ಪಾಳಾದಲ್ಲಿ ನಿರಂತರ ಮಳೆ ಮನೆ ಮೇಲೆ ಬಿದ್ದ ಮರ, ಇಬ್ಬರಿಗೆ ಸಣ್ಣಪುಟ್ಟ ಗಾಯ, ಮನೆಗೆ ಹಾನಿ..!

ಪಾಳಾದಲ್ಲಿ ನಿರಂತರ ಮಳೆ ಮನೆ ಮೇಲೆ ಬಿದ್ದ ಮರ, ಇಬ್ಬರಿಗೆ ಸಣ್ಣಪುಟ್ಟ ಗಾಯ, ಮನೆಗೆ ಹಾನಿ..!

 ಮುಂಡಗೋಡ ತಾಲೂಕಿನಲ್ಲಿ ಮಳೆಯ ಅವಾಂತರಗಳು ಶುರುವಾಗಿವೆ. ಪಾಳಾ ಗ್ರಾಮದಲ್ಲಿ ನಿನ್ನೆ ರಾತ್ರಿ ಸುರಿದ ಮಳೆ, ಗಾಳಿಯಿಂದ ಮನೆಯ ಮೇಲೆ ಮರ ಬಿದ್ದು ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಮನೆಗೆ ಹಾನಿಯಾಗಿದೆ. ಧಾರಾಕಾರ ಮಳೆ ಮತ್ತು ಗಾಳಿಯಿಂದ ಬದ್ರಾಪುರದ ಹೊಸನಗರದಲ್ಲಿ ರಜಿಯಾ ಖಾಸಿಂಸಾಬ್ ಶೇಕ್ ಎಂಬುವರ ಮನೆ ಮೇಲೆ, ಮನೆ ಪಕ್ಕದಲ್ಲಿ ಇದ್ದ ಬೃಹತ್ ಗಾತ್ರದ ಮರ ಬಿದ್ದಿದೆ. ಮನೆ ಮೇಲೆ ಬಿದ್ದು ಹಾನಿಯಾಗಿದೆ. ಮನೆಯಲ್ಲಿದ್ದ ರಜಿಯಾ ಬೇಗಂ ಮತ್ತು ಮಗನಾದ ಮಕ್ಬುಲ್ ಅಹಮದ್ ಶೇಕ್ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ. ಹೀಗಾಗಿ, ಘಟನೆ ನಡೆದ ಬಳಿಕ ತಡರಾತ್ರಿ ಮನೆಯಲ್ಲಿದ್ದ ಎಲ್ಲರನ್ನೂ ಬೇರೆ ಕಡೆ ಸ್ಥಳಾಂತರ ಮಾಡಲಾಗಿದೆ.

ಉ.ಕನ್ನಡದಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ, ನಿರಂತರ ಮಳೆ ಹಿನ್ನೆಲೆ ಡಿಸಿ ಆದೇಶ..!

ಉ.ಕನ್ನಡದಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ, ನಿರಂತರ ಮಳೆ ಹಿನ್ನೆಲೆ ಡಿಸಿ ಆದೇಶ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಇನ್ನಿಲ್ಲದ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಜಿಲ್ಲೆಯ ಎಲ್ಲಾ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಸೋಮವಾರವೂ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ, ಯಲ್ಲಾಪುರ, ಮುಂಡಗೋಡ ಹಾಗೂ ಹಳಿಯಾಳ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಸೋಮವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 22 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..

ಕಾರವಾರದಲ್ಲಿ ಸಿಎಂ ಅಧ್ಯಕ್ಷತೆಯ ಸಭೆ,  ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ನೀಡಿದ ಖಡಕ್ ಸೂಚನೆಗಳೇನು ಗೊತ್ತಾ..?

ಕಾರವಾರದಲ್ಲಿ ಸಿಎಂ ಅಧ್ಯಕ್ಷತೆಯ ಸಭೆ, ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ನೀಡಿದ ಖಡಕ್ ಸೂಚನೆಗಳೇನು ಗೊತ್ತಾ..?

ಕಾರವಾರ: ಮುಖ್ಯಮಂತ್ರಿ ಅವರು ಕಾರವಾರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆಲವು ಪ್ರಮುಖ ಸೂಚನೆಗಳನ್ನು ನೀಡಿದರು.‌ ತಕ್ಷಣ ಹಾನಿಯ ವರದಿ ನೀಡಿ..! ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ನಿಯಮದ ಪ್ರಕಾರ ಪರಿಹಾರ ಒದಗಿಸಲು ತಕ್ಷಣ ಹಾನಿಯ ವರದಿ ಸಲ್ಲಿಸಿ. ಕದ್ರಾ ಅಣೆಕಟ್ಟೆಯಿಂದ ಹೊರಬಿಡುವ ನೀರಿನಿಂದ ತೊಂದರೆಗೊಳಗಾಗುವ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಬಗ್ಗೆ ಅಂತಿಮ ತೀರ್ಮಾನ ಮಾಡಿ. ಮಳೆ ಅನಾಹುತ ಮತ್ತು‌ ಪ್ರವಾಹದಿಂದ ಆದ ಜೀವಹಾನಿಗೆ ತುರ್ತಾಗಿ ಪರಿಹಾರ ಕೊಡಬೇಕು. ಕೋಸ್ಟಲ್ ಲೈನ್ ನಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಅಗತ್ಯ ಇರುವ ಕಡೆ ವೈರ್ ಗಳ ದುರಸ್ತಿ ಮತ್ತು ಬದಲಾವಣೆಗೆ ಮಾಡಬೇಕು. ಹೆದ್ದಾರಿ ಟೋಲ್ ಸಂಗ್ರಹ ಬೇಡ..! ಜಿಲ್ಲೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೆ ಹೆದ್ದಾರಿ ಪ್ರಾಧಿಕಾರದವರು ಟೋಲ್ ಏಕೆ ಸಂಗ್ರಹಿಸುತ್ತಿದ್ದೀರಿ? ಇದು ಸರಿಯಿಲ್ಲ. 2016ಕ್ಕೆ ಕಾಮಗಾರಿ ಮುಕ್ತಾಯಗೊಳಿಸಬೇಕಿದ್ದರೂ ಸಹ ಇದುವರೆಗೆ...

ಶಿರೂರು ಗುಡ್ಡ ಕುಸಿತದಿಂದ ಹಾನಿಯಾದ ಮೀನುಗಾರರಿಗೆ ಪರಿಹಾರ ವಿತರಿಸಿದ ಸಚಿವ ಮಂಕಾಳ ವೈದ್ಯ, ನಾಳೆ ಸಿಎಂ ಜಿಲ್ಲೆಗೆ..!

ಶಿರೂರು ಗುಡ್ಡ ಕುಸಿತದಿಂದ ಹಾನಿಯಾದ ಮೀನುಗಾರರಿಗೆ ಪರಿಹಾರ ವಿತರಿಸಿದ ಸಚಿವ ಮಂಕಾಳ ವೈದ್ಯ, ನಾಳೆ ಸಿಎಂ ಜಿಲ್ಲೆಗೆ..!

ಕಾರವಾರ; ಅಂಕೋಲಾ ತಾಲೂಕಿನ ಶಿರೂರು ಬಳಿಯ ಗುಡ್ಡ ಕುಸಿತದಿಂದ ಹಾನಿಯಾದ ಉಳುವರೆ ಗ್ರಾಮದ ಮೀನುಗಾರರ ಕುಟುಂಬಗಳ 59 ಜನರಿಗೆ ರೂ. 25000 ದಂತೆ 14,75,000 ಮೊತ್ತದ ಚೆಕ್‌ನ್ನು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಶನಿವಾರ ವಿತರಿಸಿದರು. ನಂತರ ಮಾತನಾಡಿದ ಸಚಿವರು, ಗುಡ್ಡಕುಸಿತದಿಂದ ಹಾನಿಯಾದ ಉಳುವರೆ ಗ್ರಾಮದ ಮೀನುಗಾರರಿಗೆ ಸರ್ಕಾರದ ವತಿಯಿಂದ ಎಲ್ಲಾ ಅಗತ್ಯ ನೆರವು ಒದಗಿಸಲು ಬದ್ದವಾಗಿದ್ದು, ಈಗಾಗಲೇ ಇಲ್ಲಿನ ಜನರಿಗೆ ಅಗತ್ಯ ನಿವೇಶನ ನೀಡಲು ಸ್ಥಳ ಗುರುತಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದರು. ಪ್ರಸ್ತುತ ತುರ್ತು ಕ್ರಮವಾಗಿ ಮೀನು ಬಲೆ, ದೋಣಿ ದುರಸ್ತಿ ಮತ್ತಿತರ ಕಾರ್ಯಗಳಿಗಾಗಿ ರೂ.25000 ದ ಪರಿಹಾರ ವಿತರಿಸಲಾಗಿದ್ದು, ಈ ಅವಘಡದಲ್ಲಿ ಮನೆ ಕಳೆದುಕೊಂಡವರಿಗೆ 1.20 ಲಕ್ಷ ಮತ್ತು ಮೃತಪಟ್ಟ ಕುಟುಂಬದ ವಾರಿಸುದಾರರಿಗೆ 5 ಲಕ್ಷ ರೂ. ಗಳ ಚಕ್ ವಿತರಿಸಲಾಗಿದ್ದು, ಮೀನುಗಾರಿಕಾ ಇಲಾಖೆ ವತಿಯಿಂದ ಇನ್ನೂ ಹೆಚ್ಚಿನ ಪರಿಹಾರ ಒದಗಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ...

PWD ರಸ್ತೆಯಲ್ಲಿ ಯಮರೂಪಿ ಗುಂಡಿಗಳು, ಖುದ್ದಾಗಿ ನಿಂತು ಗುಂಡಿ ಮುಚ್ಚಿಸಿದ ಹುನಗುಂದ ಗ್ರಾಪಂ ಅಧ್ಯಕ್ಷರು..!

PWD ರಸ್ತೆಯಲ್ಲಿ ಯಮರೂಪಿ ಗುಂಡಿಗಳು, ಖುದ್ದಾಗಿ ನಿಂತು ಗುಂಡಿ ಮುಚ್ಚಿಸಿದ ಹುನಗುಂದ ಗ್ರಾಪಂ ಅಧ್ಯಕ್ಷರು..!

ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ರಸ್ತೆಗಳು ಹದಗೆಟ್ಟು ಹಳ್ಳ ಹಿಡಿದಿವೆ. ಅದ್ರಲ್ಲೂ ಇಂದೂರಿ‌ನಿಂದ ಕ್ಯಾಂಪ್ ನಂಬರ್ 8 ರ ಮಾರ್ಗವಾಗಿ ಹುನಗುಂದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ, ಅಗಡಿ ವರೆಗೂ ನಡೆದಾಡಲೂ ಆಗದ ಸ್ಥಿತಿಯಲ್ಲಿದೆ. ಈ ಮಾರ್ಗದಿಂದ ಸಂಚರಿಸುವ ಬಸ್ ಗಳು ಎದ್ದು, ಬಿದ್ದು ಸಾಗುವ ಹಾಗಿದೆ‌. ಹೀಗಾಗಿ, ಹುನಗುಂದ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರುಗಳು ಒಂದೊಳ್ಳೆ ಕೆಲಸ ಮಾಡಿದ್ದಾರೆ. ರಸ್ತೆಯಲ್ಲಿ ಯಮರೂಪಿಯಾಗಿದ್ದ ಗುಂಡಿಗಳನ್ನು ಮುಚ್ಚಿಸುವ ಕಾರ್ಯ ಮಾಡಿದ್ದಾರೆ. ಅಂದಹಾಗೆ, PWD ಇಲಾಖೆ ಅಧಿಕಾರಿಗಳಿಗೆ ಈ ರಸ್ತೆ ಪ್ರಾಬ್ಲೆಂ ಹೇಳಿಕೊಂಡಿದ್ದ ಗ್ರಾಪಂ ಅಧ್ಯಕ್ಷರಿಗೆ, ಅಲ್ಲಿನ ಅಧಿಕಾರಿಗಳು, ನಮಗೆ ಇವಾಗ ಗುಂಡಿ ಮುಚ್ಚಿಸಲು ಸಾಧ್ಯವಿಲ್ಲ, ನಮ್ಮಲ್ಲಿ ಹಣವಿಲ್ಲ ಅಂತಾ ಕೈ ಎತ್ತಿದ್ದರಂತೆ, ಜಸ್ಟ್ ಜಲ್ಲಿ ಕಲ್ಲು ನೀಡುತ್ತೇವೆ ಅದನ್ನ ನೀವೇ ಲೇಬರ್ ಮೂಲಕ ಮುಂದೆ ನಿಂತು ಗುಂಡಿ ಮುಚ್ಚಿಸಿ ಅಂತಾ ಹೇಳಿದ್ದರಂತೆ, ಹೀಗಾಗಿ, ಇಂದು ಇಡೀ ದಿನ ಗ್ರಾಪಂ ಅಧ್ಯಕ್ಷರು, ಸದಸ್ಯರು ಸೇರಿ ಮುಂದೆ ನಿಂತು ರಸ್ತೆ ಗುಂಡಿ ಮುಚ್ಚಿಸಿದ್ದಾರೆ. ಇದ್ರೊಂದಿಗೆ,...

ನಾಳೆ ರವಿವಾರ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಹಡಪದ ಅಪ್ಪಣ್ಣ ಜಯಂತಿ ಉತ್ಸವ- ಸರ್ವರಿಗೂ ಆಮಂತ್ರಣ ಕೋರಿದ ರಾಜ್ಯಾಧ್ಯಕ್ಷ

ನಾಳೆ ರವಿವಾರ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಹಡಪದ ಅಪ್ಪಣ್ಣ ಜಯಂತಿ ಉತ್ಸವ- ಸರ್ವರಿಗೂ ಆಮಂತ್ರಣ ಕೋರಿದ ರಾಜ್ಯಾಧ್ಯಕ್ಷ

ಮುಂಡಗೋಡ: ನಾಳೆ ರವಿವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯಮಟ್ಟದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಆಚರಿಸಿಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮಾರಂಭದಲ್ಲಿ ಭಾಗಿಯಾಗಲಿದ್ದು, ರಾಜ್ಯದ ಹಡಪದ ಅಪ್ಪಣ್ಣವರ ಸಮಾಜದ ಬಾಂಧವರು ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಹಡಪದ ಅಪ್ಪಣ್ಣ ಸಮಾಜದ ರಾಜ್ಯಾಧ್ಯಕ್ಷ ಸಿದ್ದಪ್ಪ ಹಡಪದ ವನವಿ ಮಾಡಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರವಿವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ, ತಂಗಡಗಿಯ ಹಡಪದ ಅಪ್ಪಣ್ಣ ದೇವರ ಮಹಾಸಂಸ್ಥಾನ ಮಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳ ಸಾನಿಧ್ಯದಲ್ಲಿ, ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಅಲ್ಲದೇ ಸಮಾರಂಭದಲ್ಲಿ ಕೇಂದ್ರ ಸಚಿವರು ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ ಅಂತಾ ಸಿದ್ದಪ್ಪ ಹಡಪದ್ ಮಾಹಿತಿ ನೀಡಿದ್ದಾರೆ.

ಉ.ಕನ್ನಡದಲ್ಲಿ ನಾಳೆ ಶನಿವಾರವೂ ಶಾಲಾ ಕಾಲೇಜುಗಳಿಗೆ ರಜೆ, ನಿರಂತರ ಮಳೆ ಹಿನ್ನೆಲೆ ಡಿಸಿ ಆದೇಶ..!

ಉ.ಕನ್ನಡದಲ್ಲಿ ನಾಳೆ ಶನಿವಾರವೂ ಶಾಲಾ ಕಾಲೇಜುಗಳಿಗೆ ರಜೆ, ನಿರಂತರ ಮಳೆ ಹಿನ್ನೆಲೆ ಡಿಸಿ ಆದೇಶ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಇನ್ನಿಲ್ಲದ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಜಿಲ್ಲೆಯ ಎಲ್ಲಾ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರವೂ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ, ಯಲ್ಲಾಪುರ, ಮುಂಡಗೋಡ ಹಾಗೂ ಹಳಿಯಾಳ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶನಿವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 20 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..  

ಶಿರೂರು ಗುಡ್ಡ ಕುಸಿತ ಪ್ರಕರಣ:  ಸಡಗೇರಿ ಗ್ರಾಮ ಗ್ಯಾಸ್ ಸೋರಿಕೆ ಅಪಾಯದಿಂದ ಮುಕ್ತ : ಜಿಲ್ಲಾಧಿಕಾರಿ ಲಕ್ಷೀಪ್ರಿಯ

ಶಿರೂರು ಗುಡ್ಡ ಕುಸಿತ ಪ್ರಕರಣ: ಸಡಗೇರಿ ಗ್ರಾಮ ಗ್ಯಾಸ್ ಸೋರಿಕೆ ಅಪಾಯದಿಂದ ಮುಕ್ತ : ಜಿಲ್ಲಾಧಿಕಾರಿ ಲಕ್ಷೀಪ್ರಿಯ

ಕಾರವಾರ: ಸಗಡೇರಿ ಗ್ರಾಮದ ಬಳಿ ಗಂಗಾವಳಿ ನದಿಯಲ್ಲಿದ್ದ ಗ್ಯಾಸ್ ಟ್ಯಾಂಕರ್ ನಲ್ಲಿನದ್ದ ಸುಮಾರು 15 ಟನ್ ಗ್ಯಾಸ್ ನ್ನು ಹೆಚ್,ಪಿ.ಸಿ.ಎಲ್, ಬಿ.ಪಿ.ಸಿಎಲ್, ರಾಜ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಅಗ್ನಿಶಾಮಕ ತಂಡಗಳ ನೆರವಿನಿಂದ ಸಂಪೂರ್ಣವಾಗಿ ಖಾಲಿ ಮಾಡಲಾಗಿದ್ದು, ಈ ಪ್ರದೇಶವನ್ನು ವಾಸಯೋಗ್ಯಕ್ಕೆ ಮುಕ್ತಗೊಳಿಸಲಾಗಿದ್ದು, ಗ್ರಾಮಸ್ಥರು ತಮ್ಮ ಮನೆಗಳಿಗೆ ವಾಪಸ್ ಬರಬಹುದಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷಿಪ್ರಿಯ ತಿಳಿಸಿದ್ದಾರೆ. ಅವರು ಶುಕ್ರವಾರ ಅಂಕೋಲ ಸಮೀಪದ ಗುಡ್ಡ ಬಿದ್ದ ಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿದರು. ಮಣ್ಣು ತೆರವು ಕಾರ್ಯಾಚರಣೆ..! ಅಂಕೋಲ ಶಿರೂರು ಸಮೀಪ ಸಂಭವಿಸಿದ್ದ ಗುಡ್ಡ ಕುಸಿತ ಪ್ರದೇಶದಲ್ಲಿ ರಸ್ತೆಯ ಮೇಲಿದ್ದ ಮಣ್ಣು ತೆರವು ಕಾರ್ಯಾಚರಣೆ ಮುಗಿದಿದ್ದು, ಹೆದ್ದಾರಿಯ ಒಂದು ಬದಿಯನ್ನು ಮುಕ್ತಗೊಳಿಸಲಾಗಿದ್ದು, ಆದರೆ ಯಾವುದೇ ವಾಹನ ಸಂಚಾರಕ್ಕೆ ಅನುಮತಿ ನೀಡಿರುವುದಿಲ್ಲ ಎಂದರು. ಅಂಕೋಲ ಸಮೀಪದ ಗುಡ್ಡ ಬಿದ್ದ ಪ್ರದೇಶದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಪ್ರಸ್ತುತ ಬಿದ್ದಿರುವ ಮಣ್ಣನ್ನು ಸಂಪೂರ್ಣ ತೆರವುಗೊಳಿಸಿ ಸಂಚಾರಕ್ಕೆ ಯೋಗ್ಯವನ್ನಾಗಿ ಮಾಡಲು ಅವಿರತವಾಗಿ ಶ್ರಮಿಸಲಾಗುತ್ತಿದೆ ಎಂದರು. ಕಾಳಜಿ ಕೇಂದ್ರಗಳು 30..! ಜಿಲ್ಲೆಯಲ್ಲಿ...

ಮುಂಡಗೋಡ ತಾಲೂಕಿನಲ್ಲೂ ಮಳೆಯ ಅವಾಂತರ, ಹಲವು ಮನೆಗಳಿಗೆ ಹಾನಿ,  ತಹಶೀಲ್ದಾರ್ ಪರಿಶೀಲನೆ.‌.!

ಮುಂಡಗೋಡ ತಾಲೂಕಿನಲ್ಲೂ ಮಳೆಯ ಅವಾಂತರ, ಹಲವು ಮನೆಗಳಿಗೆ ಹಾನಿ, ತಹಶೀಲ್ದಾರ್ ಪರಿಶೀಲನೆ.‌.!

ಮುಂಡಗೋಡ ತಾಲೂಕಿನಲ್ಲೂ ಮಳೆಯ ಅವಾಂತರಗಳಿ ಸೃಷ್ಟಿಯಾಗಿವೆ. ನಿರಂತರ ಮಳೆಯಿಂದ ತಾಲೂಕಿನಲ್ಲಿ ಹಲವು ಮನೆಗಳು ಹಾನಿಗೊಳಗಾಗಿದ್ದು ತಹಶೀಲ್ದಾರ್ ಶಂಕರ್ ಗೌಡಿ ಮತ್ತವರ ಟೀಂ ಮಳೆ ಹಾನಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತಾಲೂಕಿನ ಸನವಳ್ಳಿ, ಬೆಡಸಗಾಂವ್, ಕಾತೂರು, ಅಗಡಿ, ಹುನಗುಂದ ಸೇರಿದಂತೆ ಕೆಲವು ಕಡೆ ನಿರಂತರ ಮಳೆಯಿಂದ ಮನೆಗಳಿಗೆ ಹಾನಿಯಾಗಿದೆ.  

ನಿರಂತರ ಮಳೆಗೆ ಸವಣೂರಿನಲ್ಲಿ ಭಾರೀ ದುರಂತ, ಮನೆ ಕುಸಿದು ಎರಡು ಕಂದಮ್ಮಗಳು ಸೇರಿ ಮೂವರ ಸಾವು..!

ನಿರಂತರ ಮಳೆಗೆ ಸವಣೂರಿನಲ್ಲಿ ಭಾರೀ ದುರಂತ, ಮನೆ ಕುಸಿದು ಎರಡು ಕಂದಮ್ಮಗಳು ಸೇರಿ ಮೂವರ ಸಾವು..!

ಸವಣೂರು; ನಿರಂತರ ಮಳೆ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ದುರಂತ ಸಂಭವಿಸಿದೆ. ಜಿಟಿ ಜಿಟಿ ಮಳೆಗೆ ಮನೆಗೋಡೆ ಕುಸಿದು ಎರಡು ಕಂದಮ್ಮಗಳು ಸೇರಿ ಓರ್ವ ಮಹಿಳೆ ಸಾವು ಕಂಡಿದ್ದಾಳೆ. ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಮೂಲ್ಯ & ಅನನ್ಯ ಎರಡು 2 ವರ್ಷದ ಅವಳಿ ಜವಳಿ ಕಂದಮ್ಮಗಳು ಹಾಗೂ ಚೆನ್ನಮ್ಮ(30) ಸಾವು ಕಂಡಿದ್ದಾರೆ., ಘಟನೆಯಲ್ಲಿ ಮುತ್ತು, ಸುನೀತ ಎಂಬುವವರಿಗೆ ಗಾಯವಾಗಿದೆ. ಹಾವೇರಿ ಜಿಲ್ಲೆಯ ಸವಣೂರಿ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಬೆಳಗಿನ ಜಾವದಲ್ಲಿ ಘಟನೆ ನಡೆದಿದ್ದು, ಮನೆ ಬೀಳುತ್ತಿದ್ದಂತೆ ಅಕ್ಕಪಕ್ಕದ ಜನರು ಧಾವಿಸಿ ರಕ್ಷಣೆ ಮಾಡಿದ್ದಾರೆ. ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ. ಇನ್ನು ಗಾಯಳುಗಳನ್ನು ಸವಣೂರು ತಾಲೂಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!