KDCC ಬ್ಯಾಂಕ್ ಎದುರು ಅನ್ನದಾತರ ಪರದಾಟ: ಬೆಳೆಸಾಲ ಪಡೆಯಲು ಹರಸಾಹಸ..!

KDCC ಬ್ಯಾಂಕ್ ಎದುರು ಅನ್ನದಾತರ ಪರದಾಟ: ಬೆಳೆಸಾಲ ಪಡೆಯಲು ಹರಸಾಹಸ..!

ಮುಂಡಗೋಡ: ಪಟ್ಟಣದ KDCC ಬ್ಯಾಂಕ್ ಎದುರು ಅನ್ನದಾತರ ಪರದಾಟ ಇನ್ನೂ ನಿಂತಿಲ್ಲ. ತಮ್ಮ ಬೆಳೆಸಾಲದ ಹಣಕ್ಕಾಗಿ ದಿನವಿಡೀ ಬಿಸಿಲು, ಮಳೆಯಲ್ಲೇ ಕಾಯಬೇಕಾದ ದುಸ್ತಿತಿ ತಪ್ಪಿಲ್ಲ.. ಬ್ಯಾಂಕ್ ಎದುರು ಅರ್ಧ ಕಿಲೋ ಮೀಟರ್ ವರೆಗೂ ಸರತಿ ಸಾಲಲ್ಲಿ ನಿಂತು ಬಸವಳಿಯುತ್ತಿರೋ ಅನ್ನದಾತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿ ಯಾರೂ ತೋರುತ್ತಿಲ್ಲ. ಈ ಸುದ್ದಿಯ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ.. ಹೌದು, ಮುಂಡಗೋಡ ತಾಲೂಕಿನ ರೈತರಿಗೆ ಸಿಗಬೇಕಾದ ಬೆಳೆಸಾಲಕ್ಕೆ ಅನ್ನದಾತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ KDCC ಬ್ಯಾಂಕ್ ಎದುರು ದಿನವಿಡೀ ಸರತಿ ಸಾಲಲ್ಲಿ ನಿಂತು ತಮ್ಮ ಬೆಳೆಸಾಲ ಪಡೆದುಕೊಳ್ಳುವ ಅನಿವಾರ್ಯತೆ ಎದಿರಾಗಿದೆ. ಹೀಗಾಗಿ, ಲಾಕ್ ಡೌನ್ ನಡುವೆಯೂ ಅನ್ನದಾತ ತನ್ನ ಸಾಲದ ಬಾಬತ್ತು ಪಡೆಯಲು ಪರದಾಡುತ್ತಿದ್ದಾನೆ. KDCC ಬ್ಯಾಂಕ್ ಆಡಳಿತ ವರ್ಗ ರೈತರಿಗೆ ಆಗುತ್ತಿರೋ ಇಂತಹ ತೊಂದರೆ ನೀಗಿಸಲು ಸುಲಭವಾದ ಪರ್ಯಾಯ ಮಾರ್ಗ ಅನುಸರಿಸಬೇಕಿದೆ ಅಂತಾ ಮುಂಡಗೋಡ ರೈತ ಮುಖಂಡ ರಾಮಣ್ಣ ಕುನ್ನೂರ್ ಆಗ್ರಹಿಸಿದ್ದಾರೆ. ಅಂದಹಾಗೆ, ಕೊರೋನಾ...

ಮುಂಡಗೋಡಿನಲ್ಲಿ ಇಂದಿನಿಂದ 4 ನೇ ಹಂತದ ಲಾಕ್ ಡೌನ್: ಅಗತ್ಯ ವಸ್ತುಗಳ ಖರೀಧಿಗೆ ಮುಗಿಬಿದ್ದ ಜನ..!

ಮುಂಡಗೋಡಿನಲ್ಲಿ ಇಂದಿನಿಂದ 4 ನೇ ಹಂತದ ಲಾಕ್ ಡೌನ್: ಅಗತ್ಯ ವಸ್ತುಗಳ ಖರೀಧಿಗೆ ಮುಗಿಬಿದ್ದ ಜನ..!

ಮುಂಡಗೋಡ-ಪಟ್ಟಣದಲ್ಲಿ ನಾಲ್ಕನೇ ಹಂತದ ಲಾಕ್ ಡೌನ್ ಇಂದಿನಿಂದ ಪ್ರಾರಂಭವಾಗಿದೆ. ನಿನ್ನೆಯಷ್ಟೇ ಉತ್ತರ ಕನ್ನಡ ಜಿಲ್ಲಾಧಿಕಾರಿ ಪರಿಷ್ಕೃತ ಆದೇಶ ಹೊರಡಿಸಿದ್ದಾರ. ಈ ಹಿನ್ನೆಲೆಯಲ್ಲಿ ಇಂದಿನಿಂದ ಸೋಮವಾರ, ಮಂಗಳವಾರ, ಬುಧವಾರ ಹಾಗೂ ಗುರುವಾರ ಹೀಗೆ ನಾಲ್ಕು ದಿನಗಳ ಕಾಲ, ಬೆಳಿಗ್ಗೆ 8 ಗಂಟೆಯಿಂದ 12 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀಧಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಇಂದು ಮುಂಡಗೋಡ ಪಟ್ಟಣದಲ್ಲಿ ಅಗತ್ಯ ವಸ್ತುಗಳ ಖರೀಧಿಗೆ ಜನ ಮುಗಿಬಿದ್ದಿದ್ರು. ಇಲ್ಲಿನ ದಿನಸಿ ಅಂಗಡಿಗಳ ಎದುರು ಜನ ಜಂಗುಳಿಯೇ ಸೇರಿತ್ತು. ಇನ್ನು ಅನಗತ್ಯ ತಿರುಗಾಡುವ ವಾಹನಗಳ ಬಗ್ಗೆ ಪೊಲಿಸ್ರು ಹದ್ದಿನ ಕಣ್ಣು ಇಟ್ಟಿದ್ರು..

ಮುಂಡಗೋಡಿನಲ್ಲಿ ಛತ್ರಿ, ರೇನ್ ಕೋಟ್ ಮಾರಾಟಕ್ಕೆ ಅನುಮತಿ: ಪಪಂ ನಿಂದ ಧ್ವನಿವರ್ದಕದ ಮೂಲಕ ಸೂಚನೆ..!

ಮುಂಡಗೋಡಿನಲ್ಲಿ ಛತ್ರಿ, ರೇನ್ ಕೋಟ್ ಮಾರಾಟಕ್ಕೆ ಅನುಮತಿ: ಪಪಂ ನಿಂದ ಧ್ವನಿವರ್ದಕದ ಮೂಲಕ ಸೂಚನೆ..!

ಮುಂಡಗೋಡ: ಪಟ್ಟಣದಲ್ಲಿ ಮಳೆಗಾಲಕ್ಕೆ ಅವಶ್ಯಕವಾಗಿರೋ ಛತ್ರಿ, ರೇನ್ ಕೋಟ್ ಸೇರಿದಂತೆ ಅಗತ್ಯ ವಸ್ತುಗಳ ಖರೀಧಿಗೆ ಅವಕಾಶ ಕಲ್ಪಿಸಲಾಗಿದ್ದು ಪಟ್ಟಣ ಪಂಚಾಯತ ಈ ಕುರಿತು ಧ್ವನಿ ವರ್ಧಕದ ಮೂಲಕ ಪಟ್ಟಣದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡುತ್ತಿದೆ. ಛತ್ರಿ ರೇನ್ ಕೋಟ್ ಸೇರಿದಂತೆ ಮಳೆಗಾಲಕ್ಕೆ ಉಪಯೋಗಿಸುವ ಪಾದರಕ್ಷೆಗಳ ಮಾರಾಟಗಾರರು ತಮ್ಮ ಅಂಗಡಿಗಳಲ್ಲೆ ಬೆಳಿಗ್ಗೆ 8 ರಿಂದ 12 ಗಂಟೆಯವರೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಮಾರಾಟ ಮಾಡಲು ಅನುಮತಿ ನೀಡಲಾಗಿದೆ.

ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಹೈಕಮಾಂಡ್ ಸೂಚಿಸಿದ್ರೆ ರಾಜೀನಾಮೆ ಕೊಡಲು ಸಿದ್ದ ಅಂತಾ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸಚಿವರು ಸಿಎಂ ರಾಜೀನಾಮೆ ಮಾತಿಗೆ ಹೇಳಿದ್ದಾದ್ರೂ ಏನು..? ತಿಳಿಬೇಕಾ ಈ ಕೆಳಗಿನ ಯೂಟ್ಯೂಬ್ ಲಿಂಕ್ ಗೆ ಕ್ಲಿಕ್ ಮಾಡಿ.. ಇತ್ತೀಚೆಗೆ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಪದೇ ಪದೇ ಚರ್ಚೆ ಆಗ್ತಿದೆ, ಪದೇ ಪದೇ ಚರ್ಚೆಗೆ ಬಂದ ಹಿನ್ನೆಲೆಯಲ್ಲಿ ಸಿಎಂ ಈ ರೀತಿ‌ ಹೇಳಿರಬಹುದು. ಕೋವಿಡ್ ಸಮಯದಲ್ಲಿ ಸಿಎಂ ಉತ್ತಮ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಸಿಎಂ ರಾಜೀನಾಮೆ ಕೊಡಿಸುವ ಯಾವ ಪ್ರಶ್ನೆ ಪಕ್ಷದ ಮುಂದಿಲ್ಲ‌. ಹೈಕಮಾಂಡ್ ನಿಂದಲೂ ಯಾವುದೇ ರೀತಿಯ ಸೂಚನೆ ಅವರಿಗಿಲ್ಲ ಅಂತಾ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.

ನಂದಿಕಟ್ಟಾ ಗ್ರಾಮದ ಕೊರೋನಾ ಸೋಂಕು ಪೀಡಿತರ ಕುಟುಂಬಗಳಿಗೆ ದಿನಸಿ ಕಿಟ್..!

ನಂದಿಕಟ್ಟಾ ಗ್ರಾಮದ ಕೊರೋನಾ ಸೋಂಕು ಪೀಡಿತರ ಕುಟುಂಬಗಳಿಗೆ ದಿನಸಿ ಕಿಟ್..!

ಮುಂಡಗೋಡ:ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಕೊರೋನಾ ಪಾಸಿಟಿವ್ ಪೀಡಿತರ ಕುಟುಂಬಗಳಿಗೆ, ಗ್ರಾಮ ಪಂಚಾಯತಿ ಸದಸ್ಯರು ಆಹಾರದ ಕಿಟ್ ವಿತರಿಸಿದ್ರು. ಕೊರೋನಾ ಎರಡನೇ ಅಲೆಯ ಪರಿಣಾಮ ಲಾಕ್ ಡೌನ್ ಜಾರಿಯಾದ ಹಿನ್ನಲೆಯಲ್ಲಿ ನಂದಿಕಟ್ಟಾ ಗ್ರಾಮದ ಬಡ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ. ಅದ್ರಲ್ಲೂ ಕೊರೋನಾ ಪಾಸಿಟಿವ್ ದೃಢಪಟ್ಟ ಕೆಲವು ಕುಟುಂಬಗಳ ಪಾಡು ಹೇಳತೀರದ್ದಾಗಿದೆ. ಹೀಗಾಗಿ, ಗ್ರಾಮ ಪಂಚಾಯತಿ ಸದಸ್ಯ ಸಂತೋಷ ಭೋಸ್ಲೆ ಸೇರಿದಂತೆ ಹಲವು ಸದಸ್ಯರು ಅಂತಹ ಬಡ‌ ಕುಟುಂಬಗಳಿಗೆ ಆಹಾರದ ದಿನಸಿ ಕಿಟ್ ವಿತರಿಸಿದ್ದಾರೆ.

ಸಾರ್ವಜನಿಕ ಆಸ್ಪತ್ರೆಯಲ್ಲಿ, ಸಂತೋಷಿ ಮಾತಾ ಕಾಳಿಕಾ ಮಠದಿಂದ ಆಹಾರ ಪೊಟ್ಟಣ ವಿತರಣೆ..!

ಹಳಿಯಾಳ : ಜೊಯಿಡಾ ತಾಲೂಕಿನ ಕ್ಯಾಸರಲಾಕ್ ಸಮೀಪದ ಕುಣಗಿನಿಯಲ್ಲಿರುವ ಶ್ರೀ ಸಂತೋಷಿ ಮಾತಾ ಕಾಳಿಕಾ ಮಠದ ವತಿಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳಿಗೆ ಹಾಗೂ ರೋಗಿಗಳಿಗೆ ಆಶ್ರಮದ ಶ್ರೀ ರಘುವೀರ ಗುರೂಜಿಯವರು ಒಂದು ದಿನದ ಊಟದ ಪೊಟ್ಟಣವನ್ನು ವಿತರಿಸಿದರು. 150 ಕ್ಕೂ ಹೆಚ್ಚು ಊಟದ ಪೊಟ್ಟಣವನ್ನು ವಿತರಿಸಲಾಯ್ತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಚವ್ವಾಣ, ಪ್ರಮುಖರಾದ ಮಾರುತಿ ನರಗುಂದಕರ, ಯಲ್ಲಪ್ಪಾ ಮಾಲವಣಕರ, ಯಶವಂತ ಪಟ್ಟೇಕರ, ಬಸವರಾಜ ಹಿರೆಮೊರಬ, ಆಶ್ರಮದ ರೂಪೇಶ ನಾಯ್ಕ, ಪಾಂಡುರಂಗ ಶೇಠ, ರಿಶ್ವಿತ್ ನಾಯ್ಕ, ಸಿದ್ದಾಂತ ಪರಬ ಮೊದಲಾದವರು ಇದ್ದರು.

ಮಳಗಿ: ಮೀನು ಹಿಡಿಯಲು ಹೋದ ಯುವಕ ಕೆರೆಯಲ್ಲಿ ಮುಳುಗಿ ಸಾವು..!

ಮುಂಡಗೋಡ: ತಾಲೂಕಿನ ಮಳಗಿಯಲ್ಲಿ, ಮೀನು ಹಿಡಿಯಲು ಹೋಗಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟ‌ನೆ ನಡೆದಿದೆ. ಉಮೇಶ್ ಶಿವಪ್ಪ ಬೋವಿ(25) ಮೃತಪಟ್ಟ ಯುವಕನಾಗಿದ್ದಾನೆ. ಮಳಗಿ ಗ್ರಾಮದ ಸಿದ್ದಾಪುರ ಓಣಿಯ ನಿವಾಸಿಯಾಗಿರೊ ಯುವಕ ಶನಿವಾರ ಮದ್ಯಾನ ಮೀನು ಹಿಡಿಯಲೆಂದು ಕೆರೆಗೆ ಹೋಗಿದ್ದ. ಈ ವೇಳೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಅಂತಾ ಸಂಬಂಧಿ ಜಯಮ್ಮ ಹನ್ಮಂತ ಬೋವಿ ಎಂಬುವವರು ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬನವಾಸಿ ಭಾಗದ ಗ್ರಾಮಗಳಿಗೆ ಸಚಿವ ಹೆಬ್ಬಾರ್ ಭೇಟಿ: ಕೋವಿಡ್ ನಿರ್ವಹಣೆ ಕುರಿತು ಚರ್ಚೆ..!

ಶಿರಸಿ: ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಇಂದು ಶಿರಸಿ ತಾಲೂಕಿನ ಬನವಾಸಿ ಹೋಬಳಿ ವ್ಯಾಪ್ತಿಯ ಬದನಗೋಡ, ಬಿಸಲಕೊಪ್ಪ, ಅಂಡಗಿ ಹಾಗೂ ಸುಗಾವಿ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿದರು. ಸ್ಥಳೀಯ ಜನಪ್ರತಿನಿಧಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ, ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ ಚರ್ಚಿಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು ಹಾಗೂ ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಬ್ಬಾರ್ ಕೋವಿಡ್ ಕೇರ್ ಕಿಟ್ ಅನ್ನು ವಿತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಆಶಾ ಕಾರ್ಯಕರ್ತೆರು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಸಂಕಷ್ಟದಲ್ಲಿರೊ 21 ಬಡ ಕುಟುಂಬಗಳಿಗೆ ಧನಸಹಾಯ ಮಾಡಿದ ಟಿಬೇಟಿಯನ್ ಲಾಮಾ..!

ಮುಂಡಗೋಡ-ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿದ್ದ ಕುಟುಂಬಗಳಿಗೆ ಟಿಬೇಟಿಯನ್ ಸಕ್ಯಾ ಪಾರ್ಟಿಯ ಬೌದ್ದ ಸನ್ಯಾಸಿ ಒಬ್ಬರು ಸಹಾಯ ಮಾಡಿದ್ದಾರೆ. ಸಂಕಷ್ಟದಲ್ಲಿದ್ದ 21 ಬಡ ಕುಟುಂಬಗಳಿಗೆ ತಲಾ 500 ರೂಪಾಯಿ ಹಣ ಸಹಾಯ ಮಾಡಿದ್ದು , ಹಣವನ್ನು ಇಂದು ಗ್ರಾಮ ಪಂಚಾಯತಿ ಸದಸ್ಯರು ವಿತರಿಸಿದ್ರು. ಈ ವೇಳೆ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು..

error: Content is protected !!