ಮುಂಡಗೋಡ: ತಾಲೂಕಿನಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಯ ಮತದಾನ ಶಾಂತಿಯುತವಾಗಿ ಸಂಪನ್ನಗೊಂಡಿದೆ. ಶೇ. 99.53 ರಷ್ಟು ಮತದಾನವಾಗಿದೆ. ಗುಂಜಾವತಿ ಗ್ರಾಮ ಪಂಚಾಯತಿಯ ಓರ್ವ ಮಹಿಳಾ ಸದಸ್ಯೆ ಮತದಾನ ಮಾಡಿಲ್ಲ. ಈ ಕಾರಣದಿಂದ ಶೇ.100 ರಷ್ಟು ಮತದಾನವಾಗಿಲ್ಲ. ಬೆಳಗಿನಿಂದಲೂ ತಾಲೂಕಿನ ಎಲ್ಲಾ ಮತಗಟ್ಟೆಗಳಲ್ಲೂ ಮತದಾರರು ಸಂಯಮದಿಂದಲೇ ಬಂದು ಮತದಾನ ಮಾಡಿದ್ರು. ಬಹುತೇಕ ಮದ್ಯಾಹ್ನದಷ್ಟೊತ್ತಿಗೆ ಮತದಾನ ಸಂಪೂರ್ಣತೆಯ ಮಟ್ಟ ತಲುಪಿತ್ತು. ಕೆಲವು ಕಡೆ ಮಾತ್ರ ಒಂದಿಷ್ಟು ತಡವಾಗಿ ಬಂದು ಮತದಾರರು ಮತದಾನ ಮಾಡಿದ್ರು. ತಾಲೂಕಿನಲ್ಲಿ ಬಹುತೇಕ ಗ್ರಾಮ ಪಂಚಾಯತಿ ಸದಸ್ಯರುಗಳು ಆಯಾ ಗ್ರಾಮಗಳಲ್ಲಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಮತದಾನಕ್ಕೆ ತೆರಳಿದ್ದು ವಿಶೇಷವಾಗಿತ್ತು. ಮತಪೆಟ್ಟಿಗೆ ಕಾರವಾರಕ್ಕೆ..! ಇನ್ನು ಸಂಜೆಯ ವೇಳೆಗೆ ಸಂಪೂರ್ಣಗೊಂಡ ಮತದಾನ ಪ್ರಕ್ರಿಯೆಯನ್ನು ಅಧಿಕಾರಿಗಳು ಯಶಸ್ವಿಯಾಗಿ ಮುಗಿಸಿದ್ರು. ನಂತರ ಮತಪೆಟ್ಟಿಗೆಗಳನ್ನು ಪೊಲೀಸ್ ಭದ್ರತೆಯೊಂದಿಗೆ ವಾಹನದಲ್ಲಿ ಕಾರವಾರಕ್ಕೆ ರವಾನಿಸಲಾಗಿದೆ. ಈ ವೇಳೆ ಮುಂಡಗೋಡ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ನೇತೃತ್ವದಲ್ಲಿ ಮತಪೆಟ್ಟಿಗೆಗಳನ್ನು ವಾಹನದಲ್ಲಿ ಭರ್ತಿಮಾಡಿ ಕಾರವಾರಕ್ಕೆ ರವಾನಿಸಲಾಗಿದೆ.
Top Stories
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಮುಂಡಗೋಡ ತಾಲೂಕಿನಲ್ಲಿ ಶೇ. 99.53 ರಷ್ಟು ಶಾಂತಿಯುತ ಮತದಾನ..! ಭದ್ರತೆಯಲ್ಲಿ ಕಾರವಾರಕ್ಕೆ ಮತಪೆಟ್ಟಿಗೆ ರವಾನೆ..!!
ಮತ್ತೆ ಮಳೆಯ ಆತಂಕ, ಫಸಲು ಕಟಾವಿಗೆ ಯಂತ್ರಗಳ ಮೊರೆ ಹೋದ ರೈತ..!
ಮುಂಡಗೋಡ: ತಾಲೂಕಿನಲ್ಲಿ ಮತ್ತೆ ಮಳೆಯ ಆತಂಕ ಶುರುವಾಗಿದೆ ಹೀಗಾಗಿ, ಅನ್ನದಾತರು ಫಸಲುಗಳ ರಕ್ಷಣೆಗೆ ಮತ್ತೆ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ. ಮಳೆಯ ಆತಂಕದ ನಡುವೆ ಭತ್ತದ ಕೊಯ್ಲಿಗೆ ಮುಂದಾಗಿದ್ದಾನೆ ರೈತ.. ಇನ್ನು, ಈ ಸಾರಿ ಮಳೆಯಲ್ಲಿ ಸಿಲುಕಿ ಸಂಪೂರ್ಣ ಹಾಳಾದ ಸ್ಥಿತಿಯಲ್ಲಿರೋ ಭತ್ತದ ಫಸಲು ಕಟಾವು ಮಾಡಲು ರೈತ ಭತ್ತ ಕಟಾವು ಮಾಡುವ ಯಂತ್ರಗಳ ಮೊರೆ ಹೋಗಿದ್ದಾನೆ.. ಹೀಗಾಗಿ ತಾಲೂಕಿನೆಲ್ಲೆಡೆ ಈಗ ಭತ್ತ ಕಟಾವು ಮಾಡೋ ಯಂತ್ರಗಳ ಸದ್ದೇ ಕೇಳುತ್ತಿದೆ. ಸಮಯವೂ ಉಳಿಯತ್ತೆ ಕೆಲಸವೂ ಕಡಿಮೆಯಾಗತ್ತೆ ಅನ್ನೋ ಕಾರಣಕ್ಕೆ ರೈತರು ತಂತ್ರಗಳ ಮೊರೆ ಹೋಗಿದ್ದಾರೆ..
ನಂದಿಕಟ್ಟಾದಲ್ಲೂ ವಿಧಾನ ಪರಿಷತ್ ಚುನಾವಣೆಗೆ ಬಿರುಸಿನ ಮತದಾನ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲೂ ವಿಧಾನ ಪರಿಷತ್ ಚುನಾವಣೆ ಅಂಗವಾಗಿ ಇಲ್ಲಿನ ಗ್ರಾಮ ಪಂಚಾಯತಿ ಸದಸ್ಯರು ಮತದಾನ ಮಾಡಿದ್ರು. ಮತದಾನಕ್ಕೂ ಮೊದಲು ಸದಸ್ಯರೇಲ್ಲರೂ ಒಂದೆಡೆ ಸೇರಿ ಸಭೆ ಮಾಡಿದ್ರು. ಮತದಾನ ಪ್ರಕ್ರಿಯೆಯ ಕುರಿತು ಚರ್ಚಿಸಿದ್ರು. ಮತದಾನ ಮಾಡುವ ವಿಧಾನಗಳ ಬಗ್ಗೆ ತಿಳುವಳಿಕೆ ಹಂಚಿಕೊಂಡ್ರು.. ಆನಂತರದಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡಿದ್ರು. ಅಂದಹಾಗೆ, ಮತದಾನ ಕೇಂದ್ರದಲ್ಲಿ ಸುಗಮ ಮತದಾನಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಮಾಡಲಾಗಿದ್ದು ಅಧಿಕಾರಿಗಳು ಬಿಗಿಯಾದ ಕ್ರಮಗಳನ್ನು ಕೈಗೊಂಡಿದ್ದಾರೆ.
ಹುನಗುಂದದಲ್ಲಿ ವಿ.ಪರಿಷತ್ ಚುನಾವಣೆ ಭರ್ಜರಿ ಮತದಾನ..!
ಮುಂಡಗೋಡ: ತಾಲೂಕಿನಲ್ಲಿ ವಿಧಾನ ಪರಿಷತ್ ಚುನಾವಣೆ ಮತದಾನ ಪ್ರಕ್ರಿಯೆ ಬೆಳಗಿನಿಂದಲೂ ಭರ್ಜರಿಯಾಗೇ ನಡೆದಿದೆ. ತಾಲೂಕಿನ ಹುನಗುಂದದಲ್ಲಿ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯರು ಮತದಾನ ಮಾಡಿದ್ರು. ಮತದಾನಕ್ಕೂ ಮೊದಲು ಹುನಗುಂದದ ಶ್ರೀ ವಿಠಲ ರುಕ್ಮಾಯಿ ಹರಿ ಮಂದಿರದಲ್ಲಿ ಪೂಜೆ ಸಲ್ಲಿಸಿದ ಸದಸ್ಯರು, ಅಲ್ಲೇ ಸಭೆ ನಡೆಸಿದ್ರು. ಆ ನಂತರದಲ್ಲಿ ಇಲ್ಲಿನ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದ್ರು. ಅದ್ರಂತೆ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯರೂ ಕೂಡ ಇಲ್ಲಿನ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಮತದಾನ ಮಾಡಿದ್ರು.
ಫಿನಿಕ್ಸ್ ನಂತೆ ಪುಟಿದೇಳುತ್ತಿದೆ ಮುಂಡಗೋಡ ಕಾಂಗ್ರೆಸ್..! ಅಷ್ಟಕ್ಕೂ ಬಿಜೆಪಿ ಒಳಗುದಿಗೆ ಹೊರಬಿದ್ದ ಹುದ್ದರಿಗಳೆಷ್ಟು..?
ಮುಂಡಗೋಡ ತಾಲೂಕಿನಲ್ಲಿ ಕಾಂಗ್ರೆಸ್ ಬಲಿಷ್ಟವಾಗ್ತಿದೆಯಾ..? ಹೌದು ಅಂತಿದೆ ಇತ್ತಿಚಿನ ಬೆಳವಣಿಗೆಗಳು. ಪ್ರಶಾಂತ್ ದೇಶಪಾಂಡೆ ಇಡಿ ಇಡಿಯಾಗಿ ಫಿಲ್ಡಿಗಿಳಿದ ಬಳಿಕ ಇಡೀ ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಅದೇಲ್ಲಿಂದಲೋ ಶಕ್ತಿ ತುಂಬಿಕೊಂಡಂಗಿದೆ. ಹೀಗಾಗಿನೇ ಕಾಂಗ್ರೆಸ್ ಗೆ ಹಿಂಡುಗಟ್ಟಲೇ ಬಿಜೆಪಿಯ ಕಾರ್ಯಕರ್ತರು ಸೇರಿಕೊಳ್ತಿದಾರೆ. ಫಿನಿಕ್ಸ್ ನಂತೆ..! ಅಷ್ಟಕ್ಕೂ ಬಿಜೆಪಿ ಅನ್ನೋ ಆಡಳಿತಾರೂಢ ಪಕ್ಷದ ಅಂಗಳದಿಂದ ಕಾಂಗ್ರೆಸ್ ಪಡಸಾಲೆಗೆ ಯಾಕೆ ಈ ರೀತಿಯ ಜಿಗಿತಗಳಾಗ್ತಿವೆ..? ಇದನ್ನೇಲ್ಲ ಬಹುಶಃ ಹೆಬ್ಬಾರ್ ಪಡೆಗೆ ಯೋಚಿಸಲು ಪುರುಸೋತ್ತೇ ಇಲ್ಲವೆನೊ. ಅಸಲು, ತಾಲೂಕಿನಲ್ಲಿ ಕಾಂಗ್ರೆಸ್ ಖತಂ ಆಗಿಯೇ ಹೋಯ್ತು ಅಂತಾ ಎಲ್ಲೆಂದರಲ್ಲಿ ಎದೆಯುಬ್ಬಿಸಿ ಹೇಳಕೊಂಡು ತಿರುಗಾಡ್ತಿದ್ದ ಮಂದಿಗೇಲ್ಲ ಈಗ ಅದೇ ಕಾಂಗ್ರೆಸ್ ಹೊಚ್ಚಹೊಸ ಖದರ್ರಿನಲ್ಲಿ ಫಿನಿಕ್ಸ್ ನಂತೆ ಪುಟಿದೇಳುತ್ತಿದೆ ಅಂತಾ ಅರ್ಥವೂ ಆಗಿಲ್ಲವಾ..? “ಮಾನೆ” ಪವಾಡ..! ಅಂದಹಾಗೆ, ಎರಡು ದಿನದ ಹಿಂದೆ ತಾಲೂಕಿನಲ್ಲಿ ಹಾನಗಲ್ ನೂತನ ಶಾಸಕ...
ಕೊರೋನಾ ಹೆಚ್ಚಾದ್ರೆ ಶಾಲೆಗಳು ಬಂದ್: ಶಿಕ್ಷಣ ಸಚಿವ ಬಿ.ಸಿ.ನಾಗೇಶ್..!
ಬೆಂಗಳೂರು: ರಾಜ್ಯದಲ್ಲಿ ಒಮೈಕ್ರಾನ್ ವೈರಸ್ ಆತಂಕ ಹುಟ್ಟಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಒಮೈಕ್ರಾನ್ ವೈರಸ್ ಕರ್ನಾಟಕದಲ್ಲೇ ಪತ್ತೆಯಾಗಿದೆ. ಹೀಗಾಗಿ, ಒಮೈಕ್ರಾನ್ ರಾಜ್ಯಕ್ಕೆ ಕಾಲಿಟ್ಟ ನಂತರ ಪೋಷಕರು ಕೂಡ ಮಕ್ಕಳನ್ನು ಶಾಲೆಗೆ ಒಲ್ಲದ ಮನಸ್ಸಿನಿಂದಲೇ ಕಳಿಸುತ್ತಿದ್ದಾರೆ. ಕೊರೋನಾ ಹೆಚ್ಚಾದ್ರೆ ಶಾಲೆ ಬಂದ್..! ಇದೇ ಸಂದರ್ಭದಲ್ಲಿ ಕೊರೋನಾ ಹೆಚ್ಚಾದ್ರೆ ಶಾಲೆಗಳನ್ನು ಬಂದ್ ಮಾಡುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ರಾಜ್ಯದಲ್ಲಿನ ಕೊರೋನಾ ಸೋಂಕಿನ ತೀವ್ರತೆ ಬಗ್ಗೆ ತಜ್ಞರಿಂದ ಪ್ರತಿ ದಿನ ವರದಿಯನ್ನು ಪಡೆಯುತ್ತಿದ್ದೇವೆ. ಕೋವಿಡ್ ತೀವ್ರತೆಯನ್ನು ಆಧರಿಸಿ, ಶಾಲಾ ಕಾಲೇಜು ಮುಚ್ಚುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಸದ್ಯಕ್ಕೆ ತಜ್ಞರು ನೀಡುತ್ತಿರುವ ವರದಿಯ ಪ್ರಕಾರ ಯಾರೂ ಆತಂಕ ಪಡುವಂತೆ ಕೊರೋನಾ ತೀವ್ರತೆ ಇಲ್ಲ. ಕೊರೋನಾ ತೀವ್ರತೆ ಆಧರಿಸಿ, ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಮುಖ್ಯಮಂತ್ರಿಯವರು, ತಾಂತ್ರಿಕ ಸಲಹಾ ಸಮಿತಿ...
ಚಿಗಳ್ಳಿಯಲ್ಲಿ ತೆಪ್ಪದ ರಥೋತ್ಸವ ಅಜ್ಜನ ರಥ ನೋಡಿ ಕಣ್ತುಂಬಿಕೊಂಡ ಭಕ್ತರು..!
ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ಗುರುವೀರಯೋಗೇಂದ್ರ ಸ್ವಾಮೀಜಿಯ ತೆಪ್ಪದ ರಥೋತ್ಸವ ಶೃದ್ಧಾಭಕ್ತಿಯಿಂದ ಜರುಗಿತು. ಇಲ್ಲಿನ ಕಲ್ಯಾಣಿಯಲ್ಲಿ ನಡೆದ ತೆಪ್ಪದ ರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಹೊಂಡದ ದಡದಲ್ಲಿ ನಿಂತಿದ್ದ ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಎಸೆದರು ಭಕ್ತಿ ತೋರಿದ್ರು. ಸಂಜೆಯಾಗುತ್ತಿದ್ದಂತೆ ರಥೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ತೆಪ್ಪದ ರಥವು ಕೆರೆಯಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದಂತೆ, ಭಕ್ತರ ಜಯಘೋಷಗಳು ಮೊಳಗಿದವು.
ಟಿಬೇಟಿಯನ್ ಕಾಲೋನಿಗಳಿಗೆ ಕೆಲಸಕ್ಕೆ ಹೋಗುವ ಕಾರ್ಮಿಕರಿಗೆ ಕೋವಿಡ್ ಕಟ್ಟೇಚ್ಚರ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಗಳಲ್ಲಿ ಕೆಲಸಕ್ಕೆ ಹೋಗುವ ಸುತ್ತ ಮುತ್ತಲ ಹಳ್ಳಿಗಳ ಕೂಲಿ ಕಾರ್ಮಿಕರಿಗೆ ಆತಂಕ ಶುರುವಾಗಿದೆ. ರವಿವಾರ ತಾಲೂಕಿನ ಹುನಗುಂದ ಗ್ರಾಮದ ಮಹಿಳೆಯೋರ್ವಳಿಗೆ ಕೊರೋನಾ ಪಾಸಿಟಿವ್ ದೃಢ ಪಟ್ಟಿದ್ದು ಮತ್ತಷ್ಟು ಆತಂಕಕ್ಕೇ ಕಾರಣವಾಗಿದೆ. ನಿತ್ಯವೂ ಇಲ್ಲಿನ ಟಿಬೇಟಿಯನ್ ಕಾಲೋನಿಗಳಿಗೆ ಕೆಲಸಕ್ಕೆ ತೆರಳುವ ನೂರಾರು ಕಾರ್ಮಿಕರು ತಕ್ಷಣವೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಆಯಾ ಗ್ರಾಮಗಳ ಗ್ರಾಮ ಪಂಚಾಯತಿಗಳು ಸೂಚನೆ ನೀಡಿವೆ.
ಹುನಗುಂದಕ್ಕೆ ಮತ್ತೆ ವಕ್ಕರಿಸಿದ ಕೊರೋನಾ, ಓರ್ವ ಮಹಿಳೆಗೆ ಸೋಂಕು ದೃಢ..!
ಮುಂಡಗೋಡ: ತಾಲೂಕಿನ ಹುನಗುಂದದಲ್ಲಿ ಮತ್ತೆ ಕೊರೊನಾ ಎಂಟ್ರಿ ಕೊಟ್ಟಿದೆ. ಟಿಬೇಟಿಯನ್ ಕಾಲೋನಿಗೆ ಮನೆಕೆಲಸಕ್ಕೆ ಹೋಗುತ್ತಿದ್ದ ಹುನಗುಂದದ ಮಹಿಳೆಯೊಬ್ಬಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಅಂತಾ ಗ್ರಾಮ ಪಂಚಾಯತಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇಲ್ಲಿನ ಮಹಿಳೆ ಪ್ರತಿನಿತ್ಯ ಟಿಬೇಟಿಯನ್ ಕಾಲೋನಿಗೆ ಮನೆಕೆಲಸಕ್ಕೆ ಅಂತಾ ಅಡುಗೆ ಮಾಡಲು ಹೋಗುತ್ತಿದ್ದಳು ಎನ್ನಲಾಗಿದೆ. ಹೀಗಾಗಿ, ಟಿಬೇಟಿಯನ್ ಕಾಲೋನಿಯಲ್ಲಿ ಕೋವಿಡ್ ಟೆಸ್ಟ್ ಮಾಡಿದ್ದರು. ನಂತರ ಆ ವರದಿಯಲ್ಲಿ ಮಹಿಳೆಗೆ ಕೊರೋನಾ ದೃಢ ಪಟ್ಟಿದೆ. ಹೀಗಾಗಿ, ಗ್ರಾಮ ಪಂಚಾಯತಿ ಸದಸ್ಯರುಗಳು, ಸಿಬ್ಬಂದಿಗಳು ಸೋಂಕಿತೆಯ ಮನೆಗೆ ಭೇಟಿ ನೀಡಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಕಾರ್ತಿಕೋತ್ಸವ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ಗ್ರಾಮದೇವಿ ದೇವಸ್ಥಾನದಲ್ಲಿ ಕಾರ್ತಿಕ ಅಮವಾಸ್ಯೆಯ ನಿಮಿತ್ತ ಕಾರ್ತಿಕೋತ್ಸವ ಆಚರಿಸಲಾಯಿತು. ವಿವಿದ ಚಿತ್ರಗಳ ರೂಪದಲ್ಲಿ ದೀಪ ಬೆಳಗಿಸಿ ಭಕ್ತರು ಸಂಭ್ರಮಿಸಿದ್ರು. ದೇವಸ್ಥಾನದ ಅಂಗಳದಲ್ಲಿ ರಂಗೋಲಿ ಬಿಡಿಸಿ ಅದರ ಪ್ರಕಾರವೇ ದೀಪಗಳನ್ನು ಬೆಳಗಿಸಿದ್ರು. ಕಾರ್ತಿಕ ದೀಪ ಬೆಳಗಿಸೋ ಮೊದಲು ದೇವಿಗೆ ವಿಶೇಷ ಪೂಜೆ ಮಾಡಲಾಯಿತು.. ಇನ್ನು ಕಾರ್ತಿಕೋತ್ಸವದ ನಂತರ ಅನ್ನ ಸಂತರ್ಪಣೆ ನೆರವೇರಿಸಲಾಯಿತು.