ಪಬ್ಲಿಕ್ ಫಸ್ಟ್ ನ್ಯೂಸ್ ************************************ ನಮ್ಮ ಯೂಟ್ಯೂಬ್ ಚಾನಲ್ Subscribe ಆಗಿ, Like ಮಾಡಿ, Share ಮಾಡಿ.. ಬೆಂಬಲಿಸಿ.. ಇಂದಿನ ಪ್ರಮುಖ ಸುದ್ದಿಗಳನ್ನು ನೋಡಲು ಈ ಕೆಳಗಿನ ಲಿಂಕ್ ಓಪನ್ ಮಾಡಿ👇 https://youtu.be/b-rV2wH9Cwc
Top Stories
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಶಿಗ್ಗಾವಿ ವಿಧಾನಸಭಾ ಕ್ಷೇತ್ರ: ಕೊನೆಯದಿನ 20 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ” ಈವರೆಗೆ 26 ಅಭ್ಯರ್ಥಿಗಳಿಂದ 46 ನಾಮಪತ್ರ..!
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?
ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!
ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!
ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!
ಹಾವೇರಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ..!
ಮುಂಡಗೋಡಿನಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ..!
ಮುಂಡಗೋಡ: ಪಟ್ಟಣದಲ್ಲಿ ಇಂದು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಕೈಗೊಂಡಿದ್ರು. ಪ್ರತಿಭಟನೆಯ ವಿಡಿಯೊ ಸುದ್ದಿ ನೋಡಲು ಇಲ್ಲಿ ಕ್ಲಿಕ್ ಮಾಡಿ.https://youtu.be/_9sHGn2Dwnk ಇಲ್ಲಿನ ಪ್ರವಾಸಿ ಮಂದಿರದಿಂದ ಪ್ರಾರಂಭವಾಗಿದ್ದ ಪ್ರತಿಭಟನಾ ಮೆರವಣಿಗೆ, ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಬಂದು, ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದ್ರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ರು. ನಂತರ ತಹಶೀಲ್ದಾರ್ ಕಾರ್ಯಾಲಯಕ್ಕೆ ತೆರಳಿ ಮನವಿ ಅರ್ಪಿಸಿದ್ರು. ಇನ್ನು ಪ್ರತಿಭಟನಾ ನಿರತರು ಶಿವಾಜಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದ್ದ ಕಾರಣಕ್ಕೆ ಕೆಲಹೊತ್ತು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ವಾಹನಗಳು ಸಂಚರಿಸಲಾಗದೇ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ನಂದಿಕಟ್ಟಾದ ವ್ಯಕ್ತಿ ಸಾವು..!
ಮುಂಡಗೋಡ: ತಾಲೂಕಿನ ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ನಿಯಂತ್ರಣ ತಪ್ಪಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಶಿರಸಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ. ಈ ಸುದ್ದಿಯ ವಿಡಿಯೊ ನೋಡಲು ಇಲ್ಲಿ ಕ್ಲಿಕ್ ಮಾಡಿ..https://youtu.be/TklQgUwYU58 ನಂದಿಕಟ್ಟಾ ಗ್ರಾಮದ ಅಮ್ಜದ್ ಖಾನ್ ಕಲಘಟಗಿ ಎಂಬುವವನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ಬೆಳಿಗ್ಗೆ ನಂದಿಕಟ್ಟಾ ಗ್ರಾಮದಿಂದ ಶಿರಸಿ ಕಡೆಗೆ ತೆರಳುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಶಿರಸಿ ಆಸ್ಪತ್ರೆಗೆ ರವಾನಿಸುವ ವೇಳೆ ಮಾರ್ಗಮದ್ಯೆಯೇ ಮೃತಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದ್ದು, ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪಬ್ಲಿಕ್ ಫಸ್ಟ್ ನ್ಯೂಸ್ ಮುಂಡಗೋಡಿನ ಇಂದಿನ ಪ್ರಮುಖ ಸುದ್ದಿಗಳು
ಪಬ್ಲಿಕ್ ಫಸ್ಟ್ ನ್ಯೂಸ್ ಇಂದಿನ ಪ್ರಮುಖ ಸುದ್ದಿಗಳನ್ನು ನೋಡಲು ಈ ಕೆಳಗಿನ ಲಿಂಕ್ ಓಪನ್ ಮಾಡಿ ************************************ ನಮ್ಮ ಯೂಟ್ಯೂಬ್ ಚಾನಲ್ Subscribe ಆಗಿ, Like ಮಾಡಿ, Share ಮಾಡಿ.. ಬೆಂಬಲಿಸಿ.. ಈ ಲಿಂಕ್ ಕ್ಲಿಕ್ ಮಾಡಿ.. ಇಂದಿನ ಸುದ್ದಿ ನೋಡಿ.. https://youtu.be/C5ay3WGDUZk
ಮುಂಡಗೋಡಿನಲ್ಲಿ “ಅಪ್ಪು” ಅಭಿಮಾನದ ಮೆರವಣಿಗೆ..!
ಮುಂಡಗೋಡ: ಪಟ್ಟಣದಲ್ಲಿ ಇಂದು ದಿ.ನಟ ಪುನಿತ್ ರಾಜಕುಮಾರ್ ಹುಟ್ಟುಹಬ್ಬದ ಸಂಭ್ರಮ ಜೋರಾಗಿತ್ತು. ಇಲ್ಲಿನ ಹಲವು ಸಂಘಟನೆ ಕಾರ್ಯಕರ್ತರು ಅಭಿಮಾನಿಗಳು ಪುನಿತ್ ಹುಟ್ಟುಹಬ್ಬದ ನಿಮಿತ್ತ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಅದ್ರಂತೆ ಸಂಜೆಯಿಂದ ಇಲ್ಲಿನ ಮಾರಿಕಾಂಬಾ ದೇವಾಲಯದ ಆವರಣದಿಂದ ಪುನಿತ್ ಭಾವಚಿತ್ರದ ಭವ್ಯ ಮೆರವಣಿಗೆ ನಡೆಸಲಾಗಿದೆ. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಮೆರವಣಿಗೆಯಲ್ಲಿ ಪುನಿತ್ ರಾಜಕುಮಾರ್ ಅಭಿಮಾನಿಗಳು ಪುನಿತ್ ಪರವಾಗಿ ಘೋಷಣೆ ಕೂಗಿದ್ರು https://youtu.be/G7KlEBOg4d8
ಪಬ್ಲಿಕ್ ಫಸ್ಟ್ ನ್ಯೂಸ್ ಇಂದಿನ ಪ್ರಮುಖ ಸುದ್ದಿಗಳು
ಪಬ್ಲಿಕ್ ಫಸ್ಟ್ ನ್ಯೂಸ್ ಇಂದಿನ ಪ್ರಮುಖ ಸುದ್ದಿಗಳನ್ನು ನೋಡಲು ಈ ಕೆಳಗಿನ ಲಿಂಕ್ ಓಪನ್ ಮಾಡಿ ************************************ ನಮ್ಮ ಯೂಟ್ಯೂಬ್ ಚಾನಲ್ Subscribe ಆಗಿ, Like ಮಾಡಿ, Share ಮಾಡಿ.. ಬೆಂಬಲಿಸಿ..
ಮುಂಡಗೋಡಿನಲ್ಲಿ “ಅಪ್ಪು” ಜನ್ಮದಿನದ ಸಂಭ್ರಮಕ್ಕೆ ನೇತ್ರದಾನದ ಕೊಡುಗೆ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಇಂದು ದಿ. ನಟ ಪುನಿತ್ ರಾಜಕುಮಾರ್ ಹುಟ್ಟು ಹಬ್ಬದ ಅಂಗವಾಗಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ, ರೇಣುಕಾ ಮೆಮೊರೆಬಲ್ ಟ್ರಸ್ಟ್, ಹಾಗೂ ಆಟೋ ಚಾಲಕರ ಸಂಘ ಒಕ್ಕೂಟ ಹಾಗೂ ಪುನೀತ್ ರಾಜಕುಮಾರ್ ಅಭಿಮಾನಿ ಬಳಗ ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ ನೇತ್ರದಾನ ಶಿಬಿರ ನಡೆಯುತ್ತಿದೆ. ಪುನಿತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಅಯ್ಯಪ್ಪ ಬಜಂತ್ರಿ, ಪಣಿರಾಜ್ ಹದಳಗಿ, ಡಾ. ಎಚ್.ಎಫ್. ಇಂಗಳೆ, ಗುಡ್ಡಪ್ಪ ಕಾತೂರ್, ಎನ್.ಎಂ.ನಂದಿಕಟ್ಟಿ, ಕೆಂಜೋಡಿ ಗಲಬಿ, ಮಂಜುನಾಥ್ ನಡಿಗೇರ್, ಮಂಜುನಾಥ್ ಗಣೇಶಪುರ, ಗುಡ್ಡಪ್ಪ ಸುಣಗಾರ, ಸುನಿಲ್ ಲಮಾಣಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಬಳಿ ಸ್ಕೂಟಿ ಸ್ಕಿಡ್ ಆಗಿ ಬಿದ್ದ ಯುವಕನಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಕ್ಯಾಂಪ್ ನಂಬರ್ 6 ರ ಕ್ರಾಸ್ ಬಳಿ ಬೈಕ್ ಅಪಘಾತವಾಗಿದೆ. ಸ್ಕೂಟಿ ಮೇಲಿಂದ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಇಂದೂರು ಗ್ರಾಮದ ರಾಹುಲ್ ಎಂಬುವವನೇ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆ ಸೇರಿದ್ದಾನೆ. ಸ್ಕೂಟಿಯಿಂದ ಬರುವಾಗ ಏಕಾಏಕಿ ಸ್ಕೂಟಿ ಸ್ಕಿಡ್ ಆಗಿ ಬಿದ್ದು ಘಟನೆ ನಡೆದಿದೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮುಂಡಗೋಡ ತಹಶೀಲ್ದಾರ್ ಬಂಧನವಾಗ್ತಾರಾ..? ಅಷ್ಟಕ್ಕೂ ಪೊಲೀಸ್ರು ತಹಶೀಲ್ದಾರ್ ಮನೆ ಮುಂದೆ ಠಿಕಾಣಿ ಹೂಡಿದ್ಯಾಕೆ..?
ಮುಂಡಗೋಡಿನ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಸಂಕಷ್ಟಕ್ಕೆ ಸಿಲುಕಿದ್ರಾ..? ನಕಲಿ ಜಾತಿ ಪ್ರಮಾಣ ಪತ್ರ ನೀಡಿ ತಹಸೀಲ್ದಾರ್ ಪದವಿ ಗಿಟ್ಟಿಸಿಕೊಂಡಿರೋ ಆರೋಪಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಬಂಧನಕ್ಕೆ..? ಕಲಬುರ್ಗಿಯಿಂದ ಪೊಲೀಸ್ ಅಧಿಕಾರಿಗಳು ಮದ್ಯರಾತ್ರಿಯೇ ಮುಂಡಗೋಡಿಗೆ ಬಂದಿಳಿದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ, ಪೊಲೀಸ್ ಅಧಿಕಾರಿಗಳು ಬಂದು ಬಾಗಿಲು ಬಡಿದ್ರೂ ತಹಶೀಲ್ದಾರ್ ಸಾಹೇಬ್ರು ಮಾತ್ರ ಬಾಗಿಲು ತೆರೆಯುತ್ತಿಲ್ಲವಂತೆ. ಹೀಗಾಗಿ, ಪೊಲೀಸ್ ಅಧಿಕಾರಿಗಳು ಬೆಳಗಿನ ಮೂರು ಗಂಟೆಯಿಂದ ತಹಶೀಲ್ದಾರ್ ಶ್ರೀಧರ್ ಮುಂದಲಮನಿಯವರ ಸರ್ಕಾರಿ ನಿವಾಸದ ಎದುರು ಬೀಡು ಬಿಟ್ಟಿದ್ದಾರೆ. ಏನದು ಕೇಸ್..? ಅಂದಹಾಗೆ, ಕಳೆದ ಎರಡೂವರೇ ವರ್ಷದಿಂದ ಮುಂಡಗೋಡಿನ ತಹಶೀಲ್ದಾರ್ ಕಚೇರಿ ಖುರ್ಚಿಗೆ ಬಂದಿಳಿದಿರೋ ಶ್ರೀಧರ್ ಮುಂದಲಮನಿ, 2014 ಕೆಎಎಸ್ ಬ್ಯಾಚ್ ನ ಅಧಿಕಾರಿ. ಅದ್ರೆ, ಹಾಗೆ ಆಯ್ಕೆಯಾಗುವಾಗ ಎಸ್ಟಿ ಪ್ರಮಾಣ ಪತ್ರ ನೀಡಿ ಆಯ್ಕೆಯಾಗಿದ್ದಾರೆ, ಆದ್ರೆ ಅವತ್ತು ಅವ್ರಯ ನೀಡಿರೋ ಪ್ರಮಾಣ ಪತ್ರ, ನಕಲಿ ಪ್ರಮಾಣ ಪತ್ರ ಅನ್ನೊ ಆರೋಪ ಕೇಳಿ ಬಂದಿದೆ. ಈ ಕುರಿತು ಈಗಾಗಲೇ, ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪೊಲೀಸ್...
ನಂದಿಕಟ್ಟಾ ಗ್ರಾಪಂ ಗೆ ಕೆಂದಲಗೇರಿ ಗ್ರಾಮಸ್ಥರ ಮುತ್ತಿಗೆ, ಯಾಕೆ ಗೊತ್ತಾ..?
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿಗೆ ಇಂದು ಕೆಂದಲಗೇರಿ ಗ್ರಾಮಸ್ಥರು ಮುತ್ತಿಗೆ ಹಾಕಿದ್ರು. ಕೆಂದಲೆಗೇರಿ ಗ್ರಾಮದ ಅಂಗನವಾಡಿ ಕಟ್ಟಡದ ಜಾಗದಲ್ಲಿ ಓರ್ವರು ಮನೆ ಕಟ್ಟಿಕೊಂಡು ಅಂಗನವಾಡಿ ಜಾಗವನ್ನು ಅಕ್ರಮವಾಗಿ ಅತಿಕ್ರಮಿಸಿಕೊಂಡಿದ್ದಾರೆ. ಹೀಗಾಗಿ, ಅವ್ರನ್ನು ಆ ಜಾಗದಿಂದ ತೆರವುಗೊಳಿಸಲು ಗ್ರಾಮಸ್ಥರು ಆಗ್ರಹಿಸಿದ್ರು. ಘಟನೆ ಏನು..? ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಂದಲಗೇರಿ ಗ್ರಾಮದಲ್ಲಿ ಸರ್ಕಾರಿ ಅಂಗನವಾಡಿ ಇದೆ. ಅಲ್ಲಿ ನಿತ್ಯವೂ ನೂರಾರು ಪುಟ್ಟ ಪುಟ್ಟ ಮಕ್ಕಳು ಬರುತ್ತಾರೆ. ಅದ್ರೆ, ಅಂಗನವಾಡಿ ಪಕ್ಕದಲ್ಲೇ ವಾಸವಾಗಿರುವ ನೀಲವ್ವ ಸುಣಗಾರ ಎಂಬುವ ಮಹಿಳೆ ತನ್ನ ಮನೆಯ ಜಾಗ ಹೊರತು ಪಡಿಸಿ ಅಂಗನವಾಡಿ ಜಾಗೆಯನ್ನೂ ಅತಿಕ್ರಮಿಸಿ ಮನೆ ನಿರ್ಮಿಸಿಕೊಂಡಿದ್ದು ನಿತ್ಯವೂ ಕಿರಿಕಿರಿ ಮಾಡುತ್ತಿದ್ದಾರೆ ಅಂತಾ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಮಕ್ಕಳಿಗೂ ಕಿರಿಕಿರಿ..! ಇನ್ನು, ನಿತ್ಯವೂ ಅಂಗನವಾಡಿಯ ಪುಟ್ಟ ಮಕ್ಕಳಿಗೆ ಅಂಗನವಾಡಿ ಅಂಗಳದಲ್ಲಿ ಆಟವಾಡಲೂ ಬಿಡದೇ ನಿತ್ಯವೂ ಕಿರಿಕಿರಿ ಮಾಡುತ್ತಿರೋದು ಗ್ರಾಮಸ್ಥರಿಗೆ ತಲೆನೋವಾಗಿದ್ದು, ಸಾಕಷ್ಟು ಬಾರಿ ಆ ಮಹಿಳೆಗೆ ತಿಳಿಸಿ ಹೇಳಿದ್ರೂ ಯಾರಿಗೂ ಆ ಮಹಿಳೆ ಕ್ಯಾರೇ ಅನ್ನುತ್ತಿಲ್ಲ. ಅಲ್ಲದೇ ನಿನ್ನೆಯಷ್ಟೇ,...