ಶಿರಸಿ ಸಮೀಪ ಸ್ಕೂಟಿ, ಕಾರು ಅಪಘಾತ, ನಂದಿಗಟ್ಟಾ ಮೂಲದ ಗ್ರಾಪಂ ಕಾರ್ಯದರ್ಶಿ ದಾರುಣ ಸಾವು..!

ಶಿರಸಿ ಸಮೀಪ ಸ್ಕೂಟಿ, ಕಾರು ಅಪಘಾತ, ನಂದಿಗಟ್ಟಾ ಮೂಲದ ಗ್ರಾಪಂ ಕಾರ್ಯದರ್ಶಿ ದಾರುಣ ಸಾವು..!

ಮುಂಡಗೋಡ: ತಾಲೂಕಿನ ನಂದಿಗಟ್ಟಾದ ಮಾರುತಿ ರಾಧಾಪುರ ಅಪಘಾತದಲ್ಲಿ ಮೃತಪಟ್ಟಿದ್ದಾರೆ‌. ಶಿರಸಿ ಸಮೀಪದ ಕೋಳಿಗಾರ್ ಬಳಿ ನಡೆದ ಸ್ಕೂಟಿ ಹಾಗೂ ಕಾರ್ ನಡುವಿನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಶಿರಸಿ ತಾಲೂಕಿನ ಸಾಲ್ಕಣಿ ಗ್ರಾಮ ಪಂಚಾಯತಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಾರುತಿ ರಾದಾಪುರ, ಗುರುವಾರ ಬೆಳಿಗ್ಗೆ ಕರ್ತವ್ಯಕ್ಕಾಗಿ ಆಫೀಸಿಗೆ ತೆರಳುತ್ತಿದ್ದ ವೇಳೆ, ಕೋಳಿಗಾರ ಸಮೀಪ ಸ್ಕೂಟಿ ಹಾಗು ಕಾರು ಮುಖಾಮುಕಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಶಿರಸಿ ಆಸ್ಪತ್ರೆಗೆ ದಾಖಲಿಸಲು ರವಾನಿಸುವ ಸಂದರ್ಭದಲ್ಲೇ ದಾರಿ ಮದ್ಯೆ ಅಸು ನೀಗಿದ್ದಾರೆ.

ಗ್ರಾಮಕ್ಕೆ ಬಾರದ ಬಸ್, ಹುನಗುಂದ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ..!

ಗ್ರಾಮಕ್ಕೆ ಬಾರದ ಬಸ್, ಹುನಗುಂದ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ..!

ಕಳೆದ ಒಂದು ವಾರದಿಂದ ಮುಂಡಗೋಡ ತಾಲೂಕಿನ ಹುನಗುಂದಕ್ಕೆ ಸಾರಿಗೆ ಬಸ್ ಸಂಚಾರ ಬಹುತೇಕ ಸ್ಥಗಿತವಾಗಿದೆ. KSRTC ಬಸ್ ಚಾಲಕ ಹಾಗೂ ನಿರ್ವಾಹಕರ ಬೇಜವಾಬ್ದಾರಿಗಳಿಂದ ನಿತ್ಯವೂ ವಿದ್ಯಾಭ್ಯಾಸಕ್ಕಾಗಿ ಮುಂಡಗೋಡ ಸೇರಿದಂತೆ ವಿವಿದೆಡೆ ಪ್ರಯಾಣಿಸುವ ನೂರಾರು ವಿದ್ಯಾರ್ಥಿಗಳ ಜೀವನ ಅತಂತ್ರವಾಗಿದೆ. ಹೀಗಾಗಿ, ಗುರುವಾರ ಬೆಳಿಗ್ಗೆ ವಿದ್ಯಾರ್ಥಿಗಳು ಬಸ್ ಗಾಗಿ ಪ್ರತಿಭಟನೆ ನಡೆಸಿದ್ರು. ಹುನಗುಂದ ಬಸ್ ನಿಲ್ದಾಣದ ಬಳಿ ಬಸ್ ಗಾಗಿ ವಿದ್ಯಾರ್ಥಿಗಳು ಬೆಳಗ್ಗಿನಿಂದಲೂ ಕಾಯ್ದು ಕುಳಿತಿದ್ದರು. ಆದ್ರೆ, ಬಸ್ ಬರಲೇ ಇಲ್ಲ. ಹೀಗಾಗಿ, ವಿದ್ಯಾರ್ಥಿಗಳಿಗೆ ಬಸ್ ಬರದೇ ಇರುವ ಕಾರಣಕ್ಕೆ ವಾಪಸ್ ಮನೆಗೆ ತೆರಳುವ ಅನಿವಾರ್ಯತೆ ಏದುರಾಗಿದೆ. ಹೀಗಾಗಿ ಪೋಷಕರು ಹಾಗೂ ಗ್ರಾಮಸ್ಥರು ವಿದ್ಯಾರ್ಥಿಗಳೊಂದಿಗೆ ಬಸ್ ಗಾಗಿ ಪ್ರತಿಭಟನೆ ನಡೆಸಿದ್ದಾರೆ. KSRTC ಅಧಿಕಾರಿಗಳಿಗೆ ದೂರವಾಣಿ ಮುಖಾಂತರ ತರಾಟೆಗೆ ಪಡೆದ ಗ್ರಾಮಸ್ಥರು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಪಂಪಸೆಟ್ ದುರಸ್ತಿ ವೇಳೆ ವಿದ್ಯುತ್ ತಗುಲಿ ತಂದೆ ಮಗ ದಾರುಣ ಸಾವು

ಪಂಪಸೆಟ್ ದುರಸ್ತಿ ವೇಳೆ ವಿದ್ಯುತ್ ತಗುಲಿ ತಂದೆ ಮಗ ದಾರುಣ ಸಾವು

ಹಾವೇರಿ: ಪಂಪ್‌ಸೆಟ್ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ತಂದೆ-ಮಗ ಸಾವನ್ನಪ್ಪಿರುವ ಘಟನೆ ರಾಣೇಬೆನ್ನೂರು ತಾಲ್ಲೂಕಿನ ಪತ್ತೇಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕರಬಸಪ್ಪ ಕಡೇನಾಯಕನಹಳ್ಳಿ (50) ಹಾಗೂ ಅವರ ಪುತ್ರ ದರ್ಶನ ಕಡೇನಾಯಕನಹಳ್ಳಿ (26) ಎಂದು ಗುರುತಿಸಲಾಗಿದೆ. ಕರಬಸಪ್ಪ ಮತ್ತು ದರ್ಶನ ಇಬ್ಬರೂ ಸೇರಿಕೊಂಡು ಪಂಪ್ ಸೆಟ್ ದುರಸ್ತಿ ಮಾಡಲು ಮುಂದಾಗಿದ್ದರು. ಭತ್ತದ ಬೆಳೆಗೆ ನೀರು ಹಾಯಿಸಲು ಮೋಟಾರ್‌ ಆನ್ ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ವಿದ್ಯುತ್ ಸ್ಪರ್ಶಕ್ಕೆ ಪಂಪ್ ಸೆಟ್ ಮೇಲೆಯೇ ಬಿದ್ದು ಇಬ್ಬರೂ ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಈ ರೀತಿಯ ವಿದ್ಯುತ್ ಅವಘಡಗಳು ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಸಾರ್ವಜನಿಕರು ಮುಂಜಾಗ್ರತಾ ಕ್ರಮವಹಿಸಿ ಎಂದು ಹೆಸ್ಕಾಂ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಕಾಳಿನದಿ ಸೇತುವೆ ಕುಸಿತ: ಉತ್ತರ ಕನ್ನಡ ಡಿಸಿಯಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ

ಕಾಳಿನದಿ ಸೇತುವೆ ಕುಸಿತ: ಉತ್ತರ ಕನ್ನಡ ಡಿಸಿಯಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ

ಕಾರವಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ ಕುರಿತು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು. ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಘಟನೆಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಸೇತುವೆ ಕುಸಿದ ಸಂದರ್ಭದಲ್ಲಿ ಗಾಯಗೊಂಡ ಲಾರಿ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಕಾರ್ಯಚರಣೆಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಹೆಚ್ಚುವರಿಯಾಗಿ, ಸೇತುವೆಯ ಬಲವತ್ತತೆಯ ಪರಿಶೀಲನೆಗಾಗಿ ಮತ್ತು ಪ್ರದೇಶದಲ್ಲಿನ ಎಲ್ಲಾ ಸೇತುವೆಗಳ ಸುರಕ್ಷತೆಯನ್ನು ಖಚಿತಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಅಧಿಕೃತ ಪತ್ರವನ್ನು ಕಳುಹಿಸಲಾಗಿದೆ ಎಂದು ವಿವರಿಸಿದರು..

ಕಾರವಾರ ಕೋಡಿಭಾಗದಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಕುಸಿತ..!

ಕಾರವಾರ ಕೋಡಿಭಾಗದಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಕುಸಿತ..!

ಕಾರವಾರದ ಕೋಡಿಭಾಗನಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರೋ ಸೇತುವೆ ಕುಸಿದು ಬಿದ್ದಿದೆ‌. ಪರಿಣಾಮ ಅದೇ ವೇಳೆ ಸಂಚರಿಸುತ್ತಿದ್ದ ಲಾರಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಹೀಗಾಗಿ, ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರಿಂದ ಲಾರಿ ಚಾಲಕನ ರಕ್ಷಣೆ ಮಾಡಲಾಗಿದೆ. ಅಂದಹಾಗೆ, ಕಾರವಾರ ನಗರದ ಕೋಡಿಭಾಗ್ ನಲ್ಲಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿರ್ಮಿಸಿದ್ದ ಸುಮಾರು 50 ವರ್ಷ ಹಳೆಯದಾದ ಸೇತುವೆ ಏಕಾ ಏಕಿ ಕುಸಿದು ಬಿದ್ದಿದೆ. ಸದ್ಯ ನದಿಗೆ ನಿರ್ಮಿಸಿರುವ ಹೊಸ ಸೇತುವೆಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಪೊಲೀಸರು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.

ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆ- ಅಪಾರ ಹಾನಿ, ಒಟ್ಟೂ ಹಾನಿಯ ವಿವರ ಇಲ್ಲಿದೆ ನೋಡಿ..!

ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆ- ಅಪಾರ ಹಾನಿ, ಒಟ್ಟೂ ಹಾನಿಯ ವಿವರ ಇಲ್ಲಿದೆ ನೋಡಿ..!

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಜುಲೈ ಮಾಹೆಯಲ್ಲಿ ವಾಡಿಕೆ ಮಳೆಗಿಂತ ಶೇ. 81 ರಷ್ಟು ಅತ್ಯಧಿಕ ಮಳೆಯಾಗಿದ್ದು, ಜಿಲ್ಲೆಯಲ್ಲಿ ಜೂನ್ ನಿಂದ ಇದುವರೆಗೆ ಸುರಿದ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಜುಲೈ ಮಾಹೆಯಲ್ಲಿ ವಾಡಿಕೆ ಮಳೆಯ ಪ್ರಮಾಣ 993. 4 ಮಿಮಿ ಆಗಿದ್ದು, ಈ ಬಾರಿ 1798.2 ಮಿಮೀ ಮಳೆ ಬೀಳುವ ಮೂಲಕ ಶೇ.81 ರಷ್ಟು ಅತ್ಯಧಿಕ ಮಳೆ ದಾಖಲಾಗಿದ್ದು, ಜನವರಿ 2024 ರಿಂದ ಇಲ್ಲಿಯವರೆಗೆ 1882.3 ಮಿಮಿ ವಾಡಿಕೆ ಮಳೆ ಇದ್ದು, 2745.7 ಮಿಮೀ ಮಳೆ ಸುರಿಯುವ ಮೂಲಕ ಶೇ.46 ರಷ್ಟು ಅಧಿಕ ಮಳೆಯಾಗಿದೆ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಇದುವರೆಗೆ 13 ಜೀವ ಹಾನಿ ಪ್ರಕರಣಗಳಿಗೆ 65 ಲಕ್ಷ ರೂ ಪರಿಹಾರ ನೀಡಲಾಗಿದ್ದು, ತೀವ್ರ ಮತ್ತು ಸಂಪೂರ್ಣ ಹಾನಿಯಾದ 211 ಮನೆಗಳಲ್ಲಿ 148 ಮನೆಗಳಿಗೆ 1,52,40,000 ರೂ ಗಳ ಪರಿಹಾರ ಹಾಗೂ ಭಾಗಶಃ ಹಾನಿಯಾದ 724 ಮನೆಗಳಲ್ಲಿ 449 ಮನೆಗಳಿಗೆ 24,44,000 ರೂ ಗಳ ನೆರವು ನೀಡಲಾಗಿದ್ದು, 22...

ಉ. ಕನ್ನಡ ಜಿಲ್ಲೆಯಲ್ಲಿ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ಉ. ಕನ್ನಡ ಜಿಲ್ಲೆಯಲ್ಲಿ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ, ದಾಂಡೇಲಿ, ಶಿರಸಿ ಹಾಗೂ ಸಿದ್ದಾಪುರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶನಿವಾರ ಅಗಷ್ಟ 3 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದಿನ ಮಳೆಯ ಹಾನಿ..! ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 4 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಕಾರವಾರದ 2, ಅಂಕೋಲ ದ 1, ಹೊನ್ನಾವರ ದ 9 ಮತ್ತು ಕುಮಟಾ ದ 2 ಸೇರಿದಂತೆ ಒಟ್ಟು 14 ಕಾಳಜಿ ಕೇಂದ್ರಗಳಲ್ಲಿ 503 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ.

ಜಿಲ್ಲೆಯಲ್ಲಿ ನಾಳೆ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ಜಿಲ್ಲೆಯಲ್ಲಿ ನಾಳೆ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶುಕ್ರವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶುಕ್ರವಾರ ಅಗಷ್ಟ 2 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದಿನ ಮಳೆಯ ಹಾನಿ..! ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 13 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಕಾರವಾರದ 2, ಅಂಕೋಲ ದ 1, ಹೊನ್ನಾವರ ದ 9,ಜೋಯಿಡಾ ದ 1 ಮತ್ತು ಕುಮಟಾ ದ 1 ಸೇರಿದಂತೆ ಒಟ್ಟು 14 ಕಾಳಜಿ ಕೇಂದ್ರಗಳಲ್ಲಿ 550 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ.

ಜಿಲ್ಲೆಯಲ್ಲಿ ಇಂದು ಗುರುವಾರ ಶಾಲಾ ಕಾಲೇಜುಗಳಿಗೆ ಮಳೆಯ ರಜೆ..!

ಜಿಲ್ಲೆಯಲ್ಲಿ ಇಂದು ಗುರುವಾರ ಶಾಲಾ ಕಾಲೇಜುಗಳಿಗೆ ಮಳೆಯ ರಜೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ಗುರುವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ಇಂದು ಗುರುವಾರ ಅಗಷ್ಟ 1 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ಮಳೆಯ ಅಬ್ಬರ ಹಿನ್ನೆಲೆ, ಇಂದು ಬುಧವಾರ ಶಾಲಾ ಕಾಲೇಜುಗಳಿಗೆ ರಜೆ..!

ಜಿಲ್ಲೆಯಲ್ಲಿ ಮಳೆಯ ಅಬ್ಬರ ಹಿನ್ನೆಲೆ, ಇಂದು ಬುಧವಾರ ಶಾಲಾ ಕಾಲೇಜುಗಳಿಗೆ ರಜೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಧ್ಯಂತ ಅವಾಂತರಗಳು ಸೃಷ್ಟಿಯಾಗಿವೆ. ಹೀಗಾಗಿ, ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ಬುಧವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ಇಂದು ಬುಧವಾರ ದಿನಾಂಕ: 31 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

error: Content is protected !!