ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC) ದಿನಾಂಕ:02.03 2025 ರ ವರದಿಯನ್ವಯ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿಯ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯ ನಾಗರಿಕರಿಗೆ ಈ ಕೆಳಗೆ ಸೂಚಿಸಲಾಗಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ. ಮುನ್ನಚ್ಚರಿಕೆ ಪಾಲಿಸಿ..! ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ. ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ. ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ ಬೂಟುಗಳು ಅಥವಾ ಚಪ್ಪಲ್ ಗಳನ್ನು ಬಳಸಿ. ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ ನೀವು ಹೊರಗೆ ಕೆಲಸ ಮಾಡುತ್ತಿದ್ದರೆ ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ. ನಿಲ್ಲಿಸಿದ ವಾಹನಗಳಲ್ಲಿ...
Top Stories
ಮೇ.17 ರಂದು ಭಟ್ಕಳದಲ್ಲಿ ಜಿಲ್ಲಾಮಟ್ಟದ ಜನಸ್ಪಂಧನ ಕಾರ್ಯಕ್ರಮ: ಕಾರ್ಯಕ್ರಮದ ಪ್ರಯೋಜನ ಪಡೆಯಿರಿ- ಜಿಲ್ಲಾಧಿಕಾರಿ
ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಒದಗಿಸಿ- ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..!
ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..!
ಮುಂಗಾರಿನ ಮಳೆಗಾಲದಲ್ಲಿ ಮುನ್ನೆಚ್ಚರಿಕೆ ಸೂಚನೆ ಪಾಲಿಸಿ : ಸಿಡಿಲಿನಿಂದ ರಕ್ಷಿಸಿಕೊಳ್ಳಿ..!
ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿ..!
ವೈದ್ಯಕೀಯ ಸೇವೆಗೆ ಸದಾ ಸನ್ನದ್ದವಾಗಿರಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ..!
CBSE, SSLC ಫಲಿತಾಂಶ ಪ್ರಕಟ: ಮುಂಡಗೋಡ ಲೊಯೊಲಾ ಕೇಂದ್ರೀಯ ವಿದ್ಯಾಲಯ 100% ಫಲಿತಾಂಶದ ಸಾಧನೆ..! ಮಾನಸಿ ಸಿದ್ದಿ ಪ್ರಥಮ..!
ಕೊಲ್ಕೊತ್ತಾದ ಮೇಲೆ ದಾಳಿ ಮಾಡಿ ವಶ ಪಡಿಸಿಕೊಳ್ತಿವಿ, ಆತ್ಮಹತ್ಯಾ ಬಾಂಬ್, ತಾಲಿಬಾನಿ ಶೈಲಿಯ ದಾಳಿ ಮಾಡ್ತಿವಿ ಅಂತ ಅಂದವನು ಯಾರೀತ..?
ಭಾರತ-ಪಾಕಿಸ್ತಾನ ಪರಮಾಣು ಯುದ್ಧ ನಿಲ್ಲಿಸಲು ‘ಸಹಾಯ’ ಮಾಡಿದ್ದೇವೆ..! ಕದನ ವಿರಾಮಕ್ಕೆ ನಾವೇ ಕಾರಣ ಅಂದ “ದೊಡ್ಡಣ್ಣ”
ಪ್ರಧಾನಿ ಮೋದಿ ಭಾಷಣ ಮುಗಿಸಿದ ಕೆಲವೇ ಹೊತ್ತಲ್ಲಿ ಜಲಂಧರ್ ಬಳಿ ಕಣ್ಗಾವಲು ಡ್ರೋನ್ ಹೊಡೆದುರುಳಿಸಿದ ಸೇನೆ ; ವಿದ್ಯುತ್ ಸ್ಥಗಿತ
ಭಾರತದ ವಾಯುದಾಳಿಗೆ ನಡುಗಿದ ನೂರ್ ಖಾನ್, ವಾಯುನೆಲೆ ಮೇಲಿನ ದಾಳಿ ನಂತರ ಬಂಕರ್ ನಲ್ಲಿ ಅಡಗಿದ ಪಾಕ್ ಸೇನಾ ಮುಖ್ಯಸ್ಥ
ಬೆಳಗಾವಿಯ ಸಂತಿ ಬಸ್ತವಾಡದ ಮಸೀದಿಯಲ್ಲಿನ ಕುರಾನ್ ಸುಟ್ಟು ಹಾಕಿದ ಕಿಡಿಗೇಡಿಗಳು, ಪ್ರತಿಭಟನೆ..!
ಕ್ಷುಲಕ ಕಾರಣಕ್ಕೆ ಬಾಲಕರ ಜಗಳ, ಕೊಲೆಯಲ್ಲಿ ಅಂತ್ಯ.. 9ನೇ ತರಗತಿ ಬಾಲಕನಿಗೆ ಚಾಕು ಇರಿದ 6ನೇ ತರಗತಿ ಬಾಲಕ..!
ಆಪರೇಶನ್ ಸಿಂಧೂರ | ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನ, ಚೀನಾ ನಿರ್ಮಿತ ಏರ್ ಡಿಫೆನ್ಸ್ ಧ್ವಂಸ : ಸೇನೆಯಿಂದ ವೀಡಿಯೊ ಬಿಡುಗಡೆ..!
ಕಾರವಾರದಲ್ಲಿ ವೈಮಾನಿಕ ದಾಳಿ, ಸಾವಿರಾರು ಮಂದಿಯ ರಕ್ಷಣೆ..! ಬಾಂಬ್ ದಾಳಿ, 37 ಜನ ಬಚಾವ್..!!
ತೀವ್ರ ಅಪೌಷ್ಠಿಕತೆಯಿಂದ ಕೂಡಿದ ಮಕ್ಕಳನ್ನು ಸೂಕ್ತ ಚಿಕಿತ್ಸೆಗೆ ಒಳಪಡಿಸಿ : ಜಿಲ್ಲಾಧಿಕಾರಿ
ಪ್ರಸಕ್ತ ವರ್ಷದ “ಮಾನ್ಸೂನ್” ನಿಗದಿತ ಸಮಯಕ್ಕಿಂತಲೂ ಮುಂಚೇಯೇ ಆಗಮನ ಸಾಧ್ಯತೆ..!
ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಗಾಳಿ ಮಳೆ ; ಮುನ್ಸೂಚನೆ
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!
*ವರದಿ: ಶಂಕರ್ ಕ್ಷತ್ರೀಯ, ಆರಕ್ಷಕ ಬರಗುಡಿ: ವಿಜಯಪುರ ಜಿಲ್ಲೆಯ ಭೀಮಾತೀರದ ಪ್ರಸಿದ್ಧ ಬರಗುಡಿ ಗ್ರಾಮದ ಅಧಿ ದೇವತೆಯ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 21ರಂದು ಭೀಮಾ ನದಿ ತಪ್ಪಲಿನ ಬರಗುಡಿಯಲ್ಲಿ ಲಕ್ಷ್ಮಿ ದೇವಿಯ ಸಂಭ್ರಮ, ಸಡಗರ, ಮದ್ದು ಸಿಡಿಲು ಪಟಾಕೆ ಅಗೋಚರ ನೀಲ ಪರದೆ,ತಮಟೆ ಸದ್ದು, ಪೋತ -ರಾಜರ ನರ್ತನ, ಮೈ ಜುಮ್ಮು ಎನಿಸುವ ಬಾರಕೊಲಿನ ಹೊಡೆತ. ಹೀಗೆ ಖುಷಿ ಕೊಡುವ ಗೆಳೆಯ, ಸಹದ್ಯೋಗಿಗಳು, ನೆಂಟರು ಈ ಜಾತ್ರೆಯ ಸೊಬಗು. ಲಕ್ಷ್ಮಿದೇವಿ ಜಾತ್ರೆ, ಗ್ರಾಮದಲ್ಲಿ ಒಂದು ಪ್ರಮುಖ ಪರಂಪರೆ. ಸಾಮಾನ್ಯವಾಗಿ ಒಂದು ಸಾರ್ವಜನಿಕ ಉದ್ದೇಶಕ್ಕಾಗಿ ಒಂದುಗೂಡುವಿಕೆಯನ್ನು ಜಾತ್ರೆ ಎಂದು ಹೇಳಬಹುದು. ಪ್ರತಿ ವರ್ಷಗಳಿಗೊಮ್ಮೆ ಸರ್ವತ್ರ ಸುಭಿಕ್ಷಾರ್ಥವಾಗಿ ಧಾರ್ಮಿಕ ಪರಂಪರೆಯಂತೆ ಪೂಜಾ-ಉತ್ಸವಗಳಿಂದೊಡಗೂಡಿದ ಶ್ರೀ ಲಕ್ಷ್ಮಿ ಜಾತ್ರೆಯನ್ನು ಅತೀ ವಿಜ್ರಂಭಣೆಯಿಂದ ನಡೆಸಲಾಗುತ್ತದೆ. ಇದು ಭೀಮಾ ನದಿ ದಡ ದಲ್ಲಿಯೇ ಅತೀದೊಡ್ಡ ಜಾತ್ರೆ, ಈ ಜಾತ್ರೆಗೆ ನಗರ ಹಳ್ಳಿ ಮೂಲೆ ಮೂಲೆಗಳಿಂದ ಭಕ್ತಸಾಗರ ಹರಿದು ಬರುತ್ತಾರೆ. ಅನೇಕಾನೇಕ ಮನರಂಜನಾ ಕಾರ್ಯಕ್ರಮಗಳು, ಜಾನಪದ ಲಡ್ಡು ಬಾರಕೋಲಿನ ಪ್ರದರ್ಶನಗಳು,...
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?
ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ಬಳಿ ನಡೆದಿದ್ದ ಕಾರು ಅಪಘಾತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕಾರವಾರದ ಸಾಮಾಜಿಕ ಕಾರ್ಯಕರ್ತ ಮಾಧವ ನಾಯ್ಕ್ ಇಡೀ ಪ್ರಕರಣದ ಬಗ್ಗೆ ವಿಸ್ತೃತ ದೂರು ನೀಡಿದ್ದಾರೆ. ಘಟನೆ ನಡೆದದ್ದೇ ಬೇರೆ, ಕೇಸು ದಾಖಲಾಗಿದ್ದೇ ಬೇರೆ, ಇನ್ಶ್ಯೂರನ್ಸ್ ಹಣಕ್ಕಾಗಿ ಇಲ್ಲಿ ಇಡೀ ಕೇಸನ್ನೇ ಉಲ್ಟಾ ಪಲ್ಟಾ ಮಾಡಿದ್ದಾರೆ ಅಂತಾ ಗಂಭೀರ ಆರೋಪ ಮಾಡಿದ್ದಾರೆ. ಅಲ್ದೇ ಈ ಕುರಿತು ಪೊಲೀಸ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಹೀಗಾಗಿ, ಈ ಕೇಸು ಮುಂಡಗೋಡ ಪೊಲೀಸರಿಗೆ ಬಹುತೇಕ ಉರುಳಾಗೋ ಎಲ್ಲಾ ಸಾಧ್ಯತೆ ಇದೆ. ಮೊನ್ನೆಯಷ್ಟೇ..! ಇನ್ನು, ಇತ್ತೀಚಿಗಷ್ಟೆ ಕೌಟುಂಬಿಕ ವಿವಾದದಲ್ಲಿ ಸದ್ದು ಮಾಡಿದ್ದ ಕಾರವಾರದ ಸೈಬರ್ ಕ್ರೈಮ್ ವಿಭಾಗದ DySP ಅಶ್ವಿನಿ .ಬಿ ವಿರುದ್ಧ ಅಧಿಕಾರ ದುರುಪಯೋಗ ,ಇನ್ಸುರೆನ್ಸ್ ಕಂಪನಿಗೆ ವಂಚನೆ, ಸುಳ್ಳು ಪ್ರಕರಣ ದಾಖಲಿಸಿರುವ ಕುರಿತು ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಲಾಗಿದೆ. ಇದೇಂತಾ ಸುಳ್ಳು ರೀ..? ಕಾರವಾರದ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯ್ಕ ಎಂಬುವವರು ದೂರು ನೀಡಿದವರಾಗಿದ್ದು ಸೈಬರ್...
ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!
ಮುಂಡಗೋಡ ತಾಲೂಕಿನ ಇಂದೂರ ಸಮೀಪದ, ಮಲಬಾರ್ ಕಾಲೋನಿಯ ಅರಣ್ಯದಲ್ಲಿ ಅಕ್ರಮ ಮಣ್ಣು ಸಾಗಾಟ ನಿರಂತರವಾಗಿದೆ ಅನ್ನೋ ಆರೋಪವಿದೆ. ಹೀಗಾಗಿ, ನಿನ್ನೆ ಶನಿವಾರ ತಡ ರಾತ್ರಿ ಮಲಬಾರ್ ಕಾಲೋನಿಯ ಹಾರನಕೇರಿಯ ಹತ್ತಿರ ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿದ್ದ ವೇಳೆ ಅರಣ್ಯ ಸಿಬ್ಬಂದಿಗಳು ದಾಳಿ ಮಾಡಿದ್ದಾರೆ. ಪರಿಣಾಮ ಅಕ್ರಮವಾಗಿ ಮಣ್ಣು ಸಾಗಾಟದಲ್ಲಿ ತೊಡಗಿದ್ದ ಒಂದು JCB ಹಾಗೂ ಒಂದು ಟ್ರ್ಯಾಕ್ಟರ್ ವಶಕ್ಕೆ ಪಡೆದಿದ್ದಾರೆ. ಇಂದೂರು ಸೆಕ್ಷೆನ್ ನ ಅರಣ್ಯ ಇಲಾಖೆಗೆ ಸಂಬಂಧಿಸಿದ ಕೆರೆಯ ಪಕ್ಕದಲ್ಲಿನ ಅರಣ್ಯದಲ್ಲಿ ಅಕ್ರಮವಾಗಿ ರಾತ್ರೋ ರಾತ್ರಿ ಮಣ್ಣು ತೆಗೆದು ಸಾಗಾಟ ಮಾಡುತ್ತಿದ್ದರು. ಹೀಗಾಗಿ, ಖಚಿತ ಮಾಹಿತಿ ಸಿಕ್ಕ ಕೂಡಲೇ ಅರಣ್ಯ ರಕ್ಷಕ ಶ್ರೀಕಾಂತ್ ವೇ್ಣೇಕರ್, ಗಸ್ತು ಅರಣ್ಯ ಪಾಲಕ ನಾರಾಯಣ ಸಿಂಗ್ ರಜಪೂತ್ ಹಾಗೂ ಈರಪ್ಪ ಉಗ್ನಿಕೇರಿ ದಾಳಿ ಮಾಡಿ, ಒಂದು ಜೆಸಿಬಿ, ಮತ್ತೆ ಒಂದು ಟ್ರಾಕ್ಟರ್ ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿದ್ದ ಇನ್ನೂ ಹಲವು ಟ್ರ್ಯಾಕ್ಟರ್ ಗಳು ಪರಾರಿಯಾಗಿವೆ.
“ತುಂಬಿದ ಕೊಡ ತುಳಕೀತಲೇ ಪರಾಕ್” ಪ್ರಸಕ್ತ ವರ್ಷದ ಶ್ರೀಕ್ಷೇತ್ರ ಮೈಲಾರ ಕಾರ್ಣೀಕ ನುಡಿ..!
ಹೂವಿನಹಡಗಲಿ ತಾಲೂಕಿನ ಮೈಲಾರದ ಐತಿಹಾಸಿಕ ಮೈಲಾರಲಿಂಗ ಕಾರ್ಣಿಕದ ಭವಿಷ್ಯವಾಣಿ ಶುಕ್ರವಾರ ಸಂಜೆ ಹೊರಬಿದ್ದಿದೆ, “ತುಂಬಿದಕೊಡ ತುಳುಕಿತಲೇ ಪರಾಕ್” ಎಂಬ ಕಾರ್ಣಿಕವನ್ನು ಗೊರವಪ್ಪ ರಾಮಪ್ಪ ನುಡಿದಿದ್ದು, ಈ ವರ್ಷ ರಾಜ್ಯದಲ್ಲಿ ಮಳೆ – ಬೆಳೆ ಸಮೃದ್ಧವಾಗಿರಲಿದೆ ಎಂದು ಕಾರ್ಣಿಕದ ಭವಿಷ್ಯವಾಣಿಯನ್ನು ವಿಶ್ಲೇಷಣೆ ಮಾಡಲಾಗುತ್ತಿದೆ. ಮೈಲಾರದ ಮೈಲಾರ ಲಿಂಗೇಶ್ವರ ಜಾತ್ರೆ ಪ್ರಯುಕ್ತ ಡಂಕನಮರಡಿಯಲ್ಲಿ ಗೊರವಪ್ಪ ಕಾರ್ಣಿಕ ನುಡಿದಿದ್ದಾನೆ. 15ಅಡಿ ಎತ್ತರದ ಬಿಲ್ಲನೇರಿದ ಗೊರವಯ್ಯ ರಾಮಪ್ಪ, ಸದ್ದಲೇ ಎಂದು ಅಲ್ಲಿ ನೆರೆದಿದ್ದ ಜನರನ್ನು ಸುಮ್ಮನಾಗಿಸಿ ಕಾರ್ಣಿಕ ನುಡಿದಿದ್ದಾನೆ. ಮೈಲಾರ ಲಿಂಗೇಶ್ವರನ ಕಾರ್ಣಿಕ ಕೇಳಿ ಲಕ್ಷಾಂತರ ಭಕ್ತರು ಪುನೀತರಾಗಿದ್ದಾರೆ. ಈ ಭವಿಷ್ಯವಾಣಿ ಬಗ್ಗೆ ರಾಜ್ಯದಲ್ಲಿ ಈಗ ಭಾರೀ ಚರ್ಚೆಯಾಗುತ್ತಿದೆ. ಅತಿವೃಷ್ಟಯಿಂದ ಕಂಗೆಟ್ಟಿದ್ದ ನಾಡಿನ ಜನತೆಗೆ ಮೈಲಾರಲಿಂಗದ ಕಾರ್ಣಿಕ ಸಿಹಿ ಸುದ್ದಿ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿ, ಬೆಳೆ ಸಮೃದ್ಧಿಯಾಗಿ ಬರಲಿದೆ. ಇದರಿಂದ ನಾಡಿನ ರೈತರ ಮುಖದಲ್ಲಿ ನಗುವಿನ ಸಿಂಚನ ಮೂಡಿಸುವ ಭರವಸೆ ಸಿಕ್ಕಂತಾಗಿದೆ. ಈ ಹಿನ್ನೆಲೆ ಮೈಲಾರ ಲಿಂಗದ ಕಾರ್ಣಿಕ ರಾಜ್ಯದಲ್ಲಿ ಗಮನ ಸೆಳೆದಿದೆ....
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!
ಮುಂಡಗೋಡಿನ ಶಿವಾಜಿ ಸರ್ಕಲ್ ನಲ್ಲಿ ಕಂಡೂ ಕೇಳರಿಯದ ಭಯಾನಕ ಘಟನೆ ನಡೆದು ಹೋಗಿದೆ. ಟಿಪ್ಪರ್ ಹಿಂಬದಿಯ ಗಾಲಿಗೆ ಸಿಲುಕಿದ ಪಾದಾಚಾರಿ ವ್ಯಕ್ತಿಯೋರ್ವನ ದೇಹ ಛಿದ್ರ ಛಿದ್ರಗೊಂಡಿದೆ. ಘಟನೆಯ ಭಯಾನಕತೆಗೆ ಜನ ಬೆಚ್ಚಿ ಬಿದ್ದಿದ್ದಾರೆ. ಆದ್ರೆ, ಹೀಗೆ ದಾರುಣ ಸಾವು ಕಂಡಿರೋ ವ್ಯಕ್ತಿ ಯಾರು..? ಎಲ್ಲಿಯವನು ಅನ್ನೋದು ಇನ್ನು ತಿಳಿದು ಬಂದಿಲ್ಲ.. ಅಂದಹಾಗೆ, ಸಂಜೆ ಶಿವಾಜಿ ಸರ್ಕಲ್ ನಲ್ಲಿ ಘಟನೆ ನಡೆದಿದೆ. ಟಿಪ್ಪರ್ ಹಿಂಬದಿಯ ಚಕ್ರಕ್ಕೆ ಸಿಲುಕಿರೋ ಪಾದಾಚಾರಿ ಸ್ಥಳದಲ್ಲೇ ಚಿದ್ರ ಚಿದ್ರಗೊಂಡಿದ್ದಾನೆ. ದೇಹದ ಬಹುತೇಕ ಭಾಗ ನುಜ್ಜು ಗುಜ್ಜಾಗಿದೆ. ಸ್ಥಳಕ್ಕೆ ಮುಂಡಗೋಡ ಪೊಲೀಸರು ಭೇಟಿ ನೀಡಿದ್ದಾರೆ.
ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!
ವಿಜಯಪುರ: ಭೀಮಾತೀರದ ನಟೋರಿಯಸ್ ಹಂತಕ ಭಾಗಪ್ಪ ಹರಿಜನ ಕೊಲೆ ಪ್ರಕರಣದ ಆರೋಪಿತರು ಅಂದರ್ ಆಗಿದ್ದಾರೆ. ಪೆಬ್ರುವರಿ 11ರಂದು ಗಾಂಧಿಚೌಕ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಾ ನಗರದಲ್ಲಿ ರಾತ್ರಿ 09.30 ಗಂಟೆಯ ಸುಮಾರಿಗೆ ಪಿಂಟು ಹಾಗೂ ಇನ್ನೂ 4-5 ಜನ ದುಷ್ಕರ್ಮಿಗಳು ಸೇರಿಕೊಂಡು ಭಾಗಪ್ಪ ಹುಚ್ಚಪ್ಪ ಹರಿಜನ ಈತನಿಗೆ ಪಿಸ್ತೂಲ್ನಿಂದ ಗುಂಡು ಹಾರಿಸಿ, ಕೊಡಲಿ ಹಾಗೂ ಮಚ್ಚಿನಿಂದ ಕುತ್ತಿಗೆಗೆ, ಎದೆಗೆ ಮತ್ತು ಕೈಗಳಿಗೆ ಹಲ್ಲೆ ಮಾಡಿ ಕೊಲೆ ಮಾಡಿರುತ್ತಾರೆ. ಭಾಗಪ್ಪ ಹರಿಜನ ಈತನು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ. ಈ ಬಗ್ಗೆ ಮೃತನ ಮಗಳಾದ ಗಂಗೂಬಾಯಿ ಭಾಗಪ್ಪ ಹರಿಜನ, ಸಾ: ಬಬಲಾದಿ ತಾ: ಇಂಡಿ ರವರು ನೀಡಿದ ದೂರಿನ ಮೇರೆಗೆ ಗಾಂಧಿಚೌಕ ಪೊಲೀಸ್ ಠಾಣೆ ಗುನ್ನೆ ನಂ: 32/2025 ಕಲಂ: 189(2), 191(2), 191(3), 352, 103, 190 ಬಿಎನ್ಎಸ್ ಆ್ಯಕ್ಟ್-2023 ಮತ್ತು 25(ಎ) ಭಾರತೀಯ ಆಯುಧ ಕಾಯ್ದೆ ಅಡಿ ಪ್ರಕರಣ ದಾಖಲಾಗಿರುತ್ತದೆ. ಮೃತ ಭಾಗಪ್ಪ ಹುಚ್ಚಪ್ಪ ಹರಿಜನ ಈತನ ಮೇಲೆ 10 ಕ್ಕೂ ಹೆಚ್ಚು...
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಕಾನೂನು ಜಾರಿ, ಬಲವಂತದ ವಸೂಲಾತಿ, ಹಿಂಸೆ ನೀಡಿದ್ರೆ ಜಾಮೀನು ರಹಿತ ಕೇಸ್..!
ಬೆಂಗಳೂರು: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025ನ್ನು ಫೆಬ್ರವರಿ 12 ರಿಂದ ಜಾರಿಗೊಳಿಸಿದ್ದು, ಆದೇಶದ ಮುಖ್ಯಾಂಶಗಳು ಹೀಗಿವೆ. ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯಬಾರದು. ಗ್ರಾಹಕರಿಗೆ ವಿಧಿಸುವ ಬಡ್ಡಿದರಗಳ ಬಗ್ಗೆ ಪಾರದರ್ಶಕವಾಗಿ ಲಿಖಿತ ರೂಪದಲ್ಲಿ ತಿಳಿಸಬೇಕು. ಈ ಆದೇಶವು ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ನೊಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ. ನೊಂದಾಯಿತ ಸಂಸ್ಥೆಗಳಿಂದ ಅಂದಾಜು 60 ಸಾವಿರ ಕೋಟಿ ರೂ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದಾರೆ. ನೊಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ನಿಖರವಾಗಿ ಲಭ್ಯವಿಲ್ಲವಾದರೂ, ಅಂದಾಜು 40 ಸಾವಿರ...
ಉತ್ತರ ಕನ್ನಡದ ಹೆಮ್ಮೆ, ಹಾಡುಹಕ್ಕಿ, ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ..!
ಅಂಕೋಲಾ: ಅನಾರೋಗ್ಯಕ್ಕೆ ಒಳಗಾಗಿದ್ದ ಹಾಡುಹಕ್ಕಿ ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಅವರು ಇಂದು ನಿಧನರಾಗಿದ್ದಾರೆ. ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ತಮ್ಮ ಮನೆಯಲ್ಲಿ ನಿಧನ ಹೊಂದಿದ ಹಾಡುಹಕ್ಕಿ ಸುಕ್ರಿ ಬೊಮ್ಮ ಗೌಡ ಅವರಿಗೆ 88 ವರ್ಷ ವಯಸ್ಸಾಗಿತ್ತು. ಇವರಿಗೆ ಪದ್ಮಶ್ರೀ, ನಾಡೋಜ, ರಾಜ್ಯೋತ್ಸವ, ಜಾನಪದ ಶ್ರೀ ಪ್ರಶಸ್ತಿ ಪಡೆದಿದ್ದು, 2017 ರಲ್ಲಿ ಪದ್ಮಶ್ರೀ ಪ್ರಶಸ್ತಿ ಲಭಿಸಿತ್ತು ಜಾನಪದ ಹಾಡುಗಳ ಮೂಲಕ ಸಮುದಾಯದ ಮಹಿಳೆಯರ ಪರಿಚಯಿಸುವ ಕಾರ್ಯ ನಿರ್ವಹಿಸಿದ್ದರು. ಅನೇಕ ಹೋರಾಟಗಳಲ್ಲಿ ಸಹ ಇವರು ಮುಂಚೂಣಿ ಯಲ್ಲಿ ಇರುತ್ತಿದ್ದರು.. ಜಾನಪದ ಕೋಗಿಲೆಯ ನಿಧನಕ್ಕೆ ಜಿಲ್ಲೆಯ ಗಣ್ಯರು ಕಂಬನಿ ಮಿಡಿದಿದ್ದಾರೆ.
ಭೀಮಾತೀರದ ಡೆಡ್ಲಿ ಹಂತಕ ಬಾಗಪ್ಪ ಹರಿಜನ ಭೀಕರ ಹತ್ಯೆ| ಮನೆಯ ಬಳಿಯೇ ಕೊಚ್ಚಿ ಕೊಚ್ಚಿ ಕೊಂದ್ರು ಹಂತಕರು..!!
ವಿಜಯಪುರ: ಭೀಮಾತೀರದ ಡೆಡ್ಲಿ ಹಂತಕ ಬಾಗಪ್ಪ ಹರಿಜನನ ಭೀಕರ ಹತ್ಯೆಯಾಗಿದೆ.ನಿನ್ನೆ ರಾತ್ರಿ 9.25ರ ಸುಮಾರಿಗೆ ಬಾಗಪ್ಪ ಹರಿಜನ್ ಹತ್ಯೆ ನಡೆದಿದ್ದು, ಮನೆಯ ಎದುರೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ನಿನ್ನೆ ರಾತ್ರಿ ಬಾಗಪ್ಪ ಊಟ ಮಾಡಿ ವಾಕಿಂಗ್ಗೆ ಹೊರ ಬಿದ್ದ ವೇಳೆ ಅಟ್ಯಾಕ್ ಮಾಡಲಾಗಿದೆ. ಕರೆಂಟ್ ಕಟ್ ಮಾಡಿ, ಟಂಟಂ ನಲ್ಲಿ ಬಂದು ಅಟ್ಯಾಕ್ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸ್ಥಳದಲ್ಲಿ ಮೂರು ಸುತ್ತು ಗುಂಡಿನ ಸದ್ದು ಕೇಳಿ ಬಂದಿದೆ. ನಂತ್ರ ಕೊಡಲಿಯಿಂದ ಕೊಚ್ಚಿ ಬಾಗಪ್ಪನ ಹತ್ಯೆ ಮಾಡಲಾಗಿದ್ದು, ಎಡಗೈ ಕಟ್ ಮಾಡಲಾಗಿದೆ, ಗುಪ್ತಾಂಗಕ್ಕೂ ಹಂತಕರಿಂದ ಕತ್ತರಿ ಹಾಕಲಾಗಿದೆ. ಹೀಗಾಗಿ, ಅತ್ಯಂತ ಭೀಬತ್ಸವಾಗಿ ಮರ್ಡರ್ ಆಗಿದ್ದಾನೆ ಬಾಗಪ್ಪ. ಮೂರು ಆಯಾಮ..? ಅಂದಹಾಗೆ, ಕಳೆದ ಕೆಲ ತಿಂಗಳ ಹಿಂದೆ ನಡೆದಿದ್ದ ವಕೀಲ ರವಿ ಅಗರಖೇಡ್ ಹತ್ಯೆಗೆ ಸಂಬಂಧಿಸಿದಂತೆ, ರಿವೆಂಜ್ ತಿರಿಸಿಕೊಂಡ್ರಾ ಹಂತಕರು..? ಅನ್ನೋ ಅನುಮಾನ ಶುರುವಾಗಿದೆ. ಇನ್ನೂ ಹಣದ ವ್ಯವಹಾರಕ್ಕೆ ಬಾಗಪ್ಪನ ಮುಗಿಸಲು ಎಂಟ್ರಿ ಕೊಟ್ಟಿತ್ತಾ ಹೊಸ ಗ್ಯಾಂಗ್…? ಅನ್ನೋ ಡೌಟೂ...