ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!

ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!

 ಶಿಗ್ಗಾವಿ ವಿಧಾನಸಭಾ ಕ್ಷೇತ್ರ ಕಣ ಮತ್ತಷ್ಟು ಕಾವು ಪಡೆದುಕೊಂಡಿದೆ. ಕ್ಷೇತ್ರದಲ್ಲಿ NDA ಮಿತ್ರ ಪಕ್ಷ JDS ತನ್ನ ಪ್ರಾಭಲ್ಯ ತೋರಿಸಲು ಸಜ್ಜಾಗಿದೆ. ಈ ಕಾರಣಕ್ಕಾಗೇ ನಿಖಿಲ್ ಕುಮಾರಸ್ವಾಮಿ ಇಂದು ಶಿಗ್ಗಾವಿಗೆ ಆಗಮಿಸಿದ್ದಾರೆ. ಶಿಗ್ಗಾವಿಯ ಸಂಗನಬಸವ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಹಮ್ಮಿಕೊಂಡಿರೋ ಶಿಗ್ಗಾಂವ-ಸವಣೂರ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಪೂರ್ವಭಾವಿ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಬಾರಿ ಮೂರು ಕ್ಷೇತ್ರದಲ್ಲಿ NDA ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಮೂರು ಕ್ಷೇತ್ರದಲ್ಲಿ ನಮ್ಮ ಪಕ್ಷದ ಸದಸ್ಯತ್ವ ನೊಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು. ಮೋದಿಯವರ ಕಾರ್ಯಕ್ರಮ ಮೆಚ್ಚಿ ಅವರ ನಾಯಕತ್ವದಲ್ಲಿ ಹೆಜ್ಹೆ ಹಾಕಲು ದೇವೆಗೌಡರು ತೀರ್ಮಾನ ಮಾಡಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿಯವರು ಚನ್ನಪಟ್ಟಣದಿಂದ ಎರಡು ಸಲ ಶಾಸಕರಾಗಿ ಆಯ್ಕೆಯಾಗಿದ್ದರು. ಇವತ್ತು ಕೇಂದ್ರ ಸಚಿವರಾಗಿ ಕೆಲಸ ಮಾಡ್ತಿದಾರೆ. ಚನ್ನಪಟ್ಟಣದಲ್ಲಿ ಜೆಡಿಎಸ್ ನ ಸಾಂಪ್ರದಾಯಿಕ ಮತಗಳಿವೆ. ಅಲ್ಲಿ, JDS ಯಾವುದೇ...

ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?

ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?

ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆ ಕಣ ರಂಗೇರಿದೆ. ಚುನಾವಣೆ ದಿನಾಂಕ ಘೋಷಣೆ ಆಗ್ತಿದ್ದಂತೆ ಟಿಕೆಟ್ ಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆಯೇ ತಲೆನೋವಾಗಿದೆ. ಟಿಕೆಟ್‌ಗಾಗಿ ಜೋರಾದ ಲಾಭಿ..! ಯಾರಿಗೆ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಎರಡೂ ಪಕ್ಷಗಳ ಟಿಕೆಟ್..? * ಟಿಕೆಟ್‌ ಹಂಚಿಕೆಯಲ್ಲಿ ತಲೆ ಕೆಡಿಸಿಕೊಂಡ ಎರಡೂ ರಾಷ್ಟ್ರೀಯ ಪಕ್ಷಗಳ ಹೈಕಮಾಂಡ್‌. * ದೆಹಲಿ ಪಡೆಸಾಲೆಯಲ್ಲಿ ಟಿಕೆಟ್ ಹಂಚಿಕೆ ಚರ್ಚೆ. * ಇನ್ನೂ ಬಗೆಹರಿಯದ ಟಿಕೆಟ್ ಹಂಚಿಕೆ ಗೊಂದಲ. * ಟಿಕೆಟ್‌ಗಾಗಿ ದೆಹಲಿ ಕದ ತಟ್ಟಿದ ಟಿಕೆಟ್ ಆಕಾಂಕ್ಷಿಗಳು. * ಟಿಕೆಟ್ ಬೇಕೆಂದು ದೆಹಲಿಯಲ್ಲಿ ಬೀಡು ಬಿಟ್ಟ ಟಿಕೆಟ್‌ ಆಕಾಂಕ್ಷಿಗಳು. * ಜಾತಿ ಲೆಕ್ಕಾಚಾರ ಹಾಕಿಕೊಂಡು ಟಿಕೆಟ್ ನೀಡುವಂತೆ ಹೈಕಮಾಂಡ್ ಮೇಲೆ ಒತ್ತಡ. * ಒಂದು ವೇಳೆ ಟಿಕೆಟ್ ಕೈತಪ್ಪಿದ್ದೆ ಆದಲ್ಲಿ ಬಂಡಾಯದ ಬಿಸಿ ತಟ್ಟಿಸಲು ಚಿಂತನೆ. * ಟಿಕೆಟ್ ಆಕಾಂಕ್ಷಿಗಳು ಬಂಡಾಯ ಏಳದಂತೆ ದೆಹಲಿಯಲ್ಲಿ ಚರ್ಚೆ ನಡೆಸಿದ ನಾಯಕರು. * ಎರಡೂ ರಾಷ್ಟ್ರೀಯ ಪಕ್ಷಗಳಿಗೂ ತಟ್ಟಲಿದೆ ಬಂಡಾಯದ ಬಿಸಿ. ಇದು...

ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ

ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ

ಹಾವೇರಿ : ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮೊದಲ ದಿನ ಮೂರು ಅಭ್ಯರ್ಥಿಗಳಿಂದ ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿವೆ. ಹಿಂದೂಸ್ತಾನ ಜನತಾ ಪಕ್ಷದಿಂದ ತಳವಾರ ಶಿವಕುಮಾರ ಎರಡು, ಕರ್ನಾಟಕ ರಾಷ್ಟ್ರ ಸಮಿತಿಯಿಂದ ರವಿ ಕೃಷ್ಣಾರೆಡ್ಡಿ ಹಾಗೂ ಸೋಸಿಯಾಲಿಸ್ಟ ಪಾರ್ಟಿ (ಇಂಡಿಯಾ)ಯಿಂದ ಖಾಜಾಮೋಹಿದ್ದಿನ ಗುಡಗೇರಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ. ಶಿಗ್ಗಾವಿ ತಹಶೀಲ್ದಾರ ಕಚೇರಿಯಲ್ಲಿ ಶುಕ್ರವಾರ ಸವಣೂರ ಉಪ ವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಮಹ್ಮದ್ ಖಿಜರ್ ಅವರಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ತಹಶೀಲ್ದಾರ ಹಾಗೂ ಸಹಾಯಕ ಚುನಾವಣಾಧಿಕಾರಿ ಸಂತೋಷ ಹಿರೇಮಠ ಅವರು ಉಪಸ್ಥಿತರಿದ್ದರು. ಅ.25 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಅ.28ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ ಹಾಗೂ ಅ.30 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ.

ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!

ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!

ಬೆಂಗಳೂರು: ಗ್ರಾಮ ಪಂಚಾಯತಿ ಉಪಚುನಾವಣೆಗೆ ಮುಹೂರ್ತ ಪಿಕ್ಸ್ ಆಗಿದೆ.‌ ನವೆಂಬರ್ 23 ರಂದು ಉಪಚುನಾವಣೆ ನಡೆಸಲು ದಿನಾಂಕ್ ಫಿಕ್ಸ್ ಆಗಿದೆ. ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿಯ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ದಿನಾಂಕ‌ ಘೋಷಣೆಯಾಗಿದೆ‌. ಅಂದಹಾಗೆ, ಹುನಗುಂದ ಗ್ರಾಮ ಪಂಚಾಯತಿ ವಾರ್ಡ್ ನಂಬರ್ 1 ರ ಸದಸ್ಯೆ ಯಲ್ಲವ್ವ ಇಟ್ಲಾಪುರ ನಿಧನದಿಂದ ತೆರವಾಗಿರೋ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. ವಿವರ ಇಲ್ಲಿದೆ..! ದಿನಾಂಕ 06-11-2024 (ಬುಧವಾರ) ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ ಮತ್ತು ದಿನವಾಗಿದೆ. 12-11-2024 (ಮಂಗಳವಾರ) ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ. 13-11-2024 (ಬುಧವಾರ) ನಾಮಪತ್ರಗಳನ್ನು ಪರಿಶೀಲಿಸುವ ದಿನವಾಗಿದೆ. 15-11-2024 (ಶುಕ್ರವಾರ) ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. 23-11-2024 ಶನಿವಾರ, ಮತದಾನ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ದಿನವಾಗಿದೆ. ಅವತ್ತು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ‌ ನಡೆಯಲಿದೆ. ಮರು ಮತದಾನ ಅವಶ್ಯವಿದ್ದರೆ 25-11-2024 (ಸೋಮವಾರ) ರಂದು ಮತದಾನವನ್ನು ನಡೆಸಬಹುದಾಗಿದೆ. ಆ ದಿನ ಬೆಳಿಗ್ಗೆ 7-00...

ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!

ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!

 ಹಾವೇರಿ ಜಿಲ್ಲೆಯಾದ್ಯಂತ ರಾತ್ರಿ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದ ಹಾವೇರಿ ನಗರದಲ್ಲಿ ಇರುವ ಹತ್ತಾರು ರಸ್ತೆಗಳು ಕೆರೆಯಂತಾಗಿವೆ. ಹೀಗಾಗಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಾಲಕನೋರ್ವ ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಘಟನೆ ನಡೆದಿದೆ. ಹಾವೇರಿ ಎಸ್.ಪಿ ಕಚೇರಿ ಮುಂಭಾಗದಲ್ಲಿಯೇ ಘಟನೆ ನಡೆದಿದ್ದು, ನೀವೆದನ್ ಬಸವರಾಜ್ ಗುಡಗೇರಿ (12) ಕೊಚ್ಚಿ ಹೋದ ಬಾಲಕನಾಗಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದಾರೆ. ಬಾಲಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಬಾಲಕನ ಸಂಬಂಧಿಗಳಿಂದ ಸ್ಥಳದಲ್ಲಿ ಪ್ರತಿಭಟನೆ ಕೂಡ ನಡೆದಿದೆ. ಬಾಲಕನ ತಾಯಿ ತೀವ್ರ ಅಸ್ವಸ್ಥಳಾಗಿದ್ದಾಳೆ. ಹೀಗಾಗಿ ಅಂಬ್ಯುಲೆನ್ಸ್ ಮೂಲಕ ಅವ್ರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಬಾಲಕನ ಕುಟುಂಬಸ್ಥರ ಆಕ್ರಂಧನ ಮುಗಿಲಿ ಮುಟ್ಟಿದೆ. ಸ್ಥಳಕ್ಕೆ ಎಸ್ಪಿ ಅಂಶುಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಾಲಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?

ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?

ಬೆಂಗಳೂರಿನ ಲಾಡ್ಜ್‌ವೊಂದರಲ್ಲಿ ತೀರ್ಥಹಳ್ಳಿ ತಹಶೀಲ್ದಾರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಗದಗ ಮೂಲದ ಜಕ್ಕಣ್ಣಗೌಡ‌ರ್(56) ಮೃತ ತಹಶೀಲ್ದಾರರಾಗಿದ್ದಾರೆ. ಜಕ್ಕಣ್ಣಗೌಡರ್‌ ಅವರು ಬೆಂಗಳೂರಿಗೆ ಅ.14ರಂದು ಹೋಗೊದ್ದರು. ಖಾಸಗಿ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದರು. ಆದ್ರೆ, ನಿನ್ನೆ ರಾತ್ರಿ 9ರ ಸುಮಾರಿಗೆ ಅವರು ಲಾಡ್ಜ್ ರೂಮ್‌ನಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಗದಗ ಮೂಲದ 56 ವರ್ಷದ ಜಕ್ಕಣ್ಣ ಗೌಡರ್, ಕೋರ್ಟ್ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದು, ಅ.14ರಂದು ಖಾಸಗಿ ಲಾಡ್ಜ್ ಬುಕ್ ಮಾಡಿದ್ದರು. ಆದ್ರೆ, ನಿನ್ನೆ ಬೆಳಗ್ಗೆಯಿಂದ ಕುಟುಂಬಸ್ಥರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಕೂಡಲೇ ತೀರ್ಥಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಬಳಿಕ ತೀರ್ಥಹಳ್ಳಿ ಪೊಲೀಸರು ಕೂಡಲೇ ಬೆಂಗಳೂರು ಪೊಲೀಸರಿಗೆ ಸಂಪರ್ಕ ಮಾಡಿದ್ದಾರೆ. ನಂತರ ರಾತ್ರಿ 8ರ ಸುಮಾರಿಗೆ ಲಾಡ್ಜ್‌ಗೆ ಉಪ್ಪಾರಪೇಟೆ ಪೊಲೀಸರು ಭೇಟಿ ನೀಡಿ, ರೂಮ್ ಬಾಗಿಲು ಓಪನ್ ಮಾಡಿದ್ದಾರೆ. ಆಗ ಜಕ್ಕಣ್ಣ ಗೌಡರ್‌ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಮೇಲ್ನೋಟಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ. ಆದ್ರೆ ಇದುವರೆಗೆ ಸಾವಿನ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ. ಉಪ್ಪಾರಪೇಟೆ...

ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!

ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!

ಶಿಗ್ಗಾವಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ವ್ಯಕ್ತಿಗಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ ಘಟನೆ ಶಿಗ್ಗಾವಿ ಪಟ್ಟಣದ ಹಿರೇಕೆರೆಯಲ್ಲಿ ಮಂಗಳವಾರ ಸಂಜೆ ಜರುಗಿದೆ. ಮೃತ ವ್ಯಕ್ತಿಗಳನ್ನ ಶಿಗ್ಗಾವಿ ಪಟ್ಟಣದ ಸಾಲಗೇರಿ ಓಣಿಯ ಹಜರತ ಅಲಿ ಇಬ್ರಾಹಿಂ ಮುಕ್ಕೇರಿ (27), ಅಕ್ಸರ್ ಹಿಮಾಮ್ ಖಾಸೀಮ್ ಸುಲ್ತಾನಖಾನವರ (35) ಎಂದು ಗುರುತಿಸಲಾಗಿದೆ. ಮೀನು ಹಿಡಿಯುವಾಗ ಆಯತಪ್ಪಿ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿಗಳ ದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹೊರತೆಗೆಯುವ ಕಾರ್ಯಾಚರಣೆಯಲ್ಲಿ ತೊಡಗಿದ್ದು ಮೃತ ವ್ಯಕ್ತಿಗಳ ಮೃತದೇಹಗಳು ಸಿಗಬೇಕಿದೆ. ಮೃತ ವ್ಯಕ್ತಿಗಳನ್ನ ಪಟ್ಟಣದ ಜನತೆ ತಂಡೋಪತಂಡವಾಗಿ ನೋಡಲು ಆಗಮಿಸುತ್ತಿರುವುದು ಕಂಡು ಬಂದಿದೆ.

ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!

ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!

ನವದೆಹಲಿ: ರಾಜ್ಯದಲ್ಲಿ ಖಾಲಿ ಇರುವ 3 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬ‌ರ್ 13ರಂದು ಉಪ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗವು ನಿರ್ಧರಿಸಿದೆ. ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಿಗೆ ನವೆಂಬ‌ರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶವು ಪ್ರಕಟವಾಗಲಿದೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರ, ಇ.ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರ, ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ

ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ

ಹುಬ್ಬಳ್ಳಿಯ ಯುವಕನೋರ್ವನ ಬರ್ಬರ ಹತ್ಯೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಸುದೀಪ್, ಕಿರಣ್ ಪೊಲೀಸರ ಗುಂಡು ತಿಂದ ಆರೋಪಿಗಳಾಗಿದ್ದಾರೆ. ಆಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಶಿವರಾಜ್ ಕಮ್ಮಾರ ಎಂಬ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದರು. ಆದ್ರೆ ಹತ್ಯೆ ನಡೆದ 6 ಗಂಟೆಯಲ್ಲಿ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪೊಲೀಸರು ಬಂಧಿಸಲು ತೆರಳಿದಾಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಹಂಕತರ ಮೇಲೆ ಫೈರಿಂಗ್ ಮಾಡಿದ್ದು, ಆರೋಪಿಗಳಾದ ಸುದೀಪ್ ಮತ್ತು ಕಿರಣ್ ಕಾಲಿಗೆ ಗುಂಡು ತಗುಲಿದ್ದರಿಂದ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಿಮ್ಸ್ ಆಸ್ಪತ್ರೆಗೆ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಲಿದ್ದಾರೆ.

error: Content is protected !!