ಬನವಾಸಿ: ಪಂಪಸೆಟ್ ಗೆ ಅಳವಡಿಸಿದ್ದ ವಿದ್ಯುತ್ ಕೇಬಲ್ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬನವಾಸಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಮತ್ತಿಹಳ್ಳಿಯ ಸೋಮಪ್ಪ ನೀಲಪ್ಪ ಒಡೆಯನಪುರ(28), ಬೆಟಕೆರೂರು ಗ್ರಾಮದ ಶಿವರಾಜ್ ಗುತ್ಯಪ್ಪ ಮಂತಿಕೊಪ್ಪ(22) ಎಂಬುವ ಆರೋಪಿಗಳನ್ನು ಬಂಧಿಸಲಾಗಿದೆ. ದಿನಾಂಕ: 16-06-2022 ರಂದು ಶಿರಸಿ ತಾಲೂಕ ಮೊಗವಳ್ಳಿ ಗ್ರಾಮದ ಸದಾನಂದ ಮಾದೇವ ಹಳ್ಳಕೊಪ್ಪ ಎಂಬುವವರ ಜಮೀನಿನ ಪಕ್ಕದಲ್ಲಿರುವ ವರದಾ ನದಿಯಿಂದ ಮೋಟಾರ ಮಶೀನ್ ಮೂಲಕ ನೀರನ್ನು ಉಪಯೋಗಿಸಿಕೊಳ್ಳಲು ಸುಮಾರು 250 ಅಡಿ ಉದ್ದದ ಮೋಟಾರ ಕೇಬಲ್ ಜೋಡಿಸಿದ್ದನ್ನು ಕಳ್ಳರು ಎಗರಿಸಿಕಿಂಡು ಹೋಗಿದ್ದರು. ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Top Stories
ಟ್ಯಾಕ್ಸ್ ವಸೂಲಿಯಲ್ಲಿ ಮುಂಡಗೋಡ ತಾಲೂಕು ರಾಜ್ಯಕ್ಕೇ ಪ್ರಥಮ..! ತಾಪಂ ಗ್ರಾಪಂ ಅಧಿಕಾರಿ, ಸಿಬ್ಬಂದಿಗಳ ಸಾಧನೆ..!!
ಮುಂಡಗೋಡ ಬೆಂಡಿಗೇರಿ ಪೆಟ್ರೊಲ್ ಬಂಕ್ ಹತ್ತಿರ ಬೈಕ್ ಅಪಘಾತ, ವೃದ್ದನ ಕಾಲು ಕಟ್..!
ಮಳಗಿ-ಬನವಾಸಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಓರ್ವ ಸ್ಥಳದಲ್ಲೇ ಓರ್ವ ಸಾವು, ಮತ್ತೋರ್ವ ಗಂಭೀರ..!
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶುಕ್ರವಾರ ಸರ್ಕಾರಿ ರಜೆ ಘೋಷಣೆ..! ಶಾಲಾ ಕಾಲೇಜುಗಳಿಗೆ ರಜೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ..! ನಾಳೆಯ ಬೆಳಗಾವಿ ಕೈ ಕಾರ್ಯಕ್ರಮ ರದ್ದು..!
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ
ಕಲಕೇರಿ ಬಳಿ ಬೈಕ್-ಟಿಪ್ಪರ್ ನಡುವೆ ಮುಖಾಮುಕಿ ಡಿಕ್ಕಿ, ಬೈಕ್ ಸವಾರನಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಕಲಕೇರಿ ಬ್ರಿಡ್ಜ್ ಬಳಿ ರಸ್ತೆ ಅಪಘಾತವಾಗಿದೆ. ಬೈಕ್ ಹಾಗೂ ಟಿಪ್ಪರ್ ನಡುವೆ ಮುಖಾಮುಕಿ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕರಗಿನಕೊಪ್ಪ ತಾಂಡಾದ ಶಿವಾಜಿ ನಾಗಪ್ಪ ಲಮಾಣಿ(32) ಎಂಬುವ ಯುವಕನೇ ಗಂಭೀರ ಗಾಯಗೊಂಡ ಬೈಕ್ ಸವಾರನಾಗಿದ್ದಾನೆ. ಕಟ್ಟಿಗೆ ತುಂಬಿಕೊಂಡು ಹೊರಟಿದ್ದ ಟಿಪ್ಪರ್, ಬೈಕ್ ಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ನಲ್ಲಿದ್ದ ಶಿವಾಜಿಗೆ ಗಂಭೀರ ಗಾಯವಾಗಿದ್ದು ಕಾಲು ಕಟ್ ಆಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಳಗಿಯಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮ..!
ಮುಂಡಗೋಡ: ತಾಲೂಕಿನ ಮಳಗಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಉದ್ಘಾಟನೆಗೊಂಡಿದೆ. ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳಿಂದ ಗಿಡ ನೆಡುವ ಕಾರ್ಯಕ್ರಮದ ಮೂಲಕ ಕಾರ್ಯಕ್ರಮ ಪ್ರಾರಂಭವಾಗಿದೆ. ತಹಶೀಲ್ದಾರರಿಂದ ಕಂದಾಯ ಅದಾಲತ, ಪಿಂಚಣಿ ಅದಾಲತ ಹಾಗೂ ಹಲವು ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ. ನಂತರ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಇದೆ. ಮಳಗಿ ಭಾಗದ ನೂರಾರು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ತಮ್ಮ ಅಹವಾಲುಗಳೊಂದಿಗೆ ವೃದ್ಧರು, ರೈತರು, ಯುವಕರು ಪಾಲ್ಗೊಂಡಿದ್ದಾರೆ.
ಟಿಬೇಟಿಯನ್ ಕಾಲೋನಿಯಲ್ಲಿ 2ನೇ ದಿನದ ಇಂಡೋ-ಟಿಬೇಟಿಯನ್ ವಿದ್ವಾಂಸರ ಸಮ್ಮೇಳನ ಜಾರಿ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಗಾಂದೇನ್ ಬೌದ್ಧ ಮಠದಲ್ಲಿ ನಿನ್ನೆಯಿಂದ ಶುರುವಾಗಿರೋ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನ ಇಂದು ಎರಡನೇ ದಿನದ ಪ್ರಾರಂಭ ಕಂಡಿದೆ. ಹೀಗಾಗಿ ಇಂದು ಬೆಳಿಗ್ಗೆ ವಿಶೇಷ ಪೂಜಾ ಕೈಂಕರ್ಯಗಳು ಟಿಬೇಟಿಯನ್ ಸಂಪ್ರದಾಯದಂತೆ ಜರುಗಿದೆ. ಸೈಕಾಲಜಿ ಮತ್ತು ಚಿಂತನಶೀಲ ಅಭ್ಯಾಸಗಳ ಕುರಿತು ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಸಮ್ಮೇಳನದಲ್ಲಿ ಅನೇಕ ಗಣ್ಯ ಭಾಷಣಕಾರರು ಮತ್ತು ವಿದ್ವಾಂಸರು ಭಾಗಿಯಾಗಲಿದ್ದಾರೆ. ಭಾರತದ 15 ರಾಜ್ಯಗಳಿಂದ ಬಂದಿರೋ ಬೌದ್ಧ ಬಿಕ್ಕುಗಳು, ಮಠಾಧೀಶರು, ಧಾರ್ಮಿಕ ಮುಖಂಡರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅಲ್ಲದೇ ವಿಶೇಷ ಭಾಷಣ, ಪ್ರವಚನ ಕೈಗೊಂಡಿದ್ದಾರೆ. ಅಂದಹಾಗೆ ಜೂನ್ 21 ರವರೆಗೆ ಈ ಸಮ್ಮೇಳನ ನಡೆಯಲಿದೆ.
ನಾಳೆ, ನಾಡಿದ್ದು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ, ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ರವಿವಾರ ದಿನಾಂಕ 19ರ ಬೆಳಿಗ್ಗೆ, 8.30 ಗಂಟೆಯಿಂದ, ಜೂನ್ 20 ರ ಸೋಮವಾರ ಬೆಳಿಗ್ಗೆ 8.30 ಗಂಟೆಯವರೆಗೆ ಹವಾಮಾನ ಇಲಾಖೆ, ಭಾರೀ ಮಳೆ ಬೀಳುವ ಮುನ್ಸೂಚನೆ ನೀಡಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ, ಜಿಲ್ಲೆಯಲ್ಲಿ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಇನ್ನು ಮಳೆ ಗಾಳಿ ಬೀಸುವ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು ವಿದ್ಯುತ್ ಕಂಬಗಳು, ಹಳೆಯ ಕಟ್ಟಡಗಳು, ಮರಗಳ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಎಚ್ಚರಿಕೆ ನೀಡಲಾಗಿದೆ. ಪ್ರಕೃತಿ ವಿಕೋಪಗಳು ಸಂಭವಿಸಿದ್ದಲ್ಲಿ, ತುರ್ತು ಸೇವೆಗೆ ಟೋಲ್ ಫ್ರೀಸಂಖ್ಯೆ-1077 ಲ್ಯಾಂಡ್ ಲೈನ್ ನಂ. 08382 – 229857, ವಾಟ್ಸಾಪ್ ಸಂಖ್ಯೆ : 9483511015 ಕ್ಕೆ ಸಂಪರ್ಕಿಸಲು ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಸೂಚಿಸಲಾಗಿದೆ.
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..!
ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪಿಯು ಬೋರ್ಡ್ ಮಾಹಿತಿ ನೀಡಿದೆ. ಈ ಕುರಿತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟೀಟ್ ಮೂಲಕ ಮಾಹಿತಿ ನೀಡಿದ್ದಾರೆ. ನಾಳೆ 11 ಗಂಟೆಗೆ ದ್ವಿತೀಯ ಪಿಯು ಫಲಿತಾಂಶ ವಾಗಲಿದ್ದು, ಬೆಂಗಳೂರಿನ ಪಿಯು ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. ರಾಜ್ಯಾದ್ಯಂತ 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಫಲಿತಾಂಶಕ್ಕಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ಈ ಕೆಳಗಿನ ಲಿಂಕ್ ಗಳನ್ನು ಕ್ಲಿಕ್ ಮಾಡಿ http://www.kseeb.kar.nic.in http://www.pue.kar.nic.in ಭೇಟಿ ನೀಡಬಹುದು.
ಟಿಬೇಟಿಯನ್ ಕಾಲೋನಿಯಲ್ಲಿ ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನ ಉದ್ಘಾಟನೆ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಗಾಂದೇನ್ ಬೌದ್ಧ ಮಠದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನವನ್ನು ಆಯೋಜಿಸಲಾಗಿದೆ. ಹೀಗಾಗಿ ಇಂದು ಸಮ್ಮೇಲನ ಕಾರ್ಯಕ್ರಮ ಉದ್ಘಾಟನೆಗೊಂಡಿದೆ. ಸೈಕಾಲಜಿ ಮತ್ತು ಚಿಂತನಶೀಲ ಅಭ್ಯಾಸಗಳ ಕುರಿತು ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಸಮ್ಮೇಳನದಲ್ಲಿ ಅನೇಕ ಗಣ್ಯ ಭಾಷಣಕಾರರು ಮತ್ತು ವಿದ್ವಾಂಸರು ಭಾಗಿಯಾಗಲಿದ್ದಾರೆ. ಭಾರತದ 15 ರಾಜ್ಯಗಳಿಂದ ಬಂದಿರೋ ಬೌದ್ಧ ಬಿಕ್ಕುಗಳು, ಮಠಾಧೀಶರು, ಧಾರ್ಮಿಕ ಮುಖಂಡರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ವಿಶ್ವಕ್ಕೆ ಬುದ್ಧನ ಅಹಿಂಸಾ ತತ್ವಗಳ ಸಂದೇಶ ಸಾರುವ ನಿಟ್ಟಿನಲ್ಲಿ ಹಾಗೂ ವಿಶ್ವ ಶಾಂತಿಗಾಗಿ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಚರ್ಚೆಗಳು ನಡೆಯಲಿವೆ. ಕಾರ್ಯಕ್ರಮದಲ್ಲಿ ನೂರಾರು ಸ್ಥಳೀಯ ಟಿಬೇಟಿಯನ್ ಬೌದ್ಧ ಬಿಕ್ಕುಗಳು ಪಾಲ್ಗೊಂಡಿದ್ದಾರೆ. ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಕೇರ್ಲಾ, ಮಹಾರಾಷ್ಟ್ರ, ರಾಜಸ್ಥಾನ, ದೆಹಲಿ, ಜಾರ್ಖಂಡ್, ಚತ್ತೀಸ್ಗಢ, ಗುಜರಾತ್, ಹರಿಯಾಣ, ಲಡಾಖ್, ಹಿಮಾಚಲ ಮತ್ತು ಕರ್ನಾಟಕ ಸೇರಿ ಹಲವು ರಾಜ್ಯಗಳಿಂದ ವಿದ್ವಾಂಸರು ಆಗಮಿಸಲಿದ್ದಾರೆ.
ಕಾರವಾರದಲ್ಲಿ ಬೆಳ್ಳಂ ಬೆಳಿಗ್ಗೆ ಎಸಿಬಿ ದಾಳಿ, ಇಬ್ಬರು ಅಧಿಕಾರಿಗಳ ಮನೆ ತಲಾಶ್..!
ಕಾರವಾರದಲ್ಲಿ ಬೆಳ್ಳಂ ಬೆಳಗ್ಗೆ ಅಧಿಕಾರಿಗಳ ಮನೆಯ ಮೇಲೆ ಎಸಿಬಿ ದಾಳಿ ನಡೆಸಿ ಶಾಕ್ ನೀಡಿದೆ. ಕಾರವಾರದ ಎಸಿಬಿ ಡಿವೈ ಎಸ್ ಪಿ ಪ್ರಕಾಶ್ ನೇತ್ರತ್ವದ ತಂಡ ಹಾಗೂ ಹುಬ್ಬಳ್ಳಿಯ ಎಸಿಬಿ ಅಧಿಕಾರಿಗಳು ಪ್ರತ್ಯೇಕವಾಗಿ ಎರಡು ತಂಡಗಳ ಮೂಲಕ ದಾಳಿ ನಡೆಸಿದೆ. ಕುಮಟಾ ಮೂಲದ ಪಿ.ಡಬ್ಲು ಡಿ ಇಂಜಿನಿಯರ್ ರಾಜೀವ್ ನಾಯ್ಕ ಹಾಗೂ ಜಿಲ್ಲಾ ನೋಂದಣಾಧಿಕಾರಿ ಶ್ರೀಧರ್ ಎಸಿಬಿ ದಾಳಿಗೆ ಒಳಗಾದ ಅಧಿಕಾರಿಗಳಾಗಿದ್ದಾರೆ. ಕಾರವಾರ ನಗರದ ಎಂ.ಜಿ ರಸ್ತೆಯಲ್ಲಿರುವ ಬೃಂದಾವನ ಅಪಾರ್ಟ ಮೆಂಟ್, ಹಬ್ಬುವಾಡದ ಮನೆಯ ಮೇಲೆ ಎರಡು ತಂಡಗಳು ದಾಳಿ ನಡೆಸಿದ್ದು ಆಧಾಯಕ್ಕಿಂತ ಹೆಚ್ಚಿನ ಸಂಪತ್ತು ಹೊಂದಿದ ಹಿನ್ನಲೆಯಲ್ಲಿ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.
ನಂದಿಕಟ್ಟಾ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ..!
ಮುಂಡಗೋಡ ತಾಲೂಕಿನ ನಂದಿಕಟ್ಟಾ ಸೊಸೈಟಿಯ ನೂತನ ಅಧ್ಯಕ್ಷರಾಗಿ ಸುಧಾಕರ್ ಮೋರೆ, ಉಪಾಧ್ಯಕ್ಷರಾಗಿ ಬಸವಣ್ಣೆವ್ವ ಶಿವಪುತ್ರಪ್ಪ ಅಗಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಸೊಸೈಟಿ ನಿರ್ದೇಶಕರ ಮಧ್ಯ ನಡೆದ ಒಪ್ಪಂದದಂತೆ,ನಿಕಟ ಪೂರ್ವ ಅಧ್ಯಕ್ಷ ತುಕಾರಾಮ್ ಔಂಡೋಜಿ ಒಂದು ತಿಂಗಳ ಹಿಂದೆ ರಾಜೀನಾಮೆ ನೀಡಿದ್ದರಿಂದ ಇಂದು ಚುನಾವಣೆ ಘೋಷಣೆ ಮಾಡಲಾಗಿತ್ತು, ಹಾಗಾಗಿ ಇಂದು ಸೊಸೈಟಿ ಹಾಲ್ ನಲ್ಲಿ ನಡೆದ ಚುನಾವಣೆಯಲ್ಲಿ ಒಮ್ಮತದ ಅಭ್ಯರ್ಥಿಯಾಗಿ, ಸುಧಾಕರ್ ಮೋರೆ ಅಧ್ಯಕ್ಷರಾಗಿ, ಬಸವಣ್ಣೆವ್ವ ಶಿವಪುತ್ರಪ್ಪ ಅಗಡಿ ಉಪಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಚುನಾವಣಾಧಿಕಾರಿಯಾಗಿ, ಶಿರಸಿಯ ಸಹಕಾರಿ ಸಂಘದ ಕ್ಷೇತ್ರ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗುಡಿಕೇರಿ ಕಾರ್ಯ ನಿರ್ವಹಿಸಿದರು. ಈ ವೇಳೆ ಸೊಸೈಟಿಯ ಕಾರ್ಯದರ್ಶಿಯಾದ ಅರ್ಜುನ ಪುರದವರ, ಹಾಗೂ ಸಿಬ್ಬಂದಿಗಳು, ಕಮೀಟಿಯ ನಿರ್ದೇಶಕರು, ಗ್ರಾಮ ಪಂಚಾಯತ್ ಸದ್ಯಸರಾದ ರಮೇಶ್ ನೇಮಣ್ಣನವರ, ಸಂತೋಷ ಬೋಸಲೆ, ಪರಶುರಾಮ್ ಕಬ್ಬೆರ್ ಊರಿನ ಪ್ರಮುಖರಾದ ಕಲ್ಲನಗೌಡ್ರ, ಪರಶುರಾಮ್ ಮೆಂತೆಕಾರ್, ನಿಂಗಣ್ಣ ಕವಟೆ, ಸೋಮಲಿಂಗ ಕಾಂಬಳೆ, ಮಂಜುನಾಥ್ ಮೋರೆ, ಕೇದಾರಿ ಮುಗಳಿ, ಸುರೇಶ ಕಮ್ಮಾರ್, ಸುಧೀರ್ ಕಾಂಬಳೆ, ಶಿವಾಜಿ...
ಮೈನಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್, ಕೆಂದಲಗೇರಿಯ ವ್ಯಕ್ತಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಮೈನಳ್ಳಿ ಸಮೀಪದಲ್ಲಿ ಬೈಕ್ ಅಪಘಾತವಾಗಿದೆ. ಬೈಕ್ ಸವಾರನೊಬ್ಬ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಕೆಂದಲೆಗೇರಿ ಗ್ರಾಮದ ನೂರ್ ಅಹ್ಮದ್ (30) ಎಂಬುವವನೇ ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಈತ ಕೆಂದಲಗೇರಿ ಗ್ರಾಮದಿಂದ ಯಲ್ಲಾಪುರ ರಸ್ತೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ, ಈ ವೇಳೆ ಬೈಕ್ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೂ ಮುರಿದಿದೆ. ಸದ್ಯ ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು, ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.