ಭೂ ದಾಖಲೆಗಳು ಕಂದಾಯ ಆಡಳಿತದ ಮುಖ್ಯ ಭಾಗವಾಗಿದ್ದು, ಅನೇಕ ದಶಕಗಳವರೆಗೆ ಇರುವ ಭೂ ದಾಖಲೆಗಳು ಒಂದು ನಿರ್ದಿಷ್ಟ ಭೂಮಿಯ ಮೇಲೆ ನಡೆದ ವ್ಯವಹಾರಗಳ ಇತಿಹಾಸದ ಪ್ರಮುಖ ಕೊಂಡಿಯಾಗಿದೆ. ದೀರ್ಘಾವಧಿಯ ವರೆಗೆ ಈ ದಾಖಲೆಗಳ ಸರಿಯಾದ ನಿರ್ವಹಣೆ ಮತ್ತು ಸಂರಕ್ಷಣೆ ಮಾಡುವುದು ಅತ್ಯಗತ್ಯವಾಗಿದ್ದು, ಭೂ ಸುರಕ್ಷಾ ಯೋಜನೆಯ ಮೂಲಕ ಭೂದಾಖಲೆಗಳನ್ನು ಸಂರಕ್ಷಿಸಿ ಅದನ್ನು ತ್ವರಿತವಾಗಿ ಪಡೆಯಲು ಸಾಧ್ಯವಾಗಲಿದೆ. ಈ ಭೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಭೂಸುರಕ್ಷಾ ತಂತ್ರಾಂಶದಲ್ಲಿ ಇಂಡೆಕ್ಸಿಂಗ್ ಹಾಗೂ ಕ್ಯಾಟಲಾಗಿಂಗ್ ಮಾಡಿ ಅಪಲೋಡ್ ಮಾಡಲಾಗುವ ಕಾರ್ಯದಲ್ಲಿ ನಾನ್ ಪೈಲಟ್ ತಾಲೂಕುಗಳ ಪೈಕಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕು ಇಡೀ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ. ತಹಶೀಲ್ದಾರ ಕಚೇರಿಯ ಅಭಿಲೇಖಾಲಯದಲ್ಲಿರುವ ಎ ಮತ್ತು ಬಿ ವರ್ಗದ (ಎ ವರ್ಗದ ದಾಖಲೆಗಳು ಶಾಶ್ವತವಾಗಿರುತ್ತದೆ ಹಾಗೂ ಬಿ ವರ್ಗದ ದಾಖಲೆಗಳು 30 ವರ್ಷಗಳ ಕಾಲ ಸಂರಕ್ಷಿಸಲ್ಪಡುತ್ತದೆ.) ದಾಖಲೆಗಳಾದ ಕೈಬರಹ ಪಹಣಿ ,ಮ್ಯುಟೇಶನ್ ವಹಿ, ಭೂಮಂಜೂರಾತಿ ಕಡತಗಳು, ಭೂಪರಿವರ್ತನೆ ಕಡತಗಳು, ಭೂಸುಧಾರಣೆ ಕಡತಗಳನ್ನು ನವೀನ ತಂತ್ರಜ್ಞಾನ...
Top Stories
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!
ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಕಾರವಾರ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯಾದ್ಯಂತ ಏಪ್ರಿಲ್ 1 ರಿಂದ ಜೂನ್ 30 ರ ವರೆಗೆ ಸ್ತ್ರೀ ಚೇತನ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ಯೋಜನೆಯಡಿ ಮಹಿಳೆಯರಿಗಾಗಿ ವಿಶೇಷ ಸವಲತ್ತು ಮತ್ತು ಅವಕಾಶಗಳನ್ನು ನೀಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಈ ಅಭಿಯಾನದಲ್ಲಿ ಭಾಗವಹಿಸುವಂತೆ ಜಿಲ್ಲಾ ಐಇಸಿ ಸಂಯೋಜಕ ಕಿರಣ ಜೋತೆಪ್ಪನವರ ಹೇಳಿದರು. ಕಾರವಾರ ತಾಲೂಕಿನ ಆಮದಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ವೆ ನಂ. 329ರಲ್ಲಿ ಬಾಳೆಮಡ್ಡಿ ಹಳ್ಳ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ನಡೆದ ಸ್ತ್ರೀ ಚೇತನ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು. ಮನರೇಗಾ ಯೋಜನೆಯಡಿ ಮಹಿಳೆಯರಿಗೆ ಪುರುಷರಷ್ಟೇ ಸಮಾನ ವೇತನವನ್ನು ನೀಡುವುದಲ್ಲದೇ ಮಹಿಳೆಯರಿಗೆ ಪ್ರಥಮ ಆದ್ಯತೆಯಲ್ಲಿ ಕೆಲಸ ನೀಡಲಾಗುತ್ತಿದೆ. ಏಪ್ರಿಲ್ 01 ರಿಂದ ಅನ್ವಯವಾಗುವಂತೆ ಕೂಲಿ ಮೊತ್ತವನ್ನು ರೂ. 349 ರಿಂದ ರೂ. 370ಕ್ಕೆ ಹೆಚ್ಚಳ ಮಾಡಲಾಗಿದೆ. ಜೊತೆಗೆ ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಕಾರಣ ಕೂಲಿಕಾರರ ಆರೋಗ್ಯ ಹಿತದೃಷ್ಟಿಯಿಂದ ಏಪ್ರಿಲ್ ಮತ್ತು...
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26 ನೇ ಸಾಲಿಗೆ ಕುಸ್ತಿ (ಬಾಲಕರು/ಬಾಲಕಿಯರು),ಅರ್ಚರಿ (ಬಾಲಕರು) ಫೆನ್ಸಿಂಗ್(ಬಾಲಕರು), ಬಾಕ್ಸಿಂಗ್ (ಬಾಲಕರು/ಬಾಲಕಿಯರು) ಕ್ರೀಡೆಗಳಿಗೆ ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪರಿಶಿಷ್ಟ ಪಂಗಡದ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಏ.14 ರಂದು ಯಲ್ಲಾಪುರ ತಾಲೂಕು ಕ್ರೀಡಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಸಲಾಗಿದೆ. ಭಾಗವಹಿಸುವ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳು 2025-26 ನೇ ಸಾಲಿಗೆ 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ ಗೆ ಅರ್ಹತೆ ಪಡೆದಿರಬೇಕು ಜೂನ್ 1 ಕ್ಕೆ 14 ವರ್ಷ(8 ನೇ ತರಗತಿ)ಮತ್ತು (ಪ್ರಥಮ ಪಿ.ಯು.ಸಿ) ಮೀರಿರಬಾರದು. ಜನನ ಪ್ರಮಾಣ ಪತ್ರ, ವ್ಯಾಸಂಗ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ಪೋಟ್ ಸೈಜ್ ಫೋಟೋ ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯ್ಕ ಮೊ.ಸಂ:78991404699, ಕುಸ್ತಿ ತರಬೇತುದಾರರಾದ ಶಿವಾನಂದ ಆರ್ ಮೊ.ಸಂ:7019565606, ತುಕರಾಮ ಗೌಡ ಮೊ.ಸಂ: 9945489193, ಅರ್ಚರಿ ತರಬೇತಿದಾರ ರಾಘು...
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ 12 ವರ್ಷ ಮೇಲ್ಪಟ್ಟ ಬಾಲಕ/ಬಾಲಕೀಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ-2025 ನ್ನು ಏ.15 ರಿಂದ ಏ.29 ರವರೆಗೆ ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 8.30 ಗಂಟೆಯವರೆಗೆ ಶಿರಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಶಿಬಿರದಲ್ಲಿ ಭಾಗವಹಿಸಲು ನೋಂದಣಿಗೆ ಏ.14 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಥ್ಲೆಟಿಕ್ ತರಬೇತಿದಾರ ಶಿವಾನಂದ ನಾಯ್ಕ ಮೊ. ಸಂಖ್ಯೆ: 8722516856 ನ್ನು ಸಂಪರ್ಕಿಸುವAತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಕಾರವಾರ: ಜಿಲ್ಲಾಡಳಿತ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಪ್ರವಾಸೋದ್ಯಮ ಇಲಾಖೆ ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭವು ಏ.12 ಮತ್ತು 13 ರಂದು ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆಯಲಿದೆ. ಕದಂಬೋತ್ಸವ-2025 ರ ಉದ್ಘಾಟನೆಯನ್ನು,ಏ.12 ರಂದು ಸಂಜೆ 5 ಗಂಟೆಗೆ ಬನವಾಸಿಯ ಮಯೂರ ವರ್ಮ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಯಲ್ಲಾಪುರ- ಮುಂಡಗೋಡ ಶಾಸಕ ಶಿವರಾಮ ಹೆಬ್ಬಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವ ಎಚ್.ಕೆ. ಪಾಟೀಲ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು...
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2024-25ನೇ ಸಾಲಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯದಿಂದ ಜಿಲ್ಲೆಗೆ ನೀಡಿದ ನಿಗಧಿತ ಮಾನವ ದಿನಗಳನ್ನು ಸೃಜಿಸುವ ಕಾರ್ಯದಲ್ಲಿ ಶೇ.100 ರಷ್ಟು ಸಾಧನೆ ಮಾಡಿದ್ದು, 2023-24 ರ ಅವಧಿಯಲ್ಲೂ ಸಹ ಶೇ.100 ಸಾಧನೆ ಮಾಡಿದ್ದು, ಸತತ ಎರಡನೇ ವರ್ಷವೂ ಗುರಿ ಸಾಧಿಸುವ ಮೂಲಕ ವಿಶೇಷ ಸಾಧನೆ ಮಾಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 17 ಲಕ್ಷ ಮಾನವ ದಿನಗಳನ್ನು ಸೃಜಿಸುವ ಗುರಿ ನೀಡಲಾಗಿದ್ದು, ಈ ಗುರಿಗೆ ಎದುರಾಗಿ ಒಟ್ಟೂ 17.46 ಲಕ್ಷ ಮಾನವ ದಿನಗಳನ್ನು ಸೃಜಿಸುವ ಮೂಲಕ ಶೇ. 102.73 ರಷ್ಟ್ಟು ಸಾಧನೆ ಮಾಡಲಾಗಿದ್ದು, ಕಳೆದ 2023-24 ನೇ ಸಾಲಿನಲ್ಲಿ 18 ಲಕ್ಷ ಮಾನವ ದಿನಗಳನ್ನು ಸೃಜಿಸುವ ಗುರಿಗೆ ಎದುರಾಗಿ ಒಟ್ಟೂ 18.29 ಲಕ್ಷ ಮಾನವ ದಿನಗಳನ್ನು ಸೃಜಿಸುವ ಮೂಲಕ ಶೇ. 101.61 ರಷ್ಟ್ಟು ಸಾಧನೆ...
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮುಂಡಗೋಡ ಪಟ್ಟಣದಲ್ಲಿ ಭಾರಿ ಮಳೆ ಗಾಳಿಗೆ ಇನ್ನಿಲ್ಲದ ಅವಾಂತರಗಳು, ಅವಘಡಗಳು ಸಂಭವಿಸಿವೆ. ಪಟ್ಟಣದ ಬಂಕಾಪುರ ರಸ್ತೆಯ PLD ಬ್ಯಾಂಕ್ ಹತ್ತಿರದ ಮೊಬೈಲ್ ಟವರ್ ಮಳೆ ಗಾಳಿಗೆ ಬಿದ್ದಿದೆ. ಅಲ್ದೆ ಹಲವು ಮನೆಗಳಿಗೆ ಹಾನಿಯಾಗಿದೆ. ಆದ್ರೆ, ಖಚಿತ ಮಾಹಿತಿಗಳು ಇನ್ನಷ್ಟೆ ಬರಬೇಕಿದೆ. PLD ಬ್ಯಾಂಕ್ ಪಕ್ಕದಲ್ಲಿರುವ ಮೊಬೈಲ್ ಟವರ್ ಮಳೆಗಾಳಿಗೆ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಇನ್ನು ಇದ್ರಂತೆ ಪಟ್ಟಣದ ನೆಹರು ನಗರ, ಗಾಂಧಿನಗರದಲ್ಲಿ ಹಲವು ಮನೆಗಳ ಮೇಲ್ಚಾವಣಿಗಳು ಮಳೆಗಾಳಿಗೆ ಹಾರಿಹೋಗಿವೆ. ಅಲ್ದೆ, ಮರಗಳು ಮನೆಗಳ ಮೇಲೆ ಬಿದ್ದು ಹಾನಿಯಾಗಿದೆ.
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ಮುಂಡಗೋಡ ತಾಲೂಕಿನ ಕೆಲವು ಕಡೆ ಸಂಜೆ ಭಾರಿ ಮಳೆ ಗಾಳಿಗೆ ಅವಾಂತರಗಳು ಸೃಷ್ಠಿಯಾಗಿವೆ. ಭಾರೀ ಮಳೆ ಗಾಳಿಗೆ ಶಿರಸಿ ರಸ್ತೆಯ ಸಾಲಗಾಂವ್ ಸಮೀಪ ಬೃಹತ್ ಮಾವಿನ ಮರ ರಸ್ತೆ ಮೇಲೆ ಬಿದ್ದಿದೆ. ಪರಿಣಾಮ ರಸ್ತೆ ಸಂಚಾರ ಕಳೆದ ಒಂದು ಗಂಟೆಯಿಂದ ಸ್ಥಗಿತಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.. ಮಳೆ ಗಾಳಿಗೆ ರಸ್ತೆ ಮೇಲೆಯೇ ಧರೆಗುರುಳಿರೋ ಮರದ ತೆರವು ಮಾಡಬೇಕಿದೆ. ರಸ್ತೆ ಸಂಚಾರ ಸುಗಮಗೊಳಿಸವೇಕಿದೆ ಅಂತಾ ವಾಹನ ಸವಾರರು ಪರದಾಡುತ್ತಿದ್ದಾರೆ.
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ತಾಲೂಕಿನ ಕಾತೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಂದಿಪುರದಲ್ಲಿ ಮತ್ತೊಂದು ವಿದ್ಯುತ್ ದುರಂತ ಸಂಭವಿಸಿದೆ. ಅನಧೀಕೃತವಾಗಿ ವಿದ್ಯುತ್ ಕಂಬಕ್ಕೆ ವೈಯರ್ ಮೂಲಕ ಸಂಪರ್ಕ ಪಡೆದಿದ್ದ ಸಂದರ್ಭದಲ್ಲಿ ಕಟ್ ಆಗಿ ಬಿದ್ದಿದ್ದ ವೈಯರ್ ತುಳಿದು, 60 ವರ್ಷದ ವ್ಯಕ್ತಿಯೊಬ್ಬ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ನಂದಿಪುರದ ಶಿವಪ್ಪ ನಾಗಪ್ಪ ವಡ್ಡರ್ (60) ವಿದ್ಯುತ್ ಆಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ನಿನ್ನೆ ಬೆಳಿಗ್ಗೆ ಮನೆಯಿಂದ ಗದ್ದೆಗೆ ತೆರಳಿದ್ದ. ಆದ್ರೆ, ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಗದ್ದೆಗೆ ಹೋಗಿ ಹುಡುಕಾಡಿದ್ದಾರೆ. ಆ ವೇಳೆ ಆ ವ್ಯಕ್ತಿಯ ಶವವಾಗಿ ದೊರೆತಿದ್ದು, ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾನೆ. ಅಂದಹಾಗೆ, ಪಕ್ಕದ ಗದ್ದೆಯ ಮೋಹನ್ ಸಹದೇವಪ್ಪ ಪಾಟೀಲ್ ಎಂಬುವವರು, ತಮ್ಮ ಬೋರವೆಲ್ ಗೆ ವಿದ್ಯುತ್ ಸಂಪರ್ಕ ಕಲ್ಪಸಲಿಸಲು, ಮೃತ ವ್ಯಕ್ತಿಯ ಗದ್ದೆಯಲ್ಲಿರೋ ವಿದ್ಯುತ್ ಕಂಬದಿಂದ ಅನಧೀಕೃತವಾಗಿ ವೈಯರ್ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡಿದ್ದ ಎನ್ನಲಾಗಿದೆ. ಹಾಗೆ ಸಂಪರ್ಕ ಕಲ್ಪಿಸಿಕೊಂಡಿದ್ದ ವೈಯರ್ ತುಂಡಾಗಿದ್ದು, ಅದರಲ್ಲಿ ವಿದ್ಯುತ್ ಪ್ರವಹಿಸಿದೆ. ಈ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. KSRTC ಬಸ್ ನಿಲ್ದಾಣದ ಎದುರಲ್ಲೇ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಓರ್ವ ಆರೋಪಿ ವಶಕ್ಕೆ ಸಿಕ್ಕಿದ್ದು, ಮೂವರು ಎಸ್ಕೇಪ್ ಆಗಿದ್ದಾರೆ. ಅಂದಹಾಗೆ, ಮುಂಡಗೋಡ KSRTC ಬಸ್ ನಿಲ್ದಾಣದ ಎದುರು,ಸಾರ್ವಜನಿಕ ಸ್ಥಳದಲ್ಲಿ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಹೀಗಿದ್ದಾಗ, ಖಚಿತ ಮಾಹಿತಿ ಪಡೆದ ಪೊಲೀಸ್ರು ದಾಳಿ ನಡೆಸಿದ್ದಾರೆ. ಪರಿಣಾಮ, ಮುಂಡಗೋಡ ಅಂಬೇಡ್ಕರ್ ಓಣಿಯ ಮಂಜುನಾಥ ನಾಗಪ್ಪ ಕೊರವರ(33), ಆನಂದನಗರದ ವೆಂಕಟೇಶ ಅಶೋಕ ಅರಿವಾಣ(32) ಗದಗ ಮೂಲದ ಮಂಜುನಾಥ ಬೈಲಪ್ಪ ಆಸಂಗಿ(30) ಹಾಗೂ ಮುಂಡಗೋಡ ತಾಲೂಕಿನ ಚಿಗಳ್ಳಿಯ ಹರೀಶ ದೇವಿಂದ್ರಪ್ಪ ಬಾಳೆಮ್ಮನವರ(28) ಎಂಬುವವರೇ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪಿಗಳಾಗಿದ್ದು, ಇದ್ರಲ್ಲಿ ಮುಂಡಗೋಡ ಅಂಬೇಡ್ಕರ್ ಓಣಿಯ ಮಂಜುನಾಥ ನಾಗಪ್ಪ ಕೊರವರ(33) ಮಾತ್ರ ಸಿಕ್ಕಿದ್ದು, ಉಳಿದವರು ಪರಾರಿಯಾಗಿದ್ದಾರೆ ಅಂತಾ ಪೊಲೀಸರು ಮಾಹಿತಿ ನೀಡಿದ್ದಾರೆ. ಸಿಕ್ಕ ಆರೋಪಿಯನ್ನು ಜಪ್ತಿ ಮಾಡಿದಾಗ ನಗದು ಹಣ 2300/-ರೂ, ಲಾವಾ ಕಂಪನಿಯ ಕೀಪ್ಯಾಡ್ ಮೋಬೈಲ್ ಮತ್ತು ಕ್ರಿಕೇಟ್...