ವಿಜಯಪುರ- ಗೋ ಹತ್ಯೆ ನಿಷೇಧ ಕಾಯ್ದೆ ವಿಧೇಯಕ ಜಾರಿ ಹಿನ್ನೆಲೆ, ವಿಜಯಪುರದಲ್ಲಿ ಬಿಜೆಪಿ, ಹಿಂದೂ ಪರ ಸಂಘಟನೆಗಳು ಹರ್ಷ ವ್ಯಕ್ತ ಪಡಿಸಿವೆ.. ವಿಜಯಪುರದ ಶಿವಾಜಿ ವೃತ್ತದಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸುವ ಮೂಲಕ ಸಂಭ್ರಮಾಚರಣೆ ಮಾಡಿದ್ರು.. ಮೋದಿ, ಯಡಿಯೂರಪ್ಪ, ಪ್ರಭು ಚವ್ಹಾಣ್ ಪರ ಘೋಷಣೆ ಕೂಗಿ ಸಂತಸ ವ್ಯಕ್ತ ಪಡಿಸಿದ್ರು..
Top Stories
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
ಅನ್ನಭಾಗ್ಯದ ಅಕ್ಕಿ ದುರುಪಯೋಗ ಆಗದಿರಲಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ
ಮುಂಬರುವ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪ ತಡೆಯಲು ಸರ್ವ ಸನ್ನಧ್ದರಾಗಿ-ಡಿಸಿ ಲಕ್ಷ್ಮೀ ಪ್ರಿಯ
ಮುಂಡಗೋಡಲ್ಲಿ ಖಾಸಗಿ GL ಫೈನಾನ್ಸ್ ಗೆ ರಿಬ್ಬನ್ ಕಟ್ ಮಾಡಿದ ಸರ್ಕಾರಿ ಅಧಿಕಾರಿ..! ಆ ಗೋಲ್ಡ್ ಲೋನ್ ಫೈನಾನ್ಸ್ ಕಂಪನಿಗೂ, ಶಿಕ್ಷಣ ಇಲಾಖೆಗೂ ಏನಯ್ಯ ಸಂಬಂಧ..?
ಪತ್ರಕರ್ತನಿಗೆ ದಂಡ ತೀರ್ಪಿಗೆ ಜಿಲ್ಲಾ ಕೋರ್ಟ್ ತಡೆಯಾಜ್ಞೆ
ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಜನ್ಮದಿನ ಆಚರಣೆ, ಕಾಂಗ್ರೆಸ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ..!
ಅಗಡಿಯಲ್ಲಿ ಜೋಡೇತ್ತುಗಳ ಕಳ್ಳತನ, ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳನ್ನೇ ಹೊತ್ತೊಯ್ದ ಕಳ್ಳರು..!
ಮುಂಡಗೋಡ ನೆಹರು ನಗರದಲ್ಲಿ ಜೇನುದಾಳಿ 6 ಜನರಿಗೆ ಗಾಯ, ಮೂವರು ಗಂಭೀರ..!
ಸಭಾಪತಿ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರ ಕಾಲಿಗೆ ಪೊಲೀಸರ ಗುಂಡೇಟು
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಲಾರಿ, ಕಾರಿನಲ್ಲಿ ಇಬ್ಬರು ಸಿಲುಕಿ ನರಳಾಟ, ಹೊರತೆಗೆಯಲು ಹರಸಾಹಸ..!
ತಿಂಗಳಾಂತ್ಯಕ್ಕೆ ಹೆಬ್ಬಾರ್ ಹಾಗೂ ST ಸೋಮಶೇಖರ್, ಬಿಜೆಪಿ ಪಕ್ಷದಿಂದ ಉಚ್ಚಾಟನೆ ಗ್ಯಾರಂಟಿ- ಲಿಂಗರಾಜ ಪಾಟೀಲ್
ಮೈನಳ್ಳಿ ಪಂಚಾಯತಿಯ ಕಳಕೀಕಾರೆಯಲ್ಲಿ ಕುಡಿಯುವ ನೀರಿಗೆ ಬರ..! ಟ್ಯಾಂಕರ್ ಮೂಲಕ ನೀರು ಪೂರೈಕೆ..!
ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಹಣ ನೀಡಲ್ಲ, ಬದಲಾಗಿ ಅಕ್ಕಿ ವಿತರಣೆೆ ; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇದುವರೆಗೆ 2500 ಕ್ಕೂ ಆಧಿಕ ಕಡಲಾಮೆ ಮರಿಗಳು ಸಮುದ್ರಕ್ಕೆ : ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ರವಿಶಂಕರ್
SSLC ಪರೀಕ್ಷೆಗಳು ವ್ಯವಸ್ಥಿತ ಮತ್ತು ಪಾರದರ್ಶಕವಾಗಿರಲಿ, ಪೂರ್ವಭಾವಿ ಸಭೆಯಲ್ಲಿ ಡೀಸಿ ಲಕ್ಷ್ಮಿಪ್ರಿಯ ಅಧಿಕಾರಿಗಳಿಗೆ ತಾಕೀತು..!
ಹಿರಿಯೂರು ಬಳಿ ಅಪಘಾತ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ..!
ಹುನಗುಂದದಲ್ಲಿ ರೇಣುಕಾಚಾರ್ಯರ ಜಯಂತಿ ಉತ್ಸವ..!
ಗೋ ಹತ್ಯೆ ನಿಷೇಧ ಕಾಯ್ದೆ ವಿಧೇಯಕ ಜಾರಿ: ಗೋ ಪೂಜೆ ಸಲ್ಲಿಸಿ ಸಂಭ್ರಮ
ಉತ್ತರ ಕರ್ನಾಟಕ ಅಭಿವೃದ್ಧಿಗೆ ಪಾದಯಾತ್ರೆ- ಯಾಸೀನ್ ಜವಳಿ*
ವಿಜಯಪುರ- ಸರ್ಕಾರಗಳು ಉತ್ತರ ಕರ್ನಾಟಕದ ಪ್ರಗತಿಗೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದರಿಂದ ಉತ್ತರ ಕರ್ನಾಟಕದ ಸಾರ್ವಜನಿಕರು, ರೈತರು, ಕಾರ್ಮಿಕರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಉತ್ತರ ಕರ್ನಾಟಕದ ಸರ್ವತೋಮುಖ ಪ್ರಗತಿಗಾಗಿ ಅನುದಾನದಲ್ಲಿ ಸಿಂಹಪಾಲು ನೀಡುವಂತೆ ಪ್ರಬಲವಾದ ಧ್ವನಿಯನ್ನು ಸರ್ಕಾರಕ್ಕೆ ಮುಟ್ಟಿಸಲು ಕ್ರಾಂತಿಯೋಗಿ ಅಣ್ಣ ಬಸವಣ್ಣನ ಜನ್ಮಸ್ಥಳ ಪಾವನ ನೆಲ ಬಸವನ ಬಾಗೇವಾಡಿಯಿಂದ ಜನವರಿ 20 ರಿಂದ ಬೆಂಗಳೂರಿನಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಅಂತಾ ಸಾಮಾಜಿಕ ಕಾರ್ಯಕರ್ತ ಯಾಸೀನ್ ಜವಳಿ ಘೋಷಿಸಿದ್ರು.. ವಿವಿಧ ಸಂಘಟನೆಯ ಕಾರ್ಯಕರ್ತರು, ಕನ್ನಡಪರ ಹೋರಾಟಗಾರರು, ರೈತ ಸಂಘಟನೆಯ ನಾಯಕರು, ಕಾರ್ಮಿಕ ಧುರೀಣರೆಲ್ಲರೂ ಪಕ್ಷಾತೀತವಾಗಿ ನಡೆಯುವ ಈ ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ಐದು ಸಾವಿರಕ್ಕೂ ಹೆಚ್ಚು ಜನರು ಏಕಕಾಲಕ್ಕೆ ಪಾದಯಾತ್ರೆಯ ಮೂಲಕ ಉತ್ತರ ಕರ್ನಾಟಕದ ಧ್ವನಿಯಾಗಿ ರಾಜ್ಯ ರಾಜಧಾನಿ ಬೆಂಗಳೂರು ತಲುಪಲಿದ್ದಾರೆ ಅಂತಾ ಯಾಸೀನ್ ಜವಳಿ ತಿಳಿಸಿದ್ದಾರೆ. ಉತ್ತರ ಕೊಡಿ.. ಸಮಾಜ ಸೇವಕ ಯಾಸೀನ್ ಜವಳಿ ಸಾರಥ್ಯದ ‘ಉತ್ತರ ಕರ್ನಾಟಕ ರೈತರ ಅಭಿವೃದ್ಧಿ ಸಂಘದ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯಲಿದ್ದು, ಸಕಲ ಸಿದ್ಧತೆ...
ಗೋ ಹತ್ಯೆ ನಿಷೇಧ ವಿಧೇಯಕ: ಇದು ಕೃಷಿ ಸಂಸ್ಕೃತಿಯ ಪ್ರತೀಕ- ಕಟೀಲ್*
ಮಂಗಳೂರು- ತೀವ್ರ ವಿರೋಧದ ನಡುವೆಯೂ ವಿಧಾನ ಸಭೆಯಲ್ಲಿ ಗೋ ಹತ್ಯೆ ನಿಷೇಧ ವಿದೇಯಕವನ್ನು ಮಂಡಿಸಲಾಯಿಗಿದೆ. ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಅವರು ಗೋಹತ್ಯೆ ನಿಷೇಧ ಮಸೂದೆಯನ್ನು ಮಂಡಿಸಿದ್ದು ಅಂಗೀಕಾರಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೋಹತ್ಯೆ ನಿಷೇಧ ಮಸೂದೆ ಮಂಡಿಸಿ ಅಂಗೀಕಾರ ಗೊಂಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ. ಬಹು ನಿರೀಕ್ಷಿತ ಹಾಗೂ ಬಹು ಬೇಡಿಕೆಯ ಗೋಹತ್ಯಾ ನಿಷೇಧ ಕಾನೂನು ಜಾರಿಗೆ ತರುವ ಪ್ರಯತ್ನ ಈ ಹಿಂದೆ ಬಿಜೆಪಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ನಡೆದಿತ್ತು . ಆದರೆ ಕಾಂಗ್ರೆಸ್ ಆಡಳಿತಕ್ಕೆ ಬಂದಾಗ ಆ ಕಾನೂನನ್ನು ಹಿಂಪಡೆದಿತ್ತು. ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾನೂನು ಜಾರಿಗೆ ಮಂಗಳೂರು ಹಾಗೂ ಬೆಳಗಾವಿಯಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿಯಲ್ಲಿ ನಿರ್ಣಯ ಮಾಡಿದ್ದೆವು. ಇದು ಕೃಷಿ ಸಂಸ್ಕೃತಿಯ ಪ್ರತೀಕವೂ ಹಾಗೂ ರೈತರ ಪರವಾಗಿ ಇರುವಂತಹ ಕಾನೂನಾಗಿದೆ ಎಂದು ಅವರು ಹೇಳಿದರು. ಗೋಹತ್ಯಾ ನಿಷೇಧ ಕಾನೂನು ಜಾರಿಗೆ ಬಂದಿದೆ . ಇದಕ್ಕೋಸ್ಕರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹಾಗೂ ಪಶುಸಂಗೋಪನಾ...
ಲೆಫ್ಟಿನೆಂಟ್ ಹುದ್ದೆ: ಮುಂಡಗೋಡ ಯುವಕನ ಹೆಮ್ಮೆ*
ಮುಂಡಗೋಡ: ಇದು ನಿಜಕ್ಕೂ ಮುಂಡಗೋಡಿಗರಿಗೆ ಹೆಮ್ಮೆಯ ಸಂಗತಿ. ಪಟ್ಟಣದಲ್ಲೇ ಹುಟ್ಟಿ ಬೆಳೆದ ಯುವಕನೊಬ್ಬ ನಮ್ಮ ಭಾರತೀಯ ಸೇನಾಧಿಕಾರಿ ಹುದ್ದೆ ಅಲಂಕರಿಸಿದ್ದಾನೆ. ಸತತ ಛಲ.. ಭಾರತೀಯ ಸೇನಾಧಿಕಾರಿ ಹುದ್ದೆ ಪಡೆಯಲೇಬೇಕು ಎಂಬ ಗುರಿಯೊಂದಿಗೆ ಪರೀಕ್ಷೆ ಎದುರಿಸಿ, ಸತತ ಎಂಟನೇ ಪ್ರಯತ್ನದಲ್ಲಿ ಲೆಫ್ಟಿನೆಂಟ್ ಹುದ್ದೆ ಪಡೆಯುವಲ್ಲಿ ಪಟ್ಟಣದ ಹಳೂರಿನ ಯುವಕ ಅಭಯ ಪಂಡಿತ್ ಯಶಸ್ವಿಯಾಗಿದ್ದಾರೆ. ಕರ್ನಾಟಕದಿಂದ ಒಟ್ಟು ಆರು ಜನರು ಈ ಹುದ್ದೆಗೆ ಆಯ್ಕೆಯಾಗಿದ್ದು, ಉತ್ತರಕನ್ನಡ ಜಿಲ್ಲೆಯಿಂದ ಇವರೊಬ್ಬರೇ ಆಯ್ಕೆಯಾಗಿರುವುದು ವಿಶೇಷ. ಚೆನ್ನೈನ ಭಾರತೀಯ ಸೇನಾಧಿಕಾರಿಗಳ ಅಕಾಡೆಮಿಯಲ್ಲಿ ತರಬೇತಿ ಮುಗಿಸಿ, ನ.21ರಂದು ಲೆಫ್ಟಿನೆಂಟ್ ಆಗಿ ನಿಯುಕ್ತಿಗೊಂಡು ಪಟ್ಟಣಕ್ಕೆ ಬಂದಿದ್ದಾರೆ. ರಾಜಸ್ಥಾನದ ವೆಸ್ಟರ್ನ್ ಸೆಕ್ಟರ್ನಲ್ಲಿ ಸೇವೆ ಸಲ್ಲಿಸಲು ಡಿ.10ರಂದು ತೆರಳಲಿದ್ದಾರೆ. ನೇರವಾಗಿ ಸೇನಾಧಿಕಾರಿ ಹುದ್ದೆಗೆ ಆಯ್ಕೆಯಾಗಿರುವವರಲ್ಲಿ ಅಭಯ ಪಂಡಿತ್ ತಾಲ್ಲೂಕಿನಲ್ಲಿಯೇ ಮೊದಲಿಗರು. ಈ ಹಿಂದೆ ಪಟ್ಟಣದ ಸುಜಾತಾ ಬೈಲೂರು ಎಂಬುವರು ವಾಯುಸೇನೆಯಲ್ಲಿ ವೈದ್ಯರಾಗಿ ಸೇರಿದ್ದಾರೆ.
ಭೀಮಾತೀರದ ಸಾಹುಕಾರನ ಮೇಲೆ ಫೈರಿಂಗ್ ಕೇಸ್; ಕಿಂಗ್ ಪಿನ್ ಮಡುಸ್ವಾಮಿ ಆರೆಸ್ಟ್
ವಿಜಯಪುರ- ಭೀಮಾತೀರದ ಸಾಹುಕಾರ್ ಮಹದೇವ್ ಬೈರಗೊಂಡ ಮೇಲೆ ನಡೆದ ಫೈರಿಂಗ್ ಕೇಸ್ ನ ಪ್ರಮುಖ ಆರೋಪಿ ಅಂದರ್ ಆಗಿದ್ದಾನೆ.. ಕಳೆದ ಒಂದು ತಿಂಗಳಿಂದ ಫೈರಿಂಗ್ ಕೇಸ್ ಬೆನ್ನತ್ತಿದ್ದ ವಿಜಯಪುರ ಪೊಲೀಸ್ರಿಗೆ ಅಸಲೀ ಆರೋಪಿಯ ಜಾಡು ಬೇಧಿಸೋದು ಅಷ್ಟು ಸುಲಭದ ಮಾತಾಗಿರಲಿಲ್ಲ.. ಹಾಗಾದ್ರೆ ಮಹದೇವ್ ಸಾಹುಕಾರನ ಮೇಲೆ ಸಾವಿನ ಗುರಿಯಿಟ್ಟ ಆ ಹಂತಕರ ನಾಯಕ ಯಾರು..? ಅವತ್ತು ನವೆಂಬರ್ 2 ಮಟ ಮಟ ಮದ್ಯಾಹ್ನ ಭೀಮಾತೀರದ ಮಹದೇವ ಸಾಹುಕಾರನ ಮೇಲೆ ಡೆಡ್ಲಿ ಅಟ್ಯಾಕ್ ಒಂದು ನಡೆದಿತ್ತು.. ಥೇಟು ಸಿನಿಮಾ ಸ್ಟೈಲ್ ನಲ್ಲೇ ನಡೆದಿದ್ದ ಆ ಅಟ್ಯಾಕ್ ನಲ್ಲಿ ಇಬ್ರು ಪ್ರಣ ಬಿಟ್ಟಿದ್ರು.. ಮಹದೇವ ಸಾಹುಕಾರನ ಮೇಲೆ ಹಾರಿದ್ದ ಗುಂಡುಗಳು ಮಹದೇವ ಸಾಹುಕಾರನ ಬದಲಿಗೆ ಇಬ್ಬರ ಜೀವ ತೆಗೆದಿದ್ವು.. ಆದ್ರೆ ಮಹದೇವ ಸಾಹುಕಾರ್ ಮಾತ್ರ ಗುಂಡು ತಾಗಿದ್ರು ಬಚಾವ್ ಆಗಿದ್ದ.. ಸದ್ಯ ಚಿಕಿತ್ಸೆ ಪಡಿತಿರೋ ಸಾಹುಕಾರ ಕೆಲವೇ ದಿನದಲ್ಲಿ ಡಿಶ್ಚಾರ್ಜ್ ಕೂಡ ಆಗ್ತಿದಾನೆ.. ಆದ್ರೆ ಅವತ್ತು ಅಂತಹದ್ದೊಂದು ಡೆಡ್ಲಿಯಸ್ಟ್ ಅಟ್ಯಾಕ್ ಹಿಂದೆ ಇದ್ದಿದ್ದ ಒಳಸುಳಿಯನ್ನ...
ಮರಾಠಾ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದು ಶ್ಲಾಘನೀಯ ಕಾರ್ಯ; ಮಾಜಿ ಸಚಿವ ಪಟ್ಟಣಶೆಟ್ಟಿ
ವಿಜಯಪುರ-ಮರಾಠಾ ಅಭಿವೃದ್ಧಿ ಪ್ರಾಧಿಕಾರದ ಮಾಡಿದ ನಿರ್ಣಯ ನಾವು ಸ್ವಾಗತಿಸಲೇ ಬೇಕು ಎಂದು ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಹೇಳಿದ್ದಾರೆ.. ಮಾದ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು ಮರಾಠಾ ಸಮಾಜದ ಸಲುವಾಗಿ ಮಾಡಿದ ಪ್ರಾಧಿಕಾರವದು, ಅವರು ಕೂಡಾ ಹಿಂದುಗಳಲ್ಲಿ ಇರುವ ವಿಶೇಷ ಜನಾಂಗ. ಅವರಲ್ಲೂ ಸಹಿಹ ಸಾಕಷ್ಟು ಕಡು ಬಡವರು, ನಿರುದ್ಯೋಗಿಗಳಿದ್ದಾರೆ, ಅವರಿಗೆ ಸರ್ಕಾರದಿಂದ ಸೌಲತ್ತು ಸಿಗುತ್ತಿಲ್ಲ. ಇದು ಮರಾಠಿ ಭಾಷೆಗರಿಗೆ ನೀಡಿದ ಅನುದಾನಲವಲ್ಲ. ಕನ್ನಡಪರ ಸಂಘಟನೆಗಳು ಇದನ್ನು ತಪ್ಪಾಗಿ ಭಾವಿಸಿವೆ. ಗಡಿ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆ, ಬೀದರ, ಕಲಬುರಗಿಯಲ್ಲಿ ಆ ಜನಾಂಗ ಹೆಚ್ಚಾಗಿ ವಾಸಿಸುತ್ತಾರೆ. ಅವರೆಲ್ಲ ಕನ್ನಡಿಗರೇ, ಅವರಿಗಾಗಿ ಮುಖ್ಯಮಂತ್ರಿಗಳು ತೆಗೆದುಕೊಂಡ ನಿರ್ಣಯ ಸ್ವಾಗತಾರ್ಹ ಎಂದರು. ಇನ್ನೂ ಕನ್ನಡ ಪರ ಸಂಘಟನೆಗಳು ಇದನ್ನು ತಪ್ಪಾಗಿ ಭಾವಿಸಿ, ಬಂದ್ ಕರೆ ನೀಡಿವೆ, ಬೇರೆ ಬೇರೆ ಸಮುದಾಯಕ್ಕೆ ಸಾಕಷ್ಟು ಅಭಿವೃದ್ಧಿ ಪ್ರಾಧಿಕಾರವನ್ನು ಸರ್ಕಾರ ಮಾಡಿದೆ. ಲಿಂಗಾಯತರಿಗಾಗಿಯೇ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದಾರೆ, ಇನ್ನೂ ಮರಾಠಾ ಸಮುದಾಯಕ್ಕೆ ಮಾಡಿದ್ದು ತಪ್ಪೇನು. ಕನ್ನಡಪರ ಸಂಘಟನೆಗಳು ನೀಡಿರುವ ಬಂದ್ ಕರೆಯನ್ನು...
ನನಗೆ ಧರ್ಮ ಒಡೆದವನು ಅಂತಾ ಪಟ್ಟ ಕಟ್ಟಿದ್ರು; ಮಾಜಿ ಸಚಿವ ಎಂ.ಬಿ.ಪಾಟೀಲ್ ಕಿಡಿ
ವಿಜಯಪುರ- ಮರಾಠ ಅಭಿವೃದ್ಧಿ ನಿಗಮ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ವಿಚಾರವಾಗಿ ನಿಗಮ ಸ್ಥಾಪನೆಗಳಿಗೆ ಮಾಜಿ ಸಚಿವ ಎಂ ಬಿ ಪಾಟೀಲ್ ವಿರೋಧ ವ್ಯಕ್ತಪಡಿಸಿದ್ದಾರೆ. ನಿಗಮ ಸ್ಥಾಪನೆಯಿಂದ ಯಾವುದೇ ಸಮಾಜ ಮುಂದೆ ಬರಲು ಸಾಧ್ಯವಿಲ್ಲ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡಿದರೆ ಆಯಾ ಸಮಾಜಗಳು ಮುಂದೆ ಬರುತ್ತವೆ ಎಂದು ಸಲಹೆ ನೀಡಿದ್ದಾರೆ. ಸಣ್ಣ ಸಣ್ಣ ಸಮಾಜಕ್ಕೆ ನಿಗಮ ಸ್ಥಾಪನೆಯಿಂದ ಸಹಾಯ ವಾಗಬಹುದು, ಆದ್ರೆ ದೊಡ್ಡ ಸಮುದಾಯಗಳಿಗೆ ನಿಗಮದಿಂದ ಯಾವುದೇ ಲಾಭವಿಲ್ಲ ಎಂದಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಲಿಂಗಾಯತ ಸಮುದಾಯ 1.8 ಕೋಟಿ ಜನಸಂಖ್ಯೆ ಇದೆ, ಒಟ್ಟು ರಾಜ್ಯದ ಜನ ಸಂಖ್ಯೆಯಲ್ಲಿ, ಶೇಕಡಾ 16 ರಿಂದ 18 ರಷ್ಟು ಜನ ಲಿಂಗಾಯತರಿದ್ದಾರೆ , ಈ ನಿಗಮಕ್ಕೆ 100 ಅಥವಾ 200 ಕೋಟಿ ರೂಪಾಯಿ ಅನುದಾನ ನೀಡಿದರೆ ಯಾವುದೇ ಉಪಯೋಗವಿಲ್ಲ, ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದರೂ ಸಾಲದು ಎಂದು ತಿಳಿಸಿದ್ದಾರೆ. 1000 ಕೋಟಿ ಅನುದಾನ...
ಮುಂಡಗೋಡ ತಾಲೂಕಿನಲ್ಲಿ ಗಜಪಡೆಯ ಅರ್ಭಟ
ಮುಂಡಗೋಡ- ತಾಲೂಕಿನಲ್ಲಿ ಗಜಪಡೆಯ ಅರ್ಭಟ ಜೋರಾಗಿದೆ.. ಗಜಪಡೆಯ ದಾಳಿಯಿಂದ ಇಲ್ಲಿನ ಅನ್ನದಾತ ಕಂಗಾಲಾಗಿದ್ದಾನೆ. ತಾನು ಬೆವರು ಹರಿಸಿ ಬೆಳೆದಿದ್ದ ಬೆಳೆಯನ್ನು ಆನೆಗಳ ಹಿಂಡು ನಾಶಗೊಳಿಸುತ್ತಿವೆ.. ಮುಂಡಗೋಡ ತಾಲೂಕಿನ ಅರಷಿಣಗೇರಿ, ಮಜ್ಜಿಗೇರಿ, ಅತ್ತಿವೇರಿ, ಹುನಗುಂದ ಭಾಗದ ರೈತರು ಆನೆದಾಳಿಯಿಂದ ತಮ್ಮ ಬೆಳೆ ನಾಶವಾಗುವ ಭೀತಿಯಲ್ಲಿದ್ದಾರೆ.. ಹೀಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಆದಷ್ಟು ಬೇಗ ಆನೆಗಳ ಹಾವಳಿಯಿಂದ ರೈತರ ಬದುಕನ್ನ ರಕ್ಷಿಸಬೇಕಾಗಿದೆ.
ಮುಂಡಗೋಡ- ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಟಿ.ಆಸ್ತಕಟ್ಟಿ ವಿಧಿವಶ- ಗಣ್ಯರ ಸಂತಾಪ
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮದ ಕಾಂಗ್ರೆಸ್ ಹಿರಿಯ ಮುಖಂಡ ಹನ್ಮಂತಪ್ಪ ಆಸ್ತಕಟ್ಟಿ ಇಂದು ವಿಧಿವಶರಾಗಿದ್ದಾರೆ. ಮಾಜಿ ಸಚಿವ ಆರ್.ವಿ.ದೇಶಪಾಂಡೆ ಯವರ ಕಟ್ಟಾ ಬೆಂಬಲಿಗರಾಗಿದ್ದ ಹನ್ಮಂತಪ್ಪ ಆಸ್ತಕಟ್ಟಿ, ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೇ ಪಕ್ಷದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದರು. ಹನ್ಮಂತಪ್ಪ ಆಸ್ತಕಟ್ಟಿಯವರ ನಿಧನಕ್ಕೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ
ಮುಂಡಗೋಡ; ವಿದ್ಯಾರ್ಥಿಗಳಿಗೆ ವಾಟ್ಸ್ ಅಪ್ ಮನೆಪಾಠ; ಹುನಗುಂದ ಶಾಲೆ ಶಿಕ್ಷಕರ ಅವಿರತ ಪ್ರಯತ್ನ
ಮುಂಡಗೋಡ- ಕೊರೋನಾ ಸಂಕಷ್ಟದ ಮದ್ಯೆ ಸದ್ಯ ಮನೆಯಲ್ಲಿರೋ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಾಟ್ಸ್ ಅಪ್ ಮೂಲಕವೇ ಶಿಕ್ಷಣ ನೀಡಲಾಗ್ತಿದೆ. ತಾಲೂಕಿನ ಹುನಗುಂದ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲ ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ವಾಟ್ಸ್ ಅಪ್ ಮೂಲಕವೇ ಮನೆ ಪಾಠ ನೀಡುತ್ತಿದ್ದು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರತಿದಿನ ಬೆಳಿಗ್ಗೆಯಿಂದ ರಾತ್ರಿಯವರೆಗೂ ವಾಟ್ಸ್ ಅಪ್ ಮೂಲಕವೇ ಪಾಠ ಮಾಡ್ತಿರೋ ಶಿಕ್ಷಕರು, ತಮ್ಮ ವಿದ್ಯಾರ್ಥಿಗಳ ಜೊತೆ ವಾಟ್ಸ್ ಅಪ್ ಮೂಲಕ ನಿರಂತರವಾಗಿ ಸಂಪರ್ಕದಲ್ಲಿದ್ದು ಪಾಠ ಮಾಡ್ತಿದಾರೆ. ವಿದ್ಯಾರ್ಥಿಗಳು ಕೇಳುವ ಪ್ರಶ್ನೆಗಳಿಗೆ ವಾಟ್ಸ್ ಅಪ್ ಮೂಲಕವೇ ಉತ್ತರಿಸುತ್ತಿದ್ದಾರೆ. ಒಟ್ನಲ್ಲಿ, ಕೊರೋನಾದಿಂದ ನಿಂತು ಹೋಗಿದ್ದ ಶಿಕ್ಷಣ ಸದ್ಯ ವಾಟ್ಸ್ ಅಪ್ ಮೂಲಕ ಮತ್ತೆ ಚೇತರಿಕೆ ಕಂಡುಕೊಂಡಿದೆ