ಬಾಗಲಕೋಟೆ:ಬೈಕ್ ನಡುವೆ ಕ್ಯಾಂಟರ್ ಭೀಕರ ಅಪಘಾತವಾಗಿ ಬೈಕ್‌ನಲ್ಲಿದ್ದ ಮೂವರು ಬಾಲಕರು ಸ್ಥಳದಲ್ಲೇ ದುರ್ಮರಣವಾದ ಘಟನೆ ಬಾಗಲಕೋಟೆ ತಾಲ್ಲೂಕಿನ ಸೀಮಿಕೇರಿ ಬೈಪಾಸ್ ನಲ್ಲಿ ನಡೆದಿದೆ. ಗದ್ದನಕೇರಿ ಕ್ರಾಸ್ ನಿಂದ ಹುಬ್ಬಳ್ಳಿ ಮಾರ್ಗವಾಗಿ ಹೊರಟಿದ್ದ ಬೈಕ್ ಇದಾಗಿತ್ತು. ಸ್ಥಳಕ್ಕೆ ಕಲಾದಗಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತರು ಬಾಗಲಕೋಟೆ ತಾಲ್ಲೂಕಿನ ಮುರನಾಳ ಗ್ರಾಮದವ್ರು. ಸಿದ್ದು ರಾಜು ಗಣಿ (16), ಸಂತೋಷ ಕೂಡಗಿ (16), ಕಾಮಣ್ಣ ಕುಪಲಿ (16) ಮೃತರು ಎಂದು ಗುರುತಿಸಲಾಗಿದೆ. ಹನುಮ ಜಯಂತಿ ಹಿನ್ನಲೆ ಗ್ರಾಮದಲ್ಲಿ ಡಿಜೆ ಮೆರವಣಿಗೆ ಇತ್ತು. ಡಿಜೆ ನೋಡುವುದಕ್ಕೆ ಹೊರಟಿದ್ದ ಬಾಲಕರು ಮಸಣಕ್ಕೆ ಸೇರಿದ್ದಾರೆ.
Top Stories
ಪ್ಲೇಆಪ್ ತಲುಪಿರೋ RCB ತಂಡಕ್ಕೆ ಮತ್ತೊಂದು ಶುಭಸುದ್ದಿ..! ಇದನ್ನ ಲಾಟರಿ ಅಂದ್ರೂ ಓಕೆ.!!
ಲೋಕಾಯುಕ್ತ ಅಧಿಕಾರಿಗಳ ನಾಳೆಯ (ಮೇ 20 ರ) ಮುಂಡಗೋಡ ಕಾರ್ಯಕ್ರಮ ಮೇ. 28ಕ್ಕೆ ಮುಂದೂಡಿಕೆ..!
Rain Alert News: ಭಾರಿ ಮಳೆಯ ಮುನ್ಸೂಚನೆ, ಉತ್ತರ ಕನ್ನಡದಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಎಚ್ಚರಿಕೆ ವಹಿಸಿ; ಡಿಸಿ ಲಕ್ಷ್ಮೀಪ್ರಿಯ
Death News: ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ದಾರುಣ ಸಾವು..!
ಬಂಗಾರದ ಬೆಲೆ ಮತ್ತೆ ₹380 ಹೆಚ್ಚಳ; ಬೆಳ್ಳಿ ₹1000 ತುಟ್ಟಿ, ಈ ದರ ಏರಿಕೆಗೆ ಕಾರಣಗಳೇನು ಗೊತ್ತಾ..?
ಸತತ 2ನೇ ದಿನ ಕುಸಿದ ಷೇರುಪೇಟೆ : ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆ, ಟಾಪ್ ಗೇನರ್ ಮತ್ತು ಲೂಸರ್ಸ್ ಇಲ್ಲಿವೆ
Lokayukta Raid News :ಅಡ್ಮಿಶನ್ ಮಾಡಿಕೊಳ್ಳಲು ಲಂಚ ಸ್ವೀಕಾರ, ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕನ ಬಂಧನ..!
Accident News: ಕಾರ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ BJP ತಾಲೂಕಾ ಮಾಜಿ ಅಧ್ಯಕ್ಷ ಸೇರಿ ಮೂವರು ದುರಂತ ಸಾವು..!
FIRE MISHAP News: ಹೈದರಾಬಾದ್ ಬೆಂಕಿ ಅವಘಡ, ಒಂದೇ ಕುಟುಂಬದ 17 ಜನರ ಸಾವು..!
Terrorist Death News: ಬೆಂಗಳೂರಿನ IISC ಮೇಲಿನ ದಾಳಿ ರೂವಾರಿ, ಲಷ್ಕರ್-ಎ-ತೊಯ್ಬಾದ ಡೇಂಜರಸ್ ಉಗ್ರ ಸೈಫುಲ್ಲಾ ಖಾಲಿದ್ ಹತ್ಯೆ..!
Shashi Taroor News: ಉಗ್ರ ಮುಖವಾಡ ಬಯಲು ಟೀಂನಲ್ಲಿ ಶಶಿ ತರೂರ್ ಗೆ ಸ್ಥಾನ, ಬಿಜೆಪಿ- ಕಾಂಗ್ರೆಸ್ ನಡುವೆ ಭಾರೀ ತಿಕ್ಕಾಟ..!
Gold Rate Today: ರವಿವಾರವೂ ಚಿನ್ನ- ಬೆಳ್ಳಿ ಬೆಲೆಗಳು ಸ್ಥಿರ; ಪ್ರಸ್ತುತ ಬೆಂಗಳೂರಲ್ಲಿ ಗೋಲ್ಡ್ ರೇಟ್ ಎಷ್ಟಿದೆ?
Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್
Covid News: 3 ವರ್ಷಗಳಿಗೂ ಅಧಿಕ ಕಾಲ ವಿಶ್ವವನ್ನು ಕಾಡಿ ತೆರೆಮರೆಗೆ ಸರಿದಿದ್ದ ಕೊರೋನಾ ಮತ್ತೆ ಸದ್ದು..!
Gold Price Today : ವೀಕೆಂಡ್ ಚಿನ್ನದ ಬೆಲೆ, ಸ್ಥಿರತೆ ಕಾಯ್ದುಕೊಂಡ ಬಂಗಾರ..!
IPL T20 News: ಮಳೆರಾಯನ ಅರ್ಭಟಕ್ಕೆ ಕೊಚ್ಚಿ ಹೋಯ್ತು ಐಪಿಎಲ್ ಪುನಾರಂಭದ ಪಂದ್ಯ! RCB ಪ್ಲೇ ಆಫ್ಗೆ ಎಂಟ್ರಿ, ಟೂರ್ನಿಯಿಂದ ಹೊರಬಿದ್ದ ಹಾಲಿ ಚಾಂಪಿಯನ್ಸ್
‘ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ, ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಬಹುದೇ ? ಸುಪ್ರೀಂ ಕೋರ್ಟಿಗೆ ರಾಷ್ಟ್ರಪತಿ ಮುರ್ಮು 14 ಪ್ರಶ್ನೆ..!
ರಾಜ್ಯದ 200 ಪೊಲೀಸ್ರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ಪುರಸ್ಕಾರ ಘೋಷಣೆ..!
ಸೇನೆ ಬರ್ಲಿ ನೋಡ್ಕೊಳ್ತೇನೆ; ಎನ್ಕೌಂಟರಿನಲ್ಲಿ ಸಾಯುವ ಸ್ವಲ್ಪ ಮೊದಲು ತಾಯಿ ಜೊತೆ ಭಯೋತ್ಪಾದಕ ವೀಡಿಯೊ ಕರೆಯಲ್ಲಿ ಮಾತನಾಡಿದ ದೃಶ್ಯ ವೈರಲ್..!
ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!
ಹಾವೇರಿ: ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರು ಬಳಿ ಭೀಕರ ರಸ್ತೆ ಅಪಘಾತವಾಗಿದೆ. ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ನೊಟೆಬೆನ್ನೂರು ಬಳಿಯ ರಾ.ಹೆದ್ದಾರಿ 48 ರಲ್ಲಿ ಘಟನೆ ನಡೆದಿದ್ದು, ಹರಿಯಾಣ ಮೂಲದ ಆಡಿ A-6 ಕಾರು ಅಪಘಾತವಾಗಿದೆ. ಬ್ಯಾಡಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಗಾಯಾಳು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!
ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಭಾರತೀಯರ ಹತ್ಯಾಕಾಂಡಕ್ಕೆ ಪ್ರತಿಕಾರದಲ್ಲಿ, ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆಯ “ಆಪರೇಷನ್ ಸಿಂಧೂರ” ಹೆಸರಿನ ಸರ್ಜಿಕಲ್ ಸ್ಟ್ರೈಕ್ ಕಾರ್ಯಾಚರಣೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯ ಖುರೇಷಿ ಬೆಳಗಾವಿಯ ಸೊಸೆಯಾಗಿದ್ದು, ಈಗ ಭಾಥದ ಹೆಮ್ಮೆಯಾಗಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನ ಜಗತ್ತಿಗೆ ಬಿಚ್ಚಿಟ್ಟಿದ್ದ ಕರ್ನಲ್ ಸೋಫೀಯಾ ಕುರೆಷಿ, ಬಹುರಾಷ್ಟ್ರೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಭಾರತೀಯ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಸೋಫೀಯಾ ಪತಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದವರು, ಪತಿ, ಪತ್ನಿ ಇಬ್ಬರೂ ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ದೇಶ ಸೇವೆ ಮಾಡ್ತಿದ್ದಾರೆ. ಸೋಫೀಯಾ ಪತಿ ತಾಜುದ್ದೀನ್ ಬಾಗೇವಾಡಿ ಸಹ ಕರ್ನಲ್ ಆಗಿದ್ದಾರೆ. 2015 ರಲ್ಲಿ ಮ್ಯಾರೇಜ್ ಆಗಿರೋ ತಾಜುದ್ದೀನ್ ಸೋಫೀಯಾ ಅವರದ್ದು ಪ್ರೇಮ ವಿವಾಹ. ಕರ್ನಲ್ ಸುಫೀಯಾ ಮೂಲತಃ ಗುಜರಾತ್ ರಾಜ್ಯದ ಬರೋಡಾದವರು. ಸಧ್ಯ ಸೋಫೀಯಾ ಜಮ್ಮುವಿನಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಪತಿ ತಾಜುದ್ದೀನಿ ಬಾಗೇವಾಡಿ ಸಹ ಕರ್ನಲ್...
ಉತ್ತರ ಕನ್ನಡದಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಸ್ಥಳ ಪರಿಶೀಲನೆ ನಡೆಸಿದ ಎಸ್ಪಿ..!
ಉತ್ತರ ಕನ್ನಡ ಜಿಲ್ಲೆಯ ಕೈಗಾ, ನೇವಿ ಹಾಗೂ ಗ್ರಾಸಿಯಂ ಇಂಡಸ್ಟ್ರೀಸ್ ಪ್ರದೇಶಗಳಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಅಣುಕು ಕಾರ್ಯಾಚರಣೆಯ ಪ್ರಯುಕ್ತ ಪೂರ್ವಸಿದ್ಧತೆಯ ಕುರಿತು ಪರಿಶೀಲನೆ ನಡೆಸಲಾಯಿತು. ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್, ಮಾಕ್ ಡ್ರಿಲ್ ನಡೆಸುವ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ರು.
ಕೌಶಲ್ಯಾಧಾರಿತ ಉಚಿತ ತರಬೇತಿಗೆ ಅರ್ಜಿ ಆಹ್ವಾನ..!
ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕರಿಗಾಗಿ ಜೂನ್ ತಿಂಗಳಿನಲ್ಲಿ ಲಘು ಮೋಟಾರ ವಾಹನ ಚಾಲನೆ, ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ಹಾಗೂ ವೆಲ್ಡಿಂಗ್ ಮತ್ತು ಫ್ಯಾಬ್ರಿಕೇಶನ್ ಮತ್ತು ಜುಲೈ ತಿಂಗಳಲ್ಲಿ ಸೋಲಾರ ಟೆಕ್ನೀಶಿಯನ್ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸವನ್ನು ನೋಂದಾಯಿಸಿಕೊಳ್ಳಲು ಮೇ.25 ಕೊನೆಯ ದಿನವಾಗಿದೆ. ತರಬೇತಿ ಅವಧಿಯಲ್ಲಿ ಊಟ ವಸತಿ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಧನಾ ಪ್ರೇರಣಾ ತರಬೇತಿ, ಉದ್ಯಮಶೀಲತೇಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ ಮಾಹಿತಿ, ಮಾರುಕಟ್ಟೆ ಸಮೀಕ್ಷೆ, ಮಾರಾಟ ತಂತ್ರಗಳು, ಯಶ್ವಸಿ ಉದ್ಯಮಗಳಿಂದ ಅನುಭವ ಹಂಚಿಕೆ, ಕ್ಷೇತ್ರ ಭೇಟಿ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ, ಬ್ಯಾಂಕಿನಿಂದ ಸಾಲ ಪಡೆದು ಸ್ವಉದ್ಯೋಗ ಪ್ರಾಂಭಿಸಲು ಬೇಕಾದ ಜ್ಞಾನ, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ...
ಗೃಹ ಬಳಕೆಯ ಅನಿಲ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗದಂತೆ ತಡೆಯಿರಿ: ಡಿಸಿ ಲಕ್ಷ್ಮೀ ಪ್ರಿಯ…!
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಾಣಿಜ್ಯ ಬಳಕೆಯ ಅನಿಲ ಸಿಲೆಂಡರ್‌ಗಳಿಗಿಂತ ಕಡಿಮೆ ದರದಲ್ಲಿ ಗೃಹ ಬಳಕೆಯ ಉದ್ದೇಶಕ್ಕೆ ಸಿಲೆಂಡರ್‌ಗಳನ್ನು ವಿತರಿಸಲಾಗುತ್ತಿದ್ದು, ಈ ಸಿಲೆಂಡರ್‌ಗಳು ವಾಣಿಜ್ಯ ಉದ್ದೇಶಗಳಿಗೆ ಬಳಕೆಯಾಗದಂತೆ ನಿಗಾ ವಹಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಕೆಲವು ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದು ಇಂತಹ ಪ್ರದೇಶಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಮತ್ತು ಗ್ಯಾಸ್ ಏಜೆನ್ಸಿಗಳ ಅನಿಲ ವಿತರಣೆಯ ದಾಖಲೆಗಳನ್ನು ಹಾಗೂ ವಾಣಿಜ್ಯ ಅನಿಲ ಬಳಕೆದಾರರ ಅನಿಲ ಬಳಕೆಯ ಮಾಹಿತಿ ದಾಖಲೆಗಳನ್ನು ಪರಿಶೀಲನೆ ನಡೆಸುವಂತೆ ತಿಳಿಸಿದರು. ಪಡಿತರ ಚೀಟಗಳಿಗೆ ಇ ಕೆವೈಸಿ ಮಾಡುವ ಕಾರ್ಯದಲ್ಲಿ ಜಿಲ್ಲೆಯಲ್ಲಿ ಇದುವರೆಗೆ 98.02 ಪ್ರಗತಿ ಸಾಧಿಸಿದ್ದು, ಈ ಕಾರ್ಯದಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು, ಇದುವರೆಗೆ ಇ ಕೆವೈಸಿ ಮಾಡಿಸದೇ ಇರುವವರಿಗೆ ಅಂತಿಮ ದಿನಾಂಕವನ್ನು ನಿಗಧಿಪಡಿಸಿ, ನೊಟೀಸ್ ನೀಡುವಂತೆ...
ಉಸ್ತುವಾರಿ ಸಚಿವ ಮಂಕಾಳು ವೈದ್ಯರಿಂದ ಮುರುಡೇಶ್ವರ ಗೃಹಕಚೇರಿಯಲ್ಲಿ ಜನತಾ ದರ್ಶನ..!
ಕಾರವಾರ: ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅವರು ಮೇ 7 ರಂದು ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಮುರುಡೇಶ್ವರದ ಗೃಹ ಕಚೇರಿಯಲ್ಲಿ “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಂಡಿದ್ದು , ಜಿಲ್ಲೆಯ ಹಾಗೂ ಕ್ಷೇತ್ರದ ಸಾರ್ವಜನಿಕರು ಸಚಿವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆಗಳನ್ನು ತಿಳಿಸಿ ಅಹವಾಲುಗಳನ್ನು ನೀಡಬಹುದಾಗಿದೆ ಎಂದು ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಬಿಜೆಪಿ ಮುಖಂಡ, ಶಾಸಕ, ಜನಾರ್ದನರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷ ಪ್ರಕಟ..! ಓಬಳಾಪುರಂ ಮೈನಿಂಗ್ ಕೇಸಲ್ಲಿ ರೆಡ್ಡಿ ಅಪರಾಧಿ..!
ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಿದೆ. ಹೀಗಾಗಿ, ಗಾಲಿ ಜನಾರ್ಧನ ರೆಡ್ಡಿ ಇನ್ನಿಲ್ಲದ ಸಂಕಷ್ಟ ಶುರುವಾಗಿದ್ದು, ಏಳು ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ. ಓಬಳಾಪುರಂ ಮೈನಿಂಗ್ ಕಂಪನಿ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ ಅಪರಾಧಿ ಎಂದು ವಿಶೇಷ ನ್ಯಾಯಾಲಯ ಹೇಳಿದೆ. 2008ರಿಂದ 2013ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿತ್ತು. ಜನಾರ್ಧನ ರೆಡ್ಡಿ ವಿರುದ್ಧದ ಆರೋಪಗಳು ಸಾಬೀತಾಗಿದ್ದು, ಅವರನ್ನು ಅಪರಾಧಿ ಎಂದು ಘೋಷಿಸಿದ ನ್ಯಾಯಾಲಯ, ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಮೇ. 7 ಮಾಕ್ ಡ್ರಿಲ್, ಅಷ್ಟಕ್ಕೂ ಈ ಮಾಕ್ ಡ್ರಿಲ್ ಅಂದರೇನು..? ಇಲ್ಲಿದೆ ಸಂಪೂರ್ಣ ಮಾಹಿತಿ..!
ಪಹಲ್ಗಾಮ್ ದಾಳಿ ಬಳಿಕ ಭಾರತ-ಪಾಕ್ ನಡುವೆ ಹೆಚ್ಚಿದ ಉದ್ವಿಗ್ನತೆ ನಡುವೆಯೇ ನೆರೆ ದೇಶಕ್ಕೆ ತಕ್ಕ ತಿರುಗೇಟು ನೀಡಲು ಭಾರತ ರಣಕಹಳೆ ಮೊಳಗಿಸಿದೆ. ಪಾಕ್ ಮೇಲೆ ದಾಳಿಗೆ ಸನ್ನದ್ಧವಾಗುತ್ತಿರುವ ಸೂಚನೆ ನೀಡಿದೆ. ಮೇ 7ರಂದು ಭದ್ರತಾ ಅಣಕು ಕವಾಯತು ನಡೆಸುವಂತೆ (ಸೆಕ್ಯೂರಿಟಿ ಮಾಕ್ ಡ್ರಿಲ್) ಎಲ್ಲಾ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೋಮವಾರ (ಮೇ 6) ನಿರ್ದೇಶನ ನೀಡಿದೆ. 1971ರಲ್ಲಿ ಭಾರತ-ಪಾಕ್ ಯುದ್ಧದ ಬಳಿಕ ಇಂತಹ ಅಣಕು ಕವಾಯತಿಗೆ ಇದೇ ಮೊದಲ ಬಾರಿಗೆ ಸೂಚಿಸಲಾಗಿದೆ. ಕಾಶ್ಲೀರದ ಪಹಲ್ಗಾಮ್‌ನಲ್ಲಿ ಏ.22ರಂದು ನಡೆದ ಉಗ್ರ ದಾಳಿ ಬಳಿಕ ಪಾಕಿಸ್ತಾನ ಸತತ 11 ದಿನಗಳಿಂದ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ಮೂಲಕ ಭಾರತವನ್ನು ಕೆಣಕುತ್ತಿದೆ. ಮತ್ತೊಂದೆಡೆ, ಉಗ್ರರು ಕನಸಿನಲ್ಲೂ ಊಹಿಸಿರದಂತಹ ತಿರುಗೇಟು ನೀಡುವುದಾಗಿ ಭಾರತ ಶಪಥ ಮಾಡಿದೆ. ಈ ಬೆಳವಣಿಗೆಗಳನ ನಡುವೆಯೇ ಕೇಂದ್ರ ಸರಕಾರ ಯುದ್ಧದ ಸಂದರ್ಭದಲ್ಲಿ ಕೈಗೊಳ್ಳುವ ರಕ್ಷಣಾ ಕಾರ್ಯಾಚರಣೆಯ ಅಣುಕು ಕವಾಯತು ನಡೆಸುವಂತೆ ರಾಜ್ಯಗಳಿಗೆ ಸೂಚಿಸಿರುವುದು ಮಹತ್ವ ಪಡೆದುಕೊಂಡಿದೆ. ಮಾಕ್ ಡ್ರಿಲ್‌ಗೆ ಭಾರತ ಸಜ್ಜು...
ಕಾರ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿ, ಕಾರಲ್ಲಿದ್ದ ,ಐವರು ಸ್ಥಳದಲ್ಲೇ ಸಾವು..!
ಬೆಳ್ಳಂ ಬೆಳ್ಳಿಗ್ಗೆ ಹುಬ್ಬಳ್ಳಿಯಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹುಬ್ಬಳ್ಳಿ ತಾಲ್ಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ, ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ 5 ಜನ ಸ್ಥಳದಲ್ಲೇ ಕಂಡಿದ್ದಾರೆ. ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರು ಎನ್ನಲಾಗಿದೆ. ಶ್ವೇತ (29), ಅಂಜಲಿ(26), ಸಂದೀಪ್ (26) ವಿಠಲ್ (55) ಶಶಿಕಲಾ (40) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇವ್ರು, ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ಹೋಗಿದ್ದರು ಎನ್ನಲಾಗಿದೆ. ವಿಜಯಪುರ ಕಡೆಯಿಂದ ಹುಬ್ಬಳ್ಳಿಗೆ ಬರುತ್ತಿದ್ದಾಗ, ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಬಸಕ್ಕೆ ಕಾರಿನಲ್ಲಿದ್ದ 5 ಜನ ಸ್ಥಳದಲ್ಲೇ ಸಾವು ಸಾವನಪ್ಪಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.