ಮುಂಡಗೋಡ- ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇಂದು 18 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು..! ಬೆಳಿಗ್ಗೆ ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಯಾ ವ್ಯಾಪ್ತಿಯ ಗ್ರಾಮಗಳ 18 ವರ್ಷ ಮೇಲ್ಪಟ್ಟ ವಿಕಲಚೇತನರು ಲಸಿಕೆ ಪಡೆದರು.. ತಮ್ಮ ವಿಕಲಚೇತನದ ಗುರುತಿನ ಪ್ರಮಾಣಪತ್ರ, ಆಧಾರ್ ಕಾರ್ಡ್ ನೊಂದಿಗೆ ಬಂದು 18 ವರ್ಷ ಮೇಲ್ಪಟ್ಟ ವಿಕಲಚೇತನರು ಲಸಿಕೆ ಪಡೆದ್ರು.. ತಾಲೂಕಾಡಳಿತ ಶುಕ್ರವಾರದ ಇಡೀ ದಿನ ಮುಂಡಗೋಡ ತಾಲೂಕಿನಲ್ಲಿ ಕೋವಿಡ್ ಉಚಿತ ಲಸಿಕಾ ಅಭಿಯಾನ ಹಮ್ಮಿಕೊಂಡಿದೆ..
Top Stories
ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..? ಯಾರ ಭಯವೂ ಇಲ್ಲದೇ ಹೋಯ್ತಾ..?
ಮೀನುಗಾರರ ಸಂಕಷ್ಟ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ :ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!
ಹಾನಗಲ್ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ವಿಧಿವಶ..!
ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಅಂಶುಕುಮಾರ್ ಪ್ರಕಟಣೆ
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಶಿಗ್ಗಾವಿ ವಿಧಾನಸಭಾ ಕ್ಷೇತ್ರ: ಕೊನೆಯದಿನ 20 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ” ಈವರೆಗೆ 26 ಅಭ್ಯರ್ಥಿಗಳಿಂದ 46 ನಾಮಪತ್ರ..!
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!
ಮುಂಡಗೋಡ: 18 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ ಉಚಿತ ಕೋವಿಡ್ ಲಸಿಕಾ ಅಭಿಯಾನ..!
ಮುಂಡಗೋಡಿನಲ್ಲಿ ಆನ್ಲೈನ್ ವಂಚನೆ: RFO ಗೆ 72 ಸಾವಿರ ರೂ. ಪಂಗನಾಮ..!!
ಮುಂಡಗೋಡ: ಪಟ್ಟಣದ ವಲಯ ಅರಣ್ಯಾಧಿಕಾರಿ ಪರಮೇಶ್ವರ ದಾಸಪ್ಪ ಎಂಬುವವರಿಗೆ BSNL ಸಿಮ್ ಬ್ಲಾಕ್ ಆಗತ್ತೆ ಅಂತಾ ಸಂದೇಶ ಕಳುಹಿಸಿ, ಆನ್ಲೈನ್ ಖದೀಮರು ಬರೋಬ್ಬರಿ 72 ಸಾವಿರ ರೂಪಾಯಿ ವಂಚಿಸಿರೋ ಘಟನೆ ನಡೆದಿದೆ. ಗುರುವಾರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಈ ಕುರಿತು ವಲಯ ಅರಣ್ಯಾಧಿಕಾರಿ, ಪರಮೇಶ್ವರ ದಾಸಪ್ಪ ದೂರು ದಾಖಲಿಸಿದ್ದಾರೆ.. ಹಿಂದಿ ಭಾಷೆಯಲ್ಲಿ ಸಂದೇಶ ಕಳುಹಿಸಿದ್ದ ವ್ಯಕ್ತಿ ಸದ್ಯದಲ್ಲಿಯೇ ನಿಮ್ಮ ಸಿಮ್ ಬ್ಲಾಕ್ ಆಗತ್ತೆ ಹೀಗಾಗಿ ಅಪಡೇಟ್ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ನಂತ್ರ ಕ್ವಿಕ್ ಆ್ಯಪ್ ಡೌನ್ ಲೋಡ್ ಮಾಡಿಸಿ ಓಟಿಪಿ ಪಡೆದಿದ್ದಾರೆ.. ಆ ಮೂಲಕ ಅವ್ರ ಅಕೌಂಟಿನಿಂದ ಬರೊಬ್ಬರಿ 72 ಸಾವಿರ ರೂಪಾಯಿ ಎಗರಿಸಿದ್ದಾರೆ. ಕೊರೋನಾ ಸಂಕಷ್ಟದ ಸಮಯದಲ್ಲಿ ಆನಲೈನ್ ವಂಚಕರ ಹಾವಳಿ ಜೋರಾಗಿದ್ದು ಸಾರ್ವಜನಿಕರು ಎಚ್ಚರದಿಂದ ಇರುವಂತೆ ಪಿಎಸ್ಐ ಬಸವರಾಜ್ ಮಬನೂರು ಎಚ್ಚರಿಸಿದ್ದಾರೆ..
ಮಾಜಿ ಪಪಂ ಸದಸ್ಯ ಎಂ.ಕೆ. ಪಠಾಣ್ ಸ್ಮರಣಾರ್ಥ ಮಾಸ್ಕ್, ಸ್ಯಾನಿಟೈಸರ್ ವಿತರಣೆ..!
ಮುಂಡಗೋಡ: ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಎಂ ಕೆ ಪಠಾಣ ಅವರು ನಿಧನರಾಗಿದ್ದು ಅವರ 20 ನೇ ದಿನದ ಪುಣ್ಯಸ್ಮರಣೆಯ ಅಂಗವಾಗಿ, ಗುರುವಾರ ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕರಿಗೆ ಅವರ ಅಪಾರ ಅಭಿಮಾನಿಗಳು ಹಾಗೂ ಕುಟುಂಬ ಸದಸ್ಯರು ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡಿದರು.! ಈ ಸಂದರ್ಭದಲ್ಲಿ ದಿವಂಗತ ಎಂ.ಕೆ.ಪಠಾಣ್ ರಿಗೆ 1 ನಿಮಿಷ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು..
ತಾಲೂಕಿಗೆ ಉಚಿತ ಅಂಬ್ಯುಲೆನ್ಸ್ ಸೇವೆ ಒದಗಿಸಿದ ಪ್ರಶಾಂತ್ ದೇಶಪಾಂಡೆ..!
ಮುಂಡಗೋಡ ತಾಲೂಕಿನ ಕೊರೋನಾ ಪೀಡಿತರ ಸಹಾಯಕ್ಕಾಗಿ ಕಾಂಗ್ರೆಸ್ ಮುಖಂಡ ಪ್ರಶಾಂತ ದೇಶಪಾಂಡೆ ಅಂಬ್ಯುಲೆನ್ಸ್ ವಾಹನ ನೀಡಿದ್ದಾರೆ.. ಸುಸಜ್ಜಿತ ವ್ಯವಸ್ಥೆ ಇರೋ ಅಂಬ್ಯುಲೆನ್ಸ್ ವಾಹನವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ನೀಡುತ್ತಿದ್ದಾರೆ.. ತಾಲೂಕಿನಲ್ಲಿ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಚಿಕಿತ್ಸೆಗಾಗಿ ಕರೆದೊಯ್ಯಲು ಅಂಬ್ಯುಲೆನ್ಸ್ ಅವಶ್ಯಕತೆ ಹೆಚ್ಚಾಗಿದ್ದು, ಇದನ್ನರಿತ ಪ್ರಶಾಂತ್ ದೇಶಪಾಂಡೆ ಅಂಬ್ಯುಲೆನ್ಸ್ ವಾಹನ ನೀಡಿದ್ದು ಸಮಯೋಚಿತವಾಗಿದೆ ಅಂತಾ ಜನರ ಅಭಿಪ್ರಾಯವಾಗಿದೆ..
ಕಾರ್ಮಿಕರು ಹಾಗೂ ಕಂಪೆನಿಯವರು ಒಂದೇ ಸೈಕಲ್ ನ ಗಾಲಿಗಳಿದ್ದಂತೆ- ಶಿವರಾಮ್ ಹೆಬ್ಬಾರ್
ಬೆಂಗಳೂರು : ಕಾರ್ಮಿಕರು ಮತ್ತು ಕಂಪೆನಿಯವರು ಒಂದೇ ಸೈಕಲ್ ನ ಗಾಲಿಗಳಂತೆ ಕಾರ್ಯ ನಿರ್ವಹಿಸಿ, ಕೋವಿಡ್ ಮುಕ್ತ ಸಮಾಜದ ನಿರ್ಮಾಣಕ್ಕೆ ಸಹಕರಿಸಬೇಕು ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಕರೆ ನೀಡಿದ್ರು. ಬೆಂಗಳೂರಿನ CRDEI ಪ್ರೆಸ್ಟೀಜ್ ಗ್ರೂಫ್, ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆ ಹಾಗೂ ಬಿಬಿಎಂಪಿ ಇವರ ಸಹಭಾಗಿತ್ವದಲ್ಲಿ ಬೆಂಗಳೂರು ನಗರದಲ್ಲಿ ಕಟ್ಟಡ ಕಾರ್ಮಿಕರು ಕೆಲಸ ನಿರ್ವಹಿಸುವ ಅವರವರ ಸ್ಥಳಗಳಲ್ಲಿಯೇ, ಅವರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವ್ರು ಮಾತಾನಾಡುತ್ತಿದ್ರು. ಕಾರ್ಮಿಕರಿಗೆ ಸೌಲಭ್ಯಗಳ ಜೊತೆಗೆ ಆರೋಗ್ಯದ ಕುರಿತು ಕಾಳಜಿ ವಹಿಸಿದಾಗ ಹೊರರಾಜ್ಯದ ವಲಸೆ ಕಾರ್ಮಿಕರಿಗೂ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆದ್ದರಿಂದ, ಗುತ್ತಿಗೆದಾರರು ತಮ್ಮ ಬಳಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಲಸಿಕೆ ಕೊಡಿಸುವ ಮಹತ್ತರವಾದ ಜವಾಬ್ದಾರಿ ನಿರ್ವಹಿಸಬೇಕು ಎಂದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನೇತೃತ್ವದ ರಾಜ್ಯ ಸರ್ಕಾರ ಕಾರ್ಮಿಕರ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಕಾರ್ಮಿಕರು ಮತ್ತು ಉದ್ಯೋಗದಾತರನ್ನು ಸಮಾನವಾಗಿ ಅಭಿವೃದ್ಧಿಯೆಡೆಗೆ ಸಮಾಜವನ್ನು ಕೊಂಡೊಯ್ಯುವಂತೆ ಕೋರಿದರು. ಈ...
ಹಾನಗಲ್ ಆಶಾ ಕಾರ್ಯಕರ್ತರಿಗೆ ತಲಾ 2 ಸಾವಿರ ಗೌರವಧನ ನೀಡಿದ ಶ್ರೀನಿವಾಸ್ ಮಾನೆ..!
ಹಾನಗಲ್- ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್ ಮಾನೆ ಕೋವಿಡ್ ಸಂದರ್ಭದಲ್ಲಿ ಶ್ಲಾಘನೀಯ ಕಾರ್ಯ ಮಾಡಿದ್ದಾರೆ. ಹಾನಗಲ್ ತಾಲೂಕಿನ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ತಲಾ 2000 ರೂ. ಗೌರವಧನ ನೀಡಿದ್ದಾರೆ. ಹಾನಗಲ್ಲ ತಾಲೂಕಿನಲ್ಲಿ ಕೊರೋನಾ ವಿರುದ್ಧದ ಹೋರಾಟದಲ್ಲಿ ತಮ್ಮ ಪ್ರಾಣದ ಹಂಗನ್ನೂ ತೊರೆದು ಕಾರ್ಯ ನಿರ್ವಹಿಸುತ್ತಿರೋ ಆಶಾ ಕಾರ್ಯಕರ್ತರಿಗೆ ಉತ್ತೇಜನ ನೀಡಲು ಶ್ರೀನಿವಾಸ್ ಮಾನೆ ಮುಂದೆ ಬಂದಿದ್ದಾರೆ.. ವಿಧಾನ ಪರಿಷತ್ ಸದಸ್ಯರಾಗಿರೋ ಶ್ರೀನಿವಾಸ್ ಮಾನೆ, ವೈಯಕ್ತಿಕವಾಗಿ ಅವರ ಸಂಬಳದಲ್ಲಿ, ಒಟ್ಟು 272 ಆಶಾ ಕಾರ್ಯಕರ್ತೆಯರಿಗೆ, ತಲಾ. 2000 ರೂ. ನಂತೆ ಒಟ್ಟು. ರೂ. 5 ಲಕ್ಷ 44 ಸಾವಿರ ರೂಪಾಯಿ ಹಣವನ್ನು ನೀಡಿದ್ದಾರೆ. ಇಂದು ಆಶಾ ಕಾರ್ಯಕರ್ತರಿಗೆ ಭೇಟಿಯಾಗಿ ಹಣವನ್ನು ಆಶಾ ಕಾರ್ಯಕರ್ತೆಯರ ಅಕೌಂಟ್ ಗೆ ನೇರವಾಗಿ ವರ್ಗಾಯಿಸುವ ವ್ಯವಸ್ಥೆ ಮಾಡಿದ್ದಾರೆ..
ಚೌಡಳ್ಳಿ ಗ್ರಾಮದ ಗೋಸಾವಿ ಜನಾಂಗದವ್ರಿಗೆ ಆಹಾರ ನೀಡಿದ ಬಸಯ್ಯಸ್ವಾಮಿ..!
ಮುಂಡಗೋಡ- ತಾಲೂಕಿನ ಚೌಡಳ್ಳಿ ಗ್ರಾಮದ ಬಸವನಗರ ಪ್ಲಾಟ್ ನಲ್ಲಿ ಇರುವ ಗೋಸಾವಿ ಜನಾಂಗದವರು ಲಾಕ್ಡೌನ್ ಹಿನ್ನೆಲೆ ಸಂಕಷ್ಟದಲ್ಲಿದ್ದಾರೆ.. ಹೀಗಾಗಿ ಇಂದು ಈ ಕುಟುಂಬಗಳಿಗೆ, ಬಸಯ್ಯಸ್ವಾಮಿ ಹಿರೇಮಠ ಕುಟುಂಬದವರು, ಸಂಕಷ್ಟದಲ್ಲಿದ್ದ ಸುಮಾರು 300 ಜನರಿಗೆ ಆಹಾರದ ವ್ಯವಸ್ಥೆ ಮಾಡಿದ್ರು.. ಪ್ರತಿಯೊಂದು ಕುಟುಂಬಕ್ಕೂ ಆಹಾರ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.. ಹೀಗಾಗಿ ಈ ಕುಟುಂಬದವರ ಸಾಮಾಜಿಕ ಜವಾಬ್ದಾರಿಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ..
ರಾಜ್ಯದಲ್ಲಿ ಜೂನ್ ಅಂತ್ಯದವರೆಗೂ ಲಾಕ್ ಡೌನ್ ನಿಶ್ಚಿತ..!
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯ ಆರ್ಭಟ ಕೊಂಚ ಕಡಿಮೆಯಾಗಿದೆ. ಆದ್ರೆ ಮಹಾಮಾರಿ ನಿತ್ಯವೂ ಮರಣ ಮೃದಂಗವನ್ನು ಬಾರಿಸುತ್ತಿದೆ. ಹೀಗಾಗಿ ಕರ್ನಾಟಕದಲ್ಲಿ ಜೂನ್ ಅಂತ್ಯದ ವರೆಗೂ ಲಾಕ್ ಡೌನ್ ಫಿಕ್ಸ್ ಆಗುವ ಎಲ್ಲಾ ಸಾಧ್ಯತೆಗಳು ನಿಚ್ಚಳವಾಗಿವೆ.. ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಅರ್ಧ ಲಕ್ಷದಷ್ಟು ಸೋಂಕು ಪತ್ತೆಯಾಗುತ್ತಲೇ ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆ ಮಾಡಿತ್ತು. ಲಾಕ್ ಡೌನ್ ಬೆನ್ನಲ್ಲೇ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಕೊಂಚ ಇಳಿಕೆ ಕಾಣುತ್ತಿದೆ. ರಾಜ್ಯದಲ್ಲೀಗ ಸರಿಸುಮಾರು 25 ಸಾವಿರದಷ್ಟು ಸೋಂಕು ಪತ್ತೆಯಾಗುತ್ತಿದೆ. ಆದರೆ ಸಾವಿನ ಸಂಖ್ಯೆ ಮಾತ್ರ 600ರ ಗಡಿ ದಾಟುತ್ತಿದೆ. ಅದ್ರಲ್ಲೂ ಕೊರೊನಾ ಹೆಮ್ಮಾರಿಯ ಜೊತೆಗೆ ಬ್ಲ್ಯಾಕ್ ಫಂಗಸ್ ಹಾವಳಿ ಹೆಚ್ಚುತ್ತಿದ್ದು, ಸೋಂಕಿನ ಪ್ರಮಾಣದಲ್ಲಿಯೂ ಭಾರೀ ಏರಿಕೆಯನ್ನು ಕಾಣುತ್ತಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 24,99,784 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 4,09,924 ಸಕ್ರೀಯ ಪ್ರಕರಣಗಳಿವೆ. ಇನ್ನು ರಾಜ್ಯದಲ್ಲಿ ಇದುವರೆಗೆ ಒಟ್ಟು 26,929 ಮಂದಿ ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಅದ್ರಲ್ಲೂ ಬೆಂಗಳೂರು, ಬೆಳಗಾವಿ, ಬೆಂಗಳೂರು ಗ್ರಾಮಾಂತರ,...
ಇನ್ನು ಜಿಲ್ಲೆಯಲ್ಲಿ ವಾರದ 4 ದಿನ ಅಗತ್ಯ ವಸ್ತುಗಳ ಖರೀಧಿಗೆ ಅವಕಾಶ..!
ಕಾರವಾರ- ಉತ್ತರ ಕನ್ನಡ ಜಿಲ್ಲೆಯಾದ್ಯಂತ ಲಾಕ್ ಡೌನ್ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಮಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ.. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಸೂಚನೆಯಂತೆ ಪರಿಷ್ಕೃತ ಆದೇಶ ಹೊರಡಿಸಲಾಗಿದೆ. ವಾರದ ಎರಡು ದಿನಗಳಿಗೆ ಸೀಮಿತವಾಗಿದ್ದ ಅಗತ್ಯ ವಸ್ತುಗಳ ಖರೀದಿಯ ಅವಕಾಶವನ್ನು, ನಾಳೆಯಿಂದ ಜಿಲ್ಲೆಯಲ್ಲಿ ವಾರದ ನಾಲ್ಕು ದಿನಗಳಿಗೆ, ಅಂದರೆ, ಸೋಮವಾರ, ಮಂಗಳವಾರ, ಬುಧವಾರ ಹಾಗೂ ಗುರುವಾರಗಳಿಗೂ ವಿಸ್ತರಿಸಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ 12 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.. ಇನ್ನು ಜಿಲ್ಲೆಯಲ್ಲಿ ಶುಕ್ರವಾರದಿಂದ ರವಿವಾರದವರೆಗೆ ಮೂರುದಿನ ಕಠಿಣ ಲಾಕ್ ಡೌನ್ ಜಾರಿ ಮಾಡಲಾಗಿದ್ದು ಯಾರೂ ಮನೆಯಿಂದ ಹೊರಬರದಂತೆ ಎಚ್ಚರಿಕೆ ನೀಡಲಾಗಿದೆ.. ಹಾಗಂತ ಉತ್ತರ ಕನ್ನಡ ಜಿಲ್ಲಾಧಿಕಾರಿ ಮಲ್ಲೈ ಮುಹಿಲನ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ..
ಅಗಡಿ ಗ್ರಾಮಕ್ಕೆ ಸಂಪೂರ್ಣ ಸ್ಯಾನಿಟೈಸ್..!
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಗಡಿ ಗ್ರಾಮದಲ್ಲಿ ಇಂದು ಇಡೀ ಗ್ರಾಮದ ಗಲ್ಲಿ ಗಲ್ಲಿಗಳಿಗೂ ಗ್ರಾಮ ಪಂಚಾಯತಿ ವತಿಯಿಂದ ಸ್ಯಾನಿಟೈಸ್ ಮಾಡಲಾಯಿತು.. ಗ್ರಾಮ ಪಂಚಾಯತಿ ಆವರಣದಲ್ಲಿ ಸ್ಯಾನಿಟೈಸ್ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷರು ಚಾಲನೆ ನೀಡಿದ್ರು.. ನಂತರ ಅಗಡಿ ಗ್ರಾಮದ ಬಹುತೇಕ ಗಲ್ಲಿಗಳಿಗೆ ತೆರಳಿ ಸ್ಯಾನಿಟೈಸ್ ಮಾಡಲಾಯಿತು.. ಅದಕ್ಕೂ ಮೊದಲು ಗ್ರಾಮದಲ್ಲಿ ಧ್ವನಿ ವರ್ದಕದ ಮೂಲಕ ಗ್ರಾಮಸ್ತರಿಗೆ ತಿಳುವಳಿಕೆ ನೀಡಲಾಯಿತು..ಈ ವೇಳೆ ಗ್ರಾಮ ಪಂಚಾಯತಿ ಸದಸ್ಯರು ಮುಂದೆ ನಿಂತು ಸ್ಯಾನಿಟೈಸ್ ಕಾರ್ಯ ನೆರವೇರಿಸಿದ್ರು…