ಹಾವೇರಿ: : ಕಳಪೆ ಬಿತ್ತನೆ ಬೀಜ ದಾಸ್ತಾನು, ಮಾರಾಟ ಹಾಗೂ ಅನಧಿಕೃತವಾಗಿ ಬಿತ್ತನೆ ಬೀಜ ಗೊಬ್ಬರ ದಾಸ್ತಾನು ಮಾಡಿಕೊಂಡು ಕೃತಕ ಅಭಾವ ಸೃಷ್ಟಿಸುವವರ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು. ಈ ಕುರಿತಂತೆ ರಾಜ್ಯಾದ್ಯಂತ ವಿಶೇಷ ಅಭಿಯಾನ ಕೈಗೊಂಡು ಅಕ್ರಮಕ್ಕೆ ಕಡಿವಾಣ ಹಾಕಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಹೇಳಿದರು. ಹಾವೇರಿ ಪ್ರವಾಸಿ ಮಂದಿರದಲ್ಲಿ ಮುಂಗಾರು ಬಿತ್ತನೆ ಬೀಜ ಹಾಗೂ ಗೊಬ್ಬರದ ದಾಸ್ತಾನು ವ್ಯವಸ್ಥೆ ಕುರಿತಂತೆ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಕಳಪೆ ಬೀಜ ಕುರಿತಂತೆ ರಾಜ್ಯ ಸರ್ಕಾರ ದಿಟ್ಟ ಕ್ರಮಕೈಗೊಳ್ಳಲಾಗಿದೆ. ಹಾವೇರಿ, ರಾಣೇಬೆನ್ನೂರ, ಕೊಪ್ಪಳ, ಬೀದರಗಳಲ್ಲಿ ಬಿಡಿ ಬಿತ್ತನೆ ಬೀಜ ಮಾರಾಟ, ಅನಧಿಕೃತ ಬಿತ್ತನೆ ಬೀಜಗಳ ದಾಸ್ತಾನು, ನಕಲಿ ಬಿತ್ತನೆ ಬೀಜ ಹಾಗೂ ನಕಲಿ ಗೊಬ್ಬರಗಳ ಪತ್ತೆಮಾಡಿ ಕಠಿಣ ಕ್ರಮಕೈಗೊಳ್ಳಲಾಗಿದೆ. ಈ ವರ್ಷವೂ ಈ ಅಭಿಯಾನ ಮುಂದುವರೆದಿದೆ ಎಂದು ಹೇಳಿದರು. ಬಿಡಿ ಬಿತ್ತನೆ ಬೀಜಗಳ ಮಾರಾಟ, ಅಕ್ರಮ ದಾಸ್ತಾನುಗಳ ಕುರಿತಂತೆ ಮಾಹಿತಿಗಳು ಬರುತ್ತಿವೆ. ದೂರುಗಳನ್ನು ಆಧರಿಸಿ...
Top Stories
Police News:ರಾಜ್ಯದ ಪ್ರಭಾರ ಡಿಜಿ-ಐಜಿಪಿಯಾಗಿ ಡಾ.ಎಂ.ಎ. ಸಲೀಂ ನೇಮಕ..!
Naxalar Encounter News:ನಕ್ಸಲ್ ಕಮಾಂಡರ್ ಸೇರಿದಂತೆ 26 ಮಂದಿ ನಕ್ಸಲರನ್ನು ಎನ್ಕೌಂಟರಿನಲ್ಲಿ ಹೊಡೆದುರುಳಿಸಿದ ಭದ್ರತಾ ಪಡೆಗಳು..!
ED Raid News:ಗೃಹ ಸಚಿವ ಜಿ.ಪರಮೇಶ್ವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಇಡಿ ದಾಳಿ..!
Business News :2024ರಲ್ಲಿ ಸತ್ಯ ನಾಡೆಲ್ಲಾ, ಪಿಚೈ ಹಿಂದಿಕ್ಕಿ ದಾಖಲೆಯ 1,157 ಕೋಟಿ ರೂ. ಪಡೆದ ಭಾರತೀಯ ಮೂಲದ ಟೆಸ್ಲಾ ಕಾರ್ಯನಿರ್ವಾಹಕ ಅಧಿಕಾರಿ..!
Achievement News: ಕನ್ನಡದ ಲೇಖಕಿ ಬಾನು ಮುಷ್ತಾಕ್ಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಘೋಷಣೆ..!
Police Death News:ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಚರಂಡಿಗೆ ಉರುಳಿ ಬಿದ್ದ ಬಸ್ ; ಪೊಲೀಸ್ ಅಧಿಕಾರಿ ಸಾವು..!
ಛತ್ರಿ ಹಿಡಿದು ಸ್ಕೂಟಿ ಚಲಾಯಿಸುತ್ತಿದ್ದ ವಿದ್ಯಾರ್ಥಿ ಲಾರಿಗೆ ಡಿಕ್ಕಿ, ದುರ್ಮರಣ
Achievement News:ಟೈಮ್ 100 ಲೋಕೋಪಕಾರಿ 2025 ಜಾಗತಿಕ ಪಟ್ಟಿ ; ಭಾರತದ ಅಂಬಾನಿ ದಂಪತಿ, ಅಜೀಂ ಪ್ರೇಮಜಿ, ನಿಖಿಲ್ ಕಾಮತಗೆ ಸ್ಥಾನ..!
Achievement News:ಟೈಮ್ 100 ಲೋಕೋಪಕಾರಿ 2025 ಜಾಗತಿಕ ಪಟ್ಟಿ ; ಭಾರತದ ಅಂಬಾನಿ ದಂಪತಿ, ಅಜೀಂ ಪ್ರೇಮಜಿ, ನಿಖಿಲ್ ಕಾಮತಗೆ ಸ್ಥಾನ..!
Road Problem News:ಕಳಪೆ ರಸ್ತೆಗಳಿಂದ ‘ಯಾತನೆʼ ; ಬಿಬಿಎಂಪಿಗೆ ಬೆಂಗಳೂರು ವ್ಯಕ್ತಿಯಿಂದ ನೋಟಿಸ್ : 50 ಲಕ್ಷ ರೂ. ಪರಿಹಾರಕ್ಕೆ ಆಗ್ರಹ..!
ಜಿಲ್ಲೆಯಲ್ಲಿ ಕುಡಿಯುವ ನೀರು ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಿ : ZP Ceo ಈಶ್ವರ ಕಾಂದೂ
ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್
ಚಿನ್ನದ ಬೆಲೆ ಒಂದೇ ದಿನ ₹2400 ಏರಿಕೆ, ಬೆಳ್ಳಿ ₹3000 ಜಿಗಿತ; ಆಭರಣ ಖರೀದಿದಾರರಿಗೆ ಬಿಗ್ ಶಾಕ್..!
ಮುಂಡಗೋಡ-ಶಿರಸಿ ರಸ್ತೆಯ ನಂದಿಪುರ ಬಳಿ, KSRTC ಬಸ್, ಖಾಸಗಿ ಬಸ್ ನಡುವೆ ಮುಖಾಮುಕಿ ಡಿಕ್ಕಿ, ಕೆಲವ್ರಿಗೆ ಗಾಯ..!
ಭಾರೀ ಮಳೆ: ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು: ಸಂಚಾರಕ್ಕೆ ಅಡಚಣೆ..!
ಉತ್ತರ ಕನ್ನಡ ಸೇರಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, 4 ಜಿಲ್ಲೆಗಳಿಗೆ ರೆಡ್ ಅಲರ್ಟ್, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ..!
Car Fire News: ತಾರಿಹಾಳ ಟೋಲ್ ಬಳಿ ಧಗಧಗಿಸಿದ ಕಾರು; ಪ್ರಾಣಾಪಾಯದಿಂದ ಪಾರಾದ ಕುಟುಂಬ..!
ಮಳೆಗಾಲದ ವಿಪತ್ತು ಎದುರಿಸಲು ಸಜ್ಜುಗೊಂಡ ಹೆಸ್ಕಾಂ..!
ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ: ಜೊತೆಗೆ 500 ಕೋಟಿ ಪ್ಯಾಕೇಜ್ ಘೋಷಣೆ..!!
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆ ಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಸದ್ಯ ಜಾರಿಯಲ್ಲಿರುವ ಲಾಕ್ ಡೌನ್ ಮಾರ್ಗಸೂಚಿ ಒಂದು ವಾರಗಳ ಕಾಲ ಮುಂದುವರಿಯಲಿದೆ. ಹೋಟೆಲ್ ಗಳಲ್ಲಿ ಸಂಜೆಯ ವರೆಗೂ ಪಾರ್ಸೆಲ್ ಗೆ ಅವಕಾಶವನ್ನು ಕಲ್ಪಿಸಲಾಗಿದೆ. ಅಲ್ಲದೇ ಲಾಕ್ ಡೌನ್ ಘೋಷಣೆಯ ಜೊತೆಗೆ 500 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
ಲಾಕ್ ಡೌನ್: ಅಮ್ಮಾಜಿ ಕೆರೆ ಹತ್ತಿರ ಪೊಲೀಸರ ಕಣ್ಗಾವಲು..!
ಮುಂಡಗೋಡ: ಪಟ್ಟಣದ ಅಮ್ಮಾಜಿ ಕೆರೆ ಹತ್ತಿರ, ಇಂದು ಕಠಿಣ ಲಾಕ್ ಡೌನ್ ಹಿನ್ನೆಲೆಯಲ್ಲಿ 12 ಗಂಟೆ ನಂತರ ಪಟ್ಟಣದ ಒಳಗೆ ಅನಗತ್ಯವಾಗಿ ಪ್ರವೇಶಿಸುವ ವಾಹನ ಸವಾರರಿಗೆ ಪೊಲೀಸ್ರು ಬಿಸಿ ಮುಟ್ಟಿಸುತ್ತಿದ್ದಾರೆ. ಅನಗತ್ಯವಾಗಿ ಸಂಚರಿಸುವ ವಾಹನ ಸವಾರರನ್ನು ತಡೆದು ಕೋವಿಡ್ನಿ ನಿಯಮಗಳನ್ನು ತಿಳಿ ಹೇಳಿದರು. ಹಾಗೆ ಸಂಚಾರ ನಿಯಮ ಪಾಲಿಸಲು ಸಾರ್ವಜನಿಕರಿಗೆ ಪೊಲೀಸ್ ಪೇದೆಗಳು ಎಚ್ಚರಿಸಿದರು.
12 ಗಂಟೆ ನಂತರವೂ ತೆರೆದಿದ್ದ ದಿನಸಿ ಅಂಗಡಿಗಳು: ಪೊಲೀಸರಿಂದ ಕ್ರಮ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಲಾಕ್ ಡೌನ್ ಸಡಿಲಿಕೆಯ ವಾರದ ಕೊನೆಯ ದಿನ ಅಗತ್ಯ ವಸ್ತುಗಳ ಖರೀಧಿಯಲ್ಲಿ ತೊಡಗಿದ್ದ ಜನ್ರು 12 ಗಂಟೆಯ ನಂತರವೂ ಅನಗತ್ಯ ತಿರುಗಾಡುತ್ತಿದ್ದ ದೃಷ್ಯ ಕಂಡು ಬಂತು. ದಿನಸಿ ಅಂಗಡಿಗಳು ಕೂಡ 12 ಗಂಟೆ ನಂತರವೂ ಅಂಗಡಿ ತೆರೆದು ವ್ಯಾಪಾರ ನಡೆಸುತ್ತಿದ್ದರು. ಹೀಗಾಗಿ, ಮುಂಡಗೋಡ ಪ್ರೊಬೇಷನರಿ ಪಿಎಸ್ ಐ ಕುಮಾರಿ ಕಸ್ತೂರಿ, ಅಂಗಡಿಕಾರರಿಗೆ ಎಚ್ಚರಿಸಿ ಅಂಗಡಿ ಮುಂಗಟ್ಟು ಮುಚ್ಚಿಸಿದರು. ಗುಂಪು ಗುಂಪಾಗಿ ನಿಂತಿದ್ದ ಜನರನ್ನು ಎಚ್ಚರಿಸಿ ಕಳಿಸಿದ್ರು.
ಟಾಟಾ ಏಸ್ ಗಳ ಚಾಲಕರನ್ನ ಬೆದರಿಸಿ ಹಣ ದರೋಡೆ: ಆರೋಪಿಗಳ ಬಂಧನ..!
ಹುಬ್ಬಳ್ಳಿ: ನಗರದ ಗದಗ ರಿಂಗ್ ರೋಡಲ್ಲಿ ಎರಡು ಟಾಟಾ ಏಸ್ ಗಳ ಚಾಲಕರನ್ನ ಬೆದರಿಸಿ, ದರೋಡೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧನ ಮಾಡುವಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನ ಹುಬ್ಬಳ್ಳಿ ಸೆಟ್ಲಮೆಂಟ್ ಗಂಗಾಧರನಗರದ ವಿಶಾಲ ಕಾಶಿನಾಥ ಬಿಜವಾಡ ಹಾಗೂ ಕರ್ಣ ಮುಂಡಗೋಡ ಎಂದು ಗುರುತಿಸಲಾಗಿದ್ದು, ಪಲ್ಸರ್ ಬೈಕಿನಲ್ಲಿ ಹೋಗಿ ವಾಹನ ಚಾಲಕರನ್ನು ಬೆದರಿಕೆ ಹಾಕಿ ಹಣ ದೋಚುತ್ತಿದ್ದರು ಎನ್ನಲಾಗಿದೆ. ರಿಂಗ್ ರೋಡಲ್ಲಿ ಹೋಗುತ್ತಿದ್ದ ಕೃಷ್ಣಾ ಹಾಗೂ ಫಾರೂಕ ಎಂಬುವವರ ಟಾಟಾ ಏಸ್ ವಾಹನಗಳನ್ನ ನಿಲ್ಲಿಸಿ, 38 ಸಾವಿರ ರೂಪಾಯಿ ದೋಚಿಕೊಂಡು ಪರಾರಿಯಾಗಿದ್ದರು. ಇನ್ನು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬೆಂಡಿಗೇರಿ ಠಾಣೆಯ ಪೊಲೀಸರು, ಐಟಿಸಿ ಗೋಡೌನ ಬಳಿಯಿರುವ ಸಿಸಿಟಿವಿ ಕ್ಯಾಮರಾಗಳ ಸಾಕ್ಷಿ ಹಿಡಿದು ಹಳಿಯಾಳ ರಸ್ತೆಯಲ್ಲಿ ಸಂಜೆ ಪಾರ್ಟಿ ಮಾಡುತ್ತ ಕುಳಿತ ಸಮಯದಲ್ಲಿ ಆರೋಪಿಗಳನ್ನ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರವಾರ ಡಿಸಿ ಕಛೇರಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಸಚಿವ ಹೆಬ್ಬಾರ್ ಸಭೆ..!
ಕಾರವಾರ: ಕಾರ್ಮಿಕ ಖಾತೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ, ಶಿವರಾಮ ಹೆಬ್ಬಾರ್ ಇಂದು ಕಾರವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯ ಸಭಾಂಗಣದಲ್ಲಿ ಕೋವಿಡ್ – 19 ನಿರ್ವಹಣೆ ಸಂಬಂಧಿಸಿದಂತೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜಿಲ್ಲೆಯ ಸದ್ಯದ ಸ್ಥಿತಿಗಳ ಕುರಿತು ಮಾಹಿತಿ ಪಡೆದು, ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳು,ಸೊಂಕಿತರಿಗೆ ಚಿಕಿತ್ಸೆ, ವೈದ್ಯಕೀಯ ಸೌಕರ್ಯಗಳು ಹಾಗೂ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಶಾಸಕಿ ಶ್ರೀಮತಿ ರೂಪಾಲಿ ನಾಯ್ಕ, ಜಿಲ್ಲಾಧಿಕಾರಿ, ಎಂ.ಪಿ. ಮುಲೈ ಮುಹಿಲನ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾಸ್ಪತ್ರೆಗೆ 5 ಆಕ್ಸಿಜನ್ ಕಾನ್ಸಂಟ್ರೇಟರ್ ನೀಡಿದ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ..!
ಕಾರವಾರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಉತ್ತರಕನ್ನಡ ಜಿಲ್ಲೆಗೆ ನೀಡಿರುವ ಸುಮಾರು 5 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಇಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಜಿಲ್ಲಾ ವೈದ್ಯಾಧಿಕಾರಿ ಮೂಲಕ ಜಿಲ್ಲಾ ಆಸ್ಪತ್ರೆಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ , ಜಿಲ್ಲಾ ವೈದ್ಯಾಧಿಕಾರಿ, ಶರದ್ ನಾಯಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.
ಅಸಲಿ ನೋಟಿಗೆ ಕೋಟಾನೋಟು ಮಾರಾಟ ಜಾಲ: 6 ಜನ ದಂಧೆಕೋರರ ಬಂಧನ..!
ದಾಂಡೇಲಿ: ಅಸಲಿ ನೋಟು ಪಡೆದು ನಕಲಿ ನೋಟುಗಳನ್ನು ಮಾರಾಟ ಮಾಡುತ್ತಿದ್ದ ಖತರ್ನಾಕ ಕೋಟಾ ನೋಟು ಖದೀಮರ ಜಾಲವನ್ನು ದಾಂಡೇಲಿ ಪೊಲೀಸ್ರು ಹೆಡೆಮುರಿ ಕಟ್ಟಿದ್ದಾರೆ. ಅಸಲಿ ನೋಟು ಪಡೆದು , ನಕಲಿ ನೋಟು ನೀಡುತ್ತಿದ್ದ ವೇಳೆಯೇ ದಾಂಡೇಲಿ ಗ್ರಾಮೀಣ ಪೊಲೀಸರು ದಾಳಿ ನಡೆಸಿ ಭಾರಿ ಪ್ರಮಾಣದ ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ಖೋಟಾನೋಟು ವ್ಯವಹಾರ ಮಾಡುತ್ತಿದ್ದ 6 ಜನರನ್ನು ಬಂಧಿಸಲಾಗಿದೆ. ಬಂಧಿತರಿಂದ 4.5 ಲಕ್ಷ ಅಸಲಿ ನೋಟು, 72 ಲಕ್ಷದ ಖೋಟಾ ನೋಟು ವಶಕ್ಕೆ ಪಡೆಲಾಗಿದೆ. ಮಹಾರಾಷ್ಟ್ರದ ಕಿರಣ ದೇಸಾಯಿ(40), ಗಿರೀಶ ಪೂಜಾರಿ(42), ಬೆಳಗಾವಿಯ ಅಮರ ನಾಯ್ಕ(30), ಸಾಗರ ಕುಣ್ಣೂರ್ಕರ್(28), ದಾಂಡೇಲಿಯ ಶಬ್ಬೀರ್ ಕುಟ್ಟಿ(45), ಶಿವಾಜಿ ಕಾಂಬ್ಳೆ(52) ಬಂಧನಕ್ಕೊಳಗಾದವರು. ಡಿಡಿಎಲ್ ವನಶ್ರೀ ಭಾಗದ ಶಿವಾಜಿ ಕಾಂಬ್ಳೆ ಎನ್ನುವವರ ಮನೆಯಲ್ಲಿ ವಶಕ್ಕೆ ಪಡೆಯಲಾಗಿದೆ. 4.5 ಲಕ್ಷ ಅಸಲಿ ನೋಟು ಪಡೆದು 9 ಲಕ್ಷ ನಕಲಿ ನೋಟು ನೀಡಲು ಮುಂದಾಗಿದ್ದ ವೇಳೆ ದಾಳಿ ನಡೆಸಲಾಗಿದೆ. ಇದೇ ವೇಳೆ ವ್ಯವಹಾರಕ್ಕೆ ಬಳಸಿದ್ದ ಎರಡು ಕಾರು ವಶಪಡಿಸಿಕೊಂಡಿದ್ದಾರೆ....
ನಂದಿಕಟ್ಟಾದಲ್ಲಿ ಕೊರೋನಾ ಸೋಂಕಿತರಿಗೆ ಔಷಧಿ ಕಿಟ್ ವಿತರಣೆ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಕೊರೋನ ಸೋಂಕಿತರ ಮನೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ನೀಡಿದ ಕೋವಿಡ್ ಕೇರ್ ಮೆಡಿಷನ್ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕಾ ರೈತ ಮೂರ್ಚಾ ಅಧ್ಯಕ್ಷರಾದ ಕಲ್ಲನಗೌಡ ಬಸನ ಗೌಡ್ರ, ತಾಲೂಕ ಎಪಿಎಮ್ ಸಿ ಸದಸ್ಯರು ನಿಂಗಪ್ಪಾ ಕವಟೆ, ಪರಶುರಾಮ್ ಮೇಂತೆಕಾರ, ಸಹಕಾರ ಸಂಘದ ಸದಸ್ಯ ರಾಘವೇಂದ್ರ ಜೋಂಡಿಗನವರ, ತಾಲೂಕಾ ಯುವ ಮೂರ್ಚಾ ಕಾರ್ಯದರ್ಶಿ ಕೇದಾರಿ ಬಿ ಮುಗಳಿ ಹಾಗೂ ಕಮ್ಯೂನಿಟಿ ಹೆಲ್ತ್ ಆಪೀಸರ್ ತಾಯವ್ವಾ ಸರ್ದಾರ್, ಆಶಾ ಕಾರ್ಯಕರ್ತೆ ಸವಿತಾ ಕಮ್ಮಾರ್ ಉಪಸ್ಥಿತರಿದ್ದರು
SSLC, PUC ಪರೀಕ್ಷೆ: ಶೀಘ್ರದಲ್ಲಿಯೇ ಸೂಕ್ತ ತೀರ್ಮಾನ: ಸುರೇಶ್ ಕುಮಾರ್
ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ರದ್ದು ಪಡಿಸಿದ ಬೆನ್ನಲ್ಲೇ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ ಕೈಕೊಳ್ಳಲಾಗುವುದು ಅಂತಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಪರಿಸ್ಥಿತಿ ಅವಲೋಕಿಸಿ, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ. ರಾಜ್ಯ ಸರಕಾರ ಪರೀಕ್ಷೆ ನಡೆಸಲು ಸಿದ್ದತೆಗಳನ್ನು ಮಾಡಿಕೊಂಡಿತ್ತು. ಆದ್ರೀಗ ಕೇಂದ್ರ ಸರಕಾರದ ನಿರ್ಧಾರ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಮೇಲೆ ನೇರ ಪರಿಣಾಮವನ್ನುಂಟು ಮಾಡಲಿದೆ. ಇನ್ನು ಕೊರೊನಾ ಸೋಂಕಿನ ನಡುವಲ್ಲೇ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಯನ್ನು ನಡೆಸಬೇಕೇ, ಬೇಡವೇ ಎನ್ನುವ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ಈ ಸಭೆಯಲ್ಲಿ 12ನೇ ತರಗತಿ ಪರೀಕ್ಷೆಯನ್ನು ರದ್ದು ಪಡಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸಿಬಿಎಸ್ಇ 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ವಕೀಲರೊಬ್ಬರು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ...