ಹಾನಗಲ್: ಬಿಜೆಪಿ ಹಿರಿಯ ಶಾಸಕ ಸಿ.ಎಂ. ಉದಾಸಿ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬಂದಿದೆ. ಈ ವೇಳೆ ಜೇಬುಗಳ್ಳರು ಕೈ ಚಳಕ ತೋರಿದ್ದಾರೆ. ಎಷ್ಟೊ ಜನರ ಮೊಬೈಲ್ ಎಗರಿಸಿದ್ದಾರೆ. ಇನ್ನು ಹೀಗೆ ಜೇಬಿಗೆ ಕತ್ತರಿ ಹಾಕುತ್ತಿರುವಾಗಲೇ, ರೆಡ್ ಹ್ಯಾಂಡ್ ಆಗಿ ಓರ್ವ ಖತರ್ನಾಕ ಜೇಬುಗಳ್ಳ ತಗಲಾಕ್ಕೊಂಡಿದ್ದ. ಜೇಬು ಕತ್ತರಿಸುವಾಗಲೆ ಕಳ್ಳನನ್ನು ಹಿಡಿದು ಸಾರ್ವಜನಿಕರು ಛಳಿ ಬಿಡಿಸಿದ್ದಾರೆ. ನಂತರ ಪೊಲೀಸರಿಗೆ ಕಳ್ಳನನ್ನು ಒಪ್ಪಿಸಿದ್ದಾರೆ. ಹಾನಗಲ್ ಪೊಲೀಸ್ರು ಕಳ್ಳನನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಜನಸಂದಣಿಯಲ್ಲಿ ಜೇಬಿಗೆ ಕತ್ತರಿ ಹಾಕಿಸಿಕೊಂಡವರ ಗೋಳು ಯಾರಿಗೂ ಬೇಡ. ಕೆಲವೊಬ್ರು ಹಣ ಕಳೆದುಕೊಂಡಿದ್ರೆ, ಇನ್ನೂ ಕೆವ್ರು ಮೊಬೈಲ್ ಕಳೆದುಕೊಂಡು ಬೆಪ್ಪು ಮೋರೆ ಹಾಕಿಕೊಂಡು ಮನೆ ಕಡೆ ನಡೆದಿದ್ದಾರೆ. ******************* ಪಬ್ಲಿಕ್ ಫಸ್ಟ್ ನ್ಯೂಸ್ ನ ಯೂಟ್ಯೂಬ್ ಸುದ್ದಿ ನೋಡಲು ಈ ಲಿಂಕ್ ಕ್ಲಿಕ್ ಮಾಡಿ.. SUBSCRIBE ಆಗಿ ಬೆಂಬಲಿಸಿ..
Top Stories
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!
ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
ಸಿ.ಎಂ.ಉದಾಸಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅಪಾರ ಅಭಿಮಾನಿಗಳು..!
ಹಾನಗಲ್: ಮಾಜಿ ಸಚಿವ, ಬಿಜೆಪಿ ಹಿರಿಯವಹಾಲಿ ಶಾಸಕ ಸಿ.ಎಂ.ಉದಾಸಿ ನಿಧನರಾದ ಹಿನ್ನೆಲೆ ಅವ್ರ ಪಾರ್ಥೀವ ಶರೀರದ ದರ್ಶನಕ್ಕೆ ಅಪಾರ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಹಾನಗಲ್ ಕುಮಾರೇಶ್ವರ ಮಠದ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಅಪಾರ ಅಭಿಮಾನಿಗಳು ತನ್ನ ನೆಚ್ಚಿನ ನಾಯಕನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಹೂಮಾಲೆ ಹಿಡಿದು ಸಾಲು ಸಾಲಾಗಿ ಬರುತ್ತಿರೋ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಇನ್ನು ಸಿ.ಎಂ.ಉದಾಸಿ ಪುತ್ರ ಸಂಸದ ಶಿವಕುಮಾರ್ ಉದಾಸಿ, ತಂದೆಯ ಪಾರ್ಥೀವ ಶರೀರದ ಪಕ್ಕದಲ್ಲೇ ನಿಂತು ಕಂಬನಿ ಮಿಡಿಯುತ್ತಿದ್ದಾರೆ.
ಛತ್ರಪತಿ ಶಿವಾಜಿ ಬ್ಯಾಂಕ್ ವತಿಯಿಂದ ವೈದ್ಯಕೀಯ ಸಲಕರಣೆ ಕೊಡುಗೆ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದ ಆರೋಗ್ಯ ವಿಸ್ತರಣಾ ಕೇಂದ್ರಕ್ಕೆ ಮುಂಡಗೋಡಿನ ಛತ್ರಪತಿ ಶಿವಾಜಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ವತಿಯಿಂದ ಇಂದು ಬಿಪಿ ಮಷೀನ್, ಶುಗರ್ ಮಷೀನ್ ಪಲ್ಸ ಆಕ್ಸಿ ಮೀಟರ್ ಗಳನ್ನು ಕೊಡುಗೆ ನೀಡಲಾಯಿತು. ಗ್ರಾಮೀಣ ಭಾಗದ ಜನರಿಗೆ ಸಹಕಾರ ವಾಗಲಿ ಅಂತಾ ವೈದ್ಯಕೀಯ ಸಲಕರಣೆ ನೀಡಿರೋ ಸೊಸೈಟಿ ಆಡಳಿತ ಮಂಡಳಿ, ನಂದಿಕಟ್ಟಾ ಗ್ರಾಮ ಪಂಚಾಯತ ಮೂಲಕ ಹಸ್ತಾಂತರಿಸಿದ್ರು. ಬೆಳೆಸಾಲಕ್ಕಾಗಿ ರೈತರ ಪರದಾಟ.. ಪಬ್ಲಿಕ್ ಫಸ್ಟ್ ನ್ಯೂಸ್ ಪ್ರಮುಖ ಸುದ್ದಿ ವೀಕ್ಷಿಸಲು ಈ ಲಿಂಕ್ ಕ್ಲಿಕ್ ಮಾಡಿ.. https://youtu.be/b6XTNoYGJdM
ಹಾವೇರಿಗೆ ಆಗಮಿಸಿದ ಉದಾಸಿ ಪಾರ್ಥೀವ ಶರೀರ, ಅಭಿಮಾನಿಗಳಿಂದ ಅಂತಿಮ ದರ್ಶನ..!
ಹಾವೇರಿ: ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸಿ. ಎಂ. ಉದಾಸಿ ನಿಧನ ಹಿನ್ನಲೆ, ಹಾವೇರಿ ನಗರಕ್ಕೆ ಪಾರ್ಥೀವ ಶರೀರ ಆಗಮಿಸಿದೆ. ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ಬಳಿ ಶಾಸಕರು ಹಾಗೂ ಕಾರ್ಯಕರ್ತರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ್ರು. ಹಾವೇರಿಯಲ್ಲಿ ನೂರಾರು ಆಭಿಮಾನಿಗಳ ಅಂತಿಮ ದರ್ಶನದ ಬಳಿಕ ಹಾನಗಲ್ ಕಡೆಗೆ ಪಾರ್ಥೀವ ಶರೀರ ಸಾಗಿಸಲಾಗುತ್ತಿದೆ.
ಸಿ.ಎಂ.ಉದಾಸಿ ವಿಧಿವಶ ಹಿನ್ನೆಲೆ: ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಇಂದು ಅಂತ್ಯಕ್ರಿಯೆ..!
ಹಾನಗಲ್: ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸಿ. ಎಂ.ಉದಾಸಿ ನಿಧನರಾದ ಹಿನ್ನಲೆಯಲ್ಲಿ ಇಂದು ಹುಟ್ಟೂರು ಹಾನಗಲ್ಲಿನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ, ಅಂತ್ಯಕ್ರಿಯೆಯಲ್ಲಿ ವಿವಿಧ ಗಣ್ಯ ಮಠಾಧೀಶರು ಸಾನಿಧ್ಯವಹಿಸಲಿದ್ದಾರೆ. ಹುಬ್ಬಳ್ಳಿಯ ಮೂರು ಸಾವಿರ ಮಠದ ಗುರಸಿದ್ದ ರಾಜಯೋಗೆಂದ್ರ ಸ್ವಾಮೀಜಿ, ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ, ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಣೆ, ಕ್ರೀಯಾ ಸಮಾಧಿಯ ವೇಳೆ ಮೋಕ್ಷ ಮಂತ್ರಪಠಣ ಉಚ್ಚರಿಸಲಿದ್ದಾರೆ. ಕುಮಾರೇಶ್ವರ ಮಠದ ಹಿಂಭಾಗದ ರುದ್ರಭೂಮಿಯಲ್ಲಿ ಸಿ.ಎಂ.ಉದಾಸಿ ಸಮಾಧಿ ಕಾರ್ಯ ನಡೆಯಲಿದ್ದು, ಸಮಾಧಿ ಗುಂಡಿಯೊಳಗೆ ವಿಭೂತಿ ಹಾಗೂ ವೀರಶೈವ ಲಿಂಗಾಯತ ಸಂಪ್ರದಾಯದಂತೆ ವಿವಿಧ ವಸ್ತುಗಳಿಂದ ಸಿಂಗರಿಸಲಾಗುತ್ತಿದೆ. ಮಠಾಧೀಶರ ಸಾನಿಧ್ಯದಲ್ಲಿ ವಿಶೇಷ ಪೂಜೆ, ನಂತರ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ ಅಂತಾ ಮೂಲಗಳು ಮಾಹಿತಿ ನೀಡಿವೆ. ****************** ಬೆಂಕಿಯ ಕೆನ್ನಾಲಿಗೆಗೆ ಬಡಕುಟುಂಬವೇ ಬೀದಿಗೆ.. ಪಬ್ಲಿಕ್ ಫಸ್ಟ್ ನ್ಯೂಸ್ ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.. https://youtu.be/9EuO4Ibd8dU
ಬೆಂಗಳೂರಿನಿಂದ ಹಾನಗಲ್ ಗೆ ಬರುತ್ತಿರೋ ಉದಾಸಿ ಪಾರ್ಥೀವ ಶರೀರ..! ಸಾರ್ವಜನಿಕ ದರ್ಶನಕ್ಕೆ ಸಕಲ ಸಿದ್ಧತೆ..!
ಹಾನಗಲ್: ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಹಿರಿಯ ಶಾಸಕ ಸಿ. ಎಂ. ಉದಾಸಿ ನಿಧನರಾದ ಹಿನ್ನೆಲೆಯಲ್ಲಿ ಇಂದು ಹುಟ್ಟೂರು ಹಾನಗಲ್ ಗೆ ಪಾರ್ಥಿವ ಶರೀರ ಬರಲಿದೆ. ಈಗಾಗಲೇ ಬೆಳಿಗ್ಗೆ 6 ಗಂಟೆಗೆ ಬೆಂಗಳೂರು ಬಿಟ್ಟಿರುವ ಸಿ ಎಮ್ ಉದಾಸಿ ಪಾರ್ಥಿವ ಶರೀರ, ಜಿಲ್ಲೆಯ ಮೊದಲ ಗ್ರಾಮ ಕುಮಾರಪಟ್ಟಣಂ ಗೆ ಆಗಮಿಸಲಿದೆ. ಅಲ್ಲಿಯ ಕಾರ್ಯಕರ್ತರಿಂದ ಅಂತಿಮ ದರ್ಶನ, ನಂತರ ರಾಣೇಬೆನ್ನೂರು, ಮೋಟೆಬೆನ್ನೂರು, ಹಾವೇರಿಯಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಾರ್ಗ ಮಧ್ಯದ ಗ್ರಾಮಗಳ ಕಾರ್ಯಕರ್ತರಿಗೆ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.ಇನ್ನು ಕೆಲವು ಕಡೆ ರಾಷ್ಟ್ರೀಯ ಹೆದ್ದಾರಿಯಲ್ಲೇ ನಿಲ್ಲಿಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ನಂತರ ಹಾನಗಲ್ ಗೆ 12 ಗಂಟೆಗೆ ಪಾರ್ಥಿವ ಶರೀರ ಆಗಮಿಸೋ ಸಾಧ್ಯತೆಯಿದ್ದು, ಮದ್ಯಾಹ್ನ 1 ಗಂಟೆಗೆ ಸ್ವಗೃಹಕ್ಕೆ ತೆರಳಿ ಪಾರ್ಥಿವ ಶರೀರಕ್ಕೆ ಕುಟುಂಬಸ್ಥರಿಂದ ಪೂಜೆ ಸಲ್ಲಿಸಿ, ಕುಟುಂಬಸ್ಥರಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮದ್ಯಾಹ್ನ 2 ಗಂಟೆ ನಂತರ ಕುಮಾರೇಶ್ವರ ಮಠದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಾನಗಲ್...
ಬಿಜೆಪಿ ಹಿರಿಯ ಶಾಸಕ ಉದಾಸಿ ಅಸ್ತಂಗತ: ಹಾನಗಲ್ ನಲ್ಲಿ ಬುಧವಾರ ಸಂಜೆ 4 ಕ್ಕೆ ಅಂತ್ಯಕ್ರಿಯೆ
ಹಾನಗಲ್: ಬಿಜೆಪಿಯ ಹಿರಿಯ ಶಾಸಕ ಮಾಜಿ ಸಚಿವ ಸಿ.ಎಂ.ಉದಾಸಿ ನಿಧನರಾದ ಹಿನ್ನೆಲೆಯಲ್ಲಿ, ನಾಳೆ ಬುಧವಾರ ಸಂಜೆ 4 ಗಂಟೆಗೆ ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ವಿರಕ್ತಮಠದ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಅಂತಾ ಆಪ್ತ ಮೂಲಗಳು ತಿಳಿಸಿವೆ. ನಾಳೆ ಮಧ್ಯಾಹ್ನ 12 ಗಂಟೆಗೆ ಹಾನಗಲ್ ಪಟ್ಟಣಕ್ಕೆ ಆಗಮಿಸಲಿರೋ ಶಾಸಕ ಉದಾಸಿಯವರ ಪಾರ್ಥೀವ ಶರೀರವನ್ನು, ಮಧ್ಯಾಹ್ನ 1 ಗಂಟೆಗೆ ಪಟ್ಟಣದ ಗೌಳಿ ಗಲ್ಲಿಯಲ್ಲಿರೋ ಅವರ ನಿವಾಸಕ್ಕೆ ತರಲಾಗುತ್ತದೆ. ಮದ್ಯಾಹ್ನ 2 ಗಂಟೆ ನಂತರ ಪಟ್ಟಣದ ವಿರಕ್ತಮಠದ ಆವರಣದಲ್ಲಿ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4 ಗಂಟೆಗೆ ಲಿಂಗಾಯತ ವಿಧಿ ವಿಧಾನದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಅಂತಾ ಮಾಹಿತಿ ಲಭ್ಯವಾಗಿದೆ. ******************* ಪಬ್ಲಿಕ್ ಫಸ್ಟ್ ನ್ಯೂಸ್ ನ ಇಂದಿನ ಪ್ರಮುಖ ಸುದ್ದಿ ನೋಡಲು ಇಲ್ಲಿ ಕ್ಲಿಕ್ ಮಾಡಿ.. https://youtu.be/9EuO4Ibd8dU
ಬೆಂಕಿಯಿಂದ ಮನೆ ಸುಟ್ಟು ಸಂಕಷ್ಟದಲ್ಲಿರೋ ಇಂದೂರಿನ ಬಡ ಕುಟುಂಬಕ್ಕೆ ದಿನಸಿ ವಿತರಿಸಿದ ಸಹೃದಯಿಗಳು..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದಲ್ಲಿ ನಿನ್ನೆ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಮನೆ ಸುಟ್ಟ ಕರಕಲಾದ ಘಟನೆ ನಡೆದಿದ್ದು, ಸಧ್ಯ ಇಡೀ ಕುಟುಂಬವೇ ಸಂಕಷ್ಟದಲ್ಲಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ದವಸ ಧಾನ್ಯಗಳೂ ಸುಟ್ಟು ಕರಕಲಾಗಿದ್ದು ಕುಟುಂಬಕ್ಕೆ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಇಂದೂರಿನ ಗಂಗಾಧರ ಬಡಿಗೇರ ಹಾಗೂ ಮಂಜುನಾಥ್ ನಡಗೇರಿ ಸಂಕಷ್ಟದಲ್ಲಿರೋ ಕುಟುಂಬಕ್ಕೆ ದಿನಸಿ ವಿತರಿಸಿದ್ದಾರೆ. ಮನೆ ಸುಟ್ಟು ಕರಕಲಾದ ಹಿನ್ನೆಲೆಯಲ್ಲಿ ನೊಂದಿರೋ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ************************************** ಬೆಂಕಿಯ ಕೆನ್ನಾಲಿಗೆಗೆ ಇಡಿ ಕುಟುಂಬವೇ ಬೀದಿಗೆ.. ಪಬ್ಲಿಕ್ ಫಸ್ಟ್ ನ್ಯೂಸ್ ಇಂದಿನ ಪ್ರಮುಖ ಸುದ್ದಿ ನೋಡಲು ಈ ಲಿಂಕ್ ಕ್ಲಿಕ್ ಮಾಡಿ..
ಪಾಲಕರೇ ನಿಮ್ಮ ಮಕ್ಕಳ ಮೇಲೆ ಇರಲಿ ಹೆಚ್ಚಿನ ಕಾಳಜಿ, ಬಂದಿದೆ ಮತ್ತೊಂದು ಮಹಾಮಾರಿ..!
ಬಾಗಲಕೋಟೆ: ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರುತ್ತೆ ಎನ್ನುವ ತಜ್ಞರ ವರದಿಯ ಬೆನ್ನಲ್ಲೇ, ಎರಡನೇ ಅಲೆಯೇ ಮಕ್ಕಳನ್ನ ಬಾಧಿಸುತ್ತಿದೆ. ಇದೀಗ ಗಾಯದ ಮೇಲೆ ಬರೆ ಎನ್ನುವಂತೆ ಕೋವಿಡ್’ನಿಂದ ಗುಣಮುಖರಾದ ಮಕ್ಕಳಲ್ಲಿ ಈಗ ಹೊಸದಾಗಿ ಕಾಯಿಲೆಯೊಂದು ಶುರುವಾಗಿದ್ದು ಪೊಷಕರನ್ನ ಬೆಚ್ವಿಬೀಳಿಸಿದೆ. ಬಹುಅಂಗಾಂಗ ವೈಫಲ್ಯ ಉಂಟುಮಾಡುವ ಆ ರೋಗ ಯಾವುದು? ಅಷ್ಟಕ್ಕೂ ಆ ಹೊಸ ರೋಗ ಬಾಧಿಸಿದ್ದು ಯಾವ ಜಿಲ್ಲೆಯಲ್ಲಿ..? ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್. ಯಸ್, ನಿತ್ಯ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗುವ ನೂರಾರು ಜನ, ಸೋಂಕು ಇಳಿಮುಖ ಕಾಣ್ತಾ ಇದ್ದರೂ ನಿಲ್ಲದ ದುಗುಡ. ಇಷ್ಟು ದಿನ ದೊಡ್ಡವರನ್ನ ಕಾಡ್ತಿದ್ದ ಹೆಮ್ಮಾರಿ ಕಾಟ ಈಗ ಮಕ್ಕಳ ಮೇಲೆ ವಕ್ರ ದೃಷ್ಟಿ ಬೀರ್ತಿದೆ. ಮಕ್ಕಳ ಪೋಷಕರು ಅಕ್ಷರಶಃ ಬೆಚ್ವಿಬೀಳುವಂತಾಗಿದೆ. ಇಷ್ಟೆಲ್ಲ ಆತಂಕಕ್ಕೆ ಸಾಕ್ಷಿಯಾಗಿರೋದು ಬಾಗಲಕೋಟೆ ಜಿಲ್ಲೆ. ಹೌದು, ಕೋವಿಡ್ ನಿಂದ ಗುಣಮುಖರಾದ ಚಿಕ್ಕ ಮಕ್ಕಳಲ್ಲಿ ಈಗ MIS-C ಎನ್ನುವ ಕಾಯಿಲೆಯೊಂದು ಕಾಣಿಸಿಕೊಂಡಿದ್ದು ಪೋಷಕರನ್ನ ಆತಂಕಕ್ಕೆ ಈಡು ಮಾಡಿದೆ. ಈಗ ಬಾಗಲಕೋಟೆ...
ಹಿರಿಯ ಬಿಜೆಪಿ ಶಾಸಕ ಸಿ.ಎಂ.ಉದಾಸಿ ವಿಧಿವಶ..!
ಹಾನಗಲ್- ಹಿರಿಯ ಬಿಜೆಪಿ ಶಾಸಕ ಮಾಜಿ ಸಚಿವ ಸಿ.ಎಂ.ಉದಾಸಿ(86) ವಿಧಿವಶವಾಗಿದ್ದಾರೆ. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಉದಾಸಿ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಉದಾಸಿಯವರನ್ನು ಚಿಕಿತ್ಸೆಗಾಗಿ ನಾರಾಯಣ ಹೃದಯಾಲಯದಲ್ಲಿ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಹಾನಗಲ್ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರ ಅಂತಲೇ ಖ್ಯಾತಿ ಪಡೆದಿದ್ದ ಸಿ.ಎಂ.ಉದಾಸಿಯ ಅಗಲಿಕೆಗೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಪಬ್ಲಿಕ್ ಫಸ್ಟ್ ನ್ಯೂಸ್ TOP 5 ನ್ಯೂಸ್ ವೀಕ್ಷಿಸಲು ಈ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ.. https://youtu.be/712rEAKhVeE