ಧಾರವಾಡದ ಕೋಟೂರಿನಲ್ಲಿ ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ, ಯುವಕರ ನಡುವಿನ ಸಣ್ಣ ಜಗಳ, ಕೊಲೆಯಲ್ಲಿ ಅಂತ್ಯ..!

ಧಾರವಾಡದ ಕೋಟೂರಿನಲ್ಲಿ ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ, ಯುವಕರ ನಡುವಿನ ಸಣ್ಣ ಜಗಳ, ಕೊಲೆಯಲ್ಲಿ ಅಂತ್ಯ..!

ಧಾರವಾಡ: ಬಿಜೆಪಿ ಧಾರವಾಡ ಜಿಲ್ಲಾ ಯವಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬುವವರನ್ನು ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ ಕಮ್ಮಾರ ಎಂಬುವವರೇ ಹತ್ಯೆಗೀಡಾದವರು. ನಿನ್ನೆ ರಾತ್ರಿ ವೈಯಕ್ತಿಕ ಕಾರಣಕ್ಕಾಗಿ ಯುವಕರ ಮಧ್ಯೆ ಜಗಳ ಸಂಭವಿಸಿದ್ದು, ಈ ಜಗಳ ಪ್ರವೀಣ ಅವರ ಕೊಲೆಯಲ್ಲಿ ಅಂತ್ಯವಾಗಿದೆ. ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಚಿಕಿತ್ಸೆಗಾಗಿ ಪ್ರವೀಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಪ್ರವೀಣ ಅಸುನೀಗಿದ್ದಾರೆ. ದೂರು ದಾಖಲಿಸಿಕೊಂಡಿರುವ ಗರಗ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ. ಆಸ್ಪತ್ರೆಗೆ ಪ್ರಲ್ಹಾದ್ ಜೋಶಿ , ಎಸ್ ಪಿ ಭೇಟಿ.! ಇನ್ನು ಕೋಟೂರ ಗ್ರಾಮ ಪಂಚಾಯತಿ ಉಪಾಧ್ಯಕ್ಷನ ಹತ್ಯೆ ಹಿನ್ನೆಲೆಯಲ್ಲಿ ಧಾರವಾಡ ಗ್ರಾಮಕ್ಕೆ ಪೊಲೀಸ್ ವರಿಷ್ಣಾಧಿಕಾರಿ ಲೋಕೇಶ ಜಗಲಾಸರ್ ಭೇಟಿ ನೀಡಿದರು. ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಬಿಜೆಪಿ ಯುವ ಮೋರ್ಚಾ ಮುಖಂಡನೂ ಆಗಿದ್ದ ಪ್ರವೀಣ ಕೊಲೆ ಹಿನ್ನಲೆ ಗ್ರಾಮದಲ್ಲಿ ಹೆಚ್ಚಿನ...

ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ, ಜನಸಾಗರದ ಮದ್ಯೆ ಬೃಹತ್ “ರೋಡ್ ಶೋ”

ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ, ಜನಸಾಗರದ ಮದ್ಯೆ ಬೃಹತ್ “ರೋಡ್ ಶೋ”

ಯಲ್ಲಾಪುರದಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ‌. ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ. ಬೃಹತ್ ರೋಡ್ ಶೋ..! ಬೆಳಿಗ್ಗೆ ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ಗ್ರಾಮದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಅಲ್ಲಿಂದಲೇ ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಕೇಸರಿಮಯ..! ಇನ್ನು, ಕ್ಷೇತ್ರದಾದ್ಯಂತದಿಂದ ನೂರಾರು ವಾಹನಗಳಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಆಗಮಿಸಿದ್ರು. ಕೇಸರಿ ಶಾಲು, ಟೋಪಿ, ಹಾಗೂ ಬಿಜೆಪಿ ಧ್ವಜ ಹಿಡಿದು ಮೆರವಣಿಗೆಯುದ್ದಕ್ಕೂ ಕುಣಿದು ಕುಪ್ಪಳಿಸಿದ್ರು. ಜಯಘೋಷ ಕೂಗಿ ಸಂಭ್ರಮಿಸಿದ್ರು.

ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ, ಯಲ್ಲಾಪುರಕ್ಕೆ ಕಾರ್ಯಕರ್ತರ ದಂಡು..!

ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ, ಯಲ್ಲಾಪುರಕ್ಕೆ ಕಾರ್ಯಕರ್ತರ ದಂಡು..!

ಯಲ್ಲಾಪುರದಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ‌. ಸಾವಿರ ಸಾವಿರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಲಿರೋ ಹೆಬ್ಬಾರ್ ಯಲ್ಲಾಪುರದ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ.. ಅಂದಹಾಗೆ, ಇಂದು‌ ಮಂಗಳವಾರ ಬಳಿಗ್ಗೆ 10 ಗಂಟೆಗೆ ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿಂದಲೇ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ನೂರಾರು ವಾಹನಗಳು..! ಕ್ಷೇತ್ರದಾದ್ಯಂತ ನೂರಾರು ವಾಹನಗಳಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ನಾಮಪತ್ರ ಸಲ್ಲಿಸುವ ಕಾರ್ಯಕ್ರಮಕ್ಕೆ ಆಗಮಿಸೊ ಸಾಧ್ಯತೆ ಇದೆ. ಹೀಗಾಗಿ, ಇವತ್ತು ಯಲ್ಲಾಪುರದಲ್ಲಿ ಬಹುತೇಕ ಕೇಸರಿಮಯವಾಗುವ ಎಲ್ಲಾ ಸಾಧ್ಯತೆ ಇದೆ.

ಯಲ್ಲಾಪುರದಲ್ಲಿ ಸಾವಿರಾರು ಬೆಂಬಲಿಗರೊಂದಿಗೆ  ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್..!

ಯಲ್ಲಾಪುರದಲ್ಲಿ ಸಾವಿರಾರು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್..!

  ಯಲ್ಲಾಪುರ: ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಇಂದು ಸಾವಿರಾರು ಬೆಂಬಲಿಗರು, ಕಾರ್ಯಕರ್ತರೊಂದಿಗೆ ಸೇರಿ ನಾಮಪತ್ರ ಸಲ್ಲಿಸಿದ್ರು. ಪತ್ನಿ ಸಮೇತ ಆಗಮಿಸಿದ್ದ ವಿ.ಎಸ್.ಪಾಟೀಲ್ ಯಲ್ಲಾಪುರದ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದ್ರು. ಯಲ್ಲಾಪುರದ ಗ್ರಾಮದೇವತೆಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಮಿನಿವಿಧಾನಸೌಧಕ್ಕೆ ಬಂದ ಪಾಟೀಲರು, ಅಲ್ಲಿ 12 ಗಂಟೆಯ ನಂತರ ನಾಮಪತ್ರ ಸಲ್ಲಿಸಿದ್ರು‌. ನಾಮಪತ್ರ ಸಲ್ಲಿಸಿದ ನಂತರ ಮತ್ತೆ ಮೆರವಣಿಗ ಮೂಲಕ ಕಾಂಗ್ರೆಸ್ ಕಾರ್ಯಾಲಯಕ್ಕೆ ಆಗಮಿಸಿದ ವಿ.ಎಸ್.ಪಾಟೀಲ್, ಮುಖಂಡರು, ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ರು. ಈ ವೇಳೆ ಯಲ್ಲಾಪುರ, ಮುಂಡಗೋಡ, ಬನವಾಸಿ ಭಾಗದ ಹಲವು ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ರು.

ಕೊಪ್ಪ ಕಾಂಗ್ರೆಸ್ ನ ಹಿರಿಯ ಮುಖಂಡ ಪಿ.ಜಿ.ತಂಗಚ್ಚನ್ ಬಿಜೆಪಿ ಸೇರ್ಪಡೆ..!

ಕೊಪ್ಪ ಕಾಂಗ್ರೆಸ್ ನ ಹಿರಿಯ ಮುಖಂಡ ಪಿ.ಜಿ.ತಂಗಚ್ಚನ್ ಬಿಜೆಪಿ ಸೇರ್ಪಡೆ..!

ಮುಂಡಗೋಡ ತಾಲೂಕಿನ ಹಿರಿಯ ಕಾಂಗ್ರೆಸ್‌ ಮುಖಂಡ ಪಿ.ಜಿ. ತಂಗಚ್ಚನ್ ನೇತೃತ್ವದಲ್ಲಿ ಹಲವು ಕಾಂಗ್ರೆಸ್‌ ಕಾರ್ಯಕರ್ತರು ಇಂದು ಬಿಜೆಪಿ ಸೇರ್ಪಡೆಯಾದರು. ಸಚಿವ ಶಿವರಾಮ ಹೆಬ್ಬಾರ್‌, ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಂಗಚ್ಚನ್ ಅವರು, ಕಾಂಗ್ರೆಸ್‌ನಲ್ಲಿ ಮೂಲ ಕಾಂಗ್ರೆಸ್ ಕಾರ್ಯಕರ್ತರನ್ನು ಹಾಗೂ ಹಿರಿಯರನ್ನು ಕಡೆಗಣಿಸಿ ಅಗೌರವದಿಂದ ಕಾಣಲಾಗುತ್ತಿದೆ. ಆದ್ದರಿಂದ ಇಂದು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿ ಶಿವರಾಮ ಹೆಬ್ಬಾರ್‌ ಅವರ ಗೆಲುವಿಗಾಗಿ ಶ್ರಮಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಲ್‌ ಟಿ ಪಾಟೀಲ್‌, ಯುವ ನಾಯಕ ವಿವೇಕ್‌ ಹೆಬ್ಬಾರ್‌, ಮಹಿಳಾ ಮೋರ್ಚಾ ಅಧ್ಯಕ್ಷೆ ಲಿಸಾ ಥಾಮಸ್‌, ಪ್ರಮುಖರಾದ ರಾಮು ಲಮಾಣಿ ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

ಚವಡಳ್ಳಿಯಲ್ಲಿ ಬಿಜೆಪಿಗೆ ಮರ್ಮಾಘಾತ, ಬಿಜೆಪಿ ಘಟಕದ ಅಧ್ಯಕ್ಷ ನಿಂಗಜ್ಜ ಕೋಣನಕೇರಿ ಸೇರಿದಂತೆ ನೂರಾರು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!

ಚವಡಳ್ಳಿಯಲ್ಲಿ ಬಿಜೆಪಿಗೆ ಮರ್ಮಾಘಾತ, ಬಿಜೆಪಿ ಘಟಕದ ಅಧ್ಯಕ್ಷ ನಿಂಗಜ್ಜ ಕೋಣನಕೇರಿ ಸೇರಿದಂತೆ ನೂರಾರು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!

  ಮುಂಡಗೋಡ ತಾಲೂಕಿನ ಚವಡಳ್ಳಿಯಲ್ಲಿ ಭಾರಿ ಬದಲಾವಣೆಯ ಗಾಳಿ ಬೀಸಿದೆ. ಇದುವರೆಗೂ ಬಿಜೆಪಿಯ ನೆರಳಲ್ಲಿದ್ದ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಸಲು, ಬಿಜೆಪಿ ಚವಡಳ್ಳಿ ಘಟಕದ ಅಧ್ಯಕ್ಷರೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದ್ರೊಂದಿಗೆ ಇಬ್ಬರು ಗ್ರಾಮ ಪಂಚಾಯತಿ ಸದಸ್ಯರೂ ಸೇರಿದಂತೆ, ನೂರಾರು ಕಾರ್ಯಕರ್ತರು ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಅಂದಹಾಗೆ, ನಿಂಗಜ್ಜ ಕೋಣನಕೇರಿ ಚವಡಳ್ಳಿ ಭಾಗದ ಸಂಭಾವಿತ, ಪ್ರಭಾವಿ ಮುಖಂಡ. ಇವ್ರು ಬಿಜೆಪಿಯ ಚವಡಳ್ಳಿ ಘಟಕದ ಅಧ್ಯಕ್ಷರೂ ಆಗಿದ್ದವರು. ಆದ್ರೆ, ರವಿವಾರ ರಾತ್ರಿ ಬಿಜೆಪಿ ತೊರೆದಿದ್ದಾರೆ‌. ಇವ್ರೊಂದಿಗೆ ಇಬ್ಬರು ಗ್ರಾಪಂ ಸದಸ್ಯೆಯರು, ಸೊಸೈಟಿ ಸದಸ್ಯರುಗಳು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಇದ್ರಿಂದ ಈ ಭಾಗದಲ್ಲಿ ಬಿಜೆಪಿಗೆ ಭಾರಿ‌ ಮರ್ಮಾಘಾತ ನೀಡಿದ್ದಾರೆ. ಅಸಲು, ಮುಂಡಗೋಡ ತಾಲೂಕಿನಲ್ಲಿ ಈಗ ಪಕ್ಷಾಂತರ ಪರ್ವ ಜೋರಾಗಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರುವವರು ಸಂಖ್ಯೆಗಿಂತ, ಬಿಜೆಪಿ ತೊರೆದು ಕಾಂಗ್ರೆಸ್ ಸೇರುವವರ ಸಂಖ್ಯೆಯೇ ಹೆಚ್ಚಾಗಿದೆ. ಇತ್ತಿಚೆಗಷ್ಟೇ ಬೆಡಸಗಾಂವ್ ನಲ್ಲಿ ಹಲವು ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್...

ಸಿಎಂ ವಿರುದ್ಧ ನೆಹರು ಓಲೇಕಾರ್ ಅವಾಚ್ಯ ಪದ ಬಳಕೆ ಹಿನ್ನೆಲೆ, ಶಿಗ್ಗಾವಿಯಲ್ಲಿ ಓಲೇಕಾರ ವಿರುದ್ಧ ಪ್ರತಿಭಟನೆ..!

ಸಿಎಂ ವಿರುದ್ಧ ನೆಹರು ಓಲೇಕಾರ್ ಅವಾಚ್ಯ ಪದ ಬಳಕೆ ಹಿನ್ನೆಲೆ, ಶಿಗ್ಗಾವಿಯಲ್ಲಿ ಓಲೇಕಾರ ವಿರುದ್ಧ ಪ್ರತಿಭಟನೆ..!

ಶಿಗ್ಗಾವಿ: ಹಾವೇರಿ ಮೀಸಲು ಕ್ಷೇತ್ರದ ಬಿಜೆಪಿ ಶಾಸಕ ನೆಹರು ಓಲೆಕಾರ್, ಸಿಎಂ ಬಸವರಾಜ್ ಬೊನ್ಮಾಯಿಯವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಹೇಳಿಕೆಯನ್ನು ಖಂಡಿಸಿ ಶಿಗ್ಗಾವಿ ಪಟ್ಟಣದಲ್ಲಿ ಬಸವರಾಜ ಬೊಮ್ಮಾಯಿ ಅಭಿಮಾನಿ ಬಳಗದಿಂದ ಪ್ರತಿಭಟನೆ ಮತ್ತು, ನೆಹರು ಓಲೆಕಾರ ಅವರ ಪ್ರತಿಕೃತಿ ದಹನ ಮಾಡಲಾಯಿತು. ಪಟ್ಟಣದ ರಾಣಿಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಆರಂಭಿಸಿದ ಬಸವರಾಜ ಬೊಮ್ಮಾಯಿ ಅಭಿಮಾನಿಗಳು, ಜನತಾ ಬಜಾರ ವೃತ್ತದವರಗೆ ಸಾಗಿ ನೆಹರು ಓಲೆಕಾರ ಅವರ ಪ್ರತಿಕೃತಿಗೆ ಪಟಾಕಿ ಸುತ್ತಿ, ಸುಡುವ ಮೂಲಕ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ರು. ಬಿಜೆಪಿ ಮುಖಂಡ, ಶ್ರೀಕಾಂತ ದುಂಡಿಗೌಡ್ರ ಮಾತನಾಡಿ ಪಕ್ಷದಿಂದ ಟಿಕೆಟ ನೀಡಲಿಲ್ಲಾ ಎಂಬ ಕಾರಣಕ್ಕೆ ವಿಕೃತ ಮನಸ್ಸಿನ, ಹೀನ ಮನಸ್ಥಿತಿಯಿಂದ, ಮಾತನಾಡಿರುವ ಓಲೆಕಾರ ಅವರು ಶಿಗ್ಗಾವಿ, ಸವಣೂರು ಜನತೆಗೆ ಅವಮಾನ ಮಾಡಿದ್ದಾರೆ, ತಾಯಂದಿರಿಗೆ ಅವಮಾನ ಮಾಡಿದ್ದಾರೆ. ಗೌರವಾನ್ವಿತ ಮುಖ್ಯಮಂತ್ರಿಗಳ ಸ್ಥಾನದಲ್ಲಿರುವ ಬಸವರಾಜ ಬೊಮ್ಮಾಯಿ ಅವರಿಗೆ ಅವಾಚ್ಯ ಶಬ್ಧಗಳಿಂದ ಮಾತನಾಡಿ ಅವಮಾನ ಮಾಡಿರುವ ಅವರ ವಿರುದ್ದ ಸರಕಾರವು ಕಾನೂನು ರೀತಿ ಕ್ರಮ ಜರುಗಿಸಿ ಜಿಲ್ಲೆಯಿಂದ...

ಬಿಎಸ್ ವೈ ಪುತ್ರ ವಿಜಯೇಂದ್ರರಿಗೆ ಬಂಜಾರಾ ತಾಂಡಾದಲ್ಲಿ ಬಹಿಷ್ಕಾರ, ಧಿಕ್ಕಾರ ಕೂಗಿ ಆಕ್ರೋಶ..!

ಬಿಎಸ್ ವೈ ಪುತ್ರ ವಿಜಯೇಂದ್ರರಿಗೆ ಬಂಜಾರಾ ತಾಂಡಾದಲ್ಲಿ ಬಹಿಷ್ಕಾರ, ಧಿಕ್ಕಾರ ಕೂಗಿ ಆಕ್ರೋಶ..!

 ಶಿಕಾರಿಪುರ: ಯಡಿಯೂರಪ್ಪ ಅವರ ಮಗ ವಿಜಯೇಂದ್ರರವರು ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಚುನಾವಣಾ ಪ್ರಚಾರಕ್ಕೆಂದು ಬಂದಿದ್ದಾಗ ತಾಂಡಾದ ಜನರಿಂದ ಬಹಿಷ್ಕರಿಸಲಾಯಿತು, ಹಾಗೂ ತಾಂಡಾ ಬಚಾವೋ ಬಿಜೆಪಿ ಹಟಾವೋ ಎಂದು ಘೊಷಣೆ ಕೂಗಲಾಯಿತು. ಪ್ರಚಾರಕ್ಕೆಂದು ತಾಂಡಾಕ್ಕೆ ಬಂದಿದ್ದ ಬಿ.ವೈ. ವಿಜಯೇಂದ್ರರವರಿಗೆ ತಾಂಡಾದಲ್ಲಿ ಮಹಿಳೆಯರೂ ಸೇರಿದಂತೆ ಯುವಕರು ಧಿಕ್ಕಾರಗಳ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ರು. ರಾಜ್ಯದ ಎಲ್ಲಾ ಲಂಬಾಣಿ ತಾಂಡಾಗಳಲ್ಲೂ ಈ ರೀತಿ ಮಾಡಿದರೆ ಮಾತ್ರ ನಮ್ಮ ಬಂಜಾರರ ಒಗ್ಗಟ್ಟು ಏನೆಂಬುದನ್ನು ಅರ್ಥೈಸಬಹುದು. ನಮ್ಮ ಏಳಿಗೆಗೆ ಮುಂದಿನ ಪೀಳಿಗೆಗೆ ಕೊಳ್ಳಿ ಇಟ್ಟ ಸರ್ಕಾರಕ್ಕೆ ಗೊತ್ತಾಗುವುದು ಅಂತಾ ಆಕ್ರೋಶ ಹೊರಹಾಕಿದ್ರು. ಒಗ್ಗಟ್ಟು ಪ್ರದರ್ಶನ ಮಾಡಿ ಪ್ರಚಾರ ಮಾಡದಂತೆ ತಡೆ ನೀಡಿದ್ರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ಹೊರಟ ಮಾಜಿ ಸಿಎಂ, ಬಿಜೆಪಿಗೆ ಮರ್ಮಾಘಾತ ಕೊಡೊದು ಫಿಕ್ಸ್..!

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ಹೊರಟ ಮಾಜಿ ಸಿಎಂ, ಬಿಜೆಪಿಗೆ ಮರ್ಮಾಘಾತ ಕೊಡೊದು ಫಿಕ್ಸ್..!

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ತೆರಳುತ್ತಿದ್ದಾರೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಬಳಿ ಸಮಯ ಕೇಳಿರೋ ಮಾಜಿ ಸಿಎಂ ಶೆಟ್ಟರ್ ಗೆ ಬೆಳಿಗ್ಗೆ 10.30 ಕ್ಕೆ ಬರುವಂತೆ ಕಾಗೇರಿ ತಿಳಿಸಿರೋ ಹಿನ್ನೆಲೆಯಲ್ಲಿ ಶಿರಸಿ ಕಡೆಗೆ ಪ್ರಯಾಣ ಬೆಳಿಸಿದ್ದಾರೆ.  ಮಾಜಿ ಸಿಎಂ ಶೆಟ್ಟರ್ ಹೇಳಿದ್ದಿಷ್ಟು..! ಇದೇ ವೇಳೆ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಸದ್ಯ ಶಿರಸಿಗೆ ತೆರಳ್ತಾ ಇದ್ದೇನೆ. ಕಾಗೇರಿ ಅವರ ಬಳಿ ಸಮಯ ಕೇಳಿದ್ದು, 10:30 ಕ್ಕೆ ಬರಲು ಹೇಳಿದ್ದಾರೆ. ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ. ರಾಜ್ಯಾದ್ಯಕ್ಷರಿಗೆ ಮಾತಾಡಿದ್ದೇನೆ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಕೊಡುತ್ತೇನೆ. ವಾಪಸ್ ಬಂದು ಹಿತೈಷಿಗಳ ಜೊತೆ ಚರ್ಚಿಸಿ ಮುಂದಿನ ಹೆಜ್ಜೆ ಬಗ್ಗೆ ನಿರ್ಧರಿಸುತ್ತೇನೆ ಅಂತಾ ತಿಳಿಸಿದ್ದಾರೆ.  ಸ್ಪರ್ಧೆ ಖಚಿತ..! ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಬಿಜೆಪಿ ನಾಯಕರಿಂದ ಮತ್ತೆ ಯಾವುದೇ ಕರೆ ಬಂದಿಲ್ಲ, ಕೊನೆಯ ವಿಸ್ಮಯ ನಡೆಯಲ್ಲ....

ಘಟಪ್ರಭಾ ನದಿಯಲ್ಲಿ ಮುಂಡಗೋಡಿನ ನಾಲ್ವರು ಯುವಕರ ಸಾವು ಕೇಸ್, ಚಿಕಿತ್ಸೆ ಫಲಿಸದೇ ಮತ್ತೋರ್ವ ಯುವಕ ಸಾವು..!

ಘಟಪ್ರಭಾ ನದಿಯಲ್ಲಿ ಮುಂಡಗೋಡಿನ ನಾಲ್ವರು ಯುವಕರ ಸಾವು ಕೇಸ್, ಚಿಕಿತ್ಸೆ ಫಲಿಸದೇ ಮತ್ತೋರ್ವ ಯುವಕ ಸಾವು..!

ಮುಂಡಗೋಡ: ತಾಲೂಕಿನ ಶಿರಗೇರಿ ಗ್ರಾಮದ ಯುವಕರು, ಬೆಳಗಾವಿ ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ಮೃತಪಟ್ಟವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. ನೀರಲ್ಲಿ ಮುಳುಗಿ ತೀವ್ರ ಅಸ್ವಸ್ಥ ಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ತಾಲೂಕಿನ ಶಿರಗೇರಿ ಗ್ರಾಮದ ರಾಮಚಂದ್ರ ಜೋರೆ ಎಂಬುವನೆ ಸಾವನ್ನಪ್ಪಿದ ಮತ್ತೋರ್ವ ಯುವಕನಾಗಿದ್ದು, ನಿನ್ನೆ ಶುಕ್ರವಾರ ದುಪದಾಳ ಗ್ರಾಮದ ಸನಿಹ ಘಟಪ್ರಭಾ ನದಿಯಲ್ಲಿ 6ಜನ ಸ್ನೇಹಿತರು ಈಜಲು ಇಳಿದಿದ್ದರು ಈ ವೇಳೆ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದು ಮತ್ತಿಬ್ಬರು ತೀವ್ರ ಅಸ್ವಸ್ಥಗೊಂಡಿದ್ದರು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

error: Content is protected !!