ಮುಂಡಗೋಡಿನ ಹಿರಿಯ ಮುಖಂಡ, ಸಮಾಜ ಸೇವಕ, ಸಾಯಿ ಮಂದಿರದ ಭಕ್ತ ಮಂಡಳಿಯ ಪ್ರಮುಖರಾದ ಅಶೋಕ ಗೋಕರ್ಣ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಇಂದು ಸೋಮವಾರ ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ. ಮುಂಡಗೋಡಿನ ಬಸ್ ನಿಲ್ದಾಣದ ಹತ್ತಿರ ತಮ್ಮದೇ ಜಾಗದಲ್ಲಿ ಸಾಯಿ ಮಂದಿರ ನಿರ್ಮಿಸಿ, ಸಾಯಿ ಭಗವಾನರ ಮೂರ್ತಿ ಪ್ರತಿಷ್ಠಾಪಿಸಿದ್ದರು. ಪತ್ನಿ ಹಿರಿಯ ಆಕಾಶವಾಣಿ ಸಂಗೀತ ಕಲಾವಿದೆ ಭಾರತಿ ಗೋಕರ್ಣರವರ ಮುಖಾಂತರ ಸಾಯಿ ಮಂದಿರದಲ್ಲಿ ಪ್ರತೀ ಗುರುವಾರ ಸತ್ಸಂಗ ನಡೆಸುತ್ತಿದ್ದರು. ಹೀಗಾಗಿ, ತಾಲೂಕಿನ ಸಾಯಿ ಭಕ್ತರ ಪಾಲಿಗೆ ಭಕ್ತ ಬಂಧುಗಳಾಗಿದ್ದರು. ಹೀಗಾಗಿ, ಅಶೋಕ ಗೋಕರ್ಣರವರ ನಿಧನಕ್ಕೆ ಮುಂಡಗೋಡಿನ ಹಲವು ಧಾರ್ಮಿಕ ಮುಖಂಡರು, ಸಾಯಿ ಭಕ್ತ ಬಳಗ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.
Top Stories
ಕಾರವಾರದಲ್ಲಿ ವೈಮಾನಿಕ ದಾಳಿ, ಸಾವಿರಾರು ಮಂದಿಯ ರಕ್ಷಣೆ..! ಬಾಂಬ್ ದಾಳಿ, 37 ಜನ ಬಚಾವ್..!!
ತೀವ್ರ ಅಪೌಷ್ಠಿಕತೆಯಿಂದ ಕೂಡಿದ ಮಕ್ಕಳನ್ನು ಸೂಕ್ತ ಚಿಕಿತ್ಸೆಗೆ ಒಳಪಡಿಸಿ : ಜಿಲ್ಲಾಧಿಕಾರಿ
ಪ್ರಸಕ್ತ ವರ್ಷದ “ಮಾನ್ಸೂನ್” ನಿಗದಿತ ಸಮಯಕ್ಕಿಂತಲೂ ಮುಂಚೇಯೇ ಆಗಮನ ಸಾಧ್ಯತೆ..!
ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಗಾಳಿ ಮಳೆ ; ಮುನ್ಸೂಚನೆ
ಕಾಮೆಡಿ ಕಿಲಾಡಿಯ ಹಾಸ್ಯ ಕಲಾವಿದ, ರಾಕೇಶ್ ಪೂಜಾರಿ ಇನ್ನಿಲ್ಲ..!
ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ದಾರುಣ ಸಾವು..!
ಪಾಕಿಸ್ತಾನದ 700 ಡ್ರೋನ್, ಕೆಲವು ಜೆಟ್ ಗಳು ಧ್ವಂಸ ; ಭಾರತದ ಎಲ್ಲ ಪೈಲಟ್ ಗಳು ಸುರಕ್ಷಿತ : ಡಿಜಿಎಂಒ
ಈ ಬಾರಿ “ಹಾವಿನ ತಲೆಗಳನ್ನು ಕೊಲ್ಲಲು ನಿರ್ಧರಿಸಿದೆ, ಕಾಲುಗಳನ್ನಲ್ಲ” ಭಾರತದ ಸ್ಪಷ್ಟ ಮಾತು..!
ಪಿಒಕೆ ಹಿಂತಿರುಗಿಸಿ, ಉಗ್ರರನ್ನು ಹಸ್ತಾಂತರಿಸಿ ; ಇದು ಬಿಟ್ಟು ಬೇರೆ ಮಾತುಕತೆ ಇಲ್ಲ; ಡಿಜಿಎಂಒ ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ
ಪಾಪಿಗಳ ರಕ್ತ ಹರಿಸದೇ ಕದನವಿರಾಮ ಆಗಿದ್ದನ್ನು ನಾವು ಒಪ್ಪುವುದಿಲ್ಲ: ಪ್ರಮೋದ್ ಮುತಾಲಿಕ್..!
ಮುಂಡಗೋಡ ಬಳಿ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಬೈಕ್ ಗೆ ಗುದ್ದಿದ ಅಪರಿಚಿತ ಟಾಟಾ ಎಸ್, ಬೈಕ್ ಸವಾರ ಗಂಭೀರ..!
ಮಳೆಗಾಲದಲ್ಲಿ ಅವಘಡಗಳಾಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!
ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!
ಯುದ್ಧದ ಸಂದರ್ಭದಲ್ಲಿ ನಾಗರೀಕರ ರಕ್ಷಣೆಗೆ ಸ್ವಯಂ ಸೇವಕರಾಗಲು ನೋಂದಣಿಗೆ ಅರ್ಜಿ ಆಹ್ವಾನ..!
ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಆರೋಪ, ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತ್ತು..!
ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!
ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!
“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!
ಉತ್ತರ ಕನ್ನಡದಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಸ್ಥಳ ಪರಿಶೀಲನೆ ನಡೆಸಿದ ಎಸ್ಪಿ..!
ಈ ಬಾರಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕು ಅನ್ನೋದು ನಮ್ಮ ಉದ್ದೇಶ- ಸಿಎಂ ಸಿದ್ಧರಾಮಯ್ಯ
ಹುಬ್ಬಳ್ಳಿ :ಈ ಬಾರಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕು ಅನ್ನೋದು ನಮ್ಮ ಉದ್ದೇಶ ಆಗಿದೆ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ನಾಳೆಯಿಂದ ಅಧಿವೇಶನ ಎರಡು ವಾರ ನಡೆಯಬೇಕು ಅಂತ ನಮ್ಮ ಉದ್ದೇಶ ಆಗಿದೆ. ಆದರೆ ವಿಪಕ್ಷ ಹೇಗೆ ಸಹಕಾರ ನೀಡುತ್ತೆ ನೋಡೋಣ ಎಂದರು. ಆರ್ಥಿಕ ಸಂಕಷ್ಟ ಇಲ್ಲೆ ಇಲ್ಲ ಬಿಜೆಪಿ ಸುಳ್ಳು ಹೇಳುತ್ತಿದ್ದು. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆ ವಿರೋಧ ಮಾಡತ್ತಾರೆ ಬೇರೆ ಕಡೆ ಬಿಜೆಪಿ ಅವರೇ ಗ್ಯಾರಂಟಿ ಘೋಷಣೆ ಮಾಡ್ತಾರೆ ಇದು ಇಬ್ಬಂಧಿತನ ಅಲ್ವಾ..? ಇದರಲ್ಲಿ ಬಿಜೆಪಿಗೆ ಸ್ಪಷ್ಟ ನಿಲುವು ಇಲ್ಲ ಬರೀ ಸುಳ್ಳು ಅಪ್ರಚಾರ ಮಾಡತ್ತಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ದುಡ್ಡು ಇಲ್ಲ ಅಂತ ಸುಳ್ಳು ಹೇಳುತ್ತಿದ್ದಾರೆ ಬಜೆಟ್ ನಲ್ಲಿ ಘೋಷಣೆ ಮಾಡಿರುವ ಯಾವ ಕೆಲಸ ದುಡ್ಡು ಇಲ್ಲದೆ ನಿಂತಿದೆ ಅನ್ನೋದನ್ನ ಬಿಜೆಪಿ ಅವರು ಸಾಬೀತು ಮಾಡಲಿ ಎಂದು ಸವಾಲು ಹಾಕಿದರು. ಬಳ್ಳಾರಿಯಲ್ಲಿ ಬಾಣಂತಿಯ ಸಾವು...
ಶಿಗ್ಗಾವಿಯಲ್ಲಿ ಭರ್ಜರಿ ಜಯ ಸಿಕ್ಕ ಹಿನ್ನೆಲೆ, ಸವಣೂರಿಗೆ ಇಂದು ಸಿಎಂ ಸಿದ್ದರಾಮಯ್ಯ..! ಕ್ಷೇತ್ರಕ್ಕೆ ವಿಶೇಷ ಗಿಫ್ಟ್ ಕೊಡ್ತಾರಾ ಸಿಎಂ..?
ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಜಯ ದಾಖಲಿಸಿದ ಹಿನ್ನೆಲೆಯಲ್ಲಿ ಇವತ್ತು ಸವಣೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಸವಣೂರಿನ ತಾಲೂಕಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರೋ ಬೃಹತ್ ಅಭಿನಂದನಾ ಸಮಾರಂಭಸಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಬಹುಶಃ, ಶಿಗ್ಗಾವಿ ಕ್ಷೇತ್ರಕ್ಕಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಗಿಫ್ಟ್ ಕೊಡ್ತಾರಾ..? ಅನ್ನೋ ಭರವಸೆ ಯಲ್ಲಿದ್ದಾರೆ ಜನ. ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಸವಣೂರು ಪಟ್ಟಣಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಗ್ಗಾವಿ ಕ್ಷೇತ್ರದ ಜನತೆ ಕಾಂಗ್ರೆಸ್ಗೆ ಆಶೀರ್ವಾದ ಮಾಡಿದ ಹಿನ್ನೆಲೆಯಲ್ಲಿ, ಕೃತಜ್ಞತೆ ಸಲ್ಲಿಸಲಿದ್ದಾರೆ. ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ನೀಡಿದ ಕ್ಷೇತ್ರದ ಎಲ್ಲ ಮತದಾರರಿಗೆ ಅಭಿನಂದನಾ ಸಮಾವೇಶ ಆಯೋಜನೆ ಮಾಡಲಾಗಿದ್ದು, ಸವಣೂರಿನ ತಾಲೂಕಾ ಕ್ರೀಡಾಂಗಣದಲ್ಲಿ ಸಾಯಂಕಾಲ ನಾಲ್ಕು ಗಂಟೆಗೆ ಕೃತಜ್ಞತಾ ಸಮಾವೇಶ ನಡೆಯಲಿದೆ. ಇದೇ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗಿ ಸಿಎಂ ಸಿದ್ದರಾಮಯ್ಯ ಕ್ಷೇತ್ರಕ್ಕೆ ಬಂಪರ ಅನುದಾನ ನೀಡ್ತಾರಾ ಅನ್ನೊ ಕುತೂಹಲ ಹೆಚ್ಚಾಗಿದ್ದು ಕ್ಷೇತ್ರದ ಜನ ಭರವಸೆಯಲ್ಲಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಜೊತೆಗೆ ಡಿಸಿಎಂ ಡಿ.ಕೆ.ಶಿವಕುಮಾರ, ಎಐಸಿಸಿ ಪ್ರಧಾನ ಕಾರ್ಯದರ್ಶಿ...
ಮುಂಡಗೋಡ ಪ.ಪಂಚಾಯತ್ ಪೈಪಲೈನ್ ಕಾಮಗಾರಿಯಲ್ಲಿ ಬಾರಾ ಬಾನಗಡಿ..? ದಾಖಲೆಯಲ್ಲಿ ಇದ್ದ ಪೈಪ್, ಸ್ಥಳದಲ್ಲಿ ಇಲ್ಲವೇ ಇಲ್ಲಾರಿ..!
ಮುಂಡಗೋಡ: 24×7 ಕುಡಿಯುವ ನೀರಿನ ಯೋಜನೆಯ ಕಾಮಗಾರಿಯಲ್ಲಿ ಬಾರಾಬಾನಗಡಿ ಆಗಿದೆಯಾ..? ಅದ್ಯಾವನೋ ಕಾಂಟ್ರಾಕ್ಟರ್ ಕಾಮಗಾರಿ ಹಳ್ಳ ಹಿಡಿಸಿದ್ರಾ..? ಇಂತಹದ್ದೊಂದು ಅನುಮಾನದೊಂದಿಗೆ ಶನಿವಾರ ನಡೆದ ಪಟ್ಟಣ ಪಂಚಾಯತ ಸಾಮಾನ್ಯ ಸಭೆಯಲ್ಲಿ ಕಾವೇರಿದ ಆರೋಪ, ಚರ್ಚೆಗೆ ಕಾರಣವಾಯ್ತು. ಅಂದಹಾಗೆ, ಕಾಮಗಾರಿಯ ದಾಖಲೆಯಲ್ಲಿ ಪೈಪ್ ಲೈನ್ ತೋರಿಸಲಾಗಿದೆ ಆದರೆ ಆ ಸ್ಥಳಗಳಲ್ಲಿ ಪೈಪ್ ಇಲ್ಲದೆ ಇರುವುಕಂಡು ಬಂದಿದೆ. ಹಾಗಾದರೇ ಆ ಪೈಪಗಳು ಎಲ್ಲಿ ಹೋದವು ಈ ಬಗ್ಗೆ ಸಮಗ್ರ ತನಿಖೆ ಆಗಬೇಕೆಂದು ಪ.ಪಂ ಸದಸ್ಯರು ಸಾಮಾನ್ಯ ಸಭೆಯಲ್ಲಿ ಏಕದಂ ಏರುದನಿಯಲ್ಲಿ ಆಗ್ರಹಿಸಿದ್ರು. ಶನಿವಾರ ಇಲ್ಲಿನ ಪ.ಪಂ ಸಭಾಭವನದಲ್ಲಿ ಪ.ಪಂ ಅಧ್ಯಕ್ಷೆ ಜಯಸುಧಾ ಭೋವಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯ ಮಮ್ಮದಗೌಸ ಮಕಾಂದಾರ್ ಈ ಬಗ್ಗೆ ಆರೋಪಿಸಿ ಮಾತನಾಡಿದರು, ಸರಕಾರದ ಕೋಟ್ಯಾಂತರ ರೂ ಅನುದಾನದಲ್ಲಿ ಪಟ್ಟಣದ ಜನರಿಗೆ 24×7 ಕುಡಿಯುವ ಯೋಜನೆ ಇದಾಗಿತ್ತು. ಆದರೆ ಗುತ್ತಿಗೆದಾರರು ಈ ಯೋಜನೆಯ ಮ್ಯಾಪ್ ನಲ್ಲಿ ಪೈಪ್ ಲೈನ್ ಅಳವಡಿಸಿದ ಬಗ್ಗೆ ತೊರಸಿದ್ದಾರೆ. ಮ್ಯಾಪಿನ ಪ್ರಕಾರ ಕೆಲ...
ತಡಸ ತಾಯವ್ವನ ಸನ್ನಿಧಿಯಲ್ಲಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು..! ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಾಣ ಕಳೆದುಕೊಂಡನಾ ಪ್ರೇಮಿ..?
ಮುಂಡಗೋಡ ತಾಲೂಕಿನ ವಡಗಟ್ಟಾ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ, ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಪಾಗಲ್ ಪ್ರೇಮಿ ಮೃತಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಡುಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಅಂದಹಾಗೆ, ನಿನ್ನೆ ಅಂದ್ರೆ ಶುಕ್ರವಾರ ಮದ್ಉಅನ ಮುಂಡಗೋಡ ತಾಲೂಕಿನ ವಡಗಟ್ಟಾ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ ನಡೆಯಬಾರದ ಘಟನೆಯೊಂದು ನಡೆದಿತ್ತು. ಪ್ರೀತ್ಸೆ ಪ್ರೀತ್ಸೆ ಅಂತಾ ಪ್ರಾಣ ತಿಂದ ಯುವಕನೋರ್ವ ಆ ಯುವತಿಯ ಕಣ್ಣೇದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಹುಬ್ಬಳ್ಳಿ ತಾಲೂಕಿನ ಬೆಳಗಲಿ ಗ್ರಾಮದ ಪ್ರವೀಣ್ ಬೆಟದೂರ್ ಎಂಬುವವ ತನ್ನ ಪ್ರೇಯಸಿಯ ಎದುರೇ ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದ. ಹೀಗಾಗಿ, ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದೇ ಪ್ರವೀಣ್ ಸಾವನ್ನಪ್ಪಿದ್ದಾನೆ. ತಡಸ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ತಡಸ ತಾಯವ್ವನ ಸನ್ನಿಧಿಯಲ್ಲೇ ನಡೀತು ಭಯಂಕರ ಘಟನೆ, ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯಿಂದ ಆತ್ಮಹತ್ಯೆಗೆ ಯತ್ನ.!
ಮುಂಡಗೋಡ ತಾಲೂಕಿನ ವಡಗಟ್ಟಾ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ ನಡೆಯಬಾರದ ಘಟನೆಯೊಂದು ನಡೆದಿದೆ. ಪ್ರೀತ್ಸೆ ಪ್ರೀತ್ಸೆ ಅಂತಾ ಪ್ರಾಣ ತಿಂದ ಯುವಕನೋರ್ವ ಆ ಯುವತಿಯ ಕಣ್ಣೇದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹೀಗಾಗಿ, ಸದ್ಯ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಸಾವು ಬದುಕಿನ ನಡುವೆ ಹೋರಾಡ್ತಿದಾನೆ. ಆತನ ಹೆಸ್ರು ಪ್ರವೀಣಾ..! ಅಂದಹಾಗೆ, ಆತನ ಹೆಸ್ರು ಪ್ರವೀಣ ಬರಮಪ್ಪ ಬೆಟದೂರ್, ವಯಸ್ಸು ಈಗಷ್ಟೆ 25 ರ ಆಸು ಪಾಸು.. ಹುಬ್ಬಳ್ಳಿ ತಾಲೂಕಿನ ಬೆಳಗಲಿಯ ಹುಡುಗ.. ಈತ ಇವತ್ತು ಬೆಳ್ಳಂ ಬೆಳಿಗ್ಗೆ ತಾನು ಪ್ರೀತಿಸಿದ್ದ ಹುಡುಗಿಯನ್ನ ತನ್ನದೇ ಬೈಕ್ ಮೇಲೆ ಕೂರಿಸಿಕೊಂಡು, ತನ್ನ ಹೃದಯದ ಪ್ರೇಮ ನಿವೇದನೆ ಮಾಡಲು ಹೊರಟಿದ್ದ. ವಡಗಟ್ಟಾ ಸಮೀಪದ, ಅಂದ್ರೆ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ತಡಸದ ತಾಯವ್ವ ದೇವಸ್ಥಾನದ ಹತ್ರ ಬಂದು ನಿಂತಿದ್ದ. ಅಲ್ಲಿ ತಾಯವ್ವನ ಸಾಕ್ಷಿಯಾಗಿ ನಾನು ನಿನ್ನ ಪ್ರೀತಿಸ್ತಿನಿ ಅಂತಾ ಆ ಯುವತಿಗೆ ಗಂಟು ಬಿದ್ದಿದ್ದ. ಆದ್ರೆ ಯುವತಿ ಅದ್ಯಾಕೋ ಎನೋ ನೋ ಅಂದಿದ್ಲಂತೆ.. ಜಸ್ಟ್ ಪ್ರೆಂಡ್ಸ್...
ಆಂದೋಲನದ ಮಾದರಿಯಲ್ಲಿ ಬಗರ್ ಹುಕುಂ ಅರ್ಜಿಗಳ ವಿಲೇವಾರಿ : ಶಿರಸಿಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ
ಶಿರಸಿ: ರಾಜ್ಯದಲ್ಲಿ ಬಗರ್ಹುಕುಂ ಅರ್ಜಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಬಂದಿದ್ದು, ಅವುಗಳನ್ನು ಮುಂದಿನ ಆರು ತಿಂಗಳಲ್ಲಿ ಆಂದೋಲನ ಮಾದರಿಯಲ್ಲಿ ವಿಲೇವಾರಿ ಮಾಡುತ್ತೇವೆ. ಅರ್ಹರಿಗೆ ಎಲ್ಲ ದಾಖಲಾತಿಯನ್ನು ಮಾಡಿಕೊಡುತ್ತೇವೆ, ರಾಜ್ಯದಲ್ಲಿ ಇದೇ ಪ್ರಪ್ರಥಮ ಬಾರಿಗೆ ಬಗರ್ ಹುಕುಂ ಕುರಿತು ಮಂಜೂರಾತಿಯನ್ನು ಪ್ರಾರಂಭದಿಂದ ಕೊನೆಯವರಿಗೆ ಸಂಪೂರ್ಣವಾಗಿ ಆನ್ ಲೈನ್ ಮೂಲಕ ಶಿರಸಿಯಲ್ಲಿ ಮಾಡುವ ಮೂಲಕ ಈ ಅಭಿಯಾನ ಆರಂಭಿಸುತ್ತಿದ್ದೇವೆ ಎಂದು ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಅವರು ಶಿರಸಿಯ ಅಂಬೇಡ್ಕರ್ ಭವನದಲ್ಲಿ ಬುಧವಾರ, ಫಲಾನುಭವಿಗಳಿಗೆ ಬಗರ್ಹುಕುಂ ಸಾಗುವಳಿ ಚೀಟಿ, ಪಹಣಿಪತ್ರಿಕೆ, ಪೋಡಿ ದಾಖಲೆ, ಕಂದಾಯ ಗ್ರಾಮಗಳ ಹಕ್ಕುಪತ್ರ ವಿತರಿಸಿ ಮಾತನಾಡಿದರು. ರಾಜ್ಯದಲ್ಲಿ ಅರಣ್ಯ ಹೊರತುಪಡಿಸಿ ಸುಮಾರು ವರ್ಷಗಳಿಂದ ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಮನೆ ಕಟ್ಟಿಕೊಂಡು ಊರಾಗಿ ಬೆಳೆದು ದಾಖಲೆಯಲ್ಲಿ ಗ್ರಾಮವಾಗದ ತಾಂಡಾ, ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುತ್ತೇವೆ. ತ್ರಿಶಂಕು ಪರಿಸ್ಥಿತಿಯಲ್ಲಿರುವ 3800 ತಾಂಡಾ, ಹಟ್ಟಿ ವಸತಿ ಪ್ರದೇಶಗಳಲ್ಲಿ ವಾಸಿಸುವ 1.5 ಲಕ್ಷ ಕುಟುಂಬಗಳಿಗೆ ಶಾಶ್ವತ ಹಕ್ಕುಪತ್ರ ನೀಡುತ್ತೇವೆ ಎಂದರು. ಉತ್ತರ...
ಚೌಡಳ್ಳಿಯ ಹಿರಿಯ ಸಹಕಾರಿ ಧುರೀಣ ವೈ.ಪಿ.ಪಾಟೀಲ್(72) ವಿಧಿವಶ..!
ಮುಂಡಗೋಡ ತಾಲೂಕಿನ ಹಿರಿಯ ಸಹಕಾರಿ ಧುರೀಣ, ಹಿರಿಯ ರಾಜಕೀಯ ಮುಖಂಡ ಚೌಡಳ್ಳಿಯ ವೈ.ಪಿ.ಪಾಟೀಲ್ (72) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಕಳೆದ ಬುಧವಾರ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವ್ರು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವಿಧಿವಶರಾಗಿದ್ದಾರೆ. ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ, ಶಿವಾಜಿ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಪಾಟೀಲ್, ಹಲವು ಹುದ್ದೆಗಳನ್ನು ಅಲಂಕರಿಸಿದ್ದರು. ವೈ.ಪಿ.ಪಾಟೀಲ್ ನಿಧನಕ್ಕೆ ತಾಲೂಕಿನ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!
ಮುಂಡಗೋಡ ಪಟ್ಟಣದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಸೋಮವಾರ ಸಂಜೆ 5 ಗಂಟೆಗೆ ಪೊಲೀಸ್ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ. ಉತ್ತರ ಕನ್ನಡ ಖಡಕ್ ಎಸ್ಪಿ ಎಂ. ನಾರಾಯಣ್ ನೇತೃತ್ವದಲ್ಲಿ ಜನಸಂಪರ್ಕ ಸಭೆ ನಡೆಯಲಿದ್ದು ಸಾರ್ವಜನಿಕರು ತಮ್ಮ ಸಂಕಷ್ಟಗಳನ್ನು, ದುಃಖ ದುಮ್ಮಾನಗಳನ್ನು ಹೇಳಿಕೊಳ್ಳಬಹುದಾಗಿದೆ. ಇತ್ತಿಚೆಗೆ ಪಟ್ಟಣದಲ್ಲಿ ನಡೆದ ಕೆಲ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ, ಆತಂಕದಲ್ಲಿದ್ದ ಮುಂಡಗೋಡಿಗರಿಗೆ “ನಿಮ್ಮೊಂದಿಗೆ ನಾವಿದ್ದೇವೆ” ಎನ್ನುವ ಅಭಯದ ಸಂದೇಶ ನೀಡುವಲ್ಲಿ ಎಸ್ಪಿ ನಾರಾಯಣ್ ಮಹತ್ತರ ಹೆಜ್ಜೆ ಇರಿಸಿದ್ದಾರೆ ಎನ್ನಲಾಗ್ತಿದೆ. ಅಸಲು, ಎಸ್ಪಿ ಸಾಹೇಬರ ನಿರ್ಧಾರ ಮುಂಡಗೋಡಿನ ಹಿರಿಯ ನಾಗರಿಕರು, ಪ್ರಜ್ಞಾವಂತರ ಮೆಚ್ಚುಗೆಗೆ ಕಾರಣವಾಗಿದೆ.
ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು, ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರ ಫೈರಿಂಗ್..!
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೇ ಗುಂಡಿನ ಸದ್ದು ಕೇಳಿಸಿದೆ. ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಸಿಸಿಬಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿ, ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಖತರ್ನಾಕ ಖದೀಮರ ಕಾಲಿಗೆ ಗುಂಡು ಹಾರಿಸಲಾಗಿದೆ. ಪರಿಣಾಮ ಇಬ್ಬರು ಆಸ್ಪತ್ರೆ ಪಾಲಾಗಿದ್ದಾರೆ. ಅಂದಹಾಗೆ, ಮಂಗಳೂರು ಮೂಲದ ಕುರ್ತಾ ಅಲಿಯಾಸ್ ಭರತ್ ಕುಮಾರ್ ಹಾಗೂ ಫಾರೂಕ್ ಅಲಿಯಾಸ್ ಟೊಮೆಟೊ ಫಾರೂಕ್ ಕಾಲಿಗೆ ಗುಂಡೇಟು ತಗುಲಿದೆ. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೋಡಲಾಗ್ತಿದೆ. ಅಂದಹಾಗೆ, ಮಂಗಳೂರು ಮೂಲದ ಭರತ್, ಫಾರುಕ್ ಕಾರು ಅಡ್ಡಗಟ್ಟಿ ದರೋಡೆ ಮಾಡುವುದನ್ನೇ ದಂಧೆ ಮಾಡಿಕೊಂಡಿದ್ದರು. ಇವರ ಗ್ಯಾಂಗ್ನಲ್ಲಿ 15 ಜನರಿದ್ದಾರೆ. ಹೀಗಾಗಿ, ಮಹಾರಾಷ್ಟ್ರ ಸಾಂಗ್ಲಿ ಮೂಲದ ರಾಹುಲ್ ಸುರ್ವೆ ಕಾರು ಅಡ್ಡಗಟ್ಟಿ ಖದೀಮರು ದರೋಡೆ ಮಾಡಿದ್ದರು. ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಹತ್ತಿರ ದರೋಡೆ ನಡೆದಿತ್ತು. ಕಾರು ಚಾಲಕನಿಗೆ ಬೆದರಿಕೆ ಹಾಕಿ ಫಾರೂಕ್ ಹಾಗೂ ಭರತ್ ಗ್ಯಾಂಗ್ ದರೋಡೆ ಮಾಡಿದ್ದರು. ನವೆಂಬರ್ 8 ರಂದು ದರೋಡೆ ನಡೆದಿತ್ತು. ಈ...