ಮುಂಡಗೋಡಿನಲ್ಲಿ ಅಕ್ರಮವಾಗಿ ಗೋಮಾತೆಯ ವಧೆ ಮಾಡಲಾಗಿದೆ. ಹಾಗಂತ ಮುಂಡಗೋಡಿನ ಹಿಂದು ಕಾರ್ಯಕರ್ತರು ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತರು ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ ಮಾಡಿದ್ದಾರೆ. ಮುಂಡಗೋಡ ಹಳೂರಿನಲ್ಲಿರೋ ದರ್ಗಾ ಹತ್ತಿರ ಘಟನೆ ನಡೆದಿದ್ದು, ಘಟನೆಯಲ್ಲಿ ಎಷ್ಟು ಆಕಳನ್ನು ವಧೆ ಮಾಡಲಾಗಿದೆ..? ವಶಪಡಿಸಿಕೊಂಡ ವಸ್ತುಗಳು ಏನೇನು..? ಸಿಕ್ಕ ಆರೋಪಿಗಳು ಎಷ್ಟು..? ಎಲ್ಲ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಿದೆ.
Top Stories
ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!
ಯುದ್ಧದ ಸಂದರ್ಭದಲ್ಲಿ ನಾಗರೀಕರ ರಕ್ಷಣೆಗೆ ಸ್ವಯಂ ಸೇವಕರಾಗಲು ನೋಂದಣಿಗೆ ಅರ್ಜಿ ಆಹ್ವಾನ..!
ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಆರೋಪ, ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತ್ತು..!
ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!
ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!
“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!
ಉತ್ತರ ಕನ್ನಡದಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಸ್ಥಳ ಪರಿಶೀಲನೆ ನಡೆಸಿದ ಎಸ್ಪಿ..!
ಕೌಶಲ್ಯಾಧಾರಿತ ಉಚಿತ ತರಬೇತಿಗೆ ಅರ್ಜಿ ಆಹ್ವಾನ..!
ಗೃಹ ಬಳಕೆಯ ಅನಿಲ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗದಂತೆ ತಡೆಯಿರಿ: ಡಿಸಿ ಲಕ್ಷ್ಮೀ ಪ್ರಿಯ…!
ಉಸ್ತುವಾರಿ ಸಚಿವ ಮಂಕಾಳು ವೈದ್ಯರಿಂದ ಮುರುಡೇಶ್ವರ ಗೃಹಕಚೇರಿಯಲ್ಲಿ ಜನತಾ ದರ್ಶನ..!
ಬಿಜೆಪಿ ಮುಖಂಡ, ಶಾಸಕ, ಜನಾರ್ದನರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷ ಪ್ರಕಟ..! ಓಬಳಾಪುರಂ ಮೈನಿಂಗ್ ಕೇಸಲ್ಲಿ ರೆಡ್ಡಿ ಅಪರಾಧಿ..!
ಮೇ. 7 ಮಾಕ್ ಡ್ರಿಲ್, ಅಷ್ಟಕ್ಕೂ ಈ ಮಾಕ್ ಡ್ರಿಲ್ ಅಂದರೇನು..? ಇಲ್ಲಿದೆ ಸಂಪೂರ್ಣ ಮಾಹಿತಿ..!
ಕಾರ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿ, ಕಾರಲ್ಲಿದ್ದ ,ಐವರು ಸ್ಥಳದಲ್ಲೇ ಸಾವು..!
ಪರಿಸರ ರಕ್ಷಣೆಗೆ ವಿದ್ಯಾರ್ಥಿಗಳೇ ಯೋಧರು : ಉಪ ರಾಷ್ಟ್ರಪತಿ ಜಗದೀಪ್ ಧನಕರ್
ಶಿರಸಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ತಾಯಿ ಹೆಸ್ರಲ್ಲಿ ಗಿಡ ನೆಟ್ಟರು..!
ಅತ್ತಿವೇರಿ ಡ್ಯಾಂ ನಲ್ಲಿ ಆಕಸ್ಮಿಕವಾಗಿ ಬಿದ್ದು ಸಾವು ಕಂಡ ಹುನಗುಂದದ ಮಾನಸಿಕ ಅಸ್ವಸ್ಥ..!
ಮುಂಡಗೋಡ ಠಾಣೆಗೆ ವಿನೋದ್ ರೆಡ್ಡಿ ನೂತನ ಕ್ರೈಂ PSI, ನಿರೀಕ್ಷೆಗಳು ಒಂದಾ, ಎರಡಾ..?
ಕಾರವಾರ ಅಂಚೆ ವಿಭಾಗಕ್ಕೆ ಕರ್ನಾಟಕ ರಾಜ್ಯ ವೃತ್ತ ಮಟ್ಟದ ಪ್ರಶಸ್ತಿ
ಉತ್ತರ ಕನ್ನಡದಲ್ಲಿ ಮೇ.5 ರಿಂದ ಪ.ಜಾತಿ ಸಮುದಾಯದ ಸಮೀಕ್ಷೆ : ಜಿಲ್ಲಾಧಿಕಾರಿ
ಕಾರವಾರ ನಗರಸಭೆ ಸದಸ್ಯನ ಭೀಕರ ಹತ್ಯೆ ಕೇಸ್, ಇಬ್ಬರು PSI ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್..? ಕಾರಣ..?
ಕಾರವಾರ: ನಗರಸಭೆ ಮಾಜಿ ಸದಸ್ಯ ಸತೀಶ್ ಕೋಳಂಬಕರ್ ಹತ್ಯೆಯ ಹಿಂದೆ ಅಲ್ಲಿನ ಪೊಲೀಸರ ನಿರ್ಲಕ್ಷ ಹಾಗೂ ಬೇಜವಾಬ್ದಾರಿಯೂ ಕಾರಣವಾಯ್ತಾ..? ಅದೊಂದು ಹೊಟೆಲ್ ನಲ್ಲಿ ನಡೆದಿದ್ದ ಗಲಾಟೆಯ ದೂರು ದಾಖಲಿಸಿಕೊಂಡು ಸರಿಯಾದ ಕ್ರಮ ಕೈಗೊಂಡಿದ್ದರೆ ಸತೀಶ್ ಹೆಣ ಬೀಳ್ತಾನೇ ಇರಲಿಲ್ಲವಾ..? ಹೀಗಾಗಿನೇ ಇವಾಗ ಆ ನಾಲ್ವರು ಬೇಜವಾಬ್ದಾರಿ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆಯಾ..? ಸದ್ಯದ ಬಾತ್ಮಿಗಳನ್ನು ಗಮನಿಸಿದ್ರೆ ಹೌದು ಅನ್ನುತ್ತಿವೆ ಪೊಲೀಸ್ ಮೂಲಗಳು. ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ ಕೋಳಂಬಕರ್ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ, ನಗರ ಠಾಣೆಯ ನಾಲ್ವರನ್ನು ಸಸ್ಪೆಂಡ್ ಮಾಡಲಾಗಿದೆಯಂತೆ. ಹತ್ಯೆಗೂ ಮೊದಲು ಹೊಟೇಲ್ ಒಂದರಲ್ಲಿ ನಡೆದ ಗಲಾಟೆಗೆ ಸಂಬಂಧಿಸಿ ಕಾರವಾರ ನಗರಠಾಣೆಯ ಪಿಎಸ್‌ಐ ಸೇರಿ ನಾಲ್ವರನ್ನ ಅಮಾನತ್ ಮಾಡಲಾಗಿದೆ ಎನ್ನಲಾಗಿದೆ. ಇದಿಷ್ಟು ಘಟನೆ..! ಸತೀಶ್ ಕೋಳಂಬಕರ್ ಹತ್ಯೆಗೂ ಮೊದಲು ನಗರದ ಹೊಟೇಲ್ ಒಂದರಲ್ಲಿ ಹತ್ಯೆ ಆರೋಪಿ ಹಾಗೂ ಆತನ ಸ್ನೇಹಿತರು ಸತೀಶ್ ಕೋಳಂಬಕರ್ ನಡುವೆ ಮಾರಾಮಾರಿ ನಡೆದಿತ್ತು ಎನ್ನಲಾಗಿದೆ. ಅಂದು ನಡೆದ ಗಲಾಟೆಯ ಬಗ್ಗೆ ನಗರ ಠಾಣೆಯ ಪೊಲೀಸರು...
ಭಾರೀ ಮಳೆ ಗಾಳಿಗೆ ಇಂದೂರು ಕೊಪ್ಪ ಗ್ರಾಮದಲ್ಲಿ, ಮನೆಯ ಮೇಲ್ಚಾವಣಿ ಹಾನಿ, ಗೋವಿನಜೋಳ ರಾಶಿ ನೀರಲ್ಲಿ
ಮುಂಡಗೋಡ ತಾಲೂಕಿನಲ್ಲಿ ಸಂಜೆ ಸುರಿದ ಭಾರಿ ಮಳೆ ಗಾಳಿಗೆ ಇಂದೂರು ಕೊಪ್ಪ ಗ್ರಾಮದಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಹಲವು ಮನೆಗಳ ಮೇಲ್ಚಾವಣಿಗಳು ಹಾರಿಹೋಗಿದ್ದು, ಇನ್ನಿಲ್ಲದ ನಷ್ಟ ಸಂಭವಿಸಿದೆ. ರೈತರ ಗೋಳು..! ಇನ್ನು ಬೇಸಿಗೆ ಹಂಗಾಮಿನಲ್ಲಿ ಬೆಳೆದ ಗೋವಿನಜೋಳ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಕೊಪ್ಪ ಗ್ರಾಮದಲ್ಲಿ ಒಣಗಿಸಲು ಹಾಕಿದ್ದ ಗೋವಿನಜೋಳ ಮಳೆ ನೀರಿನ ಪಾಲಾಗಿದ್ದು ಹಾನಿಯುಂಟಾಗಿದೆ. ಗ್ರಾಮದ ಕಾಂಕ್ರೀಟು ರಸ್ತೆಯ ಮೇಲೆ ಒಣಗಲು ಹಾಕಿದ್ದ ಗೋವಿನಜೋಳದ ರಾಶಿಯಲ್ಲಿ ಮಳೆ ನೀರು ಹೊಕ್ಕು ನೆನೆದು ಹೋಗಿದೆ. ಹೀಗಾಗಿ, ರೈತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಪಾಳಾದ ರಾಮಾಪುರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಪಾಳಾ ಸಮೀಪದ ರಾಮಾಪುರ ಕ್ರಾಸ್ ಬಳಿ ಗಾಂಜಾ ಮಾರಾಟದಲ್ಲಿ ತೊಡಗಿದ್ದವನ ಹೆಡೆಮುರಿ ಕಟ್ಟಲಾಗಿದೆ. ಬರೋಬ್ಬರಿ 50 ಸಾವಿರ ಮೌಲ್ಯದ್ದು..!ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಮುಂಡಗೋಡ ಯಲ್ಲಾಪುರ ರಸ್ತೆಯ ಮಹಮ್ಮದಅನಿಸ ಎಜಾಜ್ ಅಹ್ಮದ್ ಬೇಗ್ (20) ಎಂಬುವವ.. ಈತ ತನ್ನ ಸ್ಕೂಟಿಯಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ, ಖಚಿತ ಮಾಹಿತಿ ಆಧಾರದಲ್ಲಿ ದಾಳಿ ಮಾಡಿರೊ ಪೊಲೀಸರು 902 ಗ್ರಾಂ ಗಾಂಜಾ ಹಾಗೂ 200 ರೂ ನಗದು ವಶ ಪಡಿಸಿಕೊಂಡಿದ್ದಾರೆ. ಅಂದಹಾಗೆ ಹಾಗೆ ವಶಪಡಿಸಿಕೊಂಡಿರೋ ಗಾಂಜಾದ ಈಗಿನ ಕಿಮ್ಮತ್ತು ಬರೋಬ್ಬರಿ 50 ಸಾವಿರ ರೂ. ಸಿಪಿಐ ರಂಗನಾಥ್ ನೀಲಮ್ಮನವರ್ ನೇತೃತ್ವದಲ್ಲಿ, ಪಿಎಸ್ಐ ಪರಶುರಾಮ್, ಕ್ರೈಂ ಪಿಎಸ್ ಐ ಹನ್ಮಂತಪ್ಪ ವಡಗುಂಟಿ, ಸಿಬ್ಬಂದಿಗಳಾದ ಗಣಪತಿ ಹುನ್ನಳ್ಳಿ, ಕೋಟೇಶ ನಾಗರವಳ್ಳಿ, ಅಣ್ಣಪ್ಪ ಬುಡಿಗೇರ, ಮಹಾಂತೇಶ ಮುಧೋಳ ಹಾಗೂ ಬಸವರಾಜ ಒಡೆಯರ್...
ಚಿಗಳ್ಳಿ ಹಿರಿಕೆರೆಯಲ್ಲಿ ಮೀನುಗಳ ದಾರುಣ ಸಾವು, ಇಡೀ ಕೆರೆಗೇ ವಿಷ ಹಾಕಿದ್ರಾ ದುರುಳರು..?
ಚಿಗಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದುಷ್ಟರು ನೀಚ ಕೃತ್ಯ ಮಾಡಿದ್ದಾರೆ. ಮೀನು ಸಾಕಾಣಿಕೆ ಮಾಡಿದ್ದ ಕೆರೆಗೆ ವಿಷ ಬೆರೆಸಿ ಮೀನುಗಳ ಸಾವಿಗೆ ಕಾರಣರಾಗಿದ್ದಾರೆ. ನೂರಾರು ಮೀನುಗಳು ಹಂತಹಂತವಾಗಿ ಸಾವನ್ನಪ್ಪುತ್ತಿವೆ ಅನ್ನೊ ಮಾಹಿತಿ ಲಭ್ಯವಾಗಿದೆ. ಚಿಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಕೇರಿಯಲ್ಲಿ ಸರ್ವೇ ನಂಬರ್ 49 ರಲ್ಲಿ ಘಟನೆ ನಡೆದಿದ್ದು, ಮೌಲಾಲಿ ಮಕಾಂದಾರ ಎನ್ನುವವರು ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಲು ಟೆಂಡರ್ ಪಡೆದಿದ್ದರು. ಆದ್ರೆ, ಈಗಾಗಲೇ ಮೀನುಗಳು ಒಂದು ಹಂತಕ್ಕೆ ಬೆಳೆದಿದ್ದಾಗಲೇ ದುರುಳರು ಕೆರೆಗೆ ವಿಷ ಹಾಕಿರೋ ಅನುಮಾನ ವ್ಯಕ್ತವಾಗಿದೆ. ಹೀಗಾಗಿ, ಮೀನುಗಳು ಸಾವನ್ನಪ್ಪಿವೆ. ಎನ್ನಲಾಗಿದ್ದು ಆತಂಕಕ್ಕೆ ಕಾರಣವಾಗಿದೆ.
ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ, ಮುಂಡಗೋಡ ತಾಲೂಕಾ ತ್ರೈಮಾಸಿಕ ಕೆಡಿಪಿ ಸಭೆ..!
ಮುಂಡಗೋಡ: ಶಾಸಕ ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ ಮುಂಡಗೋಡ ತಾಲೂಕಾ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಾಳೆ ಮಂಗಳವಾರ ದಿ. 22 ರಂದು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ ಅಂತಾ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ವೈ. ದಾಸನಕೊಪ್ಪ ಮಾಹಿತಿ ನೀಡಿದ್ದಾರೆ. ಮಂಗಳವಾರ ಬೆಳಿಗ್ಗೆ ಮುಂಡಗೋಡಿನ ತಾಲೂಕಾ ಪಂಚಾಯತಿ ಸಭಾಭವನದಲ್ಲಿ ಸಭೆ ನಡೆಯಲಿದ್ದು, ಶಾಸಕ ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಅಂತಾ ಅವ್ರು ಮಾಹಿತಿ ನೀಡಿದ್ದಾರೆ.
ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು, ಸೂಕ್ತ ಸಮಯದಲ್ಲಿ ಚಿಕಿತ್ಸೆಗೆ ಸಾಗಿಸಿದ್ದಲ್ಲದೇ, ಅಕ್ಣರಶಃ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದ ಆ ವ್ಯಕ್ತಿಯ ಬೆಲೆಬಾಳುವ ವಸ್ತುಗಳನ್ನು ಆರು ತಿಂಗಳವರೆಗೂ ಜೋಪಾನವಾಗಿ ಕಾಯ್ದಿಟ್ಟು, ನಂತರ ಮರುಳಿಸಲಾಗಿದೆ. ಇಂತಹದ್ದೊಂದು ಕಾರ್ಯವನ್ನು ಅಥಣಿಯ ಅಂಬ್ಯುಲೆನ್ಸ್ ಸಿಬ್ಬಂದಿಗಳಾದ EMT ಶ್ರೀಮತಿ ನಿರ್ಮಲಾ ಬನಸೋಡೆ ಹಾಗೂ ಪೈಲೆಟ್ ಯಲ್ಲಾಲಿಂಗ ಅವರು ಮರಳಿಸಿ ಮಾನವೀಯ ಹಾಗೂ ಪ್ರಮಾಣಿಕ ಕಾರ್ಯ ಮಾಡಿದ್ದಾರೆ. ಅಂದಹಾಗೆ 2024 ರ ಅಕ್ಟೋಬರ್ 19 ರಂದು, ಕಲಘಟಗ ಮೂಲದ ಅಕ್ಷಯ ಸುನೀಲ ಲಗಳಿ (32) ಈತನು ವೈಯಕ್ತಿಕ ಕೆಲಸದ ನಿಮಿತ್ತ ಬೈಕ್ ಮೇಲೆ ಅಥಣಣಿಯಿಂದ ಐಗಳಿಯ ಕಡೆಗೆ ಹೋಗುತ್ತಿರುವಾಗ, ಬಡಚಿಯ ಗ್ರಾಮದಲ್ಲಿ ಬಸ್ಸಿಗೆ ಈತನ ಬೈಕ್ ಗೆ ಅಪಘಾತ ಸಂಭವಿಸಿತ್ತು. ಹೀಗಾಗಿ, ಆ ವೇಳೆ ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು, ಸ್ಥಳೀಯರು 108 ಅಂಬ್ಯುಲೆನ್ಸ್ ಗೆ ಕರೆಮಾಡಿದ್ದರು. ಆ ವೇಳೆ ಅಂಬ್ಯುಲೆನ್ಸ್ ಸಿಬ್ಬಂದಿಗಳಾದ EMT ಶ್ರೀಮತಿ ನೀರ್ಮಲಾ ಬನಸೋಡೆ ಹಾಗೂ ಪೈಲೆಟ್ ಯಲ್ಲಾಲಿಂಗ ಸ್ಥಳಕ್ಕೆ ಬಂದು...
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಂಗಳೂರು : ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರನ್ನ ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರು ನಗರದ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹತ್ಯೆ ನಡೆದಿದೆ. ಈ ಹತ್ಯೆಯನ್ನು ಅವರ ಪತ್ನಿಯೇ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಅವರ ಶವವನ್ನು ಮನೆಯಲ್ಲಿ ಪತ್ತೆ ಹಚ್ಚಲಾಗಿದೆ ಮತ್ತು ಮನೆ ತುಂಬಾ ರಕ್ತಸಿಕ್ತವಾದ ಸ್ಥಿತಿಯಲ್ಲಿ ಕಂಡುಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಈಗಾಗಲೆ ಅವರ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 1981ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಓಂ ಪ್ರಕಾಶ್ (68) ಬೆಂಗಳೂರು ನಗರದ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸಿಸುತ್ತಿದ್ದರು. 2015ರಲ್ಲಿ ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿ ಸೇವೆ ಸಲ್ಲಿಸಿದ್ದ ಓಂ ಪ್ರಕಾಶ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಸೆಂಟ್ ಜಾನ್ ಆಸ್ಪತ್ರೆಗೆ ಕಳಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಕಾರವಾರ : ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ್ ಕೊಳಂಕರನ್ನು ಭೀಕರ ಹತ್ಯೆ ಮಾಡಲಾಗಿದೆ. ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ, ಬಿಎಸ್ ಎನ್ ಎಲ್ ಕಚೇರಿ ಸಮೀಪ ಅಪರಿಚಿತ ವ್ಯಕ್ತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಹೀಗಾಗಿ ಇಡೀ ಕಾರವಾರ ನಗರ ಬೆಚ್ಚಿ ಬಿದ್ದಿದೆ. ರವಿವಾರ ಬೆಳಿಗ್ಗೆ ಸ್ವಲ್ಪ ಹೊತ್ತಿನ ಮುಂಚೆ ಈ ಕೊಲೆ ನಡೆದಿದ್ದು, ಆರೋಪಿಗಳ ಸೆರೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬೆಳ್ಳಂಬೆಳಿಗ್ಗೆ ನಡೆದ ಈ ಕೊಲೆಯಿಂದ ಕಾರವಾರಿಗರು ಬೆಚ್ಚಿ ಬಿದ್ದಿದ್ದಾರೆ. ಸ್ಕೂಟಿಯಲ್ಲಿ ಬಂದ ವ್ಯಕ್ತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆಂದು ಜನ ಮಾತಾಡಿ ಕೊಳ್ಳುತ್ತಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸತೀಶ್ ಕೊಳಂಕರ್ ನನ್ನು ಪೊಲೀಸರು, ಕಾರವಾರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸಾಗಿಸಿದ್ದಾರೆ.
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
ಹಾವೇರಿ ತಾಲೂಕಾ ಶಿಕ್ಷಣಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬಿಇಓ ಮೌನೇಶ ಬಡಿಗೇರ ಮನೆ ಮೇಲೆ ದಾಳಿ ನಡೆದಿದ್ದು, ವೇತನ ಬಿಡುಗಡೆ ಮಾಡಲು 50 ಸಾವಿರಕ್ಕೆ ಡಿಮ್ಯಾಂಡ್ ಮಾಡಿ, ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇನ್ನು ಶಿಕ್ಷಕ ಪ್ರಕಾಶ್ ಬಾರ್ಕಿ ಎಂಬುವವರಿಗೆ ವೇತನ ಬಿಡುಗಡೆ ಮಾಡಲು, 50 ಸಾವಿರ ರೂ. ಗೆ ಬೇಡಿಕೆ ಇಟ್ಟಿದ್ದರು, ಅದ್ರಲ್ಲಿ ಇವತ್ತು 15 ಸಾವಿರ ರೂ. ಲಂಚ ತೆಗೆದುಕೊಳ್ಳುವಾಗ ಟ್ರ್ಯಾಪ್ ಮಾಡಲಾಗಿದೆ. ದಾಳಿ ವೇಳೆ ಬಿಇಓ ಮೌನೇಶ್ ಬಡಿಗೇರ ಹಾಗೂ ಅತನ ಜೀಪ್ ಡ್ರೈವರ್ ವಶಕ್ಕೆ ಪಡೆಯಲಾಗಿದ್ದು ಮತ್ತೋರ್ವ ಲಂಚಬಾಕ ಶಿಕ್ಷಕ ಪರಾರಿಯಾಗಿದ್ದಾನೆ.