ದೇವರಹಿಪ್ಪರಗಿ: ಪಟ್ಟಣದ ಪೆಟ್ರೊಲ್ ಬಂಕ್ ಹತ್ತಿರ ಇಂದು ಕಾಂಗ್ರೆಸ್ ಕಾರ್ಯಕರ್ತರು. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು. ಪ್ರತಿಭಟನೆ ಮಾಡಿ ಮಾತನಾಡಿದ ವಿಜಯಪುರ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಗುಡಿಮನಿ, ದೇಶದಲ್ಲಿ ಸುಮಾರು ಏಳು ವರ್ಷಗಳಿಂದ ಪೆಟ್ರೊಲ್ ಬೆಲೆ ಏರುತ್ತಲೇ ಇದೆ. ದಿನನಿತ್ಯ ಬಳಸುವ ಗ್ಯಾಸ್ ಬೆಲೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಅಂತಾ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿರ್ ಬಿಜಾಪುರ್, ಬಶೀರ್ ಬೇಪಾರಿ, ರಜಾಕ್ ಹರವಾಳ, ರಾಘವೇಂದ್ರ ಪಡಗಾನೂರ, ಯಾಕೂಬ್ ಶಹಪುರ್, ದಾದಾಪೀರ್ ಬೇಪಾರಿ, ಮಾಂತೇಶ್ ಚಲವಾದಿ, ರಾಕೇಶ್ ಮೇಲಿನಮನಿ, ಹಾಜಿಲಾಲ, ಮಸಳಿ ಹೀಗೆ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Top Stories
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಶ್ವಾನ ಪ್ರಿಯರೇ ಗಮನಿಸಿ..! ಈ ಶ್ವಾನದ ಹೊಟ್ಟೆಯಲ್ಲಿದೆ ಚಿನ್ನ..!!
ಸಾಮಾನ್ಯವಾಗಿ ನಮಗೆ ಭದ್ರತೆ ನೀಡಲೆಂದು ನಾಯಿ ಸಾಕುತ್ತೇವೆ. ಆದರೆ, ಇಲ್ಲೊಂದು ಕುಟುಂಬ ಮಾಡಿದ ಎಡವಟ್ಟಿಗೆ ಹಗಲು ರಾತ್ರಿ ತಮ್ಮಸಾಕು ನಾಯಿಗೆ ಭದ್ರತೆ ನೀಡುವಂತಾಗಿದೆ. ಅಂದಹಾಗೆ, ಇದಕ್ಕೆಲ್ಲ ಕಾರಣ ಬಂಗಾರದ ಚೈನ್, ಹೌದು! ನೀವು ಇದನ್ನು ನಂಬಲೇ ಬೇಕು. ಕೊಪ್ಪಳ ಜಿಲ್ಲೆ ಕಾರಟಗಿ ಪಟ್ಟಣದ ದಿಲೀಪಕುಮಾರ್ ಹಿರೇಮಠ ಅವರ ಪಮಾರಿನ್ ತಳಿಯ ನಾಯಿ ಮರಿ ಸದ್ಯ 2 ತಿಂಗಳದ್ದು, ಮನೆ ಮಂದಿಗೆಲ್ಲ ಅಚ್ಚುಮೆಚ್ಚು. ಆದರೆ, ಮಾಲೀಕನ ಬಂಗಾರ ಚೈನ್ ಈಗ ನಾಯಿಯ ಹೊಟ್ಟೆ ಸೇರಿಬಿಟ್ಟಿದೆ. 2 ತೊಲೆ ಬಂಗಾರದ ಚೈನನ್ನು ಕಚ್ಚಿ ತುಂಡು ಮಾಡಿ ತಿಂದುಬಿಟ್ಟಿದೆ ಶ್ವಾನ. ಈ ವೇಳೆ ಮಾಲೀಕ ನಿದ್ದೆಗೆ ಜಾರಿದ್ದರು. ಎಚ್ಚರವಾದಾಗ ನಾಯಿ ಬಳಿ ಚೈನ್ ತುಂಡುಗಳನ್ನು ಗಮನಿಸಿ ಶಾಕ್ ಆಗಿದ್ದಾರೆ. ಕೂಡಲೇ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಚಿಕ್ಕ ಮರಿಯಾದ ಕಾರಣ ಆಪರೇಷನ್ ಬೇಡವೆಂದು ಡಾಕ್ಟರ್ ತಿಳಿಸಿದ್ದಾರೆ. ಇದೆ ವೇಳೆ ನಾಯಿ ಬಹಿರ್ದೆಸೆ ಮಾಡಿದ್ದು, ಒಂದೆರೆಡು ತುಂಡುಗಳು ಬಂದಿವೆ. ಸದ್ಯ ನಾಯಿಮರಿ ಹೊಟ್ಟೆಯಲ್ಲಿ 80 ಸಾವಿರ ರೂ. ಚಿನ್ನವಿದೆ...
ಇದೇ ತಿಂಗಳು ಮದುವೆಯಿತ್ತು..! ಆದ್ರೆ ಮದುಮಗ ಮಾತ್ರ ಇವತ್ತು ರೈಲಿಗೆ ತಲೆ ಕೊಟ್ಟು ಬಿಟ್ಟ..! ಯಾಕೆ ಹೀಗಾಯ್ತು..?
ಹಾವೇರಿ: ಇನ್ನೇನು ಕೆಲವೇ ದಿನಗಳಲ್ಲಿ ಮದುವೆ ಆಗಬೇಕಿದ್ದ ಯುವಕ ರೈಲು ಹಳಿಗೆ ಬಿದ್ದು ಸಾವು ಕಂಡ ಘಟನೆ ಹಾವೇರಿ ನಗರದ ಹೊರವಲಯದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಹಾವೇರಿ ಬಸವೇಶ್ವರ ನಗರದ ನಿವಾಸಿ, ವೀರೇಶ್ ಬೆನಕಪ್ಪನವರ (36), ಮೃತ ಯುವಕನಾಗಿದ್ದು ಇತ್ತೀಚೆಗಷ್ಟೇ ಮದುವೆ ನಿಶ್ಚಿತಾರ್ಥವಾಗಿತ್ತು. ಈ ತಿಂಗಳು 28 ರಂದು ಹಾವೇರಿಯಲ್ಲಿ ಮದವೆ ಕೂಡ ನಿಶ್ಚಯವಾಗಿತ್ತು. ಆದ್ರೆ ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ಶಂಕೆ ವ್ಯಕ್ತವಾಗಿದೆ. ಇನ್ನು ಸ್ಥಳಕ್ಕೆ ರೈಲ್ವೆ ಪೋಲಿಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಹಾವೇರಿ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅಗಲಿದ ದಲಿತ ಕವಿ ಡಾ.ಸಿದ್ದಲಿಂಗಯ್ಯ, ಕಳೆದ ವರ್ಷ ಬನವಾಸಿಯಲ್ಲಿ ಪಂಪ ಪ್ರಶಸ್ತಿ ಸ್ವೀಕರಿಸಿದ್ದ ಕ್ಷಣ ಇನ್ನೂ ಅಚ್ಚ ಹಸಿರು..!
ಶಿರಸಿ: ಇಂದು ನಾಡಿನ ಹಿರಿಯ ಸಾಹಿತಿ, ದಲಿತ ಕವಿ, ಡಾ. ಸಿದ್ದಲಿಂಗಯ್ಯ ವಿಧಿವಶರಾಗಿದ್ದಾರೆ. ಹಿರಿಯ ಕವಿಯ ನಿಧನಕ್ಕೆ ನಾಡಿನೆಲ್ಲೆಡೆ ಸಂತಾಪ ವ್ಯಕ್ತವಾಗಿದೆ. ಅಂದಹಾಗೆ, ದಲಿತ ಕವಿ ಸಿದ್ದಲಿಂಗಯ್ಯನವರಿಗೆ ಕಳೆದ ವರ್ಷವಷ್ಟೇ ಶಿರಸಿಯ ಬನವಾಸಿ ಕದಂಬೋತ್ಸವದಲ್ಲಿ ಪಂಪ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಕಳೆದ ವರ್ಷ ಫೆಬ್ರವರಿ 8, 2020ರಲ್ಲಿ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದಿದ್ದ ಕದಂಬೋತ್ಸವದಲ್ಲಿ ಡಾ.ಸಿದ್ದಲಿಂಗಯ್ಯ ಪಂಪ ಪ್ರಶಸ್ತಿ ಸ್ವೀಕರಿಸಿದ್ದರು. ಬನವಾಸಿಯ ಮಯೂರವರ್ಮ ವೇದಿಕೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಿಂದ ಪ್ರಶಸ್ತಿ ಸ್ವೀಕರಿಸಿದ್ದ ಸಾಹಿತಿ ಇಂದು ಅಗಲಿದ್ದು ಬನವಾಸಿಯಲ್ಲಿ ಸಾಹಿತ್ಯಾಸಕ್ತರು ನೆನಪಿಸಿಕೊಂಡಿದ್ದಾರೆ.
ಕಾತೂರಿನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಎಗರಿಸಿದ ಕಳ್ಳರು..!
ಮುಂಡಗೋಡ: ತಾಲೂಕಿನ ಕಾತೂರು ಗ್ರಾಮದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳುವು ಮಾಡಿದ ಘಟನೆ ನಡೆದಿದೆ. ಶಿರಾಜ್ ಬೊಮ್ನಳ್ಳಿ ಎಂಬುವವರ ಹೀರೋ ಹೊಂಡಾ ಸ್ಪೆಂಡರ್ ಪ್ರೊ ಬೈಕ್ ಕಳ್ಳತನವಾಗಿದೆ. ಮನೆ ಮುಂದೆ ನಿಲ್ಲಿಸಿದ್ದಾಗ ರಾತ್ರಿ ಯಾರೋ ಖದೀಮರು ಬಂದು ಬೈಕ್ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಅಂತಾ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಶಿರಾಜ್ ಬೊಮ್ನಳ್ಳಿ ದೂರು ದಾಖಲಿಸಿದ್ದಾರೆ
ಮುಂಡಗೋಡ ತಾಲೂಕಿನಲ್ಲಿ ಶನಿವಾರ ಕರೆಂಟು ಇರಲ್ಲ..! ಎಲ್ಲೇಲ್ಲಿ..?
ಮುಂಡಗೋಡ: ಪಟ್ಟಣದಲ್ಲಿ ಹಾಗೂ ಟಿಬೇಟಿಯನ್ ಕಾಲೋನಿಗಳಲ್ಲಿ ನಾಳೆ ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ ಅಂತಾ ಹೆಸ್ಕಾಂ ಮುಂಡಗೋಡ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಮುಂಡಗೋಡ ಉಪವಿಭಾಗದ 110/11 ಕೆ.ವಿ.ವಿದ್ಯುತ್ ಕೇಂದ್ರದಿಂದ ಮುಂಡಗೋಡ ಪಟ್ಟಣ ಹಾಗೂ ಟಿಬೇಟಿಯನ್ ಕಾಲೋನಿಗಳಿಗೆ ಹೊರಡುವ 11 ಕೆ.ವಿ.ಮಾರ್ಗದಲ್ಲಿ ತುರ್ತು ಕಾಮಗಾರಿ ಕೈಗೊಳ್ಳುತ್ತಿರೋ ಕಾರಣ, ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮದ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಅಂತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂಡಗೋಡ ತಾಲೂಕಿನಲ್ಲಿ ಇಂದು 14 ಜನ್ರಿಗೆ ಕೊರೋನಾ ಸೋಂಕು ದೃಢ..!
ಮುಂಡಗೋಡ:ತಾಲೂಕಿನಲ್ಲಿ ಇಂದು 14 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ ಅಂತಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್ ಇಂಗಳೆ ಮಾಹಿತಿ ನೀಡಿದ್ದಾರೆ. ಪಟ್ಟಣದ ಗಾಂಧಿನಗರ- 1, ಹೊಸ ಓಣಿ-1, ತಹಶೀಲ್ದಾರ್ ಕ್ವಾಟರ್ಸ್ ನಲ್ಲಿ -2, ನೆಹರು ನಗರ-1, ಇಂದೂರು-1, ಜನಗೇರಿ-1, ಕವಲಗಿ-1, ಕೊಳಗಿ- 3 ಹಾಗೂ ಚೌಡಳ್ಳಿ ಗ್ರಾಮದಲ್ಲಿ 4 ಪಾಸಿಟಿವ್ ಪ್ರಕರಣಗಳು ದೃಢ ಪಟ್ಟಿವೆ.
ಬ್ರಾಹ್ಮಣರ ವಿರುದ್ಧ ನಟ ಚೇತನ್ ಹೇಳಿಕೆ: ಸಚಿವ ಶಿವರಾಮ್ ಹೆಬ್ಬಾರ್ ಖಂಡನೆ..!
ಯಲ್ಲಾಪುರ: ಕನ್ನಡ ಚಿತ್ರ ನಟ ಚೇತನ್, ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ತೀವ್ರ ಖಂಡನಾರ್ಹ ಅಂತಾ ಸಚಿವ ಶಿವರಾಮ್ ಹೆಬ್ಬಾರ್ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರೋ ಸಚಿವ್ರು, ಚೇತನ್ ಹೇಳಿಕೆ ಗಮನಕ್ಕೆ ಬಂದಿದ್ದು. ಮೊದಲಿಗೆ, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಇನ್ನು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. ಈ ವ್ಯಕ್ತಿಯ ಹೇಳಿಕೆ ಸಂವಿಧಾನಕ್ಕೆ ವಿರೋಧವಾದುದು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವಂತಹದು ಅಂತಾ ಹೆಬ್ಬಾರ್ ಕಿಡಿ ಕಾರಿದ್ದಾರೆ. ಸಮಾಜದಲ್ಲಿ ತಾನು ಗುರುತಿಸಿಕೊಳ್ಳಬೇಕು ಅಂತಲೋ, ಗಂಜೀ ಕಾಸಿನ ಆಸೆಗೋ ಹೇಳಿಕೆ ಕೊಡೋ ಇಂತಹ ಸಮಾಜ ಕಂಟಕರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಳ್ಳುತ್ತೇನೆ ಅಂತಾ ಇದೇ ವೇಳೆ ಹೆಬ್ಬಾರ್ ತಿಳಿಸಿದ್ದಾರೆ.
ಹಾರೈಕೆ ಫಲಿಸಲಿಲ್ಲ, ಬದುಕಿ ಬರಲಿಲ್ಲ ಆ ಪುಟ್ಟ ಕಂದಮ್ಮ..! ಮತ್ತದೇ ಪ್ರಶ್ನೆ..! ಯಾರು ಹೊಣೆ..???
ಮುಂಡಗೋಡ: ನಿನ್ನೆ ರಾತ್ರಿಯಷ್ಟೇ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ತಾಲೂಕಿನ ಬಾಲಕಿಯೊಬ್ಬಳ ಸಾವು ಬದುಕಿನ ಮದ್ಯೆ ಹೋರಾಡ್ತಿರೋ ಘಟನೆಯ ಸಂಪೂರ್ಣ ಸುದ್ದಿ ನಿಮ್ಮ ಮುಂದಿಟ್ಟಿತ್ತು. ಬಹುಶಃ ತಾವೇಲ್ಲರೂ ಆ ಪುಟ್ಟ ಕಂದಮ್ಮ ಬದುಕಿ ಬರಲಿ ಅಂತಾ ಅದೇಷ್ಟು ಪ್ರಾರ್ಥಿಸಿದ್ದಿರೋ ಗೊತ್ತಿಲ್ಲ. ಆದ್ರೆ ಆ ಎಲ್ಲ ಹಾರೈಕೆಗಳು ಫಲಿಸಲೇ ಇಲ್ಲ. ಹುಬ್ಬಳ್ಳಿಯ ಕಿಮ್ಸ್ ನ ICU ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಕಂದಮ್ಮ ಬದುಕಿ ಬರಲೇ ಇಲ್ಲ. ನಿನ್ನೆ ತಡರಾತ್ರಿ ಕಂದಮ್ಮನ ಪ್ರಾಣ ಪಕ್ಷಿ ಹಾರಿಹೋಗಿದೆ. ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಹೌದು, ಮುಂಡಗೋಡ ತಾಲೂಕಿನ ಚೌಡಳ್ಳಿ ಗ್ರಾಮದ ಐದೂವರೇ ವರ್ಷದ ಬಾಲಕಿ ದೀಕ್ಷಾ ಲಕ್ಷ್ಮಣ ಕೋಣನಕೇರಿ, ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಕೊನೆಯುಸಿರೆಳೆದಿದ್ದಾಳೆ. ಆಗಿದ್ದಾದ್ರೂ ಏನು..? ಕಳೆದ ಸೋಮವಾರ ಅಂದ್ರೆ, ಜೂನ್ 7 ರಂದು ಮನೆಯಲ್ಲಿಟ್ಟಿದ್ದ ಕಳೆನಾಶಕವನ್ನು ಜ್ಯೂಸ್ ಅಂತಾ ಅರಿಯದೇ ಸೇವಿಸಿದ್ದಳು ಬಾಲಕಿ. ಹೀಗಾಗಿ, ಹಡೆದ ತಂದೆ ತಾಯಿ ಹಾಗೂ ಕುಟುಂಬಸ್ಥರು, ಆ ಬಾಲಕಿಯನ್ನು ಉಳಿಸಿಕೊಳ್ಳಲು ಪಡಬಾರದ ಕಷ್ಟ ಪಟ್ಟಿದ್ದರು. ಆದ್ರೆ...
ಮುಂಡಗೋಡಿನಲ್ಲಿ ಸರ್ಕಾರಿ ವೈದ್ಯನ ಖಾಸಗಿ ದರ್ಬಾರ್..? ಆಗಿರೋ ಅವಾಂತರಕ್ಕೆ ಹೊಣೆ ಯಾರು..?
ಮುಂಡಗೋಡ: ವೈದ್ಯ ನಾರಾಯಣೋ ಹರಿಃ ಅಂತಾರೆ, ಅದ್ರಂತೆ ಮುಂಡಗೋಡ ತಾಲೂಕಿನಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಾಸದ ನಡುವೆ ತಮ್ಮ ಜೀವ ಪಣಕ್ಕಿಟ್ಟು ಹಗಲು ರಾತ್ರಿ ಎನ್ನದೇ ಸೋಂಕಿತರ ಸೇವೆಯಲ್ಲಿ ಬಹುತೇಕ ವೈದ್ಯರುಗಳು ನಿರತರಾಗಿದ್ದಾರೆ. ಇನ್ನು ತಾಲೂಕಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್ ಇಂಗಳೆ ಹಾಗೂ ಮತ್ತವರ ತಂಡ, ತಾಲೂಕಿನಲ್ಲಿ ಕೊರೋನಾ ನಿಯಂತ್ರಿಸುವಲ್ಲಿ ಇನ್ನಿಲ್ಲದ ಪರಿಶ್ರಮ ಪಟ್ಟಿದ್ದಾರೆ, ಪಡುತ್ತಿದ್ದಾರೆ.. ಮಹಾಮಾರಿಯನ್ನು ಕಟ್ಟಿ ಹಾಕುವಲ್ಲಿ ಬಹುತೇಕ ಯಶಸ್ವಿಯೂ ಆಗಿದ್ದಾರೆ. ಆ ಕಾರಣಕ್ಕಾಗಿ ಪಬ್ಲಿಕ್ ಫಸ್ಟ್ ನ್ಯೂಸ್ ಟೀಂ ವತಿಯಿಂದ ತಾಲೂಕಿನ ವೈದ್ಯ ದೇವರುಗಳಿಗೆ ಹ್ಯಾಟ್ಸ್ ಅಪ್.. ಆದ್ರೆ ಈ ನಡುವೆಯೇ ತಾಲೂಕಿನಲ್ಲೊಂದು ಯಡವಟ್ಟಿನ ಘಟನೆ ನಡೆದಿದೆ. ಅದನ್ನ ನಾವಿಲ್ಲಿ ಹೇಳಲೇ ಬೇಕಿದೆ. ಯಾಕಂದ್ರೆ ಖುದ್ದು ನೊಂದವರೇ ಪಬ್ಲಿಕ್ ಫಸ್ಟ್ ನ್ಯೂಸ್ ಎದುರು ನೋವು ತೋಡಿಕೊಂಡಿದ್ದಾರೆ. ಹಾಗಾದ್ರೆ ಏನದು..? ಅವನೊಬ್ಬ ಗುತ್ತಿಗೆ ವೈದ್ಯ..! ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸ್ತಿರೋ ವೈದ್ಯರೊಬ್ಬರು ಯಡವಟ್ಟು ಮಾಡಿ, ಒಂದು ಬಡ ಕುಟುಂಬ ಕಣ್ಣೀರಲ್ಲಿ ಕೈದೊಳೆಯುವಂತೆ ಮಾಡಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ....