ಮುಂಡಗೋಡ: ತಾಲೂಕಿನ ಬಡ್ಡಿಗೇರಿ ಕ್ರಾಸ್ ಬಳಿ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಬಡ್ಡಿಗೇರಿಯ ಸೋನುಬಾಯಿ ಜುಮ್ಮು ತೋರವತ್ ಎಂಬ ಮಹಿಳೆಯೇ ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಗೆ ಅಂತಾ ಸೋಮವಾರ ರಾತ್ರಿ ಮುಂಡಗೋಡ ತಾಲೂಕಾಸ್ಪತ್ರೆಗೆ 108 ಅಂಬ್ಯಲೆನ್ಸ್ ನಲ್ಲಿ ಕರೆದೊಯ್ಯುತ್ತಿದ್ದಾಗ ದಾರಿಮದ್ಯೆ ಹೆರಿಗೆ ನೋವು ತೀವ್ರವಾಗಿದೆ. ಹೀಗಾಗಿ ಅಂಬ್ಯುಲೆನ್ಸ್ ನಲ್ಲೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿಕೊಳ್ಳಲಾಗಿದೆ. 108 ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ, ಚಾಲಕ ಪ್ರಕಾಶ್ ಬಾಗೇವಾಡಿ, ಆಶಾ ಕಾರ್ಯಕರ್ತೆ ಸವಿತಾ ಎಸ್ ಜನ್ನು ತಾಯಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ಭಾಗಿಯಾಗಿದ್ರು. ಸದ್ಯ ಮಹಿಳೆಗೆ ತಾಲೂಕಾಸ್ಪತ್ರೆಯಲ್ಲಿ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
Top Stories
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಶಿಗ್ಗಾವಿ ವಿಧಾನಸಭಾ ಕ್ಷೇತ್ರ: ಕೊನೆಯದಿನ 20 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ” ಈವರೆಗೆ 26 ಅಭ್ಯರ್ಥಿಗಳಿಂದ 46 ನಾಮಪತ್ರ..!
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?
ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!
ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!
ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
ಇಂದೂರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಸುಟ್ಟು ಕರಕಲಾದ ಭತ್ತದ ಬಣವಿ..!
ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ಆಕಸ್ಮಿಕವಾಗಿ ಭತ್ತದ ಬಣ್ಣವಿಗೆ ಬೆಂಕಿ ತಗುಲಿ ಸಾವಿರಾರು ರೂಪಾಯಿ ಮೌಲ್ಯದ ಭತ್ತ ಸುಟ್ಟು ಕರಕಲಾದ ಘಟನೆ ನಡೆದಿದೆ. ಚಂದ್ರಶೇಖರ್ ಅರ್ಕಸಾಲಿ ಎಂಬುವ ರೈತರಿಗೆ ಸೇರಿದ ಒಂದೂವರೇ ಎಕರೆ ಪ್ರದೇಶದಲ್ಲಿ ಬೆಳೆಯಲಾಗಿದ್ದ ಭತ್ತದ ಬಣವಿಗೆ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗಲಿದ್ದು ಧಗ ಧಗನೆ ಹೊತ್ತಿ ಉರಿದಿದೆ. ಆಗ ವಿಷಯ ತಿಳಿದ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದು, ಆಗಬಹುದಾದ ಮತ್ತಷ್ಟು ಹಾನಿಯನ್ನು ತಪ್ಪಿಸಿದ್ದಾರೆ. ಈ ಘಟನೆಯಲ್ಲಿ ಸುಮಾರು 50 ಸಾವಿರ ರೂ. ಮೌಲ್ಯದ ಭತ್ತ ಸುಟ್ಟು ಕರಕಲಾಗಿದೆ ಅಂತಾ ಅಂದಾಜಿಸಲಾಗಿದೆ.
ಅಂಬೇಡ್ಕರರಿಗೆ ಅವಮಾನ ಹಿನ್ನೆಲೆ: ಮುಂಡಗೋಡಿನಲ್ಲಿ ನ್ಯಾಯಾಧೀಶರ ಪ್ರತಿಕೃತಿ ದಹಿಸಿ ಆಕ್ರೋಶ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟ ಇಂದು ಸಿಡಿದೆದ್ದಿದ್ದವು. ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಡಾ.ಅಂಬೇಡ್ಕರರಿಗೆ ಅವಮಾನ ಮಾಡಿರೋ ಹಿನ್ನೆಲೆಯಲ್ಲಿ ಆ ನ್ಯಾಯಾಧೀಶರನ್ನು ವಜಾ ಮಾಡುವಂತೆ ಆಗ್ರಹಿಸಿ ಪ್ರತಿಭಟಿಸಿದ್ರು. ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡಾ ರವರ ಪ್ರತಿಕೃತಿ ದಹಿಸಿ ಆಕ್ರೊಶ ಹೊರಹಾಕಿದ್ರು. ಈ ವೇಳೆ ದಲಿತ ಸಂಘಟನೆಗಳು ತಾಲೂಕಿನ ಬಹುತೇಕ ಎಲ್ಲಾ ಮುಖಂಡರು ಹಾಜರಿದ್ದರು.
ಹುನಗುಂದ ರೈತರ ಜಮೀನುಗಳಿಗೆ ರಸ್ತೆಯ ಸಮಸ್ಯೆ, ಅಧಿಕಾರಿಗಳ ಭೇಟಿ..!
ಹುನಗುಂದ ರೈತರ ಜಮೀನುಗಳಿಗೆ ರಸ್ತೆಯ ಸಮಸ್ಯೆ, ಅಧಿಕಾರಿಗಳ ಭೇಟಿ..! ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ರೈತರ ಜಮೀನುಗಳಿಗೆ ಹೋಗಲು ಶಾಶ್ವತ ರಸ್ತೆಯ ಸಮಸ್ಯೆ ಎದುರಾಗಿದೆ. ಹೀಗಾಗಿ ತಹಶೀಲ್ದಾರ ಕಾರ್ಯಾಲಯಕ್ಕೆ ಗ್ರಾಮದ ರೈತರು ಮನವಿ ಸಲ್ಲಿಸಿರೊ ಹಿನ್ನೆಲೆಯಲ್ಲಿ, ಇಂದು ಹುನಗುಂದ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿ ರಸ್ತೆಯ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದ್ರು. ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿ ಸ್ಥಳ ಪರಿಶೀಲನೆ ಮಾಡಿ ರೈತರೊಂದಿಗೆ ಚರ್ಚಿಸಿದ್ರು. ಸದ್ಯ ಕಬ್ಬಿನ ಕಟಾವು ಮಾಡಿ ಕಬ್ಬು ಸಾಗಿಸಲು ರಸ್ತೆಯ ಸಮಸ್ಯೆ ಎದುರಾಗಿದ್ದು ರೈತರು ಸಮಸ್ಯೆಯಲ್ಲಿದ್ದಾರೆ. ಹೀಗಾಗಿ ರೈತರಿಗೆ ಶೀಘ್ರವಾಗಿ ರಸ್ತೆಯ ವ್ಯವಸ್ಥೆ ಮಾಡಿಕೊಡಬೇಕಿದೆ.
ಮುಂಡಗೋಡಿನಲ್ಲಿ ಅನಾರೋಗ್ಯಕ್ಕೀಡಾಗಿ ಬಳಲುತ್ತಿದ್ದ ಕರು ರಕ್ಷಿಸಿದ ಯುವಕರು..!
ಮುಂಡಗೋಡಿನಲ್ಲಿ ಅನಾರೋಗ್ಯಕ್ಕೀಡಾಗಿ ಬಳಲುತ್ತಿದ್ದ ಕರು ರಕ್ಷಿಸಿದ ಯುವಕರು..! ಮುಂಡಗೋಡ: ಪಟ್ಟಣದ ಶಿವಾಜಿ ವೃತ್ತದಲ್ಲಿ ತೀವ್ರ ಅನಾರೋಗ್ಯಕ್ಕೀಡಾಗಿ ಅಸ್ವಸ್ಥಗೊಂಡು ಬಿದ್ದು ಒದ್ದಾಡುತ್ತಿದ್ದ ಆಕಳ ಕರುವನ್ನು ಯುವಕರು ಆರೈಕೆ ಮಾಡಿದ್ದಾರೆ. ಬಿಸಿಲಿನ ತಾಪಕ್ಕೆ ಬಸವಳಿದಿದ್ದ ಕರುವಿಗೆ ಪಶುವೈದ್ಯರನ್ನು ಕರೆಯಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ವೇಳೆ ತನ್ನ ಕಂದನಿಗೆ ತೀವ್ರ ಅನಾರೋಗ್ಯವಾಗಿದೆ ಅಂದು ಅರಿತ ಆಕಳು ಕರುವಿಗಾಗಿ ಗೋಳಾಡುತ್ತಿದ್ದ ದೃಷ್ಯ ಕಂಡು ಬಂತು.. ಈ ವೇಳೆ ಯುವಕರ ಮಾನವೀಯ ಕಾರ್ಯ ಸಾರ್ವಜನಿಕರ ಶ್ಲಾಘನೆಗೆ ಕಾರಣವಾಗಿದೆ.
ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು..!
ಬೆಂಗಳೂರು : ಕರ್ನಾಟಕದ ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಅಂತಾ ತಿಳಿದು ಬಂದಿದೆ. ಬಿಎಸ್ ಯಡಿಯೂರಪ್ಪ ಅವರ ಎರಡನೇ ಪುತ್ರಿ ಪದ್ಮಾವತಿಯವರ ಮಗಳು ಸೌಂದರ್ಯ(30) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದ ಸೌಂದರ್ಯ ಅವರ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮತ್ತೆ ಕೊರೋನಾ ಅಟ್ಟಹಾಸ, ತಾಲೂಕಿನಲ್ಲಿ ಇಂದಿನ ಪಾಸಿಟಿವ್ ಕೇಸ್ ಎಷ್ಟು..? ವಿದ್ಯಾರ್ಥಿಗಳ ಪಾಲು ಎಷ್ಟು..!
ಮುಂಡಗೋಡ: ತಾಲೂಕಿನಲ್ಲಿ ಶುಕ್ರವಾರ ಕೊರೋನಾ ಮತ್ತೆ ಅಟ್ಟಹಾಸ ಮೆರೆದಿದೆ. ಇಂದು ಬರೋಬ್ಬರಿ 138 ಪಾಸಿಟಿವ್ ದೃಢ ಪಟ್ಟಿದೆ. ಅಚ್ಚರಿಯ ಸಂಗತಿಯೆಂದ್ರೆ, ಇಂದಿನ ಪ್ರಕರಣಗಳ ಸಂಖ್ಯೆಯಲ್ಲಿ ಬಹುಪಾಲು ವಿದ್ಯಾರ್ಥಿಗಳದ್ದೇ ಆಗಿದೆ. ಇಂದು ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ಅತಿಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದೊಂದೇ ಕಾಲೇಜಿನಲ್ಲಿ ಬರೋಬ್ಬರಿ 27 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಅದ್ರಂತೆ ಇನ್ನು ಹಲವು ಶಾಲೆಗಳು, ಕಾಲೇಜುಗಳಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು ಪಾಲಕರಿಗೆ ಆತಂಕ ತಂದಿಟ್ಟಿದೆ. ಇನ್ನು, ತಾಲೂಕಿನ ಬಹುತೇಕ ಶಾಲೆಗಳಲ್ಲಿ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿಯೊಂದೂ ಶಾಲೆಗಳಲ್ಲೂ ಹಿಂಡು ಹಿಂಡು ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ, ತಾಲೂಕಿನಲ್ಲಿ ಕೆಲವು ಶಾಲೆಗಳಿಗೆ ಈಗಾಗಲೇ ರಜೆ ಘೋಷಣೆ ಮಾಡಲಾಗಿದೆ.
ಮುಂಡಗೋಡಿನಲ್ಲಿ ಸಿ.ಎಸ್.ಸಿ ಸೆಂಟರ್ ಓಪನ್..!
ಮುಂಡಗೋಡಿನಲ್ಲಿ ಸಿ.ಎಸ್.ಸಿ ಸೆಂಟರ್ ಓಪನ್..! ಮುಂಡಗೋಡ: ಪಟ್ಟಣದ ನೆಹರು ನಗರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮುಂಡಗೋಡದ ಕಾರ್ಯಕ್ಷೇತ್ರದಲ್ಲಿ ಗುರುವಾರ ಸಿ.ಎಸ್.ಸಿ ಸೆಂಟರ್ ಉದ್ಘಾಟಿಸಲಾಯಿತು.
ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕಕ್ಕೆ ವಿರೋಧ, ತಹಶೀಲ್ದಾರರಿಗೆ ಮನವಿ..!
ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕಕ್ಕೆ ವಿರೋಧ, ತಹಶೀಲ್ದಾರರಿಗೆ ಮನವಿ..! ಮುಂಡಗೋಡ: ತಾಲೂಕಿನ ಹನುಮಾಪುರ ಕಾಳಿಕಾದೇವಿ ಮಠದ ಉತ್ತರಾಧಿಕಾರಿ ನೇಮಕ ವಿಚಾರದಲ್ಲಿ ವಿರೋಧ ವ್ಯಕ್ತ ಪಡಿಸಿ ಭಕ್ತರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ರು. ಮಠದಲ್ಲಿ ಭಾರೀ ಅವ್ಯವಹಾರದ ವಾಸನೆ ಬರ್ತಿದೆ. ಮಠದ ಆಸ್ತಿ ಕಬಳಿಸಲು ಹುನ್ನಾರ ನಡೀತಿದೆ. ಉತ್ತರಾಧಿಕಾರಿ ಮಠದ ಹಣ, ಒಡವೆ ಕದ್ದುಕೊಂಡು ರಾತ್ರೊ ರಾತ್ರಿ ನಾಪತ್ತೆಯಾಗಿದ್ದಾರೆ. ಅವರ ಕುರಿತು ಈಗಾಗಲೇ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಮುಂದಾದಾಗ ರಾಜಕೀಯ ಒತ್ತಡದಿಂದ ಕೇಸು ದಾಖಲಾಗದಂತೆ ನೋಡಿಕೊಂಡಿದ್ದಾರೆ. ಹಿಗಾಗಿ, ಇದ್ರಲ್ಲಿ ಫೀಠಾಧಿಪತಿಗಳು ಉತ್ತರಾಧಿಕಾರಿಗಳ ನೇಮಕ ಮಾಡೋದನ್ನ ನಾವು ಒಪ್ಪುವುದಿಲ್ಲ. ಅಂತಾ ವಿರೋಧಿಸಿ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ತಹಶೀಲ್ದಾರ ಮೂಲಕ ಮನವಿ ಅರ್ಪಿಸಿದ್ದಾರೆ. ಇನ್ನು ಇದಕ್ಕೂ ಮೊದಲು ಪಟ್ಟಣದ ಬಸವಣ್ಣ ದೇವಸ್ಥಾನದಲ್ಲಿ ಸಭೆ ಸೇರಿದ್ದ ಭಕ್ತರು ಮುಂದಿನ ಹೋರಾಟದ ಬಗ್ಗೆ ಚರ್ಚಿಸಿದ್ರು.
ತಾಲೂಕಿನಲ್ಲಿ ಗುರುವಾರ 64 ಜನರಿಗೆ ಕೋವಿಡ್ ಸೋಂಕು..!
ಮುಂಡಗೋಡ : ತಾಲೂಕಿನಲ್ಲಿ ಗುರುವಾರ 64 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗೆ ಅತೀ ಹೆಚ್ಚು ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಮಳಗಿ ಪಂಚವಟಿಯ ಜವಾಹರ ನವೋದಯ ಶಾಲೆಯ 18 ವಿದ್ಯಾರ್ಥಿಗಳಿಗೆ ಮತ್ತೆ ಸೋಂಕು ದೃಢ ಪಟ್ಟಿದೆ. ಹೀಗಾಗಿ ಮತ್ತೆ ವಿದ್ಯಾರ್ಥಿಗಳಿಗೆ ಆತಂಕ ಶುರುವಾಗಿದೆ. ಅದ್ರಂತೆ, ತಾಲೂಕಿನ ಬಹುತೇಕ ಶಾಲಾ ಕಾಲೇಜುಗಳಲ್ಲೂ ಕೊರೊನಾ ಆತಂಕ ಶುರುವಾಗಿದೆ. ಬಡ್ಡಿಗೇರಿ ಸರಕಾರಿ ಶಾಲೆ, ಲೊಯೋಲಾ ಪಿ.ಯು. ಕಾಲೇಜು, ಕಾತೂರ ಸರಕಾರಿ ಶಾಲೆ, ಲೊಯೋಲಾ ಕೇಂದ್ರೀಯ ವಿದ್ಯಾಲಯ, ಮುರಾರ್ಜಿ ವಸತಿ ಶಾಲೆ ಪಾಳಾ ಉರ್ದು ಹೈಸ್ಕೂಲು ಸೇರಿ ಹಲವು ಶಾಲೆಗಳಲ್ಲಿ ಕೋವಿಡ್ ಸೋಂಕು ಅಟ್ಟಹಾಸ ಮೆರೆದಿದೆ.