ಈಜಲು ತೆರಳಿದ್ದ ಇಬ್ಬರು ಬಾಲಕರು ದುರಂತ ಸಾವು..!

ಈಜಲು ತೆರಳಿದ್ದ ಇಬ್ಬರು ಬಾಲಕರು ದುರಂತ ಸಾವು..!

Death News; ವಿಜಯನಗರ; ಚೆಕ್ ಡ್ಯಾಂನಲ್ಲಿ ಈಜಲು ಹೋಗಿ ಇಬ್ಬರು ಮಕ್ಕಳು ದುರಂತ ಸಾವು ಕಂಡಿದ್ದಾರೆ. ಹೊಸಪೇಟೆಯ ಕಾರಿಗನೂರು ಹೊರವಲಯದ ಗುಡ್ಡದ ತಿಮ್ಮಪ್ಪನ ದೇಗುಲದ ಬಳಿ ಘಟನೆ ನಡೆದಿದೆ. ಹನುಮಂತ ( 14) ಅರವಿಂದ (14) ಮೃತಪಟ್ಟ ಬಾಲಕರಾಗಿದ್ದಾರೆ. ಇಬ್ಬರು 8 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡ್ತಿದ್ರು. ಈಜಲು ಚೆಕ್ ಡ್ಯಾಂ ಬಳಿ ಇಳಿದಿದ್ದು, ಈಜು ಬಾರದೇ ಮೃತಪಟ್ಟಿದ್ದಾರೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸತತ ಏರಿಕೆ ಬಳಿಕ ಚಿನ್ನದ ಬೆಲೆ ಇಳಿಕೆ : ಶನಿವಾರ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ..?

ಸತತ ಏರಿಕೆ ಬಳಿಕ ಚಿನ್ನದ ಬೆಲೆ ಇಳಿಕೆ : ಶನಿವಾರ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ..?

Gold Price Today: ಯುರೋಪ್‌ನಲ್ಲಿ ರಷ್ಯಾ-ಉಕ್ರೇನ್‌ ನಡುವಿನ ಯುದ್ಧ ಮುಂದುವರೆದ ಬೆನ್ನಲ್ಲೇ, ಮಧ್ಯಪ್ರಾಚ್ಯದಲ್ಲಿ ಇಸ್ರೇಲ್‌ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಯುದ್ಧವು ಜಾಗತಿಕ ಮಟ್ಟದಲ್ಲಿ ಅಶಾಂತಿ ಹೆಚ್ಚಿಸಲು ಎಡೆಮಾಡಿಕೊಟ್ಟಿದ್ದೆ. ಇರಾನ್ ಹಾಗೂ ಇಸ್ರೇಲ್ ನಡುವೆ ಹೆಚ್ಚಿದ ಉದ್ವಿಗ್ನತೆಯಿಂದಾಗಿ ಷೇರುಪೇಟೆ, ಕಮೋಡಿಟಿ ಮಾರುಕಟ್ಟೆ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ. ಇದ್ರಿಂದಾಗಿ ಹೂಡಿಕೆದಾರರು ಸುರಕ್ಷಿತ ಹೂಡಿಕೆಗಳಾದ ಚಿನ್ನ-ಬೆಳ್ಳಿ, ಬಾಂಡ್‌ನಂತವುಗಳ ಮೇಲೆ ಮೊರೆ ಹೋಗಿದ್ದಾರೆ. ಭಾರತದ ಷೇರುಪೇಟೆ ಶುಕ್ರವಾರ ಭರ್ಜರಿ ಕಂಬ್ಯಾಕ್ ಮಾಡಿದ್ದು, ಸೆನ್ಸೆಕ್ಸ್ 1000ಕ್ಕೂ ಅಧಿಕ ಪಾಯಿಂಟ್ಸ್, ನಿಫ್ಟಿ 25000 ಗಡಿದಾಟಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದ್ರ ನಡುವೆ ಸತತ ಏರಿಕೆಯಾಗಿದ್ದ ಬಂಗಾರದ ಬೆಲೆಯು ವೀಕೆಂಡ್‌ನಲ್ಲಿ ಸ್ವಲ್ಪ ತಗ್ಗಿರುವುದು ಆಭರಣ ಪ್ರಿಯರಿಗೆ ಖುಷಿಯನ್ನು ಮೂಡಿಸಿದೆ. ಚಿನ್ನ-ಬೆಳ್ಳಿ ಬೆಲೆ ಏರಿಕೆಗೆ ಕಾರಣವೇನು? ರಷ್ಯಾ-ಉಕ್ರೇನ್ ನಡುವಿನ ಯುದ್ಧದ ಜೊತೆಗೆ ಇದೀಗ ಇಸ್ರೇಲ್-ಇರಾನ್ ನಡುವೆ ಸಂಘರ್ಷ ಉಂಟಾಗಿರುವುದು ಜಾಗತಿಕ ರಾಜಕೀಯ ಅಶಾಂತಿ ಸೃಷ್ಟಿಗೆ ಕಾರಣವಾಗಿದೆ. ಮಧ್ಯಪ್ರಾಚ್ಯದಲ್ಲಿ ಎರಡು ಶಕ್ತಿಶಾಲಿ ಮಿಲಿಟರಿ ಪವರ್‌ಗಳ ನಡುವಿನ ಈ ಸಂಘರ್ಷವು ಜಗತ್ತಿನಾದ್ಯಂತ ಹೂಡಿಕೆದಾರರಿಗೆ ಸಾಕಷ್ಟು...

ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!   ಆರೋಗ್ಯಕರ ಜೀವನ ಸಾಗಿಸಲು ಯೋಗ ಅವಶ್ಯಕ: ಶಾಸಕ ಸೈಲ್ ಕಾರವಾರ ಪ್ರತಿಯೊಬ್ಬರಿಗೂ ಉತ್ತಮ ಜೀವನ ಸಾಗಿಸಲು ಆರೋಗ್ಯ ಬಹಳ ಮುಖ್ಯವಾಗಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಯೋಗ ಸಹಕಾರಿಯಾಗಲಿದೆ ಎಂದು ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕನ್ಸಲೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಹೇಳಿದರು. ಅವರು ಶನಿವಾರ ಪೋಲಿಸ್ ಕಲ್ಯಾಣ ಮಂಟಪ ಕಾಜುಭಾಗ ಕಾರವಾರದಲ್ಲಿ, ಜಿಲ್ಲಾಡಳಿತ , ಜಿಲ್ಲಾ ಪಂಚಾಯತ ಉತ್ತರ ಕನ್ನಡ ಜಿಲ್ಲೆ ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ಆರೋಗ್ಯ, ಶಿಕ್ಷಣ, ಕ್ರೀಡಾ ಮತ್ತು ಯುವ ಸಬಲೀಕರಣ, ಕನ್ನಡ ಮತ್ತು ಸಂಸ್ಕೃತಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ನಗರಸಭೆ ಕಾರವಾರ, ಸ್ಕೌಟ್ ಮತ್ತು ಗೈಡ್ಸ್, ಎನ್.ಸಿ.ಸಿ, ಎನ್.ಎಸ್.ಎಸ್, ರೆಡ್‌ಕ್ರಾಸ್, ಪತಂಜಲಿ, ರೋಟರಿ ಕ್ಲಬ್, ರೋಟರಿ ಸಿಸೈಡ್,...

ಸೀ ಬರ್ಡ್ ಸಂತ್ರಸ್ಥರಿಗೆ 10.47 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಚಿವ ಮಂಕಾಳ ವೈದ್ಯ..!

ಸೀ ಬರ್ಡ್ ಸಂತ್ರಸ್ಥರಿಗೆ 10.47 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಚಿವ ಮಂಕಾಳ ವೈದ್ಯ..!

Sea Bird News; ಕಾರವಾರ; ಸೀಬರ್ಡ್ ನೌಕಾನೆಲೆ ಯೋಜನೆಯಡಿ ಭೂಮಿ ಕಳೆದುಕೊಂಡಿದ್ದ 57 ಭೂ ಮಾಲೀಕರಿಗೆ ಹೆಚ್ಚುವರಿ ಪರಿಹಾರದ ಮೊತ್ತ ರೂ.10.47 ಕೋಟಿಗಳನ್ನು ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಶನಿವಾರ ವಿತರಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂತ್ರಸ್ಥ ಭೂ ಮಾಲೀಕರ ಬ್ಯಾಂಕ್ ಖಾತೆಗಳಿಗೆ ಆರ್.ಟಿ.ಜಿ.ಎಸ್ ಮೂಲಕ ಹಣ ವರ್ಗಾವಣೆ ಮಾಡಿದ ಸಚಿವರು, ನೌಕನೆಲೆಗೆ ಅಗತ್ಯವಿರುವ ಜಮೀನು ಮತ್ತು ಎಲ್ಲಾ ರೀತಿಯ ವ್ಯವಸ್ಥೆಯನ್ನು ಕಾರವಾರ ತಾಲೂಕಿನ ಜನತೆ ಕಲ್ಪಿಸಿ ನೌಕಾನೆಲೆ ನಿರ್ಮಿಸಲು ಸಹಕಾರ ನೀಡಿದ್ದಾರೆ. ಪ್ರಸ್ತುತ ಹೆಚ್ಚುವರಿ ಪರಿಹಾರದ ಮೊತ್ತ 10.47 ಕೋಟಿ ಮಾತ್ರ ಬಂದಿದ್ದು, ಇನ್ನೂ 60 ಕೋಟಿ ರೂ ಗಳ ಪರಿಹಾರದ ಮೊತ್ತ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಬೇಕಿದ್ದು, ಶೀಘ್ರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದ್ದು, ಸಂಸದರು ಈ ಬಗ್ಗೆ ಪ್ರಯತ್ನ ನಡೆಸುವಂತೆ ಹಾಗೂ ಇದಕ್ಕಾಗಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು. ಕಾರ್ಯಕ್ರದಲ್ಲಿ ಆನ್ ಲೈನ್ ಮೂಲಕ ಭಾಗವಹಿಸಿದ್ದ...

ಕಾರವಾರದಲ್ಲಿ ಗೋಶಾಲೆ ಉದ್ಘಾಟಿಸಿದ ಸಚಿವ, ಗೋವು ತಾಯಿ ಸಮಾನ ಅಂದ್ರು; ಸಚಿವ ಮಂಕಾಳ ವೈದ್ಯ

ಕಾರವಾರದಲ್ಲಿ ಗೋಶಾಲೆ ಉದ್ಘಾಟಿಸಿದ ಸಚಿವ, ಗೋವು ತಾಯಿ ಸಮಾನ ಅಂದ್ರು; ಸಚಿವ ಮಂಕಾಳ ವೈದ್ಯ

Cow Shelter Karwar; zಕಾರವಾರ; ಗೋವುಗಳನ್ನು ಸಾಕುವವರ ಸಂಖ್ಯೆ ಹೆಚ್ಚಾಗಬೇಕು. ಸಾಕಲು ಸಾಧ್ಯವಾಗದೇ ಇರುವವರು ಗೋಶಾಲೆಗಳಿಗೆ ಗೋವುಗಳನ್ನು ನೀಡಬೇಕು. ಗೋಶಾಲೆಗಳಲ್ಲಿ ಗೋವುಗಳನ್ನು ಜೋಪಾನವಾಗಿ, ಮೇವು ಹಾಕಿ ನೋಡಿಕೊಳ್ಳಲಾಗುವುದು ಎಂದು ಬಂದರು ಹಾಗೂ ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಶನಿವಾರ ವಿತರಿಸಿದರು. ಅವರು ಶನಿವಾರ ಜಿಲ್ಲಾಡಳಿತ, ಉತ್ತರ ಕನ್ನಡ ಜಿಲ್ಲಾ ಪ್ರಾಣಿದಯಾ ಸಂಘ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರ ತಾಲೂಕಿನ ಸಾವಂತವಾಡ ಹೋಬಳಿಯ ಕಣಸಗಿರಿ ಗ್ರಾಮದಲ್ಲಿ ನಿರ್ಮಿಸಲಾದ ಸರ್ಕಾರಿ ಗೋಶಾಲೆ ಉದ್ಘಾಟಿಸಿ ಮಾತನಾಡಿದರು. ಗೋವು ತಾಯಿಗೆ ಸಮಾನ ಅವುಗಳು ಅನಾಥವಾಗಿ ಬಿಡದೇ , ಸೂಕ್ತ ರೀತಿಯಲ್ಲಿ ರಕ್ಷಣೆ ಮಾಡುವ ಉದ್ದೇಶದಿಂದ ಗೋಶಾಲೆಯನ್ನು ರೂ. 50 ಲಕ್ಷ ವೆಚ್ಚದಲ್ಲಿ ತೆರೆಯಲಾಗಿದೆ ಎಂದ ಸಚಿವರು, ರಾಜ್ಯದಲ್ಲಿ ಎಲ್ಲಾ ಕಡೆ ಗೋಶಾಲೆ ತೆರೆಯಲಾಗುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ 6 ಕಡೆ ಗೋಶಾಲೆ ತೆರೆಯಲಾಗಿದೆ. ಅನಾಥ ಗೋವುಗಳನ್ನು ರಕ್ಷಿಸಿ, ಗೋಶಾಲೆಗಳಲ್ಲಿ ಸಾಕಲಾಗುತ್ತದೆ. ಪೋಲಿಸ್...

ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..! ***************** ಶನಿವಾರ ನಾಳೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರವಾರ; ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಉತ್ತರ ಕನ್ನಡ ಜಿಲ್ಲೆ ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ಆರೋಗ್ಯ, ಶಿಕ್ಷಣ, ಕ್ರೀಡಾ ಮತ್ತು ಯುವ ಸಬಲೀಕರಣ, ಕನ್ನಡ ಮತ್ತು ಸಂಸ್ಕೃತಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ನಗರಸಭೆ ಕಾರವಾರ, ಸ್ಕೌಟ್ ಮತ್ತು ಗೈಡ್ಸ್, ಎನ್.ಸಿ.ಸಿ, ಎನ್.ಎಸ್.ಎಸ್, ರೆಡ್‌ಕ್ರಾಸ್, ಪತಂಜಲಿ, ರೋಟರಿ ಕ್ಲಬ್, ರೋಟರಿ ಸಿಸೈಡ್,ರೋಟರಿ ಪಶ್ಚಿಮ, ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಕಾರವಾರ, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ-2025 ಕಾರ್ಯಕ್ರಮವನ್ನು ಜೂ.21 ರಂದು ಬೆಳಗ್ಗೆ 6.30 ಗಂಟೆಗೆ ಪೋಲಿಸ್ ಕಲ್ಯಾಣ ಮಂಟಪ ಕಾಜುಭಾಗ ಕಾರವಾರದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ,ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...

ಇಬ್ಬರ ಸಾವಿಗೆ ಕಾರಣವಾಗಿದ್ದವನ ಹೆಡೆಮುರಿ ಕಟ್ಟಿದ ಯಲ್ಲಾಪುರ ಪೊಲೀಸ್ರು..!

ಇಬ್ಬರ ಸಾವಿಗೆ ಕಾರಣವಾಗಿದ್ದವನ ಹೆಡೆಮುರಿ ಕಟ್ಟಿದ ಯಲ್ಲಾಪುರ ಪೊಲೀಸ್ರು..!

Yallapur Crime News; ಯಲ್ಲಾಪುರ ತಾಲೂಕಿನ ಚಿಕ್ಕಮಾವಳ್ಳಿಯ ಇಂಡಿಯಾ ಗೇಟ್ ಹೋಟೆಲ ಎದುರು ಬೈಕಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವು ಕಂಡಿದ್ದ ಘಟನೆಯಲ್ಲಿ, ಡಿಕ್ಕಿ ಹೊಡೆದು ಪರಾರಿಯಾಗಿ ತಲೆಮರೆಸಿಕೊಂಡಿದ್ದ ವಾಹನ ಚಾಲಕನನ್ನು ಯಲ್ಲಾಪುರ ಪೊಲೀಸ್ರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರಿನ ಶೀತಲಾಪ್ರಸಾದ ಅಲಗೂ ಬಿಂದ್ (49) ಎಂಬುವ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಿ ಕರೆತಂದಿದ್ದಾರೆ. ಅಪಘಾತದಲ್ಲಿ ಧಾರವಾಡ ಜಿಲ್ಲೆ ಕಲಘಟಗಿಯ ಬೈಕ್ ಸವಾರ, ರಾಮು ಮಾರುತಿ ಗುಜಲೂರ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಹಿಂಬದಿಯ ಸವಾರ ವಿಷ್ಣು ಜಯಪ್ಪ ಗುಜಲೂರಗೆ ಗಾಯವಾಗಿತ್ತು, ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಆತನೂ ಕೂಡ ಸಾವನ್ನಪ್ಪಿದ್ದ. ಹೀಗಾಗಿ, ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸ್ರು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಪಿಐ ರಮೇಶ್ ಹನಾಪುರ ಮಾನವೀಯತೆ..! ಇನ್ನು ಅವತ್ತು ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದ ಯಲ್ಲಾಪುರ ಪಿಐ ರಮೇಶ ಹನಾಪುರ, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಹೇಗಾದ್ರೂ ಸರಿ ಬದುಕಿಸಬೇಕು ಅಂತ ತಮ್ಮದೇ ಜೀಪ್ ನಲ್ಲಿ ಯಲ್ಲಾಪುರ ಆಸ್ಪತ್ರೆಗೆ...

ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು..?

ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು..?

Dasara Festival News :ಮೈಸೂರು : ದಸರಾ ಆರಂಭವಾಗುವ ಸೆಪ್ಟೆಂಬರ್‌ ತಿಂಗಳ ಶುಕ್ಲ ಪಕ್ಷದಲ್ಲಿ 2 ಬಾರಿ ಪಂಚಮಿ ಬಂದಿದ್ದು, ಈ ಬಾರಿ 11ನೇ ದಿನಕ್ಕೆ ವಿಜಯದಶಮಿ ಬರಲಿದೆ. ಹಾಗಾಗಿ ಈ ಬಾರಿ ವಿಶೇಷವಾಗಿ 11 ದಿನಗಳ ದಸರಾ ಆಚರಣೆ ನಡೆಯಲಿದೆ. ಆದರೆ, ಜಂಬೂಸವಾರಿ ಮೆರವಣಿಗೆಯ ಅಂತಿಮ ದಿನಾಂಕವನ್ನು ರಾಜ್ಯ ಸರ್ಕಾರ ತೀರ್ಮಾನಿಸಲಿದೆ. ಮಹಾಲಯ ಅಮಾವಾಸ್ಯೆಯ ಬಳಿಕ ಆರಂಭವಾಗುವ ನವರಾತ್ರಿಯು ಈ ಬಾರಿ ದಶರಾತ್ರಿಯಾಗಲಿದೆ. ಇದು ದಸರಾ ಮಹೋತ್ಸವ ಇತಿಹಾಸದಲ್ಲಿಯೇ ಅಪರೂಪದ ಪ್ರಸಂಗವಾಗಿದೆ. ನಿಯಮದಂತೆ ಸೆ.21ಕ್ಕೆ ಅಮಾವಾಸ್ಯೆ ಮುಗಿದ ಮಾರನೆ ದಿನ (ಸೆ.22) ನವರಾತ್ರಿ ಆರಂಭವಾಗಬೇಕು. ಆದರೆ, ಸೆ.26 ಮತ್ತು 27ರಂದು ಪಂಚಮಿ ಬಂದಿರುವುದರಿಂದ ನವರಾತ್ರಿಯ ದಿನಗಳು ದಶರಾತ್ರಿಯಾಗಿ ಮಾರ್ಪಟ್ಟಿವೆ. ಅ.2ರ ಗಾಂಧಿ ಜಯಂತಿಯಂದು ವಿಜಯದಶಮಿ ನಡೆಯಲಿದೆ. ದಸರಾ ಆರಂಭದ ದಿನಗಳಿಂದಲೂ ನವರಾತ್ರಿಯನ್ನು ಯದುವಂಶಸ್ಥರು ಚಾಚೂ ತಪ್ಪದೆ ನಡೆಸಿಕೊಂಡು ಬಂದಿದ್ದಾರೆ. ಸಾಮಾನ್ಯ ಪಂಚಾಂಗಕ್ಕೂ, ಅರಮನೆ ಪಂಚಾಂಗಕ್ಕೂ ವ್ಯತ್ಯಾಸವಿದೆ. ಈ ಹಿನ್ನೆಲೆಯಲ್ಲಿ ಅರಮನೆಯಲ್ಲಿ ನಡೆಯುವ ವಿಜಯದಶಮಿಗೂ, ಸರ್ಕಾರದ ವಿಜಯದಶಮಿಗೂ ವ್ಯತ್ಯಾಸವಾಗಬಹುದು. ಒಂದು ವೇಳೆ...

ಟ್ರಕ್-ಬೊಲೆರೊ ಮುಖಾಮುಖಿ ಡಿಕ್ಕಿ: ಮದುವೆ ಮುಗಿಸಿ ಮರಳುತ್ತಿದ್ದ 9 ಮಂದಿ ಸಾವು..!

ಟ್ರಕ್-ಬೊಲೆರೊ ಮುಖಾಮುಖಿ ಡಿಕ್ಕಿ: ಮದುವೆ ಮುಗಿಸಿ ಮರಳುತ್ತಿದ್ದ 9 ಮಂದಿ ಸಾವು..!

Accident News : ಸರೈಕೇಲಾ(ಜಾರ್ಖಂಡ್‌): ಟ್ರಕ್ ಮತ್ತು ಬೊಲೆರೊ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂಬತ್ತು ಮಂದಿ ಮೃತಪಟ್ಟಿರುವ ಘಟನೆ ಜಾರ್ಖಂಡ್‌ನ ನಮ್ಶೋಲ್​ ಬಳಿಯ ರಾಷ್ಟ್ರೀಯ ಹೆದ್ದಾರಿ 18ರಲ್ಲಿ ಇಂದು ಬೆಳಗ್ಗೆ ನಡೆಯಿತು. ತಿಲೈತಾರ್ ನಿವಾಸಿಗಳಾದ ವಿಜಯ್ ಮಹಾತೋ, ಸ್ವಪನ್ ಮಹಾತೋ, ಅಜಯ್ ಮಹಾತೋ, ಬೃಹಸ್ಪತಿ ಮಹಾತೋ, ಗುರುಪಾದ ಮಹಾತೋ, ಶಶಾಂಕ್ ಮಹಾತೋ, ಕೃಷ್ಣ ಮಹಾತೋ, ಚಂದ್ರಮೋಹನ್ ಮಹಾತೋ ಮತ್ತು ಚಾಲಕ ಚಿತ್ತರಂಜನ್ ಮಹಾತೋ ಮೃತರೆಂದು ಗುರುತಿಸಲಾಗಿದೆ. ಗುರುವಾರ ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಬಲರಾಂಪುರದ ಅದಾಬ್ನಾ ಗ್ರಾಮದಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ ಬೊಲೆರೊನಲ್ಲಿ ಹಿಂತಿರುಗುತ್ತಿದ್ದಾಗ, ಇಂದು ಬೆಳಗ್ಗೆ 7 ಗಂಟೆಯ ಸುಮಾರಿಗೆ ಜಾರ್ಖಂಡ್-ಪಶ್ಚಿಮ ಬಂಗಾಳ ಗಡಿಯ ನಮ್ಶೋಲ್ ಸಮೀಪ ಬೊಲೆರೊ ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟ್ರಕ್​ ಭತ್ತದ ಗದ್ದೆಗೆ ನುಗ್ಗಿ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಒಂಬತ್ತೂ ಮಂದಿ ಸ್ಥಳದಲ್ಲೇ ಅಸುನೀಗಿದ್ದಾರೆ. ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಎಲ್ಲರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಪುರುಲಿಯಾ ಆಸ್ಪತ್ರೆಗೆ...

ಸತತ ಎರಡು ದಿನದಿಂದ ಚಿನ್ನದ ಬೆಲೆ ಏರಿಕೆ; ಬೆಂಗಳೂರಲ್ಲಿ ಈಗ ಚಿನ್ನದ ಬೆಲೆ ಎಷ್ಟಿದೆ..?

ಸತತ ಎರಡು ದಿನದಿಂದ ಚಿನ್ನದ ಬೆಲೆ ಏರಿಕೆ; ಬೆಂಗಳೂರಲ್ಲಿ ಈಗ ಚಿನ್ನದ ಬೆಲೆ ಎಷ್ಟಿದೆ..?

Gold Price Today: ಇರಾನ್-ಇಸ್ರೇಲ್ ಯುದ್ಧದಿಂದಾಗಿ ಕಚ್ಚಾ ತೈಲ ಬೆಲೆಗಳು ಭಾರೀ ಪ್ರಮಾಣದಲ್ಲಿ ಏರುತ್ತಿವೆ. ಇದು ಇತರ ಕ್ಷೇತ್ರಗಳ ಮೇಲೂ ಪರಿಣಾಮ ಬೀರುತ್ತಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಹೆಚ್ಚಿರುವ ಕಾರಣ, ಹೂಡಿಕೆದಾರರು ಹೂಡಿಕೆಗೆ ಸುರಕ್ಷಿತ ಸಾಧನಗಳ್ನು ಹುಡುಕುತ್ತಿದ್ದಾರೆ. ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತಿದ್ದು, ಬೆಲೆ ಏರಿಕೆಗೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರಗಳು ಏರುಗತಿಯಲ್ಲಿದ್ದು, ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಸಮೀಪದಲ್ಲಿ ವಹಿವಾಟು ನಡೆಸುತ್ತಿವೆ. ಇದು ದೇಶೀಯ ಮಾರುಕಟ್ಟೆ ಮೇಲೂ ಪರಿಣಾಮ ಬೀರಿದ್ದು, ಚಿನ್ನದ ಬೆಲೆಯಲ್ಲಿ ಸತತ ಎರಡು ದಿನದಿಂದ ಏರಿಕೆ ಕಂಡಿದೆ. ಬೆಂಗಳೂರಲ್ಲಿ ಕಳೆದ ಎರಡೇ ದಿನದಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು ₹700 ರಷ್ಟು ಹೆಚ್ಚಾಗಿದೆ. ಜೂನ್ 20 ರಂದು ಶುಕ್ರವಾರ ಬೆಂಗಳೂರಲ್ಲಿ ಚಿನ್ನದ ದರಗಳು ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಬೆಂಗಳೂರಲ್ಲಿ ಮತ್ತೆ ಏರಿಕೆಯಾದ ಚಿನ್ನದ ಬೆಲೆ ಬೆಂಗಳೂರಲ್ಲಿ ಚಿನ್ನದ ದರಗಳು ಸತತ ಎರಡನೇ ದಿನವೂ ಹೆಚ್ಚಾಗಿವೆ. ಕಳೆದ ಬುಧವಾರ 24 ಕ್ಯಾರೆಟ್ ಅಪರಂಜಿ ಚಿನ್ನದ ದರ...

error: Content is protected !!