ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟ ಇಂದು ಸಿಡಿದೆದ್ದಿದ್ದವು. ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಡಾ.ಅಂಬೇಡ್ಕರರಿಗೆ ಅವಮಾನ ಮಾಡಿರೋ ಹಿನ್ನೆಲೆಯಲ್ಲಿ ಆ ನ್ಯಾಯಾಧೀಶರನ್ನು ವಜಾ ಮಾಡುವಂತೆ ಆಗ್ರಹಿಸಿ ಪ್ರತಿಭಟಿಸಿದ್ರು. ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡಾ ರವರ ಪ್ರತಿಕೃತಿ ದಹಿಸಿ ಆಕ್ರೊಶ ಹೊರಹಾಕಿದ್ರು. ಈ ವೇಳೆ ದಲಿತ ಸಂಘಟನೆಗಳು ತಾಲೂಕಿನ ಬಹುತೇಕ ಎಲ್ಲಾ ಮುಖಂಡರು ಹಾಜರಿದ್ದರು.
Top Stories
ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!
ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು, ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರ ಫೈರಿಂಗ್..!
ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..? ಯಾರ ಭಯವೂ ಇಲ್ಲದೇ ಹೋಯ್ತಾ..?
ಮೀನುಗಾರರ ಸಂಕಷ್ಟ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ :ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!
ಹಾನಗಲ್ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ವಿಧಿವಶ..!
ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಅಂಶುಕುಮಾರ್ ಪ್ರಕಟಣೆ
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಅಂಬೇಡ್ಕರರಿಗೆ ಅವಮಾನ ಹಿನ್ನೆಲೆ: ಮುಂಡಗೋಡಿನಲ್ಲಿ ನ್ಯಾಯಾಧೀಶರ ಪ್ರತಿಕೃತಿ ದಹಿಸಿ ಆಕ್ರೋಶ..!
ಹುನಗುಂದ ರೈತರ ಜಮೀನುಗಳಿಗೆ ರಸ್ತೆಯ ಸಮಸ್ಯೆ, ಅಧಿಕಾರಿಗಳ ಭೇಟಿ..!
ಹುನಗುಂದ ರೈತರ ಜಮೀನುಗಳಿಗೆ ರಸ್ತೆಯ ಸಮಸ್ಯೆ, ಅಧಿಕಾರಿಗಳ ಭೇಟಿ..! ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ರೈತರ ಜಮೀನುಗಳಿಗೆ ಹೋಗಲು ಶಾಶ್ವತ ರಸ್ತೆಯ ಸಮಸ್ಯೆ ಎದುರಾಗಿದೆ. ಹೀಗಾಗಿ ತಹಶೀಲ್ದಾರ ಕಾರ್ಯಾಲಯಕ್ಕೆ ಗ್ರಾಮದ ರೈತರು ಮನವಿ ಸಲ್ಲಿಸಿರೊ ಹಿನ್ನೆಲೆಯಲ್ಲಿ, ಇಂದು ಹುನಗುಂದ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿ ರಸ್ತೆಯ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದ್ರು. ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿ ಸ್ಥಳ ಪರಿಶೀಲನೆ ಮಾಡಿ ರೈತರೊಂದಿಗೆ ಚರ್ಚಿಸಿದ್ರು. ಸದ್ಯ ಕಬ್ಬಿನ ಕಟಾವು ಮಾಡಿ ಕಬ್ಬು ಸಾಗಿಸಲು ರಸ್ತೆಯ ಸಮಸ್ಯೆ ಎದುರಾಗಿದ್ದು ರೈತರು ಸಮಸ್ಯೆಯಲ್ಲಿದ್ದಾರೆ. ಹೀಗಾಗಿ ರೈತರಿಗೆ ಶೀಘ್ರವಾಗಿ ರಸ್ತೆಯ ವ್ಯವಸ್ಥೆ ಮಾಡಿಕೊಡಬೇಕಿದೆ.
ಮುಂಡಗೋಡಿನಲ್ಲಿ ಅನಾರೋಗ್ಯಕ್ಕೀಡಾಗಿ ಬಳಲುತ್ತಿದ್ದ ಕರು ರಕ್ಷಿಸಿದ ಯುವಕರು..!
ಮುಂಡಗೋಡಿನಲ್ಲಿ ಅನಾರೋಗ್ಯಕ್ಕೀಡಾಗಿ ಬಳಲುತ್ತಿದ್ದ ಕರು ರಕ್ಷಿಸಿದ ಯುವಕರು..! ಮುಂಡಗೋಡ: ಪಟ್ಟಣದ ಶಿವಾಜಿ ವೃತ್ತದಲ್ಲಿ ತೀವ್ರ ಅನಾರೋಗ್ಯಕ್ಕೀಡಾಗಿ ಅಸ್ವಸ್ಥಗೊಂಡು ಬಿದ್ದು ಒದ್ದಾಡುತ್ತಿದ್ದ ಆಕಳ ಕರುವನ್ನು ಯುವಕರು ಆರೈಕೆ ಮಾಡಿದ್ದಾರೆ. ಬಿಸಿಲಿನ ತಾಪಕ್ಕೆ ಬಸವಳಿದಿದ್ದ ಕರುವಿಗೆ ಪಶುವೈದ್ಯರನ್ನು ಕರೆಯಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ವೇಳೆ ತನ್ನ ಕಂದನಿಗೆ ತೀವ್ರ ಅನಾರೋಗ್ಯವಾಗಿದೆ ಅಂದು ಅರಿತ ಆಕಳು ಕರುವಿಗಾಗಿ ಗೋಳಾಡುತ್ತಿದ್ದ ದೃಷ್ಯ ಕಂಡು ಬಂತು.. ಈ ವೇಳೆ ಯುವಕರ ಮಾನವೀಯ ಕಾರ್ಯ ಸಾರ್ವಜನಿಕರ ಶ್ಲಾಘನೆಗೆ ಕಾರಣವಾಗಿದೆ.
ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು..!
ಬೆಂಗಳೂರು : ಕರ್ನಾಟಕದ ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಅಂತಾ ತಿಳಿದು ಬಂದಿದೆ. ಬಿಎಸ್ ಯಡಿಯೂರಪ್ಪ ಅವರ ಎರಡನೇ ಪುತ್ರಿ ಪದ್ಮಾವತಿಯವರ ಮಗಳು ಸೌಂದರ್ಯ(30) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದ ಸೌಂದರ್ಯ ಅವರ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮತ್ತೆ ಕೊರೋನಾ ಅಟ್ಟಹಾಸ, ತಾಲೂಕಿನಲ್ಲಿ ಇಂದಿನ ಪಾಸಿಟಿವ್ ಕೇಸ್ ಎಷ್ಟು..? ವಿದ್ಯಾರ್ಥಿಗಳ ಪಾಲು ಎಷ್ಟು..!
ಮುಂಡಗೋಡ: ತಾಲೂಕಿನಲ್ಲಿ ಶುಕ್ರವಾರ ಕೊರೋನಾ ಮತ್ತೆ ಅಟ್ಟಹಾಸ ಮೆರೆದಿದೆ. ಇಂದು ಬರೋಬ್ಬರಿ 138 ಪಾಸಿಟಿವ್ ದೃಢ ಪಟ್ಟಿದೆ. ಅಚ್ಚರಿಯ ಸಂಗತಿಯೆಂದ್ರೆ, ಇಂದಿನ ಪ್ರಕರಣಗಳ ಸಂಖ್ಯೆಯಲ್ಲಿ ಬಹುಪಾಲು ವಿದ್ಯಾರ್ಥಿಗಳದ್ದೇ ಆಗಿದೆ. ಇಂದು ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ಅತಿಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದೊಂದೇ ಕಾಲೇಜಿನಲ್ಲಿ ಬರೋಬ್ಬರಿ 27 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಅದ್ರಂತೆ ಇನ್ನು ಹಲವು ಶಾಲೆಗಳು, ಕಾಲೇಜುಗಳಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು ಪಾಲಕರಿಗೆ ಆತಂಕ ತಂದಿಟ್ಟಿದೆ. ಇನ್ನು, ತಾಲೂಕಿನ ಬಹುತೇಕ ಶಾಲೆಗಳಲ್ಲಿ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿಯೊಂದೂ ಶಾಲೆಗಳಲ್ಲೂ ಹಿಂಡು ಹಿಂಡು ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ, ತಾಲೂಕಿನಲ್ಲಿ ಕೆಲವು ಶಾಲೆಗಳಿಗೆ ಈಗಾಗಲೇ ರಜೆ ಘೋಷಣೆ ಮಾಡಲಾಗಿದೆ.
ಮುಂಡಗೋಡಿನಲ್ಲಿ ಸಿ.ಎಸ್.ಸಿ ಸೆಂಟರ್ ಓಪನ್..!
ಮುಂಡಗೋಡಿನಲ್ಲಿ ಸಿ.ಎಸ್.ಸಿ ಸೆಂಟರ್ ಓಪನ್..! ಮುಂಡಗೋಡ: ಪಟ್ಟಣದ ನೆಹರು ನಗರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮುಂಡಗೋಡದ ಕಾರ್ಯಕ್ಷೇತ್ರದಲ್ಲಿ ಗುರುವಾರ ಸಿ.ಎಸ್.ಸಿ ಸೆಂಟರ್ ಉದ್ಘಾಟಿಸಲಾಯಿತು.
ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕಕ್ಕೆ ವಿರೋಧ, ತಹಶೀಲ್ದಾರರಿಗೆ ಮನವಿ..!
ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕಕ್ಕೆ ವಿರೋಧ, ತಹಶೀಲ್ದಾರರಿಗೆ ಮನವಿ..! ಮುಂಡಗೋಡ: ತಾಲೂಕಿನ ಹನುಮಾಪುರ ಕಾಳಿಕಾದೇವಿ ಮಠದ ಉತ್ತರಾಧಿಕಾರಿ ನೇಮಕ ವಿಚಾರದಲ್ಲಿ ವಿರೋಧ ವ್ಯಕ್ತ ಪಡಿಸಿ ಭಕ್ತರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ರು. ಮಠದಲ್ಲಿ ಭಾರೀ ಅವ್ಯವಹಾರದ ವಾಸನೆ ಬರ್ತಿದೆ. ಮಠದ ಆಸ್ತಿ ಕಬಳಿಸಲು ಹುನ್ನಾರ ನಡೀತಿದೆ. ಉತ್ತರಾಧಿಕಾರಿ ಮಠದ ಹಣ, ಒಡವೆ ಕದ್ದುಕೊಂಡು ರಾತ್ರೊ ರಾತ್ರಿ ನಾಪತ್ತೆಯಾಗಿದ್ದಾರೆ. ಅವರ ಕುರಿತು ಈಗಾಗಲೇ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಮುಂದಾದಾಗ ರಾಜಕೀಯ ಒತ್ತಡದಿಂದ ಕೇಸು ದಾಖಲಾಗದಂತೆ ನೋಡಿಕೊಂಡಿದ್ದಾರೆ. ಹಿಗಾಗಿ, ಇದ್ರಲ್ಲಿ ಫೀಠಾಧಿಪತಿಗಳು ಉತ್ತರಾಧಿಕಾರಿಗಳ ನೇಮಕ ಮಾಡೋದನ್ನ ನಾವು ಒಪ್ಪುವುದಿಲ್ಲ. ಅಂತಾ ವಿರೋಧಿಸಿ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ತಹಶೀಲ್ದಾರ ಮೂಲಕ ಮನವಿ ಅರ್ಪಿಸಿದ್ದಾರೆ. ಇನ್ನು ಇದಕ್ಕೂ ಮೊದಲು ಪಟ್ಟಣದ ಬಸವಣ್ಣ ದೇವಸ್ಥಾನದಲ್ಲಿ ಸಭೆ ಸೇರಿದ್ದ ಭಕ್ತರು ಮುಂದಿನ ಹೋರಾಟದ ಬಗ್ಗೆ ಚರ್ಚಿಸಿದ್ರು.
ತಾಲೂಕಿನಲ್ಲಿ ಗುರುವಾರ 64 ಜನರಿಗೆ ಕೋವಿಡ್ ಸೋಂಕು..!
ಮುಂಡಗೋಡ : ತಾಲೂಕಿನಲ್ಲಿ ಗುರುವಾರ 64 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗೆ ಅತೀ ಹೆಚ್ಚು ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಮಳಗಿ ಪಂಚವಟಿಯ ಜವಾಹರ ನವೋದಯ ಶಾಲೆಯ 18 ವಿದ್ಯಾರ್ಥಿಗಳಿಗೆ ಮತ್ತೆ ಸೋಂಕು ದೃಢ ಪಟ್ಟಿದೆ. ಹೀಗಾಗಿ ಮತ್ತೆ ವಿದ್ಯಾರ್ಥಿಗಳಿಗೆ ಆತಂಕ ಶುರುವಾಗಿದೆ. ಅದ್ರಂತೆ, ತಾಲೂಕಿನ ಬಹುತೇಕ ಶಾಲಾ ಕಾಲೇಜುಗಳಲ್ಲೂ ಕೊರೊನಾ ಆತಂಕ ಶುರುವಾಗಿದೆ. ಬಡ್ಡಿಗೇರಿ ಸರಕಾರಿ ಶಾಲೆ, ಲೊಯೋಲಾ ಪಿ.ಯು. ಕಾಲೇಜು, ಕಾತೂರ ಸರಕಾರಿ ಶಾಲೆ, ಲೊಯೋಲಾ ಕೇಂದ್ರೀಯ ವಿದ್ಯಾಲಯ, ಮುರಾರ್ಜಿ ವಸತಿ ಶಾಲೆ ಪಾಳಾ ಉರ್ದು ಹೈಸ್ಕೂಲು ಸೇರಿ ಹಲವು ಶಾಲೆಗಳಲ್ಲಿ ಕೋವಿಡ್ ಸೋಂಕು ಅಟ್ಟಹಾಸ ಮೆರೆದಿದೆ.
ಕೋಡಂಬಿಯಲ್ಲಿ ನಡೆದ ಹೋರಿ ಬೆದರಿಸೋ ಸ್ಪರ್ಧೆ ಆಯೋಜಕರಿಗೆ ಸಂಕಷ್ಟ..! ನಾಲ್ವರು ವಶಕ್ಕೆ..!
ಮುಂಡಗೋಡ: ಉತ್ತರ ಕರ್ನಾಟಕದ ಯುವಕರ ಪಾಲಿನ ರಣರೋಚಕ ಹೋರಿ ಹಬ್ಬಕ್ಕೆ ಮುಂಡಗೋಡ ತಾಲೂಕಿನಲ್ಲಿ ಭಾರೀ ಹಿನ್ನಡೆಯಾಗಿದೆ. ಕೋಡಂಬಿಯಲ್ಲಿ ನಿನ್ನೆ ನಡೆದ ಹೋರಿ ಬೆದರಿಸೋ ಸ್ಪರ್ಧೆಯ ಮೇಲೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಬರೋಬ್ಬರಿ 17 ಜನರ ಮೇಲೆ ಕೇಸು ಜಡೆದಿದ್ದಾರೆ. ಅದ್ರಲ್ಲಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಉಳಿದ 13 ಜನ ಪರಾರಿಯಾಗಿದ್ದಾರೆ. ಅನುಮತಿ ಪಡೆದಿರಲಿಲ್ಲವಾ..? ಕೋಡಂಬಿಯಲ್ಲಿ ನಿನ್ನೆ ಮಂಗಳವಾರ ನಡೆದ “ಹೋರಿ ಬೆದರಿಸುವ ಸ್ಪರ್ಧೆ” ಅಯೋಜಕರಿಗೆ ಸಂಕಷ್ಟ ತಂದೊಡ್ಡಿದೆ. ಕೊರೋನಾ ಸಂಕಷ್ಟದ ನಡುವೆ ಸರ್ಕಾರದ ಯಾವುದೇ ಅನುಮತಿ ಪಡೆಯದೇ, ಸಾಮಾಜಿಕ ಅಂತರ ಪಾಲಿಸದೇ, ಕೊರೋನಾ ನಿಯಮ ಗಾಳಿಗೆ ತೂರಿ ಸ್ಪರ್ಧೆ ಏರ್ಪಡಿಸಿದ್ದಾರೆ ಅಂತಾ ಕೇಸು ದಾಖಲಾಗಿದೆ. ಹಾಗಿದ್ರೆ ಕೋಡಂಬಿ ಹೋರಿ ಸ್ಪರ್ಧೆಯ ಆಯೋಜಕರು ಸ್ಪರ್ಧೆಗೆ ಅನುಮತಿ ಪಡೆದಿರಲಿಲ್ಲವಾ..? ಸಂಕಷ್ಟದ ಸಮಯದಲ್ಲಿ ಯಾಕೆ ಬೇಕಿತ್ತು ಈ ಹುಂಬತನ ಅನ್ನೋ ಪ್ರಶ್ನೆ ಎದುರಾಗಿದೆ. ಯಾರ್ಯಾರ ಮೇಲೆ ಕೇಸ್..? ಕೋಡಂಬಿಯ ಹೋರಿ ಬೆದರಿಸೋ ಸ್ಪರ್ಧೆಯ ರೂವಾರಿಗಳು ಅಂತಾ, ಹಾಲಪ್ಪ ಕೋಡಣ್ಣನವರ್, ಬಸವಂತಪ್ಪ ಪೂಜಾರ್, ಹನ್ಮಂತಪ್ಪ ಪೂಜಾರ್,...
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕಾರಿಗೆ ಗುದ್ದಿದ ಲಾರಿ..!
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕಾರಿಗೆ ಗುದ್ದಿದ ಲಾರಿ..! ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಲಾರಿಯೊಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಹಿಂಬದಿ ಗೆ ಚಿಕ್ಕದಾಗಿ ಹಾನಿಯಾದ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ ಲಾರಿ, ಪಟ್ಟಣದಲ್ಲಿ ಬಂಕಾಪುರ ರಸ್ತೆ ಕಡೆಗೆ ಹೊರಟಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿತ್ತು ಎನ್ನಲಾಗಿದೆ. ಹೀಗಾಗಿ ಡಿಕ್ಕಿ ಹೊಡೆದು ಶಿರಸಿ ರಸ್ತೆ ಕಡೆಗೆ ಹೊರಟಿದ್ದ ಲಾರಿಯನ್ನು ತಡೆದ ಕಾರು ಚಾಲಕ, ಆಗಿರೋ ಹಾನಿ ತುಂಬಿ ಕೊಡುವಂತೆ ಒತ್ತಾಯಿಸಿದ್ದಾನೆ ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.