ಮುಂಡಗೋಡಿನ ಯಂಗ್ ಆಂಡ್ ಎನರ್ಜಿಟಿಕ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡಸಿದ್ದಾರೆ. ಪರಿಣಾಮ ಇಬ್ಬರು ಖತರ್ನಾಕ ಅಂತರ್ ಜಿಲ್ಲಾ ಕಳ್ಳಿಯರನ್ನು ಹೆಡೆಮುರಿ ಕಟ್ಟಿದ್ದಾರೆ. ಕಳ್ಳಿಯರ ಜಾಡು ಹಿಡಿದು ದೂರದ ಶಿವಮೊಗ್ಗ ಜಿಲ್ಲೆಯಿಂದ ಕಳ್ಳಿಯರನ್ನು ತಂದು ಕೂರಿಸಿದ್ದಾರೆ. ಅಂದಹಾಗೆ ಬಂಧಿತ ಇಬ್ಬರೂ ಕಳ್ಳಿಯರ ಕರಾಮತ್ತುಗಳು ಒಂದೆರಡಲ್ಲ. ಮುಂಡಗೋಡ ಹಾಗೂ ಶಿರಸಿಯಲ್ಲಿ ಅನಾಮತ್ತಾಗಿ ಲಕ್ಷ ಲಕ್ಷ ಬೆಲೆಯ ಬಂಗಾರ, ಹಣ ದೋಚಿಕೊಂಡು ಹೋಗುವ ಹೀನ ದಂಧೆಯವರು. ಅದು ಎರಡು ವರ್ಷದ ಹಿಂದೆ..! ನಿಮಗೆ ನೆನಪಿರಬಹುದು, ಕಳೆದ ಎರಡು ವರ್ಷದ ಹಿಂದೆ, ಅಂದ್ರೆ, 16.05. 2022 ರಂದು, ಮುಂಡಗೋಡ ಪಟ್ಟಣದ SBI ಬ್ಯಾಂಕ್ ಬಳಿ ಅನಾಮತ್ತಾಗಿ 49 ಸಾವಿರ ರೂಪಾಯಿಗಳನ್ನು ಓರ್ವ ಯುವತಿ ಕಳೆದುಕೊಂಡು ಗೋಳಾಡುತ್ತಿದ್ದಳು. ಚಿಗಳ್ಳಿ ಗ್ರಾಮದ ಕುಮಾರಿ ಶೃತಿ ಬಶೆಟ್ಟೆಪ್ಪ ಅರಳಿಕಟ್ಟಿ ಎಂಬುವ ಯುವತಿ ಅವತ್ತು ಬ್ಯಾಂಕಿನಿಂದ 49 ಸಾವಿರ ಹಣ ಡ್ರಾ ಮಾಡಿಕೊಂಡು ಇನ್ನೇನು ತನ್ನ ಊರಿಗೆ ಹೋಗಬೇಕು ಅನ್ನುವಷ್ಟರಲ್ಲೇ ಈ ಖತರ್ನಾಕ ಕಳ್ಳಿಯರು ಹಣವನ್ನು ಎಗರಿಸಿ ಬಿಟ್ಟಿದ್ದರು. ಹೀಗಾಗಿ, ಅವತ್ತೇ ಮುಂಡಗೋಡ...
Top Stories
ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!
ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು, ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರ ಫೈರಿಂಗ್..!
ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..? ಯಾರ ಭಯವೂ ಇಲ್ಲದೇ ಹೋಯ್ತಾ..?
ಮೀನುಗಾರರ ಸಂಕಷ್ಟ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ :ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!
ಹಾನಗಲ್ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ವಿಧಿವಶ..!
ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಅಂಶುಕುಮಾರ್ ಪ್ರಕಟಣೆ
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಖತರ್ನಾಕ ಕಳ್ಳಿಯರ ಬಂಧನ..!
ಉಗ್ರನೊಂದಿಗೆ “ನಂಟಿನ” ಆರೋಪ, ಭಟ್ಕಳದ ಮಹಿಳೆ ATS ಅಧಿಕಾರಿಗಳ ವಶದಲ್ಲಿ, ವಿಚಾರಣೆ..!
ಭಟ್ಕಳ-ಮುಂಬೈನಲ್ಲಿ ಬಂಧಿತನಾಗಿರೋ ಉಗ್ರನ ಜೊತೆ ನಂಟು ಹೊಂದಿರುವ ಆರೋಪದ ಮೇಲೆ ಭಟ್ಕಳದ ಮಹಿಳೆಯನ್ನ ಮುಂಬೈ ಎಟಿಎಸ್ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಹಿಳೆಯ ಮನೆಯ ಮೇಲೆ ಬುಧವಾರ ರಾತ್ರಿ ದಾಳಿ ನಡೆಸಿದ ತಂಡ ಆಕೆಯನ್ನು ವಶಕ್ಕೆ ಪಡೆದು ಗುರುವಾರ ಭಟ್ಕಳದಲ್ಲಿಯೇ ವಿಚಾರಣೆ ನಡೆಸುತ್ತಿದೆ ಅಂತಾ ಮಾಹಿತಿ ತಿಳಿದು ಬಂದಿದೆ. ಈ ಮಹಿಳೆಯನ್ನು ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಆಜಾದ್ ನಗರದ ನಿವಾಸಿ ಆಯಿಷಾ ಎಂದು ಗುರುತಿಸಲಾಗಿದೆ. ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ ಜೊತೆ ನಂಟು ಹೊಂದಿರುವ ಮಹಾರಾಷ್ಟ್ರ ನಾಸಿಕ್ ಮೂಲದ ಯುವಕನನ್ನು ಮುಂಬೈ ಎಟಿಎಸ್ ತಂಡ ಬಂಧಿಸಿತ್ತು. ಆತನ ಜೊತೆ ಸಂಪರ್ಕದಲ್ಲಿದ್ದ ಮುಂಬೈನ ಓರ್ವ ಮಹಿಳೆಯ ಸಂಪರ್ಕದಲ್ಲಿ ಈ ಭಟ್ಕಳದ ಮಹಿಳೆ ಇದ್ದಳು ಎನ್ನಲಾಗಿದೆ. ಈಕೆಯ ಪತಿ ಮರಣಹೊಂದಿದ್ದು, ತಂದೆ ತಾಯಿ ಮಕ್ಕಳ ಜೊತೆ ವಾಸವಾಗಿದ್ದಾಳೆ. ಸ್ಥಳೀಯ ಮದರಸಾದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಈಕೆ ಹೆಣ್ಣು ಮಕ್ಕಳಿಗೆ ಧರ್ಮಶಿಕ್ಷಣ ಬೋಧಿಸುತ್ತಿದ್ದಳು. ಬಂಧಿತ ಉಗ್ರನಿಗೆ ಹಣ...
ಕಾತೂರು ಬಳಿ ಶಿರಸಿ ಹುಬ್ಬಳ್ಳಿ ರಸ್ತೆ ಮೇಲೆ ಬಿದ್ದ ಬೃಹತ್ ಮರ, ಸಂಚಾರ ಸ್ಥಗಿತ..!
ಮುಂಡಗೋಡ ತಾಲೂಕಿನ ಮೂಡಸಾಲಿ ಕಾತೂರು ಬಳಿ ಬೃಹತ್ ಮರವೊಂದು ರಸ್ತೆ ಮೇಲೆ ಬಿದ್ದ ಪರಿಣಾಮ ಶಿರಸಿ ಹುಬ್ಬಳ್ಳಿ ರಸ್ತೆ ಸಂಚಾರ ಸ್ಥಗಿತವಾಗಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ಕಾತೂರು ಸಮೀಪದಲ್ಲಿ ಘಟನೆ ನಡೆದಿದ್ದು, ರಸ್ತೆಯ ಮೇಲೆಯೇ ಮರ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಆದ್ರೆ, ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಅಡಚಣೆಯಾಗಿದ್ದು ಅರಣ್ಯ ಇಲಾಖೆ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆಗೆ ಸಜ್ಜಾಗಿದ್ದಾರೆ.
ಎಂಟು ದಿನಗಳ ನಂತ್ರ, ಕೊನೆಗೂ ತಾಯಿ ಮಡಿಲು ಸೇರಿದ ಚಿರತೆ ಮರಿಗಳು, ನಿಟ್ಟುಸಿರು ಬಿಟ್ಟ ಮುಂಡಗೋಡ ಅರಣ್ಯ ಅಧಿಕಾರಿಗಳು..!
ಮುಂಡಗೋಡ ಅರಣ್ಯ ಇಲಾಖೆ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಎಂಟು ದಿನಗಳಿಂದ ತಾಯಿ ಮಡಿಲಿಗಾಗಿ ಕಾಯುತ್ತಿದ್ದ ಎರಡು ಚಿರತೆ ಮರಿಗಳನ್ನು ಕೊನೆಗೂ ಹೆತ್ತಮ್ಮನ ಮಡಿಲು ಸೇರಿಸಿದ್ದಾರೆ. ಆದ್ರೆ, ಹಾಗೆ ಎರಡೂ ಪುಟ್ಟ ಕಂದಮ್ಮಗಳನ್ನು ತಾಯಿ ಮಡಿಲು ಸೇರಿಸುವಲ್ಲಿ ಅರಣ್ಯ ಸಿಬ್ಬಂದಿಗಳ ಕರ್ತವ್ಯ ಮತ್ತು ಸಮಯ ಪ್ರಜ್ಞೆ ನಿಜಕ್ಕೂ ಶ್ಲಾಘನೀಯ..! ಅದು ಕಬ್ಬಿನ ಗದ್ದೆ..! ಅಂದಹಾಗೆ, ಕಳೆದ ದಿನಾಂಕ 12.01.2024ರಂದು ಮುಂಡಗೋಡ ಅರಣ್ಯ ವಲಯ ವ್ಯಾಪ್ತಿಯ ಹುಲಿಹೊಂಡ ಗ್ರಾಮದ ಶಿವಾನಂದ ಕೆಂಗಾಪುರ್ ಅವರ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಸಿಕ್ಕೊದ್ದವು. ಗದ್ದೆಯಲ್ಲಿ ಹುಲುಸಾಗಿ ಬೆಳೆದಿದ್ದ ಕಬ್ಬನ್ನು ಕಟಾವು ಮಾಡುತ್ತಿದ್ದ ಕಾರ್ಮಿಕರು, ಸ್ಥಳದಲ್ಲಿ ಸಿಕ್ಕ ಚಿರತೆ ಮರಿಗಳನ್ನು ಅನತಿ ದೂರದಲ್ಲಿಟ್ಟು ಇಲಾಖೆಗೆ ವಿಷಯವನ್ನು ತಿಳಿಸಿದ್ದರು. ಅಲ್ಲಿ ಸಿಕ್ಕಿದ್ದು ಎರಡು ಮರಿಗಳು..! ವಿಷಯ ತಿಳಿದು ಸ್ಥಳಕ್ಕೆ ಬಂದ ವಲಯ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಮರಿಗಳನ್ನು ಸಿಕ್ಕ ಸ್ಥಳದಲ್ಲಿಯೇ ಬಿಟ್ಟು ತಾಯಿ ಚಿರತೆ ತನ್ನ ಮರಿಗಳನ್ನು ತೆಗೆದುಕೊಂಡು ಹೋಗುತ್ತದೆ ಅಂತಾ ಗ್ರಾಮಸ್ಥರಲ್ಲಿ ತಿಳಿಸಿದ್ದರು. ಅದ್ರಂತೆ...
ನಿತ್ರಾಣಗೊಂಡು ರಸ್ತೆಯಲ್ಲೇ ಬಿದ್ದು ಒದ್ದಾಡುತ್ತಿದ್ದ ಕಾರ್ಮಿಕ, ಗಾಯಾಳುವಿಗೆ ಆಸ್ಪತ್ರೆಗೆ ಸೇರಿಸಿ, ಮಾನವೀಯತೆ ಮೆರೆದ ನೂತನ ಪಿಎಸ್ಐ..!
ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕ್ಯಾಂಪ್ ಸಮೀಪ ನಡೆದುಕೊಂಡು ಹೋಗುತ್ತಿದ್ದ ಕಾರ್ಮಿಕನೋರ್ವ ತಲೆಸುತ್ತು ಬಂದು ಬಿದ್ದು ಗಾಯಗೊಂಡಿರೋ ಘಟನೆ ನಡೆದಿದೆ. ಹಾಗೆ ರಸ್ತೆಯಲ್ಲೇ ಬಿದ್ದು ನರಳಾಡುತ್ತಿದ್ದಾಗ ಮುಂಡಗೋಡಿನ ನೂತನ ಪಿಎಸ್ ಐ ಪರಶುರಾಮ್, ಖುದ್ದಾಗಿ ನಿಂತು ಗಾಯಾಳುವಿಗೆ ಆಸ್ಪತ್ರೆಗೆ ಸಾಗಿಸಿ ಮಾನವೀಯ ಕಾರ್ಯ ಮಾಡಿದ್ದಾರೆ. ಅಂದಹಾಗೆ, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಕಾರ್ನಳ್ಳಿ ಗ್ರಾಮದ ನಾಗರಾಜ್ ವಡ್ಡರ(47) ಎಂಬುವ ಕಾರ್ಮಿಕ ರಸ್ತೆ ಬದಿ ನಡೆದು ಹೋಗುತ್ತಿದ್ದಾಗ ನಿತ್ರಾಣಗೊಂಡು ಕುಸಿದು ಬಿದ್ದಿದ್ದಾರೆ. ಹೀಗಾಗಿ ಕಾರ್ಮಿಕ ನಾಗರಾಜ್ ಗೆ ತಲೆಗೆ ಗಾಯವಾಗಿದ್ದು, ಅಕ್ಷರಶಃ ನಿತ್ರಾಣ ಸ್ಥಿತಿಯಲ್ಲಿ ರಸ್ತೆಯಲ್ಲೇ ನರಳಾಡುತ್ತಿದ್ದರು. ಆ ಹೊತ್ತಲ್ಲಿ ಅದೇ ಮಾರ್ಗದಿಂದ ಬೇರೊಂದು ಪ್ರಕರಣದ ಸಲುವಾಗಿ ಹೊರಟಿದ್ದ ನೂತನ ಪಿಎಸ್ ಐ ಪರಶುರಾಮ್, ನಿತ್ರಾಣಗೊಂಡು ಬಿದ್ದಿದ್ದ ಕಾರ್ಮಿಕನಿಗೆ ಉಪಚರಿಸಿ, ತಕ್ಷಣವೇ 108 ಅಂಬುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದ್ದಾರೆ. ಅಲ್ದೆ ಕಾರ್ಮಿಕ ನಿಗೆ ಒಂದಿಷ್ಟು ಹಣ ನೀಡಿ ದೈರ್ಯ ತುಂಬಿ ಕಳಿಸಿದ್ದಾರೆ. ಈ ಕಾರಣಕ್ಕಾಗಿ...
ಹಾನಗಲ್ ಗ್ಯಾಂಗ್ ರೇಪ್ ಕೇಸ್, CPI ಶ್ರೀಧರ್ ಸಸ್ಪೆಂಡ್, ಕಾನಸ್ಟೇಬಲ್ ಕೂಡ ಅಮಾನತ್ತು..!
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಗಲ್ ಠಾಣೆಯ ಸಿಪಿಐ, ಹಾಗೂ ಕಾನಸ್ಟೇಬಲ್ ತಲೆದಂಡವಾಗಿದೆ. ಹಾನಗಲ್ ಠಾಣೆಯ ಸಿಪಿಐ ಶ್ರೀಧರ್ ಸಸ್ಪೆಂಡ್ ಆಗಿದ್ದಾರೆ. ಜೊತೆಗೆ ಕಾನಸ್ಟೇಬಲ್ SB ಡ್ಯೂಟಿಯ ಇಲಿಯಾಜ್ ಶೇತ್ ಸನದಿ ಕೂಡ ಅಮಾನತ್ತಾಗಿದ್ದಾರೆ. ಗ್ಯಾಂಗ್ ರೇಪ್ ಪ್ರಕರಣದ ಮಾಹಿತಿ ಸಂಗ್ರಹಿಸುವಲ್ಲಿ ವಿಫಲ ಹಾಗೂ FIR ದಾಖಲಿಸುವಲ್ಲಿ ಮತ್ತು ಆರೋಪಿಗಳನ್ನು ಬಂಧಿಸುವಲ್ಲಿ ವಿಳಂಭ ಹಿನ್ನೆಲೆಯಲ್ಲಿ ಇಬ್ಬರನ್ನೂ ಅಮಾನತುಗೊಳಿಸಿ ಹಾವೇರಿ ಎಸ್ಪಿ ಆದೇಶಿಸಿದ್ದಾರೆ.
ಸಾಲಗಾಂವ್ ಬಾಣಂತಿದೇವಿ ಕೆರೆಯಲ್ಲಿ ಹರಕೆಯ ರೂಪದಲ್ಲಿ ತೇಲುತ್ತವೆ ಕಂದಮ್ಮಗಳು..! ಹೆತ್ತಮ್ಮಗಳ ಕಂಗಳಲ್ಲಿ ಆನಂದಬಾಷ್ಪ, ಹೇ ತಾಯೇ ಕಾಪಾಡಮ್ಮ..!!
ಇದು ಅಕ್ಷರಶಃ ಭಕ್ತಿಯ ಪರಾಕಾಷ್ಟೆ. ದೇವರ ಸನ್ನಿದಾನದ ಮಹತ್ವ ಸಾರುವ ಅದ್ಭುತ ಸೇವೆ. ಇಲ್ಲಿ ಹಸುಗೂಸುಗಳು ಕೆರೆಯ ನೀರಲ್ಲಿ ತೇಲುತ್ತವೆ. ಒಂಬತ್ತು ತಿಂಗಳು ಹೊತ್ತು ಹೆತ್ತ ಕಂದಮ್ಮಗಳನ್ನು ಹೆತ್ತ ತಾಯಿಯೇ ಕೆರೆಯ ನೀರಲ್ಲಿ ಹಾಕಿ ನಿರುಮ್ಮಳವಾಗಿ “ಅವ್ವಾ ನನ್ನ ಕಂದನನ್ನು ನಿನ್ನ ಮಡಿಲಲ್ಲಿ ಹಾಕಿದ್ದೇನೆ ರಕ್ಷಿಸುವ ಭಾರವು ನಿನ್ನದೇ ತಾಯಿ” ಅಂತಾ ಅಂಗಲಾಚುತ್ತಾಳೆ. ಆ ಹೆತ್ತ ತಾಯಿ ಕಣ್ಣಲ್ಲಿ ಆನಂದ ಬಾಷ್ಪಗಳು ಸುರಿಯುತ್ತವೆ. ಬಾಣಂತಿದೇವಿಯ ಮಡಿಲಲ್ಲಿ ತನ್ನ ಕಂದಮ್ಮನನ್ನು ಹಾಕಿ ಕೃತಾರ್ಥಳಾದ ಧನ್ಯತಾ ಭಾವ ಆ ತಾಯಿಯ ಕಂಗಳಲ್ಲಿ ಪ್ರಜ್ವಲಿಸುತ್ತದೆ. ಭಕ್ತರ ಪಾಲಿನ ದೈವ..! ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ತಾಯಿ ಎಂದೇ ಪ್ರಸಿದ್ದಿಯಾಗಿರುವ ನೂರಾರು ವರ್ಷಗಳ ಇತಿಹಾಸವುಳ್ಳ ತಾಲೂಕಿನ ಸಾಲಗಾಂವ್ ಗ್ರಾಮದ ಶಿರಸಿ- ಹುಬ್ಬಳ್ಳಿ ಹೆದ್ದಾರಿಯಲ್ಲಿರುವ ಬಾಣಂತಿದೇವಿ ಜಾತ್ರಾ ಮಹೋತ್ಸವ ಸೋಮವಾರ ವಿಜೃಂಭಣೆಯಿಂದ ನಡೆಯಿತು. ಪ್ರತಿವರ್ಷ ಮಕರ ಸಂಕ್ರಮಣ ದಿನದಂದು ನಡೆಯುವ ಬಾಣಂತಿದೇವಿ ಜಾತ್ರೆಗೆ ಪಟ್ಟಣ ಸೇರಿದಂತೆ ಸಾಲಗಾಂವ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಗಳು ಆಗಮಿಸಿದ್ದು, ದೇವಿಯ...
ಸಾಲಗಾಂವ್ ಬಾಣಂತಿದೇವಿ ಜಾತ್ರೆಯಲ್ಲಿ “ಕಲರ್ ಕಲರ್ ಬಾಲ್” ದಂಧೆಯದ್ದೇ ಕಾರುಬಾರು.. ಸಿಂಗಂ ಸಾಹೇಬ್ರೇ ಗಮನಿಸಿ..!
ಮುಂಡಗೋಡ ತಾಲೂಕಿನ ಸಾಲಗಾಂವ್ ಬಾಣಂತಿದೇವಿ ಜಾತ್ರೆ ವಿದ್ಯುಕ್ತ ಚಾಲನೆ ಪಡೆದುಕೊಂಡಿದೆ. ಇವತ್ತಿಂದ ಮೂರು ದಿನ ಜಾತ್ರೆಯ ಸದ್ದು ಗದ್ದಲ ಇದ್ದೇ ಇರತ್ತೆ. ಅದ್ರ ಜೊತೆ ಜಾತ್ರೆಯ ಅಂಗಳದಲ್ಲಿ ಅನಧಿಕೃತವಾಗಿ ನಡೆಯುವ ಅಡ್ಡ ದಂಧೆಗಳೂ ಕೂಡ ಹುಟ್ಟಿಕೊಂಡು ಜಾತ್ರೆಗೆ ಬರುವ ಸಭ್ಯಸ್ಥರಿಗೆ ಮಾರಕವಾಗ್ತಿವೆ. ಬಹುಶಃ ಖಾಕಿ ಪಡೆಗೆ ಇದೇಲ್ಲ ಗೊತ್ತಿದೆಯೋ ಇಲ್ವೊ ನಮಗಂತೂ ಗೊತ್ತಿಲ್ಲ. ಆದ್ರೆ, ಜಾತ್ರೆಗೆ ಹೋದ ಅನೇಕ ಜನ ಸಭ್ಯಸ್ಥರು ಅಲ್ಲಿನ “ಅಂಧಾ” ಗೇಮ್ ನೋಡಿ ವಿಡಿಯೋ ಕಳಿಹಿಸಿ “ಪಬ್ಲಿಕ್ ಫಸ್ಟ್” ಗೆ ಮಾಹಿತಿ ನೀಡಿದ್ದಾರೆ. ಅಂದಹಾಗೆ, ಈ ಆಟದ ಹೆಸರು ನಮಗಂತೂ ಗೊತ್ತಿಲ್ಲ. ಆದ್ರೆ, ಇಲ್ಲಿ ಹಣ ಅನ್ನೋದು ಹೊಳೆಯಂತೆ ಹರಿಯುತ್ತಿದೆ. ಪವಾಡಗಳ ಸನ್ನಿಧಾನ..! ನಿಮಗೆ ನೆನಪಿರಲಿ, ಬಾಣಂತಿದೇವಿಯ ಸನ್ನಿಧಾನದಲ್ಲಿ ಬಹುತೇಕ ಮುಂಡಗೋಡ ತಾಲೂಕಿನ ಸುತ್ತ ಮುತ್ತಲಿನ ಭಕ್ತರು ಬಂದಿರ್ತಾರೆ. ಬಾಣಂತಿದೇವಿಗೆ ಹರಕೆ ಹೊತ್ತು ತೆಪ್ಪದ ತೇರಿನ ದರ್ಶನ ಪಡೀತಾರೆ. ಅಲ್ದೆ ಪುಟ್ಟ ಪುಟ್ಟ ಕಂದಮ್ಮಗಳನ್ನು ಕೆರೆಯಲ್ಲಿ ತೇಲಿ ಬಿಟ್ಟು ಹರಕೆ ತೀರಿಸ್ತಾರೆ. ಅಸಲು, ಬಾಣಂತಿದೇವಿಯ ಚಮತ್ಕಾರ,...
ಗಣೇಶಗುಡಿಯಲ್ಲಿ ರೆಸಾರ್ಟ್, ಹೋಂ ಸ್ಟೇ ಮಾಲೀಕರಿಗೆ ಮಾದಕ ದ್ರವ್ಯದ ಕಾನೂನು ತಿಳುವಳಿಕೆ ನೀಡಿದ ಪೊಲೀಸರು..!
ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶಗುಡಿ ಗ್ರಾಮದಲ್ಲಿ ಮಾದಕ ದ್ರವ್ಯ ಮತ್ತು ಕಾನೂನು ತಿಳುವಳಿಕೆ ಕಾರ್ಯಕ್ರಮ ಪೊಲೀಸ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿತ್ತು. ಗಣೇಶಗುಡಿ ಗ್ರಾಮದ ಸುತ್ತ ಮುತ್ತಲಿನ ಎಲ್ಲಾ ಹೋಂ ಸ್ಟೇ ಮತ್ತು ರೆಸಾರ್ಟ್ ಹಾಗೂ ಜಲ ಕ್ರೀಡಾ ಕೇಂದ್ರಗಳ ಗೈಡ್ಸ್ ಮತ್ತು ಮಾಲೀಕರು, ವ್ಯವಸ್ಥಾಪಕರನ್ನು ಕರೆಸಿ ಮಾದಕ ದ್ರವ್ಯ ಮತ್ತು ಕಾನೂನು ತಿಳುವಳಿಕೆ ನೀಡಲಾಯಿತು. ಕಾರ್ಯಕ್ರಮದಲ್ಲಿ ರಾಮನಗರ ಠಾಣೆ ಪಿಎಸ್ ಐ ಬಸವರಾಜ್ ಮಬನೂರು ಮಾದಕ ದ್ರವ್ಯ ಹಾಗೂ ಅದರಿಂದಾಗುವ ಅನಾಹುತಗಳು, ಹಾಗೂ ಅದಕ್ಕೆ ಸಂಬಂಧಿಸಿದ ಕಾನೂನು ತಿಳುವಳಿಕೆ ನೀಡಿದ್ರು.
ಹುನಗುಂದ ಸೊಸೈಟಿಯ 3 ಕ್ಷೇತ್ರಗಳ ಚುನಾವಣೆ ಫಲಿತಾಂಶ ಪ್ರಕಟ, ಜಾತ್ಯಾತೀತ ಒಕ್ಕೂಟದ ಅಭ್ಯರ್ಥಿಗಳಿಗೆ ಗೆಲುವು, 9 ಸದಸ್ಯರ ಅವಿರೋಧ ಆಯ್ಕೆ..!
ಮುಂಡಗೋಡ ತಾಲೂಕಿನ ಹುನಗುಂದ ವೀರೇಶ್ವರ ವಿವಿದ್ದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಚುನಾವಣೆ ನಡೆಯಿತು. ಒಟ್ಟೂ 12 ಸದಸ್ಯ ಬಲದ ಸಹಕಾರ ಸಂಘಕ್ಕೆ ಈಗಾಗಲೇ 9 ಜನ ಅವಿರೋಧವಾಗಿ ಆಯ್ಕೆಯಾಗಿದ್ದು, ಇಂದು ಮೂರು ಸ್ಥಾನಗಳಿಗೆ ಚುನಾವಣೆ ನಡೆಯಿತು. ಜಾತ್ಯಾತೀತ ಒಕ್ಕೂಟದ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಶಾಲಿಯಾದ್ರು. ಅದ್ರಲ್ಲಿ ಅರಷಿಣಗೇರಿಯ ಇಬ್ಬರು ಹಾಗೂ ಹುನಗುಂದದ ಓರ್ವ ಸದಸ್ಯರು ಚುನಾಯಿತರಾದ್ರು. ಇನ್ನು ಹುನಗುಂದ, ಅತ್ತಿವೇರಿ, ಅಗಡಿ, ಅರಷಿಣಗೇರಿ, ಹುಲಿಹೊಂಡ ಗ್ರಾಮಗಳನ್ನೊಳಗೊಂಡ ಸೊಸೈಟಿಗೆ ನೂತನವಾಗಿ ಆಯ್ಕೆಗೊಂಡಿರೋ ಸದಸ್ಯರ ಪಟ್ಟಿ ಈ ಕೆಳಗಿನಂತಿದೆ. ಹುನಗುಂದದಿಂದ.. ಹುನಗುಂದ ಭಾಗದಿಂದ ಆರು ಜನ ಸದಸ್ಯರು ಆಯ್ಕೆಯಾಗಿದ್ದು ಸಿದ್ದಪ್ಪ ಮಹದೇವಪ್ಪ ಹಡಪದ್, ಯಲ್ಲಪ್ಪ ಬಸಪ್ಪ ಶಿವಳ್ಳಿ, ನಾಗವ್ವ ರಾಮಚಂದ್ರ ಬುದ್ದಣ್ಣನವರ್, ಗೌರವ್ವ ಸಹದೇವಪ್ಪ ಆಸ್ತಕಟ್ಟಿ, ಫಕ್ಕೀರಪ್ಪ ಕುಂಕೂರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ, ಅದ್ರಂತೆ ಅಬ್ದುಲ್ ರೆಹಮಾನ್ ಹಕೀಂ ಇಂದು ನಡೆದ ಚುನಾವಣೆಯಲ್ಲಿ 14 ಮತಗಳ ಅಂತರದಿಂದ ನಿಜಗುಣಿ ಬಸಪ್ಪ ಬಿಸನಳ್ಳಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಅಗಡಿ ಗ್ರಾಮದಿಂದ.. ಇನ್ನು ಅಗಡಿ ಗ್ರಾಮದಿಂದ...