ಮುಂಡಗೋಡ; ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆ ಅನ್ನೋದು ಇದೆಯಾ ಅಥವಾ ಬೀಗ ಜಡಕೊಂಡು ಎಲ್ಲಾದ್ರೂ ಹಾಳಾಗಿ ಹೋಗಿದೆಯಾ..? ಇಂತಹದ್ದೊಂದು ಪ್ರಶ್ನೆ ಮುಂಡಗೋಡ ತಾಲೂಕಿನ ಮಂದಿ ಕೇಳ್ತಿದಾರೆ. ಯಾಕಂದ್ರೆ ತಾಲೂಕಿನ ಬಹುತೇಕ ರಸ್ತೆಗಳ ಸ್ಥಿತಿ ಹಡಾಲೆದ್ದು ಹೋಗಿದೆ. ಆದ್ರೆ, PWD ಅನ್ನೋ ಇಲಾಖೆಯ ಅಧಿಕಾರಿಗಳು ಮಾತ್ರ ಅದೇಲ್ಲೋ ಹೋಗಿ ಗಡದ್ದಾಗಿ ನಿದ್ದೆ ಮಾಡ್ತಿದಾರೆ. ವಡಗಟ್ಟಾ- ಅಗಡಿ ರಸ್ತೆ ಕತೆ..! ನಿಜ, ಈ ಲೋಕೋಪಯೋಗಿ ಇಲಾಖೆಯ ಅಡಿಯಲ್ಲೇ ಬರುವ ವಡಗಟ್ಟಾ-ಅಗಡಿ ರಸ್ತೆ, ಹುನಗುಂದದ ದೇಶಪಾಂಡೆ ನಗರದ ಹತ್ತಿರ ಹದಗೆಟ್ಟು ಹಳ್ಳ ಹಿಡಿದಿದೆ. ಕಳೆದ ಎರಡು ತಿಂಗಳ ಹಿಂದೆ ಇದೇ, ಲೋಕೋಪಯೋಗಿ ಇಲಾಖೆಯವರ ನಿರ್ಲಕ್ಷದಿಂದ ಬಸವಳಿದಿದ್ದ ಅಲ್ಲಿನ ಜನ ರಸ್ತೆ ಅಗೆದು ಆಕ್ರೋಶ ವ್ಯಕ್ತ ಪಡಿಸಿದ್ರು. ಆದ್ರೆ ಅವಾಗಷ್ಟೇ ಅದ್ಯಾರೋ ಸಿಬ್ಬಂದಿಗಳನ್ನ ಕಳಿಸಿ ತೆಪೆ ಹಾಕಿ ಹೋಗಿದ್ದ ಇಲಾಖೆ, ಅಲ್ಲಿಂದ ಈ ವರೆಗೂ ಇತ್ತ ತಿರುಗಿ ನೋಡಿಯೇ ಇಲ್ಲ. ಕೈಕಾಲು ಮುರಿದು ಕೊಳ್ತಿದಾರೆ..! ಹಾಗೆ, ತೆಪೆ ಹಾಕಿದ್ದ ವಡಗಟ್ಟಾ-ಅಗಡಿ ರಸ್ತೆಯಲ್ಲಿ ನಡೆದಾಡಲೂ ಆಗದ ಸ್ಥಿತಿ ಇದೆ. ನಿತ್ಯವೂ...
Top Stories
ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ, ಮುಂಡಗೋಡ ತಾಲೂಕಾ ತ್ರೈಮಾಸಿಕ ಕೆಡಿಪಿ ಸಭೆ..!
ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಸಮುದ್ರದಲ್ಲಿ ಮುಳುಗಿ ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು..!
ಕುಮಟಾ: ಸಮುದ್ರದಲ್ಲಿ ಮುಳುಗಿ ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳ ಸಾವು ಕಂಡ ಘಟನೆ ತಾಲೂಕಿನ ಬಾಡ ಬೀಚ್ ನಲ್ಲಿ ನಡೆದಿದೆ. ದಾವಣಗೇರೆ ಮೂಲದ ಮೇಘ ಎಂ(24) ಹಾಗೂ ರೇಣುಕಾ ಪ್ರಸಾದ್ (24) ಮೃತ ವಿದ್ಯಾರ್ಥಿಗಳು. ಇಂಜಿನಿಯರಿಂಗ್ ವಿದ್ಯಾಭ್ಯಾಸ ಈ ವರ್ಷ ಮುಗಿದಿತ್ತು. ಹೀಗಾಗಿ, ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಾಗ ದುರ್ಘಟನೆ ನಡೆದಿದೆ. ಮೇಘಾ ಮೃತದೇಹ ಸಿಕ್ಕಿದ್ದು, ರೇಣುಕಾ ಪ್ರಸಾದ್ ದೇಹಕ್ಕಾಗಿ ಹುಡುಕಾಟ ನಡೆಸಲಾಗಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮೊಹರಂ ಹುಲಿವೇಷಧಾರಿ ಹಾಗೂ ತಮಟೆ ಕಲಾವಿದನ ಜುಗಲ್ ಬಂದಿ..!
ಮುಂಡಗೋಡ: ತಾಲೂಕಿನಲ್ಲಿ ಸದ್ಯ ಮೊಹರಂ ಆಚರಣೆ ಭಕ್ತಿ ಭಾವದಿಂದ ನೆರವೇರುತ್ತಿದೆ. ತಾಲೂಕಿನಾಧ್ಯಂತ ಪಂಜಾಗಳನ್ನು ಪ್ರತಿಷ್ಟಾಪಿಸಲಾಗಿದೆ. ಹೀಗಾಗಿ, ಹುಲಿ ವೇಷಧಾರಿಗಳ ಕುಣಿತವೂ ಎಲ್ಲೆಲ್ಲೂ ಕಂಡು ಬರುತ್ತಿದೆ. ಅದ್ರಂತೆ, ಇಂದು ಮುಂಡಗೋಡ ಪಟ್ಟಣದಲ್ಲಿ ಮೊಹರಂ ಹಬ್ಬದ ನಿಮಿತ್ತ ಹುಲಿವೇಷಧಾರಿ ಬಂದಿದ್ದರು. ಅದೇ ಸಂದರ್ಭದಲ್ಲಿ ಹುಬ್ಬಳ್ಳಿಯಿಂದ ಬಂದಿದ್ದ ಪ್ರಸಿದ್ಧ ತಮಟೆ ಕಲಾವಿದ ಪ್ರತಾಪ್ ಅವರು ತಮಟೆ ಬಾರಿಸಿದ್ರು. ತಮಟೆ ಶಬ್ದಕ್ಕೆ ಹುಲಿ ವೇಷಧಾರಿ ಸಕತ್ ಸ್ಟೆಪ್ ಹಾಕಿದ್ರು. ಮುಂಡಗೋಡಿನ ಶಿವಾಜಿ ಸರ್ಕಲ್ ಬಳಿ ಹುಲಿಯ ನೃತ್ಯಕ್ಕೆ ಜನರು ಫಿದಾ ಆಗಿ ಚಪ್ಪಾಳೆ ತಟ್ಟಿದ್ರು.
ಮುಂಡಗೋಡಿನಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಟಾಪನೆ ಮಾಡುವಂತೆ ಮನವಿ..!
ಮುಂಡಗೋಡ: ಪಟ್ಟಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಟಾಪಿಸುವಂತೆ ಇಂದು ಮುಂಡಗೋಡಿನ ರಾಯಣ್ಣ ಅಭಿಮಾನಿ ಬಳಗದಿಂದ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಕಳೆದ ಹಲವು ವರ್ಷಗಳಿಂದ ಪಟ್ಟಣದ ಯಲ್ಲಾಪುರ-ಬಂಕಾಪುರ ರಸ್ತೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಸ್ತೆ ಅಂತಾ ನಾಮಕರಣ ಮಾಡಲಾಗಿದೆ. ಆ ಕುರಿತು ಪಟ್ಟಣ ಪಂಚಾಯತಿಯಲ್ಲಿ ದಾಖಲಾಗಿದೆ. ಆದ್ರೆ ತಾಲೂಕಿನ ಸುಮಾರು 50 ಕಿಮಿ ವ್ಯಾಪ್ತಿಯಲ್ಲಿ ಎಲ್ಲಿಯೂ ರಾಯಣ್ಣನ ಮೂರ್ತಿ ಪ್ರತಿಷ್ಟಾಪನೆಯಾಗಿಲ್ಲ. ಹೀಗಾಗಿ, ಪಟ್ಟಣದ ಕಂಬಾರಗಟ್ಟಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಟಾಪನೆ ಮಾಡಬೇಕು, ಮುಂದಿನ ಪೀಳಿಗೆಗೆ ರಾಯಣ್ಣನವರ ಆದರ್ಶ, ತ್ಯಾಗ ಹಾಗೂ ದೇಶಭಕ್ತಿಯ ಸಂದೇಶ ನೀಡುವಂತಾಗಬೇಕು ಅಂತಾ ರಾಯಣ್ಣನ ಅಭಿಮಾನಿ ಬಳಗ, ತಹಶೀಲ್ದಾರ್ ಶ್ರೀಧರ್ ಮುಂದಲಮನಿಯವರ ಮೂಲಕ ಸಿಎಂ ಗೆ ಮನವಿ ಅರ್ಪಿಸಿದ್ರು. ಈ ವೇಳೆ, ಅರುಣ ಬಜಂತ್ರಿ, ಶಿವಣ್ಣ ಕುಂದರಗಿ, ಅಯ್ಯಪ್ಪ ಬಜಂತ್ರಿ, ಬಸರಾಜ್ ಕುಂದರಗಿ, ಮಂಜುನಾಥ್ ಕುರುಬರ, ಮಂಜುನಾಥ್ ಕಟ್ಟಿಮನಿ, ಕೃಷ್ಣ ಕುಂದರಗಿ, ಪ್ರವೀಣ ಕಳಸಗೇರಿ, ಗುಡ್ಡಪ್ಪ ಸುಣಗಾರ, ರಾಜೇಶ್ ಕ್ಯಾಸಿನಕೆರಿ, ಆಸಿಫ್ ನದಾಫ್, ಸಂಕೇತ ಗೌಡ್ರು ಸೇರಿ...
ಇದು ಮುಂಡಗೋಡ ಪುಟಾಣಿಗಳ ಪವರ್ ಫುಲ್ ಸ್ಟೆಪ್..!
ಮುಂಡಗೋಡ; ಪಟ್ಟಣದಲ್ಲಿ ರವಿವಾರ 75 ನೇ ಸ್ವಾತಂತ್ರ ದಿನಾಚರಣೆ ಸಂಭ್ರಮ ಜೋರಾಗಿತ್ತು.. ಇಲ್ಲಿನ ಪ್ರತೀ ಗಲ್ಲಿಗಳಲ್ಲೂ ಭಾರತ ಮಾತೆಯ ತ್ರಿವರ್ಣಧ್ವಜ ರಾರಾಜಿಸುತ್ತಿತ್ತು.. ಪಟ್ಟಣದ ಸಂಘಸಂಸ್ಥೆಗಳು ವಿಶೇಷವಾಗಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಂಡಿದ್ರು..ಇನ್ನು ಸ್ವಾತಂತ್ರ ದಿನಾಚರಣೆ ನಿಮಿತ್ತ ಮುಂಡಗೋಡಿನ ಪುಟ್ಟ ಪುಟಾಣಿ ಮಕ್ಕಳು ದೇಶಭಕ್ತಿಗೀತೆಗೆ ಹೆಜ್ಜೆ ಹಾಕಿದ್ದಾರೆ.. ಸ್ವಾತಂತ್ರ ಸಂಭ್ರಮದ ಕ್ಷಣಗಳನ್ನು ವಿನೂತನ ಡ್ಯಾನ್ಸ್ ಮಾಡುವ ಮೂಲಕ ದೇಶಭಕ್ತಿಯ ಕಂಪು ಹರಿಸಿದ್ದಾರೆ.. ಹಾಗಾದ್ರೆ ಆ ಸಕತ್ ಸ್ಟೆಪ್ ಹೇಗಿದೆ ಗೊತ್ತಾ.. ನೀವೂ ನೋಡಿ..
ಕಲಘಟಗಿಯಲ್ಲಿ 2 ಕಿಮೀ ಉದ್ದದ ರಾಷ್ಟ್ರಧ್ವಜದ ಮೆರವಣಿಗೆ, ಸಂತೋಷ ಲಾಡ್ ನೇತೃತ್ವ..!
ಕಲಘಟಗಿ: ಕೋವಿಡ್ ಆತಂಕದ ನಡುವೆಯೇ ಕಲಘಟಗಿಯಲ್ಲಿ ಅದ್ದೂರಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಯಿತು. ಮಾಜಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ 2 ಕಿಮೀ ಉದ್ದದ 9 ಅಡಿ ಅಗಲ ಇರುವ ರಾಷ್ಟ್ರಧ್ವಜದ ಮೆರವಣಿಗೆ ನಡೆಯಿತು. ಮೆರವಣಿಗೆ ವೇಳೆ ಸಾವಿರಾರು ಜನರಿಂದ ರಾಷ್ಟ್ರಭಕ್ತಿಯ ಘೋಷಣೆಗಳು ಮೊಳಗಿದವು. ದೇಶಭಕ್ತಿಯ ಗೀತೆಗಳ ಮೂಲಕ, ಘೋಷಣೆ ಗಳ ಮೂಲಕ ವಿಶೇಷ ರಾಷ್ಟ್ರಧ್ವಜದ ಮೆರವಣಿಗೆ ನಡೆಸಲಾಯಿತು.
ಮುಂಡಗೋಡಿನಲ್ಲಿ ಸಂಗೊಳ್ಳಿ ರಾಯಣ್ಣನ ಜನ್ಮದಿನದ ಸಂಭ್ರಮ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ರಾಯಣ್ಣ ಅಭಿಮಾನಿಗಳ ಸಂಘದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜನ್ಮ ದಿನ ಆಚರಿಸಲಾಯಿತು. ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ವಿಶೇಷವಾಗಿ ಪೂಜೆ ಸಲ್ಲಿಸುವ ಮೂಲಕ ರಾಯಣ್ಣನವರ ಶೌರ್ಯ ಹಾಗೂ ಬಲಿದಾನವನ್ನು ಸ್ಮರಿಸಲಾಯಿತು. ರಾಯಣ್ಣನವರ ಪರವಾಗಿ ಘೋಷಣೆ ಕೂಗಿ ಅಭಿಮಾನಿಗಳು ಸಂಭ್ರಮಿಸಿದ್ರು.
ಹುನಗುಂದದಲ್ಲಿ ರಾಯಣ್ಣ ಬಾಯ್ಸ್ ನಿಂದ ಸಂಭ್ರಮದ ಧ್ವಜಾರೋಹಣ..!
ಮುಂಡಗೋಡ; ತಾಲೂಕಿನ ಹುನಗುಂದ ಗ್ರಾಮದಲ್ಲಿ ರಾಯಣ್ಣ ಬಾಯ್ಸ್ ವತಿಯಿಂದ ಸಂಭ್ರಮದ ಧ್ವಜಾರೋಹಣ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನವರ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದ್ರು. ಹುನಗುಂದದ ಮುಖ್ಯ ಸರ್ಕಲ್ ನಲ್ಲಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಲಾಯಿತು. ಅಲ್ದೇ ಸರ್ಕಲ್ ನಲ್ಲಿ ಇರುವ ಧ್ವಜಸ್ತಂಭದ ಮೇಲೆ ಭಗವಾ ಧ್ವಜವನ್ನೂ ಹಾರಿಸಲಾಯಿತು. ಈ ವೇಳೆ ಗ್ರಾಮದ ರಾಯಣ್ಣ ಬಾಯ್ಸ್ ಸೇರಿದಂತೆ ಹಲವರು ಭಾಗಿಯಾಗಿದ್ರು.
ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು..!
ಹಾನಗಲ್: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಸ್ಥಳದಲ್ಲೆ ಇಬ್ಬರು ಬೈಕ್ ಸವಾರರು ಸಾವಿಗೀಡಾದ ಘಟನೆ, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹುಣಸಿಕಟ್ಟಿ ಕ್ರಾಸ್ ಬಳಿ ಶುಕ್ರವಾರ ಸಂಜೆ ನಡೆದಿದೆ. ಚೇತನ್ ಈಳಗೇರ್ (32) ಹಾಗೂ ಸುರೇಶ್ ಚಕ್ರಸಾಲಿ (33) ಮೃತ ಬೈಕ್ ಸವಾರರು. ಮೃತರಿಬ್ಬರೂ ಹಾನಗಲ್ ತಾಲೂಕಿನ ಬೆಳಗಾಲಪೇಟೆಯ ನಿವಾಸಿಗಳು ಎನ್ನಲಾಗಿದೆ. ಹಾನಗಲ್ ನಿಂದ ಸ್ವಗ್ರಾಮ ಬೆಳೆಗಾಲಪೇಟೆ ಗೆ ಹೋಗುವಾಗ ದುರಂತ ನಡೆದಿದೆ. ಅಪಘಾತ ತೀವ್ರತೆಗೆ ದೇಹಗಳು ಚಿದ್ರಗೊಂಡಿದ್ದು, ರಕ್ತಸ್ರಾವವಾಗಿ ಸ್ಥಳದಲ್ಲೆ ಸಾವು ಕಂಡಿದ್ದಾರೆ. ಸ್ಥಳಕ್ಕೆ ಹಾನಗಲ್ ಪೋಲಿಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಾನಗಲ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಭಲೇ ಬಹಾದ್ದೂರ್..! ಒಂದೇ ನಿಮಿಷದಲ್ಲಿ 100 ಅಡಿ ದೂರ ಟ್ರಾಕ್ಟರ್ ಎಳೆದ ಪೈಲ್ವಾನ್..!
ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದಲ್ಲಿ ಇಂದು ನಾಗರ ಪಂಚಮಿ ಪ್ರಯುಕ್ತ ಖಾಲಿ ಟ್ರಾಕ್ಟರ್ ಇಂಜಿನ್ ಎಳೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಯಲ್ಲಪ್ಪ ಫಕ್ಕೀರಪ್ಪ ತುಳಜಾನವರ್ ಎಂಬುವ ಯುವಕ, ಕೇವಲ ಒಂದು ನಿಮಿಷದಲ್ಲಿ100 ಅಡಿ ದೂರ ಟ್ರಾಕ್ಟರ್ ಎಳೆದು ಸಾಹಸ ತೋರಿಸಿದ್ರು. ಹೀಗಾಗಿ, ಗ್ರಾಮಸ್ಥರ ಸಂಭ್ರಮಕ್ಕೆ ಕಾರಣರಾದ್ರು. ಜಯಶಾಲಿ ಯುವಕನಿಗೆ ಕೊಪ್ಪ ಗ್ರಾಮಸ್ಥರು ಸನ್ಮಾನಿಸಿ ಬಹುಮಾನ ನೀಡಿದ್ರು.