ಕಾರವಾರ : ಇಲ್ಲಿನ ಸರ್ವೆ ಅಧಿಕಾರಿ ಒಬ್ಬರ ಕರ್ತವ್ಯಕ್ಕೆ ಪತ್ರಕರ್ತ ಅಡ್ಡಿ ಪಡಿಸಿದ್ದಾರೆ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿ ಕಾರವಾರದ ಸಿಜೆಎಂ ನ್ಯಾಯಾಲಯ ಪತ್ರಕರ್ತ ಉದಯ ನಾಯ್ಕ ಬರ್ಗಿ ಹಾಗೂ ಸಾಯಿಕಿರಣ ಬಾಬ್ರೇಕರ್ ಎನ್ನುವವರಿಗೆ ತಲಾ ಆರು ಸಾವಿರ ರೂಪಾಯಿ ದಂಡ ತಪ್ಪಿದ್ದಲ್ಲಿ ತಲಾ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪತ್ರಕರ್ತ ಉದಯ ಬರ್ಗಿ ಅವರು ಅರ್ಜಿ ಸಲ್ಲಿಸಿದ್ದು, ಮಾನ್ಯ ನ್ಯಾಯಾಲಯವು ಪ್ರಕರಣಕ್ಕೆ ತಡೆಯಾಜ್ಞೆ ನೀಡಿದೆ. ಈ ಇಬ್ಬರ ಪರವಾಗಿ ಕುಮಟಾದ ಖ್ಯಾತ ಯುವ ನ್ಯಾಯವಾದಿ, ವಿರೇಂದ್ರ ಗಿರಿಯಣ್ಣ ನಾಯಕ, ತೋರ್ಕೆ ಅವರು ವಾದವನ್ನು ಮಂಡಿಸಿದ್ದರು. ಇವರ ವಾದ ಆಲಿಸಿದ ಮಾನ್ಯ ನ್ಯಾಯಾಲಯವು ಪ್ರಕರಣಕ್ಕೆ ತಡೆಯಾಜ್ಞೆ ನೀಡಿದೆ.
Top Stories
ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಜನ್ಮದಿನ ಆಚರಣೆ, ಕಾಂಗ್ರೆಸ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ..!
ಅಗಡಿಯಲ್ಲಿ ಜೋಡೇತ್ತುಗಳ ಕಳ್ಳತನ, ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳನ್ನೇ ಹೊತ್ತೊಯ್ದ ಕಳ್ಳರು..!
ಮುಂಡಗೋಡ ನೆಹರು ನಗರದಲ್ಲಿ ಜೇನುದಾಳಿ 6 ಜನರಿಗೆ ಗಾಯ, ಮೂವರು ಗಂಭೀರ..!
ಸಭಾಪತಿ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರ ಕಾಲಿಗೆ ಪೊಲೀಸರ ಗುಂಡೇಟು
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಲಾರಿ, ಕಾರಿನಲ್ಲಿ ಇಬ್ಬರು ಸಿಲುಕಿ ನರಳಾಟ, ಹೊರತೆಗೆಯಲು ಹರಸಾಹಸ..!
ತಿಂಗಳಾಂತ್ಯಕ್ಕೆ ಹೆಬ್ಬಾರ್ ಹಾಗೂ ST ಸೋಮಶೇಖರ್, ಬಿಜೆಪಿ ಪಕ್ಷದಿಂದ ಉಚ್ಚಾಟನೆ ಗ್ಯಾರಂಟಿ- ಲಿಂಗರಾಜ ಪಾಟೀಲ್
ಮೈನಳ್ಳಿ ಪಂಚಾಯತಿಯ ಕಳಕೀಕಾರೆಯಲ್ಲಿ ಕುಡಿಯುವ ನೀರಿಗೆ ಬರ..! ಟ್ಯಾಂಕರ್ ಮೂಲಕ ನೀರು ಪೂರೈಕೆ..!
ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಹಣ ನೀಡಲ್ಲ, ಬದಲಾಗಿ ಅಕ್ಕಿ ವಿತರಣೆೆ ; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇದುವರೆಗೆ 2500 ಕ್ಕೂ ಆಧಿಕ ಕಡಲಾಮೆ ಮರಿಗಳು ಸಮುದ್ರಕ್ಕೆ : ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ರವಿಶಂಕರ್
SSLC ಪರೀಕ್ಷೆಗಳು ವ್ಯವಸ್ಥಿತ ಮತ್ತು ಪಾರದರ್ಶಕವಾಗಿರಲಿ, ಪೂರ್ವಭಾವಿ ಸಭೆಯಲ್ಲಿ ಡೀಸಿ ಲಕ್ಷ್ಮಿಪ್ರಿಯ ಅಧಿಕಾರಿಗಳಿಗೆ ತಾಕೀತು..!
ಹಿರಿಯೂರು ಬಳಿ ಅಪಘಾತ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ..!
ಹುನಗುಂದದಲ್ಲಿ ರೇಣುಕಾಚಾರ್ಯರ ಜಯಂತಿ ಉತ್ಸವ..!
ಬಂಕಾಪುರ ಬಳಿ ಮುಡಸಾಲಿ ವ್ಯಕ್ತಿಯ ಅನುಮಾನಾಸ್ಪದ ಸಾವು..? ಅಪಘಾತವಾ..? ಕೊಲೆಯಾ..?
ಹುನಗುಂದ ಗ್ರಾಪಂ PDO ಮಂಜುನಾಥ್ ಗೆ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!
ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!
ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!
ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?
ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಜನ್ಮದಿನ ಆಚರಣೆ, ಕಾಂಗ್ರೆಸ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ..!
ಮುಂಡಗೋಡ: ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ಅವರ ಜನ್ಮ ದಿನವನ್ನು ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ಸರಕಾರಿ ಆಸ್ಪತ್ರೆ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು. ಮಾಜಿ ಶಾಸಕ ವಿ.ಎಸ್ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಮ್.ಎನ್ ದುಂಡಸಿ, ತಾಲೂಕು ಗ್ಯಾರಂಟಿ ಅಧ್ಯಕ್ಷ ರಾಜಶೇಖರ ಹಿರೇಮಠ, ಪ.ಪಂ ಸದಸ್ಯ ಮಹ್ಮದಗೌಸ ಮಖಾಂದಾರ, ಶಿವರಾಜ ಸುಬ್ಬಾಯವರ, ನಜೀರ್ ಅಹ್ಮದ ದರ್ಗಾವಾಲೆ, ಆಲೆಹಸನ ಬೆಂಡಿಗೇರಿ, ಧರ್ಮರಾಜ ನಡಗೇರ, ಶಾರದಾ ರಾಠೋಡ, ಸಲೀಂ ನಂದಿಗಟ್ಟಿ, ಬಸವರಾಜ ಆಸ್ತಕಟ್ಟಿ, ರಪೀಕ್ ಇನಾಮದಾರ, ಬಾಬುರಾವ ಲಾಡನವರ, ಬಸವರಾಜ ಕುಂದರ್ಗಿ ಮುಂತಾದವರು ಉಪಸ್ಥಿತರಿದ್ದರು
ಅಗಡಿಯಲ್ಲಿ ಜೋಡೇತ್ತುಗಳ ಕಳ್ಳತನ, ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳನ್ನೇ ಹೊತ್ತೊಯ್ದ ಕಳ್ಳರು..!
ಮುಂಡಗೋಡ ತಾಲೂಕಿನಲ್ಲೂ ಗೋಕಳ್ಳರು, ದನಗಳ್ಳರು ಬಂದಿದ್ದಾರಾ..? ಇಂತಹದ್ದೊಂದು ಅನುಮಾನ ಅಗಡಿ ಗ್ರಾಮದಲ್ಲಿ ನಿನ್ನೆ ಶನಿವಾರ ರಾತ್ರಿ ನಡೆದ ಘಟನೆಯಿಂದ ಆತಂಕಮೂಡಿಸಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ಲಕ್ಷ ಬೆಲೆ ಬಾಳುವ ಜೋಡೆತ್ತುಗಳನ್ನೇ ಖದೀಮರು ಕದ್ದು ಹೋಗಿದ್ದಾರೆ ಅನ್ನೊ ಮಾಹಿತಿ ಬಂದಿದೆ. ಅಗಡಿ ಗ್ರಾಮದ ನಿಂಗಪ್ಪ ಫಕ್ಕೀರಪ್ಪ ಗಳಗಿ ಎಂಬುವವರಿಗೆ ಸೇರಿದ ಎರಡು ಎತ್ತುಗಳನ್ನು ಶನಿವಾರ ರಾತ್ರಿ ಕಳ್ಳರು ಹೊತ್ತೊಯ್ದಿದ್ದಾರೆ ಎನ್ನಲಾಗಿದೆ. ರಾತ್ರಿ ಮೇವು ಹಾಕಿ ನೀರು ಕುಡಿಸಿ, ಕೊಟ್ಟಿಗೆಯಲ್ಲಿ ಕಟ್ಟಿದ್ದ ರೈತ ನಿಂಗಪ್ಪ ಮನೆಯಲ್ಲಿ ಮಲಗಿದ್ದ. ಇದೇ ಹೊತ್ತಲ್ಲಿ, ತಡರಾತ್ರಿ ದಾಳಿ ಇಟ್ಟಿರೋ ಕಳ್ಳರು ಎರಡೂ ಎತ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ ಅನ್ನೊ ಅನುಮಾನ ಮೂಡಿದೆ. ಸ್ಥಳದಲ್ಲಿ ಯಾವುದೋ ಒಂದು ವಾಹನದ ಟೈಯರ್ ಗುರುತುಗಳು ಇದ್ದು ಬಹುಶಃ ಟಾಟಾ ಎಸ್ ಅಥವಾ ಬೊಲೆರೋ ವಾಹನದಲ್ಲಿ ಎತ್ತುಗಳನ್ನು ಸಾಗಿಸಲಾಗಿದೆ ಅನ್ನೋ ಸಂಶಯ ಮೂಡಿದೆ. ಮದ್ಯದಂಗಡಿಗೆ ಬಂದು ಸ್ಕೆಚ್ ಹಾಕಿದ್ರಾ..? ಅಸಲು, ಈ ಎತ್ತುಗಳನ್ನು ಕಳ್ಳತನ ಮಾಡಿರೋದರ ಹಿಂದೆ ಬಹುತೇಕ ಪರಿಚಯದವರ ಕೈವಾಡ ಅಥವಾ ಆ ಸ್ಥಳದ ಮಾಹಿತಿ...
ಮುಂಡಗೋಡ ನೆಹರು ನಗರದಲ್ಲಿ ಜೇನುದಾಳಿ 6 ಜನರಿಗೆ ಗಾಯ, ಮೂವರು ಗಂಭೀರ..!
ಮುಂಡಗೋಡ ಪಟ್ಟಣದ ನೆಹರು ನಗರದಲ್ಲಿ ಜೇನು ನೋಣಗಳ ದಾಳಿಯಾಗಿದೆ. ಪರಿಣಾಮ ಆರು ಜನರಿಗೆ ಗಾಯವಾಗಿದೆ. ಅದ್ರಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಪಟ್ಟಣದ ನೆಹರು ನಗರದ ನನ್ನೇಸಾಬ್ ಶೇಖ್ ಮನೆಯ ಹತ್ತಿರದ ಗಿಡದಲ್ಲಿ ಜೇನು ಗೂಡು ಕಟ್ಟಿತ್ತು. ಇವತ್ತು ಮದ್ಯಾನ ಬಿಸಿಲಿನ ತಾಪಕ್ಕೋ ಅಥವಾ ಯಾರಾದ್ರೂ ಕಲ್ಲೆಸೆದ ಕಾರಣಕ್ಕೋ ಜೇನು ನೋಣಗಳು ಎದ್ದಿವೆ. ಈ ಹೊತ್ತಲ್ಲಿ ಅಲ್ಲೇ ಪಕ್ಕದಲ್ಲಿ ಇದ್ದ ಆರು ಜನರಿಗೆ ಕಚ್ಚಿ ಗಾಯಗೊಳಿಸಿವೆ. ಅದ್ರಲ್ಲಿ ಮೂವರಿಗೆ ಗಂಭೀರ ಗಾಯಗೊಳಿಸಿವೆ. ಸದ್ಯ ಗಾಯಾಳುಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಸ್ಥಳೀಯ ಅರಣ್ಯ ಇಲಾಖೆ ಅಧಿಕಾರಿ ಅರುಣ್ ಕುಮಾರ್ ಕಾಶಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪಟ್ಟಣ ಪಂಚಾಯತಿಅಧಿಕಾರಿಗಳು ಈ ಬಗ್ಗೆ ಕೂಡಲೇ ಎಚ್ಚೆತ್ತುಕೊಂಡು, ಪಟ್ಟಣದಲ್ಲಿನ ಭಯಾನಕ ಜೇನುಗೂಡುಗಳ ತೆರವು ಕಾರ್ಯ ಮಾಡಬೇಕು ಅನ್ನೋದು ಸಾರ್ವಕನಿಕರ ಆಗ್ರಹವಾಗಿದೆ.
ಸಭಾಪತಿ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರ ಕಾಲಿಗೆ ಪೊಲೀಸರ ಗುಂಡೇಟು
ಹುಬ್ಬಳ್ಳಿ: ನಗರದಲ್ಲಿ ಮತ್ತೆ ಪೊಲೀಸರ ಗನ್ ಸದ್ದು ಮಾಡಿದೆ. ಮನೆಯೊಂದರಲ್ಲಿ ದರೋಡೆ ಮಾಡಿದ್ದ ಇಬ್ಬರು ಅಂತರರಾಜ್ಯ ದರೋಡೆಕೋರರಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಅಂತರರಾಜ್ಯ ಕಳ್ಳರಾದ ಇರ್ಷಾದ್ ಹಾಗೂ ಅಕ್ಬರ್ ಕಾಲಿಗೆ ಹುಬ್ಬಳ್ಳಿಯ ಉಪನಗರ ಪೊಲೀಸರು ಗುಂಡು ಹಾರಿಸಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿಯವರ ಹುಬ್ಬಳ್ಳಿಯ ನಿವಾಸದ ಬಳಿ ಆರೋಪಿಗಳು ದರೋಡೆ ಮಾಡಿದ್ದರು. ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ, ಮೂವರು ಪೊಲೀಸ್ ಸಿಬ್ಬಂದಿಗೆ ಗಾಯವಾಗಿದ್ದು, ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಿಸಿದ್ದಾರೆ. ಪೊಲೀಸರಿಂದ ಗುಂಡೇಟು ತಿಂದ ಆರೋಪಿಗಳನ್ನು ಸಹ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಲಾರಿ, ಕಾರಿನಲ್ಲಿ ಇಬ್ಬರು ಸಿಲುಕಿ ನರಳಾಟ, ಹೊರತೆಗೆಯಲು ಹರಸಾಹಸ..!
ಬ್ರೇಕಿಂಗ್ ಬೆಳಗಾವಿ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಘನಘೋರ ದುರಂತ. ಚಲಿಸುತ್ತಿದ್ದ ಕಾರಿನ ಮೇಲೆ ಮುಗುಚಿ ಬಿದ್ದ ಲಾರಿ. ಕಾರಿನಲ್ಲೇ ಸಿಲುಕಿ ಹಾಕಿ ಒದ್ದಾಡುತ್ತಿರುವ ಇಬ್ಬರು. ಬೆಳಗಾವಿ ನಗರ ಹೊರ ವಲಯದ ಕೆಎಲ್ಇ ಆಸ್ಪತ್ರೆ ಬಳಿ ಘಟನೆ. ಕಾರಿನಲ್ಲಿದ್ದವರನ್ನ ಹೊರ ತೆಗೆಯಲು ಹರಸಾಹಸ ಪಡುತ್ತಿರುವ ಸಾರ್ವಜನಿಕರು. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.
ತಿಂಗಳಾಂತ್ಯಕ್ಕೆ ಹೆಬ್ಬಾರ್ ಹಾಗೂ ST ಸೋಮಶೇಖರ್, ಬಿಜೆಪಿ ಪಕ್ಷದಿಂದ ಉಚ್ಚಾಟನೆ ಗ್ಯಾರಂಟಿ- ಲಿಂಗರಾಜ ಪಾಟೀಲ್
ಹುಬ್ಬಳ್ಳಿ: ಪಕ್ಷ ವಿರೋಧಿ ಚಟುವಟಿಕೆ ಆರೋಪ ಹೊತ್ತ ಇಬ್ಬರು ಶಾಸಕರನ್ನು ಈ ತಿಂಗಳಾಂತ್ಯಕ್ಕೆ ಪಕ್ಷದಿಂದ ಉಚ್ಚಾಟನೆ ಮಾಡಲಾಗುವದು ಅಂತಾ ಬಿಜೆಪಿ ಶಿಸ್ತು ಸಮಿತಿ ರಾಜ್ಯ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯ ನಂತ್ರ ಎಸ್.ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ನಿರಂತರ ಪಕ್ಷ ದ್ರೋಹ ಮಾಡಿದ್ದಾರೆ. ಕಳೆದ ಲೋಕಸಭಾ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಇವರಿಬ್ಬರ ಬಗ್ಗೆ ಈಗಾಗಲೇ ಕೇಂದ್ರ ಶಿಸ್ತು ಸಮಿತಿ ಅಧ್ಯಕ್ಷರಿಗೆ ವರದಿ ಸಲ್ಲಿಸಲಾಗಿದೆ ಎಂದರು. ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಕ್ಷೇತ್ರಕ್ಕೆ ತೆರಳಿ ವರದಿ ಸಿದ್ಧಪಡಿಸಿದ್ದೇನೆ. ಪಕ್ಷದ ಕಾರ್ಯಕರ್ತರ ಮತ್ತು ಅಲ್ಲಿನ ಮಂಡಳ ಅಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿಂದ ವರದಿ ಸಿದ್ದಪಡಿಸಿ ನೀಡಿದ್ದೇನೆ. ಅಲ್ಲದೇ ಇಬ್ಬರು ಶಾಸಕರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ವಿಡಿಯೋ ಮತ್ತು ಪೇಪರ್ ಕಟಿಂಗ್‌ಗಳನ್ನ ವರದಿಯ ಜೊತೆಗೆ ಸಲ್ಲಿಸಲಾಗಿದೆ. ಇಲ್ಲಿಯವರೆಗೂ ಎರಡ್ಮೂರು ಬಾರಿ ಕೇಂದ್ರಕ್ಕೆ ವರದಿ ನೀಡಲಾಗಿದೆ. ಹೀಗಾಗಿ ಈ ತಿಂಗಳಾಂತ್ಯಕ್ಕೆ ಇಬ್ಬರ ಶಾಸಕರ ಉಚ್ಚಾಟನೆ...
ಮೈನಳ್ಳಿ ಪಂಚಾಯತಿಯ ಕಳಕೀಕಾರೆಯಲ್ಲಿ ಕುಡಿಯುವ ನೀರಿಗೆ ಬರ..! ಟ್ಯಾಂಕರ್ ಮೂಲಕ ನೀರು ಪೂರೈಕೆ..!
ಮುಂಡಗೋಡ ತಾಲೂಕಿನ ಮೈನಳ್ಳಿ ಗ್ರಾಮ ಪಂಚಾಯತದ ಕಳಕಿಕಾರೆ ಮಜಿರೆಯಲ್ಲಿ ಕುಡಿಯುವ ನೀರಿನ ಅಭಾವ ತಲೆದೋರಿದೆ. ಬಹುತೇಕ ಇಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಸಂಕಟ ಒಂದೆಡೆಯಾದ್ರೆ, ಗ್ರಾಮಸ್ಥರಿಗೆ ನೀರು ಪೂರೈಸಲು ಮೈನಳ್ಳಿ ಗ್ರಾಮ ಪಂಚಾಯತಿ ಅಧಿಕಾರಿಗಳು ಪರದಾಡುವ ಸ್ಥಿತಿಯಲ್ಲಿದ್ದಾರೆ. ಕಳೆದ ಒಂದು ವಾರದಿಂದ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಅಂದಹಾಗೆ, ಮೈನಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಕೀಕಾರೆಯಲ್ಲಿ RWS ಇಲಾಖೆಯಿಂದ ಬೋರ್ವೆಲ್ ಕೊರೆದಿದ್ದಾರೆ. ಆದ್ರೆ, ಜೀವಜಲ ಮಾತ್ರ ಸಿಕ್ಕೇ ಇಲ್ಲ. ಹೀಗಾಗಿ, ಇಲ್ಲಿನ ಜನ್ರಿಗೆ ಕುಡಿಯುವ ನೀರು ಅನ್ನೋದು ನಿತ್ಯದ ಪರದಾಟವಾಗಿದೆ. ಈ ಕಾರಣಕ್ಕಾಗೇ, ಕಳೆದ ಎಂಟು ದಿನಗಳಿಂದ ಟ್ಯಾಂಕರ್ ಮೂಲಕ ಗ್ರಾಪಂ ನೀರು ಪೂರೈಸುತ್ತಿದೆ. ಆದ್ರೆ ಇದೇಲ್ಲ ಎಷ್ಟು ದಿನ..? ಇದೇ ರೀತಿ ಆದ್ರೆ, ನೀರು ಪೂರೈಸಲು ಬೇಕಾದ ಆರ್ಥಿಕ ವ್ಯವಸ್ಥೆ ಇಲ್ಲದೆ, ಗ್ರಾಪಂ ಅಧಿಕಾರಿಗಳಿಗೆ ಕಷ್ಟವಾಗಬಹುದು. ಹೀಗಾಗಿ, ಜಿಲ್ಲಾಡಳಿತ ಈ ಕಡೆ ಒಂದಿಷ್ಟು ಗಮನ ಹರಿಸೋದು ಅವಶ್ಯವಿದೆ.
ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಹಣ ನೀಡಲ್ಲ, ಬದಲಾಗಿ ಅಕ್ಕಿ ವಿತರಣೆೆ ; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಕಾರವಾರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (ಆಃಖಿ) ಮುಖಾಂತರ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯ ಬದಲಾಗಿ ಫೆಬ್ರವರಿ-2025 ರ ಮಾಹೆಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ 05 ಕೆ.ಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ .ಕೆ.ಲಕ್ಷ್ಮೀಪ್ರಿಯ ತಿಳಿಸಿದ್ದಾರೆ. ಅದರಂತೆ ಫೆಬ್ರವರಿ-2025 ಮಾಹೆಯಲ್ಲಿ ವಿತರಿಸಬೇಕಾದ ಅಕ್ಕಿ ಪ್ರಮಾಣವನ್ನು ಸೇರಿ ಮಾರ್ಚ್-2025 ಮಾಹೆಯಲ್ಲಿ ಈ ಕೆಳಗಿನ ಪ್ರಮಾಣದಂತೆ ವಿತರಿಸಲಾಗುವುದು. ಮಾರ್ಚ್ ಮಾಹೆ 1ನೇ ತಾರೀಖಿನಿಂದ ತಿಂಗಳ ಕೊನೆಯವರೆಗೆ ಬೆಳಿಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ-ಕೆವೈಸಿ ಮಾಡುವ ಹಾಗೂ ಪಡಿತರ ವಿತರಣೆ ಕಾರ್ಯ ಜರುಗಲಿದ್ದು, ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಬೇಕು. ಇ-ಕೆವೈಸಿ ಮಾಡಿಸಲು ಪಡಿತರ...
ಇದುವರೆಗೆ 2500 ಕ್ಕೂ ಆಧಿಕ ಕಡಲಾಮೆ ಮರಿಗಳು ಸಮುದ್ರಕ್ಕೆ : ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ರವಿಶಂಕರ್
ಕಾರವಾರ: ಕಾರವಾರ ಅಂಕೋಲಾ ವಿಭಾಗದಲ್ಲಿ ಈ ವರ್ಷ ಇದುವರೆಗೆ 2500 ಕ್ಕೂ ಅಧಿಕ ಆಲಿವ್ ರಿಡ್ಲೆ ಕಡಲಾಮೆಗಳನ್ನು ಸಮುದ್ರಕ್ಕೆ ಬಿಡಲಾಗಿದ್ದು, 111 ಕಡಲಾಮೆಗಳ ಗೂಡುಗಳನ್ನು ರಕ್ಷಣೆ ಮಾಡಲಾಗಿದೆ. ಕಳೆದ ವರ್ಷ 188 ಕಡಲಾಮೆಗಳ ಗೂಡುಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಕಾರವಾರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ರವಿಶಂಕರ್ ತಿಳಿಸಿದರು. ಅವರು ಶುಕ್ರವಾರ ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದಲ್ಲಿ ಸಮಾರು 150 ಆಲಿವ್ ರಿಡ್ಲೆ ಕಡಲಾಮೆ ಮರಿಗಳನ್ನು ಸಮುದ್ರಕ್ಕೆ ಬಿಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಎರಡು ಗೂಡುಗಳಿಂದ 152 ಮೊಟ್ಟೆಗಳಿಂದ 149 ಮರಿಗಳು ಹೊರಬಂದಿದ್ದು, ಇದು ಉತ್ತಮ ಬೆಳವಣಿಗೆಯಾಗಿದೆ. ಮೊಟ್ಟೆಯಿಂದ ಹೊರಬಂದ ಸಂರಕ್ಷಣೆ ಮಾಡಿದ ಕಡಲಾಮೆ ಮರಿಗಳನ್ನು 51 ದಿನದ ನಂತರ ಸಮುದ್ರಕ್ಕೆ ಇಂದು ಬಿಡಲಾಗಿದೆ. ಕಾರವಾರ ವಿಭಾಗದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕೋಸ್ಟಲ್ ಮರೈನ್ ಸೇಲ್ ಸ್ಥಾಪಿಸಿಲಾಗಿದ್ದು, ಇದರಿಂದ ಕಡಲಾಮೆಗಳ ಗೂಡುಗಳ ಮತ್ತು ಮೊಟ್ಟೆಗಳ ರಕ್ಷಣೆ ಮಾಡಿ, ಮರಿಗಳನ್ನು ಪೋಷಣೆ ಮಾಡಿ ಸಮುದ್ರಕ್ಕೆ ಬಿಡಲಾಗುತ್ತದೆ ಎಂದರು. ಹೊನ್ನಾವರದಲ್ಲಿ ಕಳೆದ...