ವಾಷಿಂಗ್ಟನ್: ವಿಶ್ವದ ಮೋಸ್ಟ್ ವಾಂಟೆಡ್ ಉಗ್ರ ಅಲ್ ಖೈದಾ ಸಂಘಟನೆಯ ನಾಯಕ ಅಮ್ಮಾನ್ ಅಲ್ ಜವಾಹಿರಿಯನ್ನು ಅಮೆರಿಕದ ವಾಯುಪಡೆ ಸೋಮವಾರ ತಡರಾತ್ರಿ ಕಾರ್ಯಾಚರಣೆ ನಡೆಸಿ ಹತ್ಯೆಗೈದಿದೆ. ಈ ಕುರಿತು ಟ್ವಿಟರ್ನಲ್ಲಿ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಅವರು ಅಮೇರಿಕಾ ಏರ್ ಸ್ಟೈಕ್ ನಡೆಸಿರುವುದನ್ನು ದೃಢಪಡಿಸಿದ್ದಾರೆ. ಜುಲೈ 31 ರಂದು ಕಾಬೂಲ್ ನಗರದ ಶೆರ್ಪುರ್ ಪ್ರದೇಶದ ವಸತಿ ಗೃಹದ ಮೇಲೆ ಅಮೇರಿಕಾ ಸೇನೆಯಿಂದ ವಾಯುದಾಳಿ ನಡೆಸಲಾಗಿದೆ ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್ ಈ ದಾಳಿಯನ್ನು ಬಲವಾಗಿ ಖಂಡಿಸುತ್ತದೆ. ಇದು ಅಂತರರಾಷ್ಟ್ರೀಯ ತತ್ವಗಳು ಮತ್ತು ದೋಹಾ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅಮೇರಿಕಾದ ದಾಳಿಯನ್ನು ಮುಜಾಹಿದ್ ಖಂಡಿಸಿದ್ದಾನೆ. ಈ ಕಾರ್ಯಾಚರಣೆಯ ಕುರಿತು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಸೋಮವಾರ ತಡರಾತ್ರಿ ಸ್ಪಷ್ಟಪಡಿಸಿದ್ದು, ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ ಮತ್ತು ಸೆಪ್ಟೆಂಬರ್ 11, 2001 ರ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ಅಲ್-ಖೈದಾ ಮುಖ್ಯಸ್ಥ ಅಮ್ಮನ್ ಅಲ್-ಜವಾಹಿರಿಯನ್ನು ಯುನೈಟೆಡ್ ಸ್ಟೇಟ್ಸ್ ಹೊಡೆದುರುಳಿಸಿದೆ ಎಂದು ಹೇಳಿದ್ದಾರೆ.ಜಗತ್ತಿಗೆ ಕಂಟಕವಾಗಿರುವ...
Top Stories
ಮಹಾರಾಷ್ಟ್ರದಿಂದ ಕಬ್ಬು ಕಟಾವಿಗೆ ಬಂದಿದ್ದ ಅಪ್ರಾಪ್ತೆಯನ್ನ ಆ ಹುಡುಗ ಅತ್ಯಾಚಾರ ಮಾಡಿದ್ನಾ..? ಹಾಗಿದ್ರೆ ಕೇಸ್ ಏನಾಯ್ತು..?
ಟ್ಯಾಕ್ಸ್ ವಸೂಲಿಯಲ್ಲಿ ಮುಂಡಗೋಡ ತಾಲೂಕು ರಾಜ್ಯಕ್ಕೇ ಪ್ರಥಮ..! ತಾಪಂ ಗ್ರಾಪಂ ಅಧಿಕಾರಿ, ಸಿಬ್ಬಂದಿಗಳ ಸಾಧನೆ..!!
ಮುಂಡಗೋಡ ಬೆಂಡಿಗೇರಿ ಪೆಟ್ರೊಲ್ ಬಂಕ್ ಹತ್ತಿರ ಬೈಕ್ ಅಪಘಾತ, ವೃದ್ದನ ಕಾಲು ಕಟ್..!
ಮಳಗಿ-ಬನವಾಸಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಓರ್ವ ಸ್ಥಳದಲ್ಲೇ ಓರ್ವ ಸಾವು, ಮತ್ತೋರ್ವ ಗಂಭೀರ..!
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶುಕ್ರವಾರ ಸರ್ಕಾರಿ ರಜೆ ಘೋಷಣೆ..! ಶಾಲಾ ಕಾಲೇಜುಗಳಿಗೆ ರಜೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ..! ನಾಳೆಯ ಬೆಳಗಾವಿ ಕೈ ಕಾರ್ಯಕ್ರಮ ರದ್ದು..!
ವಿಶ್ವದ ಮೋಸ್ಟ್ ವಾಂಟೆಡ್ ಉಗ್ರ ಮಟ್ಯಾಶ್, ತಡರಾತ್ರಿ ಅಮೇರಿಕ ಸೇನೆಯಿಂದ ಉಗ್ರನ ಸಂಹಾರ..!
ತಾಲೂಕಿನಲ್ಲಿ ಮತ್ತೆ ಮಹಾಮಳೆ ಕಂಟಕ, ಬಡ್ಡಿಗೇರಿ ಹಳ್ಳದ ಬ್ರಿಡ್ಜ್ ಜಲಾವೃತ, ಸಂಚಾರ ಬಂದ್..!
ಮುಂಡಗೋಡ: ತಾಲೂಕಿನ ಹಲವು ಕಡೆ ಭರ್ಜರಿ ಮಳೆಯಾಗಿದೆ. ಸಂಜೆಯಿಂದ ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಮಳೆಯಾಗಿದೆ. ಇದ್ರಿಂದ ಯಲ್ಲಾಪುರ ರಸ್ತೆಯಲ್ಲಿ ಸಂಚಾರ ಸ್ಥಗಿತವಾಗಿದೆ. ಮುಂಡಗೋಡ ತಾಲೂಕಿನ ಬಡ್ಡಿಗೇರಿ ಹಾಗೂ ಗುಂಜಾವತಿ ಮದ್ಯೆ ಬಡ್ಡಿಗೇರಿ ಹಳ್ಳ ತುಂಬಿದ ಪರಿಣಾಮ ಹಳ್ಳದ ನೀರು ರಸ್ತೆಯ ಮೇಲೆ ಹರಿದು, ಕಿರು ಸೇತುವೆ ಮುಳುಗಡೆಯಾಗಿದೆ. ಹೀಗಾಗಿ, ರಸ್ತೆ ಮೇಲೆ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಯಲ್ಲಾಪುರ ರಸ್ತೆಯ ಬಹುತೇಕ ಕಡೆ ಭಾರಿ ಮಳೆಯಾಗಿದ್ದು ,ಹಲವು ಹಳ್ಳಗಳಲ್ಲಿ ನೀರು ಭರ್ತಿಯಾಗಿ ಹರಿಯುತ್ತಿದೆ.
ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಲಕ್ಕೊಳ್ಳಿಯ ಯುವ ಕ್ರೀಡಾಪಟು ಎನ್.ಎಸ್. ಸಿಮಿ ಸಂಭ್ರಮದ ಹೆಜ್ಜೆ..!
ಮುಂಡಗೋಡ: ತಾಲೂಕಿನ ಚೌಡಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಲಕ್ಕೊಳ್ಳಿ ಗ್ರಾಮದ ಯುವ ಕ್ರೀಡಾಪಟು ಎನ್.ಎಸ್.ಸಿಮಿ, ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನಲ್ಲಿ 4×100 ಮೀ ರಿಲೇ ಓಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಅಲ್ಲಿಂದಲೇ, ವಿಡಿಯೋ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಕಾಮನ್ವೆಲ್ತ್ ಗೇಮ್ಸ್ ಗೆ ಆಯ್ಕೆಯಾಗಿ ಮುಂಡಗೋಡ ತಾಲೂಕಿನ ಕೀರ್ತಿಯನ್ನು ಹಾಗೂ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ಸದ್ಯ ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ನಲ್ಲಿರೊ ಎನ್.ಎಸ್.ಸಿಮಿ, ಹುರುಪಿನಿಂದಲೇ ಭಾರತ ಧ್ವಜ ಹಿಡಿದು ಸಂಭ್ರಮಿಸಿದ್ದಾರೆ. ಹೀಗಾಗಿ, ಈ ಕ್ರೀಡಾಪಟುವಿನ ಸಾಧನೆಗೆ ತಾಲೂಕಿನ ಜನ ಹೆಮ್ಮೆ ಪಡುತ್ತಿದ್ದಾರೆ. ಯಶಸ್ಸು ಸಿಗಲಿ ಅಂತಾ ಹಾರೈಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾರತ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿ ಜಿಲ್ಲೆಯ ಕೀರ್ತಿ ಪತಾಕೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಹಾರಿಸುವಂತಾಗಲಿ ಅಂತಾ ಶುಭ ಹಾರೈಸುತ್ತಿದ್ದಾರೆ.
ಗೌರವಧನ ಹೆಚ್ಚಳ ಸೇರಿ, ವಿವಿಧ ಬೇಡಿಕೆ ಈಡೇರಿಸುವಂತೆ ಅತಿಥಿ ಶಿಕ್ಷಕರಿಂದ ಸರ್ಕಾರಕ್ಕೆ ಮನವಿ..!
ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಇಂದು ಅತಿಥಿ ಶಿಕ್ಷಕರು, ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಅರ್ಪಿಸಿದ್ರು. ಶಿಕ್ಷಣ ಇಲಾಖೆಯ ಗುರಿ ಸಾಧನೆಗಾಗಿ ಹಾಗೂ ಮಕ್ಕಳ ಕಲಿಕಾ ಹಿತ ದೃಷ್ಠಿಯಿಂದ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿದೆ. ಸದ್ಯ, ಸರ್ಕಾರವು ನಿಗಧಿಪಡಿಸಿದ ಗೌರವಧನದಿಂದ ದೈನಂದಿನ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಹೀಗಾಗಿ, ಕನಿಷ್ಠ 25 ಸಾವಿರ ರೂ. ಗೌರವಧನ ನಿಗಧಿ ಮಾಡಬೇಕು. ಅಲ್ಲದೆ, ಸರ್ಕಾರ ನೀಡುತ್ತಿರೋ ಗೌರವಧನ, ನೇಮಕಗೊಂಡು 2 ತಿಂಗಳು ಕಳೆಯುತ್ತಿದ್ದರೂ ಇದುವರೆಗೂ ಕೈ ಸೇರಿಲ್ಲ. ಹೀಗಾಗಿ ನಾವು ಬದುಕು ನಡೆಸುವುದೇ ದುಸ್ತರವಾಗಿದೆ. ಈ ಕಾರಣಕ್ಕಾಗಿ, ಕಷ್ಟದಲ್ಲಿರುವ ನಮಗೆ ಗೌರವಧನ ಹೆಚ್ಚಳದೊಂದಿಗೆ ಗೌರವಧನ ಶೀಘ್ರ ಬಿಡುಗಡೆ ಮಾಡಬೇಕು. ಗೌರವಧನ ಬಿಡುಗಡೆಯ ನಂತರ ಪ್ರತಿ ತಿಂಗಳು ಸಮಯಕ್ಕೆ ಸರಿಯಾಗಿ ವೇತನ ಪಾವತಿಸಬೇಕು. ಅಲ್ಲದೇ, ತಿಂಗಳಿಗೆ ಒಂದು ರಜೆ ಪಡೆಯಲು ಅವಕಾಶ ನೀಡಬೇಕು. ಅತಿಥಿ ಶಿಕ್ಷಕರಿಗೂ ಗುರುತಿನ ಚೀಟಿ ವಿತರಣೆ ಮಾಡುವಂತೆ ಕ್ರಮ ಕೈಗೊಳ್ಳಬೇಕು ಅಂತಾ ಅತಿಥಿ ಶಿಕ್ಷಕರು ಸರ್ಕಾರಕ್ಕೆ ಮನವಿ ಮೂಲಕ...
ನಂದಿಪುರ ಬಳಿ ಬೊಲೆರೋ ವಾಹನ ತಪ್ಪಿಸಲು ಹೋಗಿ ರಸ್ತೆ ಬದಿಗೆ ಜಾರಿದ KSRTC ಬಸ್..!
ಮುಂಡಗೋಡ: ತಾಲೂಕಿನ ನಂದಿಪುರ ಸಮೀಪ KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದಿದೆ. ಪರಿಣಾಮ ಮೂರ್ನಾಲು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಎದುರಿಗೆ ಬಂದ ಬುಲೆರೋ ತಪ್ಪಿಸಲು ಹೋಗಿ ಬಸ್ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಗೆ ತಾಗಿ ನಿಂತಿದೆ. ರಸ್ತೆ ಬದಿಯಲ್ಲಿದ್ದ ಮರಕ್ಕೆ ತಾಗಿ ನಿಂತ ಪರಿಣಾಮ ಬಸ್ ಮುಂಬದಿಯ ಗ್ಲಾಸ್ ಜಖಂ ಗೊಂಡಿದೆ. ಇನ್ನು ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಎಮರ್ಜೆನ್ಸಿ ಬಾಗಿಲು ತೆರೆದು ಹೊರ ಬಂದಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮರಗಡಿಯಲ್ಲಿ ರೈತನ ಮೇಲೆ ಕರಡಿಯಿಂದ ಮಾರಣಾಂತಿಕ ದಾಳಿ, ರೈತ ಗಂಭೀರ..!
ಮುಂಡಗೋಡ: ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಅನ್ನದಾತನ ಮೇಲೆ ಕರಡಿ ದಾಳಿ ಮಾಡಿದೆ. ಮರಗಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಫಕ್ಕಿರೇಶ ರಾಮಣ್ಣ ಗೊಲ್ಲರ್ ಎಂಬುವನ ಮೇಲೆ ಮಾರಣಾಂತಿಕ ದಾಳಿ ಮಾಡಿದೆ. ಮರಿಗಳೊಂದಿಗೆ ಆಹಾರ ಅರಸಿ ಬಂದಿದ್ದ ಕರಡಿ ರೈತನನ್ನು ನೋಡಿ ಪ್ರಾಣಭಯದಿಂದ ದಾಳಿ ಮಾಡಿದೆ ಎನ್ನಲಾಗಿದೆ. ಅಂದಹಾಗೆ, ಗದ್ದೆಯಲ್ಲಿ ಮಂಗಗಳ ಹಾವಳಿ ಕಾರಣಕ್ಕೆ ಗೋವಿನಜೋಳ ರಕ್ಷಣೆಗಾಗಿ ಕಟ್ಟಿದ್ದ ಶ್ವಾನಗಳಿಗೆ ಆಹಾರ ಕೊಡಲು ಹೋದಾಗ ಘಟನೆ ನಡೆದಿದೆ ಎನ್ನಲಾಗಿದೆ. ಹೀಗಾಗಿ ತಕ್ಷಣವೇ ಸ್ಥಳೀಯರು ರೈತನ ನೆರವಿಗೆ ಬಂದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ರೈತನಿಗೆ ಕಾತೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ, ನಂತರ ತಾಲೂಕಾಸ್ಪತ್ರೆಗೆ ಸಾಗಿಸಿದ್ದಾರೆ. ಅರಣ್ಯ ಇಲಾಖೆ ಆಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮುಂಡಗೋಡ-ಯಲ್ಲಾಪುರ ಗಡಿಯ ಕಾಡಲ್ಲಿದೆ ನಟೋರಿಯಸ್ ಗ್ಯಾಂಗ್..! ಎಚ್ಚರ ತಪ್ಪಿದ್ರೆ ನಿಮಗೂ ಹಾಕ್ತಾರೆ ಗಾಳ..!
ಯಲ್ಲಾಪುರ ಪೊಲೀಸರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಇಡೀ ಯಲ್ಲಾಪುರ ತಾಲೂಕಿನ ಜನರ ನಿದ್ದೆಗೆಡಿಸಿದ್ದ ಅದೊಂದು ನಟೋರಿಯಸ್ ದರೋಡೆಕೋರರ ಭಯಾನಕ ಕೃತ್ಯ ಈಗಷ್ಟೇ ಅರ್ಧ ಬಯಲಾದಂತಾಗಿದೆ. ಬರೋಬ್ಬರಿ ಒಂದೂವರೇ ತಿಂಗಳು, ಹಗಲು ರಾತ್ರಿ ಕಾರ್ಯಾಚರಣೆ ನಡೆಸಿ, ಅರ್ದದಷ್ಟು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ ಯಲ್ಲಾಪುರ ಪೊಲೀಸರು. ಅಸಲು, ಯಲ್ಲಾಪುರದ ದಕ್ಷ ಪಿಐ ಸುರೇಶ್ ಯಳ್ಳೂರು ಹಾಗು ಮತ್ತವರ ಪಡೆಗೆ ಅಕ್ಷರಶಃ ನಿದ್ದೆ ಕಸಿದುಕೊಂಡಿದ್ದ ಕೇಸ್ ಇದು. ಅದು ಭಯಾನಕ ಗ್ರಾಮ..! ಇಲ್ಲಿ ಈ ಸ್ಟೋರಿ ಹೇಳೋಕಿಂತ ಮುಂಚೆ ಈ ಗ್ರಾಮದ ಬಗ್ಗೆ ಹೇಳಲೇ ಬೇಕು. ಅಂದಹಾಗೆ, ಯಲ್ಲಾಪುರ ತಾಲೂಕಿನಲ್ಲಿ ಬಹುತೇಕ ಈ ಊರಿನ ಹೆಸ್ರು ಕೇಳಿದ್ರೆ ಬೆಚ್ಚಿ ಬೀಳೋ ಅದೇಷ್ಟೋ ಜನರಿದ್ದಾರೆ. ಯಲ್ಲಾಪುರ ತಾಲೂಕಿನ ಮಂಚಿಕೇರಿಯಿಂದ ಸರಿ ಸುಮಾರು 10 ಕಿ.ಮೀ ಅಂತರದಲ್ಲಿರೋ ಈ ಗ್ರಾಮ, ಮುಂಡಗೋಡ ತಾಲೂಕಿನ ಸುಳ್ಳಳ್ಳಿಯಿಂದ ಕೇವಲ 6-7 ಕೀ.ಮೀ ದೂರದಲ್ಲಿದೆ. ಅಸಲು, ಈ ಗ್ರಾಮದಲ್ಲಿರೋದೇ ಕೇವಲ 9 ರಿಂದ 10 ಮನೆಗಳಂತೆ. ಆದ್ರೆ, ಆ ಮನೆಗಳಲ್ಲಿ ನಡೆಯುವ ಭಯಾನಕ...
ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ..!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ದಿನದಲ್ಲಿ ಬರೋಬ್ಬರಿ 3 ಕೊಲೆಗಳಾಗಿದೆ. ಇಡೀ ಜಿಲ್ಲೆಯಾದ್ಯಂತ ಪರಿಸ್ಥಿತಿ ಉದ್ವಿಗ್ನವಾಗಿದೆ. ಇದರಿಂದಾಗಿ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಆದರೆ ನಿರ್ಬಂಧವಿದ್ದರೂ ನಗರಕ್ಕೆ ಬಂದ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಅಪಾಯ ಇರುವ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಅವರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಮುತಾಲಿಕ್ ಅವರ ದಕ್ಷಿಣ ಕನ್ನಡ ಜಿಲ್ಲೆಯ ಭೇಟಿಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದರು. ಆದರೆ, ನಗರಕ್ಕೆ ಬಂದ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರವೀಣ್ ಶವಯಾತ್ರೆ ವೇಳೆ ಲಾಠಿ ಬೀಸಿದ್ದ ಇಬ್ಬರು ಪಿಎಸ್ಐಗಳ ವರ್ಗಾವಣೆ..!
ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಶವಯಾತ್ರೆ ವೇಳೆ ಲಾಠಿ ಚಾರ್ಜ್ ಮಾಡಿದ ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣೆಯ ಪಿಎಸ್ ಐಗಳನ್ನು ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ. ಬೆಳ್ಳಾರೆಗೆ ನೂತನ ಪಿಎಸೈ ಆಗಿ ಕುಂದಾಪುರ ಠಾಣೆಯ ಸುಹಾಸ್ ಹಾಗೂ ವಿಟ್ಲ ಠಾಣಾ ಪಿಎಸ್ಐ ಆಗಿದ್ದ ಮಂಜುನಾಥ್ ಅವರನ್ನು ಸುಬ್ರಹ್ಮಣ್ಯ ಠಾಣೆಗೆ ನೇಮಕ ಮಾಡಲಾಗಿದೆ. ವರ್ಗಾವಣೆಯಾದ ಪಿಎಸೈಗಳಿಗೆ ಜಾಗ ತೋರಿಸದೇ ಮಂಗಳೂರು ಐಜಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಸನವಳ್ಳಿ ಭಾಗದಲ್ಲಿ ಕಾಡಾನೆಗಳ ಹಿಂಡು, ಗದ್ದೆಗಳಲ್ಲಿ ಗಜರಾಜನ ಹೆಜ್ಜೆ ಗುರುತು ಪತ್ತೆ..! ಆತಂಕದಲ್ಲಿ ರೈತರು..!!
ಮುಂಡಗೋಡ: ತಾಲೂಕಿನ ಸನವಳ್ಳಿ ಭಾಗದಲ್ಲಿ ಕಾಡಾನೆಗಳ ಹಿಂಡು ಠಿಕಾಣಿ ಹೂಡಿದೆಯಾ..? ಇಂತಹದ್ದೊಂದು ಅನುಮಾನ ಈ ಭಾಗದ ರೈತರಿಗೆ ನಿದ್ದೆಗೆಡಿಸಿದೆ. ನಿನ್ನೆ ರಾತ್ರಿ ಸನವಳ್ಳಿ ಭಾಗದ ಕಾಡಂಚಿನ ಗದ್ದೆಗಳಲ್ಲಿ ಕಾಡಾನೆಗಳು ಓಡಾಡಿ ಹೋಗಿರೋ ಕುರುಹುಗಳು ಸಿಕ್ಕಿವೆ. ಸನವಳ್ಳಿಯ ಫಕ್ಕೀರಪ್ಪ ಬೋಕಿಯವರ್, ಪಕ್ಕಿರೇಶ್ ಕೆರಿಹೊಲದವರ, ರಮೇಶ್ ಅರಶೀಣಗೇರಿಯವರ ನಾಟಿ ಮಾಡಿರೋ ಬತ್ತದ ಗದ್ದೆಗಳಲ್ಲಿ, ಗೋವಿನಜೋಳದ ಗದ್ದೆಗಳಲ್ಲಿ ಆನೆಗಳು ನಡೆದಾಡಿರೋ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಇನ್ನು ಅಡಿಕೆ ತೋಟದಲ್ಲಿ ನುಗ್ಗಿರೋ ಆನೆಗಳು ಕೆಲವು ಅಡಿಕೆ ಗಿಡಗಳಿಗೆ ಹಾನಿ ಮಾಡಿವೆ. ಹೀಗಾಗಿ ಈ ಭಾಗದ ರೈತರು ಆತಂಕಗೊಂಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು ಅಂತಾ ರೈತರ ಆಗ್ರಹವಾಗಿದೆ.