ಮುಂಡಗೋಡ: ಚಿಕ್ಕೋಡಿಯಲ್ಲಿ ಜೈನ ಮುನಿಯ ಭೀಕರ ಹತ್ಯೆ ಖಂಡಿಸಿ ಮುಂಡಗೋಡ ತಾಲೂಕಿನ ಜೈನ ಸಮಾಜದ ಬಾಂಧವರು ಪ್ರತಿಭಟನಾ ಮೆರವಣಿಗೆ ನಡೆಸಿದ್ರು. ಪಟ್ಟಣದ ಶಿರಸಿ ರಸ್ತೆಯಲ್ಲಿರೋ ಜಿನಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆ, ಶಿವಾಜಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಘಟನೆಯನ್ನು ಉಗ್ರವಾಗಿ ಖಂಡಿಸಿದ್ರು. ಮುನಿಗಳಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿದ್ರು. ನಂತರ ತಹಶೀಲ್ದಾರ ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಿದ್ರು. ಮುನಿಗಳ ಮೇಲಿನ ಭೀಕರ ಹತ್ಯೆ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆ ಒದಗಿಸಬೇಕು, ಅಲ್ಲದೇ ಜೈನ ಮುನಿಗಳಿಗೆ ಸೂಕ್ತ ರಕ್ಷಣೆ ನೀಡಬೇಕು ಅಂತಾ ಮನವಿಯಲ್ಲಿ ಆಗ್ರಹಿಸಿದ್ರು. ಈ ವೇಳೆ ತಾಲೂಕಿನ ವಿವಿಧ ಗ್ರಾಮಗಳ ಜೈನ ಸಮಾಜದ ಮುಖಂಡರು, ಮಹಿಳೆಯರು ಭಾಗಿಯಾಗಿದ್ರು.
Top Stories
ಮಹಾರಾಷ್ಟ್ರದಿಂದ ಕಬ್ಬು ಕಟಾವಿಗೆ ಬಂದಿದ್ದ ಅಪ್ರಾಪ್ತೆಯನ್ನ ಆ ಹುಡುಗ ಅತ್ಯಾಚಾರ ಮಾಡಿದ್ನಾ..? ಹಾಗಿದ್ರೆ ಕೇಸ್ ಏನಾಯ್ತು..?
ಟ್ಯಾಕ್ಸ್ ವಸೂಲಿಯಲ್ಲಿ ಮುಂಡಗೋಡ ತಾಲೂಕು ರಾಜ್ಯಕ್ಕೇ ಪ್ರಥಮ..! ತಾಪಂ ಗ್ರಾಪಂ ಅಧಿಕಾರಿ, ಸಿಬ್ಬಂದಿಗಳ ಸಾಧನೆ..!!
ಮುಂಡಗೋಡ ಬೆಂಡಿಗೇರಿ ಪೆಟ್ರೊಲ್ ಬಂಕ್ ಹತ್ತಿರ ಬೈಕ್ ಅಪಘಾತ, ವೃದ್ದನ ಕಾಲು ಕಟ್..!
ಮಳಗಿ-ಬನವಾಸಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಓರ್ವ ಸ್ಥಳದಲ್ಲೇ ಓರ್ವ ಸಾವು, ಮತ್ತೋರ್ವ ಗಂಭೀರ..!
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶುಕ್ರವಾರ ಸರ್ಕಾರಿ ರಜೆ ಘೋಷಣೆ..! ಶಾಲಾ ಕಾಲೇಜುಗಳಿಗೆ ರಜೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ..! ನಾಳೆಯ ಬೆಳಗಾವಿ ಕೈ ಕಾರ್ಯಕ್ರಮ ರದ್ದು..!
ಚಿಕ್ಕೋಡಿಯಲ್ಲಿ ಜೈನ ಮುನಿಯ ಬರ್ಬರ ಹತ್ಯೆಗೆ ಖಂಡನೆ, ಮುಂಡಗೋಡ ತಾಲೂಕಾ ಜೈನ ಸಮಾಜದಿಂದ ಪ್ರತಿಭಟನಾ ಮೆರವಣಿಗೆ..!
ಕಲಘಟಗಿ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಸಿ.ಎಂ. ನಿಂಬಣ್ಣವರ್ ವಿಧಿವಶ..!
ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಸಿ.ಎಂ.ನಿಂಬಣ್ಣವರ್(76) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಿಂಬಣ್ಣವರ್ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಅವ್ರು, 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು.
ಚಿಕ್ಕೋಡಿಯಲ್ಲಿ ದಿಗಂಬರ ಜೈನ ಮುನಿಯ ಭೀಕರ ಹತ್ಯೆ, ಅಹಿಂಸಾ ಪರಂಪರೆಯ ಮುನಿಶ್ರೀ ಗೆ ಇದೇಂಥಾ ಸಾವು..?
ಚಿಕ್ಕೋಡಿ: ಜುಲೈ 6 ರಿಂದ ನಾಪತ್ತೆಯಾಗಿದ್ದ ಹಿರೇಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಾಗಿದೆ ಅನ್ನೋ ಬೆಚ್ಚಿ ಬೀಳಿಸುವ ಮಾಹಿತಿ ಲಭ್ಯವಾಗಿದೆ. ಹತ್ಯೆ ಕೇಸಿನಲ್ಲಿ ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ಕೈಗೊಂಡಿರೋ ಬೆಳಗಾವಿ ಪೊಲೀಸರು, ಜೈನ ಮುನಿಯ ಶವಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ. ಅದು ನಂದಿ ಪರ್ವತ ಆಶ್ರಮ..! ಬೆಳಗಾವಿ ಜಿಲ್ಲೆ ಚಿಕ್ಕೊಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದಲ್ಲಿ ಸದ್ಯ ನೀರವಮೌನ ಆವರಿಸಿದೆ. ಜೈನ ಮುನಿಯ ಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆ ಭಕ್ತರು ಆಶ್ರಮದತ್ತ ಧಾವಿಸಿ ಬರುತ್ತಿದ್ದಾರೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಹಿರೇಕೋಡಿ ಗ್ರಾಮದಲ್ಲಿ ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಕೊಟ್ಟ ಹಣ ಕೇಳಿದ್ದಕ್ಕಾ..? ಅಸಲು, ಆಶ್ರಮದಿಂದ ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೈನ ಮುನಿಯ ಹತ್ಯೆ ಮಾಡಿದ್ದೇವೆ ಅಂತಾ ಆರೋಪಿಗಳು ಪೊಲೀಸರ ಎದುರು ತಪ್ಪೊಪ್ಪಿಕೊಂಡಿದ್ದಾರೆ ಅಂತಾ ಬೆಳಗಾವಿ ಎಸ್ಪಿ ಡಾ.ಸಂದೀಪ ಪಾಟೀಲ್ ಹೇಳಿದ್ದಾರೆ. ಸದ್ಯ ಆರೋಪಿಗಳು ಮೃತದೇಹ ಎಲ್ಲಿ ಎಸೆದಿದ್ದಾರೆ ಅನ್ನೋ...
ಮುಂಡಗೋಡಿನ ಪತ್ರಕರ್ತ ಶಾಂತೇಶಕುಮಾರ್, ಜಿ.ಎಸ್. ಹೆಗಡೆ ಅಜ್ಜೀಬಳ ದತ್ತಿ ನಿಧಿ ಪುರಸ್ಕಾರಕ್ಕೆ ಆಯ್ಕೆ..!
ಮುಂಡಗೋಡಿನ ಪತ್ರಕರ್ತ ಮಿತ್ರ ಶಾಂತೇಶಕುಮಾರ್ ಬೆನಕನಕೊಪ್ಪ, ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಜಿ.ಎಸ್. ಹೆಗಡೆ ಅಜ್ಜೀಬಳ ದತ್ತಿನಿಧಿ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಪ್ರಜಾವಾಣಿ ಪತ್ರಿಕೆಯ ತಾಲೂಕಾ ವರದಿಗಾರರಾಗಿರೋ ಶಾಂತೇಶಕುಮಾರ್ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಪತ್ರಿಕಾ ಮಿತ್ರರಿಗೆ ಹರ್ಷ ತಂದಿದೆ. ಅಂದಹಾಗೆ, ಉತ್ತರ ಕನ್ನಡ ಜಿಲ್ಲೆಯ ಐವರು ಪತ್ರಕರ್ತರು ಇಂತಹದ್ದೊಂದು ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಶಿರಸಿಯ ಜಿಲ್ಲಾ ಪತ್ರಿಕಾ ಭವನದಲ್ಲಿ ಜಿಲ್ಲಾಧ್ಯಕ್ಷ ಜಿ.ಸುಬ್ರಾಯ ಭಟ್ ಬಕ್ಕಳ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಸಂಘದ ಸದಸ್ಯರಾದ ಐವರು ಪತ್ರಕರ್ತರನ್ನು ಅಂತಿಮಗೊಳಿಸಲಾಗಿದೆ. ಉದಯವಾಣಿ ಪತ್ರಿಕೆಯ ವರದಿಗಾರ ಜೊಯಿಡಾದ ಸಂದೇಶ ದೇಸಾಯಿ, ಪ್ರಜಾವಾಣಿ ಪತ್ರಿಕೆಯ ವರದಿಗಾರ ಕುಮಟಾದ ಎಂ.ಜಿ. ನಾಯ್ಕ, ಹೊಸದಿಗಂತ ಪತ್ರಿಕೆಯ ವರದಿಗಾರ್ತಿ ಯಲ್ಲಾಪುರದ ಪ್ರಭಾವತಿ ಜಯರಾಜ ಗೋವಿ ಹಾಗೂ ಕನ್ನಡ ಪ್ರಭ ಪತ್ರಿಕೆಯ ವರದಿಗಾರ ಭಟ್ಕಳದ ರಾಘವೇಂದ್ರ ಹೆಬ್ಬಾರ ಇವರುಗಳ ವರದಿ ಮತ್ತು ವಿಶೇಷ ಲೇಖನವನ್ನು ಪರಿಗಣಿಸಿ ಜಿ.ಎಸ್. ಹೆಗಡೆ ಅಜ್ಜೀಬಳ ದತ್ತಿನಿಧಿ ಪುರಸ್ಕಾರಕ್ಕೆ ಆಯ್ಕೆಗೊಳಿಸಲಾಗಿದೆ. ಸಂಘದ ಸುವರ್ಣ...
ದಾಂಡೇಲಿಯ DRFO ಯೋಗೇಶ್ ನಾಯ್ಕ್ ಕೊನೆಗೂ ಬದುಕಲೇ ಇಲ್ಲ..! ಕಾರ್ಕೋಟಕ “ವಿಷ” ವರ್ತುಲದಲ್ಲಿ ಅರಣ್ಯ ಅಧಿಕಾರಿಯ ದುರಂತ ಸಾವು..! ಅಷ್ಟಕ್ಕೂ ಯಾರು ಹೊಣೆ..?
ಈ ಸಾವನ್ನು ನಿಜಕ್ಕೂ ಯಾರ್ ಅಂದ್ರೆ ಯಾರಿಗೂ ಅರಗಿಸಿಕೊಳ್ಳಲು ಸಾಧ್ಯವಾಗ್ತಿಲ್ಲ. ಕೆಲವೇ ದಿನಗಳ ಹಿಂದೆ ಲವಲವಿಕೆಯಿಂದ ಕಾರ್ಯ ನಿರ್ವಹಿಸ್ತಿದ್ದ ಅರಣ್ಯ ಅಧಿಕಾರಿಯೊಬ್ಬ ಹೀಗೆ ವಯಸ್ಸಲ್ಲದ ವಯಸ್ಸಲ್ಲಿ ಜೀವ ಕಳೆದುಕೊಂಡು ಬಿದ್ದಿದ್ದಾನೆ. ಹಾಗಿದ್ರೆ, ಇದನ್ನು ಆತನ ಹಣೆಬರಹ ಅನ್ನ ಬೇಕೋ..? ಅಥವಾ ನಿರ್ಲಜ್ಜ, ಅಮಾನುಷ ವ್ಯವಸ್ಥೆಯ, ಮದವೇರಿದ ಅಧಿಕಾರಿಗಳ ನಿರ್ಲಕ್ಷ ಅನ್ನಬೇಕೋ ಒಂದೂ ಅರ್ಥವಾಗ್ತಿಲ್ಲ. ಒಟ್ನಲ್ಲಿ ದಾಂಡೇಲಿಯ ಅವನೊಬ್ಬ ಅರಣ್ಯ ಅಧಿಕಾರಿ ಸದ್ಯ ಇಂತದ್ದೇ ವ್ಯವಸ್ಥೆಗೆ ತನ್ನ ಜೀವ ಬಲಿ ಕೊಟ್ನಾ..? ಅರ್ಥವೇ ಆಗ್ತಿಲ್ಲ. ಆತನ ಹೆಸ್ರು ಯೋಗೇಶ್..! ಮೂಲತಃ ಕುಮಟಾ ತಾಲೂಕಿನ ಬಾಡ ಗ್ರಾಮದವ, ದಾಂಡೇಲಿಯ ಹಲವೆಡೆ ಕಳೆದ 13 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ನಿರ್ಬಿಡೆಯ, ಪ್ರಮಾಣಿಕ ಸೇವೆ ಸಲ್ಲಿಸಿದ್ದವ. ಸದ್ಯ ವಿರ್ನೋಲಿ ವಲಯದ ,ಕುಳಗಿ ಶಾಖೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಸೇವೆಯಲ್ಲಿದ್ದವ. ಈಗಷ್ಟೇ ಬಹುಶಃ ಮೂವತ್ತರ ಆಸುಪಾಸಿನ ಹುಡುಗ. ಮದುವೆಯಾಗಿದೆ. ಜೊತೆಗೆ ಮೂರು ವರ್ಷದ ಪುಟ್ಟ ಕಂದಮ್ಮನೂ ಇದೆ. ಹೀಗಿರೋ ಈತ ಕಳೆದ ಜೂನ್ 27 ರಂದು, ಸಾಗವಾನಿ ಮಡಿ...
ನಿಲ್ಲದ ಮಳೆ ಅಬ್ಬರ, ಗದ್ದೆಯಲ್ಲಿ ಹೋಗುತ್ತಿದ್ದ ಇಬ್ಬರು ನೀರಲ್ಲಿ ಕೊಚ್ಚಿ ಹೋಗಿ ದಾರುಣ ಸಾವು..!
ಕುಮಟಾ: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಭಾರೀ ಮಳೆಯಿಂದಾಗಿ ಇಬ್ಬರು ದುರಂತ ಸಾವು ಕಂಡಿದ್ದಾರೆ. ಭಾರೀ ಮಳೆಯಲ್ಲಿ ಗದ್ದೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಸಾವು ಸಾವು ಕಂಡಿದ್ದಾರೆ. ಕುಮಟ ತಾಲೂಕಿನ ಬರ್ಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಬೆಟ್ಕುಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸತೀಶ ಪಾಂಡುರಂಗ ನಾಯ್ಕ (40), ಉಲ್ಲಾಸ ಗಾವಡಿ (50) ಎಂಬುವವರು ದಾರುಣ ಸಾವು ಕಂಡಿದ್ದಾರೆ. ಭಾರೀ ಮಳೆಯಿಂದ ಗದ್ದೆಗಳು ಅಕ್ಷರಶಃ ಕೆರೆಯಂತಾಗವೆ. ಇಂತಹ ಗದ್ದೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಓರ್ವ ಕಾಲು ಜಾರಿ ಬಿದ್ದಿದ್ದಾನೆ. ನಂತರ ಆತನನ್ನು ರಕ್ಷಣೆ ಮಾಡಲು ಹೋಗಿ ಮತ್ತೋರ್ವ ಸಾವಿನ ಹಾದಿ ಹಿಡಿದಿದ್ದಾನೆ. ಇನ್ನು, ಮಳೆಯ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದ ಇಬ್ಬರ ಶವಗಳು, ಕೆಲವು ಗಂಟೆಗಳ ಬಳಿಕ ಪತ್ತೆಯಾಗಿವೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರಂತ ನಡೆದಿದೆ.
ಬಸ್ ನಲ್ಲಿ ಪ್ರೀ ಯಾಗಿ ಪ್ರಯಾಣಿಸಲು ಬುರ್ಕಾ ಧರಿಸಿದ ವ್ಯಕ್ತಿ, ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ..?
ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಜಾರಿಗೊಳಿಸಲಾದ ಶಕ್ತಿ ಯೋಜನೆಯ ಲಾಭ ಪಡೆಯುವ ಉದ್ದೇಶದಿಂದ ಹಿಂದೂ ವ್ಯಕ್ತಿಯೊಬ್ಬ ಮುಸ್ಲಿಂ ಮಹಿಳೆಯರ ಬುರ್ಖಾ ಧರಿಸಿ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇನ್ನು ರಾಜ್ಯ ಸರ್ಕಾರದಿಂದ ಜಾರಿಗೊಳಿಸಲಾದ ಶಕ್ತಿ ಯೋಜನೆ ಲಾಭ ಪಡೆಯಲು ಹಲವು ಪುರುಷರು ಇದೇ ಮಾರ್ಗವನ್ನು ಅನುಸರಿಸುತ್ತಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಇನ್ನು ಈ ಕುರಿತು ಸಾರ್ವಜನಿಕರು ಬುರ್ಖಾ ಧರಿಸಿದ್ದರೂ ಬಸ್ ನಿಲ್ದಾಣದಲ್ಲಿ ಒಬ್ಬಂಟಿಯಾಗಿ ಕುಳಿತಿದ್ದರಿಂದ ಪ್ರಶ್ನೆ ಮಾಡಿದಾಗ ವೀರಭದ್ರಯ್ಯ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ತಾನು ಭಿಕ್ಷಾಟನೆ ಉದ್ದೇಶದಿಂದ ಬುರ್ಖಾ ಹಾಕಿದ್ದೇನೆ ಎಂದು ವೀರಭದ್ರಯ್ಯ ಹೇಳಿಕೊಂಡಿದ್ದಾನೆ.
ಶೆಟ್ಟರ್ ನೇತೃತ್ವದಲ್ಲಿ ಆಪರೇಷನ್ ಹಸ್ತ: ಕಾಂಗ್ರೆಸ್ಸಿಗೆ ಬರ್ತಾರೆ ಮಾಜಿ ಶಾಸಕ ಚಿಕ್ಕನಗೌಡರ..?
ಹುಬ್ಬಳ್ಳಿ: ; ಬಿಜೆಪಿ ಮಾಜಿ ಶಾಸಕ ಯಡಿಯೂರಪ್ಪ ಸಂಬಂಧಿ ಕಾಂಗ್ರೆಸ್ ಕೈ ಹಿಡಿಯುವ ಎಲ್ಲಾ ಸಾಧ್ಯತೆಗಳು ನಿಚ್ಚಳವಾಗಿದೆ. ಹುಬ್ಬಳ್ಳಿ ಭಾಗದಲ್ಲಿ ಮತ್ತೋರ್ವ ಬಿಜೆಪಿ ಹುರಿಯಾಳು ಕಾಂಗ್ರೆಸ್ ಸೇರ್ಪಡೆಗೊಳ್ಳುವ ವಿಚಾರ ಸಾಕಷ್ಟು ದಟ್ಟವಾಗಿದ್ದು, ರಾಜ್ಯ ರಾಜಕಾರಣದ ಬೆಳವಣಿಗೆಗೆ ಪುಷ್ಟಿ ನೀಡಲಿದೆ. ಹೌದು…ಶಿಘ್ರದಲ್ಲಿಯೇ ಯಡಿಯೂರಪ್ಪ ಸಂಬಂಧಿ ಎಸ್.ಐ.ಚಿಕ್ಕನಗೌಡರ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಚಿಕ್ಕನಗೌಡರ ಕುಂದಗೋಳ ಮಾಜಿ ಶಾಸಕರಾಗಿದ್ದು, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಕಣಕ್ಕಿಳದಿದ್ದ ಚಿಕ್ಕನಗೌಡರ ಪರಾಜಿತರಾಗಿದ್ದರು. ಬಿಜೆಪಿ ಟಿಕೆಟ್ ಸಿಗದೆ ಪಕ್ಷೇತರರಾಗಿ ಸ್ಪರ್ಧಿಸಿ ಸೋತಿದ್ದ ಚಿಕ್ಕನಗೌಡರ ಈಗ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದಾರೆ ಎನ್ನಲಾಗುತ್ತಿದೆ. ಇನ್ನು ಲೋಕಸಭಾ ಚುನಾವಣಾ ದೃಷ್ಟಿಯಿಂದ ಕಾಂಗ್ರೆಸ್ ಸೇರಲಿರುವ ಚಿಕ್ಕನಗೌಡರ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ ಎಂಬುವ ಮಾಹಿತಿ ಲಭ್ಯವಾಗಿದ್ದು, ಲೋಕಸಭೆ ಚುನಾವಣೆ ಹಿನ್ನಲೆ ಸದ್ದಿಲ್ಲದೆ ಆಪರೇಶನ್ ಆರಂಭಿಸಿರುವ ಜಗದೀಶ್ ಶೆಟ್ಟರ್, ಬಿಜೆಪಿ ಪ್ರಮುಖ ನಾಯಕರನ್ನು ಕಾಂಗ್ರೆಸ್ ನತ್ತ ಸೆಳೆಯುತ್ತಿದ್ದಾರೆ. ಶೆಟ್ಟರ್ ಜೊತೆ ಒಂದು ಸುತ್ತಿನ ಮಾತುಕತೆ ಮಾಡಿರುವ ಚಿಕ್ಕನಗೌಡರ, ನಿನ್ನೆ ತಮ್ಮ...
ದಲೈ ಲಾಮಾರ ಹುಟ್ಟು ಹಬ್ಬ, ಟಿಬೇಟಿಯನ್ ಕಾಲೋನಿಗಳಲ್ಲಿ ಸಂಭ್ರಮವೋ ಸಂಭ್ರಮ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಇಂದು ಟಿಬೇಟಿಯನ್ ಧರ್ಮಗುರು ದಲೈ ಲಾಮಾರವರ 88 ನೇ ಹುಟ್ಟುಹಬ್ಬದ ಸಂಭ್ರಮ ಆಚರಿಸಲಾಯಿತು. ಇಲ್ಲಿನ ಕ್ಯಾಂಪ್ ನಂಬರ್ ಒಂದರ ಬೌದ್ದ ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು. ಅಂದಹಾಗೆ, ಇಲ್ಲಿನ ಟಿಬೇಟಿಯನ್ ಕಾಲೋನಿಯಲ್ಲಿ ಟಿಬೇಟಿಗರು ದಲೈ ಲಾಮಾರ ಹುಟ್ಟುಹಬ್ಬದ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಪ್ರತೀ ಮನೆ ಮನೆಗಳಲ್ಲೂ ದಲೈ ಲಾಮಾರವರ ಹುಟ್ಟುಹಬ್ಬದ ವಿಶೇಷ ಸಂಭ್ರಮಗಳು ನಡೆಯುತ್ತಿವೆ. ದೀರ್ಘಾಯುಷ್ಯ ಕೋರಿ ಪ್ರಾರ್ಥನೆಗಳು ನಡೆಯುತ್ತಿವೆ. ಅಲ್ಲದೇ, ಹಲವು ಸಾಮಾಜಿಕ, ಸಾಂಸ್ಕೃತಿಕ, ದಾರ್ಮಿಕ ಕಾರ್ಯಕ್ರಮಗಳು ಆಯೋಜನೆಗೊಂಡಿವೆ.
ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ, ಸಿಎಂ ಸಿದ್ದರಾಮಯ್ಯ ಭಾಗಿ..!
ಬೆಂಗಳೂರು; ಶಿವಶರಣ ಹಡಪದ ಅಪ್ಪಣ್ಣನವರ ರಾಜ್ಯಮಟ್ಟದ ಜಯಂತಿಯನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಚರಿಸಲಾಯಿತು. ಸಿಎಂ ಸಿದ್ದರಾಮಯ್ಯ ಜಯಂತಿಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ್ರು. ಶಿವಶರಣ ಹಡಪದ ಅಪ್ಪಣ್ಣ ನವರ ಭಾವಚಿತ್ರಕ್ಕೆ ಪುಷ್ಟಾರ್ಚನೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಉದ್ಘಾಟಿಸಿದ್ರು. ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ವತಿಯಿಂದ ನಡೆದ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರ ರಾಜ್ಯ ಮಟ್ಟದ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು , ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ ತಂಗಡಗಿರವರು, ಹಡಪದ ಅಪ್ಲಣ್ಣ ದೇವರ ಸಂಸ್ಥಾನ ಮಠ ತಂಗಡಗಿಯ ಪರಮಪೂಜ್ಯ ಅನ್ನದಾನ ಭಾರತಿ ಅಪ್ಪಣ್ಣ ಮಹಾ ಸ್ವಾಮಿಗಳು , ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷರಾದ ಸಿದ್ದಪ್ಪ ಮ ಹಡಪದ ಸೇರಿದಂತೆ ರಾಜ್ಯ ಸಂಘದ ಪದಾಧಿಕಾರಿಗಳು ಬೆಂಗಳೂರು ಜಿಲ್ಲಾ ಸಂಘದ ಅಧ್ಯಕ್ಷರಾದ ನಾಗರಾಜ ಹಡಪದ ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು . ಸಮಾರಂಭದಲ್ಲಿ ಬೆಂಗಳೂರು ನಗರದ ಸಮಾಜದ ಬಂಧುಗಳು ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಮಾಜದ...