ಮಂತ್ರಾಲಯ: ಕೊರೋನಾ ಮಹಾಮಾರಿಯಿಂದಾಗಿ ಇಷ್ಟೂ ದಿನ ಬಂದ್ ಆಗಿದ್ದ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ದೇವಸ್ಥಾನ ಇಂದು ತೆರೆದಿದೆ. ದೇಶದ ಮೂಲೆ ಮೂಲೆಯಲ್ಲೂ ರಾಯರಿಗೆ ಕೋಟ್ಯಂತರ ಭಕ್ತರಿದ್ದು, ಸದ್ಯ ರಾಯರ ದರ್ಶನಕ್ಕೆ ಅವಕಾಶ ಸಿಕ್ಕಿದ್ದೇ ತಡ ಮಂತ್ರಾಲಯದ ಕಡೆ ಭಕ್ತರ ದಂಡೇ ಆಗಮಿಸುತ್ತಿದೆ. ಲಾಕ್ ಡೌನ್ ಎಫೆಕ್ಟ್.. ಕೊರೊನಾ ಮಹಾಮಾರಿಯಿಂದಾಗಿ ತಲ್ಲಣಿಸಿದ್ದ ಕ್ಷೇತ್ರಗಳು ಈಗ ಚೇತರಿಸಿಕೊಳ್ಳುತ್ತಿವೆ. ಪ್ರಮುಖವಾಗಿ ಆಂಧ್ರಪ್ರದೇಶದಲ್ಲಿ ಮಿತಿಮೀರಿದ್ದ ಕೋವಿಡ್ ನಿಂದಾಗಿ ಅಲ್ಲಿಯ ಸರ್ಕಾರ ಸಂಪೂರ್ಣ ಲಾಕ್ ಡೌನ್ ಹೇರಲಾಗಿತ್ತು. ಇದ್ರಿಂದಾಗಿ ಮೇ1 ನೇ ತಾರೀಖಿನಿಂದ ಕರ್ನೂಲು ಜಿಲ್ಲೆಯ ಮಂತ್ರಾಲಯ ಮಂಡಲದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ದೇವಸ್ಥಾನ ಸಂಪೂರ್ಣ ಬಂದ್ ಮಾಡಲಾಗಿತ್ತು. ಸದ್ಯ ಅಲ್ಲಿಯ ರಾಜ್ಯ ಲಾಕ್ ಡೌನ್ ಸಡಿಲಿಕೆ ಮಾಡಿದ್ದರಿಂದ ಇಂದು ರಾಯರ ದೇವಸ್ಥಾನದ ಒಳಗೆ ಭಕ್ತರು ಬರುವುದು, ಪೂಜಾ ಕೈಂಕರ್ಯ ಸಲ್ಲಿಸುವುದಕ್ಕೆ ಮಠದ ಆಡಳಿತ ಮಂಡಳಿ ತೀರ್ಮಾನಿಸಿದೆ. ಕೋವಿಡ್ ನಿಯಮ ಪಾಲಿಸಲೇಬೇಕು..! ರಾಯರಿಗೆ ದೇಶ ಹಾಗೂ ವಿದೇಶದಲ್ಲಿ ಅಪಾರ ಭಕ್ತಗಣ ಇದೆ. ಇದ್ರಿಂದ ಕೋವಿಡ್ ನಿಯಮ ಪಾಲಿಸುವುದಾದ್ರೆ...
Top Stories
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶುಕ್ರವಾರ ಸರ್ಕಾರಿ ರಜೆ ಘೋಷಣೆ..! ಶಾಲಾ ಕಾಲೇಜುಗಳಿಗೆ ರಜೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ..! ನಾಳೆಯ ಬೆಳಗಾವಿ ಕೈ ಕಾರ್ಯಕ್ರಮ ರದ್ದು..!
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ
ಹುಬ್ಬಳ್ಳಿ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!
ತಡಸ ಕ್ರಾಸ್ ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ದುರಂತ ಸಾವು..!
ಬೆಡಸಗಾಂವ್ ಸಹಕಾರಿ ಸಂಘದ ಚುನಾವಣೆ ನಡೆದ್ರೂ ಮತ ಎಣಿಕೆಗೆ ಬ್ರೇಕ್..! ಹೈಕೋರ್ಟ್ ತಡೆಯಾಜ್ಞೆ..!
ಮಾಜಿ ಪ್ರಧಾನಿ ದೇವೇಗೌಡರಿಗೆ 2 ಕೋಟಿ ರೂ. ದಂಡ..!
ಬೆಂಗಳೂರು: ನಂದಿ ಇನ್ಫಾಸ್ಟ್ರಕ್ಚರ್ ಕಾರಿಡಾರ್ (ನೈಸ್) ವಿರುದ್ಧ ಮಾಡಿದ್ದ ಆರೋಪವನ್ನು ಸಾಬೀತುಪಡಿಸುವಲ್ಲಿ ವಿಫಲರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ನ್ಯಾಯಾಲಯ 2 ಕೋಟಿ ರೂ. ದಂಡ ವಿಧಿಸಿದೆ. ನೈಸ್ ಕಂಪನಿಗೆ ಆದ ಮಾನನಷ್ಟಕ್ಕೆ 2 ಕೋಟಿ ರೂ. ನೀಡುವಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ ಆದೇಶಿಸಿದೆ. ಖಾಸಗಿ ಟಿವಿ ಚಾನೆಲ್ ಒಂದಕ್ಕೆ ಸದರ್ಶನ ನೀಡುವಾಗ ದೇವೇಗೌಡ ನೈಸ್ ಕಂಪನಿ ವಿರುದ್ಧ ಆರೋಪ ಮಾಡಿದ್ದರು. ಹೀಗಾಗಿ, ನೈಸ್ ಕಂಪನಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ಸಾಬೀತುಪಡಿಸುವಲ್ಲಿ ವಿಫಲರಾದ ದೇವೇಗೌಡರಿಗೆ ನೈಸ್ ಕಂಪನಿಗೆ 2 ಕೋಟಿ ರೂ ಪರಿಹಾರ ನೀಡಬೇಕು ಎಂದು ಆದೇಶಿಸಿದೆ.
ಶಿಗ್ಗಾವಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 40 ಕ್ವಿಂಟಾಲ್ ಅಕ್ಕಿ ವಶ..!
ಶಿಗ್ಗಾವಿ: ಅಕ್ರಮವಾಗಿ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 40 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಲಾದ ಘಟನೆ ಶಿಗ್ಗಾವಿ ಪಟ್ಟಣದಲ್ಲಿ ನಡದಿದೆ. ಅನ್ನಭಾಗ್ಯ ಅಕ್ಕಿ ಮಾರಾಟ ಮಾಡುವ ಗೋಡಾನ್ ಮೇಲೆಯೇ ದಾಳಿ ನಡೆಸಿರೋ ಪೊಲೀಸರು, 86 ಪ್ಲಾಸ್ಟಿಕ್ ಚೀಲದಲ್ಲಿ ಅಕ್ರಮವಾಗಿ ತುಂಬಿಡಲಾಗಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ. ಹನುಮಂತಪ್ಪ ಬಡ್ನಿ ಎಂಬುವವರಿಗೆ ಸೇರಿದ ಮನೆಯಲ್ಲಿ, 40 ಕ್ವಿಂಟಲ್ 95 ಕೇಜಿ ಅಕ್ಕಿ ದೊರೆತಿದೆ. ಖಚಿತ ಮಾಹಿತಿ ಮೇರೆಗೆ ಶಿಗ್ಗಾವಿ ಪೊಲೀಸರು ದಾಳಿ ಮಾಡಿದ್ದು, ಅಕ್ಕಿ ಸೇರಿದಂತೆ ಒಂದು ಟಾಟಾ ಎಸ್ ವಾಹನ ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
“ಮಧುಗಿರಿ ಮೋದಿ”ಗೆ ಇದೇಂಥಾ ಸ್ಥಿತಿ..? ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ಯಾಕೆ ಹಿಂದೂ ಹೋರಾಟಗಾರ..?
ತುಮಕೂರು: ಕರ್ನಾಟಕ ರಾಜ್ಯ ಹಿಂದೂ ಸಾಮ್ರಾಟ್ ಧರ್ಮಸೇನೆ ಹೆಸರಿನ ಸಂಘಟನೆ ಮೂಲಕ, ಬ್ರಷ್ಟಾಚಾರ, ಭಯೋತ್ಪಾದನೆ, ಲವ್ ಜಿಹಾದ್, ಅತ್ಯಾಚಾರ, ಗೋಹತ್ಯೆಯ ವಿರುದ್ಧ ಹೋರಾಟ ಮಾಡುತ್ತಿದ್ದ ಆ ವ್ಯಕ್ತಿ ಇಂದು ರಾಜ್ಯಪಾಲರಿಗೆ ದಯಾಮರಣಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಹೌದು, ಮಧುಗಿರಿ ಮೋದಿ ಅಂತಲೇ ಹೆಸರಾಗಿರೋ ತುಮಕೂರು ಜಿಲ್ಲೆಯ ಅತುಲ್ ಕುಮಾರ್ ಹೀಗೊಂದು ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದೆಲ್ಲೆಡೆ ಕೇಸ್..! ಕರ್ನಾಟಕ ರಾಜ್ಯ ಹಿಂದೂ ಸಾಮ್ರಾಟ್ ಧರ್ಮಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರೂ ಆಗಿರೋ ಅತುಲ್ ಕುಮಾರ್ ವಿರುದ್ಧ ರಾಜ್ಯದಲ್ಲಿ ಹಲವೆಡೆ ಪ್ರಕರಣ ದಾಖಲಾಗಿವೆ. ಭಯೋತ್ಪಾದನೆ, ಭ್ರಷ್ಟಾಚಾರ, ಅತ್ಯಾಚಾರ, ಲವ್ ಜಿಹಾದ್, ಗೋಹತ್ಯೆಯ ವಿರುದ್ಧ ಹೋರಾಟ ಮಾಡುವ ಅತುಲ್, ಈಗ ತುಮಕೂರು ಪೊಲೀಸರ ವಿರುದ್ಧ ಮಾನಸಿಕ ಕಿರುಕುಳದ ಆರೋಪ ಹೊರಿಸಿದ್ದಾರೆ. ಕಿರುಕುಳ ಕೊಟ್ರಾ ಪೊಲೀಸರು..? ತುಮಕೂರು ಜಿಲ್ಲಾ ಪೋಲಿಸರಿಂದ ಪದೇ ಪದೇ ವಿಚಾರಣೆ ನೆಪದಲ್ಲಿ ಮಾನಸಿಕ ಕಿರುಕುಳ ಮಾಡಲಾಗುತ್ತಿದೆ. ಅನೇಕ ಬಾರಿ ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆದು ಪ್ರಕರಣ ದಾಖಲು ಮಾಡುತ್ತಿದ್ದಾರೆ ಅಂತಾ ಅತುಲ್ ಆರೋಪಿಸುತ್ತಿದ್ದಾರೆ. ಆರ್ಥಿಕ ಸ್ಥಿತಿ...
ಆ ನಾಯಿ ಮರಿಗೆ ಮರುಜನ್ಮ ಕೊಟ್ಟಿದ್ದೇ ರೋಚಕ: ಮಾನವೀಯತೆ ಅಂದ್ರೆ ಇದೇ ಅಲ್ವಾ..!
ಉಡುಪಿ: ಕಾಲಿಗೆ ಚಕ್ರ ಸಿಕ್ಕಿಸಿಕೊಂಡು ಓಡಾಡುವ ನಾಯಿ ಮರಿಯ ವಿಡಿಯೋವೊಂದು ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ. ಈ ಸಂತೋಷದ ಹಿಂದಿನ ಸಂಕಟದ ಕಥೆ ರೋಚಕ ವಾಗಿದೆ. ತನ್ನ ಹಿಂದಿನ ಎರಡು ಕಾಲುಗಳನ್ನು ಮುರಿದುಕೊಂಡಿದ್ದ ಈ ನಾಯಿಮರಿಗೆ ಮರುಜೀವ ಸಿಕ್ಕಿದ್ದೇ ಒಂದು ಆಸಕ್ತಿಯ ವಿಚಾರ.ಉಡುಪಿ ಜಿಲ್ಲೆಯ ಗಡಿಭಾಗದಲ್ಲಿರುವ, ಹೊಸಂಗಡಿ ಕೆಪಿಸಿಎಲ್ ಘಟಕದ ಆವರಣದಲ್ಲಿ ಪುಟ್ಟ ನಾಯಿಮರಿಯೊಂದು ಘಾಸಿಕೊಂಡು ಬಿದ್ದಿತ್ತು. ಬೈಕ್ ಚಕ್ರದಲ್ಲಿ ಸಿಲುಕಿ ಕಾಲು ನುಜ್ಜು ಗುಜ್ಜು.! ಯಾರೋ ಬೈಕ್ ಹಾಯಿಸಿದ ಪರಿಣಾಮ ನಾಯಿಮರಿಯ ಹಿಂಬದಿಯ ಎರಡು ಕಾಲುಗಳು ಸಂಪೂರ್ಣ ಜಜ್ಜಿ ಹೋಗಿತ್ತು. ಅಸಹಾಯಕ ಸ್ಥಿತಿಯಲ್ಲಿ ಅಲ್ಲೇ ರಸ್ತೆ ಬದಿಯಲ್ಲಿ 15ದಿನಗಳಿಂದ ಬಿದ್ದುಕೊಂಡಿತ್ತು. ಸ್ಥಳೀಯ ನಿವಾಸಿ ಹಾಗೂ ಕೆಪಿಸಿಎಲ್ ನಲ್ಲಿ ಉದ್ಯೋಗ ಮಾಡುವ ಕೆ.ರಾಮಸ್ವಾಮಿ ಹಾಗೂ ವೀಣಾ ದಂಪತಿ ಪುತ್ರಿಯಾದ ಪ್ರಿಯಾ ಎಂ.ಆರ್ ಈ ಅಸಹಾಯಕ ನಾಯಿಯನ್ನು ಗಮನಿಸಿದ್ದಾರೆ. ಪಕ್ಕಕ್ಕೆ ಹೋದ ಆಕೆ ನಾಯಿಯ ಸ್ಥಿತಿ ನೋಡಿ ಮಮ್ಮಲ ಮರುಗಿದ್ದಾರೆ. ಹಿಂದೆ ಹಿಂದೆ ಬಂದಿತ್ತು..! ಈ ಮರಿ ಕುಂಟು ಕಾಲಿನಲ್ಲೇ ಅವರನ್ನು ಹಿಂಬಾಲಿಸಿಕೊಂಡು...
ಯೋಗ ದಿನಾಚರಣೆ; ಸೋಂದಾ ಸ್ವರ್ಣವಲ್ಲಿ ಶ್ರೀಗಳ ಯೋಗಾಶೀರ್ವಚನ..!
ಶಿರಸಿ: ಜೀವನದ ಸಮತೆ ಪಡೆಯೋಕೆ ಯೋಗಾನುಷ್ಠಾನ ಮಹತ್ವದ್ದು ಅಂತ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಪೀಠಾಧೀಶ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದ್ರು. ವಿಶ್ವ ಯೋಗ ದಿನಾಚರಣೆಯ ಹಿನ್ನಲೆಯಲ್ಲಿ ಶಿರಸಿಯ ಸೋಂದಾದಲ್ಲಿ ಯೋಗಾನುಷ್ಠಾನ ನಡೆಸಿದ ಶ್ರೀಗಳು ಆಶೀರ್ವಚನ ನುಡಿದರು. ಆಸನ ಪ್ರಾಣಯಾಮ ತಿಳಿದು ಕೌಶಲ ಮೂಲಕ ಯೋಗ ಸಾಧನೆ ಮಾಡಿದಾಗ ನಮ್ಮಲ್ಲೂ ಸಮತ್ವ ಸಾಧನೆ ಆಗುತ್ತದೆ. ಆದರೆ ಯೋಗ ದಿನಾಚರಣೆಯ ದಿನದಂದು ಮಾತ್ರ ಯೋಗಾಸನ ಮಾಡಿದರೆ ಆಗದು. ಯೋಗ ದಿನಾಚರಣೆಯ ಮರು ದಿನ ಯೋಗ ಮಾಡದೇ ಇದ್ದವರೂ ಇದ್ದಾರೆ. ಇದಾಗದೇ ಜೀವನದಲ್ಲಿ ನಿರಂತರ ಯೋಗ ಅನುಷ್ಠಾನ ಮಾಡಬೇಕು. ಆಸನ, ಪ್ರಾಣಾಯಾಮ ರೂಢಿಸಿಕೊಳ್ಳಬೇಕು. ಪ್ರತಿದಿನವೂ ಮಾಡಬೇಕು. ವಿಶ್ವ ಯೋಗದ ದಿನಾಚರಣೆಯು ಯೋಗದ ಮೂಲಕ ಎಲ್ಲರೂ ಆರೋಗ್ಯ ಪಡೆಯುವಲ್ಲಿ ನೆರವಾಗಲಿ. ಯೋಗದ ಮೂಲಕ ವಿಶ್ವ ಒಂದಾಗಬಹುದು ಎಂಬುದನ್ನು ಮತ್ತೆ ಒಂದಾಗಬಹುದು ಎಂಬುದನ್ನು ತಿಳಿಸಲಿ ಎಂದರು. ಯೋಗ ಸಾಧಕ ಶ್ರೀ..! ಕಳೆದ ನಾಲ್ಕು ದಶಕಗಳಿಂದಲೂ ನಿರಂತರ ಯೋಗಾಭ್ಯಾಸ ನಡೆಸುತ್ತಿರುವ ಸ್ವರ್ಣವಲ್ಲೀ ಶ್ರೀಗಳು ಸ್ವತಃ ಯೋಗ ಸಾಧಕ ಗುರುಗಳೂ...
ಪ್ರಯಾಣಿಕರ ಕೊರತೆಯಲ್ಲೇ ಉತ್ತರ ಕನ್ನಡದಲ್ಲಿ ಬಸ್ ಸಂಚಾರ ಶುರು..!
ಶಿರಸಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಜಾರಿಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡ ಇದರ ಭಾಗವಾಗಿ ಸಾರಿಗೆ ಬಸ್ ಸಂಚಾರ ಪ್ರಾರಂಭವಾಗಿದೆ. ಜಿಲ್ಲೆಯ ವಾಯವ್ಯ ಸಾರಿಗೆ ಸಂಸ್ಥೆಯ ಮುಖ್ಯ ಘಟಕವಾದ ಶಿರಸಿಯಿಂದ ಬಸ್ ಗಳು ಕಾರ್ಯ ಆರಂಭಿಸಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಿಂದ ಈಗಾಗಲೇ ಬಸ್ ಗಳು ಸಂಚಾರವನ್ನ ಆರಂಭಿಸಿದ್ದು, ಸದ್ಯಕ್ಕೆ ಜಿಲ್ಲೆಯಿಂದ ಜಿಲ್ಲೆಗಳಿಗೆ, ತಾಲೂಕುಗಳಿಂದ ತಾಲೂಕುಗಳಿಗೆ ಮಾತ್ರ ಬಸ್ ಗಳು ಸಂಚಾರ ಪ್ರಾರಂಭಿಸಿವೆ. ಆದ್ರೆ ಪ್ರಯಾಣಿಕರ ಕೊರತೆ ಸಾರಿಗೆ ಸಂಸ್ಥೆಯನ್ನ ಕಾಡುತ್ತಿದೆ. ಪ್ರಯಾಣಿಕರಿಲ್ಲದೆ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ. ಸದ್ಯಕ್ಕೆ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ ಓಡಿಸಲಾಗುತ್ತಿದೆ. ಸರ್ಕಾರದ ನಿಯಮಗಳಿಗೆ ಅನುಗುಣವಾಗಿ ಬಸ್ ಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಬಸ್ ಗಳನ್ನ ಓಡಿಸಲಾಗುತ್ತಿದೆ. ಇನ್ನು, ಗ್ರಾಮೀಣ ಭಾಗಗಳಿಗೆ ಬಸ್ ಸಂಚಾರವನ್ನ ಜನರ ರೆಸ್ಪಾನ್ಸ್ ನೋಡಿಕೊಂಡು ಪ್ರಾರಂಭಿಸಲಾಗುತ್ತೆ ಅಂತಾ KSRTC ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಾಗೋಡು ಜಲಪಾತದ ದೃಶ್ಯ ವೈಭವ ಕಣ್ತುಂಬಿಕೊಳ್ಳಿ..! ಈಗಲೇ ಒಮ್ಮೆ ಭೇಟಿ ಕೊಡಿ..!!
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣ ಅಬ್ಬರಿಸಿ ಬೊಬ್ಬಿಡುತ್ತಿದ್ದಾನೆ. ಎಲ್ಲೆಂದರಲ್ಲಿ ಮಳೆ ಮಳೆ ಮಳೆ. ಹೀಗಾಗಿ ಮಳೆಯ ಅವಾಂತರಗಳು ಒಂದೆಡೆಯಾದ್ರೆ, ಮತ್ತೊಂದೆಡೆ ಅದೇ ಮಳೆಯಿಂದ ಉತ್ತರ ಕನ್ನಡದ ಮಲೆನಾಡಿನ ಪ್ರಕೃತಿ ಸೌಂದರ್ಯ ಕಣ್ಮನ ಸೆಳೆಯುತ್ತಿದೆ. ಪಶ್ಚಿಮ ಘಟ್ಟದ ರಮಣೀಯತೆ..! ಅಂದಹಾಗೆ, ಮಳೆಗಾಲದಲ್ಲಿ ಪಶ್ಚಿಮ ಘಟ್ಟಗಳನ್ನ ನೋಡೋದೇ ಒಂದು ರೀತಿಯ ಆನಂದ. ಪಶ್ಚಿಮ ಘಟ್ಟಗಳ ಸಾಲು ಹಸಿರನ್ನು ಹೊದ್ದು ನೋಡುಗರ ಮನ ಸೆಳೆಯುತ್ತದೆ. ಅದೇ ರೀತಿ ಜಲಪಾತಗಳ ಜಿಲ್ಲೆ ಉತ್ತರ ಕನ್ನಡ ಈ ಪಶ್ಚಿಮ ಘಟ್ಟಗಳ ಸಾಲಿನಲ್ಲೇ ಬರೋದ್ರಿಂದ ಜಲಪಾತಗಳ ವೈಭವ ಸವಿಯೋದೇ ಒಂಥರಾ ಖುಷಿ. ಜಲಪಾತಗಳ ಹಾಲುನೊರೆ..! ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿರೋ ಜಲಪಾತಗಳು ರಾಜ್ಯದಲ್ಲೇ ಅಧಿಕ. ಇಲ್ಲಿನ ಜಲಪಾತಗಳು ಮೈದುಂಬಿ ಹರಿಯುತ್ತಿದ್ರೆ ಒಂದೊಂದು ಜಲಪಾತಗಳು ಒಂದೊಂದು ರೀತಿಯ ವೈಚಿತ್ರ್ಯವನ್ನ ಸೃಷ್ಟಿಸುತ್ತವೆ. ಅದೇ ರೀತಿ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾಗೋಡು ಜಲಪಾತ ಇದೀಗ ಮೈದುಂಬಿ ಹರಿಯುತ್ತಿದೆ. ಬೇಡ್ತಿ ನದಿಯಿಂದ ನಿರ್ಮಾಣವಾಗಿರೋ ಈ ಜಲಪಾತ ಸುಮಾರು 200 ಮೀಟರ್ ಎತ್ತರದಿಂದ ಧುಮುಕುತ್ತದೆ. ಯಲ್ಲಾಪುರದಿಂದ 17...
ನಾಳೆಯಿಂದ ಬಸ್ ಸಂಚಾರ ಆರಂಭ: ಏನಿದೆ ರೂಲ್ಸ್..?
ಬೆಂಗಳೂರು: ನಾಳೆಯಿಂದ ಅನ್ ಲಾಕ್ ಆರಂಭವಾಗಿತ್ತಿರುವುದರಿಂದ ರಾಜ್ಯಾದ್ಯಂತ ಕೆ ಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದ್ದು, ಪ್ರಯಾಣಿಕರು ಕೋವಿಡ್ ಮಾರ್ಗಸೂಚಿಯನ್ನು ಪಾಲಿಸುವುದು ಕಡ್ಡಾಯವಾಗಿದೆ. 3 ಸಾವಿರ ಬಸ್ ಗಳು ರಸ್ತೆಗೆ..! ನಾಳೆಯಿಂದ ಮೈಸೂರು ಜಿಲ್ಲೆ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲೂ ಕೆ ಎಸ್ ಆರ್ ಟಿಸಿ ಬಸ್ ಸಂಚಾರ ಬೆಳಿಗ್ಗೆ 6 ಗಂಟೆಯಿಂದ ಆರಂಭವಾಗಲಿದ್ದು, ಮೊದಲ ಹಂತದಲ್ಲಿ 3000 ಬಸ್ ಗಳು ಸಂಚರಿಸಲಿವೆ. ಆದರೆ ಅಂತರಾಜ್ಯಗಳಿಗೆ ಸದ್ಯಕ್ಕೆ ಬಸ್ ಸಂಚಾರ ಲಭ್ಯವಿರುವುದಿಲ್ಲ. ಪ್ರಯಾಣಿಕರು ಹಾಗೂ ಚಾಲಕರು, ನಿರ್ವಾಹಕರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಸಾರಿಗೆ ಇಲಾಖೆ ಸೂಚಿಸಿದೆ. ಕೋವಿಡ್ ನಿಯಮ ಕಡ್ಡಾಯ..! ಚಾಲಕರು ಹಾಗೂ ನಿರ್ವಾಹಕರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದ್ದು, ಲಸಿಕೆ ಮೊದಲ ಅಥವಾ ಎರಡನೇ ಡೋಸ್ ಪಡೆದಿರಬೇಕು. ಸಿಬ್ಬಂದಿಗಳು ಮಾಸ್ಕ್ ಧರಿಸುವುದು ಕಡ್ಡಾಯ. ಪ್ರಯಾಣಿಕರು ಮಾಸ್ಕ್ ಇಲ್ಲದೇ ಬಸ್ ಹತ್ತುವಂತಿಲ್ಲ. ಶೇ.50ರಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶವಿದ್ದು, ಮೂಗು, ಬಾಯಿ ಮುಚ್ಚಿಕೊಳ್ಳುವಂತೆ ಮಾಸ್ಕ್ ಧರಿಸಿರಬೇಕು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು...
ತಾಲೂಕಿನಲ್ಲಿಂದು 05 ಕೊರೋನಾ ಪಾಸಿಟಿವ್..! 2 ಸಾವು..!!
ಮುಂಡಗೋಡ: ತಾಲೂಕಿನಲ್ಲಿ ಇಂದು 5 ಹೊಸ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. 19 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ತಾಲೂಕಿನಲ್ಲಿ ಒಟ್ಟೂ 84 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 43 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 41 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 13 ಜನ ಸೋಂಕಿತರು ಇಂದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ಖಾಲಿ ಖಾಲಿಯಾಗಿದೆ. ಇಂದು ತಾಲೂಕಿನಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದು, ತಾಲೂಕಿನ ತಟ್ಟಿಹಳ್ಳಿಯ 65 ವರ್ಷದ ಓರ್ವ ಪುರುಷ ವ್ಯಕ್ತಿ, ಹಾಗೂ ಮುಂಡಗೋಡ ಪಟ್ಟಣದ ಆನಂದನಗರ ನಿವಾಸಿ 45 ವರ್ಷದ ಮಹಿಳೆ ಕೋವಿಡ್ ಗೆ ಬಲಿಯಾಗಿದ್ದಾರೆ ಅಂತಾ ಮುಂಡಗೋಡ ತಹಶೀಲ್ದಾರರು ಮಾಹಿತಿ ನೀಡಿದ್ದಾರೆ.