ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ನಾಯಿಗಳ ದಾಳಿಗೆ ತುತ್ತಾಗಿ ಕೋತಿ ಮರಿ ಸಾವನ್ನಪ್ಪಿರೋ ಘಟನೆ ನಡೆದಿದೆ. ಮರದ ಮೇಲೆ ಆಟವಾಡುತ್ತಿದ್ದ ಕೋತಿ ಮರಿ ಕೈ ತಪ್ಪಿ ಕೆಳಗೆ ಬಿದ್ದ ಕೂಡಲೇ ಅಲ್ಲೇ ಇದ್ದ ನಾಯಿಗಳ ಹಿಂಡು ದಾಳಿ ಮಾಡಿ ಕೋತಿ ಮರಿಯನ್ನು ಕೊಂದು ಹಾಕಿವೆ. ಹೀಗಾಗಿ ಗ್ರಾಮಸ್ಥರು ಸಾವನ್ನಪ್ಪಿದ ಕೋತಿ ಮರಿಗೆ ವಿಶೇಷ ಪೂಜೆ ಸಲ್ಲಿಸಿ ಧಾರ್ಮಿಕ ವಿಧಿವಿಧಾನಗಳ ಮೂಲಕ ಅಂತಿಮ ಸಂಸ್ಕಾರ ನಡೆಸಿದ್ರು. ಈ ವೇಳೆ ಗ್ರಾಮದ ಹಲವರು ಭಾಗವಹಿಸಿದ್ದರು.
Top Stories
ಮುಂಡಗೋಡ ಬೆಂಡಿಗೇರಿ ಪೆಟ್ರೊಲ್ ಬಂಕ್ ಹತ್ತಿರ ಬೈಕ್ ಅಪಘಾತ, ವೃದ್ದನ ಕಾಲು ಕಟ್..!
ಮಳಗಿ-ಬನವಾಸಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಓರ್ವ ಸ್ಥಳದಲ್ಲೇ ಓರ್ವ ಸಾವು, ಮತ್ತೋರ್ವ ಗಂಭೀರ..!
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶುಕ್ರವಾರ ಸರ್ಕಾರಿ ರಜೆ ಘೋಷಣೆ..! ಶಾಲಾ ಕಾಲೇಜುಗಳಿಗೆ ರಜೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ..! ನಾಳೆಯ ಬೆಳಗಾವಿ ಕೈ ಕಾರ್ಯಕ್ರಮ ರದ್ದು..!
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ
ಹುಬ್ಬಳ್ಳಿ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!
ನಂದಿಕಟ್ಟಾದಲ್ಲಿ ನಾಯಿ ದಾಳಿಗೆ ಕೋತಿ ಮರಿ ಬಲಿ, ಗ್ರಾಮಸ್ಥರಿಂದ ಅಂತ್ಯ ಸಂಸ್ಕಾರ..!
ಮುಂಡಗೋಡ ಲೊಯೋಲಾ ಬಳಿ ಮಹಿಳೆಗೆ ವಾಹನ ಡಿಕ್ಕಿ, ಸ್ಥಳದಲ್ಲೇ ಮಹಿಳೆ ಸಾವು..!
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಲೊಯೊಲಾ ಶಾಲೆಯ ಹತ್ತಿರ ಭಾರೀ ದುರ್ಘಟನೆ ನಡೆದಿದೆ. ಪಾದಾಚಾರಿ ಮಹಿಳೆಯೋರ್ವಳಿಗೆ ಮಾರುತಿ ಇಕೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕರಗಿನಕೊಪ್ಪ ಗ್ರಾಮದ ಲೋಕವ್ವ ಧರ್ಮಣ್ಣ ಲಮಾಣಿ(50) ಅಪಘಾತದಲ್ಲಿ ಮೃತಪಟ್ಟ ಮಹಿಳೆಯಾಗಿದ್ದಾಳೆ. ಶಿರಸಿ ಕಡೆಯಿಂದ ಬರುತ್ತಿದ್ದ ಮಾರುತಿ ಇಕೊ ವಾಹನ, ಮುಂಡಗೋಡ ಕಡೆಯಿಂದ ಕಾಲ್ನಡಿಗೆಯಲ್ಲೇ ಬರುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸದ್ಯ ಸ್ಥಳಕ್ಕೆ ಮುಂಡಗೋಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಫುಲ್ ಟ್ರಾಫಿಕ್ ಜಾಮ್..! ಇನ್ನು ಅಪಘಾತ ಸಂಭವಿಸಿದ ನಂತರ ಶಿರಸಿ ರಸ್ತೆಯಲ್ಲಿ ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಹೀಗಾಗಿ ಪೊಲೀಸರು ಟ್ರಾಫಿಕ್ ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು.
ಸನವಳ್ಳಿ ಜಲಾಶಯದ ಬಳಿ ಸ್ಕೂಟಿ ಅಪಘಾತ, ಸವಾರನಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಸನವಳ್ಳಿ ಜಲಾಶಯದ ಹತ್ತಿರ ಅಪಘಾತವಾಗಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ಅಬ್ದುಲ್ ಗಫಾರ್(26) ಗಂಭೀರ ಗಾಯಗೊಂಡ ಯುವಕನಾಗಿದ್ದಾನೆ. ಸನವಳ್ಳಿ ಜಲಾಶಯದ ಹತ್ತಿರ ಸ್ಕೂಟಿ ಸ್ಕಿಡ್ ಆಗಿರೋ ರೀತಿಯಲ್ಲಿ, ಗಂಭೀರ ಗಾಯಗೊಂಡು ಬಿದ್ದಿದ್ದ ಯುವಕನನ್ನು ಸ್ಥಳೀಯರು ಗಮನಿಸಿದ್ದಾರೆ. ತಕ್ಷಣವೇ 108 ಅಂಬ್ಯಲೆನ್ಸ್ ಗೆ ಕರೆ ಮಾಡಿದ್ದಾರೆ. ಹೀಗಾಗಿ, ಮುಂಡಗೋಡ 108 ಅಂಬ್ಯುಲೆನ್ಸ್ ನ ಧನರಾಜ್ ಬಳೂರು ಸೇರಿದಂತೆ ಸಿಬ್ಬಂದಿಗಳು, ಗಾಯಾಳುಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿದ್ದರು. ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಇನ್ನು ಗಾಯಾಳು ಬಳಿ ಇದ್ದ ಬ್ಯಾಗ್ ಹಾಗೂ ಮೊಬೈಲ್ ಮುಂಡಗೋಡ ಪೊಲೀಸರಿಗೆ 108 ಸಿಬ್ಬಂದಿ ಹಸ್ತಾಂತರ ಮಾಡಿದ್ದಾರೆ.
ವರದಕ್ಷಿಣೆ ಕಿರುಕುಳ ಕೇಸ್; ಲಂಚ ಪಡೆದ ಇನ್ಸ್ ಪೆಕ್ಟರ್ ಸಸ್ಪೆಂಡ್..!
ಬೆಂಗಳೂರು: ಲಂಚ ಪಡೆದ ಆರೋಪದಡಿ ಮಡಿವಾಳ ಠಾಣೆ ಇನ್ಸ್‌ಪೆಕ್ಟರ್ ಸುನೀಲ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ. ವರದಕ್ಷಿಣೆ ಕಿರುಕುಳ ಸಂಬಂಧ ಆರೋಪಿ ಅಜಯ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಪ್ರಕರಣದಲ್ಲಿ ಕೋರ್ಟ್‌ಗೆ ಹಾಜರಾಗದ ಅಜಯ್ ವಿರುದ್ಧ ವಾರೆಂಟ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮುಂಬೈಯಿಂದ ಆರೋಪಿ ಅಜಯ್‌ನನ್ನು ವಾರೆಂಟ್ ಮೇಲೆ ಕರೆತಂದಿದ್ದ ಪೊಲೀಸರು ಹಣ ಪಡೆದು ಬಿಟ್ಟು ಕಳಿಸಿದ್ದರು ಎನ್ನಲಾಗಿದೆ. ಆದರೆ, ಆರೋಪಿ ಪೊಲೀಸರಿಗೆ ಲಂಚದ ರೂಪದಲ್ಲಿ ಹಣ ಕೊಡುವ ವಿಡಿಯೋ ಮಾಡಿ ಮೇಲಧಿಕಾರಿಗಳಿಗೆ ಕಳುಹಿಸಿದ್ದಾನೆ. ಈ ವಿಡಿಯೋ ಆಧರಿಸಿ ಡಿಸಿಪಿ ಶ್ರೀನಾಥ್ ಜೋಷಿ ಅವರಿಗೆ ಕಮಿಷನರ್ ಕಮಲ್ ಪಂತ್ ವರದಿ ಕೇಳಿದ್ದರು. ಡಿಸಿಪಿ ವರದಿ ಆಧರಿಸಿ ಕಮಲ್ ಪಂತ್ ಅವರು ಇನ್ಸ್‌ಪೆಕ್ಟರ್ ಸುನೀಲ್ ನಾಯಕ್‌ರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ
ಸಂಸದ ಡಿ.ಕೆ. ಸುರೇಶ್ ವಿರುದ್ಧ ಮುಂಡಗೋಡ ಬಿಜೆಪಿಗರ ಆಕ್ರೋಶ, ಪ್ರತಿಭಟನೆ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಇಲ್ಲಿನ ಬಿಜೆಪಿ ಕಾರ್ಯಕರ್ತರು ಡಿ.ಕೆ.ಸುರೇಶ್ ವಿರುದ್ಧ ಪ್ರತಿಭಟನೆ ಕೈಗೊಂಡ್ರು. ಕೆಡಿ- ಡಿಕೆ ಅಂತಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ರು ರಾಮನಗರದಲ್ಲಿ ಡಿ.ಕೆ. ಸುರೇಶ್ ಹಾಗೂ ಸಚಿವ ಅಶ್ವಥ್ ನಾರಾಯಣ್ ನಡುವೆ ನಡೆದ ಮಾತಿನ ಚಕಮಿಕಿಯಲ್ಲಿ, ಡಿ.ಕೆ.ಸುರೇಶ್ ಗೂಂಡಾವರ್ತನೆ ತೋರಿಸಿದ್ದಾರೆ ಅಂತಾ ಆರೋಪಿಸಿ, ಈ ಸಂಬಂಧ ರಾಜ್ಯಾಧ್ಯಂತ ಇಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಅದ್ರಂತೆ ಮುಂಡಗೋಡ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಬಿಜೆಪಿ ಕಾರ್ಯಕರ್ತರು ಡಿ.ಕೆ.ಸುರೇಶ್ ಭಾವಚಿತ್ರ ಹಿಡಿದು ಧಿಕ್ಕಾರ ಕೂಗಿದ್ರು. ಈ ವೇಳೆ ತಾಲೂಕಿನ ಹಿರಿಯ ಬಿಜೆಪಿ ಮುಖಂಡರುಗಳು, ಕಾರ್ಯಕರ್ತರು ಭಾಗವಹಿಸಿದ್ರು.
ಮುಂಡಗೋಡಿನ ವ್ಯಕ್ತಿಯ ಅನುಮಾನಾಸ್ಪದ ಸಾವು, ಹಲವು ಶಂಕೆ..!
ಮುಂಡಗೋಡ; ವ್ಯಕ್ತಿಯೊಬ್ಬ ಅನುಮಾನಾಸ್ಪದ ಸಾವು ಕಂಡಿದ್ದಾನೆ. ಮುಂಡಗೋಡ ನಿವಾಸಿ ಮೆಹೆಬೂಬ್ ಸಾಬ್ ಜಮಖಂಡಿ(45) ಸಾವು ಕಂಡಿದ್ದಾನೆ. ತಾಲೂಕಿನ ಸುಳ್ಳಳ್ಳಿಯ ಬ್ರಿಡ್ಜ್ ಬಳಿ ಘಟನೆ ನಡೆದಿದ್ದು, ಬೈಕ್ ಮೇಲಿಂದ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಕಂಡು ಬಂದಿದೆ. ಮುಂಡಗೋಡ ಪೊಲೀಸ್ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಶಿರಸಿಯ ನಿಡಗೋಡ ಬಳಿ ಪೊಲೀಸ್ ಜೀಪ್ ಪಲ್ಟಿ, ಚಾಲಕ ಗಂಭೀರ, ಪಿಎಸ್ ಐ ಅಪಾಯದಿಂದ ಪಾರು..!
ಶಿರಸಿ: ನಿಡಗೋಡ ಬಳಿ ಸಿದ್ದಾಪುರ ಪೊಲೀಸ್ ಠಾಣೆಯ ಜೀಪ್ ಪಲ್ಟಿಯಾಗಿದೆ. ಪರಿಣಾಮ ಚಾಲಕನಿಗೆ ತೀವ್ರ ಗಾಯವಾಗಿದ್ದು, ವಾಹನದಲ್ಲೇ ಇದ್ದ ಪಿಎಸ್ ಐ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿರಸಿಯಲ್ಲಿ ನಡೆಯುತ್ತಿರುವ ಪೊಲೀಸ್ ದೈಹಿಕ ಪರೀಕ್ಷೆಗೆ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಎದುರಿನಿಂದ ಅತಿವೇಗವಾಗಿ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಘಟನೆ ನಡೆದಿದೆ ಎನ್ನಲಾಗಿದ್ದು. ತೀವ್ರವಾಗಿ ಗಾಯಗೊಂಡ ಯಲ್ಲಪ್ಪ ಕಾಗವಾಡ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು, ಘಟನೆಯಲ್ಲಿ ಪ್ರಾಣಾಪಾಯದಿಂದ ಪಾರಾದ ಪಿಎಸ್ಐ ಮಹಾಂತೇಶ ಕುಂಬಾರ ಸಿದ್ದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೀಪಿನಲ್ಲಿ ಚಾಲಕ ಮತ್ತು ಪಿ.ಎಸ್.ಐ. ಇಬ್ಬರೇ ಇದ್ದ ಕಾರಣ ಹೆಚ್ಚಿನ ಹಾನಿ ಸಂಭವಿಸಿಲ್ಲ.
ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ..!
ಬೆಳಗಾವಿ: ತೀವ್ರ ವಿರೋಧದ ನಡುವೆಯೂ ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರವಾಗಿದೆ. ಕಾಂಗ್ರೆಸ್ ಸದಸ್ಯರ ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ ಮಾಡುವಲ್ಲಿ ಬಿಜೆಪಿ ಸರ್ಕಾರ ಯಶಸ್ವಿಯಾಗಿದೆ.
ಆಕಾಶದಲ್ಲಿ ಸಾಲು ಸಾಲು ಚುಕ್ಕಿಗಳು, ಇದೇನಿದು ನಭದಲ್ಲಿ ಬೆಳಕಿನ ಚಿತ್ತಾರ..? ಅಸಲು ಏನ್ ಗೊತ್ತಾ..?
ಮುಂಡಗೋಡ: ನಭದಲ್ಲಿ ಕಾಣಿಸಿಕೊಂಡ ಸಾಲುಸಾಲು ತಾರೆಗಳು.. ಸರಳರೇಖೆಯಲ್ಲಿ ಹಾದುಹೋದ ನೂರಾರು ಬೆಳಕಿನ ಚುಕ್ಕಿಗಳು.. ಆಗಸದಲ್ಲಿ ನಡೆದ ಈ ವಿಸ್ಮಯವನ್ನು ಕಂಡು ಬೆರಗಾಗಿರುವ ತಾಲೂಕಿನ ಜನತೆ.. ಹೌದು, ಮುಂಡಗೋಡ ತಾಲೂಕಿನಲ್ಲಿ ರಾತ್ರಿ ಆಕಾಶದಲ್ಲಿ ವಿಸ್ಮಯ ನಡೆದಿದೆ. ಮುಂಡಗೋಡ ತಾಲೂಕಿನಾದ್ಯಂತ ಆಗಸದಲ್ಲಿ ಚುಕ್ಕಿಗಳ ಸಾಲು ಸಾಲು ಚಿತ್ತಾರಗಳು, ಬೆಳಕಿನ ಆಟಗಳು ನಡೆದಿದೆ. ಆದ್ರೆ ಇದು ಕೃತಕ ಉಪಗ್ರಹಗಳ ಚಲನೆ ಅಂತಾ ಖಗೋಳತಜ್ಞರು ಸ್ಪಷ್ಟಪಡಿಸಿದ್ದಾರೆ. ಅಸಲು ಏನ್ ಗೊತ್ತಾ..? ನಿಜ ಅಂದ್ರೆ, ಹಾಗೆ ನಮಗೇಲ್ಲ ಕಂಡ ಚುಕ್ಕಿಗಳ ಸಾಲುಗಳು ಎಲಾನ್ ಮಸ್ಕ್ ಮಾಲೀಕತ್ವದ ಬಾಹ್ಯಾಕಾಶ ಸಂಸ್ಥೆ, ಅಮೆರಿಕದ ಸ್ಪೇಸ್ ಎಕ್ಸ್ ಉಡಾವಣೆ ಮಾಡಿದ ಸರಣಿ ಉಪಗ್ರಹಗಳ ಮಾಲೆಯಿದು. ಸ್ಟಾರ್ ಲಿಂಕ್ ಎಂಬ ಯೋಜನೆಯಡಿ 1,800ಕ್ಕೂ ಹೆಚ್ಚು ಉಪಗ್ರಹಗಳನ್ನು ಈಗಾಗಲೇ ಉಡಾವಣೆ ಮಾಡಲಾಗಿದೆ. ಅವುಗಳಲ್ಲಿ 1,732 ಉಪಗ್ರಹಗಳು ತಮ್ಮ ನಿಗದಿತ ಕಕ್ಷೆಯಲ್ಲಿ ಭೂಮಿಯನ್ನು ಸುತ್ತುತ್ತಿವೆ. 2018ರ ಫೆ.22ರಂದು ಆರಂಭವಾದ ಈ ಯೋಜನೆಯಲ್ಲಿ ಬೇರೆ ಬೇರೆ ಹಂತಗಳಲ್ಲಿ ಉಪಗ್ರಹಗಳನ್ನು ಉಡಾವಣೆ ಮಾಡಲಾಗುತ್ತಿದೆ. ಅವುಗಳಲ್ಲಿ ಒಂದು ಗುಂಪಿನ ಉಪಗ್ರಹಗಳು ಸಾಗುತ್ತಿದ್ದುದು...
ಎಂಇಎಸ್ ಪುಂಡಾಟ ಖಂಡಿಸಿ ಮುಂಡಗೋಡಿನಲ್ಲಿ ರಾಯಣ್ಣ ಅಭಿಮಾನಿಗಳಿಂದ ಪ್ರತಿಭಟನೆ..!
ಮುಂಡಗೋಡ: ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಎಂಇಎಸ್ ಪುಂಡಾಟಿಕೆ ಖಂಡಿಸಿ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಸುಟ್ಟ ಘಟನೆ ಖಂಡಿಸಿ ಮುಂಡಗೋಡಿನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಇಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮೊದಲು ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ ರಾಯಣ್ಣ ಅಭಿಮಾನಿ ಬಳಗದವರು, ನಂತರ ಮರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ರು. ಕನ್ನಡ ಬಾವುಟ ಸುಟ್ಟು ಹಾಕಿರುವುದು ಹಾಗೂ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ದ್ವಂಸ ಮಾಡಿರುವುದು ಖಂಡನೀಯ. ಪದೇ ಪದೇ ಬೆಳಗಾವಿ ಭಾಗದಲ್ಲಿ ಎಂಇಎಸ್ ಪುಂಡರು ಈ ರೀತಿ ಕೃತ್ಯಗಳನ್ನು ಮಾಡುವ ಮೂಲಕ ಕನ್ನಡ ನೆಲದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಇದರಿಂದ ನಮ್ಮ ಕನ್ನಡ ನಾಡಿಗೆ ಧಕ್ಕೆ ಉಂಟಾಗುತ್ತಿದೆ. ಇಂತಹ ಕೃತ್ಯಗಳನ್ನು ನೋಡಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೌನಕ್ಕೆ ಜಾರಿರುವುದು ಸರಿಯಲ್ಲ. ಕೂಡಲೇ ಈ ಕೃತ್ಯ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸುವುದರ ಜೊತೆಗೆ ಎಂಇಎಸ್...