ಸಚಿವ ಶಿವರಾಮ್ ಹೆಬ್ಬಾರ್ ಮತ್ತೆ ಮೈ ಕೊಡವಿ ಎದ್ದಿದ್ದಾರೆ. ಚುನಾವಣೆ ವರ್ಷದಲ್ಲಿ ಬಿಜೆಪಿ ಜಯಭೇರಿ ಬಾರಿಸಲು ನಿನ್ನೆಯಿಂದಲೇ “ಪವರ್ ಫುಲ್” ರಣಕಹಳೆ ಮೊಳಗಿಸಿದ್ದಾರೆ. ಕ್ಷೇತ್ರದ ಪ್ರತೀ ಭಾಗದಲ್ಲಿ ಖುದ್ದು ಬೂತ್ ಮಟ್ಟದ ಕಾರ್ಯಕರ್ತರ ಮೈದಡವಿ ಮಾತಾಡಿಸುತ್ತಿದ್ದಾರೆ. ಈ ಮೂಲಕ ಕ್ಷೇತ್ರದ ತುಂಬ ಮತ್ತೊಮ್ಮೆ ತಮ್ಮದೇ ಆದ ಕಾರ್ಯಪಡೆ ರಚಿಸಿ ಹುರುಪು ತುಂಬಿಸುತ್ತಿದ್ದಾರೆ. ಮಳಗಿ ಭಾಗ..! ನಿನ್ನೆ ಮಂಗಳವಾರದಿಂದಲೇ ಸಚಿವ ಹೆಬ್ಬಾರ್, ಮಳಗಿ ಭಾಗದಿಂದ ತಮ್ಮ ಗೆಲುವಿನ ಕೇಕೆ ಹಾಕಲು ಬೇಕಾದ ರಹದಾರಿಗೆ ಹಸಿರು ನಿಶಾನೆ ತೋರಿದ್ದಾರೆ. ಅಂದಹಾಗೆ ಈ ಮಳಗಿ ಭಾಗದಲ್ಲಿ ಬಿಜೆಪಿಗೆ ಬದ್ರ ನೆಲೆ ಒದಗಿಸುವ ಅವಶ್ಯಕತೆ ಇದೆ. ಇಲ್ಲಿ ಬಿಜೆಪಿ ಅಂದುಕೊಳ್ಳುವಷ್ಟು ಪೂರಕ ವಾತಾವರಣ ಇಲ್ಲ. ಅದು ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲೇ ಬಿಜೆಪಿಗೆ ಅರ್ಥವಾಗಿದೆ. ಮಳಗಿ ಗ್ರಾಮ ಪಂಚಾಯತಿಯಲ್ಲಿ ಅನಾಯಾಸವಾಗಿ ದಕ್ಕಬೇಕಿದ್ದ ಚುಕ್ಕಾಣಿ, ಒಳಗೊಳಗಿನ ತಿಕ್ಕಾಟಗಳಿಂದ ಕೈ ತಪ್ಪಿ ಹೋಗಿತ್ತು. ಮಳಗಿ ಗ್ರಾಮ ಪಂಚಾಯತಿಯ ಒಟ್ಟೂ 19 ಸ್ಥಾನಗಳ ಪೈಕಿ, 9 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆದ್ದು...
Top Stories
ಮುಂಡಗೋಡ ಬೆಂಡಿಗೇರಿ ಪೆಟ್ರೊಲ್ ಬಂಕ್ ಹತ್ತಿರ ಬೈಕ್ ಅಪಘಾತ, ವೃದ್ದನ ಕಾಲು ಕಟ್..!
ಮಳಗಿ-ಬನವಾಸಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಓರ್ವ ಸ್ಥಳದಲ್ಲೇ ಓರ್ವ ಸಾವು, ಮತ್ತೋರ್ವ ಗಂಭೀರ..!
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶುಕ್ರವಾರ ಸರ್ಕಾರಿ ರಜೆ ಘೋಷಣೆ..! ಶಾಲಾ ಕಾಲೇಜುಗಳಿಗೆ ರಜೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ..! ನಾಳೆಯ ಬೆಳಗಾವಿ ಕೈ ಕಾರ್ಯಕ್ರಮ ರದ್ದು..!
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ
ಹುಬ್ಬಳ್ಳಿ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!
ಕುಟುಂಬಕ್ಕೊಂದೇ ಟಿಕೆಟ್, ಕೈ ಪಡೆಯಲ್ಲಿ ಕೊಲಾಹಲ, ಆರ್ವಿಡಿ ಕನಸಿಗೆ ಕತ್ತರಿಯಾಗತ್ತಾ ತೀರ್ಮಾನ..?
ರಾಷ್ಟ್ರ ಮಟ್ಟದಲ್ಲಿ ಕೈ ಪಡೆ ಸಾಲು ಸಾಲು ಸೋಲುಗಳಿಂದ ಕಂಗೆಟ್ಟು ಹೊಸತನಗಳ ಅನ್ವೇಷಣೆಗೆ ಹೊರಟಿದೆ. ಉದಯಪುರದಲ್ಲಿ ಸದ್ಯ ನಡೆಯುತ್ತಿರೊ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಹೊಸತನಗಳಿಗೆ ಒಗ್ಗಬೇಕಾದ ಅನಿವಾರ್ಯತೆಗಳ ಬಗ್ಗೆ ಚರ್ಚೆ ನಡೆಸುತ್ತಿದೆ ಕಾಂಗ್ರೆಸ್. ಕುಟುಂಬ ರಾಜಕಾರಣಕ್ಕೆ ತೀಲಾಂಜಲಿ ಇಟ್ಟು, ಹೊಸ ಮುಖಗಳಿಗೆ ಅವಕಾಶ ಕೊಡುವ ಬಗ್ಗೆ ಚಿಂತನಾ ಶಿಬಿರದಲ್ಲಿ ಗಂಭೀರ ಚಿಂತನೆ ನಡೆದಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೆ ಮತ್ತೆ ಟಿಕೆಟ್ ಕೊಡಲ್ಲ ಅಂತಾ ಕಡ್ಡಿ ಮುರಿದಂತೆ ಹೇಳಿಬಿಡುವ ಎಲ್ಲಾ ಸಾಧ್ಯತೆಗಳೂ ನಿಚ್ಚಳವಾಗ್ತಿದೆ. ಹೀಗಾಗಿ, ರಾಜ್ಯದಲ್ಲಿ ತಮ್ಮ ಕುಟುಂಬದ ಕುಡಿಗಳಿಗೆ ಪಟ್ಟಾಭಿಷೇಕ ಮಾಡುವ ಮಹದಾಸೆ ಹೊತ್ತ ಕೈ ಪಡೆಯ ಸಾಲು ಸಾಲು ನಾಯಕರಿಗೆ ನಿರಾಶೆ ಕಾದಿದೆಯಾ ಅನ್ನೋ ಪ್ರಶ್ನೆ ಎದುರಾಗಿದೆ. ದೇಶಪಾಂಡೆ ಕನಸು..? ದೂರದ ಉದಯಪುರದಲ್ಲಿ ನಡೆದ ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿನ ತೀರ್ಮಾನಗಳು ಕರ್ನಾಟಕದ ಉಳಿದ ಕ್ಷೇತ್ರಗಳಲ್ಲಿ ಅದ್ಯಾವ ಮಟ್ಟಿಗೆ ಪರಿಣಾಮ ಬೀರತ್ತೋ ಗೊತ್ತಿಲ್ಲ. ಆದ್ರೆ ಯಲ್ಲಾಪುರ ಹಾಗೂ ಹಳಿಯಾಳ ಕ್ಷೇತ್ರಕ್ಕೆ ಮಾತ್ರ ಬಹುತೇಕ ಗೇಮ್ ಪ್ಲ್ಯಾನ್ ಉಲ್ಟಾ ಪಲ್ಟಾ...
ಕಾತೂರಿನಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರ ದಾಳಿ, ಮೂವರ ಮೇಲೆ ಕೇಸ್..!
ಮುಂಡಗೋಡ: ತಾಲೂಕಿನ ಕಾತೂರಿನಲ್ಲಿ ಮಟ್ಕಾ ಅಡ್ಡೆಯ ಮೇಲೆ ಮುಂಡಗೋಡ ಪೊಲೀಸರು ದಾಳಿ ಮಾಡಿ ಮೂವರನ್ನ ವಶಕ್ಕೆ ಪಡೆದಿದ್ದಾರೆ. ಹಿರೇಕೆರೂರಿನಿಂದ ಬಂದು ಮಟ್ಕಾ ಆಡಿಸುತ್ತಿದ್ದ ಬುಕ್ಕಿ ಸೇರಿದಂತೆ ಮೂವರ ಮೇಲೆ ಕೇಸು ದಾಖಲಾಗಿದೆ. ಕಾತೂರಿನಲ್ಲಿ ಟೀ ಅಂಗಡಿ ನಡೆಸುತ್ತಿರೊ ಮಹಮ್ಮದ್ ಜಾಫರ್ ಮಹಮ್ಮದ ಹುಸೇನ ಮರಗಡಿ (48) ಎಂಬುವವನು ಮುಂಡಗೋಡ ತಾಲೂಕಿನ ಕಾತೂರ ಗ್ರಾಮದ ಆಲಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯ ಮೀನು ಮಾರ್ಕೆಟ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತು, ಮಟ್ಕಾ ಬರೆಯುತ್ತಿದ್ದ. ಈ ವೇಳೆ ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ಹಾಗೂ ತಂಡ ದಾಳಿ ನಡೆಸಿದೆ. ಇನ್ನು ಹೀಗೆ ದಂಧೆ ನಡೆಸಲು ಬೆನ್ನೆಲುಬಾಗಿ ನಿಂತಿದ್ದ ಹಾಗೂ ಮಟ್ಕಾ ಆಟದಿಂದ ಸಂಗ್ರಹವಾದ ಹಣವನ್ನು ಪಾಳಾ ಗ್ರಾಮದ ಮೌಲಾಲಿ ಹಾಗೂ ಹಾವೇರಿ ಜಿಲ್ಲೆ ಹಿರೆಕೇರೂರು ತಾಲೂಕಿನ ಚಿಕ್ಕೆರೂರಿನ ಅಥಾವುಲ್ಲಾ ಎಂಬುವವನಿಗೆ ನೀಡುತ್ತಿರುವಾದಾಗಿ ಆರೋಪಿ ಒಪ್ಪಿಕೊಂಡಿದ್ದು ಅವರಿಬ್ಬರ ಮೇಲೂ ಕೇಸು ದಾಖಲಾಗಿದೆ. ಇವ್ರೊಂದಿಗೆ, ನಗದು ಹಣ 1120 -ರೂ ವಶಪಡಿಸಿಕೊಳ್ಳಲಾಗಿದೆ.
ಕಮಲ್ ಪಂಥ್ ಸೇರಿ ಹಲವು ಪೊಲೀಸ್ ಅಧಿಕಾರಿಗಳ ವರ್ಗಾವಣೆ..!
ಬೆಂಗಳೂರು: ರಾಜ್ಯ ಸರ್ಕಾರ ಕೆಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂಥ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆಗೊಂಡಿದ್ದು, ಅವರ ಜಾಗಕ್ಕೆ ಸಿ. ಎಚ್. ಪ್ರತಾಪ್ ರೆಡ್ಡಿ ನೇಮಕಗೊಂಡಿದ್ದಾರೆ. ಕೆಎಸ್‌ಆರ್‌ಪಿಯ ಎಡಿಜಿಪಿಯಾಗಿದ್ದ ಅಲೋಕ್ ಕುಮಾರ್ ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿ, ಅವರ ಜಾಗಕ್ಕೆ ಕ್ರೈಂ ಮತ್ತು ಟೆಕ್ನಿಕಲ್ ಸೆಲ್‌ನಲ್ಲಿ ಎಡಿಜಿಪಿಯಾಗಿದ್ದ ಆರ್. ಹಿತೇಂದ್ರ ಅವರನ್ನು, ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಎಂ. ಎನ್. ಅನುಚೇತ್ ಅವರನ್ನು ಸಿಐಡಿಯ ಎಸ್ಪಿಯಾಗಿ ವರ್ಗಾವಣೆ ಮಾಡಿದೆ.
ಮುಂಡಗೋಡ ಸುಭಾಷ್ ನಗರದಲ್ಲಿ ವ್ಯಕ್ತಿ ನೇಣಿಗೆ ಶರಣು, ಸಾವಿನ ಹಿಂದೆ ನೂರಾರು ಪ್ರಶ್ನೆ..?
ಮುಂಡಗೋಡ: ಪಟ್ಟಣದ ಸುಭಾಷ್ ನಗರದಲ್ಲಿ ಓರ್ವ ವ್ಯಕ್ತಿ ನೇಣಿಗೆ ಶರಣಾಗಿದ್ದಾನೆ. ನಾರಾಯಣ ಲಮಾಣಿ ನೇಣಿಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಇಂದು ಮದ್ಯಾನ ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಅಂತಾ ಮಾಹಿತಿ ತಿಳಿದು ಬಂದಿದೆ. ಅಂದಹಾಗೆ, ನಾರಾಯಣ ಲಮಾಣಿ, ಸಣ್ಣಪುಟ್ಟ ಗುತ್ತಿಗೆ ಕೆಲಸಗಳನ್ನು ಮಾಡಿಕೊಂಡಿದ್ದ. ಆದ್ರೆ ಇತ್ತಿಚೆಗೆ ಯಾಕೊ ಅದೇನೋ ಟೆನ್ಶೆನ್ ನಲ್ಲಿ ಇರುತ್ತಿದ್ದ ಅಂತಾ ಆತನ ಸ್ನೇಹಿತರ ಮೂಲಗಳಿಂದ ಮಾಹಿತಿ ಬಂದಿದೆ. ಆದ್ರೆ, ದಿಢೀರ್ ಆತನ ಆತ್ಮಹತ್ಯೆಗೆ ಕಾರಣವಾದ್ರೂ ಏನು ಅನ್ನೋ ಪ್ರಶ್ನೆ ಎದುರಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವಂತ ಹುಡುಗ ಆತ ಅಲ್ಲ, ಆತ್ಮಹತ್ಯೆಗೆ ಅದೇನೋ ಮೇಜರ್ ಕಾರಣ ಇರಬಹುದು ಅಂತಿದಾರೆ ಆತನ ಸ್ನೇಹಿತರು. ಅದೇನೇ ಆದರೂ ಪೊಲೀಸರ ತನಿಖೆಯಿಂದ ಆತ್ಮಹತ್ಯೆಗೆ ನಿಜವಾದ ಕಾರಣ ಏನು ಅನ್ನೋದು ಸ್ಪಷ್ಟವಾಗಲಿದೆ. ಪೊಲೀಸರು ಇನ್ನೇನು ಸ್ಥಳಕ್ಕೆ ಬಂದು ಪರಿಶಿಲೀಲನೆ ನಡೆಸಲಿದ್ದಾರೆ ಅನ್ನೋ ಮಾಹಿತಿ ಬಂದಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕ್ಯಾಂಪ್ ನಂ.6 ರ ಬಳಿ ಕಲಘಟಗಿ ರಸ್ತೆಯಲ್ಲಿ “ಶ್ರೀಶೈಲಂ ಪ್ಯೂಲ್” ನೂತನ ಪೆಟ್ರೊಲ್ ಬಂಕ್ ಪ್ರಾರಂಭ..!
ಮುಂಡಗೋಡ: ತಾಲೂಕಿನ ಕಲಘಟಗಿ ರಸ್ತೆಯ, ಟಿಬೇಟಿಯನ್ ಕ್ಯಾಂಪ್ ನಂಬರ್ 6 ಬಳಿ ಶ್ರೀಶೈಲಂ ಪ್ಯೂಲ್ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆಗೊಂಡಿದೆ. ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅಂಬ್ಯುಲೆನ್ಸ್ ಗೆ ಡಿಸೇಲ್ ಹಾಕುವ ಮೂಲಕ ನೂತನ ಪೆಟ್ರೊಲ್ ಬಂಕ್ ಉದ್ಘಾಟಿಸಿ ಶುಭ ಹಾರೈಸಿದ್ದಾರೆ. ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಎಲ್.ಟಿ.ಪಾಟೀಲ್, ರವಿಗೌಡ ಪಾಟೀಲ್, ಮುಖಂಡರಾದ ನಾಗಭೂಷಣ ಹಾವಣಗಿ, ಬಸಯ್ಯ ನಡುವಿಮನಿ, ಸಿದ್ದು ಹಡಪದ, ಹಾಗೂ ಸ್ಥಳೀಯ ಪ್ರಮುಖರು, ಪೆಟ್ರೋಲ್ ಬಂಕ್ ಮಾಲೀಕರಾದ ಸುರೇಶ್ ಕಲ್ಲೋಳ್ಳಿ, ದೇವೇಂದ ಕೆಂಚಗೊಣ್ಣವರ್, ಮಂಜುನಾಥ್ ಹಿರೇಮಠ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಅನೈತಿಕ ಸಂಬಂಧಕ್ಕೆ ಅಡ್ಡಿ ಅಂತಾ ತಮ್ಮನನ್ನೇ ಕೊಂದ್ಲಾ ಪಾಪಿ ಅಕ್ಕ..? ನೂಲ್ವಿ ಗ್ರಾಮದಲ್ಲೊಂದು ಅಮಾನವೀಯ ಘಟನೆ..!!
ಹುಬ್ಬಳ್ಳಿ: ನೂಲ್ವಿ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣವನ್ನು 24 ಗಂಟೆಯಲ್ಲಿ ಬೇಧಿಸಿ, ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಎಂಬ ಕಾರಣಕ್ಕೆ ಸಹೋದರಿಯೇ ತನ್ನ ಪ್ರಿಯಕರನ ಜೊತೆ ಸೇರಿ ತಮ್ಮನನ್ನು ಕೊಲೆ ಮಾಡಿರುವುದು ಬಹಿರಂಗವಾಗಿದೆ. ಕಳೆದ ಎರಡು ದಿನಗಳ ಹಿಂದೆ ಶಂಭುಲಿಂಗ ಕಮಡೊಳ್ಳಿ(35) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಕುರಿತು ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ 24 ಗಂಟೆಯಲ್ಲೇ ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ಶಂಭುಲಿಂಗ ಕಮಡೊಳ್ಳಿ ಅನೈತಿಕ ಸಂಬಂಧಕ್ಕೆ ಸಹೋದರ ಅಡ್ಡಿಯಾಗಿದ್ದ ಎಂಬ ಕಾರಣಕ್ಕೆ ಸಹೋದರಿ ಬಸವ್ವ ನರಸಣ್ಣವರ ಹಾಗೂ ಆಕೆಯ ಪ್ರಿಯಕರ ಚನ್ನಪ್ಪ ಮರೆಪ್ಪಗೌಡರ ಸೇರಿಕೊಂಡು ಕೊಲೆ ಮಾಡಿ ಶವವನ್ನು ಎಸೆದು ಹೋಗಿದ್ದರು. ಪೊಲೀಸರಿಗೆ ಸಂಶಯ ಬಾರದಿರಲಿ ಎಂದು ಸಹೋದರಿ ಸಹೋದರನ ಶವದ ಎದುರು ಕುಳಿತು ಕಣ್ಣೀರು ಹಾಕಿ ನಾಟಕವಾಡಿದ್ದರು. ಆದ್ರೆ ಪೊಲೀಸರು ಅನುಮಾನಗೊಂಡು ವಿಚಾರಣೆ ನಡೆಸಿದಾಗ ಅನೈತಿಕ ಸಂಬಂಧಕ್ಕೆ...
ಮುಂಡಗೋಡ ತಾಲೂಕಿನ 16 ಗ್ರಾಪಂ ನಲ್ಲಿ ಕರ್ತವ್ಯದಲ್ಲಿರೋ ಸಿಬ್ಬಂದಿಗಳಿಂದ ಅನುಮೊದನೆಗೆ ಸರ್ಕಾರಕ್ಕೆ ಮನವಿ..!
ಮುಂಡಗೋಡ ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ತಾಲೂಕಿನ 16 ಗ್ರಾಮ ಪಂಚಾಯತಿಗಳಲ್ಲಿ ಇದುವರೆಗೂ ಅನುಮೋದನೆಯಾಗದೇ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ತಹಶೀಲ್ದಾರರವರ ಮುಖಾಂತರ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ ಪಂಚಾಯತ ರವರ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ರು. ತಾಲೂಕಿನ 16 ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸ್ತಿರೊ ಹಲವು ಸಿಬ್ಬಂದಿಗಳಿಗೆ ಇನ್ನೂ ಅನುಮೋದನೆ ನೀಡಿಲ್ಲ. ಹೀಗಾಗಿ, ಈ ಸಿಬ್ಬಂದಿಗಳು ಬದುಕು ನಡೆಸುವುದು ಕಷ್ಟಕರವಾಗಿದೆ. ಹೀಗಾಗಿ, ತಕ್ಷಣವೇ ಅನುಮೋದನೆ ನೀಡಿ ಸಹಕಾರಿಯಾಗಬೇಕೆಂದು ಸರ್ಕಾರಕ್ಕೆ ಸಿಬ್ಬಂದಿಗಳು ಮನವಿ ಮಾಡಿದ್ದಾರೆ..
ಆ ಹುಡುಗ ಭಗವಾಧ್ವಜ ಹಾಕಿದ್ದೇ ತಪ್ಪಾಯ್ತಾ..? ಅಷ್ಟಕ್ಕೂ ಆ ಪೊಲೀಸಪ್ಪನಿಗೆ ಅಷ್ಟೇಲ್ಲ ಅಧಿಕಾರ ಕೊಟ್ಟವರು ಯಾರು..?
ಮುಂಡಗೋಡ: ತಾಲೂಕಿನ ಮಳಗಿ ಪೊಲೀಸ್ ಠಾಣೆಯ ಪೊಲೀಸಪ್ಪ ಮಾಡಿರೋ ಅದೊಂದು ರಗಳೆ ,ರಾದ್ದಾಂತ ಇಡೀ ತಾಲೂಕಿನಲ್ಲಿ ಕಿಚ್ಚು ಹೊತ್ತಿಸುತ್ತಿದೆ. ತಾನೇ ಪೊಲೀಸ್ ವರಿಷ್ಠಾಧಿಕಾರಿ ಅಂತಾ ಪೋಸು ಕೊಡುವ ಹುಂಬತನಕ್ಕೆ ಈಗ ಅದೇ ಇಲಾಖೆಯ ಹಿರಿಯರು ತಲೆ ತಗ್ಗಿಸುವ ಮಟ್ಟಿಗೆ ಬಂದು ನಿಂತಿದೆ. ಆಗಿದ್ದೇನು..? ಅದು ಪಾಳಾ ಗ್ರಾಮ, ಮುಂಡಗೋಡ ತಾಲೂಕಿನ ಮಟ್ಟಿಗೆ ಒಂದಿಷ್ಟು ಸೂಕ್ಷ್ಮ ಪ್ರದೇಶ. ಇಲ್ಲಿ ದಶಕಗಳ ಹಿಂದಿನಿಂದಲೂ ಕೋಮು ದಳ್ಳುರಿ ಒಳಗೊಳಗೆ ಹೊಗೆಯಾಡಿ, ಕೆಲವು ಬಾರಿ ಹೊತ್ತಿಕೊಂಡೂ ಉರಿದ ಘಟನೆಗಳಾಗಿತ್ತು. ಆದ್ರೆ ಇತ್ತೀಚೆಗೆ ಇಲ್ಲಿ ಅಕ್ಷರಶಃ ಸೌಹಾರ್ದಯುತ ವಾತಾವರಣ ನಿರ್ಮಾಣವಾಗಿದೆ. ಎಲ್ಲರೂ ಸಹಬಾಳ್ವೆ ನಡೆಸ್ತಿದಾರೆ. ಆದ್ರೆ, ಅವನೊಬ್ಬ ಖಾಕಿತೊಟ್ಟ ಹುಂಬನ ಕಿತಾಪತಿ ಈಗ ಮತ್ತೆ ಹಲವು ಮನಸ್ಸುಗಳನ್ನು ಕೆರಳಿಸಿದೆ. ಅವತ್ತು ಮೇ 13.. ಇದು ಈಗ್ಗೆ ಎರಡು ದಿನಗಳ ಹಿಂದಿನ ಮಾತು. ಪಾಳಾ ಸಮೀಪ ಅದೊಬ್ಬ ಮಾವಿನ ಹಣ್ಣಿನ ವ್ಯಾಪಾರಿ ಭಗವಾಧ್ವಜ ಹಾಕೊಂಡು ರಸ್ತೆ ಪಕ್ಕದಲ್ಲಿ ವ್ಯಾಪಾರ ಮಾಡ್ತಾ ಇರ್ತಾನೆ. ಆತನ ಹೆಸ್ರು ಅನಿಲ್. ಅಂದಹಾಗೆ ಈ ಹುಡುಗ...
ಮುಂಡಗೋಡ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಶಿರಸಿಗೆ ಎತ್ತಂಗಡಿ..!
ಮುಂಡಗೋಡ: ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಎತ್ತಂಗಡಿಯಾಗಿದ್ದಾರೆ. ಶಿರಸಿಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇಂದು ಮದ್ಯಾಹ್ನವೇ ಸರ್ಕಾದಿಂದ ಆದೇಶ ಹೊರಬಿದ್ದಿದ್ದು ರಾಜ್ಯದಲ್ಲಿ ಒಟ್ಟೂ ಐವರು ತಹಶೀಲ್ದಾರರಿಗೆ ವರ್ಗಾವಣೆಯಾಗಿದೆ. ಈ ಮೂಲಕ ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಹುದ್ದೆ ಪಡೆದುಕೊಂಡಿರೋ ಆರೋಪಕ್ಕೆ ಗುರಿಯಾಗಿದ್ದ ತಹಶೀಲ್ದಾರ್ ಶ್ರೀಧರ್ ಮುಂದಲಮನಿಯವರ ವರ್ಗಾವಣೆಗೆ ಆಗ್ರಹಿಸಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ದಲಿತಪರ ಸಂಘಟನೆಗಳು ತಹಶೀಲ್ದಾರ್ ಕಾರ್ಯಾಲಯದ ಎದುರು ಉಪವಾಸ ಧರಣಿ ಸತ್ಯಾಗ್ರಹ ನಡೆಸಿದ್ದವು. ಇದನ್ನೇಲ್ಲ ಮನಗಂಡ ಸರ್ಕಾರ ತಹಶೀಲ್ದಾರ್ ಶ್ರೀಧರ್ ಮುಂದಲಮನಿಯವರನ್ನು ವರ್ಗಾವಣೆಗೊಳಿಸಿದೆ ಅನ್ನೋ ಮಾತುಗಳು ಕೇಳಿ ಬಂದಿವೆ. ಇಂದು ಮದ್ಯಾಹ್ನವೇ ಇಂತಹದ್ದೊಂದು ಆದೇಶ ಬಂದಿದ್ದು ಯಾರಿಗೂ ಅಧಿಕೃತ ಮಾಹಿತಿ ಇನ್ನೂ ದೊರೆತಿಲ್ಲ. ಆದ್ರೆ, ಪಬ್ಲಿಕ್ ಫಸ್ಟ್ ನ್ಯೂಸ್ ಗೆ ವರ್ಗಾವಣೆಯ ಆದೇಶ ಪ್ರತಿ ದೊರೆತಿದೆ.