ಕಾರವಾರದ ಕೋಡಿಭಾಗನಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರೋ ಸೇತುವೆ ಕುಸಿದು ಬಿದ್ದಿದೆ. ಪರಿಣಾಮ ಅದೇ ವೇಳೆ ಸಂಚರಿಸುತ್ತಿದ್ದ ಲಾರಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಹೀಗಾಗಿ, ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರಿಂದ ಲಾರಿ ಚಾಲಕನ ರಕ್ಷಣೆ ಮಾಡಲಾಗಿದೆ. ಅಂದಹಾಗೆ, ಕಾರವಾರ ನಗರದ ಕೋಡಿಭಾಗ್ ನಲ್ಲಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿರ್ಮಿಸಿದ್ದ ಸುಮಾರು 50 ವರ್ಷ ಹಳೆಯದಾದ ಸೇತುವೆ ಏಕಾ ಏಕಿ ಕುಸಿದು ಬಿದ್ದಿದೆ. ಸದ್ಯ ನದಿಗೆ ನಿರ್ಮಿಸಿರುವ ಹೊಸ ಸೇತುವೆಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಪೊಲೀಸರು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.
Top Stories
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!
ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆ- ಅಪಾರ ಹಾನಿ, ಒಟ್ಟೂ ಹಾನಿಯ ವಿವರ ಇಲ್ಲಿದೆ ನೋಡಿ..!
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಜುಲೈ ಮಾಹೆಯಲ್ಲಿ ವಾಡಿಕೆ ಮಳೆಗಿಂತ ಶೇ. 81 ರಷ್ಟು ಅತ್ಯಧಿಕ ಮಳೆಯಾಗಿದ್ದು, ಜಿಲ್ಲೆಯಲ್ಲಿ ಜೂನ್ ನಿಂದ ಇದುವರೆಗೆ ಸುರಿದ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಜುಲೈ ಮಾಹೆಯಲ್ಲಿ ವಾಡಿಕೆ ಮಳೆಯ ಪ್ರಮಾಣ 993. 4 ಮಿಮಿ ಆಗಿದ್ದು, ಈ ಬಾರಿ 1798.2 ಮಿಮೀ ಮಳೆ ಬೀಳುವ ಮೂಲಕ ಶೇ.81 ರಷ್ಟು ಅತ್ಯಧಿಕ ಮಳೆ ದಾಖಲಾಗಿದ್ದು, ಜನವರಿ 2024 ರಿಂದ ಇಲ್ಲಿಯವರೆಗೆ 1882.3 ಮಿಮಿ ವಾಡಿಕೆ ಮಳೆ ಇದ್ದು, 2745.7 ಮಿಮೀ ಮಳೆ ಸುರಿಯುವ ಮೂಲಕ ಶೇ.46 ರಷ್ಟು ಅಧಿಕ ಮಳೆಯಾಗಿದೆ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಇದುವರೆಗೆ 13 ಜೀವ ಹಾನಿ ಪ್ರಕರಣಗಳಿಗೆ 65 ಲಕ್ಷ ರೂ ಪರಿಹಾರ ನೀಡಲಾಗಿದ್ದು, ತೀವ್ರ ಮತ್ತು ಸಂಪೂರ್ಣ ಹಾನಿಯಾದ 211 ಮನೆಗಳಲ್ಲಿ 148 ಮನೆಗಳಿಗೆ 1,52,40,000 ರೂ ಗಳ ಪರಿಹಾರ ಹಾಗೂ ಭಾಗಶಃ ಹಾನಿಯಾದ 724 ಮನೆಗಳಲ್ಲಿ 449 ಮನೆಗಳಿಗೆ 24,44,000 ರೂ ಗಳ ನೆರವು ನೀಡಲಾಗಿದ್ದು, 22...
ಉ. ಕನ್ನಡ ಜಿಲ್ಲೆಯಲ್ಲಿ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ, ದಾಂಡೇಲಿ, ಶಿರಸಿ ಹಾಗೂ ಸಿದ್ದಾಪುರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶನಿವಾರ ಅಗಷ್ಟ 3 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದಿನ ಮಳೆಯ ಹಾನಿ..! ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 4 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಕಾರವಾರದ 2, ಅಂಕೋಲ ದ 1, ಹೊನ್ನಾವರ ದ 9 ಮತ್ತು ಕುಮಟಾ ದ 2 ಸೇರಿದಂತೆ ಒಟ್ಟು 14 ಕಾಳಜಿ ಕೇಂದ್ರಗಳಲ್ಲಿ 503 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ.
ಜಿಲ್ಲೆಯಲ್ಲಿ ನಾಳೆ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶುಕ್ರವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶುಕ್ರವಾರ ಅಗಷ್ಟ 2 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದಿನ ಮಳೆಯ ಹಾನಿ..! ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 13 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಕಾರವಾರದ 2, ಅಂಕೋಲ ದ 1, ಹೊನ್ನಾವರ ದ 9,ಜೋಯಿಡಾ ದ 1 ಮತ್ತು ಕುಮಟಾ ದ 1 ಸೇರಿದಂತೆ ಒಟ್ಟು 14 ಕಾಳಜಿ ಕೇಂದ್ರಗಳಲ್ಲಿ 550 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ.
ಜಿಲ್ಲೆಯಲ್ಲಿ ಇಂದು ಗುರುವಾರ ಶಾಲಾ ಕಾಲೇಜುಗಳಿಗೆ ಮಳೆಯ ರಜೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ಗುರುವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ಇಂದು ಗುರುವಾರ ಅಗಷ್ಟ 1 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಮಳೆಯ ಅಬ್ಬರ ಹಿನ್ನೆಲೆ, ಇಂದು ಬುಧವಾರ ಶಾಲಾ ಕಾಲೇಜುಗಳಿಗೆ ರಜೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಧ್ಯಂತ ಅವಾಂತರಗಳು ಸೃಷ್ಟಿಯಾಗಿವೆ. ಹೀಗಾಗಿ, ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ಬುಧವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ಇಂದು ಬುಧವಾರ ದಿನಾಂಕ: 31 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಯರೇಬೈಲಿನ ಬೇಡ್ತಿ ಹಳ್ಳದಲ್ಲಿ ಹೆಚ್ಚಾದ ನೀರಿನ ಪ್ರಮಾಣ, ತಹಶೀಲ್ದಾರ್ ಹಾಗೂ ಜಿಪಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ..!
ನಿರಂತರ ಮಳೆ ಹಿನ್ನೆಲೆಯಲ್ಲಿ, ಮುಂಡಗೋಡ ತಾಲೂಕಿನ ಯರೆಬೈಲು ಬೇಡ್ತಿ ಹಳ್ಳದಲ್ಲಿ ನೀರಿನ ಪ್ರಮಾಣ ಕೊಂಚ ಜಾಸ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಡಗೋಡ ತಹಶಿಲ್ದಾರ ಶಂಕರ್ ಗೌಡಿ ಹಾಗೂ ಜಿಪಂ ಇಂಜಿನಿಯರ್ ಪ್ರದೀಪ್ ಭಟ್ಟ ಯರೆಬೈಲಿನ ಹಳ್ಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡ್ರು. ಇನ್ನು, ಸ್ಥಳೀಯರಿಗೆ ಈ ಬಗ್ಗೆ ಸೂಚನೆ ನೀಡಿದ ತಹಶೀಲ್ದಾರರು, ನೀರಿನ ಪ್ರಮಾಣ ಹೆಚ್ಚಾದರೆ ತಾಲೂಕಾಡಳಿತಕ್ಕೆ ಮಾಹಿತಿ ನೀಡುವಂತೆ ತಿಳಿಸಿದ್ರು. ದನಕರುಗಳನ್ನು ಹಳ್ಳದ ನೀರಲ್ಲಿ ಬಿಡದಂತೆ ಹಾಗೂ ಜನರು ಹಳ್ಳದಲ್ಲಿ ಇಳಿಯದಂತೆ ಸೂಚಿಸಿದ್ರು. ಸ್ಥಳೀಯ ಪಿಡಿಓ ಸೇರಿದಂತೆ ಹಲವರಿಗೆ ಎಚ್ಚರ ವಹಿಸಲು ಖಡಕ್ ಸೂಚನೆ ನೀಡಿದ್ರು.
ಶಿರಸಿ ನಗರ ಠಾಣೆ ASI ಅಶೋಕ್ ರಾಥೋಡ್ ಗೆ ಪದೋನ್ನತಿ, PSI ಆಗಿ ಚಿಕ್ಕಮಗಳೂರಿಗೆ ವರ್ಗಾವಣೆ..!
ಶಿರಸಿ ನಗರ ಠಾಣೆಯ ASI ಆಗಿ ಕಾರ್ಯನಿರ್ವಹಿಸುತ್ತಿದ್ದ, ಅಶೋಕ ರಾಥೋಡ ಇವರು ಪದೋನ್ನತಿಯೊಂದಿಗೆ PSI ಆಗಿ ಚಿಕ್ಕಮಗಳೂರಿನ ಜೈಪುರ್ ಪೋಲಿಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಈ ಮೊದಲು ಅಶೋಕ್ ರಾಥೋಡ್ ಮುಂಡಗೋಡ ಪೊಲೀಸ್ ಠಾಣೆಯಲ್ಲಿಯೂ ASI ಆಗಿ ಕಾರ್ಯನಿರ್ವಹಿಸಿದ್ದರು.
ಚಿಗಳ್ಳಿಯ ಸಂಗೂರಮಠರ ಮನೆಗೆ ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ, ಆರೋಗ್ಯ ವಿಚಾರಣೆ..!
ಮುಂಡಗೋಡ ತಾಲೂಕಿನ ಚಿಗಳ್ಳಿಗೆ ಇಂದು ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ ನೀಡಿದ್ರು. ಹಿರಿಯ ರಾಜಕೀಯ ಧುರೀಣ ಪಿ.ಎಸ್.ಸಂಗೂರ್ ಮಠ್ ಅವರ ನಿವಾಸಕ್ಕೆ ಭೇಟಿ ನೀಡಿದ ಹೆಬ್ಬಾರ್, ಸಂಗೂರಮಠರ ಆರೋಗ್ಯ ವಿಚಾರಿಸಿದ್ರು. ಈ ವೇಳೆ ಎಚ್.ಎಂ.ನಾಯ್ಕ್, ಸಿದ್ದಪ್ಪ ಹಡಪದ, ಫಣಿರಾಜ್ ಹದಳಗಿ, ಗುಡ್ಡಪ್ಪ ಕಾತೂರು ಸೇರಿದಂತೆ ತಾಲೂಕಿನ ಹಲವು ಕಾಂಗ್ರೆಸ್ ಮುಖಂಡರು ಸಾಥ್ ನೀಡಿದ್ರು.
ಉತ್ತರ ಕನ್ನಡದ ರಾಮನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ರಾಜ್ಯ ಡಕಾಯಿತರ ಬಂಧನ..!
ರಾಮನಗರ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜ್ ಮಬನೂರು ಮತ್ತವರ ಟೀಂ ನಿಜಕ್ಕೂ ಅದ್ಭುತ ಕಾರ್ಯ ಮಾಡಿದೆ. ದರೋಡೆಗೆ ಸಂಚು ರೂಪಿಸಿ ಬಸ್ ಹತ್ತಿ ಹೊರಟಿದ್ದ, ಇಬ್ಬರು ಖತರ್ನಾಕ್ ಅಂತರ್ ರಾಜ್ಯ ದರೋಡೆಕೋರರನ್ನ ಹೆಡೆಮುರಿ ಕಟ್ಟಿದ್ದಾರೆ. ಫಿಲ್ಡಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಕ್ರಿಮಿಗಳು ಮಾತ್ರ ಸದ್ಯ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇನ್ನಿಬ್ಬರು ಪರಾರಿಯಾಗಿದ್ದಾರೆ. ಅನಮೋಡ್ ಚೆಕ್ ಪೊಸ್ಟ್..! ಅಂದಹಾಗೆ, ನಿನ್ನೆ ಶನಿವಾರ, ಅಂದ್ರೆ, ಜುಲೈ 27 ರಂದು ರಾಮನಗರದ ಅನಮೋಡ್ ಅಬಕಾರಿ ಚೆಕ್ ಪೊಸ್ಟ್ ನಲ್ಲಿ ಸಿಬ್ಬಂದಿಯವ್ರು ತಪಾಸಣೆ ಕಾರ್ಯ ಮಾಡ್ತಿರ್ತಾರೆ. ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಟ ಮಾಡುವ ಅಕ್ರಮಿಗಳ ಮೇಲೆ ಹದ್ದಿನ ಕಣ್ಣಿಟ್ಟಿರ್ತಾರೆ. ಈ ವೇಳೆ ಪೊಲೀಸ್ರನ್ನ ನೋಡಿ ಅದೊಂದಿಷ್ಟು ಜನ ಮೆಲ್ಲಗೇ ಕಾಲ್ಕಿಳೋಕೆ ಟ್ರೈ ಮಾಡ್ತಾ ಇರ್ತಾರೆ. ಹೀಗಾಗಿ ಅಲರ್ಟ್ ಆದ ಪೊಲೀಸ್ರು ಅವ್ರನ್ನ ಬೆನ್ನತ್ತಿ ಹೋಗಿದ್ದಾಗ ಅವ್ರೇಲ್ಲ ಕಾಡಿನಲ್ಲಿ ಪರಾರಿಯಾಗಿ ಬಿಡ್ತಾರೆ. ಅವ್ರು ನಾಲ್ಕು ಜನ..! ಹೀಗಾಗಿ, ರಾತ್ರಿಯಿಡಿ ಆಗಂತುಕರಿಗಾಗಿ ಕಣ್ಣಿಟ್ಟು ಕೂತಿದ್ದ ರಾಮನಗರ ಪೊಲೀಸರಿಗೆ ಕೊನೆಗೂ ಆ...