ಪಿಒಕೆ ಹಿಂತಿರುಗಿಸಿ, ಉಗ್ರರನ್ನು ಹಸ್ತಾಂತರಿಸಿ ; ಇದು ಬಿಟ್ಟು ಬೇರೆ ಮಾತುಕತೆ ಇಲ್ಲ; ಡಿಜಿಎಂಒ ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ

ಪಿಒಕೆ ಹಿಂತಿರುಗಿಸಿ, ಉಗ್ರರನ್ನು ಹಸ್ತಾಂತರಿಸಿ ; ಇದು ಬಿಟ್ಟು ಬೇರೆ ಮಾತುಕತೆ ಇಲ್ಲ; ಡಿಜಿಎಂಒ ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಸೇನಾ ಸಂಘರ್ಷದ ನಡುವೆ, ಭಾರತವು ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದೆ. ಪಾಕಿಸ್ತಾನದೊಂದಿಗೆ ಮಾತುಕತೆ ನಡೆದರೆ ಅದು ಪಾಕ್‌ ಆಕ್ರಮಿತ ಕಾಶ್ಮೀರ (PoK) ಬಿಟ್ಟು ತೊಲಗುವುದು ಹಾಗೂ ಉಗ್ರರ ಹಸ್ತಾಂತರಕಷ್ಟೇ ಸೀಮಿತ ಎಂದು ತಿಳಿಸಿದೆ. ಇದನ್ನು ಹೊರತುಪಡಿಸಿ ಎರಡು ದೇಶಗಳ ಮಧ್ಯೆ ಯಾವುದೇ ರೀತಿಯ ಮಾತುಕತೆ ಇಲ್ಲ ಎಂದು ಭಾರತ ತಿಳಿಸಿದೆ. “ಕಾಶ್ಮೀರದ ಬಗ್ಗೆ ನಮ್ಮ ನಿಲುವು ಸ್ಪಷ್ಟವಾಗಿದೆ. ಒಂದೇ ಒಂದು ವಿಷಯ ಉಳಿದಿದೆ. ಅದು ಪಾಕ್ ಆಕ್ರಮಿತ ಕಾಶ್ಮೀರ (PoK) ಹಿಂತಿರುಗಿಸುವಿಕೆ. ಇದನ್ನು ಹೊರತುಪಡಿಸಿ ಮಾತನಾಡಲು ನಮಗೆ ಏನೂ ಇಲ್ಲ. ಪಾಕಿಸ್ತಾನದವರು ಭಯೋತ್ಪಾದಕರನ್ನು ನಮಗೆ ಹಸ್ತಾಂತರಿಸುವ ಬಗ್ಗೆ ಮಾತನಾಡಿದರೆ ನಾವು ಮಾತನಾಡಬಹುದು. ನಮಗೆಯಾರ ಮಧ್ಯಸ್ಥಿಕೆಯೂ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ. ನಾವು ಹೊಸ ಸಾಮಾನ್ಯ ಸ್ಥಿತಿಯಲ್ಲಿದ್ದೇವೆ. ಅದಕ್ಕಾಗಿಯೇ ನಾವು ‘ಅರ್ಥಮಾಡಿಕೊಳ್ಳುವುದು’ ಮತ್ತು ಗುಂಡಿನ ದಾಳಿಯನ್ನು ನಿಲ್ಲಿಸುವಂತಹ ಪದಗಳನ್ನು ಬಳಸುತ್ತಿದ್ದೇವೆ. ಜಗತ್ತು ಇದನ್ನು ಒಪ್ಪಿಕೊಳ್ಳಬೇಕು. ಪಾಕಿಸ್ತಾನ...

ಪಾಪಿಗಳ ರಕ್ತ ಹರಿಸದೇ ಕದನವಿರಾಮ ಆಗಿದ್ದನ್ನು ನಾವು ಒಪ್ಪುವುದಿಲ್ಲ: ಪ್ರಮೋದ್ ಮುತಾಲಿಕ್..!

ಪಾಪಿಗಳ ರಕ್ತ ಹರಿಸದೇ ಕದನವಿರಾಮ ಆಗಿದ್ದನ್ನು ನಾವು ಒಪ್ಪುವುದಿಲ್ಲ: ಪ್ರಮೋದ್ ಮುತಾಲಿಕ್..!

ಹುಬ್ಬಳ್ಳಿ: ಪಾಪಿ ಪಾಕಿಸ್ತಾನದ ರಕ್ತ ಹರಿಸದೇ ಕದನ ವಿರಾಮ ಆಗಿರುವ ನಿರ್ಧಾರವನ್ನು ನಾವು ಒಪ್ಪುವುದಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಸಾಕಷ್ಟು ವಿಶ್ವಾಸ ಇಟ್ಟಿದ್ದೇವು. ಆದರೆ ಈಗ ನಮ್ಮ ಭರವಸೆ ಹುಸಿಯಾಗಿದೆ. ಯಾವುದೇ ಕಾರಣಕ್ಕೂ ಕದನವಿರಾಮ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.  ಯುದ್ಧ ವಿರಾಮದ ಬಗ್ಗೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅಮಾಯಕರ ಜೀವ ತೆಗೆದು ರಕ್ತ ಹರಿಸಿದ ಪಾಪಿ ಪಾಕಿಸ್ತಾನಕ್ಕೆ ತಕ್ಕ ಉತ್ತರ ಭಾರತ ಕೊಡುತ್ತದೆ ಎಂದು ನಂಬಿದ್ದೇವು. ಆದರೆ ಈಗ ಏಕಾಏಕಿ ಕದನ ವಿರಾಮ ಆಗಿರುವುದು ನಿಜಕ್ಕೂ ನಮಗೆ ನೋವನ್ನು ತಂದಿದೆ. ಈ ನಿರ್ಧಾರ ಕೈ ಬಿಟ್ಟು ಪಾಪಿ ಪಾಕಿಸ್ತಾನ ನಿರ್ನಾಮ ಮಾಡಬೇಕು ಎಂದು ಆಗ್ರಹಿಸಿದರು. ಡೋನಾಲ್ಡ್ ಟ್ರಂಪ್ ಯಾರ ರೀ ಅವರು..? ನಮ್ಮ ನೋವು ಅವರಿಗೆ ಏನು ಗೊತ್ತು. ನಮ್ಮ ಭಾರತದ ಪ್ರತಿಕಾರದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ, ಮಧ್ಯಸ್ಥಿಕೆ ವಹಿಸುವ ದೊಡ್ಡಸ್ಥಿಕೆ ಮಾಡುವ ಅವಶ್ಯಕತೆ ಏನಿತ್ತು..? ಎಂದು...

ಮುಂಡಗೋಡ ಬಳಿ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಬೈಕ್ ಗೆ ಗುದ್ದಿದ  ಅಪರಿಚಿತ ಟಾಟಾ ಎಸ್, ಬೈಕ್ ಸವಾರ ಗಂಭೀರ..!

ಮುಂಡಗೋಡ ಬಳಿ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಬೈಕ್ ಗೆ ಗುದ್ದಿದ ಅಪರಿಚಿತ ಟಾಟಾ ಎಸ್, ಬೈಕ್ ಸವಾರ ಗಂಭೀರ..!

ಮುಂಡಗೋಡ ಹೊರ ವಲಯದ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಅಪಘಾತವಾಗಿದೆ. ಟಾಟಾ ಎಸ್ ವಾಹನ ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಆದ್ರೆ, ಗಾಯಗೊಂಡ ಬೈಕ್ ಸವಾರ ಯಾರು, ಎಲ್ಲಿಯವನು ಅನ್ನೋ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಈಗಷ್ಟೇ ಕೆಲವೇ ನಿಮಿಷಗಳ ಹಿಂದೆ ನಡೆದಿರೋ ಘಟನೆ ಇದಾಗಿದ್ದು, ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಬಿದ್ದು ಹೊರಳಾಡುತ್ತಿದ್ದರೂ, ಅಪಘಾತ ಪಡಿಸಿದ ಟಾಟಾ ಎಸ್ ವಾಹನದ ಚಾಲಕ, ಪರಾರಿಯಾಗಿದ್ದಾನೆ. ದಾರಿಹೋಕರು, ಗಾಯಗೊಂಡ ಬೈಕ್ ಸವಾರನನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಳೆಗಾಲದಲ್ಲಿ ಅವಘಡಗಳಾಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!

ಮಳೆಗಾಲದಲ್ಲಿ ಅವಘಡಗಳಾಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!

ಕಾರವಾರ: ಮುಂಬರುವ ಮಳೆಗಾಲದಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲಿ ಅವಘಡಗಳು ಸಂಭವಿಸದಂತೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಯಾವುದೇ ಜೀವಹಾನಿಯಾಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು, ಹೊಸದಾಗಿ ನಿರ್ಮಾಣ ಹಂತದಲ್ಲಿರುವ ಚರಂಡಿ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕು, ಚರಂಡಿ ಹೂಳಿನ ಸಮಸ್ಯೆಯಿಂದ ಜನವಸತಿ ಪ್ರದೇಶಗಳಲ್ಲಿ ಹಾಗೂ ಸಂಬಂದಪಟ್ಟ ವ್ಯಾಪ್ತಿಯಲ್ಲಿ ನೆರೆ ಪರಿಸ್ಥಿತಿ ಉಂಟಾಗದoತೆ ಮುನ್ನೆಚ್ಚರ ವಹಿಸಿ ಎಂದರು. ಶಾಲೆ, ಅಂಗನವಾಡಿಗಳ ಸುತ್ತ..! ಶಾಲೆ ,ಅಂಗನವಾಡಿ ಮತ್ತು ರಸ್ತೆ ಬದಿಯಲ್ಲಿರುವ ಅಪಾಯಕಾರಿಗಳನ್ನು ಗುರುತಿಸಿ ಅವುಗಳನ್ನು ಅಲ್ಲಿಂದ ತೆರವುಗೊಳಿಸಬೇಕು, ಮಾಲ್ಕಿ ಜಮೀನಿನಲ್ಲಿರುವ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯ ಮೂಲಕ ಆ ಸ್ಥಳಗಳ ಮಾಲೀಕರಿಗೆ ಅನುಮತಿ ನೀಡುವಂತೆ ತಿಳಿಸಿದ ಅವರು ಸಿಡಿಲಿನಿಂದ...

ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!

ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!

ಮುಂಡಗೋಡ ತಾಲೂಕಿನ ನಂದೀಪುರ ಗ್ರಾಮದಲ್ಲಿ ದುಷ್ಕರ್ಮಿಗಳು ಹೀನ ಕೃತ್ಯವೆಸಗಿದ್ದಾರೆ. ರೈತರೋರ್ವರ ಅಡಿಕೆ ತೋಟಕ್ಕೆ ನುಗ್ಗಿ ಬರೋಬ್ಬರಿ 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ್ದಾರೆ. ನಂದಿಪುರ ಗ್ರಾಮದ ರತ್ನಾ ಬಸವರಾಜ ಓಣಿಕೇರಿ ಎಂಬುವವರಿಗೆ ಸೇರಿದ ಮುಂಡಗೋಡ ತಾಲೂಕಿನ ಕಾತೂರ ಪಂಚಾಯತ ವ್ಯಾಪ್ತಿಯ ಸಿಂಗನಳ್ಳಿ ಗ್ರಾಮದ ಸ.ನಂ:35ಅ ರಲ್ಲಿ 3-19-00 ಜಮೀನಿನಲ್ಲಿ, ಅಂದಾಜು 1800 ಅಡಿಕೆ ಸಸಿಗಳನ್ನು ನೆಡಲಾಗಿದೆ. ಅವು ಸುಮಾರು 3 ವರ್ಷ ಗಿಡಗಳಾಗಿ ಬೆಳೆದಿವೆ. ಹೀಗಿರೋವಾಗ, ದಿನಾಂಕ 7-5-2025 ರಂದು ಸದರ ತೋಟದಲ್ಲಿರುವ 240 ಅಡಿಕೆ ಗಿಡಗಳನ್ನು ಯಾರೋ ಕಡಿದು, ನಾಶ ಪಡಿಸಿ ಹೋಗಿದ್ದಾರೆ. ಹೀಗಾಗಿ, ಈ‌ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಯುದ್ಧದ ಸಂದರ್ಭದಲ್ಲಿ ನಾಗರೀಕರ ರಕ್ಷಣೆಗೆ ಸ್ವಯಂ ಸೇವಕರಾಗಲು ನೋಂದಣಿಗೆ ಅರ್ಜಿ ಆಹ್ವಾನ..!

ಯುದ್ಧದ ಸಂದರ್ಭದಲ್ಲಿ ನಾಗರೀಕರ ರಕ್ಷಣೆಗೆ ಸ್ವಯಂ ಸೇವಕರಾಗಲು ನೋಂದಣಿಗೆ ಅರ್ಜಿ ಆಹ್ವಾನ..!

ಕಾರವಾರ: ಯುದ್ಧದಂತ ಸಂದರ್ಭಗಳಲ್ಲಿ ಉಂಟಾಗುವ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸುವ ಬಗ್ಗೆ ಸ್ವಯಂ ಸೇವಕರ ಅಗತ್ಯವಿರುವುದರಿಂದ ಸಿವಿಲ್ ಡಿಫೆನ್ಸ್ ಆಕ್ಟ್-1968 ರಂತೆ ಪ್ರತಿ ನೂರು ನಾಗರಿಕರಿಗೆ ಒಬ್ಬರಂತೆ ಪೌರರಕ್ಷಣಾ ಸ್ವಯಂಸೇವಕರನ್ನು ನೋಂದಣಿ ಮಾಡಿಕೊಳ್ಳಲಾಗುತ್ತಿದ್ದು. ಜಿಲ್ಲೆಯ ಆಸಕ್ತ ಅರ್ಹ ಅಭ್ಯರ್ಥಿಗಳು ಮೇ.9 ರಿಂದ ಜೂನ್.9 ರವರೆಗೆ ನಿಗದಿತ ಅರ್ಜಿ ನಮೂನೆ ತುಂಬಿ ನೇಮಕಾತಿಯಲ್ಲಿ ಭಾಗವಹಿಸಬಹುದಾಗಿದೆ. ಈ ಕುರಿತ ಅರ್ಜಿಯನ್ನು ಗೃಹರಕ್ಷಕದಳ ಜಿಲ್ಲಾ ಸಮಾದೇಷ್ಟರ ಕಚೇರಿ, ದಿವೇಕರ ಕಾಮರ್ಸ್ ಕಾಲೇಜ್ ಎದುರು, ಕೋಡಿಭಾಗ ಕಾರವಾರ ಅಥವಾ hgcd.karnataka.gov.in ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 4ನೇ ತರಗತಿ ಉತ್ತೀರ್ಣರಾಗಿರಬೇಕು. 18 ವರ್ಷ ಮೇಲ್ಪಟ್ಟಿರಬೇಕು. ದೈಹಿಕವಾಗಿ ಸಧೃಡರಾಗಿರಬೇಕು. ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಪ್ರತಿ ಮತ್ತು ಅಂಕಪಟ್ಟಿ, ಶಾಲಾ ವರ್ಗಾವಣೆ ಪ್ರತಿಯನ್ನು ಲಗತ್ತಿಸಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಗೃಹರಕ್ಷಕದಳ ಕಚೇರಿ ಕಾರವಾರ ದೂರವಾಣಿ ಸಂಖ್ಯೆ:08382-200137 ಅಥವಾ 9110683910 ನ್ನು ಸಂಪರ್ಕಿಸುವoತೆ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆoಟ್ ಸಂಜು ಟಿ ನಾಯಕ...

ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಆರೋಪ, ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತ್ತು..!

ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಆರೋಪ, ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತ್ತು..!

ಬೆಳಗಾವಿಯಲ್ಲಿ ಸಿಎಂ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭದ್ರತಾಲೋಪ ವಿಚಾರವಾಗಿ, ಬೆಳಗಾವಿ ಕ್ಯಾಂಪ್ ಠಾಣೆ ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತುಗೊಂಡಿದ್ದಾರೆ. ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಅಮಾನತು ಆದೇಶ ಹೊರಡಿಸಿದ್ದಾರೆ. ಬೆಳಗಾವಿಯಲ್ಲಿ ಇತ್ತಿಚೆಗೆ ನಡೆದಿದ್ದ ಕೇಂದ್ರ ಸರ್ಕಾರದ ವಿರುದ್ಧದ ಕಾಂಗ್ರೆಸ್ ಸಮಾವೇಶದಲ್ಲಿ, ಬೆಲೆ ಏರಿಕೆ ಹಾಗೂ ಸಂವಿಧಾನ ಬಚಾವೋ ಸಮಾವೇಶದಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯನವರ ಭಾಷಣದ ವೇಳೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶನ ಮಾಡಿದ್ದರು. ಇದೇ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಪೊಲೀಸರ ಮೇಲೆ ಸಿಟ್ಟಾಗಿ ರೇಗಾಡಿದ್ದರು. ಹೀಗಾಗಿ, ಭದ್ರತಾ ಲೋಪದ ಕಾರಣ ಕೊಟ್ಟು ಸೇವೆಯಿಂದ ಸಿಪಿಐಯವರನ್ನು ಕಮೀಷನರ್ ಅಮಾನತ್ತು ಮಾಡಿದ್ದಾರೆ. ಅಂದಹಾಗೆ, ಈಗಾಗಲೇ ಇದೇ ಪ್ರಕರಣದಲ್ಲಿ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಲಾಗಿತ್ತು. ಈಗ ಭದ್ರತಾ ಲೋಪ ಹಿನ್ನೆಲೆ ಸಿಪಿಐ ಅಲ್ತಾಪ್ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!

ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!

ಬಾಗಲಕೋಟೆ:ಬೈಕ್ ನಡುವೆ ಕ್ಯಾಂಟರ್ ಭೀಕರ ಅಪಘಾತವಾಗಿ ಬೈಕ್‌ನಲ್ಲಿದ್ದ ಮೂವರು ಬಾಲಕರು ಸ್ಥಳದಲ್ಲೇ ದುರ್ಮರಣವಾದ ಘಟನೆ ಬಾಗಲಕೋಟೆ ತಾಲ್ಲೂಕಿನ ಸೀಮಿಕೇರಿ ಬೈಪಾಸ್ ನಲ್ಲಿ ನಡೆದಿದೆ. ಗದ್ದನಕೇರಿ ಕ್ರಾಸ್ ನಿಂದ ಹುಬ್ಬಳ್ಳಿ ಮಾರ್ಗವಾಗಿ ಹೊರಟಿದ್ದ ಬೈಕ್ ಇದಾಗಿತ್ತು. ಸ್ಥಳಕ್ಕೆ ಕಲಾದಗಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತರು ಬಾಗಲಕೋಟೆ ತಾಲ್ಲೂಕಿನ ಮುರನಾಳ ಗ್ರಾಮದವ್ರು. ಸಿದ್ದು ರಾಜು ಗಣಿ (16), ಸಂತೋಷ ಕೂಡಗಿ (16), ಕಾಮಣ್ಣ ಕುಪಲಿ (16) ಮೃತರು ಎಂದು ಗುರುತಿಸಲಾಗಿದೆ. ಹನುಮ ಜಯಂತಿ ಹಿನ್ನಲೆ ಗ್ರಾಮದಲ್ಲಿ ಡಿಜೆ ಮೆರವಣಿಗೆ ಇತ್ತು. ಡಿಜೆ ನೋಡುವುದಕ್ಕೆ ಹೊರಟಿದ್ದ ಬಾಲಕರು ಮಸಣಕ್ಕೆ ಸೇರಿದ್ದಾರೆ.

ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!

ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!

ಹಾವೇರಿ: ಬ್ಯಾಡಗಿ ತಾಲೂಕಿ‌ನ ಮೊಟೆಬೆನ್ನೂರು ಬಳಿ ಭೀಕರ ರಸ್ತೆ ಅಪಘಾತವಾಗಿದೆ. ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ನೊಟೆಬೆನ್ನೂರು ಬಳಿಯ ರಾ.ಹೆದ್ದಾರಿ 48 ರಲ್ಲಿ ಘಟನೆ ನಡೆದಿದ್ದು, ಹರಿಯಾಣ ಮೂಲದ ಆಡಿ A-6 ಕಾರು ಅಪಘಾತವಾಗಿದೆ. ಬ್ಯಾಡಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಗಾಯಾಳು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!

“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!

ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಭಾರತೀಯರ ಹತ್ಯಾಕಾಂಡಕ್ಕೆ ಪ್ರತಿಕಾರದಲ್ಲಿ, ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆಯ “ಆಪರೇಷನ್ ಸಿಂಧೂರ” ಹೆಸರಿನ ಸರ್ಜಿಕಲ್ ಸ್ಟ್ರೈಕ್ ಕಾರ್ಯಾಚರಣೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯ ಖುರೇಷಿ ಬೆಳಗಾವಿಯ ಸೊಸೆಯಾಗಿದ್ದು, ಈಗ ಭಾಥದ ಹೆಮ್ಮೆಯಾಗಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನ ಜಗತ್ತಿಗೆ ಬಿಚ್ಚಿಟ್ಟಿದ್ದ ಕರ್ನಲ್ ಸೋಫೀಯಾ ಕುರೆಷಿ, ಬಹುರಾಷ್ಟ್ರೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಭಾರತೀಯ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ‌. ಸೋಫೀಯಾ ಪತಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದವರು, ಪತಿ, ಪತ್ನಿ‌ ಇಬ್ಬರೂ ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ದೇಶ ಸೇವೆ ಮಾಡ್ತಿದ್ದಾರೆ. ಸೋಫೀಯಾ ಪತಿ ತಾಜುದ್ದೀನ್ ಬಾಗೇವಾಡಿ ಸಹ ಕರ್ನಲ್ ಆಗಿದ್ದಾರೆ. 2015 ರಲ್ಲಿ ಮ್ಯಾರೇಜ್ ಆಗಿರೋ ತಾಜುದ್ದೀನ್ ಸೋಫೀಯಾ ಅವರದ್ದು ಪ್ರೇಮ ವಿವಾಹ. ಕರ್ನಲ್ ಸುಫೀಯಾ ಮೂಲತಃ ಗುಜರಾತ್ ರಾಜ್ಯದ ಬರೋಡಾದವರು. ಸಧ್ಯ ‌ಸೋಫೀಯಾ ಜಮ್ಮುವಿನಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಪತಿ ತಾಜುದ್ದೀನಿ ಬಾಗೇವಾಡಿ ಸಹ ಕರ್ನಲ್...

error: Content is protected !!