ಮುಂಡಗೋಡ: ಪ್ರಜ್ವಲ್ ರೇವಣ್ಣನವರ ಪ್ರಕರಣವನ್ನು ಕಾಂಗ್ರೆಸ್ ರಾಜಕೀಯಕ್ಕೆ ಬಳಸಿಕೊಳ್ಳಲ್ಲ ಅಂತಾ ಮುಂಡಗೋಡಿನಲ್ಲಿ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ತಿಳಿಸಿದ್ರು. ಅವ್ರು, ಮುಂಡಗೋಡ ತಾಲೂಕು ಕ್ರೀಡಾಂಗಣದಲ್ಲಿ ನಾಳೆ ಶುಕ್ರವಾರ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದ ತಯಾರಿ ಕುರಿತು ವೀಕ್ಷಿಸಿ ಗುರುವಾರ ಸಂಜೆ ಮಾತನಾಡಿದ್ರು. ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ರು. ಈಗಾಗಲೇ ರಾಜ್ಯದ ಮುಖ್ಯಮಂತ್ರಿಗಳು ಎಸ್ ಐಟಿಯನ್ನು ರಚನೆ ಮಾಡಿದ್ದಾರೆ. ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದರು. ಇನ್ನು ಶುಕ್ರವಾರ ನಡೆಯಲಿರೋ ಕಾಂಗ್ರೆಸ್ ಸಮಾವೇಶದಲ್ಲಿ ಕೆನರಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ ಅವರ ಪರ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಪ್ರಚಾರ ನಡೆಸಲಿದ್ದಾರೆ. ಚುನಾವಣೆ ಉಸ್ತುವಾರಿ ಸಚಿವ ಕೆ. ಎ. ಜಾರ್ಜ್, ಹಾಗೂ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದರು. ನಾವೇ ಗೆಲ್ತಿವಿ..! ಈ ಸಮಾರಂಭದಲ್ಲಿ ಇಪ್ಪತೈದು ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ. ಲೋಕಸಭಾ ಕ್ಷೇತ್ರವನ್ನು ಈಗಾಗಲೇ ಓಡಾಡಿದ್ದೇನೆ. ಈ ಬಾರಿ ನಮ್ಮ ಅಭ್ಯರ್ಥಿ ಗೆಲವು ಸಾಧಿಸಲಿದ್ದಾರೆ....
Top Stories
ಮೀನುಗಾರರ ಸಂಕಷ್ಟ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ :ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!
ಹಾನಗಲ್ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ವಿಧಿವಶ..!
ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಅಂಶುಕುಮಾರ್ ಪ್ರಕಟಣೆ
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಶಿಗ್ಗಾವಿ ವಿಧಾನಸಭಾ ಕ್ಷೇತ್ರ: ಕೊನೆಯದಿನ 20 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ” ಈವರೆಗೆ 26 ಅಭ್ಯರ್ಥಿಗಳಿಂದ 46 ನಾಮಪತ್ರ..!
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?
ಪಕ್ಷ ಬಿಡುವವರು ರಾಜೀನಾಮೆ ನೀಡ್ಲಿ, ಚುನಾವಣೆ ಎದುರಿಸ್ಲಿ- ಬನವಾಸಿಯಲ್ಲಿ ಶಿವರಾಂ ಹೆಬ್ಬಾರ್ ವಿರುದ್ಧ ಕಾರ್ಕಳ ಶಾಸಕ ಸುನಿಲ್ ಕುಮಾರ್ ಗುಡುಗು
ಬನವಾಸಿ: ಪಕ್ಷ ಬದಲಾಯಿಸುವವರ ಬಗ್ಗೆ ಎಚ್ಚರವಹಿಸಬೇಕಿದೆ. ಪಕ್ಷದಲ್ಲಿ ಇರಲು ಇಷ್ಟವಿಲ್ಲವಾದರೆ ರಾಜೀನಾಮೆ ನೀಡಿ, ಧೈರ್ಯವಿದ್ದರೆ ಉಪ ಚುನಾವಣೆ ಎದುರಿಸಲಿ ಎಂದು ಶಾಸಕ ಶಿವರಾಮ ಹೆಬ್ಬಾರ್ ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಕಳ ಶಾಸಕ ವಿ.ಸುನೀಲಕುಮಾರ ಟಾಂಗ್ ನೀಡಿದ್ರು. ಬುಧವಾರ ಬನವಾಸಿಯಲ್ಲಿ ಮಾಧ್ಯಮದವರ ಜತೆ ಮಾತನಾಡಿ, ಬಿಜೆಪಿಯು ಕಾರ್ಯಕರ್ತರ ಆಧಾರ ಪಕ್ಷವಾಗಿದ್ದು, ಬಿಜೆಪಿಯಿಂದ ಎಲ್ಲ ಅವಕಾಶ ಸಿಕ್ಕಿದೆ. ಲಾಭ ಪಡೆದುಕೊಂಡಿರುವುದು ಬಿಜೆಪಿಯಿಂದ. ಯಾಕೆ ಅವರು ಪ್ರಚಾರಕ್ಕೆ ಬರುತ್ತಿಲ್ಲ ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು ಎಂದರು. ಈ ಚುನಾವಣೆ ಭಾರತ ಭವಿಷ್ಯ ಹಾಗೂ ಬದುಕಿನ ನಡುವಿನ ಚುನಾವಣೆಯಾಗಿದ್ದು, ನರೇಂದ್ರ ಮೋದಿ ಮೂರನೆಯ ಬಾರಿಗೆ ಪ್ರಧಾನಿಯಾಗಬೇಕಿರುವುದು ಅನಿವಾರ್ಯ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಅವರ ಬಲ ನೀಡಲು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಜತೆ ಬಿಜೆಪಿ ಬೆಂಬಲಿಸಬೇಕು ಎಂದು ಹೇಳಿದರು. ಈ ವೇಳೆ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ.ನಾಯ್ಕ, ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಸೇರಿದಂತೆ ಮತ್ತಿತರರು ಇದ್ದರು.
ಹುನಗುಂದ ಗ್ರಾಪಂ ಮಾಜಿ ಸದಸ್ಯ ಮೌಲಾಸಾಬ್ ಗೋರಿ ಬೈಕ್ ಅಪಘಾತದಲ್ಲಿ ಸಾವು..! ಹಲವರ ಕಂಬನಿ
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮೌಲಾಸಾಬ್ ಮಹ್ಮದಸಾಬ್ ಗೋರಿ (42) ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಆನವಟ್ಟಿ ಸಮೀಪ ಸಂಭವಿಸಿರೋ ಬೈಕ್ ಅಪಘಾತದಲ್ಲಿ ರವಿವಾರ ನಿಧನರಾಗಿದ್ದಾರೆ. ಹುನಗುಂದ ಗ್ರಾಮ ಪಂಚಾಯತಿಯ ಸದಸ್ಯರಾಗಿ ಆಯ್ಕೆಯಾಗಿದ್ದ ಮೌಲಾಸಾಬ್ ತಮ್ಮ ಅವಧಿಯಲ್ಲಿ ಜನಮನ್ನಣೆ ಗಳಿಸಿಕೊಂಡಿದ್ರು. ಹೀಗಾಗಿ, ಮೌಲಾಸಾಬರ ನಿಧನಕ್ಕೆ ಗ್ರಾಮಸ್ಥರು, ವಿವಿಧ ಸಮಾಜದ ಮುಖಂಡರು ಕಂಬನಿ ಮಿಡಿದಿದ್ದಾರೆ.
ಮುಸ್ಲಿಂ ವ್ಯಾಪಾರಸ್ಥರಿಂದ ಹುಬ್ಬಳ್ಳಿ ಬಂದ್: ಬಿಕೋ ಎನ್ನುತ್ತಿದೆ ಹುಬ್ಬಳ್ಳಿಯ ಮಾರ್ಕೆಟ್..!
ಹುಬ್ಬಳ್ಳಿ: ನೇಹಾ ಹತ್ಯೆ ಖಂಡಿಸಿ ವಾಣಿಜ್ಯನಗರಿ ಹುಬ್ಬಳ್ಳಿಯ ಬಂದ್ಗೆ ಕರೆ ನೀಡಿರುವ ಬೆನ್ನಲ್ಲೇ ಮುಸ್ಲಿಂ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದ್ದು, ಹುಬ್ಬಳ್ಳಿಯ ಶಾಹ ಬಜಾರ್ ಮತ್ತು ನೂರಾನಿ ಮಾರ್ಕೆಟ್ ವ್ಯಾಪಾರಸ್ಥರಿಂದ ಬಂದ್ಗೆ ಬೆಂಬಲ ನೀಡಲಾಗಿದೆ. ಅಂಗಡಿ- ಮುಗ್ಗಟ್ಟುಗಳನ್ನ ಬಂದ್ ಮಾಡಿ ನೇಹಾ ಹತ್ಯೆಯನ್ನು ಖಂಡಿಸಿದ ವ್ಯಾಪಾರಸ್ಥರು, ಬೆಳಿಗ್ಗೆ 8 ರಿಂದ ಮಧ್ಯಾಹ್ನ ಮೂರು ಗಂಟೆಯವರೆಗೆ ಅಂಗಡಿಗಳನ್ನು ಬಂದ್ ಮಾಡಿದ್ದಾರೆ. ಜಸ್ಟಿಸ್ ಟೂ ನೇಹಾ ಹಿರೇಮಠ ಎಂದು ತಮ್ಮ ಅಂಗಡಿಗಳಿಗೆ ಬೋರ್ಡ್ಗಳನ್ನ ಹಾಕಿ ಬಂದ್ಗೆ ಅಭೂತಪೂರ್ವ ಬೆಂಬಲ ನೀಡಿದ್ದಾರೆ. ಇನ್ನು ಹಂತಕ ಫಯಾಜ್ನಿಗೆ ಉಗ್ರವಾದ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಬಂದ್ಗೆ ಕರೆ ನೀಡಿದ್ದು, ಬಂದ್ ಹಿನ್ನೆಲೆಯಲ್ಲಿ ಮಾರುಕಟ್ಟೆಯ ಪ್ರದೇಶಗಳು ಬಿಕೋ ಎನ್ನುತ್ತಿವೆ.
ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಹತ್ಯೆ ಹಿನ್ನೆಲೆ, ಹಿಂದು ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, ಪೊಲೀಸ್ ಸರ್ಪಗಾವಲು..!
ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಬೀಕರ ಕೊಲೆ ಕೇಸ್ ಗೆ ಸಂಬಂಧಿಸಿದಂತೆ, ಇಂದು ಹಿಂದೂಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಹೀಗಾಗಿ, ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. ಡಿಸಿಪಿ ರಾಜೀವ ಅವರ ನೇತೃತ್ವದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಬಿವಿಬಿ ಆವರಣದಲ್ಲಿ ಪೊಲೀಸರು ಬಿಡು ಬಿಟ್ಟಿದ್ದಾರೆ. ಇನ್ನು ಬಂದೊಬಸ್ತಗಾಗಿ ಒಂದು ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದ್ದು, 3 ಸಿಪಿಐ, 5 ಪಿಎಸ್ಐ ಹಾಗೂ 50 ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ, ಬೆಚ್ಚಿ ಬಿದ್ದ ನಗರ ಸಭೆ ಉಪಾಧ್ಯಕ್ಷೆಯ ಕುಟುಂಬ..!
ಗದಗ: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯಲ್ಲಿ ಘಟನೆ ನಡೆದಿದ್ದು, ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನ್ರ ಕೊಲೆ ಆಗಿದೆ. ಗದಗ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಹತ್ಯೆ ಮಾಡಲಾಗಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಫಿಕ್ಸ್ ಕಾರ್ಯಕ್ರಮಕ್ಕಾಗಿ ಸಂಬಂಧಿಗಳು ಆಗಮಿಸಿದ್ದರು. ಮೊದಲನೇ ಮಹಡಿಯ ಕೊಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳ ಕೊಲೆ ಮಾಡಲಾಗಿದೆ. ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಪೊಲೀಸರಿಗೆ ಫೋನ್ ಮಾಡಿದ್ದ ಕುಟುಂಬಸ್ಥರು. ಪೊಲೀಸರಿಗೆ ಫೋನ್ ಮಾಡ್ತಾಯಿದ್ದಂತೆ ಎಸ್ಕೇಪ್ ಆದ ದುಷ್ಕರ್ಮಿಗಳು. ಬಾಗಿಲು ತೆಗೆದಿದ್ರೆ ನಮ್ಮನ್ನು ಕೊಲೆ ಮಾಡುತ್ತಿದ್ರು ಅಂತಾ ಮನೆ ಮಾಲೀಕ ಪ್ರಕಾಶ್ ಬಾಕಳೆ ಹೇಳಿಕೆ ನೀಡಿದ್ದಾರೆ. ಶ್ವಾನದಳ, ಫಾರಿನ್ ಸಿಕ್ ತಂಡಗಳಿಂದ ಇಂಚಿಂಚು ಪರಿಶೀಲನೆ ನಡೆಸಲಾಗಿದೆ....
ಕಾಲೇಜ್ ಕ್ಯಾಂಪಸ್ನಲ್ಲೇ ವಿದ್ಯಾರ್ಥಿನಿಯ ಹತ್ಯೆ, 9 ಬಾರಿ ಇರಿದು ಇರಿದು ಕೊಂದ ಪಾಪಿ, ಯುವಕನ ಬಂಧನ..! ಪ್ರತಿಭಟನೆ
ಹುಬ್ಬಳ್ಳಿ:ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜ್ ಕ್ಯಾಂಪಸ್ನಲ್ಲೇ ಕೊಲೆ ಮಾಡಿದ್ದಾನೆ. ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ಹಳೇ ವಿದ್ಯಾರ್ಥಿ ಫಯಾಜ್ 9 ಬಾರಿ ಚಾಕುವಿನಿಂದ ಇರುವ ಹತ್ಯೆ ಮಾಡಿದ್ದಾನೆ. ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಗೆ ಕ್ಯಾಂಪಸ್ನಲ್ಲೇ 9 ಬಾರಿ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ನೇಹಾಳನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ. ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದ ಫಯಾಜ್ ಕೆಲ ದಿನಗಳಿಂದ ನೇಹಾ ಬೆನ್ನು ಬಿದ್ದಿದ್ದ. ಆದರೆ ನೇಹಾ ಪ್ರೀತಿಯನ್ನು ತಿರಸ್ಕರಿಸಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿ ಪರಾರಿಯಾಗುತ್ತಿದ್ದಾಗ ಫಯಾಜ್ನ್ನ್ನು ಅಲ್ಲಿದ್ದ ವ್ಯಕ್ತಿಗಳು ಹಿಡಿದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಈಗ ಫಯಾಜ್ನನ್ನು ಬಂಧಿಸಿದ್ದಾರೆ. ಪ್ರತಿಭಟನೆ..! ಇನ್ನು, ಘಟನೆ ಖಂಡಿಸಿ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟಿಸಿದ್ದಾರೆ. ಹು-ಧಾರವಾಡ ರಸ್ತೆ ತಡೆದು ಪ್ರತಿಭಟಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ...
ಮುಂಡಗೋಡ ತಾಲೂಕಿನಲ್ಲಿ ಭಾರಿ ಮಳೆ ಗಾಳಿಗೆ ಅವಾಂತರ, ಸಿಡಿಲಿನ ಅರ್ಭಟಕ್ಕೆ ಮರಕ್ಕೆ ಬೆಂಕಿ, ಧರೆಗುರುಳಿದ ಮರಗಳು, ರಸ್ತೆ ಬಂದ್..!
ಮುಂಡಗೋಡ ತಾಲೂಕಿನಾಧ್ಯಂತ ಭಾರೀ ಮಳೆಯಾಗಿದೆ. ಬಿರುಗಾಳಿ ಸಮೇತ ಒನಮದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ ಅಲ್ಲಿ ಅನಾಹುತಗಳಾಗಿವೆ. ಮಳೆ ಗಾಳಿಗೆ ಹಲವು ಕಡೆ ಮರಗಳು ಧರೆಗುರುಳಿವೆ ಪರಿಣಾಮ ಕೆಲವು ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ರಸ್ತೆ ಬಂದ್..! ಮುಂಡಗೋಡ ಕಲಘಟಗಿ ರಸ್ತೆಯಲ್ಲಿ ಮಳೆಗಾಳಿಗೆ ಎರಡು ಕಡೆ ಮರಗಳು ನೆಲಕ್ಕುರುಳಿದ್ದು ಕೆಲಕಾಲ ರಸ್ತೆ ಸಂಚಾರ ಬಂದ್ ಆಗಿತ್ತು. ಅದ್ರಂತೆ, ಮುಂಡಗೋಡ ಪಟ್ಟಣದ ಹಲವು ಕಡೆ ಮರಗಳು ಧರೆಗುರುಳಿದೆ. ಹೀಗಾಗಿ, ಕೆಲವುವಕಡೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಜ್ಜಿಗೇರಿಯಲ್ಲಿ ಮನೆಗಳಿಗೆ ಹಾನಿ..! ಇನ್ನು, ಭಾರೀ ಮಳೆ ಗಾಳಿಗೆ ಮಜ್ಜಿಗೇರಿಯಲ್ಲಿ ಹಲವು ಮನೆಗಳಿಗೆ ಹಾನಿಯಾಗಿದೆ. ಮನೆಯ ಮೇಲ್ಚಾವಣಿಗಳು ಗಾಳಿಗೆ ಹಾರಿ ಬಿದ್ದಿರೋ ಮಾಹಿತಿ ಲಭ್ಯವಾಗಿದೆ. ತೆಂಗಿನ ಮರಕ್ಕೆ ಸಿಡಿಲು..! ಅದ್ರಂತೆ, ತಾಲೂಕಿನ ಹುನಗುಂದದಲ್ಲಿ ತೆಂಗಿನ ಮರಕ್ಕೆ ಸಿಡಿಲು ಹೊಡೆದು ಹೊತ್ತಿ ಉರಿದ ಘಟನೆಯೂ ನಡೆದಿದೆ. ಒಟ್ನಲ್ಲಿ, ತಾಲೂಕಿನಾಧ್ಯಂತ ಸುರಿದ ಭಾರೀ ಮಳೆಗಾಳಿಗೆ ಹಲವು ಅವಾಂತರಗಳು ಸಂಭವಿಸಿದ್ದು ಇನ್ನೂ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಿದೆ.
ಮುಂಡಗೋಡ ಬಿಜೆಪಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ..!
ಮುಂಡಗೋಡ ಬಿಜೆಪಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಯುವ ಮೋರ್ಚಾ ಕಾರ್ಯಕಾರಣಿ ಸಭೆ ಹಾಗೂ ಎಪ್ರೀಲ್ 29 ರಂದು ಅಂಕೋಲದಲ್ಲಿ ನಡೆಯುವ ಯುವಶಕ್ತಿ ಸಮಾವೇಶದಲ್ಲಿ ಭಾಗಿಯಾಗುವ ಬಗ್ಗೆ ಸಭೆ ನಡೆಸಿ ಚರ್ಚಿಸಲಾಯಿತು. ಈ ವೇಳೆ ಮುಂಡಗೋಡ ಮಂಡಲದ ಅಧ್ಯಕ್ಷ ಮಂಜುನಾಥ ಪಾಟೀಲ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮ ಕುಮಾರ್ ನಾಯ್ಕ್, ನಿಕಟಪೂರ್ವ ರೈತ ಮೋರ್ಚಾ ಅಧ್ಯಕ್ಷ ಮಹೇಶ ಹೊಸಕೊಪ್ಪ, ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಟಣಕೇದಾರ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ವಿಠ್ಠಲ ಬಾಳಂಬಿಡ ಹಾಗೂ ಭರತ್ ರಾಜ್ ಹದಳಗಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಕೆದಾರಿ ಮುಗಳಿ ಹಾಗೂ ಮಂಜುನಾಥ ರೇವಣಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮುಂಡಗೋಡ ಚುನಾವಣಾ ಚೆಕ್ ಪೋಸ್ಟ್ ಗಳಲ್ಲಿ ಸೌಕರ್ಯಗಳೇ ಇಲ್ಲ..! ರಣ ಬಿಸಿಲಲ್ಲೇ ಬಸವಳಿತಿದ್ದಾರೆ ಸಿಬ್ಬಂದಿಗಳು..!!
ಮುಂಡಗೋಡ ತಾಲೂಕಿನಲ್ಲಿ ಲೋಕಸಭಾ ಚುನಾವಣೆಯ ಕಾವು ಏರತೊಡಗಿದೆ. ಅದ್ರಂತೆ ಮತದಾನಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನೂ ಅಧಿಕಾರಿಗಳು ಮಾಡಿಕೊಳ್ತಿದಾರೆ. ಚುನಾವಣಾಧಿಕಾರಿಗಳ ನಿರ್ದೇಶನದಂತೆ ಎಲ್ಲಾ ಕಾರ್ಯಗಳೂ ನಡಿತಿವೆ. ಅದರ ಭಾಗವಾಗಿ, ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ತಾಲೂಕಿನ ಎಲ್ಲಾ ಗಡಿಗಳಲ್ಲೂ ಚೆಕ್ ಪೊಸ್ಟ್ ಗಳನ್ನು ತೆರೆಯಲಾಗಿದೆ. ಆದ್ರೆ, ಹಾಗೆ ತೆರೆಯಲಾಗಿರೋ ಚೆಕ್ ಪೊಸ್ಟ್ ಗಳು ಬಹುತೇಕ ಹಿರಿಯ ಅಧಿಕಾರಿಗಳ ಬೇಜವಾಬ್ದಾರಿಯನ್ನು ಎತ್ತಿ ತೋರಿಸ್ತಿವೆ. ರಣ ಬಿಸಿಲಲ್ಲೇ ಕರ್ತವ್ಯ..! ಅಂದಹಾಗೆ, ತಾಲೂಕಿನ ಗಡಿಗಳಲ್ಲಿ ತೆರೆಯಲಾಗಿರೊ ಚೆಕ್ ಪೊಸ್ಟ್ ಗಳಲ್ಲಿ ಸಿಬ್ಬಂದಿಗಳು ಕೆಲಸ ನಿರ್ವಹಿಸೋದೇ ಕಷ್ಟಕರವಾಗಿದೆ. ಮೊದಲೆ ಬೇಸಿಗೆಯ ರಣ ಬಿಸಿಲಿದೆ. ಅದ್ರಲ್ಲೇ ಇಲ್ಲಿನ ಸಿಬ್ಬಂದಿಗಳು ಬಸವಳಿದು ಹೋಗ್ತಿದಾರೆ. ಆ್ಯಟಲಿಸ್ಟ್ ತಾತ್ಕಾಲಿಕ ಟೆಂಟ್ ನಿರ್ಮಿಸೋ ಕಾಮೆನ್ ಸೆನ್ಸ್ ಕೂಡ ಇಲ್ಲಿನ ಹಿರಿಯ ಅಧಿಕಾರಿಗಳಿಗೆ ಬಂದೇ ಇಲ್ಲ. ಹೀಗಾಗಿ, ಸಿಬ್ಬಂದಿಗಳು ಹಿಡಿಶಾಪ ಹಾಕುತ್ತಲೇ ಬಿಸಿಲಲ್ಲಿ ಒಣಗಿ ಹೋಗ್ತಿದಾರೆ. ಎಸಿ ರೂಮಲ್ಲಿರೋರಿಗೆ ಅರ್ಥವಾಗಿಲ್ಲ..! ಅಸಲು, ತಾಲೂಕಿನ ಚೆಕ್ ಪೊಸ್ಟ್ ಗಳಲ್ಲಿ ಕಾರ್ಯನಿರ್ವಹಿಸ್ತಿರೋ ಸಿಬ್ಬಂದಿಗಳು ಹೈರಾಣಾಗಿದ್ದಾರೆ. ಬಿಸಿಲಿನಿಂದ ರಕ್ಷಿಸಿಕೊಳ್ಳಲು ಛತ್ರಿಗಳನ್ನೇ ಬಳಸಿಕೊಳ್ತಿದಾರೆ. ನಿಜ...