ಮುಂಡಗೋಡ-ತಾಲೂಕಿನಲ್ಲಿ ನೊಂದವರ ಕಣ್ಣೀರು ಒರೆಸುತ್ತಿರೋ ಟಿಬೇಟಿಗರ ಕರ್ಮಾ ಪೌಂಡೇಶನ್ ಈಗ ಮತ್ತೊಂದು ಮಹತ್ತರ ಕಾರ್ಯ ಮಾಡಿ ಆದರ್ಶ ತೋರಿದೆ. ಬುದ್ದ ಪೂರ್ಣಿಮೆಯ ಅಂಗವಾಗಿ, ಮುಂಡಗೋಡ ತಾಲೂಕಾಸ್ಪತ್ರೆಗೆ ಒಟ್ಟೂ 1,33,280 ರೂ. ಮೌಲ್ಯದ ವೈದ್ಯಕೀಯ ಸಲಕರಣೆ ನೀಡಿದ್ದಾರೆ. ಅದ್ರಲ್ಲಿ, 49280 ರೂ.ಮೌಲ್ಯದ NIBP patient monitor machine, 84,000 ರೂ. ಮೌಲ್ಯದ oxygen concentrator ಸೆರಿದ್ದು ಮುಂಡಗೋಡ ತಾಲೂಕಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್.ಇಂಗಳೆಯವರಿಗೆ ಶುಕ್ರವಾರ ಹಸ್ತಾಂತರಿಸಿದ್ದಾರೆ. ಇನ್ನು ಟಿಬೇಟಿಯನ್ ಕಾಲೋನಿಯ ಡಿಟಿಆರ್ ಆಸ್ಪತ್ರೆಗೂ ಕೂಡ 84 ಸಾವಿರ ರೂ. ಮೌಲ್ಯದ oxygen concetratore machine ನೀಡಿದ್ದಾರೆ. ಅಂದಹಾಗೆ, ಅಮೇರಿಕದಲ್ಲಿ ವಾಸವಾಗಿರೋ ಯೊಂಗಚೆನ್ ಕುಟುಂಬ ಹಾಗೂ ಲೋಬ್ಚಾಂಗ್ ಚೋದೇನ್ ಕುಟುಂಬ ಕರ್ಮಾ ಪೌಂಡೇಶನ್ ಗೆ ಈ ವೈದ್ಯಕೀಯ ಸಲಕರಣೆಗಳನ್ನು ದೇಣಿಗೆ ನೀಡಿತ್ತು, ಹೀಗಾಗಿ ಕರ್ಮಾ ಪೌಂಡೇಶನ್ ತಾಲೂಕಾಸ್ಪತ್ರೆಗೆ ಹಾಗೂ ಡಿಟಿಆರ್ ಆಸ್ಪತ್ರೆಗೆ ಹಸ್ತಾಂತರಿಸಿದೆ
Top Stories
ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!
ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!
ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?
ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!
“ತುಂಬಿದ ಕೊಡ ತುಳಕೀತಲೇ ಪರಾಕ್” ಪ್ರಸಕ್ತ ವರ್ಷದ ಶ್ರೀಕ್ಷೇತ್ರ ಮೈಲಾರ ಕಾರ್ಣೀಕ ನುಡಿ..!
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!
ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಕಾನೂನು ಜಾರಿ, ಬಲವಂತದ ವಸೂಲಾತಿ, ಹಿಂಸೆ ನೀಡಿದ್ರೆ ಜಾಮೀನು ರಹಿತ ಕೇಸ್..!
ಉತ್ತರ ಕನ್ನಡದ ಹೆಮ್ಮೆ, ಹಾಡುಹಕ್ಕಿ, ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ..!
ಭೀಮಾತೀರದ ಡೆಡ್ಲಿ ಹಂತಕ ಬಾಗಪ್ಪ ಹರಿಜನ ಭೀಕರ ಹತ್ಯೆ| ಮನೆಯ ಬಳಿಯೇ ಕೊಚ್ಚಿ ಕೊಚ್ಚಿ ಕೊಂದ್ರು ಹಂತಕರು..!!
ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?
NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!
NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!
ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಗಳು, ಬಾಲ ಬಿಚ್ಚಿದ್ರೆ ಸುಮ್ಮನಿರಲ್ಲ,, ರೌಡಿಗಳನ್ನು ಸಾಲ ವಸೂಲಿಗೆ ಬಳಸಿದ್ರೆ ನಿರ್ದಾಕ್ಷಿಣ್ಯ ಕ್ರಮ- ಡೀಸಿ, ಎಸ್ಪಿ ಜಂಟೀ ವಾರ್ನಿಂಗ್
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ, ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ, ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ..!
ಮುಂಡಗೋಡಿನಲ್ಲಿ ರಾತ್ರಿ ನಡೀತು ಕಂಡೂ ಕೇಳರಿಯದ ಬಹುದೊಡ್ಡ ಪೊಲೀಸ್ ದಾಳಿ..!ಮೀಟರ್ ಬಡ್ಡಿ ಕುಳಗಳೇ ಪೊಲೀಸರ ಟಾರ್ಗೆಟ್..? ಅಷ್ಟಕ್ಕೂ ಈ ದಾಳಿ ವಿಫಲವಾಯ್ತಾ..?
ಮುಂಡಗೋಡಲ್ಲಿ ಹಾಡಹಗಲೇ ನಡೆದಿದ್ದ ಮನೆಗಳ್ಳತನ ಕೇಸ್ ಬೇಧಿಸಿದ ಪೊಲೀಸ್ರು..! ಇಬ್ಬರು ಲೋಕಲ್ ಆರೋಪಿಗಳ ಬಂಧನ..!
4 ದಿನದ ಹಿಂದೆಯಷ್ಟೇ ಮದುವೆಯಾದ ನವ ವಿವಾಹಿತೆ ಕೊರೋನಾಗೆ ಬಲಿ..!
ಶಿವಮೊಗ್ಗ: ಕಳೆದ ನಾಲ್ಕು ದಿನದ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಕೊರೊನಾಗೆ ಬಲಿಯಾದ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಮಲವಗೊಪ್ಪದಲ್ಲಿ ನಡೆದಿದೆ. ಪೂಜಾ ಎಂಬುವವರೇ ಕೊರೋನಾಗೆ ಬಲಿಯಾದ ನವವಧು ಆಗಿದ್ದಾರೆ.. ಪೂಜಾ ಅವರ ವಿವಾಹ ಕಳೆದ ನಾಲ್ಕು ದಿನದ ಹಿಂದೆ ಅಂದರೆ ಮೇ 24 ರಂದು ಹರಿಗೆಯ ಮಹೇಶ್ ಅವರೊಂದಿಗೆ ನಡೆದಿತ್ತು. ಮದುವೆಯ ಮರು ದಿನದಿಂದಲೇ ಪೂಜಾಗೆ ಜ್ವರ ಕಾಣಿಸಿಕೊಂಡಿತ್ತು. ಆದರೆ ಸ್ಥಳೀಯ ಕ್ಲಿನಿಕ್ ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಪೂಜಾಗೆ, ಇಂದು ಜ್ವರ ಜಾಸ್ತಿಯಾದ ಹಿನ್ನೆಲೆಯಲ್ಲಿ ಪೂಜಾ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಹೀಗಾಗಿ, ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಇದೀಗ ಸೂತಕ ಆವರಿಸಿದೆ.
ಇಂದೂರು ಪ್ರಾಥಮಿಕ ಶಾಲೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ: CCTV ಕ್ಯಾಮೆರಾ ಕದ್ದೊಯ್ದ ಕಳ್ಳರು..!
ಮುಂಡಗೋಡ: ತಾಲೂಕಿನ ಇಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳರು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ. ಇಂದೂರು ಗ್ರಾಮವನ್ನು ವಿಶೇಷ ಕಂಟೈನ್ ಮೆಂಟ್ ವಲಯವನ್ನಾಗಿ ಮಾಡಿ, ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಹೀಗಾಗಿ ಇದೇ ಸಮಯವನ್ನೇ ಉಪಯೋಗಿಸಿಕೊಂಡಿರೋ ಕಳ್ಳರು, ಶಾಲೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ.. ಅಂದಹಾಗೆ, ಶಾಲೆಯ ವರಾಂಡದಲ್ಲಿ ಹಾಕಲಾಗಿದ್ದ ಎರಡು CCTV ಕ್ಯಾಮೆರಾಗಳನ್ನು ಕಿತ್ತೊಯ್ದಿರೋ ಕಳ್ಳರು, ಶಾಲೆಯ 5 ಕೊಠಡಿಗಳ ಬಾಗಿಲಿಗೆ ಹಾಕಿದ್ದ ಬೀಗ ಮುರಿದಿದ್ದಾರೆ, ಅಲ್ದೆ ಬಾತ್ ರೂಮಿನ ಬೀಗವನ್ನೂ ಮುರಿದಿದ್ದಾರೆ. ಆದ್ರೆ ಯಾವುದೇ ವಸ್ತುಗಳನ್ನೂ ಮುಟ್ಟಿಲ್ಲ. ಇನ್ನು ಶುಕ್ರವಾರ ಅಂಗನವಾಡಿ ಕಾರ್ಯಕರ್ತೆ ಶಾಲೆಯ ಬಳಿ ಹೋದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಶಾಲಾ ಆಡಳಿತ ಸಮಿತಿಗೆ ಮಾಹಿತಿ ನೀಡಿದಾಗ, SDMC ಅಧ್ಯಕ್ಷ ಹಾಗೂ ಗ್ರಾಮಸ್ಥರು ಬಂದು ಪರಿಶೀಲಿಸಿದ್ದಾರೆ. ಆ ನಂತರ ಮುಂಡಗೋಡ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು..!
ಬೆಂಗಳೂರು : ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಆಗಮನವಾಗುವ ಸಾಧ್ಯತೆಯಿದೆ. ಕೇರಳಕ್ಕೆ 31 ರಂದು ಪ್ರವೇಶಿಸಲಿರುವ ಮುಂಗಾರಿನಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 1 ರಂದು ನೈಋತ್ಯ ಮುಂಗಾರು ಕೇರಳ ರಾಜ್ಯ ಪ್ರವೇಶಿಸಲಿದ್ದು, ಕರ್ನಾಟಕಕ್ಕೆ ಜೂನ್ 5 ರಂದು ಪ್ರವೇಶಿಸುವ ನಿರೀಕ್ಷೆ ಇದೆ.ರಾಜ್ಯದಲ್ಲಿ ಮೇ. 29 ರವರೆಗೆ ಮಳೆ ಮುಂದುವರೆಯಲಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಕಾಣಿಸಿಕೊಂಡ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೃಷಿ ಚಟುವಟಿಕೆ ಬಿರುಸುಗೊಂಡಿದೆ. ರೈತರು ಕೃಷಿ ಕಾಯಕಲ್ಲಿ ತೊಡಗಿಕೊಂಡಿದ್ದು, ಮುಂಗಾರು ಆಗಮನದ ನಿರೀಕ್ಷೆಯಲ್ಲಿದ್ದಾರೆ.
ಲಾಕ್ ಡೌನ್ ಸಂಕಷ್ಟಕ್ಕೆ ಸಿಲುಕಿದ್ದ ಕುಟುಂಬಗಳಿಗೆ ದಿನಸಿ ವಿತರಣೆ..! ಇದು ಪಬ್ಲಿಕ್ ಫಸ್ಟ್ ನ್ಯೂಸ್ ಇಂಪ್ಯಾಕ್ಟ್..!!
ಮುಂಡಗೋಡ-ಪಟ್ಟಣದಲ್ಲಿ ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿ ಐದು ಕಾರ್ಮಿಕ ಕುಟುಂಬಗಳು ನರಳುತ್ತಿದ್ದ ಸುದ್ದಿ ಗುರುವಾರ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಪ್ರಸಾರವಾಗಿತ್ತು.. ಅಂತಹದ್ದೊಂದು ಸುದ್ದಿ ಪ್ರಸಾರವಾದ ಕೆಲವೇ ಗಂಟೆಗಳಲ್ಲಿ ತಾಲೂಕಿನ ಹಲವು ಹೃದಯವಂತರು ಸ್ಪಂಧಿಸಿದ್ದಾರೆ.. ಟಿಬೇಟಿಯನ್ ಕರ್ಮಾ ಪೌಂಡೇಶನ್ ವತಿಯಿಂದ ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿದ್ದ ಆಂದ್ರ ಕುಟುಂಬಗಳಿಗೆ ದಿನಸಿ ಕಿಟ್ ಗಳನ್ನು ವಿತರಿಸಿದ್ದಾರೆ.. ಅಂದಹಾಗೆ, ಗಾರೆ ಕೆಲಸಕ್ಕೆಂದು ಆಂದ್ರ ಪ್ರದೇಶದಿಂದ ಬಂದಿದ್ದ ಕುಟುಂಬ, ಲಾಕ್ ಡೌನ್ ಘೋಷಣೆಯಾದ ನಂತ್ರ ವಾಪಸ್ ತಮ್ಮ ರಾಜ್ಯಕ್ಕೆ ತೆರಳಲು ಆಗದೇ ಮುಂಡಗೋಡಿನಲ್ಲೇ ಸಂಕಷ್ಟಕ್ಕೆ ಸಿಲುಕಿತ್ತು.. ಪುಟ್ಟ ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ದರೂ ಈ ಕಾರ್ಮಿಕರ ಕುಟುಂಬದಲ್ಲಿದ್ದು ಒಂದೊತ್ತಿನ ಊಟಕ್ಕೂ ಪರದಾಡುತ್ತಿವೆ.. ಪಟ್ಟಣದ ಹೊರ ವಲಯದ ಬಯಲಿನಲ್ಲಿ ಪುಟ್ಟ ಪುಟ್ಟ ಗುಡಿಸಲು ಕಟ್ಟಿಕೊಂಡು ಬದುಕುತ್ತಿದ್ದಾರೆ.. ಹೀಗಾಗಿ ಗುರುವಾರ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ಇಲ್ಲಿನ ಬಡ ಕುಟುಂಬಗಳ ಸಂಕಷ್ಟದ ಕುರಿತು ವರದಿ ಬಿತ್ತರಿಸಿತ್ತು.. ವರದಿಗೆ ಸ್ಪಂಧಿಸಿರೋ ಟಿಬೇಟಿಗರ ಕರ್ಮಾ ಪೌಂಡೇಶನ್ ಎಲ್ಲಾ ಕುಟುಂಬಗಳಿಗೂ ಅಗತ್ಯ...
ಹಳಿಯಾಳ: ಗುಂಡಳ್ಳಿ ಗ್ರಾಪಂ ವ್ಯಾಪ್ತಿಯ ತಾಂಡಾದಲ್ಲಿ ಮಾಸ್ಕ್ ಸ್ಯಾನಿಟೈಸರ್ ವಿತರಣೆ..!
ಹಳಿಯಾಳ: ತಾಲೂಕಿನ ಗುಂಡಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಯಜಮಾನ ತಾಂಡಾ ವಾರ್ಡಿನಲ್ಲಿ ಮಾಸ್ಕ್, ಸ್ಯಾನಿಟೈಸರ್, ದಿನನಿತ್ಯದ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಸುನಿಲ್ ಹೆಗಡೆಯವರ ಸಲಹೆ ಮೇರೆಗೆ ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಎಂ.ಪಾಟೀಲ್ ಹಾಗೂ ಪಂಚಾಯತಿ ಸದಸ್ಯೆ ಪುಷ್ಪಾ ಪಾಟೀಲ್ ವಾರ್ಡಿನ ಜನರಿಗೆ ಮಾಸ್ಕ್ ಸ್ಯಾನಿಟೈಸರ್ ವಿತರಿಸಿದ್ರು.. ಅತಿಹೆಚ್ಚು ಕೂಲಿ ಕಾರ್ಮಿಕರು, ದಲಿತರು, ಲಂಬಾಣಿಗಳು ವಾಸಿಸುತ್ತಿರುವ ಗುಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಜಮಾನ ತಾಂಡಾ ವಾರ್ಡಿನಲ್ಲಿ ಜನರಿಗೆ ವಿತರಿಸಿದ್ರು.. ಈ ಸಂದರ್ಭದಲ್ಲಿ ವಾರ್ಡಿನ ಪಕ್ಷದ ಕಾರ್ಯಕರ್ತರು, ಗ್ರಾಮ ಪಂಚಾಯತಿ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಿಬ್ಬಂದಿಗಳು, ವಾರ್ಡಿನ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು..
ಮುಂಡಗೋಡಿಗೆ ದೇಶಪಾಂಡೆಯವರ ಗಿಫ್ಟ್..! PPE ಕಿಟ್, ಔಷಧಿ, ಮಾಸ್ಕ್, ಅಂಬ್ಯುಲೆನ್ಸ್ ಹಸ್ತಾಂತರ..!
ಮುಂಡಗೋಡ-ತಹಶೀಲ್ದಾರ ಕಚೇರಿ ಆವರಣದಲ್ಲಿ ಇಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಆರ್.ವಿ.ದೇಶಪಾಂಡೆ, ಹಾಗೂ ಅವರ ಪುತ್ರ ಪ್ರಶಾಂತ್ ದೇಶಪಾಂಡೆ, ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಮುಂಡಗೋಡ ತಾಲೂಕಿಗೆ ಹಲವು ಸೌಲಭ್ಯಗಳನ್ನು ಒದಗಿಸಿದ್ರು.. ಮುಂಡಗೋಡ ತಾಲೂಕಿನ ತಹಶಿಲ್ದಾರ್ ಶ್ರೀಧರ್ ಮುಂದಲಮನಿಯವರ ಮೂಲಕ 500 ಔಷಧಿ ಕಿಟ್, ಹಾಗೂ 320 ಆಕ್ಸಿ ಮೀಟರ್, 500 n95 ಮಾಸ್ಕ್, 250 ಪಿಪಿಇ ಕಿಟ್ ಹಾಗೂ 1 ಉಚಿತ ಅಂಬ್ಯುಲೆನ್ಸ್ ವಾಹನ ಹಸ್ತಾಂತರಿಸಿದ್ರು.. ಈ ವೇಳೆ ಕಾಂಗ್ರೆಸ್ ಮುಖಂಡರಾದ ಪ್ರಶಾಂತ್ ದೇಶಪಾಂಡೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ್, ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರಳ್ಳಿ, ಮುಖಂಡರಾದ, ಎಚ್. ಎಮ್. ನಾಯ್ಕ ದೀಪಕ್ ದೊಡ್ಡೂರು, ಪಟ್ಟಣ ಪಂಚಾಯತ್ ಸದಸ್ಯ ರಝಾಕ್ ಖಾನ್ ಫಠಾಣ, ಸಂತೋಷ ವಾಸನ್ ಧರ್ಮರಾಜ ನಡಗೇರಿ ಸೇರಿದಂತೆ ಹಲವರು ಹಾಜರಿದ್ದರು, ಇನ್ನು, ತಹಶೀಲ್ದಾರ್ ಶ್ರೀಧರ್ ಮುಂದಲಮನಿ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸಂಗನ ಬಸಯ್ಯ ತಾಲೂಕ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್.ಇಂಗಳೆ ಈ ವೇಳೆ ಹಾಜರಿದ್ದು...
ಮುಂಡಗೋಡ: 18 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ ಉಚಿತ ಕೋವಿಡ್ ಲಸಿಕಾ ಅಭಿಯಾನ..!
ಮುಂಡಗೋಡ- ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇಂದು 18 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು..! ಬೆಳಿಗ್ಗೆ ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಯಾ ವ್ಯಾಪ್ತಿಯ ಗ್ರಾಮಗಳ 18 ವರ್ಷ ಮೇಲ್ಪಟ್ಟ ವಿಕಲಚೇತನರು ಲಸಿಕೆ ಪಡೆದರು.. ತಮ್ಮ ವಿಕಲಚೇತನದ ಗುರುತಿನ ಪ್ರಮಾಣಪತ್ರ, ಆಧಾರ್ ಕಾರ್ಡ್ ನೊಂದಿಗೆ ಬಂದು 18 ವರ್ಷ ಮೇಲ್ಪಟ್ಟ ವಿಕಲಚೇತನರು ಲಸಿಕೆ ಪಡೆದ್ರು.. ತಾಲೂಕಾಡಳಿತ ಶುಕ್ರವಾರದ ಇಡೀ ದಿನ ಮುಂಡಗೋಡ ತಾಲೂಕಿನಲ್ಲಿ ಕೋವಿಡ್ ಉಚಿತ ಲಸಿಕಾ ಅಭಿಯಾನ ಹಮ್ಮಿಕೊಂಡಿದೆ..
ಮುಂಡಗೋಡಿನಲ್ಲಿ ಆನ್ಲೈನ್ ವಂಚನೆ: RFO ಗೆ 72 ಸಾವಿರ ರೂ. ಪಂಗನಾಮ..!!
ಮುಂಡಗೋಡ: ಪಟ್ಟಣದ ವಲಯ ಅರಣ್ಯಾಧಿಕಾರಿ ಪರಮೇಶ್ವರ ದಾಸಪ್ಪ ಎಂಬುವವರಿಗೆ BSNL ಸಿಮ್ ಬ್ಲಾಕ್ ಆಗತ್ತೆ ಅಂತಾ ಸಂದೇಶ ಕಳುಹಿಸಿ, ಆನ್ಲೈನ್ ಖದೀಮರು ಬರೋಬ್ಬರಿ 72 ಸಾವಿರ ರೂಪಾಯಿ ವಂಚಿಸಿರೋ ಘಟನೆ ನಡೆದಿದೆ. ಗುರುವಾರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಈ ಕುರಿತು ವಲಯ ಅರಣ್ಯಾಧಿಕಾರಿ, ಪರಮೇಶ್ವರ ದಾಸಪ್ಪ ದೂರು ದಾಖಲಿಸಿದ್ದಾರೆ.. ಹಿಂದಿ ಭಾಷೆಯಲ್ಲಿ ಸಂದೇಶ ಕಳುಹಿಸಿದ್ದ ವ್ಯಕ್ತಿ ಸದ್ಯದಲ್ಲಿಯೇ ನಿಮ್ಮ ಸಿಮ್ ಬ್ಲಾಕ್ ಆಗತ್ತೆ ಹೀಗಾಗಿ ಅಪಡೇಟ್ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ನಂತ್ರ ಕ್ವಿಕ್ ಆ್ಯಪ್ ಡೌನ್ ಲೋಡ್ ಮಾಡಿಸಿ ಓಟಿಪಿ ಪಡೆದಿದ್ದಾರೆ.. ಆ ಮೂಲಕ ಅವ್ರ ಅಕೌಂಟಿನಿಂದ ಬರೊಬ್ಬರಿ 72 ಸಾವಿರ ರೂಪಾಯಿ ಎಗರಿಸಿದ್ದಾರೆ. ಕೊರೋನಾ ಸಂಕಷ್ಟದ ಸಮಯದಲ್ಲಿ ಆನಲೈನ್ ವಂಚಕರ ಹಾವಳಿ ಜೋರಾಗಿದ್ದು ಸಾರ್ವಜನಿಕರು ಎಚ್ಚರದಿಂದ ಇರುವಂತೆ ಪಿಎಸ್ಐ ಬಸವರಾಜ್ ಮಬನೂರು ಎಚ್ಚರಿಸಿದ್ದಾರೆ..
ಮಾಜಿ ಪಪಂ ಸದಸ್ಯ ಎಂ.ಕೆ. ಪಠಾಣ್ ಸ್ಮರಣಾರ್ಥ ಮಾಸ್ಕ್, ಸ್ಯಾನಿಟೈಸರ್ ವಿತರಣೆ..!
ಮುಂಡಗೋಡ: ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಎಂ ಕೆ ಪಠಾಣ ಅವರು ನಿಧನರಾಗಿದ್ದು ಅವರ 20 ನೇ ದಿನದ ಪುಣ್ಯಸ್ಮರಣೆಯ ಅಂಗವಾಗಿ, ಗುರುವಾರ ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕರಿಗೆ ಅವರ ಅಪಾರ ಅಭಿಮಾನಿಗಳು ಹಾಗೂ ಕುಟುಂಬ ಸದಸ್ಯರು ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡಿದರು.! ಈ ಸಂದರ್ಭದಲ್ಲಿ ದಿವಂಗತ ಎಂ.ಕೆ.ಪಠಾಣ್ ರಿಗೆ 1 ನಿಮಿಷ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು..