ಹಾವೇರಿ ಜಿಲ್ಲೆಯಾದ್ಯಂತ ರಾತ್ರಿ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದ ಹಾವೇರಿ ನಗರದಲ್ಲಿ ಇರುವ ಹತ್ತಾರು ರಸ್ತೆಗಳು ಕೆರೆಯಂತಾಗಿವೆ. ಹೀಗಾಗಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಾಲಕನೋರ್ವ ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಘಟನೆ ನಡೆದಿದೆ. ಹಾವೇರಿ ಎಸ್.ಪಿ ಕಚೇರಿ ಮುಂಭಾಗದಲ್ಲಿಯೇ ಘಟನೆ ನಡೆದಿದ್ದು, ನೀವೆದನ್ ಬಸವರಾಜ್ ಗುಡಗೇರಿ (12) ಕೊಚ್ಚಿ ಹೋದ ಬಾಲಕನಾಗಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದಾರೆ. ಬಾಲಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಬಾಲಕನ ಸಂಬಂಧಿಗಳಿಂದ ಸ್ಥಳದಲ್ಲಿ ಪ್ರತಿಭಟನೆ ಕೂಡ ನಡೆದಿದೆ. ಬಾಲಕನ ತಾಯಿ ತೀವ್ರ ಅಸ್ವಸ್ಥಳಾಗಿದ್ದಾಳೆ. ಹೀಗಾಗಿ ಅಂಬ್ಯುಲೆನ್ಸ್ ಮೂಲಕ ಅವ್ರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಬಾಲಕನ ಕುಟುಂಬಸ್ಥರ ಆಕ್ರಂಧನ ಮುಗಿಲಿ ಮುಟ್ಟಿದೆ. ಸ್ಥಳಕ್ಕೆ ಎಸ್ಪಿ ಅಂಶುಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಾಲಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
Top Stories
ಅತ್ತಿವೇರಿ ಡ್ಯಾಂ ನಲ್ಲಿ ಆಕಸ್ಮಿಕವಾಗಿ ಬಿದ್ದು ಸಾವು ಕಂಡ ಹುನಗುಂದದ ಮಾನಸಿಕ ಅಸ್ವಸ್ಥ..!
ಮುಂಡಗೋಡ ಠಾಣೆಗೆ ವಿನೋದ್ ರೆಡ್ಡಿ ನೂತನ ಕ್ರೈಂ PSI, ನಿರೀಕ್ಷೆಗಳು ಒಂದಾ, ಎರಡಾ..?
ಕಾರವಾರ ಅಂಚೆ ವಿಭಾಗಕ್ಕೆ ಕರ್ನಾಟಕ ರಾಜ್ಯ ವೃತ್ತ ಮಟ್ಟದ ಪ್ರಶಸ್ತಿ
ಉತ್ತರ ಕನ್ನಡದಲ್ಲಿ ಮೇ.5 ರಿಂದ ಪ.ಜಾತಿ ಸಮುದಾಯದ ಸಮೀಕ್ಷೆ : ಜಿಲ್ಲಾಧಿಕಾರಿ
ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದಾರುಣ ಸಾವು..!
ಮುಂಡಗೋಡ ತಾಲೂಕಿಗೆ 65.3% ರಷ್ಟು SSLC ಫಲಿತಾಂಶ, ಮಳಗಿ ಪ್ರೌಢಶಾಲೆಯ ಭಾಗ್ಯಶ್ರೀ ಗೆ ಅತಿ ಹೆಚ್ಚು ಅಂಕ..!
ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನಲ್ಲಿ ಕೆಲಸದ ಸಮಯದಲ್ಲಿ ಬೃಹತ್ ಗಾತ್ರದ ಪ್ಯಾನಲ್ ಬಿದ್ದು ಗುತ್ತಿಗೆ ಕಾರ್ಮಿಕ ಸಾವು
ಮುಂಡಗೋಡ ತಾಲೂಕಿನ 79 ಶಾಲೆಗಳ ಸ್ಥಿತಿ ಚಿಂತಾಜನಕ, ಮಕ್ಕಳನ್ನು ಶಾಲೆಗೆ ಕಳಿಸೋಕೆ ಪಾಲಕರಿಗೆ ಭಾರೀ ಆತಂಕ..!
ಮೈನಳ್ಳಿಯಲ್ಲಿ ಸಿಡಿಲಾಘಾತ, ಐವರಿಗೆ ಸಿಡಿಲು ಬಡಿದು ಗಾಯ, ಆಸ್ಪತ್ರೆಗೆ ದಾಖಲು..!
ನಂದಿಪುರದಲ್ಲಿ ಸಿಡಿಲಿನಾರ್ಭಟ, ಮನೆಯ ವಿದ್ಯುತ್ ವೈಯರ್ ಗಳೇ ಭಸ್ಮ, ಟಿವಿ, ಪ್ರಿಡ್ಜು ಹರೋಹರ..! ಮನೆ ಮಂದಿಗೂ ಗಾಯ..!
ಪ್ರವಾಸಕ್ಕೆಂದು ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು ಸಮುದ್ರ ಪಾಲು, ಮತ್ತಿಬ್ಬರು ಬಚಾವ್..!
ಮುಂಡಗೋಡ ಪೊಲೀಸರ ಗಟ್ಟಿ ಕಾರ್ಯಾಚರಣೆ, ಗೋಹತ್ಯೆ ಕೇಸಿನಲ್ಲಿ ಓರ್ವ ಆರೋಪಿ ಅರೆಸ್ಟ್, ಮತ್ತೋರ್ವ ಪರಾರಿ..!
ಮುಂಡಗೋಡ ಕರಗಿನಕೊಪ್ಪ ಬಳಿ ಬೈಕ್ ಅಪಘಾತ, ಮೂಡಸಾಲಿಯ ವ್ಯಕ್ತಿಗೆ ಗಂಭೀರ ಗಾಯ..!
ಮುಂಡಗೋಡಿನಲ್ಲಿ ಗೋಹತ್ಯೆಗೆ ಖಂಡನೆ, ಹಿಂದು ಕಾರ್ಯಕರ್ತರ ಆಕ್ರೋಶ, ರಸ್ತೆ ತಡೆದು ಪ್ರತಿಭಟನೆ..!
ಮುಂಡಗೋಡಿನಲ್ಲೂ ಮಾಂಸಕ್ಕಾಗಿ ಆಕಳ ಹತ್ಯೆ..! ಪೊಲೀಸರ ದಾಳಿ..! ಸಿಕ್ಕಿದ್ದೇನು..?
ಕಾರವಾರ ನಗರಸಭೆ ಸದಸ್ಯನ ಭೀಕರ ಹತ್ಯೆ ಕೇಸ್, ಇಬ್ಬರು PSI ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್..? ಕಾರಣ..?
ಭಾರೀ ಮಳೆ ಗಾಳಿಗೆ ಇಂದೂರು ಕೊಪ್ಪ ಗ್ರಾಮದಲ್ಲಿ, ಮನೆಯ ಮೇಲ್ಚಾವಣಿ ಹಾನಿ, ಗೋವಿನಜೋಳ ರಾಶಿ ನೀರಲ್ಲಿ
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಪಾಳಾದ ರಾಮಾಪುರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಚಿಗಳ್ಳಿ ಹಿರಿಕೆರೆಯಲ್ಲಿ ಮೀನುಗಳ ದಾರುಣ ಸಾವು, ಇಡೀ ಕೆರೆಗೇ ವಿಷ ಹಾಕಿದ್ರಾ ದುರುಳರು..?
ಹಾವೇರಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ..!
ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?
ಬೆಂಗಳೂರಿನ ಲಾಡ್ಜ್ವೊಂದರಲ್ಲಿ ತೀರ್ಥಹಳ್ಳಿ ತಹಶೀಲ್ದಾರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಗದಗ ಮೂಲದ ಜಕ್ಕಣ್ಣಗೌಡರ್(56) ಮೃತ ತಹಶೀಲ್ದಾರರಾಗಿದ್ದಾರೆ. ಜಕ್ಕಣ್ಣಗೌಡರ್ ಅವರು ಬೆಂಗಳೂರಿಗೆ ಅ.14ರಂದು ಹೋಗೊದ್ದರು. ಖಾಸಗಿ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದರು. ಆದ್ರೆ, ನಿನ್ನೆ ರಾತ್ರಿ 9ರ ಸುಮಾರಿಗೆ ಅವರು ಲಾಡ್ಜ್ ರೂಮ್ನಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಗದಗ ಮೂಲದ 56 ವರ್ಷದ ಜಕ್ಕಣ್ಣ ಗೌಡರ್, ಕೋರ್ಟ್ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದು, ಅ.14ರಂದು ಖಾಸಗಿ ಲಾಡ್ಜ್ ಬುಕ್ ಮಾಡಿದ್ದರು. ಆದ್ರೆ, ನಿನ್ನೆ ಬೆಳಗ್ಗೆಯಿಂದ ಕುಟುಂಬಸ್ಥರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಕೂಡಲೇ ತೀರ್ಥಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಬಳಿಕ ತೀರ್ಥಹಳ್ಳಿ ಪೊಲೀಸರು ಕೂಡಲೇ ಬೆಂಗಳೂರು ಪೊಲೀಸರಿಗೆ ಸಂಪರ್ಕ ಮಾಡಿದ್ದಾರೆ. ನಂತರ ರಾತ್ರಿ 8ರ ಸುಮಾರಿಗೆ ಲಾಡ್ಜ್ಗೆ ಉಪ್ಪಾರಪೇಟೆ ಪೊಲೀಸರು ಭೇಟಿ ನೀಡಿ, ರೂಮ್ ಬಾಗಿಲು ಓಪನ್ ಮಾಡಿದ್ದಾರೆ. ಆಗ ಜಕ್ಕಣ್ಣ ಗೌಡರ್ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಮೇಲ್ನೋಟಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ. ಆದ್ರೆ ಇದುವರೆಗೆ ಸಾವಿನ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ. ಉಪ್ಪಾರಪೇಟೆ...
ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!
ಶಿಗ್ಗಾವಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ವ್ಯಕ್ತಿಗಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ ಘಟನೆ ಶಿಗ್ಗಾವಿ ಪಟ್ಟಣದ ಹಿರೇಕೆರೆಯಲ್ಲಿ ಮಂಗಳವಾರ ಸಂಜೆ ಜರುಗಿದೆ. ಮೃತ ವ್ಯಕ್ತಿಗಳನ್ನ ಶಿಗ್ಗಾವಿ ಪಟ್ಟಣದ ಸಾಲಗೇರಿ ಓಣಿಯ ಹಜರತ ಅಲಿ ಇಬ್ರಾಹಿಂ ಮುಕ್ಕೇರಿ (27), ಅಕ್ಸರ್ ಹಿಮಾಮ್ ಖಾಸೀಮ್ ಸುಲ್ತಾನಖಾನವರ (35) ಎಂದು ಗುರುತಿಸಲಾಗಿದೆ. ಮೀನು ಹಿಡಿಯುವಾಗ ಆಯತಪ್ಪಿ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿಗಳ ದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹೊರತೆಗೆಯುವ ಕಾರ್ಯಾಚರಣೆಯಲ್ಲಿ ತೊಡಗಿದ್ದು ಮೃತ ವ್ಯಕ್ತಿಗಳ ಮೃತದೇಹಗಳು ಸಿಗಬೇಕಿದೆ. ಮೃತ ವ್ಯಕ್ತಿಗಳನ್ನ ಪಟ್ಟಣದ ಜನತೆ ತಂಡೋಪತಂಡವಾಗಿ ನೋಡಲು ಆಗಮಿಸುತ್ತಿರುವುದು ಕಂಡು ಬಂದಿದೆ.
ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!
ನವದೆಹಲಿ: ರಾಜ್ಯದಲ್ಲಿ ಖಾಲಿ ಇರುವ 3 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗವು ನಿರ್ಧರಿಸಿದೆ. ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶವು ಪ್ರಕಟವಾಗಲಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರ, ಇ.ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರ, ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ
ಹುಬ್ಬಳ್ಳಿಯ ಯುವಕನೋರ್ವನ ಬರ್ಬರ ಹತ್ಯೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಸುದೀಪ್, ಕಿರಣ್ ಪೊಲೀಸರ ಗುಂಡು ತಿಂದ ಆರೋಪಿಗಳಾಗಿದ್ದಾರೆ. ಆಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಶಿವರಾಜ್ ಕಮ್ಮಾರ ಎಂಬ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದರು. ಆದ್ರೆ ಹತ್ಯೆ ನಡೆದ 6 ಗಂಟೆಯಲ್ಲಿ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪೊಲೀಸರು ಬಂಧಿಸಲು ತೆರಳಿದಾಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಹಂಕತರ ಮೇಲೆ ಫೈರಿಂಗ್ ಮಾಡಿದ್ದು, ಆರೋಪಿಗಳಾದ ಸುದೀಪ್ ಮತ್ತು ಕಿರಣ್ ಕಾಲಿಗೆ ಗುಂಡು ತಗುಲಿದ್ದರಿಂದ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಿಮ್ಸ್ ಆಸ್ಪತ್ರೆಗೆ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಲಿದ್ದಾರೆ.
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!
ಮುಂಡಗೋಡ: ಪಟ್ಟಣದ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆ ಉಸಿರೆಳೆದಿದ್ದಾರೆ.
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ
ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ಇದು ಪ್ರಸಕ್ತ ವರ್ಷದ ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ.. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡದ ಮಾಲತೇಶ ಸ್ವಾಮಿಯ ದೈವ ವಾಣಿ ಕಾರ್ಣಿಕ ಶುಕ್ರವಾರ ಸಂಜೆ ಜರುಗಿತು. ನಾಗಪ್ಪಜ್ಜ ಉರ್ಮಿ 21 ಅಡಿ ಬಿಲ್ಲನ್ನು ಏರಿ “ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ಎನ್ನುವ ಭವಿಷ್ಯವಾಣಿಯನ್ನು ನುಡಿದಿದ್ದಾರೆ. ವಿಜಯದಶಮಿಯ ಮುನ್ನಾದಿನ ಕ್ಷೇತ್ರ ದೇವರಗುಡ್ಡದಲ್ಲಿ ಗೊರವಯ್ಯ ಕಾರ್ಣಿಕ ನುಡಿಯುವ ಸಂಪ್ರದಾಯವಿದೆ. “ದಸರಾ ಸಂದರ್ಭದಲ್ಲಿ ಕಾರ್ಣಿಕ ನುಡಿಯುವ ನಾಗಪ್ಪ ಉರ್ಮಿ 21 ಅಡಿ ಬಿಲ್ಲನ್ನು ಏರಿ ಆಯುಧಪೂಜೆಯ ದಿನದಂದು ಭವಿಷ್ಯ ನುಡಿದಿರುತ್ತಾರೆ. “ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ಎನ್ನುವ ಭವಿಷ್ಯವಾಣಿಯನ್ನು ನುಡಿದಿದ್ದಾರೆ. ಪ್ರತೀ ವರ್ಷ ನಿಜಾಂಶವನ್ನು ತಿಳಿಸುವಂತಹ ಭವಿಷ್ಯವಾಣಿ ಇದಾಗಿರುತ್ತದೆ ಎನ್ನುವುದು ಭಕ್ತರ ನಂಬಿಕೆಯಾಗಿದೆ. ಈ ವರ್ಷದ ಕಾರ್ಣಿಕವು ಉತ್ತಮವಾಗಿದ್ದು, ಭವಿಷ್ಯವಾಣಿಯನ್ನು ರೈತಾಪಿ ವರ್ಗದ ಪರವಾಗಿ ವಿಶ್ಲೇಷಿಸಲಾಗುತ್ತಿದೆ.
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!
ಮುಂಡಗೋಡ; ಕರಡಿ ದಾಳಿಯಿಂದ ಯುವಕನೋರ್ವನಿಗೆ ಗಂಭೀರ ಗಾಯವಾದ ಘಟನೆ, ಮುಂಡಗೋಡ ತಾಲೂಕಿನ ಕಾತೂರ ಪಂಚಾಯತ್ ವ್ಯಾಪ್ತಿಯ ಸಿಂಗನಹಳ್ಳಿ ಹುಲಿಹೊಂಡ ಗ್ರಾಮದಲ್ಲಿ ನಡೆದಿದೆ. ವಿಪರ್ಯಾಸ ಅಂದ್ರೆ ಐದು ದಿನಗಳ ಹಿಂದೆ ನಡೆದಿದೆ ಎನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಮು ಜಾನು ಕೋಕರೆ(31) ಕರಡಿ ದಾಳಿಗೊಳಗಾದ ವ್ಯಕ್ತಿಯಾಗಿದ್ದಾನೆ. ಕಳೆದ ಐದು ದಿನಗಳ ಹಿಂದೆ ಕರಡಿ ದಾಳಿಯಾಗಿತ್ತು. ಈ ವೇಳೆ ವ್ಯಕ್ತಿಯ ತಲೆಗೆ ಕಚ್ಚಿ ತೀವ್ರ ಗಾಯಗೊಳಿಸಿತ್ತು. ದುರಂತ ಅಂದ್ರೆ ಇಷ್ಟೊಂದು ಗಾಯವಾಗಿದ್ರೂ ಈ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗಲೇ ಇಲ್ಲವೆನೋ ಅನ್ನೋ ಅನುಮಾನ ಶುರುವಾಗಿದೆ. ಈಗಾಗಲೇ ತಾಲೂಕಾಸ್ಪತ್ರಗೆ ಗಾಯಾಳು ವ್ಯಕ್ತಿಯನ್ನು ಚಿಕಿತ್ಸೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ, ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಶಿರಸಿ : ಗ್ರಾಮೀಣ ಪ್ರದೇಶದ ಜನರಿಗೆ ಸರಕಾರದ ಅಗತ್ಯ ಸೌಲಭ್ಯಗಳ ಪೂರೈಕೆ ಹಾಗೂ ಮೂಲಭೂತ ಸಮಸ್ಯೆಗಳ ನಿವಾರಣೆಗಾಗಿ ಶ್ರಮಿಸುವ ಆರ್ಡಿಪಿಆರ್, ಕಂದಾಯ, ಪೋಲಿಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಪ್ರತಿಯೊಬ್ಬ ನೌಕರರು ಜನಸಾಮಾನ್ಯರು ಮತ್ತು ಜನಪ್ರತಿನಿಧಿಗಳ ನಡುವಿನ ಸಂಪರ್ಕಕೊಂಡಿಯಾಗಿ ನಿರಂತರ ಒತ್ತಡದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದು, ಪ್ರತಿಯೊಬ್ಬ ನೌಕರರು ಈ ಎಲ್ಲ ಒತ್ತಡಗಳ ನಡುವೆಯೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದಿನನಿತ್ಯ ವ್ಯಾಯಾಮ, ಯೋಗ, ಕ್ರೀಡೆ ಗಳಲ್ಲಿ ಭಾಗವಹಿಸುವ ಮೂಲಕ ಆರೋಗ್ಯ ಹಾಗೂ ತಮ್ಮ ಕುಟುಂಬಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ರವರು ಹೇಳಿದರು. ಅವರು ಶನಿವಾರ ಶಿರಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರಿಡಾಂಗಣದಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಸಮಾಜದಲ್ಲಿ ಮಹತ್ತರ ಬದಲಾವಣೆ ತರುವಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಾತ್ರ...