ವಾಡಿಕೆಗಿಂತ ಒಂದು ವಾರ ಮೊದಲೇ ಕೇರಳಕ್ಕೆ ಆಗಮಿಸಿದ ನೈಋತ್ಯ ಮುಂಗಾರು ಮಳೆ..!

ವಾಡಿಕೆಗಿಂತ ಒಂದು ವಾರ ಮೊದಲೇ ಕೇರಳಕ್ಕೆ ಆಗಮಿಸಿದ ನೈಋತ್ಯ ಮುಂಗಾರು ಮಳೆ..!

Monsoon Alert: ನವದೆಹಲಿ: ನೈಋತ್ಯ ಮಾನ್ಸೂನ್ ಶನಿವಾರ ಕೇರಳವನ್ನು ತಲುಪಿದ್ದು, 2009 ರ ನಂತರ ಭಾರತದ ಮುಖ್ಯ ಭೂಭಾಗಕ್ಕೆ ನೈಋತ್ಯ ಮುಂಗಾರು ಮಳೆ ಇಷ್ಟು ಮೊದಲು ಆಗಮಿಸಿರುವುದು ಇದೇ ಮೊದಲು ಎಂದು ಭಾರತ ಹವಾಮಾನ ಇಲಾಖೆ (IMD) ತಿಳಿಸಿದೆ. 2009 ರಲ್ಲಿ, ಮಾನ್ಸೂನ್ ಮೇ 23 ರಂದು ಕೇರಳಕ್ಕೆ ಆಗಮಿಸಿತ್ತು, 1975 ರಿಂದ ಲಭ್ಯವಿರುವ ದತ್ತಾಂಶವು ಮಾನ್ಸೂನ್ 1990 ರಲ್ಲಿ (ಮೇ 19 ರಂದು) ಕೇರಳವನ್ನು ತಲುಪಿತು, ಇದು ಸಾಮಾನ್ಯವಾಗಿ ಮುಂಗಾರು ಕೇರಳವನ್ನು ಪ್ರವೇಶಿವುದಕ್ಕಿಂತ 14 ದಿನಗಳ ಮೊದಲು ಆಗಮಿಸಿತ್ತು. ಕಳೆದ ವರ್ಷ ಮೇ 30 ರಂದು; 2023 ರಲ್ಲಿ ಜೂನ್ 8; 2022 ರಲ್ಲಿ ಮೇ 29; 2021 ರಲ್ಲಿ ಜೂನ್ 3; 2020 ರಲ್ಲಿ ಜೂನ್ 1; 2019 ರಲ್ಲಿ ಜೂನ್ 8; ಮತ್ತು 2018 ರಲ್ಲಿ ಮೇ 29 ರಂದು ಕೇರಳವನ್ನು ಮಾನ್ಸೂನ್ ಪ್ರವೇಶಿಸಿತ್ತು ಎಂದು ಐಎಂಡಿ ದತ್ತಾಂಶವು ತೋರಿಸಿದೆ. Monsoon Alert: ನೈಋತ್ಯ ಮಾನ್ಸೂನ್ ಕೇರಳ...

ದೇಶದಲ್ಲಿ ಮತ್ತೆ ಕೋವಿಡ್‌ ಆತಂಕ : ರಾಜ್ಯದಲ್ಲಿ 38 ಕೇಸ್‌, ಬೆಂಗಳೂರಲ್ಲೇ 32 ಸೋಂಕಿತರು..!

ದೇಶದಲ್ಲಿ ಮತ್ತೆ ಕೋವಿಡ್‌ ಆತಂಕ : ರಾಜ್ಯದಲ್ಲಿ 38 ಕೇಸ್‌, ಬೆಂಗಳೂರಲ್ಲೇ 32 ಸೋಂಕಿತರು..!

Covid News: ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೀರ್ಘಕಾಲೀನ ಅನಾರೋಗ್ಯ ಹಾಗೂ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ಕೊರೋನಾ ಸೋಂಕಿತ ವೃದ್ಧರೊಬ್ಬರು ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಈ ಮೂಲಕ ಪ್ರಸಕ್ತ ವರ್ಷದಲ್ಲಿ ಕೊರೋನಾಗೆ ರಾಜ್ಯದಲ್ಲಿ ಮೊದಲ ಬಲಿ ಆದಂತಾಗಿದೆ. ಪ್ರಸ್ತುತ ರಾಜ್ಯದಲ್ಲಿ ಒಟ್ಟು 38 ಮಂದಿಗೆ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರು ನಗರದಲ್ಲೇ 32 ಮಂದಿಗೆ ಸೋಂಕು ದೃಢಪಟ್ಟಿರುವುದು ಆತಂಕ ಮೂಡಿಸಿದೆ. Covide News: ತೀವ್ರ ಅನಾರೋಗ್ಯ: ಇದೀಗ ಮೃತಪಟ್ಟಿರುವ ವೃದ್ಧ ವ್ಯಕ್ತಿಗೆ ಬಹು ಅಂಗಾಂಗ ವೈಫಲ್ಯದ ಕಾಯಿಲೆ ಇತ್ತು. ಜತೆಗೆ ನ್ಯುಮೋನಿಯಾ ಸಮಸ್ಯೆಯೂ ತೀವ್ರವಾಗಿತ್ತು. ಅಲ್ಲದೆ ಅಂಗಾಂಗ ವೈಫಲ್ಯ, ಸೆಪ್ಟಿಕ್‌ ಶಾಕ್‌ ಸಮಸ್ಯೆಯಿಂದ ಬಳಲುತ್ತಿರುವ ಅವರಿಗೆ 2024ರಲ್ಲಿ ಹಿಪ್‌ ರಿಪ್ಲೇಸ್‌ಮೆಂಟ್‌ ಶಸ್ತ್ರಚಿಕಿತ್ಸೆ ನಡೆದಿತ್ತು. ಏತನ್ಮಧ್ಯೆ, 2019ರಲ್ಲಿ ಹೃದಯದ ಬೈಪಾಸ್‌ ಶಸ್ತ್ರಚಿಕಿತ್ಸೆ ನಡೆದಿತ್ತು. ಈ ಸುದ್ದಿನೂ ಓದಿ: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಜಿಲ್ಲೆ ಸೇರಿ, ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ...

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಜಿಲ್ಲೆ ಸೇರಿ, ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ, 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌..!

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಜಿಲ್ಲೆ ಸೇರಿ, ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ, 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌..!

Heavy Rain Alert: ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ. ಮೇ 25 ರಿಂದ ಮೇ 28ರ ವರೆಗೆ ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.   ಇನ್ನು ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೂ ಮೇ 28ರವರೆಗೆ ರೆಡ್‌ ಅಲರ್ಟ್‌ ಘೋಷಿಸಾಗಿದೆ. ಮೇ 25ರಂದು ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಗದಗ, ಹಾವೇರಿ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮೇ 26ರಂದು ಹಾಸನ, ಬೆಳಗಾವಿ, ಧಾರವಾಡ ಜಿಲ್ಲೆಗೆ ಆರೆಂಜ್‌ ಹಾಗೂ ಬೀದರ್‌, ಗದಗ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ರಾಮನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಮೇ 27ರಂದು ಕೆಲ ಜಿಲ್ಲೆಗಳಿಗೆ ಆರೆಂಜ್‌ ಮತ್ತು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮೇ...

ಮುಂಡಗೋಡಲ್ಲಿ ಮೊಳಗಿದ ದೇಶ ಭಕ್ತಿಯ ಘೋಷವಾಕ್ಯ..! “ಆಪರೇಷನ್ ಸಿಂಧೂರ” ವೀರ ಸೈನಿಕರಿಗೆ ಗೌರವದ ಬೆಂಬಲ..!

ಮುಂಡಗೋಡಲ್ಲಿ ಮೊಳಗಿದ ದೇಶ ಭಕ್ತಿಯ ಘೋಷವಾಕ್ಯ..! “ಆಪರೇಷನ್ ಸಿಂಧೂರ” ವೀರ ಸೈನಿಕರಿಗೆ ಗೌರವದ ಬೆಂಬಲ..!

Mundgod News:”ಆಪರೇಷನ್ ಸಿಂಧೂರ”ನಲ್ಲಿ ಭಾರತೀಯ ಸೈನಿಕರು ತೋರಿದ ಅಪ್ರತಿಮ ಹೋರಾಟವನ್ನು ಬೆಂಬಲಿಸಿ ಮುಂಡಗೋಡ ಪಟ್ಟಣದಲ್ಲಿ ಜಾತ್ಯಾತೀತವಾಗಿ “ತಿರಂಗಾ ಯಾತ್ರೆ” ನಡೆಯಿತು. ಪಟ್ಟಣದ ಹಳೂರಿನ ಶ್ರೀ‌ಮಾರಿಕಾಂಬಾ ದೇವಸ್ಥಾನದಿಂದ ಬೃಹತ್ ರಾಷ್ಟ್ರಧ್ವಜದೊಂದಿಗೆ ಯಾತ್ರೆ ಹೊರಟು, ಶಿವಾಜಿ ಸರ್ಕಲ್ ಬಳಿ ಬಂದು ಸೇರುತ್ತಿದೆ. ಯಾತ್ರೆಯುದ್ದಕ್ಕೂ ಭಾರತ ಮಾತಾ ಕೀ ಜೈ, ಹಾಗೂ ಸೈನಿಕರ ಪರ ಜಯಘೋಷಗಳನ್ನು ಕೂಗಿ ಬೆಂಬಲಿಸಿದ್ರು.

ಕಾರವಾರ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ : ಪದಾಧಿಕಾರಿಗಳ ಅವಿರೋಧ ಆಯ್ಕೆ

ಕಾರವಾರ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ : ಪದಾಧಿಕಾರಿಗಳ ಅವಿರೋಧ ಆಯ್ಕೆ

ಕಾರವಾರ : ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರವಾರ ತಾಲೂಕಾ ಘಟಕದ ಕಾರ್ಯನಿರತ ಪತ್ರಕರ್ತರ ನೂತನ ಸಂಘದ ಪದಾಧಿಕಾರಿಗಳ ಆಯ್ಕೆಯನ್ನ‌ ಪತ್ರಿಕಾಭವನದಲ್ಲಿ ನಡೆಸಲಾಗಿದ್ದು, ಪದಾಧಿಕಾರಿಗಳನ್ನ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ಪವರ್‌ ಟಿವಿ ಜಿಲ್ಲಾ ವರದಿಗಾರ ಉದಯ ಬರ್ಗಿ, ಉಪಾಧ್ಯಕ್ಷರಾಗಿ ವಿಜಯ ಕರ್ನಾಟಕ ಜಿಲ್ಲಾ ವರದಿಗಾರ ಪ್ರಮೋದ ಹರಿಕಂತ್ರ, ಕಾರ್ಯದರ್ಶಿಯಾಗಿ ನ್ಯೂಸ್ 18 ಜಿಲ್ಲಾ ವರದಿಗಾರ ದರ್ಶನ ನಾಯ್ಕ, ಖಜಾಂಚಿಯಾಗಿ ಸುವರ್ಣವಾಹಿನಿ ಜಿಲ್ಲಾ ವರದಿಗಾರ ಭರತರಾಜ್ ಕಲ್ಲಡಕ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ನಾಗರಾಜ್ ಹರಪನಹಳ್ಳಿ, ದೀಪಕ್ ಕುಮಾರ್ ಶೆಣ್ವಿ, ದೀಪಕ್ ಗೋಕರ್ಣ, ಗಿರೀಶ್ ನಾಯ್ಕ‌ ಬಾಡ, ಗಣೇಶ್ ಹೆಗಡೆ, ಪ್ರವೀಣ್ , ಗೌತಮ್ ಬಾಡಕರ್, ಗಿರೀಶ್ ಬಾಂದೇಕರ್, ಕಿಶನ್, ಸುರೇಂದ್ರ ಕಲ್ಗುಟಕರ್, ದೀಪಕ್ ರೇವಣಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ‌

RCB ಕನಸು ಭಗ್ನಗೊಳಿಸಿದ ಸನ್ ರೈಸರ್ಸ್, ಇನ್ನೇನಿದ್ರೂ ಪಂಜಾಬ್​ ಮೇಲೆ ಬೆಂಗಳೂರಿಗರ ಕಣ್ಣು..!

RCB ಕನಸು ಭಗ್ನಗೊಳಿಸಿದ ಸನ್ ರೈಸರ್ಸ್, ಇನ್ನೇನಿದ್ರೂ ಪಂಜಾಬ್​ ಮೇಲೆ ಬೆಂಗಳೂರಿಗರ ಕಣ್ಣು..!

IPL 2025 RCB vs SRH Match: ಇಂಡಿಯನ್ ಪ್ರೀಮಿಯರ್ ಲೀಗ್ (IPL)ನ 65ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ತಂಡ 42 ರನ್‌ಗಳಿಂದ ಗೆಲುವು ಸಾಧಿಸಿದೆ. ಇದರೊಂದಿಗೆ ಆರ್​ಸಿಬಿಯ ಕನಸನ್ನು ಭಗ್ನಗೊಳಿಸಿದೆ. ಏಕಾನ ಮೈದಾನದಲ್ಲಿ ನಡೆದಿದ್ದ ರೋಚಕ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಆರೆಂಜ್ ಆರ್ಮಿ, ಇಶನ್ ಕಿಶನ್ ಅವರ ಸಿಡಿಲಬ್ಬರದ ಬ್ಯಾಟಿಂಗ್​ ಸಹಯಾದಿಂದಾಗಿ ನಿಗದಿತ 20 ಓವರ್​ ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 231 ರನ್ ಬಾರಿಸಿತು. ಇದಕ್ಕುತ್ತರವಾಗಿ ಬೆಂಗಳೂರು ತಂಡ 189 ರನ್ ಗಳಿಸಲಷ್ಟೇ ಶಕ್ತವಾಯಿತು. ಬೃಹತ್​ ಸ್ಕೋರ್​ ಬೆನ್ನಟ್ಟಿದ ಬೆಂಗಳೂರು ಉತಮ್ಮ ಆರಂಭವನ್ನು ಪಡೆದಿತ್ತು. ಆರಂಭಿಕ ಬ್ಯಾಟರ್​ಗಳಾದ ಫಿಲ್​ ಸಾಲ್ಟ್​ ಮತ್ತು ವಿರಾಟ್​ ಕೊಹ್ಲಿ ಪವರ್​ಪ್ಲೇನಲ್ಲಿ ಹೈದರಾಬಾದ್​ ಬೌಲರ್​ಗಳ ಮೇಲೆ ಸವಾರಿ ಮಾಡಿದರು. ಆದರೇ ಕೊಹ್ಲಿ 43 ರನ್​ಗಳಿಸಿದ್ದ ವೇಳೆ ಕ್ಯಾಚೌಟ್​ ಆಗಿ ಪೆವಿಲಿಯನ್​ ಸೇರಿದರು. ಇಲ್ಲಿಂದ ಆರ್​ಸಿಬಿ ಪತನ ಆರಂಭವಾಯಿತ. ಬಳಿಕ ಬಂದ ಮಯಾಂಕ್​​ ಅಗರ್ವಾಲ್ 11ರನ್​...

ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆಯಿಂದ, ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ..!

ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆಯಿಂದ, ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ..!

Women skill training: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಸಹಯೋಗದಲ್ಲಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳ ಸ್ವ-ಸಹಾಯ ಗುಂಪುಗಳ ಮೂಲಕ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಹಲವು ಯೋಜನೆ/ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನ ಮಾಡಲಾಗುತ್ತಿದ್ದು, ಪ್ರಸ್ತುತ ಗ್ರಾಮೀಣ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ನೀಡಲು ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದ ಮಹಿಳೆಯರು ಕೃಷಿಯಿಂದ ಹೆಚ್ಚಿನ ಲಾಭ ಪಡೆಯಲಾಗದೇ, ಆದಾಯ ಗಳಿಕೆಗಾಗಿ ಪರ್ಯಾಯ ವ್ಯವಸ್ಥೆ ಹುಡುಕುತ್ತಿದ್ದಾರೆ. ಆದರೆ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉದ್ಯೋಗ ಒದಗಿಸಬಲ್ಲ ಕೌಶಲ್ಯ ತರಬೇತಿಗಳ ಕೊರತೆ ಇದ್ದು, ಸ್ವ-ಉದ್ಯೋಗಕ್ಕೆ ಕೈ ಹಾಕಿದರೆ ಬಂಡವಾಳದ ಕೊರತೆ ಹಾಗೂ ನಷ್ಠ್ಟವಾಗುತ್ತದೆಂಬ ಭಯದಿಂದ ಯಾವುದೇ ಉದ್ಯೋಗವಿಲ್ಲದೆ ಆರ್ಥಿಕವಾಗಿ ಸಬಲರಾಗದೇ ಬಡತನದಲ್ಲೇ ಜೀವನ ಸಾಗಿಸುವಂತ ಸನ್ನಿವೇಶವಿದೆ ಮತ್ತು ಸ್ಥಳೀಯವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯ ಕೊರತೆಯೂ ಸಹ ಇದೆ. Women skill training:  ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಿಳೆಯರ ಆಕಾಂಕ್ಷೆ...

ದೆಹಲಿಯಲ್ಲಿ 23 ಕೋರೊನಾ ಕೇಸ್ ಗಳು  ವರದಿ; ಭಯ ಬೇಡ, ಸಜ್ಜಾಗಿರಲು ಆಸ್ಪತ್ರೆಗಳಿಗೆ ಸರ್ಕಾರದ ಸೂಚನೆ

ದೆಹಲಿಯಲ್ಲಿ 23 ಕೋರೊನಾ ಕೇಸ್ ಗಳು ವರದಿ; ಭಯ ಬೇಡ, ಸಜ್ಜಾಗಿರಲು ಆಸ್ಪತ್ರೆಗಳಿಗೆ ಸರ್ಕಾರದ ಸೂಚನೆ

Covid-19 News: ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 23 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ದೆಹಲಿ ಸರ್ಕಾರವು ಎಲ್ಲಾ ಆಸ್ಪತ್ರೆಗಳು ಹಾಸಿಗೆಗಳು, ಆಮ್ಲಜನಕ, ಔಷಧಿಗಳು ಮತ್ತು ಲಸಿಕೆಗಳು ಲಭ್ಯವಿರುವಂತೆ ನೋಡಿಕೊಂಡು ಸಜ್ಜಾಗಿರುವಂತೆ ಸಲಹೆ ನೀಡಿದೆ. ಸುಮಾರು ಮೂರು ವರ್ಷಗಳ ನಂತರ ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿದೆ. ಗುರುವಾರದವರೆಗೆ 23 ಕೋವಿಡ್-19 ಸೋಂಕಿನ ಪ್ರಕರಣಗಳು ವರದಿಯಾಗಿವೆ ಮತ್ತು ರೋಗಿಗಳು ದೆಹಲಿಯ ನಿವಾಸಿಗಳೇ ಅಥವಾ ನಗರದ ಹೊರಗೆ ಪ್ರಯಾಣದ ಇತಿಹಾಸವನ್ನು ಹೊಂದಿದ್ದಾರೆಯೇ ಎಂಬ ವಿವರಗಳನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಆರೋಗ್ಯ ಸಚಿವ ಪಂಕಜ ಸಿಂಗ್ ಶುಕ್ರವಾರ ಹೇಳಿದ್ದಾರೆ. ಈ ಪಾಸಿಟಿವ್ ಪ್ರಕರಣಗಳನ್ನು ಖಾಸಗಿ ಪ್ರಯೋಗಾಲಯಗಳು ವರದಿ ಮಾಡಿವೆ ಮತ್ತು ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಈ ರೂಪಾಂತರವು ಸಾಮಾನ್ಯ ಇನ್ಫ್ಲುಯೆಂಜಾ ತರಹದ ಲಕ್ಷಣಗಳನ್ನು ಹೊಂದಿದೆ ಎಂದು ಹೇಳಿದರು. Covid-19 News: “ಎಲ್ಲ 23 ಕೋವಿಡ್ ರೋಗಿಗಳ ಆರೋಗ್ಯ ಸ್ಥಿತಿ ಉತ್ತಮವಾಗಿದೆ. ನಾವು ಈಗಾಗಲೇ ಆಸ್ಪತ್ರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ ಮತ್ತು ಯಾವುದೇ ರೀತಿಯ...

ಭಾರೀ ಮಳೆಯಿಂದ ಶಿರಸಿ-ಕುಮಟಾ ರಸ್ತೆ ವಾಹನ ಸಂಚಾರ ಸಂಪೂರ್ಣ ಬಂದ್, ಡೀಸಿ ಆದೇಶ..!

ಭಾರೀ ಮಳೆಯಿಂದ ಶಿರಸಿ-ಕುಮಟಾ ರಸ್ತೆ ವಾಹನ ಸಂಚಾರ ಸಂಪೂರ್ಣ ಬಂದ್, ಡೀಸಿ ಆದೇಶ..!

Sirsi-Kumta Road News: ಕಾರವಾರ : ಶಿರಸಿ-ಕುಮಟಾ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಬೆಣ್ಣೆ ಹೊಳೆ ಸೇತುವೆ ಪಕ್ಕದಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಮಾಡಿದ ರಸ್ತೆಯು ಮಳೆಯ ನೀರಿಗೆ ಕೊಚ್ಚಿ ಹೋಗಿದ್ದರಿಂದ ಮುಂದಿನ ಆದೇಶದವರೆಗೆ ಶಿರಸಿ-ಕುಮಟಾ ರಸ್ತೆಯಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ. ಶಿರಸಿ-ಕುಮಟಾ ರಸ್ತೆಯಲ್ಲಿ ಬೆಣ್ಣೆ ಹಳ್ಳ ಬ್ರಿಜ್ ಕಾಮಗಾರಿ ನಡೆಯುತ್ತಿರುವ ಸ್ಥಳದ ಪಕ್ಕದಲ್ಲಿ ತಾತ್ಕಾಲಿಕ ಸಂಚಾರ ವ್ಯವಸ್ಥೆಗಾಗಿ ಕಲ್ಪಿಸಿದ್ದ ಪರ್ಯಾಯ ರಸ್ತೆಯ ಮೇಲೆ “ಬೆಣ್ಣೆ ಹೊಳೆ”ಯ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಶಿರಸಿ ಕುಮಟಾ ರಸ್ತೆಯಲ್ಲಿ ಬ್ಯಾರೀಕೆಡ್ ಅಳವಡಿಸಿ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ತಾತ್ಕಾಲಿಕ ವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬದಲಿ ಮಾರ್ಗವನ್ನು ಬಳಸಲು ಸೂಚಿಸಲಾಗಿದೆ.

ಜಿಲ್ಲೆಯಲ್ಲಿನ ಸೇತುವೆಗಳ ದೃಡತೆ ಬಗ್ಗೆ ವರದಿ ನೀಡಿ, ಅನಾಹುತವಾದಲ್ಲಿ ಅಧಿಕಾರಿಗಳೇ‌ ಹೊಣೆ-ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಎಚ್ಚರಿಕೆ..!

ಜಿಲ್ಲೆಯಲ್ಲಿನ ಸೇತುವೆಗಳ ದೃಡತೆ ಬಗ್ಗೆ ವರದಿ ನೀಡಿ, ಅನಾಹುತವಾದಲ್ಲಿ ಅಧಿಕಾರಿಗಳೇ‌ ಹೊಣೆ-ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಎಚ್ಚರಿಕೆ..!

Uttar Kannada alert: ಕಾರವಾರ: ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿನ ಎಲ್ಲಾ ಸೇತುವೆಗಳ ದೃಡತೆಯ ಬಗ್ಗೆ ಸಂಪೂರ್ಣ ವರದಿಯನ್ನು ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಆರಂಭಗೊಂಡಿದ್ದು, ವಾಡಿಕೆಯಂತೆ ಜುಲೈ ತಿಂಗಳಲ್ಲಿ ಅತೀ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿದ್ದು, ಜಿಲ್ಲೆಯ ಹೆದ್ದಾರಿಗಳಲ್ಲಿ ಸುರಕ್ಷಿತ ಸಂಚಾರ ಕುರಿತಂತೆ ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿರುವ ಎಲ್ಲಾ ಸೇತುವೆಗಳ ದೃಢತೆಯ ಕುರಿತಂತೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಯಾವುದೇ ಅವಘಡಗಳು ಸಂಭವಿಸಿದ್ದಲ್ಲಿ ಸಂಬಂದಪಟ್ಟ ಅಧಿಕಾರಿಗಳನ್ನೇ ಹೊಣೆಗಾರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ರು. ಜಿಲ್ಲೆಯಲ್ಲಿ ಮೇ.27 ರ ವರೆಗೆ ರೆಡ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಹೆದ್ದಾರಿ ಅಧಿಕಾರಿಗಳಿಗೆ ಎಚ್ಚರಿಕೆ..! ಜಿಲ್ಲೆಯಲ್ಲಿನ...

error: Content is protected !!