Doctor Death News: ಸರಣಿ ಕೊಲೆಗಳನ್ನು ಮಾಡಿ ಪೊಲೀಸರಿಗೆ ತನ್ನ ಸುಳಿವು ಸಿಗಬಾರದು ಎಂದು ಆ ಶವದ ತುಂಡುಗಳನ್ನು ಮೊಸಳೆಗೆ ಆಹಾರವಾಗಿ ಹಾಕುತ್ತಿದ್ದ ಸೀರಿಯಲ್ ಕಿಲ್ಲರ್ ಕುಖ್ಯಾತ ಆಯುರ್ವೇದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. 67 ವರ್ಷದ ದೇವೇಂದರ ಶರ್ಮಾ ಬಹು ಕೊಲೆ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಪೆರೋಲ್ ನಿಂದ ತಪ್ಪಿಸಿಕೊಂಡಿದ್ದ ಹಾಗೂ “ಡಾಕ್ಟರ್ ಡೆತ್” ಎಂದು ಕುಖ್ಯಾತಿ ಪಡೆದಿದ್ದ ರಾಜಸ್ಥಾನದ ಈ ವೈದ್ಯ ದೆಹಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ, ಬೆಳ್ಳಿ ₹4000 ಹೆಚ್ಚಳ, ಅಷ್ಟಕ್ಕೂ ಇವತ್ತಿನ ಚಿನ್ನದ ಬೆಲೆ ಎಷ್ಟು..? ಈತ ಕಳೆದ ವರ್ಷ ಪೆರೋಲ್ ಪಡೆದ ನಂತರ ತಲೆಮರೆಸಿಕೊಂಡಿದ್ದ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪರಾಧಿ ರಾಜಸ್ಥಾನದ ದೌಸಾದಲ್ಲಿರುವ ಆಶ್ರಮದಲ್ಲಿ ನಕಲಿ ಹೆಸರಿನಲ್ಲಿ ಅರ್ಚಕನಂತೆ ನಟಿಸುತ್ತಿದ್ದ ಈತನನ್ನು ಸೋಮವಾರ ಬಂಧಿಸಲಾಯಿತು ಎಂದು ಅಧಿಕಾರಿ ಹೇಳಿದ್ದಾರೆ. ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ...
Top Stories
ಪಬ್ಲಿಕ್ ಫಸ್ಟ್ ನ್ಯೂಸ್: ಉತ್ತರ ಕನ್ನಡದ ಇಂದಿನ ಸಂಕ್ಷಿಪ್ತ ಸುದ್ದಿಗಳು
ಮುಂಡಗೋಡ ಸೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ..!
ಮೈಸೂರು ಸ್ಯಾಂಡಲ್ ಸೋಪ್ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕ..!
ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ವಾಹನ ನಿಲ್ಲಿಸುವಂತಿಲ್ಲ, ನದಿಗೆ ಇಳಿಯುವಂತಿಲ್ಲ ಪ್ರತಿಬಂಧಕಾಜ್ಞೆ ಹೊರಡಿಸಿದ ಡಿಸಿ..!
ಮಳೆಗಾಲದಲ್ಲಿ ಜೀವಹಾನಿಯಾಗದಂತೆ ಗರಿಷ್ಠ ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ
ಕಡಿಮೆ CIBIL ಸ್ಕೋರ್ ಇದ್ದರೂ ₹3 ಲಕ್ಷದವರೆಗೆ ಸಾಲ ಪಡೆಯಬಹುದು; ಹೇಗೆ ಗೊತ್ತಾ..? ಮಾಹಿತಿ ಇಲ್ಲಿದೆ..!
ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ಬಂಧನ..!
ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಐಎಸ್ಐ ಗೂಢಚಾರದ ಜಾಲ ಭೇದಿಸಿದ ಗುಪ್ತಚರ ಸಂಸ್ಥೆಗಳು ; ಇಬ್ಬರ ಬಂಧನ..!
ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ, ಬೆಳ್ಳಿ ₹4000 ಹೆಚ್ಚಳ, ಅಷ್ಟಕ್ಕೂ ಇವತ್ತಿನ ಚಿನ್ನದ ಬೆಲೆ ಎಷ್ಟು..?
ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ..!
ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಭಟ, ಇದು, ತಹಶೀಲ್ದಾರ ಕಚೇರಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆಯ ಪ್ರಕಟಣೆ..!
ಉಕ್ಕಿ ಹರಿಯುತ್ತಿದೆ ಉಣಕಲ್ ಕೆರೆ: ವರುಣನ ಅಬ್ಬರಕ್ಕೆ ಮೈತುಂಬಿದ ಪ್ರತಿಷ್ಠಿತ ತಾಣ..!
ಬಿರುಗಾಳಿ-ಆಲಿಕಲ್ಲು ಮಳೆಯ ಹೊಡೆತಕ್ಕೆ ಇಂಡಿಗೋ ವಿಮಾನಕ್ಕೆ ಹಾನಿ ; ಕಿರುಚಿಕೊಂಡ ಪ್ರಯಾಣಿಕರು..!
ಪಾಕ್ ಹೈಕಮಿಷನ್ ನ ಮತ್ತೊಬ್ಬ ಅಧಿಕಾರಿಗೆ 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ..!
CDPO ಆಫೀಸಲ್ಲಿ ಬ್ರಷ್ಟಾಚಾರ, ಲಂಚ ಪಡೆಯುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಬಲೆಗೆ..!
ಕೊನೆಗೂ ಈಡೇರಲೇ ಇಲ್ಲ RCB ಫ್ಯಾನ್ಸ್ಗಳ ಆ ಕನಸು; ಎಲ್ಲೆಡೆ ಬೇಸರ..!
ಪಾಕಿಸ್ತಾನಿಯ ಜೊತೆ ನನ್ನ ಮದುವೆ ಮಾಡಿಸಿ, ಪಾಕ್ ಅಧಕಾರಿಯೊಂದಿಗೆ ಜ್ಯೋತಿ ಮಲ್ಹೊತ್ರಾ ವಾಟ್ಸಾಪ್ ಚಾಟಿಂಗ್..!
ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಬಳಿ ಫೈರಿಂಗ್; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ
ಗುರುವಾರ ಕುಸಿತದಿಂದ ಪ್ರಾರಂಭವಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 850 ಪಾಯಿಂಟ್ಸ್ ನಷ್ಟ..!
ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಭಟ, ಇದು, ತಹಶೀಲ್ದಾರ ಕಚೇರಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆಯ ಪ್ರಕಟಣೆ..!
Mundgod Rain Warning Issued: ಮುಂಡಗೋಡ ತಾಲೂಕಿನಲ್ಲಿ ಅಧಿಕ ಮಳೆ ಆಗುತ್ತಿದೆ. ಹಳ್ಳ-ಕೊಳ್ಳಗಳು, ಕೆರೆಗಳು, ಜಲಾಶಯಗಳಲ್ಲಿ ನೀರು ತುಂಬಿಕೊಳ್ಳುತ್ತಿದೆ, ಸಾರ್ವಜನಿಕರು ನೀರಿನ ಮೂಲಗಳ ಸಮೀಪ ಹೋಗಬಾರದು. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಅನಾಹುತ ಆಗುವ ಸಾಧ್ಯತೆಯಿದ್ದು, ಈ ಬಗ್ಗೆ ಎಚ್ಚರ ವಹಿಸಬೇಕು ಅಂತಾ ಮುಂಡಗೋಡ ತಹಶೀಲ್ದಾರ್ ಕಾರ್ಯಾಲಯದಿಂದ ಪ್ರಕಟಣೆ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನು, ಮಳೆಗೆ ಸಂಬಂಧಿತ ಯಾವುದೇ ಸಮಸ್ಯೆ, ಅವಘಡಗಳ ಪರಿಹಾರಕ್ಕೆ ಮುಂಡಗೋಡ ತಹಶೀಲ್ದಾರ್ ಕಾರ್ಯಾಲಯದಲ್ಲಿ 24×7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಅದರ ದೂರವಾಣಿ ಸಂಖ್ಯೆ: 08301-222122 ಆಗಿರುತ್ತದೆ. ಸದರಿ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಸಾರ್ವಜನಿಕರು ಪ್ರಕೃತಿ ವಿಕೋಪ ಸಂಬಂಧಿತ ಸಮಸ್ಯೆಗಳನ್ನು,ದೂರುಗಳನ್ನು ಗಮನಕ್ಕೆ ತರಬಹುದಾಗಿದೆ. ತಮ್ಮ ಸಮಸ್ಯೆ, ದೂರುಗಳಿಗೆ ತಕ್ಷಣ ಸ್ಪಂದಿಸಲಾಗುವುದು ಅಂತಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಉಕ್ಕಿ ಹರಿಯುತ್ತಿದೆ ಉಣಕಲ್ ಕೆರೆ: ವರುಣನ ಅಬ್ಬರಕ್ಕೆ ಮೈತುಂಬಿದ ಪ್ರತಿಷ್ಠಿತ ತಾಣ..!
Hubli Good News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಎಲ್ಲೆಡೆಯೂ ನಿರಂತರ ಮಳೆಯಾಗುತ್ತಿದ್ದು, ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಹುಬ್ಬಳ್ಳಿಯ ಪ್ರತಿಷ್ಠಿತ ಉಣಕಲ್ ಕೆರೆಯು ಕೋಡಿ ಹರಿಯುತ್ತಿದೆ. ಹೌದು.. ನಗರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಉಣಕಲ್ ಕೆರೆ ಬುಧವಾರದಿಂದಲೇ ಕೋಡಿ ಹರಿಯುತ್ತಿದೆ. ಕೆರೆ ಬಳಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡಿಗೆ ಪಥ ನಿರ್ಮಿಸಲಾಗಿದ್ದು, ಕೋಡಿ ಹರಿಯುವುದನ್ನು ವೀಕ್ಷಿಸಲು ಜನರಿಗೆ ಅನುಕೂಲವಾಗಿದೆ. ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ ಎಚ್ಚರಿಕೆ..! ಉಣಕಲ್ ಕೆರೆ ಮೈದುಂಬಿದೆ. ಪ್ರತಿವರ್ಷ ಕೋಡಿ ಹರಿದಾಗಲೂ ಜನರು ತಂಡಗಳಲ್ಲಿ ಬಂದು, ವೀಕ್ಷಿಸುತ್ತಾರೆ. ಆದರೆ, ಕೆರೆಯಲ್ಲಿ ಸಂಗ್ರಹವಾದ ತ್ಯಾಜ್ಯ ಕೋಡಿ ಹರಿವ ನೀರಿನ ಮೂಲಕ ರಾಜಕಾಲುವೆ ಸೇರುತ್ತಿದೆ. ರಾಜಕಾಲುವೆ ತುಂಬಿದರೆ, ಮನೆಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ. ಈಗಾಗಲೇ ಬಹುತೇಕ ಕಡೆಯಲ್ಲಿ ರಾಜಕಾಲುವೆ ಸಂಪೂರ್ಣ ಕಸದಿಂದ ತುಂಬಿದ್ದು, ಜನರಲ್ಲಿ ಆತಂಕ ಮನೆಮಾಡಿದೆ.
ಬಿರುಗಾಳಿ-ಆಲಿಕಲ್ಲು ಮಳೆಯ ಹೊಡೆತಕ್ಕೆ ಇಂಡಿಗೋ ವಿಮಾನಕ್ಕೆ ಹಾನಿ ; ಕಿರುಚಿಕೊಂಡ ಪ್ರಯಾಣಿಕರು..!
Indigo- Flight Damaged News: ದೆಹಲಿಯಿಂದ ಶ್ರೀನಗರಕ್ಕೆ 220 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಇಂಡಿಗೋ ವಿಮಾನವು ಬುಧವಾರ ಪ್ರತಿಕೂಲ ಹವಾಮಾನದಿಂದಾಗಿ ತೀವ್ರ ಪ್ರಕ್ಷುಬ್ಧತೆಯನ್ನು ಎದುರಿಸಿತು. ಹಾಗೂ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ವಿಮಾನದ ಮೂತಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ. ಪೈಲಟ್ ಶ್ರೀನಗರದ ವಾಯು ಸಂಚಾರ ನಿಯಂತ್ರಣ (ಎಟಿಸಿ) ಗೆ ತುರ್ತು ಸ್ಥಿತಿಯನ್ನು ವರದಿ ಮಾಡಿದರು. ತೀವ್ರವಾದ ಗಾಳಿಯಿಂದ ವಿಮಾನವು ತೀವ್ರವಾಗಿ ಅಲುಗಾಡುತ್ತಿದ್ದಂತೆ ಪ್ರಯಾಣಿಕರು ಕಿರುಚುವುದು, ಅಳುವುದು ಮತ್ತು ಪ್ರಾರ್ಥಿಸುವುದನ್ನು ತೋರಿಸುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಕ್ಯಾಬಿನ್ ಅಸ್ತವ್ಯಸ್ತವಾಗಿ ಕಾಣಿಸಿಕೊಂಡಿತು, ಓವರ್ಹೆಡ್ ಡಬ್ಬಿಗಳು ಸದ್ದು ಮಾಡುತ್ತಿದ್ದವು ಮತ್ತು ಜನರು ಭಯದಿಂದ ತಮ್ಮ ಆಸನಗಳನ್ನು ಹಿಡಿದುಕೊಂಡು ಕುಳಿತಿರುವುದು ಕಂಡುಬಂದಿದೆ. ಪಾಕ್ ಹೈಕಮಿಷನ್ ನ ಮತ್ತೊಬ್ಬ ಅಧಿಕಾರಿಗೆ 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ..! ಭಯಾನಕ ಪರಿಸ್ಥಿತಿಯ ಹೊರತಾಗಿಯೂ, ವಿಮಾನವು ಸಂಜೆ 6:30 ಕ್ಕೆ ಶ್ರೀನಗರದಲ್ಲಿ ಸುರಕ್ಷಿತವಾಗಿ ಇಳಿಯಿತು ಮತ್ತು ಇಲ್ಲಿಯವರೆಗೆ ಯಾರಿಗೂ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಆದರೆ ಆರಂಭಿಕ ವರದಿಗಳು...
ಪಾಕ್ ಹೈಕಮಿಷನ್ ನ ಮತ್ತೊಬ್ಬ ಅಧಿಕಾರಿಗೆ 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ..!
Operation Sindoor News: ಪಾಕಿಸ್ತಾನ ಹೈಕಮಿಷನ್ನಲ್ಲಿರುವ ಮತ್ತೊಬ್ಬ ಅಧಿಕಾರಿಗೆ “24 ಗಂಟೆಗಳ ಒಳಗೆ ದೇಶ ತೊರೆಯುವಂತೆ ಆದೇಶಿಸಲಾಗಿದೆ ಈ ಸಂಬಂಧ ಪಾಕಿಸ್ತಾನ ಹೈಕಮಿಷನ್ನ ಚಾರ್ಜ್ ಡಿ’ಅಫೇರ್ಸ್ಗೆ ಡಿಮಾರ್ಚ್ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಪತ್ರಿಕಾ ಪ್ರಕಟಣೆ ತಿಳಿಸಿದೆ. ಪಾಕಿಸ್ತಾನ ಹೈಕಮಿಷನ್ನಲ್ಲಿರುವ ಮತ್ತೊಬ್ಬ ಅಧಿಕಾರಿಗೆ ಅಧಿಕೃತ ಸ್ಥಾನಮಾನಕ್ಕೆ ಅನುಗುಣವಾಗಿಲ್ಲದ ಚಟುವಟಿಕೆಗಳಿಗಾಗಿ” ಭಾರತ ಸರ್ಕಾರ ಬುಧವಾರ “ಪರ್ಸಾನಾ ನಾನ್ ಗ್ರಾಟಾ” ಎಂದು ಘೋಷಿಸಿದೆ. “ಈ ಪರಿಣಾಮಕ್ಕಾಗಿ ಪಾಕಿಸ್ತಾನ ಹೈಕಮಿಷನ್ನ ಚಾರ್ಜ್ ಡಿ’ಅಫೇರ್ಸ್ಗೆ ಡಿಮಾರ್ಚ್ ನೀಡಲಾಗಿದೆ. ಭಾರತದಲ್ಲಿನ ಯಾವುದೇ ಪಾಕಿಸ್ತಾನಿ ರಾಜತಾಂತ್ರಿಕರು ಅಥವಾ ಅಧಿಕಾರಿಗಳು ತಮ್ಮ ಸವಲತ್ತುಗಳು ಮತ್ತು ಸ್ಥಾನಮಾನವನ್ನು ಯಾವುದೇ ರೀತಿಯಲ್ಲಿ ದುರುಪಯೋಗಪಡಿಸಿಕೊಳ್ಳದಂತೆ ಕಟ್ಟುನಿಟ್ಟಾಗಿ ಖಚಿತಪಡಿಸಿಕೊಳ್ಳುವಂತೆ ಅವರಿಗೆ ಸೂಚಿಸಲಾಗಿದೆ” ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆ ತಿಳಿಸಿದೆ. CDPO ಆಫೀಸಲ್ಲಿ ಬ್ರಷ್ಟಾಚಾರ, ಲಂಚ ಪಡೆಯುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಬಲೆಗೆ..! ಮೂಲಗಳ ಪ್ರಕಾರ, ಅಧಿಕಾರಿ ವೀಸಾ ಸೇವೆಗಳ ನೆಪದಲ್ಲಿ ಬೇಹುಗಾರಿಕೆ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂದು ಆರೋಪಿಸಲಾಗಿದೆ.ವರದಿಗಳ ಪ್ರಕಾರ, ಆ ವ್ಯಕ್ತಿಯನ್ನು ಅಹ್ಸಾನ್-ಉರ್-ರಹೀಮ್ ಅಲಿಯಾಸ್...
CDPO ಆಫೀಸಲ್ಲಿ ಬ್ರಷ್ಟಾಚಾರ, ಲಂಚ ಪಡೆಯುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಬಲೆಗೆ..!
Lokayukta Trap in Belgaum: ಬೆಳಗಾವಿಯಲ್ಲಿ ಭ್ರಷ್ಟರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿ, ಕಚೇರಿ ಸೂಪರಡೆಂಟ್ ಅಬ್ದುಲ್ ವಲಿ, ಕಂಪ್ಯೂಟರ್ ಆಪರೇಟರ್ ಸೌಮ್ಯಾ ಬಡಗೇರನ್ನು ಬಂಧಿಸಲಾಗಿದೆ. ಅಂಗನವಾಡಿ ಸಹಾಯಕಿಯಿಂದ ವರ್ಗಾವಣೆಗಾಗಿ, 30 ಸಾವಿರ ಹಣದ ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ, ಹುಕ್ಕೇರಿ ತಾಲೂಕಿನ ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬಳೆಯಿಂದ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಕೊನೆಗೂ ಈಡೇರಲೇ ಇಲ್ಲ RCB ಫ್ಯಾನ್ಸ್ಗಳ ಆ ಕನಸು; ಎಲ್ಲೆಡೆ ಬೇಸರ..! ಹೀಗಾಗಿ, 15 ಸಾವಿರ ಲಂಚದ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್ ಧರ್ಮಟ್ಟಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಲೋಕಾಯುಕ್ತ ದಾಳಿ ಮಾಡ್ತಿದ್ದಂತೆ ಕಂಪ್ಯೂಟರ್ ಆಪರೇಟರ್ ಸೌಮ್ಯಾಗೆ ಅಸ್ವಸ್ಥತೆ ಕಂಡುಬಂದಿದೆ. ಈ ಕಾರಣಕ್ಕಾಗಿ ತಕ್ಷಣವೇ ಕಚೇರಿಗೆ ವೈದ್ಯರನ್ನ ಕರೆಸಿ ಅಧಿಕಾರಿಗಳು ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಲೋಕಾಯುಕ್ತ ಪೊಲೀಸರು ವಿಚಾರಣೆ ಮುಂದೊರೆಸಿದ್ದಾರೆ.
ಕೊನೆಗೂ ಈಡೇರಲೇ ಇಲ್ಲ RCB ಫ್ಯಾನ್ಸ್ಗಳ ಆ ಕನಸು; ಎಲ್ಲೆಡೆ ಬೇಸರ..!
RCB Fans Dream Shattered: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಋತುವಿನಲ್ಲಿ ಈ ವರೆಗೂ ಭರ್ಜರಿ ಪ್ರದರ್ಶನ ನೀಡಿದ್ದು ಪ್ಲೇಆಫ್ಗೆ ಎಂಟ್ರಿ ಪಡೆದುಕೊಂಡಿದೆ. ಒಂದೆಡೆ ಆರ್ಸಿಬಿ ಪ್ಲೇಆಫ್ ತಲುಪಿರುವ ಖುಷಿ ಅಭಿಮಾನಿಗಳಲ್ಲಿ ಮನೆ ಮಾಡಿದ್ದರೇ ಮತ್ತೊಂದೆಡೆ ದೊಡ್ಡ ಬೇಸರವು ಕಾಣಿಸಿಕೊಂಡಿದೆ. ಸದ್ಯ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿರುವ ಕಾರಣ ಮೇ.23 ರಂದು ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ಬೆಂಗಳೂರಿನಿಂದ ಲಖನೌಗೆ ಸ್ಥಳಾಂತರ ಮಾಡಲಾಗಿದೆ. ಇದರ ಬೆನ್ನಲ್ಲೇ ಆರ್ಸಿಬಿ ಫ್ಯಾನ್ಸ್ ಕಂಡಿದ್ದ ಆ ಕನಸು ಕೂಡ ಭಗ್ನ ಗೊಂಡಿದೆ. ಹೌದು, ಇತ್ತೀಚೆಗೆ ಭಾರತ ಕ್ರಿಕೆಟ್ ತಂಡದ ವಿರಾಟ್ ಕೊಹ್ಲಿ ಟೆಸ್ಟ್ಗೆ ನಿವೃತ್ತಿ ಘೋಷಣೆ ಮಾಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಇದರ ಬೆನ್ನಲ್ಲೇ ಆರ್ಸಿಬಿ ಫ್ಯಾನ್ಸ್ ಸಾಮಾಜಿಕ ಜಾಲತಾಣದಲ್ಲಿ ವಿರಾಟ್ ಕೊಹ್ಲಿಗೆ ಗೌರವ ಸಲ್ಲಿಸಲು ಆರ್ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯಕ್ಕೆ ಬಿಳಿ ಜೆರ್ಸಿ ಧರಿಸಿ ಮೈದಾನಕ್ಕೆ ಬರುವಂತೆ ಮನವಿ ಮಾಡಿಕೊಂಡಿದ್ದರು. ಪಾಕಿಸ್ತಾನಿಯ ಜೊತೆ...
ಪಾಕಿಸ್ತಾನಿಯ ಜೊತೆ ನನ್ನ ಮದುವೆ ಮಾಡಿಸಿ, ಪಾಕ್ ಅಧಕಾರಿಯೊಂದಿಗೆ ಜ್ಯೋತಿ ಮಲ್ಹೊತ್ರಾ ವಾಟ್ಸಾಪ್ ಚಾಟಿಂಗ್..!
Jyoti Malhotra News: ನವದೆಹಲಿ: ಭಾರತದ ವಿರುದ್ಧ ಗೂಢಚಾರಿಕೆ ನಡೆಸಿದ ಆರೋಪದಡಿ ಬಂಧಿಸಲ್ಪಟ್ಟು ತನಿಖೆಗೆ ಒಳಗಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾಗೆ ಪಾಕಿಸ್ತಾನ ಹಾಗೂ ಅಲ್ಲಿನ ಅಧಿಕಾರಿಗಳೊಂದಿಗೆ ಇರುವ ನಂಟುಗಳು ಬಗೆದಷ್ಟೂ ಬಯಲಾಗುತ್ತಿವೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಐಎಸ್ಐ ಅಧಿಕಾರಿ ಅಲಿ ಹಸನ್ ಎಂಬಾತನೊಂದಿಗೆ ಜ್ಯೋತಿ ಸಂಪರ್ಕದಲ್ಲಿದ್ದು, ಇಬ್ಬರ ನಡುವಿನ ಸಂಭಾಷಣೆಗಳು ಈಗ ಬೆಳಕಿಗೆ ಬಂದಿದೆ. ಅಲಿ ಜತೆ ವಾಟ್ಸ್ಅಪ್ನಲ್ಲಿ ಚ್ಯಾಟ್ ಮಾಡುತ್ತಿದ್ದ ಜ್ಯೋತಿ, ‘ನನ್ನ ಮದುವೆಯನ್ನು ಪಾಕಿಸ್ತಾನದಲ್ಲಿ ಮಾಡಿಸು’ ಎಂದು ಕೇಳಿಕೊಂಡಿದ್ದಳು ಎಂದು ವರದಿಯಾಗಿದೆ. ಈ ಮೂಲಕ ಆಕೆಯ ಪಾಕ್ ಪ್ರೇಮ ಬಯಲಾಗಿದೆ. 2023ರಿಂದಲೂ ಜ್ಯೋತಿ ಆತನ ಸಂಪರ್ಕದಲ್ಲಿದ್ದಳು ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ. ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಬಳಿ ಫೈರಿಂಗ್; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ ಅಂತೆಯೇ, ಅವರಿಬ್ಬರು ಭಾರತದ ರಹಸ್ಯ ಕಾರ್ಯಾಚರಣೆಗಳ ಬಗ್ಗೆಯೂ ರಹಸ್ಯ ಭಾಷೆಯಲ್ಲಿ (ಕೋಡ್ ಮೂಲಕ) ಚರ್ಚಿಸುತ್ತಿದ್ದರು ಎಂದು ತಿಳಿದುಬಂದಿದೆ. ಜತೆಗೆ, ಜ್ಯೋತಿಗೆ ಸೇರಿದ 4 ಬ್ಯಾಂಕ್ ಖಾತೆಗಳ ವಿವರ ಪೊಲೀಸರ ಕೈ ಸೇರಿದ್ದು,...
ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಬಳಿ ಫೈರಿಂಗ್; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ
ವಾಷಿಂಗ್ಟನ್ : “ಯೆಹೂದ್ಯ ವಿರೋಧಿ ಭಯೋತ್ಪಾದನೆಯ ಕೃತ್ಯ”ದಲ್ಲಿ, ಬುಧವಾರ ರಾತ್ರಿ (ಸ್ಥಳೀಯ ಸಮಯ) ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಇಸ್ರೇಲಿ ರಾಯಭಾರ ಕಚೇರಿಗೆ ಸಂಬಂಧಿಸಿದ ಇಬ್ಬರು ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಎಲಿಯಾಸ್ ರೊಡ್ರಿಗಸ್ ಎಂದು ಗುರುತಿಸಲಾದ 30 ವರ್ಷದ ಶಂಕಿತನನ್ನು ಬಂಧಿಸಲಾಗಿದೆ. ನಂತರ ಶಂಕಿತ “ಸ್ವತಂತ್ರ, ಸ್ವತಂತ್ರ ಪ್ಯಾಲೆಸ್ಟೈನ್” ಎಂದು ಕೂಗಿದ್ದಾನೆ. ಈತ ಚಿಕಾಗೋದವನು ಎಂದು ಪೊಲೀಸರು ತಿಳಿಸಿದ್ದಾರೆ. ವಾಷಿಂಗ್ಟನ್ ಡಿಸಿ ಪೊಲೀಸರು ವಸ್ತುಸಂಗ್ರಹಾಲಯದ ಬಳಿ ಇರುವ ಎಫ್ಬಿಐನ ವಾಷಿಂಗ್ಟನ್ ಫೀಲ್ಡ್ ಕಚೇರಿಯ ಎದುರಿನ ಗುಂಡಿನ ದಾಳಿಯನ್ನು ತನಿಖೆ ನಡೆಸುತ್ತಿದ್ದಾರೆ. ಇಸ್ರೇಲಿ ರಾಯಭಾರ ಕಚೇರಿಯು ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ. ಗುರುವಾರ ಕುಸಿತದಿಂದ ಪ್ರಾರಂಭವಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 850 ಪಾಯಿಂಟ್ಸ್ ನಷ್ಟ..! ಗುಂಡಿನ ದಾಳಿ ನಡೆದಾಗ ಇಸ್ರೇಲಿ ರಾಯಭಾರಿ ಸ್ಥಳದಲ್ಲಿ ಇರಲಿಲ್ಲ ಎಂದು ರಾಯಭಾರ ಕಚೇರಿಯ ಅಧಿಕಾರಿಯೊಬ್ಬರು ಸಿಎನ್ಎನ್ಗೆ ತಿಳಿಸಿದ್ದಾರೆ. ಕ್ಯಾಪಿಟಲ್ ಯಹೂದಿ ವಸ್ತುಸಂಗ್ರಹಾಲಯದಲ್ಲಿ ನಡೆದ ಯಹೂದಿ...
ಗುರುವಾರ ಕುಸಿತದಿಂದ ಪ್ರಾರಂಭವಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 850 ಪಾಯಿಂಟ್ಸ್ ನಷ್ಟ..!
Stock Market News: ಭಾರತೀಯ ಷೇರು ಮಾರುಕಟ್ಟೆಯು ಗುರುವಾರ ಅಂದ್ರೆ ಮೇ 22ರಂದು ಭಾರೀ ನಷ್ಟದೊಂದಿಗೆ ಶುರುವಾಗಿದೆ. ಜಾಗತಿಕ ದುರ್ಬಲ ಸೂಚನೆಗಳಿಂದಾಗಿ ಸೆನ್ಸೆಕ್ಸ್ ಹಾಗೂ ನಿಫ್ಟಿ ಸೂಚ್ಯಂಕಗಳು ಆರಂಭಿಕ ವಹಿವಾಟಿನಲ್ಲಿ ರೆಡ್ ಮಾರ್ಕ್ನಲ್ಲಿ ಶುರುವಾಗಿದೆ. ಸೆನ್ಸೆಕ್ಸ್ 850 ಪಾಯಿಂಟ್ಸ್ ನಷ್ಟಗೊಂಡಿದ್ದು, ನಿಫ್ಟಿ ಸೂಚ್ಯಂಕವು 24600ರ ಗಡಿಯಿಂದ ಕೆಳಕ್ಕೆ ಜಾರಿದೆ. ಇಂಡಸ್ಇಂಡ್ ಬ್ಯಾಂಕ್ ದಿನದ ಇಂಟ್ರಾಡೇ ವಹಿವಾಟಿನಲ್ಲಿ ನಷ್ಟದಿಂದ ರಿಬೌಂಡ್ ಆಗಿದೆ. ಜಾಗತಿಕ ದುರ್ಬಲ ಸೂಚನೆಗಳಿಂದಾಗಿ ಭಾರತೀಯ ಷೇರು ಮಾರುಕಟ್ಟೆಯು ನಷ್ಟಕ್ಕೆ ಸಾಕ್ಷಿಯಾಗಿದ್ದು, ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಸೆನ್ಸೆಕ್ಗ್ 850 ಪಾಯಿಂಟ್ಸ್ ನಷ್ಟಗೊಂಡಿದ್ದು, ನಿಫ್ಟಿ ಸೂಚ್ಯಂಕವು 24600ರ ಗಡಿಯಿಂದ ಕೆಳಕ್ಕೆ ಕುಸಿದಿದೆ. ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ ಎಚ್ಚರಿಕೆ..! ಮೇ 22ರಂದು ಗುರುವಾರ ಬಿಎಸ್ಇ ಸೆನ್ಸೆಕ್ಸ್ 850 ಪಾಯಿಂಟ್ಗಳಷ್ಟು ಕುಸಿದಿದೆ, ಅದು 80,750 ಮಟ್ಟದಲ್ಲಿ ವಹಿವಾಟು ನಡೆಸುತ್ತಿದೆ. ನಿಫ್ಟಿ ಕೂಡ 24,550 ಮಟ್ಟದಲ್ಲಿ 250 ಪಾಯಿಂಟ್ಗಳ ಕುಸಿತ ಕಂಡಿದೆ. ಸೆನ್ಸೆಕ್ಸ್ನ 30 ಷೇರುಗಳಲ್ಲಿ...