ಮುಂಡಗೋಡ: ತಾಲೂಕಿನ ನಾಗನೂರು ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರ ಹಾವು ಏಣಿ ಆಟ ಮುಂದುವರೆದಿದೆ. ಅಧ್ಯಕ್ಷ ಸುನಿಲ್ ವಾಗು ಸಳಕೆ ಜುಲೈ 16 ರಂದು ತಮ್ಮ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಈ ಮೂಲಕ ಮತ್ತೊಂದು ಆಟ ಶುರುವಿಟ್ಟು ಸೆಡ್ಡು ಹೊಡೆದಿದ್ದಾರೆ. ಮದ್ಯಂತರ ಆದೇಶ..! ಅಂದಹಾಗೆ, ನಾಗನೂರು ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಭೆ ಕರೆಯುವಂತೆ ಕೆಲವು ಸದಸ್ಯರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿರಸಿ ಉಪವಿಭಾಗದ ಸಹಾಯಕ್ ಆಯುಕ್ತರು ಜುಲೈ 25 ರಂದು ಸಭೆ ನಡೆಸುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಜುಲೈ 16 ರಂದು ಸುನಿಲ್ ಸಳಕೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ನಂತರ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ, ವಿಚಾರಣೆ ಕೈಗೆತ್ತಿಕೊಂಡಿದ್ದ ಕೋರ್ಟ್ ಮದ್ಯಂತರ ತಡೆಯಾಜ್ಞೆ ನೀಡಿದೆ. ಕೋರ್ಟ್ ಹೇಳಿದ್ದೇನು..? ನಾಗನೂರು ಗ್ರಾಮ ಪಂಚಾಯತಿಯ ಅಧ್ಯಕ್ಷ ಸುನೀಲ ವಾಗು ಸಳಕೆ ವಿರುದ್ಧದ ಅವಿಶ್ವಾಸ ಗೊತ್ತುವಳಿ ಪ್ರಕರಣವನ್ನು ಗುರುವಾರ ವಿಚಾರಣೆ ನಡೆಸಿದ ಹೈಕೋರ್ಟ್ ಧಾರವಾಡ ಪೀಠವು ಮಧ್ಯಂತರ...
Top Stories
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
ಅನ್ನಭಾಗ್ಯದ ಅಕ್ಕಿ ದುರುಪಯೋಗ ಆಗದಿರಲಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ
ಮುಂಬರುವ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪ ತಡೆಯಲು ಸರ್ವ ಸನ್ನಧ್ದರಾಗಿ-ಡಿಸಿ ಲಕ್ಷ್ಮೀ ಪ್ರಿಯ
ಮುಂಡಗೋಡಲ್ಲಿ ಖಾಸಗಿ GL ಫೈನಾನ್ಸ್ ಗೆ ರಿಬ್ಬನ್ ಕಟ್ ಮಾಡಿದ ಸರ್ಕಾರಿ ಅಧಿಕಾರಿ..! ಆ ಗೋಲ್ಡ್ ಲೋನ್ ಫೈನಾನ್ಸ್ ಕಂಪನಿಗೂ, ಶಿಕ್ಷಣ ಇಲಾಖೆಗೂ ಏನಯ್ಯ ಸಂಬಂಧ..?
ಪತ್ರಕರ್ತನಿಗೆ ದಂಡ ತೀರ್ಪಿಗೆ ಜಿಲ್ಲಾ ಕೋರ್ಟ್ ತಡೆಯಾಜ್ಞೆ
ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಜನ್ಮದಿನ ಆಚರಣೆ, ಕಾಂಗ್ರೆಸ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ..!
ಅಗಡಿಯಲ್ಲಿ ಜೋಡೇತ್ತುಗಳ ಕಳ್ಳತನ, ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳನ್ನೇ ಹೊತ್ತೊಯ್ದ ಕಳ್ಳರು..!
ಮುಂಡಗೋಡ ನೆಹರು ನಗರದಲ್ಲಿ ಜೇನುದಾಳಿ 6 ಜನರಿಗೆ ಗಾಯ, ಮೂವರು ಗಂಭೀರ..!
ಸಭಾಪತಿ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರ ಕಾಲಿಗೆ ಪೊಲೀಸರ ಗುಂಡೇಟು
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಲಾರಿ, ಕಾರಿನಲ್ಲಿ ಇಬ್ಬರು ಸಿಲುಕಿ ನರಳಾಟ, ಹೊರತೆಗೆಯಲು ಹರಸಾಹಸ..!
ತಿಂಗಳಾಂತ್ಯಕ್ಕೆ ಹೆಬ್ಬಾರ್ ಹಾಗೂ ST ಸೋಮಶೇಖರ್, ಬಿಜೆಪಿ ಪಕ್ಷದಿಂದ ಉಚ್ಚಾಟನೆ ಗ್ಯಾರಂಟಿ- ಲಿಂಗರಾಜ ಪಾಟೀಲ್
ಮೈನಳ್ಳಿ ಪಂಚಾಯತಿಯ ಕಳಕೀಕಾರೆಯಲ್ಲಿ ಕುಡಿಯುವ ನೀರಿಗೆ ಬರ..! ಟ್ಯಾಂಕರ್ ಮೂಲಕ ನೀರು ಪೂರೈಕೆ..!
ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಹಣ ನೀಡಲ್ಲ, ಬದಲಾಗಿ ಅಕ್ಕಿ ವಿತರಣೆೆ ; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇದುವರೆಗೆ 2500 ಕ್ಕೂ ಆಧಿಕ ಕಡಲಾಮೆ ಮರಿಗಳು ಸಮುದ್ರಕ್ಕೆ : ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ರವಿಶಂಕರ್
SSLC ಪರೀಕ್ಷೆಗಳು ವ್ಯವಸ್ಥಿತ ಮತ್ತು ಪಾರದರ್ಶಕವಾಗಿರಲಿ, ಪೂರ್ವಭಾವಿ ಸಭೆಯಲ್ಲಿ ಡೀಸಿ ಲಕ್ಷ್ಮಿಪ್ರಿಯ ಅಧಿಕಾರಿಗಳಿಗೆ ತಾಕೀತು..!
ಹಿರಿಯೂರು ಬಳಿ ಅಪಘಾತ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ..!
ಹುನಗುಂದದಲ್ಲಿ ರೇಣುಕಾಚಾರ್ಯರ ಜಯಂತಿ ಉತ್ಸವ..!
ಬಂಕಾಪುರ ಬಳಿ ಮುಡಸಾಲಿ ವ್ಯಕ್ತಿಯ ಅನುಮಾನಾಸ್ಪದ ಸಾವು..? ಅಪಘಾತವಾ..? ಕೊಲೆಯಾ..?
ಹುನಗುಂದ ಗ್ರಾಪಂ PDO ಮಂಜುನಾಥ್ ಗೆ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!
ಹೈಕೋರ್ಟ್ ಮದ್ಯಂತರ ಆದೇಶ, ನಾಗನೂರು ಗ್ರಾಪಂ ಅಧ್ಯಕ್ಷ ಸುನಿಲ್ ಸಳಕೆ ರಾಜೀನಾಮೆ ದಿಢೀರ್ ವಾಪಸ್..!
ಮತ್ತೆ ಕೋಮಾ ಸ್ಥಿತಿಗೆ ತಲುಪೇ ಬಿಡ್ತಾ ಮುಂಡಗೋಡ ಕಾಂಗ್ರೆಸ್..? ಅಷ್ಟಕ್ಕೂ ಎಲ್ಲಿದ್ದಾರೆ ಪ್ರಶಾಂತಣ್ಣ..?
ಮುಂಡಗೋಡ ತಾಲೂಕಿನಲ್ಲಿ ಕಾಂಗ್ರೆಸ್ ಅನ್ನೋದು ಕೋಮಾ ಸ್ಥಿತಿಗೆ ತಲಪೇ ಬಿಡ್ತಾ..? ಸದ್ಯದ ಪರಿಸ್ಥಿತಿ ನೋಡಿದ್ರೆ ಹಾಗೇ ಅನ್ನಿಸ್ತಿದೆ. ತಾಲೂಕಿನಲ್ಲಿ ಒಂದೊಳ್ಳೆ ಅವಕಾಶ ಹೊಂದಿದ್ದ ಕೈ ಪಡೆಗೆ, ಸಿಕ್ಕ ಅವಕಾಶ ಬಳಸಿಕೊಳ್ಳುವ ಯಾವೊಂದೂ ಕಾರ್ಯಗಳೂ ಜಾರಿಯಾಗಲೇ ಇಲ್ಲ ಅನ್ನೋದು ಖುದ್ದು ಅದೇ ಪಕ್ಷದ ನಿಷ್ಟಾವಂತರನ್ನು ಚಿಂತೆಗೀಡು ಮಾಡಿದೆ. ಇನ್ನು, ನಾನೇ ಅಭ್ಯರ್ಥಿ ಅಂತಾ ಗುಂಗು ಹಿಡಿಸಿ, ಅದೇಲ್ಲೋ ಕುಳಿತು ರಿಮೋಟ್ ಒತ್ತುವ ಪ್ರಶಾಂತಣ್ಣ, ಅದೇಷ್ಟೋ ದಿನಗಳಿಂದ ಕ್ಷೇತ್ರದಲ್ಲಿ ಮುಖ ತೋರಿಸಿಲ್ಲ. ಹೀಗಾಗಿ, ಪಕ್ಷ ಕ್ಷೇತ್ರದಲ್ಲಿ ವಿಲ ವಿಲ ಅಂತಿದೆ. ಗಟ್ಟಿತನ..! ಅಸಲು, ಮುಂಡಗೋಡ ತಾಲೂಕಿನಲ್ಲಿ ಹಲವರ ಶ್ರಮದಿಂದ ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ತಾಲೂಕಿನ ಒಟ್ಟೂ 16 ಗ್ರಾಮ ಪಂಚಾಯತಿಗಳ ಪೈಕಿ ಬರೋಬ್ಬರಿ 7 ರಲ್ಲಿ ಕಾಂಗ್ರೆಸ್ ಬಾವುಟ ಹಾರಿತ್ತು. ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಸತ್ಯ ಅಂದ್ರೆ ಇದೇಲ್ಲ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ತೊರೆದು ಹೋದ ನಂತ್ರ, ಇನ್ನೇನು ಕಾಂಗ್ರೆಸ್ ಕತೆ ಮುಗಿದೇ ಹೋಗಿದೆ ಅನ್ನೋ ಸಂದರ್ಭದಲ್ಲೇ ಬಂದಿದ್ದ ಫಲಿತಾಂಶವಾಗಿತ್ತು. ತಾಲೂಕಿನಲ್ಲಿ ಕೈ...
ಚೌಡಳ್ಳಿ ಗ್ರಾಪಂ “ಅವಿಶ್ವಾಸ” ಸಭೆ ರದ್ದು, ಅಧ್ಯಕ್ಷರ ರಾಜೀನಾಮೆ ಹಿನ್ನೆಲೆ ರದ್ದುಪಡಿಸಿದ ಎಸಿ..!
ಮುಂಡಗೋಡ: ತಾಲೂಕಿನ ಚೌಡಳ್ಳಿ ಗ್ರಾಮ ಪಂಚಾಯತಿಯಲ್ಲಿ ಇಂದು ನಡೆಯಬೇಕಿದ್ದ, ಅವಿಶ್ವಾಸ ಗೊತ್ತುವಳಿ ಮಂಡನಾ ಸಭೆ ರದ್ದಾಗಿದೆ. ಅಧ್ಯಕ್ಷೆ ನೇತ್ರಾವತಿ ಬಿಸವಣ್ಣವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇವತ್ತಿಗೆ ಹತ್ತು ದಿನವಾದ ಹಿನ್ನೆಲೆ ರಾಜೀನಾಮೆ ಅಂಗೀಕಾರವಾಗಿದೆ. ಈ ಹಿನ್ನೆಲೆಯಲ್ಲಿ ಶಿರಸಿ ಉಪ ವಿಭಾಗಾಧಿಕಾರಿ ದೇವರಾಜು, ಚೌಡಳ್ಳಿ ಗ್ರಾಪಂ ಸದಸ್ಯರಿಗೆ ತಿಳುವಳಿಕೆ ಪತ್ರ ನೀಡಿದ್ದಾರೆ. ಅಧ್ಯಕ್ಷರು ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ಈಗಾಗಲೇ ರಾಜೀನಾಮೆ ಅಂಗೀಕಾರವಾಗಿದ್ದು, ಈ ಹಿನ್ನೆಲೆಯಲ್ಲಿ ಅವಿಶ್ವಾಸ ನಿರ್ಣಯದ ಸಭೆ ನಡೆಸುವ ಅವಶ್ಯಕತೆ ಇಲ್ಲ. ಹೀಗಾಗಿ, ಸಭೆಯನ್ನು ರದ್ದುಗೊಳಿಸಲಾಗಿದೆ ಅಂತಾ ತಿಳುವಳಿಕೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಂದಹಾಗೆ, ಇಂದು ನಿಗದಿಯಾಗಿದ್ದ “ಅವಿಶ್ವಾಸ” ಸಭೆಗೆ ಬಿಜೆಪಿ ಬೆಂಬಲಿತ 9 ಜನ ಸದಸ್ಯರು ಹಾಜರಾಗಿದ್ದರು. ಚೌಡಳ್ಳಿ ಗ್ರಾಮ ಪಂಚಾಯತಿಯಲ್ಲಿ ಸೇರಿದ್ದ ಸದಸ್ಯರಿಗೆ ಮುಂಡಗೋಡ ತಹಶೀಲ್ದಾರ್ ಶಂಕರ್ ಗೌಡಿ ಎಸಿ ಯವರ ತಿಳುವಳಿಕೆ ಪತ್ರ ತಂದ ಹಿನ್ನೆಲೆಯಲ್ಲಿ ಸಭೆ ರದ್ದು ಪಡಿಸಿದ್ರು. ಈ ವೇಳೆ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ವಾಯ್. ಪಿ. ಪಾಟೀಲ್, ಯುವ ಮೋರ್ಚಾ ಸದಸ್ಯ...
ಇಂದೂರು ಬಳಿ ಕ್ರೂಸರ್ ಹಾಗೂ ಬೈಕ್ ನಡುವೆ ಡಿಕ್ಕಿ, ಬೈಕ್ ಸವಾರನಿಗೆ ಗಾಯ..!
ಮುಂಡಗೋಡ: ತಾಲೂಕಿನ ಇಂದೂರು ಹೊರವಲಯದ ಶರೀಪ ಗೋವಿಂದ ದೇವಸ್ಥಾನದ ಹತ್ತಿರ, ಬೈಕ್ ಹಾಗೂ ಕ್ರೂಸರ್ ನಡುವೆ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಇಂದೂರು ಗ್ರಾಮದ ಬೈಕ್ ಸವಾರ ಮಲ್ಲೇಶ್ ದೊಡ್ಡಮನಿ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಬೈಕ್ ಸವಾರನಿಗೆ, ಮುಂಡಗೋಡ ಕಡೆಯಿಂದ ಇಂದೂರು ಕಡೆಗೆ ಬರುತ್ತಿದ್ದ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದೂರು ಪಂಚಾಯತಿಯಲ್ಲಿ ಪಕ್ಷಾಂತರ, ಗ್ರಾಪಂ ಸದಸ್ಯ ರಾಜೂ ಹರಿಜನ್ ಬಿಜೆಪಿ ಸೇರ್ಪಡೆ..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮ ಪಂಚಾಯತಿ ಸದಸ್ಯ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯ ರಾಜೂ ಫಕ್ಕೀರವ್ವ ಹರಿಜನ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇದ್ರೊಂದಿಗೆ, ಗ್ರಾಮ ಪಂಚಾಯತಿ ಮಟ್ಟದ ರಾಜಕೀಯ ಮೇಲಾಟ ಮತ್ತೊಂದು ಮಗ್ಗಲಿಗೆ ಹೊರಳಿದೆ. ಅಧ್ಯಕ್ಷರ ಬದಲಾವಣೆ ಎಫೆಕ್ಟ್..? ಅಸಲು, ಇಂದೂರು ಗ್ರಾಮ ಪಂಚಾಯತಿಯಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ಅನ್ನಪೂರ್ಣ ಬೆಣ್ಣಿ ಮೇಡಂ ಒಪ್ಪಂದದಂತೆ ತಮ್ಮ ಪದವಿಗೆ ರಾಜೀನಾಮೆ ನೀಡಲು ಕೊಂಚ ತಡ ಮಾಡಿದ್ರು. ಹೀಗಾಗಿ, ತಮ್ಮದೇ ಪಕ್ಷದ ಸದಸ್ಯರಲ್ಲಿ ಸಾಕಷ್ಟು ತಳಮಳಕ್ಕೆ ಕಾರಣವಾಗಿತ್ತು. ಯಾವಾಗ, ಅನ್ನಪೂರ್ಣ ಬೆಣ್ಣಿ ಮೇಡಂ ರಾಜೀನಾಮೆ ನೀಡಲು “ನಾಳೆ, ನಾಳೆ” ಅಂತಾ ಮಾತು ಮುಂದಕ್ಕೆ ಹಾಕಲಾರಂಭಿಸಿದ್ದರೋ ಅವಾಗ್ಲೇ ಇಂದೂರು ಗ್ರಾಮ ಪಂಚಾಯತಿಯಲ್ಲಿ ಒಳಗೊಳಗೆ ಅಚ್ಚರಿಯ ಬೆಳವಣಿಗೆ ನಡೆದು ಆಗಿದ್ದವು. ಅದೇನೇ ಆಗ್ಲಿ ಬದಲಾವಣೆ ಮಾಡೇ ಬಿಡಬೇಕು ಅನ್ನೋ ಗಟ್ಟಿ ನಿರ್ಧಾರ ಕೈಗೊಳಗಳಲಾಗಿತ್ತಂತೆ. ಹೀಗಾಗಿ, ಅವಿಶ್ವಾಸಕ್ಕೂ ರೆಡಿಯಾಗಿದ್ದರು ಉಳಿದ ಸದಸ್ಯರು. ಆಪರೇಶನ್..? ಈ ಕಾರಣಕ್ಕಾಗೇ ಕಾಂಗ್ರೆಸ್ ಬೆಂಬಲಿತ ಒಂದಿಬ್ಬರು ಸದಸ್ಯರನ್ನು ಮಾತನಾಡಿಸಿಯೂ ಆಗಿತ್ತಂತೆ....
ನಿರಂತರ ಮಳೆಗೆ ಬಾಚಣಕಿ ಜಲಾಶಯ ಭರ್ತಿ, ರೈತರಲ್ಲಿ ಸಂತಸ..!
ಮುಂಡಗೋಡ: ತಾಲೂಕಿನ ಬಾಚಣಕಿ ಜಲಾಶಯ ಭರ್ತಿಯಾಗಿದೆ. ನಿರಂತರವಾಗಿ ಕಳೆದ ಹಲವು ದಿನಗಳಿಂದ ಸುರಿದ ಮಳೆಗೆ ಬಾಚಣಕಿ ಜಲಾಶಯ ಭರ್ತಿಯಾಗಿದ್ದು, ಉಬ್ಬು ಬಿದ್ದಿದೆ. ಹೀಗಾಗಿ, ರೈತರ ಸಂತಸಕ್ಕೆ ಕಾರಣವಾಗಿದೆ. ಇನ್ನು ಬಾಚಣಕಿ ಜಲಾಶಯ ಬಾಚಣಕಿ, ಮಜ್ಜಿಗೇರಿ, ಇಂದೂರು, ಕೊಪ್ಪ, ಇಂದಿರಾನಗರ ಸೇರಿದಂತೆ ಹಲವು ಗ್ರಾಮಗಳ ರೈತರಿಗೆ ಜೀವನಾಡಿಯಾಗಿದೆ. ಹೀಗಾಗಿ, ಸದ್ಯ ಜಲಾಶಯ ಭರ್ತಿಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿದೆ. ಇನ್ನು, ಜಲಾಶಯ ಭರ್ತಿ ಹಿನ್ನೆಲೆ ನಿತ್ಯವೂ ಪ್ರವಾಸಿಗರು ಬರುತ್ತಿದ್ದಾರೆ. ಅದ್ರಲ್ಲೂ ಟಿಬೇಟಿಗರು ಈ ಜಲಾಶಯದಲ್ಲಿ ಬಂದು ಮೋಜು ಮಸ್ತಿಮಾಡುತ್ತಿದ್ದಾರೆ.
ಉಕ್ಕಿ ಹರಿದ ಅಘನಾಶಿನಿ ಕುಮಟಾ ತಾಲೂಕಿನಲ್ಲಿ ಪ್ರವಾಹ, 70 ಕುಟುಂಬಗಳ ಸ್ಥಳಾಂತರ..!
ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಅಬ್ಬರದ ಮಳೆಗೆ ಕುಮಟಾ ತಾಲೂಕಿನ ಅಘನಾಶಿನಿ ನದಿ ತುಂಬಿ ಹರಿಯುತ್ತಿರುವುದರಿಂದ ಕೋನಳ್ಳಿ, ಗುಡ್ನಕಟ್ಟಾ ಮತ್ತು ಮೂರೂರಿನಲ್ಲಿ ನೆರೆ ಸೃಷ್ಟಿಯಾಗಿದೆ. ಈ ಭಾಗದ 70 ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು, ನದಿ ಇಕ್ಕೆಲಗಳಲ್ಲಿರುವ ಇನ್ನಷ್ಟು ಗ್ರಾಮಗಳಿಗೆ ನೆರೆ ಭೀತಿ ಎದುರಾಗಿದೆ. ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾದ್ದರಿಂದ ಕುಮಟಾ ತಾಲೂಕಿನ ಅಘನಾಶಿನಿ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು, ಅಪಾಯದ ಮಟ್ಟದಲ್ಲೇ ಹರಿಯಲಾರಂಭಿಸಿದೆ. ಇನ್ನು ಹೊನ್ನಾವರ ತಾಲೂಕಿನ ಗುಂಡಬಾಳ , ಹಡಿನಬಾಳ , ಸಾಲಕೋಡು ಭಾಗದಲ್ಲಿ ಸಹ ಶರಾವತಿ ನದಿಯಿಂದ ನೆರೆ ಆವರಿಸಿದೆ.
ಮಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಫೈರಿಂಗ್, ನಟೋರಿಯಸ್ ರೌಡಿಶೀಟರ್ ಮೇಲೆ ದಾಳಿ..!
ಮಂಗಳೂರು: ನಗರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು ಕೇಳಿದೆ. ನಗರದ ಅಸೈಗೋಳಿ ಬಳಿ ಪೊಲೀಸರು ನಟೋರಿಯಸ್ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ಮಾಡಿದ್ದಾರೆ. 15ಕ್ಕೂ ಅಧಿಕ ಪ್ರಕರಣಗಳ ಆರೋಪಿಯಾಗಿರುವ ಮುಕ್ತಾರ್, ಪ್ರಕರಣವೊಂದರಲ್ಲಿ ಬಂಧಿಸಿ ಕಾರಿನ ಮಹಜರಿಗೆ ಹೋಗಿದ್ದ ವೇಳೆ ಪರಾರಿಯಾಗಲು ಯತ್ನಿಸಿದ್ದಾನೆ. ಹೀಗಾಗಿ, ಈ ವೇಳೆ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮುಕ್ತಾರ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ರೌಡಿಶೀಟರ್ ಮುಕ್ತಾರ್ ಹಲವು ಪ್ರಕರಣಗಳಲ್ಲಿ ಕಳೆದ ಐದು ವರ್ಷಗಳಿಂದ ಪೊಲೀಸರ ಕೈಗೆ ಸಿಗದೇ ತಪ್ಪಿಸಿಕೊಂಡಿದ್ದ. ಸದ್ಯ ಬಂಧಿಸಿದ್ದ ಪೊಲೀಸರು ಪ್ರಕರಣವೊಂದರ ಮಹಜರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಪರಾರಿಯಾಗಲು ಯತ್ನಿಸಿದ್ದ.
ಮುಂದುವರೆದ ರಾಜೀನಾಮೆ ಪರ್ವ, ನಾಗನೂರು ಗ್ರಾಪಂ ಅಧ್ಯಕ್ಷ ಸುನಿಲ್ ಸಳಕೆ ರಾಜೀನಾಮೆ..!
ಮುಂಡಗೋಡ: ತಾಲೂಕಿನ ನಾಗನೂರು ಗ್ರಾಮ ಪಂಚಾಯತಿ ಅಧ್ಯಕ್ಷ ರಾಜೀನಾಮೆ ನೀಡಿದ್ದಾರೆ. ಇದ್ರೊಂದಿಗೆ, ಇನ್ನೇನು ಅವಿಶ್ವಾಸ ನಿರ್ಣಯಕ್ಕೆ ವೇದಿಕೆ ರೆಡಿ ಮಾಡಿಕೊಂಡಿದ್ದ ಸದಸ್ಯರಿಗೆ ಅಧ್ಯಕ್ಷರ ರಾಜೀನಾಮೆಯಿಂದ ಬೇಗುದಿ ತಣ್ಣಗಾದಂತಾಗಿದೆ. ಬಿಜೆಪಿ ತಾಲೂಕಾ ಮುಖಂಡರ ಹಾಗೂ ಸಚಿವ ಶಿವರಾಮ ಹೆಬ್ಬಾರ ಅವರ ಮಾತಿಗೆ ಒಪ್ಪಿ, ತಮ್ಮ ಸ್ವ ಇಚ್ಛೆಯಿಂದ ಗ್ರಾಮ ಪಂಚಾಯತಿ ಅಧ್ಯಕ್ಷ ಸುನೀಲ್ ವಾಗು ಸಳಕೆ ಅವರು ಶನಿವಾರ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಶಿರಸಿ ಉಪವಿಭಾಗಾಧಿಕಾರಿ ಆರ್. ದೇವರಾಜ್ ಅವರಿಗೆ ರಾಜೀನಾಮೆ ನೀಡಿದ್ದಾರೆ. ಈ ಈ ವೇಳೆ ಗ್ರಾಮ ಪಂಚಾಯತ್ ಸದಸ್ಯರಾದ ಯಲ್ಲಪ್ಪ ಭದ್ರಾಪೂರ, ಜಿಲ್ಲಾ ಯುವ ಮೋರ್ಚಾ ಸದಸ್ಯ ವೈ.ಪಿ. ಭುಜಂಗಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ದೇವು ಪಾಟೀಲ್, ಮತ್ತಿತರರು ಉಪಸ್ಥಿತರಿದ್ದರು.
ಕೊಪ್ಪದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕ್ಷೌರಿಕ..!
ಮುಂಡಗೋಡ:ತಾಲೂಕಿನ ಕೊಪ್ಪ ಗ್ರಾಮದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿದ್ದಾನೆ. ಶ್ರೀನಿವಾಸ್ ನರಸಿಂಹ ಬಾರಬಾರ್ (45) ಎಂಬುವವನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಮದ್ಯಾನ ಕೊಪ್ಪ ಗ್ರಾಮದ ತನ್ನ ಹಳೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪ ಗ್ರಾಮದಲ್ಲೇ ಹೇರ್ ಕಟ್ಟಿಂಗ್ ಸಲೂನ್ ನಡೆಸುತ್ತಿದ್ದ ಶ್ರೀನಿವಾಸ್, ಇಂದು ಮದ್ಯಾಹ್ನ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.