುವಂತಾಗಿದೆ. ಅಂದಹಾಗೆ, ಇದಕ್ಕೆಲ್ಲ ಕಾರಣ ಬಂಗಾರದ ಚೈನ್, ಹೌದು! ನೀವು ಇದನ್ನು ನಂಬಲೇ ಬೇಕು. ಕೊಪ್ಪಳ ಜಿಲ್ಲೆ ಕಾರಟಗಿ ಪಟ್ಟಣದ ದಿಲೀಪಕುಮಾರ್ ಹಿರೇಮಠ ಅವರ ಪಮಾರಿನ್ ತಳಿಯ ನಾಯಿ ಮರಿ ಸದ್ಯ 2 ತಿಂಗಳದ್ದು, ಮನೆ ಮಂದಿಗೆಲ್ಲ ಅಚ್ಚುಮೆಚ್ಚು. ಆದರೆ, ಮಾಲೀಕನ ಬಂಗಾರ ಚೈನ್ ಈಗ ನಾಯಿಯ ಹೊಟ್ಟೆ ಸೇರಿಬಿಟ್ಟಿದೆ. 2 ತೊಲೆ ಬಂಗಾರದ ಚೈನನ್ನು ಕಚ್ಚಿ ತುಂಡು ಮಾಡಿ ತಿಂದುಬಿಟ್ಟಿದೆ ಶ್ವಾನ. ಈ ವೇಳೆ ಮಾಲೀಕ ನಿದ್ದೆಗೆ ಜಾರಿದ್ದರು. ಎಚ್ಚರವಾದಾಗ ನಾಯಿ ಬಳಿ ಚೈನ್ ತುಂಡುಗಳನ್ನು ಗಮನಿಸಿ ಶಾಕ್ ಆಗಿದ್ದಾರೆ. ಕೂಡಲೇ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಚಿಕ್ಕ ಮರಿಯಾದ ಕಾರಣ ಆಪರೇಷನ್ ಬೇಡವೆಂದು ಡಾಕ್ಟರ್ ತಿಳಿಸಿದ್ದಾರೆ. ಇದೆ ವೇಳೆ ನಾಯಿ ಬಹಿರ್ದೆಸೆ ಮಾಡಿದ್ದು, ಒಂದೆರೆಡು ತುಂಡುಗಳು ಬಂದಿವೆ. ಸದ್ಯ ನಾಯಿಮರಿ ಹೊಟ್ಟೆಯಲ್ಲಿ 80 ಸಾವಿರ ರೂ. ಚಿನ್ನವಿದೆ...

ಇದೇ ತಿಂಗಳು ಮದುವೆಯಿತ್ತು..! ಆದ್ರೆ ಮದುಮಗ ಮಾತ್ರ ಇವತ್ತು ರೈಲಿಗೆ ತಲೆ ಕೊಟ್ಟು ಬಿಟ್ಟ..! ಯಾಕೆ ಹೀಗಾಯ್ತು..?

ಇದೇ ತಿಂಗಳು ಮದುವೆಯಿತ್ತು..! ಆದ್ರೆ ಮದುಮಗ ಮಾತ್ರ ಇವತ್ತು ರೈಲಿಗೆ ತಲೆ ಕೊಟ್ಟು ಬಿಟ್ಟ..! ಯಾಕೆ ಹೀಗಾಯ್ತು..?

ಹಾವೇರಿ: ಇನ್ನೇನು ಕೆಲವೇ ದಿನಗಳಲ್ಲಿ ಮದುವೆ ಆಗಬೇಕಿದ್ದ ಯುವಕ ರೈಲು ಹಳಿಗೆ ಬಿದ್ದು ಸಾವು ಕಂಡ ಘಟನೆ ಹಾವೇರಿ ನಗರದ ಹೊರವಲಯದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಹಾವೇರಿ ಬಸವೇಶ್ವರ ನಗರದ ನಿವಾಸಿ, ವೀರೇಶ್ ಬೆನಕಪ್ಪನವರ (36), ಮೃತ ಯುವಕನಾಗಿದ್ದು ಇತ್ತೀಚೆಗಷ್ಟೇ ಮದುವೆ ನಿಶ್ಚಿತಾರ್ಥವಾಗಿತ್ತು. ಈ ತಿಂಗಳು 28 ರಂದು ಹಾವೇರಿಯಲ್ಲಿ ಮದವೆ ಕೂಡ ನಿಶ್ಚಯವಾಗಿತ್ತು. ಆದ್ರೆ ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ಶಂಕೆ ವ್ಯಕ್ತವಾಗಿದೆ. ಇನ್ನು ಸ್ಥಳಕ್ಕೆ ರೈಲ್ವೆ ಪೋಲಿಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಹಾವೇರಿ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!