ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಇನ್ನಿಲ್ಲದ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಗುರುವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಗುರುವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಎಲ್ಲ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 25 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..
Top Stories
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶುಕ್ರವಾರ ಸರ್ಕಾರಿ ರಜೆ ಘೋಷಣೆ..! ಶಾಲಾ ಕಾಲೇಜುಗಳಿಗೆ ರಜೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ..! ನಾಳೆಯ ಬೆಳಗಾವಿ ಕೈ ಕಾರ್ಯಕ್ರಮ ರದ್ದು..!
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ
ಹುಬ್ಬಳ್ಳಿ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!
ತಡಸ ಕ್ರಾಸ್ ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ದುರಂತ ಸಾವು..!
ಬೆಡಸಗಾಂವ್ ಸಹಕಾರಿ ಸಂಘದ ಚುನಾವಣೆ ನಡೆದ್ರೂ ಮತ ಎಣಿಕೆಗೆ ಬ್ರೇಕ್..! ಹೈಕೋರ್ಟ್ ತಡೆಯಾಜ್ಞೆ..!
ಸಿಂಗನಳ್ಳಿಯಲ್ಲಿ ಅಡಿಕೆ ಕಳ್ಳರ ಹಾವಳಿ, ಮನೆಯ ಪಕ್ಕದಲ್ಲೇ ಒಣ ಹಾಕಿದ್ದ ಅಡಿಕೆ ಕದ್ದೊಯ್ದ ಕಳ್ಳರು..!
ಉ.ಕನ್ನಡದಲ್ಲಿ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ, ನಿರಂತರ ಮಳೆ ಹಿನ್ನೆಲೆ ಡಿಸಿ ಆದೇಶ..!
ಮಳಗಿ ಧರ್ಮಾ ಜಲಾಶಯದಲ್ಲಿ ಕೊಚ್ಚಿಕೊಂಡು ಹೋದ ಮೂಡಸಾಲಿಯ ಇಬ್ಬರು ಯುವಕರು, ಓರ್ವನ ರಕ್ಷಣೆ, ಮತ್ತೋರ್ವ ನಾಪತ್ತೆ..!
ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯ ನೋಡಲು ಬಂದಿದ್ದ ಯುವಕನೋರ್ವ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ಮತ್ತೋರ್ವನನ್ನು ರಕ್ಷಣೆ ಮಾಡಿರೋ ಘಟನೆ ನಡೆದಿದೆ. ಮುಂಡಗೋಡ ತಾಲೂಕಿನ ಮೂಡಸಾಲಿಯ ಶ್ರೀನಾಥ್ ಸೋಮಶೇಖರ್ ಹರಿಜನ್ (20) ಸದ್ಯ ಮಳಗಿ ಜಲಾಶಯದಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ ಅಂತಾ ಮಾಹಿತಿ ಲಭ್ಯವಾಗಿದೆ. ಕೊಚ್ಚಿಕೊಂಡು ಹೋಗುತ್ತಿದ್ದಾಗ ಮತ್ತೋರ್ವ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಫೀರಪ್ಪ ಹರಿಜನ್(25) ರಕ್ಷಣೆಗೊಳಗಾದ ಯುವಕನಾಗಿದ್ದಾನೆ. ಮಳಗಿ ಧರ್ಮಾ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ, ಮೂಡಸಾಲಿ ಗ್ರಾಮದಿಂದ ಆರು ಜನ ಸ್ನೇಹಿತರು ನೋಡಲು ಬಂದಿದ್ದರು. ಈ ವೇಳೆ ಜಲಾಶಯದ ಉಬ್ಬಿನ ಹತ್ತರಿ ಹೋದಾಗ ಏಕಾಏಕಿ ಇಬ್ಬರು ಯುವಕರು ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಅದ್ರಲ್ಲಿ, ಓರ್ವ ಯುವಕನನ್ನು ಸ್ಥಳೀಯರು ಬಚಾವ್ ಮಾಡಿದ್ದಾರೆ. ಆದ್ರೆ, ಶ್ರೀನಾಥ್ ಹರಿಜನ್ ನೀರಲ್ಲಿ ನಾಪತ್ತೆಯಾಗಿದ್ದಾನೆ. ಸದ್ಯ, ಸ್ಥಳಕ್ಕೆ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್, ಪಿಎಸ್ಐ ಪರಶುರಾಮ್, ಕ್ರೈಂ ಪಿಎಸ್ಐ ಗುಡಗುಂಟಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ದೌಡಾಯಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಬಂದಿಳಿದಿದ್ದಾರೆ. ಯುವಕನ...
ಕಲಕೇರಿಯಲ್ಲಿ ವಿದ್ಯುತ್ ಕಂಬ ಮುಟ್ಟಿದ ಎತ್ತು ಸ್ಥಳದಲ್ಲೇ ಸಾವು, ಅದೃಷ್ಟವಶಾತ್ ರೈತ ಪಾರು..!
ಮುಂಡಗೋಡ ತಾಲೂಕಿನ ಕಲಕೇರಿಯಲ್ಲಿ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸಿ ಎತ್ತು ಸಾವನ್ನಪ್ಪಿದ ಘಟನೆ ನಡೆದಿದೆ.. ಗದ್ದೆಯಲ್ಲಿ ಭತ್ತದ ನಾಟಿ ಕೆಲಸದ ತಯಾರಿ ನಡೆದಿತ್ತು. ಎತ್ತುಗಳ ಜೊತೆಯಲ್ಲಿ ರೈತ ರಾಜಣ್ಣ ಮುಕ್ಕನಕಟ್ಟಿ ಎಂಬುವವರು ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಎತ್ತು ವಿದ್ಯುತ್ ಕಂಬದ ಹತ್ತಿರ ಹೋದಾಗ ಆಕಸ್ಮಿಕವಾಗಿ ವಿದ್ಯುತ್ ಕಂಬಕ್ಕೆ ತಗುಲಿದೆ. ಹೀಗಾಗಿ, ತಕ್ಷಣವೇ ವಿದ್ಯುತ್ ಪ್ರವಹಿಸಿ ಹೋರಿ ಮೃತಪಟ್ಟಿದೆ. ಬಚಾವ್ ಮಾಡಲು ಹೋದ ರೈತನಿಗೂ ವಿದ್ಯುತ್ ಸಂಚಾರದ ಅನುಭವವಾಗಿದೆ. ಅದೃಷ್ಟವಶಾತ್ ರೈತನ ಸಮಯ ಪ್ರಜ್ಞೆಯಿಂದ ಅವ್ರಿಗೆ ಏನೂ ಆಗಿಲ್ಲ. ತಕ್ಷಣವೇ ಅಲ್ಲಿಂದ ಮತ್ತೊಂದು ಎತ್ತನ್ನು ಎಳೆದುಕೊಂಡು ಹೊರಗಡೆ ಬಂದಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ ಬಸವನ ಹೊಂಡದಲ್ಲಿ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಸಾವು..! ಪೊಲೀಸರಿಂದ ರಕ್ಷಣೆ, ಆದ್ರೂ ಬದುಕಲಿಲ್ಲ ಜೀವ.!
ಮುಂಡಗೋಡ ಪಟ್ಟಣದ ಬಸವನ ಹೊಂಡದಲ್ಲಿ ಆತ್ನಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಸ್ಥಳೀಯರ ಸಮಯಪ್ರಜ್ಞೆಯಿಂದ ರಕ್ಷಣೆ ಮಾಡಲಾಗಿತ್ತು. ಆದ್ರೂ ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು, ದುರಂತ ಅಂದ್ರೆ, ಅದೇಷ್ಟೇ ಚಿಕಿತ್ಸೆ ನೀಡಿದ್ರೂ ಮಹಿಳೆ ಬದುಕುಳಿಯಲಿಲ್ಲ. ಅಂದಹಾಗೆ, ಮುಂಡಗೋಡ ಅಂಬೇಡ್ಲರ ಓಣಿಯ ರುಕ್ಮೀಣಿ ವಡ್ಡರ್ ಎನ್ನುವ 45 ವರ್ಷದ ಮಹಿಳೆ, ಮಂಗಳವಾರ ಬೆಳಿಗ್ಗೆ ಅದ್ಯಾವುದೋ ಕಾರಣಕ್ಕೆ ಮನನೊಂದು ಬಸವನ ಹೊಂಡಕ್ಕೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಹೀಗಾಗಿ ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪಿಎಸ್ಐ ಹಾಗೂ ಪೊಲೀಸರು ಮಹಿಳೆಯನ್ನು ಹೊಂಡದಿಂದ ಮೇಲಕ್ಕೇತ್ತಿ ಬಚಾವ್ ಮಾಡಿದ್ದಾರೆ. ಆದ್ರೆ, ತೀರ ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕಿತ್ಸೆ ನೀಡಲು ಪ್ರಯತ್ನಿಸಲಾಗಿದೆ. ಆದ್ರೂ ಮಹಿಳೆ ಪ್ರಾಣ ಉಳಿದಿಲ್ಲ.
ಪಾಳಾದಲ್ಲಿ ನಿರಂತರ ಮಳೆ ಮನೆ ಮೇಲೆ ಬಿದ್ದ ಮರ, ಇಬ್ಬರಿಗೆ ಸಣ್ಣಪುಟ್ಟ ಗಾಯ, ಮನೆಗೆ ಹಾನಿ..!
ಮುಂಡಗೋಡ ತಾಲೂಕಿನಲ್ಲಿ ಮಳೆಯ ಅವಾಂತರಗಳು ಶುರುವಾಗಿವೆ. ಪಾಳಾ ಗ್ರಾಮದಲ್ಲಿ ನಿನ್ನೆ ರಾತ್ರಿ ಸುರಿದ ಮಳೆ, ಗಾಳಿಯಿಂದ ಮನೆಯ ಮೇಲೆ ಮರ ಬಿದ್ದು ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಮನೆಗೆ ಹಾನಿಯಾಗಿದೆ. ಧಾರಾಕಾರ ಮಳೆ ಮತ್ತು ಗಾಳಿಯಿಂದ ಬದ್ರಾಪುರದ ಹೊಸನಗರದಲ್ಲಿ ರಜಿಯಾ ಖಾಸಿಂಸಾಬ್ ಶೇಕ್ ಎಂಬುವರ ಮನೆ ಮೇಲೆ, ಮನೆ ಪಕ್ಕದಲ್ಲಿ ಇದ್ದ ಬೃಹತ್ ಗಾತ್ರದ ಮರ ಬಿದ್ದಿದೆ. ಮನೆ ಮೇಲೆ ಬಿದ್ದು ಹಾನಿಯಾಗಿದೆ. ಮನೆಯಲ್ಲಿದ್ದ ರಜಿಯಾ ಬೇಗಂ ಮತ್ತು ಮಗನಾದ ಮಕ್ಬುಲ್ ಅಹಮದ್ ಶೇಕ್ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ. ಹೀಗಾಗಿ, ಘಟನೆ ನಡೆದ ಬಳಿಕ ತಡರಾತ್ರಿ ಮನೆಯಲ್ಲಿದ್ದ ಎಲ್ಲರನ್ನೂ ಬೇರೆ ಕಡೆ ಸ್ಥಳಾಂತರ ಮಾಡಲಾಗಿದೆ.
ಉ.ಕನ್ನಡದಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ, ನಿರಂತರ ಮಳೆ ಹಿನ್ನೆಲೆ ಡಿಸಿ ಆದೇಶ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಇನ್ನಿಲ್ಲದ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಜಿಲ್ಲೆಯ ಎಲ್ಲಾ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಸೋಮವಾರವೂ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ, ಯಲ್ಲಾಪುರ, ಮುಂಡಗೋಡ ಹಾಗೂ ಹಳಿಯಾಳ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಸೋಮವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 22 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..
ಕಾರವಾರದಲ್ಲಿ ಸಿಎಂ ಅಧ್ಯಕ್ಷತೆಯ ಸಭೆ, ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ನೀಡಿದ ಖಡಕ್ ಸೂಚನೆಗಳೇನು ಗೊತ್ತಾ..?
ಕಾರವಾರ: ಮುಖ್ಯಮಂತ್ರಿ ಅವರು ಕಾರವಾರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆಲವು ಪ್ರಮುಖ ಸೂಚನೆಗಳನ್ನು ನೀಡಿದರು. ತಕ್ಷಣ ಹಾನಿಯ ವರದಿ ನೀಡಿ..! ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ನಷ್ಟಕ್ಕೆ ಎನ್ಡಿಆರ್ಎಫ್ ನಿಯಮದ ಪ್ರಕಾರ ಪರಿಹಾರ ಒದಗಿಸಲು ತಕ್ಷಣ ಹಾನಿಯ ವರದಿ ಸಲ್ಲಿಸಿ. ಕದ್ರಾ ಅಣೆಕಟ್ಟೆಯಿಂದ ಹೊರಬಿಡುವ ನೀರಿನಿಂದ ತೊಂದರೆಗೊಳಗಾಗುವ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಬಗ್ಗೆ ಅಂತಿಮ ತೀರ್ಮಾನ ಮಾಡಿ. ಮಳೆ ಅನಾಹುತ ಮತ್ತು ಪ್ರವಾಹದಿಂದ ಆದ ಜೀವಹಾನಿಗೆ ತುರ್ತಾಗಿ ಪರಿಹಾರ ಕೊಡಬೇಕು. ಕೋಸ್ಟಲ್ ಲೈನ್ ನಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಅಗತ್ಯ ಇರುವ ಕಡೆ ವೈರ್ ಗಳ ದುರಸ್ತಿ ಮತ್ತು ಬದಲಾವಣೆಗೆ ಮಾಡಬೇಕು. ಹೆದ್ದಾರಿ ಟೋಲ್ ಸಂಗ್ರಹ ಬೇಡ..! ಜಿಲ್ಲೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೆ ಹೆದ್ದಾರಿ ಪ್ರಾಧಿಕಾರದವರು ಟೋಲ್ ಏಕೆ ಸಂಗ್ರಹಿಸುತ್ತಿದ್ದೀರಿ? ಇದು ಸರಿಯಿಲ್ಲ. 2016ಕ್ಕೆ ಕಾಮಗಾರಿ ಮುಕ್ತಾಯಗೊಳಿಸಬೇಕಿದ್ದರೂ ಸಹ ಇದುವರೆಗೆ...
ಶಿರೂರು ಗುಡ್ಡ ಕುಸಿತದಿಂದ ಹಾನಿಯಾದ ಮೀನುಗಾರರಿಗೆ ಪರಿಹಾರ ವಿತರಿಸಿದ ಸಚಿವ ಮಂಕಾಳ ವೈದ್ಯ, ನಾಳೆ ಸಿಎಂ ಜಿಲ್ಲೆಗೆ..!
ಕಾರವಾರ; ಅಂಕೋಲಾ ತಾಲೂಕಿನ ಶಿರೂರು ಬಳಿಯ ಗುಡ್ಡ ಕುಸಿತದಿಂದ ಹಾನಿಯಾದ ಉಳುವರೆ ಗ್ರಾಮದ ಮೀನುಗಾರರ ಕುಟುಂಬಗಳ 59 ಜನರಿಗೆ ರೂ. 25000 ದಂತೆ 14,75,000 ಮೊತ್ತದ ಚೆಕ್ನ್ನು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಶನಿವಾರ ವಿತರಿಸಿದರು. ನಂತರ ಮಾತನಾಡಿದ ಸಚಿವರು, ಗುಡ್ಡಕುಸಿತದಿಂದ ಹಾನಿಯಾದ ಉಳುವರೆ ಗ್ರಾಮದ ಮೀನುಗಾರರಿಗೆ ಸರ್ಕಾರದ ವತಿಯಿಂದ ಎಲ್ಲಾ ಅಗತ್ಯ ನೆರವು ಒದಗಿಸಲು ಬದ್ದವಾಗಿದ್ದು, ಈಗಾಗಲೇ ಇಲ್ಲಿನ ಜನರಿಗೆ ಅಗತ್ಯ ನಿವೇಶನ ನೀಡಲು ಸ್ಥಳ ಗುರುತಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದರು. ಪ್ರಸ್ತುತ ತುರ್ತು ಕ್ರಮವಾಗಿ ಮೀನು ಬಲೆ, ದೋಣಿ ದುರಸ್ತಿ ಮತ್ತಿತರ ಕಾರ್ಯಗಳಿಗಾಗಿ ರೂ.25000 ದ ಪರಿಹಾರ ವಿತರಿಸಲಾಗಿದ್ದು, ಈ ಅವಘಡದಲ್ಲಿ ಮನೆ ಕಳೆದುಕೊಂಡವರಿಗೆ 1.20 ಲಕ್ಷ ಮತ್ತು ಮೃತಪಟ್ಟ ಕುಟುಂಬದ ವಾರಿಸುದಾರರಿಗೆ 5 ಲಕ್ಷ ರೂ. ಗಳ ಚಕ್ ವಿತರಿಸಲಾಗಿದ್ದು, ಮೀನುಗಾರಿಕಾ ಇಲಾಖೆ ವತಿಯಿಂದ ಇನ್ನೂ ಹೆಚ್ಚಿನ ಪರಿಹಾರ ಒದಗಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ...
PWD ರಸ್ತೆಯಲ್ಲಿ ಯಮರೂಪಿ ಗುಂಡಿಗಳು, ಖುದ್ದಾಗಿ ನಿಂತು ಗುಂಡಿ ಮುಚ್ಚಿಸಿದ ಹುನಗುಂದ ಗ್ರಾಪಂ ಅಧ್ಯಕ್ಷರು..!
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ರಸ್ತೆಗಳು ಹದಗೆಟ್ಟು ಹಳ್ಳ ಹಿಡಿದಿವೆ. ಅದ್ರಲ್ಲೂ ಇಂದೂರಿನಿಂದ ಕ್ಯಾಂಪ್ ನಂಬರ್ 8 ರ ಮಾರ್ಗವಾಗಿ ಹುನಗುಂದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ, ಅಗಡಿ ವರೆಗೂ ನಡೆದಾಡಲೂ ಆಗದ ಸ್ಥಿತಿಯಲ್ಲಿದೆ. ಈ ಮಾರ್ಗದಿಂದ ಸಂಚರಿಸುವ ಬಸ್ ಗಳು ಎದ್ದು, ಬಿದ್ದು ಸಾಗುವ ಹಾಗಿದೆ. ಹೀಗಾಗಿ, ಹುನಗುಂದ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರುಗಳು ಒಂದೊಳ್ಳೆ ಕೆಲಸ ಮಾಡಿದ್ದಾರೆ. ರಸ್ತೆಯಲ್ಲಿ ಯಮರೂಪಿಯಾಗಿದ್ದ ಗುಂಡಿಗಳನ್ನು ಮುಚ್ಚಿಸುವ ಕಾರ್ಯ ಮಾಡಿದ್ದಾರೆ. ಅಂದಹಾಗೆ, PWD ಇಲಾಖೆ ಅಧಿಕಾರಿಗಳಿಗೆ ಈ ರಸ್ತೆ ಪ್ರಾಬ್ಲೆಂ ಹೇಳಿಕೊಂಡಿದ್ದ ಗ್ರಾಪಂ ಅಧ್ಯಕ್ಷರಿಗೆ, ಅಲ್ಲಿನ ಅಧಿಕಾರಿಗಳು, ನಮಗೆ ಇವಾಗ ಗುಂಡಿ ಮುಚ್ಚಿಸಲು ಸಾಧ್ಯವಿಲ್ಲ, ನಮ್ಮಲ್ಲಿ ಹಣವಿಲ್ಲ ಅಂತಾ ಕೈ ಎತ್ತಿದ್ದರಂತೆ, ಜಸ್ಟ್ ಜಲ್ಲಿ ಕಲ್ಲು ನೀಡುತ್ತೇವೆ ಅದನ್ನ ನೀವೇ ಲೇಬರ್ ಮೂಲಕ ಮುಂದೆ ನಿಂತು ಗುಂಡಿ ಮುಚ್ಚಿಸಿ ಅಂತಾ ಹೇಳಿದ್ದರಂತೆ, ಹೀಗಾಗಿ, ಇಂದು ಇಡೀ ದಿನ ಗ್ರಾಪಂ ಅಧ್ಯಕ್ಷರು, ಸದಸ್ಯರು ಸೇರಿ ಮುಂದೆ ನಿಂತು ರಸ್ತೆ ಗುಂಡಿ ಮುಚ್ಚಿಸಿದ್ದಾರೆ. ಇದ್ರೊಂದಿಗೆ,...
ನಾಳೆ ರವಿವಾರ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಹಡಪದ ಅಪ್ಪಣ್ಣ ಜಯಂತಿ ಉತ್ಸವ- ಸರ್ವರಿಗೂ ಆಮಂತ್ರಣ ಕೋರಿದ ರಾಜ್ಯಾಧ್ಯಕ್ಷ
ಮುಂಡಗೋಡ: ನಾಳೆ ರವಿವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯಮಟ್ಟದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಆಚರಿಸಿಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮಾರಂಭದಲ್ಲಿ ಭಾಗಿಯಾಗಲಿದ್ದು, ರಾಜ್ಯದ ಹಡಪದ ಅಪ್ಪಣ್ಣವರ ಸಮಾಜದ ಬಾಂಧವರು ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಹಡಪದ ಅಪ್ಪಣ್ಣ ಸಮಾಜದ ರಾಜ್ಯಾಧ್ಯಕ್ಷ ಸಿದ್ದಪ್ಪ ಹಡಪದ ವನವಿ ಮಾಡಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರವಿವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ, ತಂಗಡಗಿಯ ಹಡಪದ ಅಪ್ಪಣ್ಣ ದೇವರ ಮಹಾಸಂಸ್ಥಾನ ಮಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳ ಸಾನಿಧ್ಯದಲ್ಲಿ, ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಅಲ್ಲದೇ ಸಮಾರಂಭದಲ್ಲಿ ಕೇಂದ್ರ ಸಚಿವರು ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ ಅಂತಾ ಸಿದ್ದಪ್ಪ ಹಡಪದ್ ಮಾಹಿತಿ ನೀಡಿದ್ದಾರೆ.