ಯಲ್ಲಾಪುರ: ಕಟ್ಟಿಗೆ ತುಂಬಿದ್ದ ಲಾರಿ ಹೆದ್ದಾರಿಯಲ್ಲೇ ಪಲ್ಟಿಯಾಗಿ, ವಾಹನ ದಟ್ಟಣೆ ಹೆಚ್ಚಿದ ಪರಿಣಾಮ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾದ ಘಟನೆ, ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ನಡೆದಿದೆ. ಅಂಕೋಲಾದಿಂದ ಯಲ್ಲಾಪುರಕ್ಕೆ ತೆರಳುತ್ತಿದ್ದ ಲಾರಿ, ಘಟ್ಟದಲ್ಲಿ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹಾಗೆ ಪಲ್ಟಿಯಾದ ಲಾರಿ ಎದುರಲ್ಲೇ ಮತ್ತೊಂದು ಲಾರಿ, ಕೆಟ್ಟು ನಿಂತಿದೆ. ಪರಿಣಾಮ, ಅರಬೈಲ್ ಘಟ್ಟದಲ್ಲಿ ಸರಕು ಸಾಗಣೆ ಲಾರಿಗಳು ಸಾಲುಗಟ್ಟಿ ನಿಂತಿವೆ. ಮಳೆಯ ಅಬ್ಬರದಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ಅಂಕೋಲಾ ಯಲ್ಲಾಪುರ ಮಾರ್ಗವಾಗಿ ಸಂಚರಿಸಲು ವಾಹನ ಸವಾರರು ಪರದಾಡುವಂತಾಗಿದೆ.
Top Stories
ಮುಂಡಗೋಡಿನಲ್ಲಿ ಗೋಹತ್ಯೆಗೆ ಖಂಡನೆ, ಹಿಂದು ಕಾರ್ಯಕರ್ತರ ಆಕ್ರೋಶ, ರಸ್ತೆ ತಡೆದು ಪ್ರತಿಭಟನೆ..!
ಮುಂಡಗೋಡಿನಲ್ಲೂ ಮಾಂಸಕ್ಕಾಗಿ ಆಕಳ ಹತ್ಯೆ..! ಪೊಲೀಸರ ದಾಳಿ..! ಸಿಕ್ಕಿದ್ದೇನು..?
ಕಾರವಾರ ನಗರಸಭೆ ಸದಸ್ಯನ ಭೀಕರ ಹತ್ಯೆ ಕೇಸ್, ಇಬ್ಬರು PSI ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್..? ಕಾರಣ..?
ಭಾರೀ ಮಳೆ ಗಾಳಿಗೆ ಇಂದೂರು ಕೊಪ್ಪ ಗ್ರಾಮದಲ್ಲಿ, ಮನೆಯ ಮೇಲ್ಚಾವಣಿ ಹಾನಿ, ಗೋವಿನಜೋಳ ರಾಶಿ ನೀರಲ್ಲಿ
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಪಾಳಾದ ರಾಮಾಪುರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಚಿಗಳ್ಳಿ ಹಿರಿಕೆರೆಯಲ್ಲಿ ಮೀನುಗಳ ದಾರುಣ ಸಾವು, ಇಡೀ ಕೆರೆಗೇ ವಿಷ ಹಾಕಿದ್ರಾ ದುರುಳರು..?
ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ, ಮುಂಡಗೋಡ ತಾಲೂಕಾ ತ್ರೈಮಾಸಿಕ ಕೆಡಿಪಿ ಸಭೆ..!
ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಕಟ್ಟಿಗೆ ತುಂಬಿದ್ದ ಲಾರಿ ಪಲ್ಟಿ, ಅರಬೈಲ್ ಘಟ್ಟದಲ್ಲಿ ಹೆದ್ದಾರಿ ಸಂಚಾರ ಅಸ್ತವ್ಯಸ್ತ..!
ಪುಟ್ಟ ಮಗುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ, ತಪ್ಪಿದ ಭಾರೀ ದುರಂತ..!
ಉಡುಪಿ: ಉತ್ತರ ಕನ್ನಡ ಜಿಲ್ಲೆಯಿಂದ ಅನಾರೋಗ್ಯ ಪೀಡಿತ ಮಗುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತವಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಮಾಬುಕಳ ಸೇತುವೆ ಬಳಿ ಘಟನೆ ನಡೆದಿದೆ. ಟೈಯರ್ ಸ್ಪೋಟಗೊಂಡು ಡಿವೈಡರ್ ಹಾರಿ ನುಗ್ಗಿದ ಅಂಬುಲೆನ್ಸ್, ಇಡಿ ಇಡಿಯಾಗಿ ನದಿಗೆ ಹಾರುವುದರಲ್ಲಿ ಸ್ವಲ್ಪದರಲ್ಲೇ ತಪ್ಪಿದೆ. ಸೇತುವೆಯ ಆವರಣ ಗೋಡೆಗೆ ಡಿಕ್ಕಿಯಾಗಿ ಬಚಾವ್ ಆಗಿದೆ. ಹೀಗಾಗಿ, ನದಿಗೆ ಉರುಳುವುದರಿಂದ ಸ್ವಲ್ಪದರಲ್ಲೇ ಪಾರಾಗಿದೆ. ಇದ್ರಿಂದ ಭಾರೀ ದುರಂತವೊಂದು ತಪ್ಪಿದಂತಾಗಿದೆ. ಘಟನೆಯಲ್ಲಿ ಆಂಬುಲೆನ್ಸ್ ನಲ್ಲಿ ಮಗುವನ್ನು ಕರೆದೊಯ್ಯುತ್ತಿದ್ದ ಮಹಿಳೆಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕೋಟ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.
ನಾಯಿ ಬೇಟೆಯಾಡಲು ಬಂದ ಚಿರತೆಗೆ ಏನಾಯ್ತು..? ಕುಮಟಾದಲ್ಲೊಂದು ವಿಚಿತ್ರ ಘಟನೆ..!
ಕುಮಟಾ: ನಾಯಿ ಬೇಟೆಯಾಡಲು ಬಂದ ಚಿರತೆಯೊಂದು, ತಾನೆ ನಾಯಿ ಬಲೆಯಲ್ಲಿ ಸಿಲಕಿದ ಘಟನೆ ಕುಮಟಾ ತಾಲೂಕಿನ ಕಿಮಾನಿ ಗ್ರಾಮದಲ್ಲಿ ನಡೆದಿದೆ. ರಾತ್ರಿ ಮನೆಯ ಹತ್ತಿರ ಕಟ್ಟಿದ್ದ ನಾಯಿಯನ್ನು ಹಿಡಿಯಲು ಬಂದಿದ್ದ ಚಿರತೆ, ನಾಯಿಯ ಬೋನಿನೋಳಗೆ ಹೋಗಿದೆ. ಬೋನಿನೊಳಗೆ ಹೋಗಿದ್ದನ್ನ ಗಮನಿಸಿದ ಮನೆಯ ಮಾಲೀಕರು, ತಕ್ಷಣ ಬೋನ್ ಲಾಕ್ ಮಾಡಿದ್ದಾರೆ. ಹೀಗಾಗಿ, ನಾಯಿ ಬೇಟೆಯಾಡಿ ಹೊಟ್ಟೆ ತುಂಬಿಸಿಕೊಳ್ಳಲು ಬಂದಿದ್ದ ಚಿರತೆ ಈಗ ನಾಯಿ ಬೋನಲ್ಲೇ ಬಲೆ ಬಿದ್ದಿದೆ. ಹೀಗಾಗಿ, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಚಿರತೆ ರಕ್ಷಣೆ ಮಾಡಲು ಕಾರ್ಯಾಚರಣೆ ಪ್ರಾರಂಭವಾಗಿದೆ.
ಕಾರವಾರ ಯುವಕನಿಗೆ ನಿಫಾ ವೈರಸ್ ಇಲ್ಲ, ಪುಣೆಯಿಂದ ಬಂದ ವರದಿ ನೆಗೆಟಿವ್..! ನಿಟ್ಟುಸಿರು ಬಿಟ್ಟ ಜಿಲ್ಲಾಡಳಿತ..!!
ಕಾರವಾರ: ನಿಫಾ ವೈರಸ್ ಆತಂಕದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾರವಾರದ ಯುವಕ ಸದ್ಯ ರಿಲೀಫ್ ಆಗಿದ್ದಾನೆ. ಯಾಕಂದ್ರೆ, ನಿಫಾ ಆತಂಕಿತ ಯುವಕನ ನಿಫಾ ಟೆಸ್ಟ್ ವರದಿ ನೆಗೆಟಿವ್ ಬಂದಿದೆ. ಇದ್ರಿಂದ ನಿಫಾ ಆತಂಕಕ್ಕಿಡಾಗಿದ್ದ ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಯುವಕ ನಿಟ್ಟುಸಿರು ಬಿಟ್ಟಿದ್ದಾರೆ. ಹಾಗಂತ, ದಕ್ಷಿಣಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ ಕಿಶೋರ್ ಕುಮಾರ್ ಮಾಹಿತಿ ನೀಡಿದ್ದಾರೆ. ದಕ್ಷಿಣಕನ್ನಡ ಜಿಲ್ಲಾ ಆರೋಗ್ಯ ಇಲಾಖೆ, ಕಾರವಾರ ಮೂಲದ ಯುವಕನ ಬ್ಲಡ್, ಯುರಿನ್ ಮತ್ತು ಸ್ವಾಬ್ ಸ್ಯಾಂಪಲನ್ನು ಟೆಸ್ಟ್ ಗೆ ಕಳಿಸಿತ್ತು. ಗೋವಾದಲ್ಲಿ ನಿಫಾ ಟೆಸ್ಟ್ ಕಿಟ್ ತಯಾರಿಕಾ ಲ್ಯಾಬ್ನಲ್ಲಿ ಕೆಲಸ ಮಾಡ್ತಿದ್ದ ಯುವಕ, ರಜೆಯಲ್ಲಿ ಕಾರವಾರಕ್ಕೆ ಬಂದ ಮೇಲೆ ಆತನಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ, ಕಳೆದ ಶನಿವಾರ ಸಂಜೆ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಯುವಕ ದಾಖಲಾಗಿದ್ದ. ಈ ಕಾರಣಕ್ಕಾಗಿ, ನಿಫಾ ಆತಂಕದಿಂದ ಸ್ಯಾಂಪಲ್ ಟೆಸ್ಟ್ ಗೆ ಕಳುಹಿಸಿದ್ದ ಆರೋಗ್ಯ ಇಲಾಖೆಗೆ, ಇಂದು ಪುಣೆಯ ಲ್ಯಾಬ್ ನಿಂದ ವರದಿ ಬಂದಿದ್ದಿ, ನೆಗೆಟಿವ್ ಅಂತಾ ದಾಖಲಾಗಿದೆ.
ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ನೇಣಿಗೆ ಶರಣು..!
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಮಂಗಳವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ನಗರದ ಹೊರವಲಯದ ಕುಕ್ಕಿಕಟ್ಟೆ ಎಂಬಲ್ಲಿ ಆಶಾ ಶೆಟ್ಟಿ (48) ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅವರು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಹಾಗೂ ತುಳು ಕೂಟ, ಭಜನಾ ಮಂಡಳಿ, ಚಂಡೆ ಬಳಗ ಇವುಗಳಲ್ಲಿ ಸಕ್ರಿಯವಾಗಿದ್ದರೆಂದು ತಿಳಿದು ಬಂದಿದೆ. ಮೃತಳ ಬಳಿ ಡೆತ್ ನೋಟ್ ಲಭ್ಯವಾಗಿದ್ದು, ಪತ್ರದಲ್ಲಿ ನೇತ್ರದಾನ ಮಾಡುವಂತೆ ಹಾಗೂ ಇನ್ನಿತರ ವಿಷಯಗಳು ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ. ಕಣ್ಣುಗಳನ್ನು ರಕ್ಷಿಸಿಡುವ ಪ್ರಕ್ರಿಯೆ ನಡೆಸಲು ಶವವನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಡಗೋಡಿಗೆ ಸಿಮಾನಿ ಎಸ್.ಎಸ್. ನೂತನ ಪೊಲೀಸ್ ಇನ್ಸ್ ಪೆಕ್ಟರ್..!
ಮುಂಡಗೋಡಿಗೆ ನೂತನ ಪಿಐ ಆಗಿ, ಸಿಮಾನಿ ಎಸ್.ಎಸ್. ಬರಲಿದ್ದಾರೆ. ಸದ್ಯ ವಿಜಯಪುರದ DCRE (Directorate of Civil Rights Enforcement) ನಲ್ಲಿ ಕಾರ್ಯ ನಿರ್ವಹಿಸುತ್ತಿರೋ ಸಿಮಾನಿ ಎಸ್.ಎಸ್. ರವರನ್ನು ತಕ್ಷಣವೇ ವರ್ಗಾವಣೆಗೊಳಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪಿಐ ಆಗಿದ್ದ, ಪ್ರಭುಗೌಡ ಕಿರೆದಳ್ಳಿ, ಡಿವೈಎಸ್ಪಿಯಾಗಿ ಬಡ್ತಿ ಹೊಂದಿ ಬಾಗಲಕೋಟೆ ಜಿಲ್ಲೆಗೆ ವರ್ಗಾವಣೆಯಾಗಿದ್ದರು.
ಕಾತೂರಿನಲ್ಲಿ ಸರಳ ಗಣೇಶೋತ್ಸವ, ಸಂತೋಷ ಶೇಟ್ ರಾಯ್ಕರ್ ದಂಪತಿಯಿಂದ ವಿಶೇಷ ಪೂಜೆ..!
ಮುಂಡಗೋಡ: ತಾಲೂಕಿನ ಕಾತೂರಿನಲ್ಲಿ ಗಣೇಶ ಚತುರ್ಥಿಯ ನಿಮಿತ್ತ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಳಗಿಯ ಸಂತೋಷ ಶೇಟ್ ರಾಯ್ಕರ್ ದಂಪತಿಗಳು ಪೂಜಾ ಕಾರ್ಯಕ್ರಮ ನೆರವೇರಿಸಿದ್ರು. ಕಾತೂರಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಪ್ರತಿಷ್ಟಾಪಿಸಲಾಗಿರೋ ಗಣೇಶ ಮೂರ್ತಿಗೆ ಸಂತೋಷ ರಾಯ್ಕರ್ ದಂಪತಿಗಳು ಇಂದು ವಿಶೇಷ ಪೂಜೆ ಸಲ್ಲಿಸಿದ್ರು. ಈ ವೇಳೆ ಗ್ರಾಮದ ಹಲವು ಮುಖಂಡರು ಭಾಗಿಯಾಗಿದ್ರು. ****************** ಜಾಹೀರಾತು
ಹುನಗುಂದದಲ್ಲಿ ಸರಳವಾಗಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆ..!
ಮುಂಡಗೋಡ: ತಾಲೂಕಿನ ಹುನಗುಂದ ದೇಶಪಾಂಡೆ ನಗರದಲ್ಲಿ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಯಿತು. ಕೋವಿಡ್ ಮಾರ್ಗಸೂಚಿಯ ಅನ್ವಯ ಸರಳವಾಗಿ ಆಚರಿಸಲಾದ ಗಣೇಶೋತ್ಸವಕ್ಕೆ, ಸರಳವಾದ ಮೆರವಣಿಗೆ ಮೂಲಕ ಗಣೇಶ ವಿಸರ್ಜನೆ ನಡೆಸಲಾಯಿತು. ಅದಕ್ಕೂ ಮೊದಲು, ಇಂದು ಗಣೇಶನಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಭಜನಾ ಪದಗಳ ಮೂಲಕ ಗಣೇಶನಿಗೆ ಜಯ ಘೋಷಗಳನ್ನು ಕೂಗಿ ಭಕ್ತಿ ಸಮರ್ಪಿಸಲಾಯಿತು..
ಮುಂಡಗೋಡಿನಲ್ಲಿ ಇಂದು ವೀರಭದ್ರೇಶ್ವರ ಸ್ವಾಮಿಯ ಜಯಂತಿ ಕಾರ್ಯಕ್ರಮ..!
ಮುಂಡಗೋಡ: ಪಟ್ಟಣದಲ್ಲಿ ಇಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಪುರೋಹಿತರ ಬಳಗದಿಂದ ವೀರಭದ್ರೇಶ್ವರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಲ್ಲಿನ ಬಸವಣ್ಣ ದೇವಸ್ಥಾನದಲ್ಲಿ ಸೇರಿದ್ದ ಪುರೋಹಿತರು ಹಾಗೂ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಕಾರ್ಯಕರ್ತರು ಶ್ರೀ ವೀರಭದ್ರೇಶ್ವರ ಸ್ವಾಮಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಣೆ ಮಾಡಿದ್ರು. ವೀರಭದ್ರೇಶ್ವರ ನಾಮಾವಳಿ ಸೇರಿದಂತೆ ಧಾರ್ಮಿಕ ಪೂಜಾ ಕೈಂಕರ್ಯಗಳ ಕುರಿತು ಚರ್ಚಿಸಿದ್ರು..
20 ಕೆಜಿ ಕಾಸ್ಟ್ಯೂಮ್ ಧರಿಸಿ ಲಂಬಾಣಿಯಾಗಿ ಶುಭಾಪುಂಜಾ-ನಿರ್ದೇಶಕ ಶ್ರೀನಿ
ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ಬಹುದಿನಗಳಿಂದ ಎಲ್ಲೂ ಕಾಣಿಸಿಕೊಳ್ಳದ ನಟಿ ಶುಭಾಪುಂಜಾ ಇದೀಗ ಲಂಬಾಣಿ ಹುಡುಗಿಯಾಗಿ ಮತ್ತೆ ತೆರೆ ಮೇಲೆ ರಂಜಿಸಲು ಸಿದ್ದಾರಾಗಿದ್ದಾರೆ. 2018ರಲ್ಲಿ ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ಬಹು ನಿರೀಕ್ಷೆಯನ್ನು ಹುಟ್ಟಿಸಿ ಪ್ರೇಕ್ಷಕರನ್ನು ಗಮನಸೆಳೆದ ಕೆಲವು ದಿನಗಳ ನಂತರ ಎನ್ನುವ ಸಿನಿಮಾದ ನಿರ್ದೇಶಕ ಶ್ರೀನಿ ಇದೀಗ ಹೊಸತೊಂದು ಭಿನ್ನ ಪ್ರಯತ್ನಕ್ಕೆ ಕೈಹಾಕಿದ್ದಾರೆ. ಶ್ರೀನಿ ಭರವಸೆಯ ಯುವ ನಿರ್ದೇಶಕ ಎನ್ನುವುದನ್ನು ಕೆಲವು ದಿನಗಳ ನಂತರ ಸಿನಿಮಾದಲ್ಲಿ ಸಾಬೀತು ಮಾಡಿದ್ದಾರೆ, ಕಣ್ಣಿಗೆ ಕಟ್ಟುವ ಕಥೆಯನ್ನು ಸೃಷ್ಟಿ ಮಾಡುವುದರಲ್ಲಿ ಶ್ರೀನಿ ಎತ್ತಿದ ಕೈ ಹೊಸ ಆಲೋಚನೆಯ ಜೊತೆಗೆ ಭಿನ್ನತೆಯನ್ನು ಪ್ರೇಕ್ಷಕರಿಗೆ ನೀಡಬೇಕು ಎನ್ನುವ ಹಂಬಲ ಹೊತ್ತ ಭರವಸೆಯ ನಿರ್ದೇಶಕನ ಹೊಸ ಸಿನಿಮಾ ಅಂಬುಜದ ಪಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ ಚಿತ್ರತಂಡ. ಶುಭಾಪುಂಜಾ ಅಂಬುಜ ಚಿತ್ರದಲ್ಲಿ ಒಂದು ವಿಶೇಷ ಗೆಟಪ್ ನಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಲ್ಕಿದ್ದಾರೆ ಹಾಗೂ ಇವರ ಜೊತೆಗೆ ಪದ್ಮಜಾರಾವ್, ಕಾಮಿಡಿಕಿಲಾಡಿ ಗೋವಿಂದೇಗೌಡ, ಕಾಮಿಡಿಕಿಲಾಡಿ ನಿರ್ದೇಶಕ ಶರಣಯ್ಯ, ಸಂದೇಶ್ ಶೆಟ್ಟಿ ಅಜ್ರಿ, ಮಜಾಭಾರತದ...