ಬೆಂಗಳೂರು: ದೇಶಾದ್ಯಂತ ಕೊರೊನಾ ಮೂರನೇ ಅಲೆ ಸದ್ದಿಲ್ಲದೇ ಆರಂಭವಾಗಿದೆಯೇ ಎಂಬ ಆತಂಕ ಶುರುವಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮತ್ತೆ ಲಾಕ್ ಡೌನ್ ಭೀತಿ ಎದುರಾಗಿದೆ. ಕೇರಳ, ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಕಳೆದ ಎರಡು ದಿನಗಳಿಂದ ಕೇರಳದಲ್ಲಿ 22,000 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗುತ್ತಿದ್ದು, ಎರಡು ದಿನಗಳ ಲಾಕ್ ಡೌನ್ ಗೆ ಸರ್ಕಾರ ಮುಂದಾಗಿದೆ. ಕೇರಳದಲ್ಲಿ ಜುಲೈ 31 ಹಾಗೂ ಆಗಸ್ಟ್ 1ರಂದು ವೀಕೆಂಡ್ ಲಾಕ್ ಡೌನ್ ಜಾರಿಗೊಳಿಸಲಾಗುತ್ತಿದೆ. ಕೇರಳದಲ್ಲಿ ಬುಧವಾರ ಒಂದೇ ದಿನ 22,129 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಕೋವಿಡ್ ಸಂಖ್ಯೆ ರಾಜ್ಯದಲ್ಲಿ ಏಕಾಏಕಿ ಏರಿಕೆಯಾಗುತ್ತಿರುವ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ 6 ಸದಸ್ಯರ ತಂಡವನ್ನು ರವಾನಿಸಿದೆ. ಮಹಾರಾಷ್ಟ್ರದಲ್ಲೂ ಪ್ರತಿದಿನ ಆರು ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಈ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದುವಾರದಿಂದ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು,...
Top Stories
ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ವಾಹನ ನಿಲ್ಲಿಸುವಂತಿಲ್ಲ, ನದಿಗೆ ಇಳಿಯುವಂತಿಲ್ಲ ಪ್ರತಿಬಂಧಕಾಜ್ಞೆ ಹೊರಡಿಸಿದ ಡಿಸಿ..!
ಮಳೆಗಾಲದಲ್ಲಿ ಜೀವಹಾನಿಯಾಗದಂತೆ ಗರಿಷ್ಠ ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ
ಕಡಿಮೆ CIBIL ಸ್ಕೋರ್ ಇದ್ದರೂ ₹3 ಲಕ್ಷದವರೆಗೆ ಸಾಲ ಪಡೆಯಬಹುದು; ಹೇಗೆ ಗೊತ್ತಾ..? ಮಾಹಿತಿ ಇಲ್ಲಿದೆ..!
ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ಬಂಧನ..!
ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಐಎಸ್ಐ ಗೂಢಚಾರದ ಜಾಲ ಭೇದಿಸಿದ ಗುಪ್ತಚರ ಸಂಸ್ಥೆಗಳು ; ಇಬ್ಬರ ಬಂಧನ..!
ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ, ಬೆಳ್ಳಿ ₹4000 ಹೆಚ್ಚಳ, ಅಷ್ಟಕ್ಕೂ ಇವತ್ತಿನ ಚಿನ್ನದ ಬೆಲೆ ಎಷ್ಟು..?
ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ..!
ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಭಟ, ಇದು, ತಹಶೀಲ್ದಾರ ಕಚೇರಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆಯ ಪ್ರಕಟಣೆ..!
ಉಕ್ಕಿ ಹರಿಯುತ್ತಿದೆ ಉಣಕಲ್ ಕೆರೆ: ವರುಣನ ಅಬ್ಬರಕ್ಕೆ ಮೈತುಂಬಿದ ಪ್ರತಿಷ್ಠಿತ ತಾಣ..!
ಬಿರುಗಾಳಿ-ಆಲಿಕಲ್ಲು ಮಳೆಯ ಹೊಡೆತಕ್ಕೆ ಇಂಡಿಗೋ ವಿಮಾನಕ್ಕೆ ಹಾನಿ ; ಕಿರುಚಿಕೊಂಡ ಪ್ರಯಾಣಿಕರು..!
ಪಾಕ್ ಹೈಕಮಿಷನ್ ನ ಮತ್ತೊಬ್ಬ ಅಧಿಕಾರಿಗೆ 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ..!
CDPO ಆಫೀಸಲ್ಲಿ ಬ್ರಷ್ಟಾಚಾರ, ಲಂಚ ಪಡೆಯುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಬಲೆಗೆ..!
ಕೊನೆಗೂ ಈಡೇರಲೇ ಇಲ್ಲ RCB ಫ್ಯಾನ್ಸ್ಗಳ ಆ ಕನಸು; ಎಲ್ಲೆಡೆ ಬೇಸರ..!
ಪಾಕಿಸ್ತಾನಿಯ ಜೊತೆ ನನ್ನ ಮದುವೆ ಮಾಡಿಸಿ, ಪಾಕ್ ಅಧಕಾರಿಯೊಂದಿಗೆ ಜ್ಯೋತಿ ಮಲ್ಹೊತ್ರಾ ವಾಟ್ಸಾಪ್ ಚಾಟಿಂಗ್..!
ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಬಳಿ ಫೈರಿಂಗ್; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ
ಗುರುವಾರ ಕುಸಿತದಿಂದ ಪ್ರಾರಂಭವಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 850 ಪಾಯಿಂಟ್ಸ್ ನಷ್ಟ..!
ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ ಎಚ್ಚರಿಕೆ..!
Death News :ಸೂಟ್ಕೇಸ್ ನಲ್ಲಿ ಹುಡುಗಿಯ ಶವ ಪತ್ತೆ, ಚಲಿಸುತ್ತಿರುವ ರೈಲಿನಿಂದ ಎಸೆದಿರುವ ಶಂಕೆ..!
Police News:ರಾಜ್ಯದ ಪ್ರಭಾರ ಡಿಜಿ-ಐಜಿಪಿಯಾಗಿ ಡಾ.ಎಂ.ಎ. ಸಲೀಂ ನೇಮಕ..!
ನೆರೆಯಿಂದ ಹಾನಿಗೊಳಗಾದ ಜಿಲ್ಲೆಯ ರಸ್ತೆಗಳಿಗೆ ರೂ. 200 ಕೋಟಿ ಭರವಸೆ ನೀಡಿದ ಸಿಎಂ..!
ಅಂಕೋಲಾ: ನೆರೆಯಿಂದ ಹಾನಿಗೊಳಗಾದ ಉತ್ತರ ಕನ್ನಡ ಜಿಲ್ಲೆಯ ರಸ್ತೆಗಳಿಗೆ 200 ಕೋಟಿ ರೂ. ಬಿಡುಗಡೆಗೊಳಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ನೆರೆ ವೀಕ್ಷಣೆ ಬಳಿಕ ಅಂಕೋಲಾದಲ್ಲಿ ಸಭೆ ನಡೆಸಿದ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ರು. ಪಿಡಬ್ಲುಡಿ ಇಲಾಖೆಯಿಂದ 100 ಕೋಟಿ ರೂ., ಆರ್ಡಿಪಿಆರ್ ವತಿಯಿಂದ 100 ಕೋಟಿ ರೂ. ಹಣ ತುರ್ತು ಬಿಡುಗಡೆಗೊಳಿಸುವ ಭರವಸೆ ನೀಡಿದ್ದಾರೆ. 10 ಸಾವಿರ ತಕ್ಷಣಕ್ಕೆ..! ಮನೆ ಕಳೆದುಕೊಂಡ ಅತಿಕ್ರಮಣದಾರರೂ ಸೇರಿ, ಮನೆ ಹಾನಿಗೆ ಕಳೆದ ಬಾರಿಯಂತೆ 10 ಸಾವಿರ ಹಣ, ಮನೆಬಳಕೆ ವಸ್ತುಗಳ ಖರೀದಿಗೆ ತುರ್ತು ಬಿಡುಗಡೆಗೊಳಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ರು. ಕಳಚೆ ಗ್ರಾಮ ಸ್ಥಳಾಂತರಕ್ಕೆ ಸೂಚನೆ..! ಇನ್ನು, ನೆರೆಯಿಂದ ತೀವ್ರ ಭೂಕುಸಿತವಾಗಿರುವ ಕಳಚೆ ಗ್ರಾಮ ವೀಕ್ಷಿಸಿದ್ದ ಸಿಎಂ, ತೀವ್ರ ಹಾನಿಗೊಳಗಾಗಿರುವ ಕಳಚೆ ಗ್ರಾಮವನ್ನು ಪೂರ್ಣ ಸ್ಥಳಾಂತರಕ್ಕೆ ಸೂಚನೆ ನೀಡಿದ್ರು. ಭೂಕುಸಿತದಿಂದ ಮನೆ ನಿರ್ಮಾಣ ಸಾಧ್ಯವಿಲ್ಲದ ಹಿನ್ನಲೆ ಸ್ಥಳಾಂತರಕ್ಕೆ ಸೂಚನೆ ನೀಡಿದ್ದಾರೆ. ಇನ್ನು, ಗ್ರಾಮಕ್ಕೆ ಅಗತ್ಯವಿರುವ ಸುಮಾರು...
ಅಂಕೋಲಾದಲ್ಲಿ ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಪರೆನ್ಸ್ ನಡೆಸಿದ ಸಿಎಂ..!
ಅಂಕೋಲಾ: ಇಲ್ಲಿನ ತಾಲೂಕು ಕಚೇರಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಇಂದು, ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಛರೆನ್ಸ್ ನಡೆಸಿದರು. ರಾಜ್ಯದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಪ್ರಧಾನಿಗೆ ಮಾಹಿತಿ ನೀಡಿದ ಸಿಎಂ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿನ ಪ್ರವಾಹದ ಪರಿಸ್ಥಿತಿ ಹಾಗೂ ಪರಿಹಾರ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದ್ರು. ಈ ವೇಳೆ ಸಿಎಂ ಗೆ ಹಲವು ಅಧಿಕಾರಿಗಳು ಸಾಥ್ ನೀಡಿದ್ರು.
ಯಲ್ಲಾಪುರದ ಕಳಚೆ ಭಾಗದಲ್ಲಿ ಅತಿವೃಷ್ಠಿ ಹಾನಿ ವೀಕ್ಷಿಸಿದ ಸಿಎಂ..!
ಯಲ್ಲಾಪುರ : ಅತಿವೃಷ್ಟಿಯಿಂದ ಹಾನಿಗೊಳಗಾದ ತಾಲೂಕಿನ ಕಳಚೆ ಭಾಗದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕ ಶಿವರಾಮ ಹೆಬ್ಬಾರ್, ಮುಖ್ಯಮಂತ್ರಿಗಳಿಗೆ ಹಾನಿಗೊಳಗಾದ ಪ್ರದೇಶಗಳ ಸಂಪೂರ್ಣ ಮಾಹಿತಿ ನೀಡಿದರು, ಸಂತ್ರಸ್ತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ತಿಳಿಸಿದರು ಹಾಗೂ ಈ ಭಾಗದಲ್ಲಿ ಮೂಲಭೂತ ಸೌಕರ್ಯಗಳ ಪುನರ್ನಿರ್ಮಾಣಕ್ಕಾಗಿ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವುದರ ಜೊತೆಯಲ್ಲಿ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರದಲ್ಲೇ ಪರಿಹಾರವನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ತುರ್ತಾಗಿ ರಾಜ್ಯದ ಮುಖ್ಯಮಂತ್ರಿಗಳನ್ನು ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ಕರೆದುಕೊಂಡ ಬಂದಿರುವ ಶಿವರಾಮ ಹೆಬ್ಬಾರ್ ಅವರ ಕಾರ್ಯವೈಖರಿಯ ಬಗ್ಗೆ ಗ್ರಾಮಸ್ಥರು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಶಾಸಕರು ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಪದಾಧಿಕಾರಿಗಳು ಕಾರ್ಯಕರ್ತರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಕುಸಿದು ಬಿದ್ದ ಗುಳ್ಳಾಪುರ ಸೇತುವೆ; ಭಯಾನಕವೆಂದ ಸಿಎಂ ಬೊಮ್ಮಾಯಿ..!
ಯಲ್ಲಾಪುರ: ಭಾರೀ ಮಳೆಯಿಂದ ಗುಳ್ಳಾಪುರ ಸೇತುವೆ ಕುಸಿದು ಹಾನಿಯಾಗಿದ್ದ ಸ್ಥಳಕ್ಕೆ ನೂತನ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲಿಸಿದ್ರು. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ ಶಿರಸಿ, ಯಲ್ಲಾಪುರ ಸೇರಿದಂತೆ ಹಲವೆಡೆ ಬಹಳಷ್ಟು ಹಾನಿಯಾಗಿದೆ, ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಿದ್ದೇನೆ.. ಪಶ್ಚಿಮ ಘಟ್ಟ ಬಹಳ ಸೂಕ್ಷ್ಮವಾದ ಪ್ರದೇಶ. ತುಂಬಾ ಮಳೆ ಬೀಳೋ ಪ್ರದೇಶ ಕೂಡ ಹೌದು. ಇಲ್ಲಿನ ಮಣ್ಣು ಬಹಳ ಬೇಗ ಕುಸಿತಕ್ಕೆ ಒಳಗಾಗುತ್ತಿದೆ ಇಲ್ಲಿನ ಸೇತುವೆ ಕುಸಿತ ತುಂಬಾ ಭಯಾನಕವಾಗಿದೆ ಅಂತಾ ತಿಳಿಸಿದ್ರು. ಅಲ್ದೆ, ಮನೆ ಬಿದ್ದವರಿಗೆ ಈ ಕೂಡಲೇ ಪರಿಹಾರ ನೀಡಲಾಗುವುದು, ರಾಜ್ಯ ಮಟ್ಟದಲ್ಲಿ ಸೇತುವೆಯ ಬಗ್ಗೆ ಚರ್ಚಿಸಲಾಗುವುದು. ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಅಂತಾ ಭರವಸೆ ನೀಡಿದ್ರು. ಈ ವೇಳೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಸಿಎಂ ಗೆ ಸಾಥ್ ನೀಡಿದ್ರು.
ಅರಬೈಲು ಘಟ್ಟದ ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಬೊಮ್ಮಾಯಿ..!
ಯಲ್ಲಾಪುರ: ಭಾರೀ ಮಳೆಯಿಂದ ಪ್ರವಾಹದ ಸಂಕಷ್ಟದಲ್ಲಿ ಸಿಲುಕಿದ್ದ ಉತ್ತರ ಕನ್ನಡ ಜಿಲ್ಲೆಗೆ ಇಂದು ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಭಾರೀ ಮಳೆಯಿಂದ ಯಲ್ಲಾಪುರ ತಾಲೂಕಿನ ಹಲವು ಕಡೆ ತೀವ್ರ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು. ಸಾಕಷ್ಟು ಹಾನಿ ಸಂಭವಿಸಿತ್ತು. ಅದ್ರಂತೆ ಯಲ್ಲಾಪುರ ತಾಲೂಕಿನ ಅರಬೈಲು ಘಟ್ಟ ಪ್ರದೇಶದಲ್ಲಿ ಜುಲೈ 23 ರಂದು ಹೆದ್ದಾರಿ ಕುಸಿತವಾಗಿತ್ತು. ಹೀಗಾಗಿ, ಗುಡ್ಡ ಕುಸಿತವಾದ ಪ್ರದೇಶವನ್ನು ಸಿಎಂ ಬಸವರಾಜ್ ಬೊಮ್ಮಾಯಿ ವೀಕ್ಷಿಸಿದ್ರು. ಅಂದಹಾಗೆ, ಅರಬೈಲು ಘಟ್ಟದಲ್ಲಿ ಸುಮಾರು 10 ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿತವಾಗಿತ್ತು. ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಗುಡ್ಡ ಕುಸಿತವಾಗಿ ವಾಹನ ಸಂಚಾರಕ್ಕೂ ಅಡಚಣೆಯಾಗಿತ್ತು. ಪ್ರತಿ ವರ್ಷವೂ ಮಳೆ ಬಂತು ಅಂದ್ರೆ ಈ ಪ್ರದೇಶದಲ್ಲಿ ಇದೇ ಸಮಸ್ಯೆ ಸೃಷ್ಟಿಯಾಗೋ ಕಾರಣಕ್ಕೆ ಶಾಶ್ವತ ಪರಿಹಾರದ ವ್ಯವಸ್ಥೆ ಮಾಡಬೇಕಿದೆ ಅಂತಾ ಸಿಎಂ ಜೊತೆ ಪ್ರವಾಹದ ಸಂಪೂರ್ಣ ಮಾಹಿತಿ ಒದಗಿಸುತ್ತಿದ್ದ ಮಾಜಿ ಸಚಿವ ಶಿವರಾಮ್ ಹೆಬ್ಬಾರ್, ಸಿಎಂ ಗೆ ಮನವರಿಕೆ ಮಾಡಿದ್ರು. ಅಲ್ಲದೆ, ಇದೇ ವೇಳೆ...
ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿಯಾಗಿದ್ದು ಹೆಬ್ಬಾರ್ ಕಾರಲ್ಲ..! ಹಾಗಾದ್ರೆ ಅಲ್ಲಿ ಡಿಕ್ಕಿಯಾಗಿದ್ದು ಯಾರ್ ಕಾರು..?
ಹುಬ್ಬಳ್ಳಿಯಲ್ಲಿ ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದ್ದು ಶಿವರಾಮ್ ಹೆಬ್ಬಾರ್ ಕಾರು ಅಲ್ಲ. ಬದಲಾಗಿ, ಬಿಜೆಪಿ ಮುಖಂಡ ಲಿಂಗರಾಜ ಪಾಟೀಲ ಅವರ ಕಾರು ಸಿಎಂ ಬಸವರಾಜ್ ಬೊಮ್ಮಾಯಿ ಅವರ ಬೆಂಗಾಲು ವಾಹನಕ್ಕೆ ಡಿಕ್ಕಿಹೊಡೆದಿದೆ. ಯಲ್ಲಾಪುರ ಪ್ರವಾಹಪೀಡಿದ ಪ್ರದೇಶ ಪರಿಶೀಲನೆಗೆ ಹುಬ್ಬಳ್ಳಿಯಿಂದ ಸಿಎಂ ಬೊಮ್ಮಾಯಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮುಖ್ಯಮಂತ್ರಿಗಳ ಬೆಂಗಾವಲು ವಾಹನದ ಹಿಂದೆ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿಹೊಡೆದಿದೆ. ಪರಿಣಾಮ, ಕಾರಿನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟಗಾಯಗಳಾಗಿದ್ದು, ಹೆಚ್ಚಿನ ಅನಾಹುತ ಸಂಭವಿಸಿಲ್ಲ ಅಂತ ತಿಳಿದುಬಂದಿದೆ. ಆದರೆ, ಅಪಘಾತವಾಗಿದ್ದು ಶಿವರಾಮ್ ಹೆಬ್ಬಾರ ಕಾರು ಎಂದು ಸುದ್ದಿಯಾಗಿತ್ತು. ಅಂದಹಾಗೆ, ಶಿವರಾಮ ಹೆಬ್ಬಾರ್ ಮುಖ್ಯಮಂತ್ರಿಗಳ ಕಾರಿನಲ್ಲೇ ಇದ್ದರು ಅನ್ನೋ ಮಾಹಿತಿ ಲಭ್ಯವಾಗಿದೆ.
ಉತ್ತರ ಕನ್ನಡ ಜಿಲ್ಲೆಗೆ ನೂತನ ಸಿಎಂ ಎಂಟ್ರಿ, ಭರ್ಜರಿ ಮಳೆಯ ನಡುವೆಯೇ ಬೊಮ್ಮಾಯಿಗೆ ಸ್ವಾಗತ..!
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಗೆ ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಆಗಮಿಸಿದ್ದಾರೆ. ಯಲ್ಲಾಪುರದ ಕಿರವತ್ತಿಯಲ್ಲಿ ನೂತನ ಸಿಎಂ ಗೆ ಭರ್ಜರಿ ಸ್ವಾಗತ ಕೋರಲಾಯಿತು. ಸಿಎಂ ಆದ ಬಳಿಕ ಮೊದಲು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿರೋ ನೂತನ ಸಿಎಂ ಬೊಮ್ಮಾಯಿ, ಕಿರವತ್ತಿಯಿಂದ ನೇರವಾಗಿ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ಅಗಮಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ನೀಡಿರೋ ಡಯಾಲಿಸಿಸ್ ಕೇಂದ್ರದ ಉದ್ಘಾಟನೆ ನೆರವೇರಿಸಿ ಆನಂತರದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಬೊಮ್ಮಾಯಿ ತೆರಳಲಿದ್ದಾರೆ. ಇನ್ನು ನೂತನ ಸಿಎಂ ಸ್ವಾಗತಕ್ಕೆ ಮಳೆರಾಯನೂ ಸಜ್ಜಾಗೇ ನಿಂತಿದ್ದ, ಸಿಎಂ ಆಗಮನಕ್ಕೂ ಮುನ್ನವೇ ಯಲ್ಲಾಪುರ ಪಟ್ಟಣ ಸೇರಿದಂತೆ ಹಲವೆಡೆ ಭರ್ಜರಿ ಮಳೆಯಾಗುತ್ತಿದೆ. ಇನ್ನು ಸುರಿಯುವ ಮಳೆಯಲ್ಲಿಯೇ ಸಿಎಂಗೆ ಪೊಲೀಸರಿಂದ ಗಾಡ್ ಆಫ್ ಹಾನರ್ ಗೌರವ ಸಮರ್ಪಣೆ ಮಾಡಲಾಯಿತು. ಯಲ್ಲಾಪುರದ ತಾಲೂಕು ಆಸ್ಪತ್ರೆ ಬಳಿ ನೂತನ ಸಿಎಂ ಗೌರವ ವಂದನೆ ಸ್ವೀಕರಿಸಿದ್ರು.
ಟೂರ್ ಪ್ಲಾನ್ ಬದಲು, ನೇರವಾಗಿ ಉತ್ತರ ಕನ್ನಡಕ್ಕೆ ಬರಬೇಕಿದ್ದ ಸಿಎಂ ಹೋಗಿದ್ದೇಲ್ಲಿಗೆ..?
ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ವೀಕ್ಷಿಸಲು ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಆಗಮಿಸುತ್ತಿದ್ದಾರೆ. ಈಗಾಗಲೇ ಹುಬ್ಬಳ್ಳಿಗೆ ನೂತನ ಸಿಎಂ ಆಗಮನವಾಗಿದ್ದು ಹುಬ್ಬಳ್ಳಿಯ ಭೇಟಿಗಾಗಿ ಬೊಮ್ಮಾಯಿ ಟೂರ್ ಪ್ಲಾನ್ ಬದಲಾಯಿಸಿದ್ದಾರೆ. ಬೆಂಗಳೂರಿನಿಂದ ನೇರವಾಗಿ ಉತ್ತರ ಕನ್ನಡ ಜಿಲ್ಲೆಗೆ ತೆರಳಬೇಕಿದ್ದ ಸಿಎಂ, ಹುಬ್ಬಳ್ಳಿಗೆ ಅಗಮಿಸುತ್ತಿದ್ದಂತೆಯೇ ಟೂರ್ ಪ್ಲಾನ್ ಬಹುತೇಕ ಬದಲಾಗಿದೆ. ಹುಬ್ಬಳ್ಳಿಯ ಕೇಶಕುಂಜ ಸೇರಿದಂತೆ, ಬೊಮ್ಮಾಯಿ ತಂದೆ ದಿ.S R ಪಾಟೀಲ ಸಮಾಧಿಗೆ ಭೇಟಿ ನೀಡಿದ ಸಿಎಂ, ಅಲ್ಲಿಂದ ನೇರವಾಗಿ ನಗರದಲ್ಲಿರೋ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಸದ್ಯ ಇದೀಗ ಯಲ್ಲಾಪುರಕ್ಕೆ ರಸ್ತೆ ಮೂಲಕ ನೆರೆ ವೀಕ್ಷಣೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಆಗಮಿಸುತ್ತಿದ್ದಾರೆ.
ವೀರರಾಣಿ ಚೆನ್ನಮ್ಮಾಜಿಗೆ ನಿಂದನೆ: ಶಿಗ್ಗಾವಿಯಲ್ಲಿ ಅಭಿಮಾನಿಗಳಿಂದ ಪ್ರತಿಭಟನೆ..!
ಶಿಗ್ಗಾವಿ : ವೀರರಾಣಿ ಕಿತ್ತೂರ ಚನ್ನಮ್ಮಾಜಿಯವರ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿದ ವ್ಯಕ್ತಿಯ ವಿರುದ್ದ ಶಿಗ್ಗಾವಿ ನಿಯೋಜಿತ ಚನ್ನಮ್ಮ ಸರ್ಕಲ್ನಲ್ಲಿ ಪಂಚಮಸಾಲಿ ಸಮಾಜದ ಮುಖಂಡರು ಹಾಗೂ ಚನ್ನಮ್ಮ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟಿಸಿ, ನಿಂದಿಸಿದ ವ್ಯಕ್ತಿಯ ಪ್ರತಿಕೃತಿ ದಹನ ಮಾಡಿ ಗಡಿಪಾರಿಗೆ ಅಗ್ರಹಿಸಿದ ಘಟನೆ ಸೋಮವಾರ ಜರುಗಿತು. ಶಿಗ್ಗಾವಿಯ ವೈದ್ಯ ಡಾ. ಕುಮಾರಗೌಡ ಪಾಟೀಲ ಅವರೇ ಚನ್ನಮ್ಮನವರ ಬಗ್ಗೆ ನಿಂದಿಸಿದ ವ್ಯಕ್ತಿ ಎಂದು ಹೇಳಲಾಗಿದ್ದು ಶಿಗ್ಗಾವಿ ಪಂಚಮಸಾಲಿ ಸಮಾಜದ ಅದ್ಯಕ್ಷ ಶಿವಾನಂದ ಬಾಗೂರ ಅವರು ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ. ಸೋಮವಾರ ಬೆಳಿಗ್ಗೆ ನಿಯೋಜಿತ ಚನ್ನಮ್ಮ ಸರ್ಕಲ್ನಲ್ಲಿ ನಿರ್ಮಾಣವಾಗುತ್ತಿರುವ ಕಿತ್ತೂರ ಚನ್ನಮ್ಮಾಜಿ ಅವರ ಪುತ್ಥಳಿ ನಿರ್ಮಾಣ ಕಾಮಗಾರಿ ಸ್ಥಳದ ಹತ್ತಿರ ಮುಖಂಡರಾದ ಶ್ರೀಕಾಂತ ದುಂಡಿಗೌಡ್ರ, ಈಶ್ವರಗೌಡ ಪಾಟೀಲ, ನಾಗಪ್ಪ ಅಣ್ಣಿಗೇರಿ, ಬಸವರಾಜ ಲಂಗೋಟಿ ಚಂದ್ರು ಹೆಬ್ಬಾಳ ಅವರುಗಳು ಸೇರಿದಂತೆ ಸಮಾಜದ ಮುಖಂಡರು ಕಾಮಗಾರಿ ವೀಕ್ಷೀಸುತ್ತಿದ್ದಾಗ ಅದೇ ಮಾರ್ಗದಲ್ಲಿ ಬಂದ ಡಾ. ಕುಮಾರಗೌಡ ಪಾಟೀಲ ಚನ್ನಮ್ಮನ ಘೋರಿ ಯಾವಾಗ ಮುಗಿಸುತ್ತೀರಿ ಎಂದು...