ಮುಂಡಗೋಡ ಪಟ್ಟಣದಲ್ಲಿ ಭಾರಿ ಮಳೆ ಗಾಳಿಗೆ ಇನ್ನಿಲ್ಲದ ಅವಾಂತರಗಳು, ಅವಘಡಗಳು ಸಂಭವಿಸಿವೆ. ಪಟ್ಟಣದ ಬಂಕಾಪುರ ರಸ್ತೆಯ PLD ಬ್ಯಾಂಕ್ ಹತ್ತಿರದ ಮೊಬೈಲ್ ಟವರ್ ಮಳೆ ಗಾಳಿಗೆ ಬಿದ್ದಿದೆ. ಅಲ್ದೆ ಹಲವು ಮನೆಗಳಿಗೆ ಹಾನಿಯಾಗಿದೆ. ಆದ್ರೆ, ಖಚಿತ ಮಾಹಿತಿಗಳು ಇನ್ನಷ್ಟೆ ಬರಬೇಕಿದೆ. PLD ಬ್ಯಾಂಕ್ ಪಕ್ಕದಲ್ಲಿರುವ ಮೊಬೈಲ್ ಟವರ್ ಮಳೆಗಾಳಿಗೆ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಇನ್ನು ಇದ್ರಂತೆ ಪಟ್ಟಣದ ನೆಹರು ನಗರ, ಗಾಂಧಿನಗರದಲ್ಲಿ ಹಲವು ಮನೆಗಳ ಮೇಲ್ಚಾವಣಿಗಳು ಮಳೆಗಾಳಿಗೆ ಹಾರಿಹೋಗಿವೆ. ಅಲ್ದೆ, ಮರಗಳು ಮನೆಗಳ ಮೇಲೆ ಬಿದ್ದು ಹಾನಿಯಾಗಿದೆ.
Top Stories
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!
ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ಮುಂಡಗೋಡ ತಾಲೂಕಿನ ಕೆಲವು ಕಡೆ ಸಂಜೆ ಭಾರಿ ಮಳೆ ಗಾಳಿಗೆ ಅವಾಂತರಗಳು ಸೃಷ್ಠಿಯಾಗಿವೆ. ಭಾರೀ ಮಳೆ ಗಾಳಿಗೆ ಶಿರಸಿ ರಸ್ತೆಯ ಸಾಲಗಾಂವ್ ಸಮೀಪ ಬೃಹತ್ ಮಾವಿನ ಮರ ರಸ್ತೆ ಮೇಲೆ ಬಿದ್ದಿದೆ. ಪರಿಣಾಮ ರಸ್ತೆ ಸಂಚಾರ ಕಳೆದ ಒಂದು ಗಂಟೆಯಿಂದ ಸ್ಥಗಿತಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.. ಮಳೆ ಗಾಳಿಗೆ ರಸ್ತೆ ಮೇಲೆಯೇ ಧರೆಗುರುಳಿರೋ ಮರದ ತೆರವು ಮಾಡಬೇಕಿದೆ. ರಸ್ತೆ ಸಂಚಾರ ಸುಗಮಗೊಳಿಸವೇಕಿದೆ ಅಂತಾ ವಾಹನ ಸವಾರರು ಪರದಾಡುತ್ತಿದ್ದಾರೆ.
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ತಾಲೂಕಿನ ಕಾತೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಂದಿಪುರದಲ್ಲಿ ಮತ್ತೊಂದು ವಿದ್ಯುತ್ ದುರಂತ ಸಂಭವಿಸಿದೆ. ಅನಧೀಕೃತವಾಗಿ ವಿದ್ಯುತ್ ಕಂಬಕ್ಕೆ ವೈಯರ್ ಮೂಲಕ ಸಂಪರ್ಕ ಪಡೆದಿದ್ದ ಸಂದರ್ಭದಲ್ಲಿ ಕಟ್ ಆಗಿ ಬಿದ್ದಿದ್ದ ವೈಯರ್ ತುಳಿದು, 60 ವರ್ಷದ ವ್ಯಕ್ತಿಯೊಬ್ಬ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ನಂದಿಪುರದ ಶಿವಪ್ಪ ನಾಗಪ್ಪ ವಡ್ಡರ್ (60) ವಿದ್ಯುತ್ ಆಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ನಿನ್ನೆ ಬೆಳಿಗ್ಗೆ ಮನೆಯಿಂದ ಗದ್ದೆಗೆ ತೆರಳಿದ್ದ. ಆದ್ರೆ, ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಗದ್ದೆಗೆ ಹೋಗಿ ಹುಡುಕಾಡಿದ್ದಾರೆ. ಆ ವೇಳೆ ಆ ವ್ಯಕ್ತಿಯ ಶವವಾಗಿ ದೊರೆತಿದ್ದು, ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾನೆ. ಅಂದಹಾಗೆ, ಪಕ್ಕದ ಗದ್ದೆಯ ಮೋಹನ್ ಸಹದೇವಪ್ಪ ಪಾಟೀಲ್ ಎಂಬುವವರು, ತಮ್ಮ ಬೋರವೆಲ್ ಗೆ ವಿದ್ಯುತ್ ಸಂಪರ್ಕ ಕಲ್ಪಸಲಿಸಲು, ಮೃತ ವ್ಯಕ್ತಿಯ ಗದ್ದೆಯಲ್ಲಿರೋ ವಿದ್ಯುತ್ ಕಂಬದಿಂದ ಅನಧೀಕೃತವಾಗಿ ವೈಯರ್ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡಿದ್ದ ಎನ್ನಲಾಗಿದೆ. ಹಾಗೆ ಸಂಪರ್ಕ ಕಲ್ಪಿಸಿಕೊಂಡಿದ್ದ ವೈಯರ್ ತುಂಡಾಗಿದ್ದು, ಅದರಲ್ಲಿ ವಿದ್ಯುತ್ ಪ್ರವಹಿಸಿದೆ. ಈ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. KSRTC ಬಸ್ ನಿಲ್ದಾಣದ ಎದುರಲ್ಲೇ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಓರ್ವ ಆರೋಪಿ ವಶಕ್ಕೆ ಸಿಕ್ಕಿದ್ದು, ಮೂವರು ಎಸ್ಕೇಪ್ ಆಗಿದ್ದಾರೆ. ಅಂದಹಾಗೆ, ಮುಂಡಗೋಡ KSRTC ಬಸ್ ನಿಲ್ದಾಣದ ಎದುರು,ಸಾರ್ವಜನಿಕ ಸ್ಥಳದಲ್ಲಿ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಹೀಗಿದ್ದಾಗ, ಖಚಿತ ಮಾಹಿತಿ ಪಡೆದ ಪೊಲೀಸ್ರು ದಾಳಿ ನಡೆಸಿದ್ದಾರೆ. ಪರಿಣಾಮ, ಮುಂಡಗೋಡ ಅಂಬೇಡ್ಕರ್ ಓಣಿಯ ಮಂಜುನಾಥ ನಾಗಪ್ಪ ಕೊರವರ(33), ಆನಂದನಗರದ ವೆಂಕಟೇಶ ಅಶೋಕ ಅರಿವಾಣ(32) ಗದಗ ಮೂಲದ ಮಂಜುನಾಥ ಬೈಲಪ್ಪ ಆಸಂಗಿ(30) ಹಾಗೂ ಮುಂಡಗೋಡ ತಾಲೂಕಿನ ಚಿಗಳ್ಳಿಯ ಹರೀಶ ದೇವಿಂದ್ರಪ್ಪ ಬಾಳೆಮ್ಮನವರ(28) ಎಂಬುವವರೇ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪಿಗಳಾಗಿದ್ದು, ಇದ್ರಲ್ಲಿ ಮುಂಡಗೋಡ ಅಂಬೇಡ್ಕರ್ ಓಣಿಯ ಮಂಜುನಾಥ ನಾಗಪ್ಪ ಕೊರವರ(33) ಮಾತ್ರ ಸಿಕ್ಕಿದ್ದು, ಉಳಿದವರು ಪರಾರಿಯಾಗಿದ್ದಾರೆ ಅಂತಾ ಪೊಲೀಸರು ಮಾಹಿತಿ ನೀಡಿದ್ದಾರೆ. ಸಿಕ್ಕ ಆರೋಪಿಯನ್ನು ಜಪ್ತಿ ಮಾಡಿದಾಗ ನಗದು ಹಣ 2300/-ರೂ, ಲಾವಾ ಕಂಪನಿಯ ಕೀಪ್ಯಾಡ್ ಮೋಬೈಲ್ ಮತ್ತು ಕ್ರಿಕೇಟ್...
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ಕಾರವಾರ: ಮಾದಕ ವಸ್ತುಗಳ ಬಳಕೆಯಿಂದ ಅದನ್ನು ಸೇವನೆ ಮಾಡುವ ವ್ಯಕ್ತಿಯ ಕುಟುಂಬದ ಮೇಲೆ ಮಾತ್ರವಲ್ಲದೇ ಇಡೀ ಸಮಾಜದ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಉಂಟಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಡಿ.ಎಸ್.ವಿಜಯ ಕುಮಾರ್ ತೀವ್ರ ಕಳವಳ ವ್ಯಕ್ತಪಡಿಸಿದರು. ಅವರು ಭಾನುವಾರ ಕ್ರಿಮ್ಸ್ ನ ಕುವೆಂಪು ಕಲಾಭವನದಲ್ಲಿ , ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಮತ್ತು ಜಿಲ್ಲಾ ಪೊಲೀಸ್ ಇಲಾಖೆ, ಉತ್ತರ ಕನ್ನಡ ಜಿಲ್ಲೆ ಅವರ ವತಿಯಿಂದ, ಜಿಲ್ಲೆಯ ನ್ಯಾಯಾಂಗ ಅಧಿಕಾರಿಗಳಿಗೆ, ಸರ್ಕಾರಿ ಅಭಿಯೋಜಕರುಗಳಿಗೆ, ಪೊಲೀಸ್ ಅಧಿಕಾರಿಗಳಿಗೆ, ತನಿಖಾ ಸಹಾಯಕರುಗಳಿಗೆ ಮತ್ತು ವಿವಿಧ ಇಲಾಖಾ ಅಧಿಕಾರಿಗಳಿಗೆ ಆಯೋಜಿಸಿದ್ದ “ಮಾದಕ ದ್ರವ್ಯಗಳ ಮತ್ತು ಮನೋವಿಕೃತ ವಸ್ತುಗಳ ಅಧಿನಿಯಮ-1985 “ರ ಕುರಿತು ಒಂದು ದಿನದ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಮಾದಕ ವಸ್ತುಗಳ ಸೇವನೆಯಿಂದ ಮನೆಯಲ್ಲಿ ಕಳ್ಳತನ, ಕುಟುಂಬದಲ್ಲಿ ಕೊಲೆಗಳು, ಅಪಘಾತ ಪ್ರಕರಣಗಳು , ಹಿಂಸಾತ್ಮಕ ಕೃತ್ಯಗಳು ಹೆಚ್ಚಾಗುತ್ತಿದ್ದು,...
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ತಾಲೂಕಿನ ನಂದಿಕಟ್ಟಾದಲ್ಲಿ ಶ್ರೀರಾಮಸೇನೆಯ ಕಾರ್ಯಕರ್ತರು, ರಾಮನವಮಿ ಅಂಗವಾಗಿ ಸಮಾಜಿಕ ಕಳಕಳಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಹುಬ್ಬಳ್ಳಿಯ ಪ್ರತಿಷ್ಠಿತ ಸೆಕ್ಯೂರ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ಮತ್ತು ಹೃದಯ ತಪಾಸಣಾ ಶಿಬಿರ ಏರ್ಪಡಿಸಿದ್ದರು. ಶ್ರೀರಾಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಹಲವು ಸಾಧಕರಿಗೆ ಸನ್ಮಾನ ಮಾಡಲಾಯಿತು. ನಂತರ ಗ್ರಾಮದ ಈಶ್ವರ ದೇವಸ್ಥಾನದಲ್ಲಿ ಉಚಿತ ಆರೋಗ್ಯ, ಹೃದಯ ತಪಾಸಣೆ ನಡೆಸಲಾಯಿತು. ನೂರಾರು ಜನರ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಈ ವೇಳೆ ನಂದಿಕಟ್ಟಾ ಗ್ರಾಮ ಪಂಚಾಯತಿ ಸದಸ್ಯ ಸಂತೋಷ ಭೋಸಲೆ, ಸದಸ್ಯರಾದ ರಮೇಶ ನೇಮಣ್ಣವರ್, ಉದಯ ಕವಟೆ, ಸುನಿಲ್ ಬಸವಣ್ಣಪ್ಪ ಕೊಟ್ಟಗೂಣಸಿ, 108 ಅಂಬ್ಯುಲೆನ್ಸ್ ತಂತ್ರಜ್ಞ ಧನರಾಜ್, ಮಂಜು ಕವಟೆ, ಕೇದಾರಿ ಮುಗಳಿ, ಶ್ರೀರಾಮ ಸೇನಾ ನಂದಿಕಟ್ಟಾ ಅಧ್ಯಕ್ಷ ಸಂಜಯ್ ಭೋಸ್ಲೆ . ಉಪಾಧ್ಯಕ್ಷ ಮಹಾಂತೇಶ್ ಹರಿಜನ, ಲಚ್ಚಪ್ಪ ದುರಮುರ್ಗಿ, ನಂದನ್ ಪಾಟೀಲ್, ಪಕ್ಕಿರೇಶ್ ಮಳಲಿ, ಆನಂದ್ ಪಾಟೀಲ್, ಸಂದೀಪ್ ಬೋಸಲೆ, ಅಭಿ, ಚೇತನ್, ಕೃಷ್ಣಾ, ಶಿವಾನಂದ, ಪಕ್ಕೀರೇಶ್,...
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಮುಂಡಗೋಡ: ಪಟ್ಟಣದ ಗಾಂಧಿನಗರ ಸ್ಲಂ ಬೋರ್ಡ್ ಘೋಷಣೆಗೆ ಸಂಬಂಧಿಸಿದಂತೆ ಶನಿವಾರ ಜಂಟಿ ತನಿಖಾ ತಂಡಕ್ಕೆ ಗಾಂಧಿನಗರದ ನಿವಾಸಿಗಳು ಪರ-ವಿರೋಧ ಪ್ರತ್ಯೇಕ ವಾಗಿ ದಾಖಲೆ ಸಮೇತ ಮನವಿ ಸಲ್ಲಿಸಿದ ಘಟನೆ ನಡೆದಿದೆ. ಪಟ್ಟಣದ ಗಾಂಧಿನಗರದ ಇಪ್ಪತೈದು ಎಕರೆ ಪ್ರದೇಶದಲ್ಲಿ ಎಲ್ಲಾ ಮೂಲಸೌಕರ್ಯ ಇದ್ದರು ಸುಳ್ಳು ದಾಖಲೆ ನೀಡಿ ಸ್ಲಂ ಬೋರ್ಡ್ ಘೋಷಣೆ ಮಾಡಲಾಗಿದೆ. ಎಂದು ವೇಕಟೇಶ ಶಿರಾಲಿ ಅವರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು ಈ ದೂರಿನ ಅನ್ವಯ ಜಿಲ್ಲಾ ಧಿಕಾರಿಗಳು ಕೂಲಂಕುಷವಾಗಿ ಪರಿಶೀಲಿಸಿ ಸತ್ಯ ಶೋಧನಾ ವರದಿ ನೀಡುವಂತೆ ಜಂಟಿ ತನಿಖಾ ತಂಡ ರಚಿಸಿದ್ದರು. ಈ ತಂಡದಲ್ಲಿ ಜಿಲ್ಲಾ ಕಾರ್ಯ ನಿರ್ವಾಹಕ ಅಭಿಯಂತರ ಎ ರವಿಕುಮಾರ, ಜಿಲ್ಲಾ ನಗರಕೋಶ ಎಇಇ ಕೆಎಸ್ ಕಮ್ಮಾರ್, ಸ್ಲಂ ಬೋರ್ಡ್ ಅಧಿಕಾರಿ ಪ್ರತೀಕ್ ದಳವಾಯಿ, ಜಿಲ್ಲಾ ನಗರಸಭೆ ತಹಶೀಲ್ದಾರ್ ರವಿರಾಜ್ ದೀಕ್ಷತ್, ಇಲ್ಲಿನ ಉಪತಹಶೀಲ್ದಾರ ಚಂದ್ರಶೇಖರ ಹೊಸಮನಿ ಮತ್ತು ಪ.ಪಂ ಮುಖ್ಯಾಧಿಕಾರಿ ಚಂದ್ರಶೇಖರ ಒಳಗೊಂಡಂತೆ ಸಮಿತಿ ರಚಿಸಿ. 15 ದಿನಗಳವೊಳಗಾಗಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದರು. ಅದರಂತೆ...
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಮುಂಡಗೋಡ: ಅರಣ್ಯ ಇಲಾಖೆಯವರು ಉದ್ಯೋಗ ಖಾತ್ರಿ ಯೋಜನೆಯನ್ನು ಹೆಚ್ಚು ಸದ್ಭಳಕೆ ಮಾಡಿಕೊಳ್ಳುವ ಮೂಲಕ ಅರಣ್ಯ ಬೆಳಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ ಖಾಂದೂ ಶನಿವಾರ ಹೇಳಿದ್ರು.. ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅನುಕೂಲತೆಯಿದೆ ಆದರೆ ಅರಣ್ಯ ಇಲಾಖೆಯವರು ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಳ್ಳುತ್ತಿಲ್ಲ ಮುಂದಿನ ದಿನಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಅರಣ್ಯ ಪ್ರದೇಶದಲ್ಲಿ ಉತ್ತಮ ಕಾಮಗಾರಿ ಕೈಗೊಳ್ಳಲು ಅರಣ್ಯಾಧಿಕಾರಿಗಳಿಗೆ ಸೂಚಿಸಿದರು ಅಲ್ದೆ, ತಾಲೂಕಿನಲ್ಲಿರುವ ಹದಿನಾರು ಗ್ರಾಮ ಪಂಚಾಯಿತಿಯವರು ಉದ್ಯೋಗ ಖಾತ್ರಿ ಯೋಜನೆಯನ್ನು ಸರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಕಾರ್ಮಿಕರಿಗೆ ಕೆಲಸ ನೀಡಿದ್ದು ಮುಂದಿನ ದಿನಗಳಲ್ಲಿಯೂ ಇದೆ ರೀತಿಯಾಗಿ ಕಾಮಗಾರಿ ಕೈಗೊಳ್ಳಲು ಸೂಚಿಸಿದರು. ಅಂಗನವಾಡಿಗೆ ಭೇಟಿ..! ಆರಂಭದಲ್ಲಿ ಮೈನಳ್ಳಿ ಗ್ರಾಮ ಪಂಚಾಯಿತಿ ಹಾಗೂ ಸರ್ಕಾರಿ ಶಾಲೆ, ಅಂಗನವಾಡಿ ಕೆಂದ್ರಗಳಿಗೆ ಭೇಟಿ ನೀಡಿ...
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಮುಂಡಗೋಡ ಪಟ್ಟಣದ ಸರ್ವೆ ನಂಬರ್ 186 ರ ಗಾಂಧಿ ನಗರ ಪ್ರದೇಶವನ್ನು ಸುಳ್ಳು ಹಾಗೂ ತಪ್ಪು ಮಾಹಿತಿ ನೀಡಿ, ಸ್ಲಂ ಅಂತಾ ಘೋಷಣೆ ಮಾಡಿದ್ದಾರೆ ಎಂದು ಆರೋಪಿಸಿ ಮುಂಡಗೋಡ ಪಟ್ಟಣ ಪಂಚಾಯತ್ ಹಾಗೂ ಸ್ಲಂ ಬೋರ್ಡ್ ಬೆಳಗಾವಿ ವಿರುದ್ಧ ಗಾಂಧಿನಗರದ ನಿವಾಸಿಗಳು ಇಂದು ಶನಿವಾರ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಗಾಂಧಿನಗರವನ್ನು ಸ್ಲಂ ಬೋರ್ಡ್ ಅಂತಾ ಮಾಡಿರುವುದನ್ನು ಕೂಡಲೇ ತಿದ್ದುಪಡಿ ಮಾಡಬೇಕು ಅಂತ ಆಗ್ರಹಿಸಿ, ಗಾಂಧಿನಗರ ನಿವಾಸಿಗಳು, ಬೆಳಿಗ್ಗೆ 11 ಗಂಟೆಗೆ ಗಾಂಧಿನಗರದಿಂದ ಪಟ್ಟಣ ಪಂಚಾಯತಿವರೆಗೂ ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ ಮೂಲಕ ಬಂದು, ಪಟ್ಟಣ ಪಂಚಾಯತಿ ಎದುರು ಪ್ರತಿಭಟನೆ ನಡೆಸಲಿದ್ದಾರೆ. ಹಾಗಂತ ಮುಂಡಗೋಡ ಗಾಂಧಿನಗರ ಅಭಿವೃದ್ಧಿ ಸಮಿತಿ ಸದಸ್ಯರು ತಿಳಿಸಿದ್ದಾರೆ.
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಶುಂಠಿ ಹೊಲದಲ್ಲಿ ಕೂಲಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕನೋರ್ವ ವಿದ್ಯುತ್ ಗೆ ಬಲಿಯಾಗಿ, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ, ಮುಂಡಗೋಡ ತಾಲೂಕಿನ ಓಣಿಕೇರಿ ಗ್ರಾಮದಲ್ಲಿ ನಡೆದಿದೆ. ಅಂದಹಾಗೆ, ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದ ಬಸವರಾಜ್ ಚಂದ್ರಪ್ಪ ಹರಿಜನ್ (22) ವಿದ್ಯುತ್ ದುರಂತದಲ್ಲಿ ಜೀವ ಕಳೆದುಕೊಂಡ ನತದೃಷ್ಟನಾಗಿದ್ದಾನೆ. ಹರೀಶ್ ರಾಮಣ್ಣ ಹರಿಜನ್ ಗಾಯಗೊಂಡವನಾಗಿದ್ದಾನೆ ಪಾಳಾ ಗ್ರಾಮದ ಮೂಕಪ್ಪ ಹರಿಜನ್ ಎಂಬಾತ, ಓಣಿಕೇರಿ ಗ್ರಾಮದಲ್ಲಿ ಬೇರೋಬ್ಬರ ಜಮೀನನ್ನು ಲಾವಣಿ ಮೇಲೆ ಪಡೆದು ಶುಂಠಿ ಕೃಷಿ ಮಾಡುತ್ತಿದ್ದಾರೆ. ಹೀಗಾಗಿ, ಇಂದು ಶುಂಠಿ ಕೀಳಲು ಹಾನಗಲ್ ತಾಲೂಕ್ ಬಾಳಂಬಿಡ್ ಗ್ರಾಮದ ಕೂಲಿ ಕಾರ್ಮಿಕರನ್ನು ಕರೆತಂದಿದ್ದರು. ಕಾರ್ಮಿಕರು ಮಧ್ಯಾಹ್ನ ಊಟದ ಸಮಯಕ್ಕೆ ಪಕ್ಕದ ಮಾರುತಿ ಹರಿಜನ ಎಂಬುವವರ ಜಮೀನಿನಲ್ಲಿ ಮರದ ಕೆಳಗೆ ಕುಳಿತು ಊಟ ಮಾಡಲು ತೆರಳುತ್ತಿದ್ದರು. ಈ ವೇಳೆ ಅಲ್ಲೆ ಹಾದು ಹೋಗಿದ್ದ ವಿದ್ಯುತ್ ವೈಯರ್ ತುಳಿದು ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃರಪಟ್ಟಿದ್ದಾನೆ. ಇದೇ ವೇಳೆ ಮತ್ತೋರ್ವ ಕೂಲಿ ಕಾರ್ಮಿಕ ಹರೀಶ್ ರಾಮಣ್ಣ ಹರಿಜನ್ ಗಾಯಗೊಂಡಿದ್ದು ಚಿಕಿತ್ಸೆಗಾಗಿ...