ಹೂವಿನಹಡಗಲಿ ತಾಲೂಕಿನ ಮೈಲಾರದ ಐತಿಹಾಸಿಕ ಮೈಲಾರಲಿಂಗ ಕಾರ್ಣಿಕದ ಭವಿಷ್ಯವಾಣಿ ಶುಕ್ರವಾರ ಸಂಜೆ ಹೊರಬಿದ್ದಿದೆ, “ತುಂಬಿದಕೊಡ ತುಳುಕಿತಲೇ ಪರಾಕ್” ಎಂಬ ಕಾರ್ಣಿಕವನ್ನು ಗೊರವಪ್ಪ ರಾಮಪ್ಪ ನುಡಿದಿದ್ದು, ಈ ವರ್ಷ ರಾಜ್ಯದಲ್ಲಿ ಮಳೆ – ಬೆಳೆ ಸಮೃದ್ಧವಾಗಿರಲಿದೆ ಎಂದು ಕಾರ್ಣಿಕದ ಭವಿಷ್ಯವಾಣಿಯನ್ನು ವಿಶ್ಲೇಷಣೆ ಮಾಡಲಾಗುತ್ತಿದೆ. ಮೈಲಾರದ ಮೈಲಾರ ಲಿಂಗೇಶ್ವರ ಜಾತ್ರೆ ಪ್ರಯುಕ್ತ ಡಂಕನಮರಡಿಯಲ್ಲಿ ಗೊರವಪ್ಪ ಕಾರ್ಣಿಕ ನುಡಿದಿದ್ದಾನೆ. 15ಅಡಿ ಎತ್ತರದ ಬಿಲ್ಲನೇರಿದ ಗೊರವಯ್ಯ ರಾಮಪ್ಪ, ಸದ್ದಲೇ ಎಂದು ಅಲ್ಲಿ ನೆರೆದಿದ್ದ ಜನರನ್ನು ಸುಮ್ಮನಾಗಿಸಿ ಕಾರ್ಣಿಕ ನುಡಿದಿದ್ದಾನೆ. ಮೈಲಾರ ಲಿಂಗೇಶ್ವರನ ಕಾರ್ಣಿಕ ಕೇಳಿ ಲಕ್ಷಾಂತರ ಭಕ್ತರು ಪುನೀತರಾಗಿದ್ದಾರೆ. ಈ ಭವಿಷ್ಯವಾಣಿ ಬಗ್ಗೆ ರಾಜ್ಯದಲ್ಲಿ ಈಗ ಭಾರೀ ಚರ್ಚೆಯಾಗುತ್ತಿದೆ. ಅತಿವೃಷ್ಟಯಿಂದ ಕಂಗೆಟ್ಟಿದ್ದ ನಾಡಿನ ಜನತೆಗೆ ಮೈಲಾರಲಿಂಗದ ಕಾರ್ಣಿಕ ಸಿಹಿ ಸುದ್ದಿ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿ, ಬೆಳೆ ಸಮೃದ್ಧಿಯಾಗಿ ಬರಲಿದೆ. ಇದರಿಂದ ನಾಡಿನ ರೈತರ ಮುಖದಲ್ಲಿ ನಗುವಿನ ಸಿಂಚನ ಮೂಡಿಸುವ ಭರವಸೆ ಸಿಕ್ಕಂತಾಗಿದೆ. ಈ ಹಿನ್ನೆಲೆ ಮೈಲಾರ ಲಿಂಗದ ಕಾರ್ಣಿಕ ರಾಜ್ಯದಲ್ಲಿ ಗಮನ ಸೆಳೆದಿದೆ....
Top Stories
ಕಾರವಾರ ಅಂಚೆ ವಿಭಾಗಕ್ಕೆ ಕರ್ನಾಟಕ ರಾಜ್ಯ ವೃತ್ತ ಮಟ್ಟದ ಪ್ರಶಸ್ತಿ
ಉತ್ತರ ಕನ್ನಡದಲ್ಲಿ ಮೇ.5 ರಿಂದ ಪ.ಜಾತಿ ಸಮುದಾಯದ ಸಮೀಕ್ಷೆ : ಜಿಲ್ಲಾಧಿಕಾರಿ
ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದಾರುಣ ಸಾವು..!
ಮುಂಡಗೋಡ ತಾಲೂಕಿಗೆ 65.3% ರಷ್ಟು SSLC ಫಲಿತಾಂಶ, ಮಳಗಿ ಪ್ರೌಢಶಾಲೆಯ ಭಾಗ್ಯಶ್ರೀ ಗೆ ಅತಿ ಹೆಚ್ಚು ಅಂಕ..!
ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನಲ್ಲಿ ಕೆಲಸದ ಸಮಯದಲ್ಲಿ ಬೃಹತ್ ಗಾತ್ರದ ಪ್ಯಾನಲ್ ಬಿದ್ದು ಗುತ್ತಿಗೆ ಕಾರ್ಮಿಕ ಸಾವು
ಮುಂಡಗೋಡ ತಾಲೂಕಿನ 79 ಶಾಲೆಗಳ ಸ್ಥಿತಿ ಚಿಂತಾಜನಕ, ಮಕ್ಕಳನ್ನು ಶಾಲೆಗೆ ಕಳಿಸೋಕೆ ಪಾಲಕರಿಗೆ ಭಾರೀ ಆತಂಕ..!
ಮೈನಳ್ಳಿಯಲ್ಲಿ ಸಿಡಿಲಾಘಾತ, ಐವರಿಗೆ ಸಿಡಿಲು ಬಡಿದು ಗಾಯ, ಆಸ್ಪತ್ರೆಗೆ ದಾಖಲು..!
ನಂದಿಪುರದಲ್ಲಿ ಸಿಡಿಲಿನಾರ್ಭಟ, ಮನೆಯ ವಿದ್ಯುತ್ ವೈಯರ್ ಗಳೇ ಭಸ್ಮ, ಟಿವಿ, ಪ್ರಿಡ್ಜು ಹರೋಹರ..! ಮನೆ ಮಂದಿಗೂ ಗಾಯ..!
ಪ್ರವಾಸಕ್ಕೆಂದು ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು ಸಮುದ್ರ ಪಾಲು, ಮತ್ತಿಬ್ಬರು ಬಚಾವ್..!
ಮುಂಡಗೋಡ ಪೊಲೀಸರ ಗಟ್ಟಿ ಕಾರ್ಯಾಚರಣೆ, ಗೋಹತ್ಯೆ ಕೇಸಿನಲ್ಲಿ ಓರ್ವ ಆರೋಪಿ ಅರೆಸ್ಟ್, ಮತ್ತೋರ್ವ ಪರಾರಿ..!
ಮುಂಡಗೋಡ ಕರಗಿನಕೊಪ್ಪ ಬಳಿ ಬೈಕ್ ಅಪಘಾತ, ಮೂಡಸಾಲಿಯ ವ್ಯಕ್ತಿಗೆ ಗಂಭೀರ ಗಾಯ..!
ಮುಂಡಗೋಡಿನಲ್ಲಿ ಗೋಹತ್ಯೆಗೆ ಖಂಡನೆ, ಹಿಂದು ಕಾರ್ಯಕರ್ತರ ಆಕ್ರೋಶ, ರಸ್ತೆ ತಡೆದು ಪ್ರತಿಭಟನೆ..!
ಮುಂಡಗೋಡಿನಲ್ಲೂ ಮಾಂಸಕ್ಕಾಗಿ ಆಕಳ ಹತ್ಯೆ..! ಪೊಲೀಸರ ದಾಳಿ..! ಸಿಕ್ಕಿದ್ದೇನು..?
ಕಾರವಾರ ನಗರಸಭೆ ಸದಸ್ಯನ ಭೀಕರ ಹತ್ಯೆ ಕೇಸ್, ಇಬ್ಬರು PSI ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್..? ಕಾರಣ..?
ಭಾರೀ ಮಳೆ ಗಾಳಿಗೆ ಇಂದೂರು ಕೊಪ್ಪ ಗ್ರಾಮದಲ್ಲಿ, ಮನೆಯ ಮೇಲ್ಚಾವಣಿ ಹಾನಿ, ಗೋವಿನಜೋಳ ರಾಶಿ ನೀರಲ್ಲಿ
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಪಾಳಾದ ರಾಮಾಪುರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಚಿಗಳ್ಳಿ ಹಿರಿಕೆರೆಯಲ್ಲಿ ಮೀನುಗಳ ದಾರುಣ ಸಾವು, ಇಡೀ ಕೆರೆಗೇ ವಿಷ ಹಾಕಿದ್ರಾ ದುರುಳರು..?
ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ, ಮುಂಡಗೋಡ ತಾಲೂಕಾ ತ್ರೈಮಾಸಿಕ ಕೆಡಿಪಿ ಸಭೆ..!
ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?
“ತುಂಬಿದ ಕೊಡ ತುಳಕೀತಲೇ ಪರಾಕ್” ಪ್ರಸಕ್ತ ವರ್ಷದ ಶ್ರೀಕ್ಷೇತ್ರ ಮೈಲಾರ ಕಾರ್ಣೀಕ ನುಡಿ..!
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!
ಮುಂಡಗೋಡಿನ ಶಿವಾಜಿ ಸರ್ಕಲ್ ನಲ್ಲಿ ಕಂಡೂ ಕೇಳರಿಯದ ಭಯಾನಕ ಘಟನೆ ನಡೆದು ಹೋಗಿದೆ. ಟಿಪ್ಪರ್ ಹಿಂಬದಿಯ ಗಾಲಿಗೆ ಸಿಲುಕಿದ ಪಾದಾಚಾರಿ ವ್ಯಕ್ತಿಯೋರ್ವನ ದೇಹ ಛಿದ್ರ ಛಿದ್ರಗೊಂಡಿದೆ. ಘಟನೆಯ ಭಯಾನಕತೆಗೆ ಜನ ಬೆಚ್ಚಿ ಬಿದ್ದಿದ್ದಾರೆ. ಆದ್ರೆ, ಹೀಗೆ ದಾರುಣ ಸಾವು ಕಂಡಿರೋ ವ್ಯಕ್ತಿ ಯಾರು..? ಎಲ್ಲಿಯವನು ಅನ್ನೋದು ಇನ್ನು ತಿಳಿದು ಬಂದಿಲ್ಲ.. ಅಂದಹಾಗೆ, ಸಂಜೆ ಶಿವಾಜಿ ಸರ್ಕಲ್ ನಲ್ಲಿ ಘಟನೆ ನಡೆದಿದೆ. ಟಿಪ್ಪರ್ ಹಿಂಬದಿಯ ಚಕ್ರಕ್ಕೆ ಸಿಲುಕಿರೋ ಪಾದಾಚಾರಿ ಸ್ಥಳದಲ್ಲೇ ಚಿದ್ರ ಚಿದ್ರಗೊಂಡಿದ್ದಾನೆ. ದೇಹದ ಬಹುತೇಕ ಭಾಗ ನುಜ್ಜು ಗುಜ್ಜಾಗಿದೆ. ಸ್ಥಳಕ್ಕೆ ಮುಂಡಗೋಡ ಪೊಲೀಸರು ಭೇಟಿ ನೀಡಿದ್ದಾರೆ.
ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!
ವಿಜಯಪುರ: ಭೀಮಾತೀರದ ನಟೋರಿಯಸ್ ಹಂತಕ ಭಾಗಪ್ಪ ಹರಿಜನ ಕೊಲೆ ಪ್ರಕರಣದ ಆರೋಪಿತರು ಅಂದರ್ ಆಗಿದ್ದಾರೆ. ಪೆಬ್ರುವರಿ 11ರಂದು ಗಾಂಧಿಚೌಕ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಾ ನಗರದಲ್ಲಿ ರಾತ್ರಿ 09.30 ಗಂಟೆಯ ಸುಮಾರಿಗೆ ಪಿಂಟು ಹಾಗೂ ಇನ್ನೂ 4-5 ಜನ ದುಷ್ಕರ್ಮಿಗಳು ಸೇರಿಕೊಂಡು ಭಾಗಪ್ಪ ಹುಚ್ಚಪ್ಪ ಹರಿಜನ ಈತನಿಗೆ ಪಿಸ್ತೂಲ್‌ನಿಂದ ಗುಂಡು ಹಾರಿಸಿ, ಕೊಡಲಿ ಹಾಗೂ ಮಚ್ಚಿನಿಂದ ಕುತ್ತಿಗೆಗೆ, ಎದೆಗೆ ಮತ್ತು ಕೈಗಳಿಗೆ ಹಲ್ಲೆ ಮಾಡಿ ಕೊಲೆ ಮಾಡಿರುತ್ತಾರೆ. ಭಾಗಪ್ಪ ಹರಿಜನ ಈತನು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ. ಈ ಬಗ್ಗೆ ಮೃತನ ಮಗಳಾದ ಗಂಗೂಬಾಯಿ ಭಾಗಪ್ಪ ಹರಿಜನ, ಸಾ: ಬಬಲಾದಿ ತಾ: ಇಂಡಿ ರವರು ನೀಡಿದ ದೂರಿನ ಮೇರೆಗೆ ಗಾಂಧಿಚೌಕ ಪೊಲೀಸ್ ಠಾಣೆ ಗುನ್ನೆ ನಂ: 32/2025 ಕಲಂ: 189(2), 191(2), 191(3), 352, 103, 190 ಬಿಎನ್ಎಸ್ ಆ್ಯಕ್ಟ್-2023 ಮತ್ತು 25(ಎ) ಭಾರತೀಯ ಆಯುಧ ಕಾಯ್ದೆ ಅಡಿ ಪ್ರಕರಣ ದಾಖಲಾಗಿರುತ್ತದೆ. ಮೃತ ಭಾಗಪ್ಪ ಹುಚ್ಚಪ್ಪ ಹರಿಜನ ಈತನ ಮೇಲೆ 10 ಕ್ಕೂ ಹೆಚ್ಚು...
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಕಾನೂನು ಜಾರಿ, ಬಲವಂತದ ವಸೂಲಾತಿ, ಹಿಂಸೆ ನೀಡಿದ್ರೆ ಜಾಮೀನು ರಹಿತ ಕೇಸ್..!
ಬೆಂಗಳೂರು: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025ನ್ನು ಫೆಬ್ರವರಿ 12 ರಿಂದ ಜಾರಿಗೊಳಿಸಿದ್ದು, ಆದೇಶದ ಮುಖ್ಯಾಂಶಗಳು ಹೀಗಿವೆ. ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯಬಾರದು. ಗ್ರಾಹಕರಿಗೆ ವಿಧಿಸುವ ಬಡ್ಡಿದರಗಳ ಬಗ್ಗೆ ಪಾರದರ್ಶಕವಾಗಿ ಲಿಖಿತ ರೂಪದಲ್ಲಿ ತಿಳಿಸಬೇಕು. ಈ ಆದೇಶವು ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ನೊಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ. ನೊಂದಾಯಿತ ಸಂಸ್ಥೆಗಳಿಂದ ಅಂದಾಜು 60 ಸಾವಿರ ಕೋಟಿ ರೂ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದಾರೆ. ನೊಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ನಿಖರವಾಗಿ ಲಭ್ಯವಿಲ್ಲವಾದರೂ, ಅಂದಾಜು 40 ಸಾವಿರ...
ಉತ್ತರ ಕನ್ನಡದ ಹೆಮ್ಮೆ, ಹಾಡುಹಕ್ಕಿ, ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ..!
ಅಂಕೋಲಾ: ಅನಾರೋಗ್ಯಕ್ಕೆ ಒಳಗಾಗಿದ್ದ ಹಾಡುಹಕ್ಕಿ ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಅವರು ಇಂದು ನಿಧನರಾಗಿದ್ದಾರೆ. ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ತಮ್ಮ ಮನೆಯಲ್ಲಿ ನಿಧನ ಹೊಂದಿದ ಹಾಡುಹಕ್ಕಿ ಸುಕ್ರಿ ಬೊಮ್ಮ ಗೌಡ ಅವರಿಗೆ 88 ವರ್ಷ ವಯಸ್ಸಾಗಿತ್ತು. ಇವರಿಗೆ ಪದ್ಮಶ್ರೀ, ನಾಡೋಜ, ರಾಜ್ಯೋತ್ಸವ, ಜಾನಪದ ಶ್ರೀ ಪ್ರಶಸ್ತಿ ಪಡೆದಿದ್ದು, 2017 ರಲ್ಲಿ ಪದ್ಮಶ್ರೀ ಪ್ರಶಸ್ತಿ ಲಭಿಸಿತ್ತು ಜಾನಪದ ಹಾಡುಗಳ ಮೂಲಕ ಸಮುದಾಯದ ಮಹಿಳೆಯರ ಪರಿಚಯಿಸುವ ಕಾರ್ಯ ನಿರ್ವಹಿಸಿದ್ದರು. ಅನೇಕ ಹೋರಾಟಗಳಲ್ಲಿ ಸಹ ಇವರು ಮುಂಚೂಣಿ ಯಲ್ಲಿ ಇರುತ್ತಿದ್ದರು.. ಜಾನಪದ ಕೋಗಿಲೆಯ ನಿಧನಕ್ಕೆ ಜಿಲ್ಲೆಯ ಗಣ್ಯರು ಕಂಬನಿ ಮಿಡಿದಿದ್ದಾರೆ.
ಭೀಮಾತೀರದ ಡೆಡ್ಲಿ ಹಂತಕ ಬಾಗಪ್ಪ ಹರಿಜನ ಭೀಕರ ಹತ್ಯೆ| ಮನೆಯ ಬಳಿಯೇ ಕೊಚ್ಚಿ ಕೊಚ್ಚಿ ಕೊಂದ್ರು ಹಂತಕರು..!!
ವಿಜಯಪುರ: ಭೀಮಾತೀರದ ಡೆಡ್ಲಿ ಹಂತಕ ಬಾಗಪ್ಪ ಹರಿಜನನ ಭೀಕರ ಹತ್ಯೆಯಾಗಿದೆ.ನಿನ್ನೆ ರಾತ್ರಿ 9.25ರ ಸುಮಾರಿಗೆ ಬಾಗಪ್ಪ ಹರಿಜನ್ ಹತ್ಯೆ ನಡೆದಿದ್ದು, ಮನೆಯ ಎದುರೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ನಿನ್ನೆ ರಾತ್ರಿ ಬಾಗಪ್ಪ ಊಟ ಮಾಡಿ ವಾಕಿಂಗ್‌ಗೆ ಹೊರ ಬಿದ್ದ ವೇಳೆ ಅಟ್ಯಾಕ್ ಮಾಡಲಾಗಿದೆ. ಕರೆಂಟ್ ಕಟ್ ಮಾಡಿ, ಟಂಟಂ ನಲ್ಲಿ ಬಂದು ಅಟ್ಯಾಕ್ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸ್ಥಳದಲ್ಲಿ ಮೂರು ಸುತ್ತು ಗುಂಡಿನ ಸದ್ದು ಕೇಳಿ ಬಂದಿದೆ. ನಂತ್ರ ಕೊಡಲಿಯಿಂದ ಕೊಚ್ಚಿ ಬಾಗಪ್ಪನ ಹತ್ಯೆ ಮಾಡಲಾಗಿದ್ದು, ಎಡಗೈ ಕಟ್ ಮಾಡಲಾಗಿದೆ, ಗುಪ್ತಾಂಗಕ್ಕೂ ಹಂತಕರಿಂದ ಕತ್ತರಿ ಹಾಕಲಾಗಿದೆ. ಹೀಗಾಗಿ, ಅತ್ಯಂತ ಭೀಬತ್ಸವಾಗಿ ಮರ್ಡರ್ ಆಗಿದ್ದಾನೆ ಬಾಗಪ್ಪ. ಮೂರು ಆಯಾಮ..? ಅಂದಹಾಗೆ, ಕಳೆದ ಕೆಲ ತಿಂಗಳ ಹಿಂದೆ ನಡೆದಿದ್ದ ವಕೀಲ ರವಿ ಅಗರಖೇಡ್ ಹತ್ಯೆಗೆ ಸಂಬಂಧಿಸಿದಂತೆ, ರಿವೆಂಜ್ ತಿರಿಸಿಕೊಂಡ್ರಾ ಹಂತಕರು..? ಅನ್ನೋ ಅನುಮಾನ ಶುರುವಾಗಿದೆ. ಇನ್ನೂ ಹಣದ ವ್ಯವಹಾರಕ್ಕೆ ಬಾಗಪ್ಪನ ಮುಗಿಸಲು ಎಂಟ್ರಿ ಕೊಟ್ಟಿತ್ತಾ ಹೊಸ ಗ್ಯಾಂಗ್…? ಅನ್ನೋ ಡೌಟೂ...
ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?
ನಿಜ ಈ ಸುದ್ದಿ ಮುಂಡಗೋಡಿಗರ ಪಾಲಿಗೆ ನಿಜಕ್ಕೂ ಬಲೂ ನೋವು, ಅಚ್ಚರಿ, ಆತಂಕ ತರುವಂತದ್ದು. ಯಾಕಂದ್ರೆ, ಕಳೆದ 45 ವರ್ಷಗಳಿಂದ ನಡೆದುಕೊಂಡು ಬಂದಿದ್ದ, ಭಕ್ತಿ ಭಾವುಕತೆಗೆ ಸಾಕ್ಷಿಯಾಗಿದ್ದ ತ್ರಿಮೂರ್ತಿಗಳ ಪ್ರತಿರೂಪದಂತೆ ಇದ್ದ ಆ ದೀಪಗಳು ಆರಿ ಹೋಗಿವೆ ಅನ್ನೋ ಸುದ್ದಿ ಇದೆ. ಆದ್ರೆ, ಖಚಿತತೆಯ ಅವಶ್ಯಕತೆ ಇದೆ. ಮುಂಡಗೋಡ ತಾಲೂಕಿನ ಹೆಮ್ಮೆಯಾಗಿದ್ದ, ಐತಿಹಾಸಿಕ, ಚಿಗಳ್ಳಿಯ ವಿಶ್ವ ವಿಖ್ಯಾತ, ಎಂದೂ ಆರದ ದೀಪಗಳು ಆರಿಹೋದ್ವಾ..? ಇಂತಹದ್ದೊಂದು ಅಚ್ಚರಿಯ, ಆತಂಕದ ಸುದ್ದಿ ಹೊರಬಿದ್ದಿದೆ. ಇವತ್ತು ಅಂದ್ರೆ, ಬುಧವಾರ ಸಂಜೆ ಹೊತ್ತಿನಲ್ಲಿ ಈ ಸುದ್ದಿ ಇಡೀ ಚಿಗಳ್ಳಿಗರಿಗೆ ಅಚ್ಚರಿ ಮೂಡಿಸಿದೆಯಂತೆ. ಬರೋಬ್ಬರಿ ನಾಲ್ಕೂವರೇ ದಶಕಗಳಿಂದ ಎಣ್ಣೆ ಇಲ್ಲದೇ ಉರಿಯುತ್ತಿದ್ದ ಮೂರೂ ದೀಪಗಳು ಶಾಂತವಾಗಿವೆ ಅಂತಾ ಪಬ್ಲಿಕ್ ಫಸ್ಟ್ ಗೆ ಮಾಹಿತಿ ಬಂದಿದೆ. ಆದ್ರೆ, ಈ ಬಗ್ಗೆ ದೇವಸ್ಥಾನದ ಆಡಳಿತ ವರ್ಗ ಖಾತ್ರಿ ಪಡಿಸಬೇಕಿದೆ. ಪೂಜಾರಿಯ ಸಾವಿನೊಂದಿಗೆ..!? ಅಸಲು, ಕಳೆದ ಹದಿನಾಲ್ಕು ದಿನಗಳ ಹಿಂದೆ ಇದೇ ದೀಪನಾಥೇಶ್ಬರ ದೇವಸ್ಥಾನದ ಪೂಜಾರಿ, ಹಾಗೂ ನಾಲ್ಕು ದಶಕದ ಹಿಂದೆ ಅಂದ್ರೆ...
NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!
ಮೀಟರ್ ಬಡ್ಡಿ ದಂಧೆಯ ಆರೋಪ ಹಿನ್ನೆಲೆಯಲ್ಲಿ ಬರೋಬ್ಬರಿ ನಾಲ್ಕು ಕೇಸು ಹೊತ್ತು, ಮುಂಡಗೋಡ ಕೋರ್ಟ್ ಗೆ ಸರೆಂಡರ್ ಆಗಿರೋ NMD ಜಮೀರ್ ಅಹ್ಮದ್ ದರ್ಗಾವಾಲೆಗೆ, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಹೀಗಾಗಿ ,ಸದ್ಯ ಪೊಲೀಸರ ಅತಿಥಿಯಾಗಿರೋ ಜಮೀರ್ ಎರಡು ದಿನ ಖಾಕಿಗಳ ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ. ಅಂದಹಾಗೆ..! ಸೋಮವಾರ ತಡರಾತ್ರಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ, ಮೀಟರ್ ಬಡ್ಡಿ ಕುಳಗಳಿಗೆ ಹಾಗೂ ಅಕ್ರಮಿಗಳಿಗೆ ಗಾಳ ಹಾಕಿದ್ದರು. ಇದ್ರಲ್ಲಿ, ಹಲವರನ್ನು ವಶಕ್ಕೆ ಪಡೆದು ಕೇಸು ದಾಖಲಿಸಿಕೊಂಡಿದ್ದರು ಪೊಲೀಸ್ರು. ಇದೇ ವೇಳೆ NMD ಜಮೀರ್ ಅಹ್ಮದ್ ದರ್ಗಾವಾಲೆಗೆ ಸೇರಿದ್ದವರು ಎನ್ನಲಾದ ಹುಡುಗ್ರು ಪೊಲೀಸ್ರ ಬಲೆಗೆ ಬಿದ್ದಿದ್ದರು. ಪೊಲೀಸ್ರು ನಡೆಸಿದ್ದ ದಾಳಿ ವೇಳೆ, ಪೊಲೀಸರ ಕೈಗೆ ಸಿಗದೆ ಈತ ತಪ್ಪಿಸಿಕೊಂಡಿದ್ದ ಅಂತ ಹೇಳಲಾಗಿತ್ತು. ಹೀಗಾಗಿ, NMD ಜಮೀರ್ ಗಾಗಿ ತೀವ್ರ ಹುಡುಕಾಟ ನಡೆಸಿದ್ದ ಪೊಲೀಸ್ರು, ಹೇಗಾದ್ರೂ ಸರಿ ಆತನನ್ನು ಬಂಧಿಸುವ ಪಣ ತೊಟ್ಟಿದ್ದರು ಎನ್ನಲಾಗಿದೆ. ಹೀಗಾಗಿ, ಇದನ್ನರಿತ ಜಮೀರ್ ಅಹ್ಮದ್...
NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!
ಮುಂಡಗೋಡಿನಲ್ಲಿ ಉತ್ತರ ಕನ್ನಡ ಖಡಕ್ ಎಸ್ಪಿ ಎಂ. ನಾರಾಯಣ್ ನೇತೃತ್ವದಲ್ಲಿ ನಡೆದಿದ್ದ ಸಮರ, ಕೊನೆಗೂ ಮುಂಡಗೋಡಿನ ಮೀಟರ್ ಬಡ್ಡಿ ಮಾಫಿಯಾ ಥರಗುಟ್ಟುವಂತೆ ಮಾಡಿದೆ. ನಿನ್ನೆಯಷ್ಟೇ ಹಲವು ಜನ ಆರೋಪಿಗಳನ್ನು ಹೆಡೆಮುರಿ ಕಟ್ಟಿದ ನಂತರದಲ್ಲಿ ಮುಂಡಗೋಡಿನ NMD ಗ್ರೂಪ್ ನ ಜಮೀರ್ ಅಹ್ಮದ್ ದರ್ಗಾವಾಲೆ ಕೋರ್ಟಿಗೆ ಶರಣಾಗಿದ್ದಾನೆ ಅಂತಾ ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ತಪ್ಪಿಸಿಕೊಂಡಿದ್ನಾ..? ಸೋಮವಾರ ತಡರಾತ್ರಿ ಪೊಲೀಸ್ರು ನಡೆಸಿದ್ದ ದಾಳಿ ವೇಳೆ, ಪೊಲೀಸರ ಕೈಗೆ ಸಿಗದೆ ಈತ ತಪ್ಪಿಸಿಕೊಂಡಿದ್ದ ಅಂತ ಹೇಳಲಾಗಿತ್ತು. ಹೀಗಾಗಿ, NMD ಜಮೀರ್ ಗಾಗಿ ತೀವ್ರ ಹುಡುಕಾಟ ನಡೆಸಿದ್ದ ಪೊಲೀಸ್ರು, ಹೇಗಾದ್ರೂ ಸರಿ ಆತನನ್ನು ಬಂಧಿಸುವ ಪಣ ತೊಟ್ಟಿದ್ದರು ಎನ್ನಲಾಗಿದೆ. ಹೀಗಾಗಿ, ಇದನ್ನರಿತ ಜಮೀರ್ ಅಹ್ಮದ್ ದರ್ಗಾವಾಲೆ ಈಗಷ್ಟೆ ಮುಂಡಗೋಡ ಕೋರ್ಟಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಈತನ ಮೇಲೆ 4 ಕೇಸು..? ಅಂದಹಾಗೆ, ಇತ್ತಿಚೆಗಷ್ಟೇ ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ,ಕಿಡ್ನಾಪ್ ಕೇಸಲ್ಲಿ ಕಿಡ್ನಾಪ್ ಆಗಿದ್ದವನೇ ಈ ಜಮೀರ್ ಅಹ್ಮದ್ ದರ್ಗಾವಾಲೆ, ಪೊಲೀಸ್ ಮೂಲಗಳು ನೀಡಿದ ಮಾಹಿತಿಯಂತೆ, ಈತನ ಮೇಲೆ...
ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಗಳು, ಬಾಲ ಬಿಚ್ಚಿದ್ರೆ ಸುಮ್ಮನಿರಲ್ಲ,, ರೌಡಿಗಳನ್ನು ಸಾಲ ವಸೂಲಿಗೆ ಬಳಸಿದ್ರೆ ನಿರ್ದಾಕ್ಷಿಣ್ಯ ಕ್ರಮ- ಡೀಸಿ, ಎಸ್ಪಿ ಜಂಟೀ ವಾರ್ನಿಂಗ್
ಕಾರವಾರ- ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ಗಳು, ಲೇವಾದೇವಿ ವ್ಯವಹಾರಸ್ಥರು, ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾರ್ಗಸೂಚಿ ಹಾಗೂ ನಿಯಮಗಳನ್ನು ಉಲ್ಲಂಘಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಎಚ್ಚರಿಕೆ ನೀಡಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣದ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ರಾಜ್ಯದಾದ್ಯಂತ ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದ ಗ್ರಾಹಕರಿಗೆ ಕಿರುಕುಳದಂತಹ ಪ್ರಕರಣಗಳು ಅಧಿಕವಾಗಿವೆ. ಇದಕ್ಕೆಲ್ಲಾ ಕಾರಣ ಆರ್.ಬಿ.ಐ ಮಾರ್ಗಸೂಚಿಗಳು ಹಾಗೂ ನಿಯಮಗಳ ಪಾಲಿಸದೇ ಇರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದರು. ಮೈಕ್ರೋ ಫೈನಾನ್ಸ್ಗಳು ಸಾಲ ಕೊಡುವ ಮುನ್ನ ಸಾಲಗಾರರ ಕುಟುಂಬದ ಆದಾಯ ಸೇರಿದಂತೆ ಮತ್ತಿತರ ಪೂರ್ವಾಪರಗಳನ್ನು ಪರಿಶೀಲನೆಯನ್ನು ಮಾಡಿ, ಅವರ ಆದಾಯದ ಶೇ. 50 ರಷ್ಟು ಮಾತ್ರ ಸಾಲ ನೀಡಬೇಕು. ಆದರೆ, ಅವರು ಸಾಲ ತೆಗೆದುಕೊಳ್ಳುವ ಸಾಮರ್ಥ್ಯ ನೋಡದೇ ಸಾಲವನ್ನು ನೀಡುತ್ತಿರುವುದು ಕಂಡುಬರುತ್ತಿದ್ದು , ಇದಕ್ಕೆ...