IPL 2025 RCB vs SRH Match: ಇಂಡಿಯನ್ ಪ್ರೀಮಿಯರ್ ಲೀಗ್ (IPL)ನ 65ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ತಂಡ 42 ರನ್‌ಗಳಿಂದ ಗೆಲುವು ಸಾಧಿಸಿದೆ. ಇದರೊಂದಿಗೆ ಆರ್ಸಿಬಿಯ ಕನಸನ್ನು ಭಗ್ನಗೊಳಿಸಿದೆ. ಏಕಾನ ಮೈದಾನದಲ್ಲಿ ನಡೆದಿದ್ದ ರೋಚಕ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಆರೆಂಜ್ ಆರ್ಮಿ, ಇಶನ್ ಕಿಶನ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ಸಹಯಾದಿಂದಾಗಿ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 231 ರನ್ ಬಾರಿಸಿತು. ಇದಕ್ಕುತ್ತರವಾಗಿ ಬೆಂಗಳೂರು ತಂಡ 189 ರನ್ ಗಳಿಸಲಷ್ಟೇ ಶಕ್ತವಾಯಿತು. ಬೃಹತ್ ಸ್ಕೋರ್ ಬೆನ್ನಟ್ಟಿದ ಬೆಂಗಳೂರು ಉತಮ್ಮ ಆರಂಭವನ್ನು ಪಡೆದಿತ್ತು. ಆರಂಭಿಕ ಬ್ಯಾಟರ್ಗಳಾದ ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ಪವರ್ಪ್ಲೇನಲ್ಲಿ ಹೈದರಾಬಾದ್ ಬೌಲರ್ಗಳ ಮೇಲೆ ಸವಾರಿ ಮಾಡಿದರು. ಆದರೇ ಕೊಹ್ಲಿ 43 ರನ್ಗಳಿಸಿದ್ದ ವೇಳೆ ಕ್ಯಾಚೌಟ್ ಆಗಿ ಪೆವಿಲಿಯನ್ ಸೇರಿದರು. ಇಲ್ಲಿಂದ ಆರ್ಸಿಬಿ ಪತನ ಆರಂಭವಾಯಿತ. ಬಳಿಕ ಬಂದ ಮಯಾಂಕ್ ಅಗರ್ವಾಲ್ 11ರನ್...
Top Stories
ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆಯಿಂದ, ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ..!
ದೆಹಲಿಯಲ್ಲಿ 23 ಕೋರೊನಾ ಕೇಸ್ ಗಳು ವರದಿ; ಭಯ ಬೇಡ, ಸಜ್ಜಾಗಿರಲು ಆಸ್ಪತ್ರೆಗಳಿಗೆ ಸರ್ಕಾರದ ಸೂಚನೆ
ಭಾರೀ ಮಳೆಯಿಂದ ಶಿರಸಿ-ಕುಮಟಾ ರಸ್ತೆ ವಾಹನ ಸಂಚಾರ ಸಂಪೂರ್ಣ ಬಂದ್, ಡೀಸಿ ಆದೇಶ..!
ಜಿಲ್ಲೆಯಲ್ಲಿನ ಸೇತುವೆಗಳ ದೃಡತೆ ಬಗ್ಗೆ ವರದಿ ನೀಡಿ, ಅನಾಹುತವಾದಲ್ಲಿ ಅಧಿಕಾರಿಗಳೇ ಹೊಣೆ-ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಎಚ್ಚರಿಕೆ..!
ಜಿಲ್ಲೆಯಲ್ಲಿ ಮೇ.27 ರ ವರೆಗೆ ರೆಡ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ರ ಅವಧಿ ವಿಸ್ತರಣೆ..!
ಜಿಲ್ಲಾ ತುರ್ತು ಕಾರ್ಯಚರಣಾ ಕೇಂದ್ರದ ಮೂಲಕ ಸಮಸ್ಯೆಗಳಿಗೆ ತುರ್ತು ಸ್ಪಂದನೆ, ಮಳೆಯಿಂದ ನಿಮಗೂ ಸಮಸ್ಯೆ ಆದಲ್ಲಿ ತಕ್ಷಣವೇ ಇಲ್ಲಿ ಕರೆ ಮಾಡಿ..!
ಪಬ್ಲಿಕ್ ಫಸ್ಟ್ ನ್ಯೂಸ್: ಉತ್ತರ ಕನ್ನಡದ ಇಂದಿನ ಸಂಕ್ಷಿಪ್ತ ಸುದ್ದಿಗಳು
ಮುಂಡಗೋಡ ಸೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ..!
ಮೈಸೂರು ಸ್ಯಾಂಡಲ್ ಸೋಪ್ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕ..!
ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ವಾಹನ ನಿಲ್ಲಿಸುವಂತಿಲ್ಲ, ನದಿಗೆ ಇಳಿಯುವಂತಿಲ್ಲ ಪ್ರತಿಬಂಧಕಾಜ್ಞೆ ಹೊರಡಿಸಿದ ಡಿಸಿ..!
ಮಳೆಗಾಲದಲ್ಲಿ ಜೀವಹಾನಿಯಾಗದಂತೆ ಗರಿಷ್ಠ ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ
ಕಡಿಮೆ CIBIL ಸ್ಕೋರ್ ಇದ್ದರೂ ₹3 ಲಕ್ಷದವರೆಗೆ ಸಾಲ ಪಡೆಯಬಹುದು; ಹೇಗೆ ಗೊತ್ತಾ..? ಮಾಹಿತಿ ಇಲ್ಲಿದೆ..!
ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ಬಂಧನ..!
ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಐಎಸ್ಐ ಗೂಢಚಾರದ ಜಾಲ ಭೇದಿಸಿದ ಗುಪ್ತಚರ ಸಂಸ್ಥೆಗಳು ; ಇಬ್ಬರ ಬಂಧನ..!
ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ, ಬೆಳ್ಳಿ ₹4000 ಹೆಚ್ಚಳ, ಅಷ್ಟಕ್ಕೂ ಇವತ್ತಿನ ಚಿನ್ನದ ಬೆಲೆ ಎಷ್ಟು..?
ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ..!
ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಭಟ, ಇದು, ತಹಶೀಲ್ದಾರ ಕಚೇರಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆಯ ಪ್ರಕಟಣೆ..!
ಉಕ್ಕಿ ಹರಿಯುತ್ತಿದೆ ಉಣಕಲ್ ಕೆರೆ: ವರುಣನ ಅಬ್ಬರಕ್ಕೆ ಮೈತುಂಬಿದ ಪ್ರತಿಷ್ಠಿತ ತಾಣ..!
RCB ಕನಸು ಭಗ್ನಗೊಳಿಸಿದ ಸನ್ ರೈಸರ್ಸ್, ಇನ್ನೇನಿದ್ರೂ ಪಂಜಾಬ್ ಮೇಲೆ ಬೆಂಗಳೂರಿಗರ ಕಣ್ಣು..!
ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆಯಿಂದ, ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ..!
Women skill training: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಸಹಯೋಗದಲ್ಲಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳ ಸ್ವ-ಸಹಾಯ ಗುಂಪುಗಳ ಮೂಲಕ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಹಲವು ಯೋಜನೆ/ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನ ಮಾಡಲಾಗುತ್ತಿದ್ದು, ಪ್ರಸ್ತುತ ಗ್ರಾಮೀಣ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ನೀಡಲು ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದ ಮಹಿಳೆಯರು ಕೃಷಿಯಿಂದ ಹೆಚ್ಚಿನ ಲಾಭ ಪಡೆಯಲಾಗದೇ, ಆದಾಯ ಗಳಿಕೆಗಾಗಿ ಪರ್ಯಾಯ ವ್ಯವಸ್ಥೆ ಹುಡುಕುತ್ತಿದ್ದಾರೆ. ಆದರೆ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉದ್ಯೋಗ ಒದಗಿಸಬಲ್ಲ ಕೌಶಲ್ಯ ತರಬೇತಿಗಳ ಕೊರತೆ ಇದ್ದು, ಸ್ವ-ಉದ್ಯೋಗಕ್ಕೆ ಕೈ ಹಾಕಿದರೆ ಬಂಡವಾಳದ ಕೊರತೆ ಹಾಗೂ ನಷ್ಠ್ಟವಾಗುತ್ತದೆಂಬ ಭಯದಿಂದ ಯಾವುದೇ ಉದ್ಯೋಗವಿಲ್ಲದೆ ಆರ್ಥಿಕವಾಗಿ ಸಬಲರಾಗದೇ ಬಡತನದಲ್ಲೇ ಜೀವನ ಸಾಗಿಸುವಂತ ಸನ್ನಿವೇಶವಿದೆ ಮತ್ತು ಸ್ಥಳೀಯವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯ ಕೊರತೆಯೂ ಸಹ ಇದೆ. Women skill training: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಿಳೆಯರ ಆಕಾಂಕ್ಷೆ...
ದೆಹಲಿಯಲ್ಲಿ 23 ಕೋರೊನಾ ಕೇಸ್ ಗಳು ವರದಿ; ಭಯ ಬೇಡ, ಸಜ್ಜಾಗಿರಲು ಆಸ್ಪತ್ರೆಗಳಿಗೆ ಸರ್ಕಾರದ ಸೂಚನೆ
Covid-19 News: ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 23 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ದೆಹಲಿ ಸರ್ಕಾರವು ಎಲ್ಲಾ ಆಸ್ಪತ್ರೆಗಳು ಹಾಸಿಗೆಗಳು, ಆಮ್ಲಜನಕ, ಔಷಧಿಗಳು ಮತ್ತು ಲಸಿಕೆಗಳು ಲಭ್ಯವಿರುವಂತೆ ನೋಡಿಕೊಂಡು ಸಜ್ಜಾಗಿರುವಂತೆ ಸಲಹೆ ನೀಡಿದೆ. ಸುಮಾರು ಮೂರು ವರ್ಷಗಳ ನಂತರ ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿದೆ. ಗುರುವಾರದವರೆಗೆ 23 ಕೋವಿಡ್-19 ಸೋಂಕಿನ ಪ್ರಕರಣಗಳು ವರದಿಯಾಗಿವೆ ಮತ್ತು ರೋಗಿಗಳು ದೆಹಲಿಯ ನಿವಾಸಿಗಳೇ ಅಥವಾ ನಗರದ ಹೊರಗೆ ಪ್ರಯಾಣದ ಇತಿಹಾಸವನ್ನು ಹೊಂದಿದ್ದಾರೆಯೇ ಎಂಬ ವಿವರಗಳನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಆರೋಗ್ಯ ಸಚಿವ ಪಂಕಜ ಸಿಂಗ್ ಶುಕ್ರವಾರ ಹೇಳಿದ್ದಾರೆ. ಈ ಪಾಸಿಟಿವ್ ಪ್ರಕರಣಗಳನ್ನು ಖಾಸಗಿ ಪ್ರಯೋಗಾಲಯಗಳು ವರದಿ ಮಾಡಿವೆ ಮತ್ತು ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಈ ರೂಪಾಂತರವು ಸಾಮಾನ್ಯ ಇನ್ಫ್ಲುಯೆಂಜಾ ತರಹದ ಲಕ್ಷಣಗಳನ್ನು ಹೊಂದಿದೆ ಎಂದು ಹೇಳಿದರು. Covid-19 News: “ಎಲ್ಲ 23 ಕೋವಿಡ್ ರೋಗಿಗಳ ಆರೋಗ್ಯ ಸ್ಥಿತಿ ಉತ್ತಮವಾಗಿದೆ. ನಾವು ಈಗಾಗಲೇ ಆಸ್ಪತ್ರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ ಮತ್ತು ಯಾವುದೇ ರೀತಿಯ...
ಭಾರೀ ಮಳೆಯಿಂದ ಶಿರಸಿ-ಕುಮಟಾ ರಸ್ತೆ ವಾಹನ ಸಂಚಾರ ಸಂಪೂರ್ಣ ಬಂದ್, ಡೀಸಿ ಆದೇಶ..!
Sirsi-Kumta Road News: ಕಾರವಾರ : ಶಿರಸಿ-ಕುಮಟಾ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಬೆಣ್ಣೆ ಹೊಳೆ ಸೇತುವೆ ಪಕ್ಕದಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಮಾಡಿದ ರಸ್ತೆಯು ಮಳೆಯ ನೀರಿಗೆ ಕೊಚ್ಚಿ ಹೋಗಿದ್ದರಿಂದ ಮುಂದಿನ ಆದೇಶದವರೆಗೆ ಶಿರಸಿ-ಕುಮಟಾ ರಸ್ತೆಯಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ. ಶಿರಸಿ-ಕುಮಟಾ ರಸ್ತೆಯಲ್ಲಿ ಬೆಣ್ಣೆ ಹಳ್ಳ ಬ್ರಿಜ್ ಕಾಮಗಾರಿ ನಡೆಯುತ್ತಿರುವ ಸ್ಥಳದ ಪಕ್ಕದಲ್ಲಿ ತಾತ್ಕಾಲಿಕ ಸಂಚಾರ ವ್ಯವಸ್ಥೆಗಾಗಿ ಕಲ್ಪಿಸಿದ್ದ ಪರ್ಯಾಯ ರಸ್ತೆಯ ಮೇಲೆ “ಬೆಣ್ಣೆ ಹೊಳೆ”ಯ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಶಿರಸಿ ಕುಮಟಾ ರಸ್ತೆಯಲ್ಲಿ ಬ್ಯಾರೀಕೆಡ್ ಅಳವಡಿಸಿ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ತಾತ್ಕಾಲಿಕ ವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬದಲಿ ಮಾರ್ಗವನ್ನು ಬಳಸಲು ಸೂಚಿಸಲಾಗಿದೆ.
ಜಿಲ್ಲೆಯಲ್ಲಿನ ಸೇತುವೆಗಳ ದೃಡತೆ ಬಗ್ಗೆ ವರದಿ ನೀಡಿ, ಅನಾಹುತವಾದಲ್ಲಿ ಅಧಿಕಾರಿಗಳೇ ಹೊಣೆ-ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಎಚ್ಚರಿಕೆ..!
Uttar Kannada alert: ಕಾರವಾರ: ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿನ ಎಲ್ಲಾ ಸೇತುವೆಗಳ ದೃಡತೆಯ ಬಗ್ಗೆ ಸಂಪೂರ್ಣ ವರದಿಯನ್ನು ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಆರಂಭಗೊಂಡಿದ್ದು, ವಾಡಿಕೆಯಂತೆ ಜುಲೈ ತಿಂಗಳಲ್ಲಿ ಅತೀ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿದ್ದು, ಜಿಲ್ಲೆಯ ಹೆದ್ದಾರಿಗಳಲ್ಲಿ ಸುರಕ್ಷಿತ ಸಂಚಾರ ಕುರಿತಂತೆ ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿರುವ ಎಲ್ಲಾ ಸೇತುವೆಗಳ ದೃಢತೆಯ ಕುರಿತಂತೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಯಾವುದೇ ಅವಘಡಗಳು ಸಂಭವಿಸಿದ್ದಲ್ಲಿ ಸಂಬಂದಪಟ್ಟ ಅಧಿಕಾರಿಗಳನ್ನೇ ಹೊಣೆಗಾರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ರು. ಜಿಲ್ಲೆಯಲ್ಲಿ ಮೇ.27 ರ ವರೆಗೆ ರೆಡ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಹೆದ್ದಾರಿ ಅಧಿಕಾರಿಗಳಿಗೆ ಎಚ್ಚರಿಕೆ..! ಜಿಲ್ಲೆಯಲ್ಲಿನ...
ಜಿಲ್ಲೆಯಲ್ಲಿ ಮೇ.27 ರ ವರೆಗೆ ರೆಡ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
Rain Alert News uttar Kannada: ಕಾರವಾರ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳಿಗೆ (ದಿನಾಂಕ 24.05.2025 ರಿಂದ 27.05.2025 ವರೆಗೆ) ರೆಡ್ ಅಲರ್ಟ್ ಇದ್ದು ಈ ದಿನಗಳಲ್ಲಿ ಜಿಲ್ಲೆಯ ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿ (ಸುಮಾರು 40 ಕೀ.ಮೀ) ಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚನೆಯಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ತಿಳಿಸಿದ್ದಾರೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು ಹೆಚ್ಚಿನ ಗಾಳಿ ಬೀಸುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ರ ಅವಧಿ ವಿಸ್ತರಣೆ..! ಹೈ ವೇವ್ ಅಲರ್ಟ್..! ಉತ್ತರ ಕನ್ನಡ, ಜಿಲ್ಲೆಯ ಕರಾವಳಿ ಗುಂಟ ಮಾಜಾಳಿಯಿಂದ ಭಟ್ಕಳದವರೆಗೆ ಹೈ ಟೈಡ್ ಎಚ್ಚರಿಕೆ ನೀಡಲಾಗಿದೆ. ಮೇ 24 ರಂದು...
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ರ ಅವಧಿ ವಿಸ್ತರಣೆ..!
ಮನೆ-ಮನೆ ಭೇಟಿ ನೀಡಿ ಸಮೀಕ್ಷೆಯು ದಿನಾಂಕ:26-05-2025 ರಿಂದ 29-05-2025 ರವರೆಗೆ ವಿಸ್ತರಿಸಲಾಗಿದೆ. ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) – 03 ದಿನಗಳ ಕಾಲ – ಮೇ 30, 31 ಹಾಗೂ 01 ನೇ ಜೂನ್ -2025 ರವರೆಗೆ ಮರು ನಿಗದಿಪಡಿಸಲಾಗಿದೆ ಮತ್ತು ಆನ್ ಲೈನ್ ಮೂಲಕ ಸ್ವಯಂ ಘೋಷಣೆ- ದಿನಾಂಕ: 01-06-2025 ರವರೆಗೆ ಮುಂದುವರೆಯಲಿದೆ ಎಂದು ಏಕ ಸದಸ್ಯ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ತುರ್ತು ಕಾರ್ಯಚರಣಾ ಕೇಂದ್ರದ ಮೂಲಕ ಸಮಸ್ಯೆಗಳಿಗೆ ತುರ್ತು ಸ್ಪಂದನೆ, ಮಳೆಯಿಂದ ನಿಮಗೂ ಸಮಸ್ಯೆ ಆದಲ್ಲಿ ತಕ್ಷಣವೇ ಇಲ್ಲಿ ಕರೆ ಮಾಡಿ..!
Uttar Kannada Rain News: ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿದಿಂದ ಅಗತ್ಯವಿರುವ ಎಲ್ಲಾ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿ 24×7 ಕಾರ್ಯನಿರ್ವಹಿಸುವ ಜಿಲ್ಲಾ ತುರ್ತು ಕಾರ್ಯಚರಣಾ ಕೇಂದ್ರದ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಸ್ಪಂದಿಸಿ, ನೆರವು ನೀಡಲಾಗುತ್ತಿದೆ. ತುರ್ತು ನಿರ್ವಹಣಾ ಕೇಂದ್ರಕ್ಕೆ ಬರುವ ಎಲ್ಲಾ ರೀತಿಯ ಕರೆಗಳ ಮತ್ತು ವಾಟ್ಸಾಪ್ ಮೂಲಕ ದಾಖಲಾಗುವ ಸಮಸ್ಯೆಗಳನ್ನು ದಾಖಲಿಸಿಟ್ಟುಕೊಂಡು ಅವುಗಳನ್ನು ಸಂಬಂದಪಟ್ಟ ಇಲಾಖೆಗಳಿಗೆ ಕಳುಹಿಸಿ, ಆ ಸಮಸ್ಯೆಗಳಿಗೆ ಪರಿಹಾರ ಒಗದಿಸುವ ಕಾರ್ಯವನ್ನು ಅತ್ಯಂತ ಕ್ಷಿಪ್ರಗತಿಯಲ್ಲಿ ಮಾಡುತ್ತಿದ್ದು, ಹಲವು ಸಮಸ್ಯೆಗಳಿಗೆ ಕನಿಷ್ಠ 20 ನಿಮಿಷದಿಂದ 1 ಗಂಟೆಯ ಒಳಗೆ ಪರಿಹಾರವನ್ನು ಒದಗಿಸಲಾಗಿದೆ. ಮೇ 22 ರಂದು ಭಟ್ಕಳದ ಯಲ್ವಡಿಕರ್ ನಲ್ಲಿ ಮನೆ ಹಾನಿಯಾದ ಕುರಿತಂತೆ ಬೆಳಗ್ಗೆ 11.10 ಕ್ಕೆ ದೂರು ಸ್ವೀಕಾರವಾಗಿದ್ದು, ತಕ್ಷಣವೇ ಅದನ್ನು ಭಟ್ಕಳ ತಹಸೀಲ್ದಾರ್ ಅವರಿಗೆ ವರ್ಗಾಯಿಸಲಾಗಿದ್ದು, 11.30 ಕ್ಕೆ ಆ ಸ್ಥಳಕ್ಕೆ ಬೇಟಿ ನೀಡಿದ ಕಂದಾಯ ನಿರೀಕ್ಷಕರು ಮತ್ತು ಗ್ರಾಮ...
ಪಬ್ಲಿಕ್ ಫಸ್ಟ್ ನ್ಯೂಸ್: ಉತ್ತರ ಕನ್ನಡದ ಇಂದಿನ ಸಂಕ್ಷಿಪ್ತ ಸುದ್ದಿಗಳು
Uttar Kannada News Today: ಪಬ್ಲಿಕ್ ಫಸ್ಟ್ ನ್ಯೂಸ್: ಉತ್ತರ ಕನ್ನಡದ ಇಂದಿನ ಸಂಕ್ಷಿಪ್ತ ಸುದ್ದಿಗಳು ಮೇ.27 ರಂದು “ನಿಧಿ ಆಪ್ಕೆ ನಿಕಟ್” ಕಾರ್ಯಕ್ರಮ ಕಾರವಾರ: ಕ್ಷೇತ್ರೀಯ ಭವಿಷ್ಯನಿಧಿ ಕಾರ್ಯಾಲಯ ಹುಬ್ಬಳ್ಳಿ ವತಿಯಿಂದ ಮೇ.27 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಶಿರಸಿಯ ತೋಟಗಾರ್ಸ್ ಎಸ್.ಎಸ್.ಎಚ್ ಕಡ್ವೆ ಇನ್ಸಿಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪಿಂಚಣಿದಾರರು, ಚಂದಾದಾರರು, ಉದ್ಯೋಗದಾತರು ಹಾಗೂ ಕಾರ್ಮಿಕ ಸಂಘಟನೆಯವರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ********* ಸಾರಿಗೆ ಅದಾಲತ್ ಕಾರ್ಯಕ್ರಮ..! ಕಾರವಾತ; ಕಾರವಾರ ವ್ಯಾಪ್ತಿಯಲ್ಲಿರುವ ವಾಹನ ಮಾಲೀಕರು, ಚಾಲಕರು ಹಾಗೂ ಸಾರಿಗೆ ಇಲಾಖೆಯ ಸೇವೆ ಪಡೆಯುತ್ತಿರುವ ಸಾರ್ವಜನಿಕರಿಗೆ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿಯಲ್ಲಿ ಮೇ. 28 ರಂದು ಮಧ್ಯಾಹ್ನ 12 ಗಂಟೆಗೆ ಸಾರಿಗೆ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಸೇವಾ ನ್ಯೂನತೆ ಮತ್ತು ಇನ್ನಿತರ ಸಮಸ್ಯೆಗಳಿದ್ದರೆ ಸಾರ್ವಜನಿಕರು ಖುದ್ದಾಗಿ ಹಾಜರಾಗಿ ಪರಿಹರಿಸಿಕೊಳ್ಳುವಂತೆ...
ಮುಂಡಗೋಡ ಸೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ..!
Hostel application: ಮುಂಡಗೋಡ ಸೇರಿ ಉತ್ತರ ಕನ್ನಡ ಜಿಲ್ಲೆಯಲ್ಲಿ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ..!